Author: AIN Author

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ, ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ಇಲ್ಲಿ ಪರಿಶೀಲಿಸಬಹುದು. ಹೆಸರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ ಬೆಂಗಳೂರುಖಾಲಿ ಹುದ್ದೆ: 6ಸಂಬಳದ ವಿವರ: ಮಾಸಿಕ 38,000 ರಿಂದ 44000ರವರೆಗೆ ನೀಡಲಾಗುತ್ತದೆ. ವಿದ್ಯಾರ್ಹತೆ :-ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ಆಸಕ್ತರ ವಯಸ್ಸು:ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವವರ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ…

Read More

ಬೆಂಗಳೂರು:- ಸರಗಳ್ಳತನ ಪ್ರಕರಣಗಳು ಆನೇಕಲ್ ತಾಲ್ಲೂಕಿನಲ್ಲಿ ಮುಂದುವರಿದಿದ್ದು, ಕಾಚನಾಯಕನಹಳ್ಳಿ ಬಳಿ ನಿನ್ನೆ ರಾತ್ರಿ ಸರಗಳ್ಳರು ಮಾಂಗಲ್ಯ ಸರ ಎಗರಿಸಿದ್ದಾರೆ. ಮಾನಸ ಎಂಬುವವರಿಗೆ ಸೇರಿದ ಸುಮಾರು 3 ಲಕ್ಷ ಮೌಲ್ಯದ 50 ಗ್ರಾಂ ಚಿನ್ನದ ಸರ ಇದಾಗಿದ್ದು, ಬೈಕ್​ನಲ್ಲಿ ಬಂದಿದ್ದ ಇಬ್ಬರು ಅಸಾಮಿಗಳು ಈ ಕೃತ್ಯ ಎಸಗಿದ್ದಾರೆ. ನಿನ್ನೆ ರಾತ್ರಿ 9:30 ರ ಸುಮಾರಿಗೆ ಅಂಗಡಿಯಲ್ಲಿ ಪೆನ್ ಖರೀದಿಸುವ ನೆಪದಲ್ಲಿ ಹೆಲ್ಮೆಟ್ ಮತ್ತು ಮಾಸ್ಕ್ ಧರಿಸಿ ಬಂದಿದ್ದ ಖದೀಮರು, ಕ್ಷಣಾರ್ಧದಲ್ಲಿ ಬಂದು ಕೈ ಚಳಕ ತೋರಿಸಿದ್ದಾರೆ. ಖದೀಮರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

Read More

ಉತ್ತರಾಖಂಡ: ಉತ್ತರಾಖಂಡದ ಹಾಲಧ್ವಾನಿಯಲ್ಲಿ ಅಕ್ರಮ ಎಂದು ಹೇಳಲಾಗಿರುವ ಮದರಸಾ ನೆಲಸಮ ಮಾಡುವ ವೇೆಳೆ ನಡೆದ ಭಾರೀ ಹಿಂಸಾಚಾರವಾಗಿದೆ. ದಂಗೆಕೋರರ ದಾಳಿಗೆ 50ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿದ್ದು 100ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಭಸ್ಮವಾಗಿವೆ. ಬಾನ್ಭುಲ್ ಪುರ ಪ್ರದೇಶದಲ್ಲಿ ಉದ್ರಿಕ್ತ ಜನರಿಂದ ಕಲ್ಲು ತೂರಾಟ, ಹಿಂಸಾಚಾರ ನಡೆದಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಕಂಡಲ್ಲಿ ಗಂಡು ಹೊಡೆಯುವ ಆದೇಶ ಹೊರಡಿಸಲಾಗಿದೆ. ಜೊತೆಗೆ ನಗರದಲ್ಲಿ ಶುಕ್ರವಾರ ಶಾಲೆಗಳಿಗೆ ರಜೆ ನೀಡಲಾಗಿದೆ. ಇನ್ನೂ ಗಲಭೆ ಕುರಿತು ಸುದ್ದಿಗೋಷ್ಠಿ ನಡೆಸಿ ನೈನಿತಾಲ್ ಜಿಲ್ಲಾಧಿಕಾರಿ ವಂದನಾ ಸಿಂಗ್ ಮಾಹಿತಿ ನೀಡಿದ್ದಾರೆ. ಪೊಲೀಸರನ್ನು ಜೀವಂತ ಸುಡಲು ಪ್ಲಾನ್ ಮಾಡಲಾಗಿತ್ತು. ಮುಸ್ಲಿಮರು ತಮ್ಮ ಮನೆಯ ಮೇಲೆ, ಕಟ್ಟಡದ ಮೇಲೆ ಕಲ್ಲು, ಪೆಟ್ರೋಲ್ ಬಾಂಬ್ ಶೇಖರಿಸಿಟ್ಟಿದ್ದರು ಎಂದು ಹೇಳಿದ್ದಾರೆ. ಹೈಕೋರ್ಟ್ ನಿರ್ದೇಶನದಂತೆ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ. https://ainlivenews.com/pv-narasimha-rao-chowdhary-charan-singh-ms-swaminathan-honored-with-bharat-ratna/ ಈ ಪೈಕಿ ಅಕ್ರಮವಾಗಿ ಕಟ್ಟಿರುವ ಮದರಸಾವನ್ನು ತೆರವು ಮಾಡಲು ಅದಿಕಾರಿಗಳು ಪೊಲೀಸರ ಜೊತೆ ಆಗಮಿಸಿದ್ದಾರೆ. ಆದರೆ ಹಲವು ದಿನಗಳ ಮೊದಲೇ ಅಕ್ರಮ…

Read More

ಬೆಂಗಳೂರು:- ಡಿಕೆ ಸುರೇಶ್​ಗೆ ಗುಂಡಿಕ್ಕಬೇಕು ಎಂಬ ಈಶ್ವರಪ್ಪ ಹೇಳಿಕೆಗೆ ಜಿ ಪರಮೇಶ್ವರ್ ಕೆಂಡಾಮಂಡಲರಾಗಿದ್ದಾರೆ. ಈಶ್ವರಪ್ಪಗೆ ಪ್ರತ್ಯೇಕ ಕಾನೂನು ಮಾಡಲು ಹೇಳಿ, ಈ ಕಾನೂನು ಮೀರಿ ಯಾರು ಕೂಡ ವರ್ತಿಸಬಾರದು ಎಂದು ಕಿಡಿಕಾರಿದ್ದಾರೆ. https://ainlivenews.com/there-will-be-no-train-traffic-on-this-route-for-two-hours-on-february-11/ ಇನ್ನು ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ವಿಚಾರ ‘ಕೋಮುಸೌಹಾರ್ದತೆ ಕದಡುವವರನ್ನು ನೋಡಿ ಸುಮ್ಮನೆ ಕೂರಲ್ಲ. ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು. ಚಕ್ರವರ್ತಿ ಸೂಲಿಬೆಲೆ ಅಷ್ಟೇ ಅಲ್ಲ, ಯಾರೇ ಈ ರೀತಿ ಹೇಳಿಕೆ ಕೊಟ್ಟರೂ , ಅಂಥವರ ವಿರುದ್ಧ ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು. ಇದೇ ವೇಳೆ ಹುಕ್ಕಾ ಬಾರ್​ಗಳಲ್ಲಿ ಡ್ರಗ್ಸ್​ ಸಪ್ಲೈ ಮಾಡುತ್ತಾರೆ ಎಂಬುದು ಸಾಭೀತಾಗಿದೆ. ಈ ಹಿನ್ನಲೆ ರಾಜ್ಯದಲ್ಲಿ ಹುಕ್ಕಾ ಬಾರ್​ಗಳನ್ನು ನಮ್ಮ ಸರ್ಕಾರ ನಿಷೇಧಿಸಿದೆ. ಈ ಮುಖಾಂತರ ಆರೋಗ್ಯ ಇಲಾಖೆ ಉತ್ತಮ ನಿರ್ಧಾರ ತೆಗೆದುಕೊಂಡಿದೆ ಎಂದರು. ಜೊತೆಗೆ ಎಡಿಜಿಪಿ ಪ್ರತಾಪ್ ರೆಡ್ಡಿ ಸ್ವಯಂನಿವೃತ್ತಿಗೆ ಅರ್ಜಿ ಸಲ್ಲಿಕೆ ವಿಚಾರ, ‘ಅದು ಪ್ರತಾಪ್ ರೆಡ್ಡಿ ವೈಯಕ್ತಿಕ ವಿಚಾರ, ಆ ಬಗ್ಗೆ ನನಗೆ ಗೊತ್ತಿಲ್ಲ…

Read More

ಕನ್ನಡ ಚಿತ್ರರಂಗದ ಅದ್ಭುತ ಕಲಾವಿದರಲ್ಲಿ ಒಬ್ಬರು ರಂಗಾಯಣ ರಘು. ಅವರ ಅಮೋಘ ಅಭಿನಯದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ವಿಶೇಷ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುವ ರಂಗಾಯಣ ರಘು ಅವರೀಗ ಅಭಿನಯಾಸುರು ಎಂಬ ಬಿರುದು ನೀಡಿ ಗೌರವಿಸಲಾಗಿದೆ. ಸಂದೀಪ್ ಸುಂಕದ್ ಚೊಚ್ಚಲ ಹೆಜ್ಜೆ ಶಾಖಾಹಾರಿ.. ಈ ಸಿನಿಮಾದಲ್ಲಿ ರಂಗಾಯಣ ರಘು ಗಂಭೀರ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸನ್ನದ್ಧರಾಗಿದ್ದಾರೆ. ಇದೇ ತಿಂಗಳ 16ರಂದು ಮಲೆನಾಡ ಸೊಗಡಿನ ಥ್ರಿಲ್ಲಿಂಗ್ ಕಥಾಹಂದರ ಶಾಖಾಹಾರಿ ಸಿನಿಮಾ ತೆರೆಗೆ ಬರ್ತಿದೆ. ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಅದರ ಭಾಗವೆಂಬಂತೆ ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಪ್ರೀ ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ನಿರ್ದೇಶಕ ಸುಕ್ಕ ಸೂರಿ ವಿಶೇಷ ಅಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಸಾಥ್ ಕೊಟ್ಟರು. ಇದೇ ವೇಳೆ ರಂಗಾಯಣ ರಘು ಅವರಿಗೆ ಶಾಖಾಹಾರಿ ಸಿನಿ ಬಳಗ ಅಭಿನಯಾಸುರು ಎಂಬ ಬಿರುದು ನೀಡಿ ಗೌರವಿಸಿತು. ಇಲ್ಲಿವರೆಗೂ ಯಾವುದೇ ಚಿತ್ರತಂಡ ಅವರಿಗೆ ಈ ರೀತಿ ಬಿರುದು…

Read More

ಬೆಂಗಳೂರು:- ಫೆ.11ರಂದು ಎರಡು ಗಂಟೆ ನಮ್ಮ ಮೆಟ್ರೋ ಸಂಚಾರ ಲಭ್ಯವಿರುವುದಿಲ್ಲ. ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಬಗ್ಗೆ ಬಿಎಂಆರ್​ಸಿಎಲ್ ಮಾಧ್ಯಮ ಪ್ರಕರಣೆ ಹೊರಡಿಸಿದೆ. ಈ ಅವಧಿಯಲ್ಲಿ ರೈಲುಗಳು ಎಂ.ಜಿ ರಸ್ತೆ ಮತ್ತು ಚಲ್ಲಘಟ್ಟ ಹಾಗೂ ಇಂದಿರಾನಗರ, ವೈಟ್‌ಫೀಲ್ಡ್ ನಡುವೆ ಮಾತ್ರ ನಮ್ಮ ಮೆಟ್ರೋ ಬೆಳಗ್ಗೆ 7 ಗಂಟೆಯಿಂದ ಎಂದಿನಂತೆ ಸಂಚರಿಸು್ತತವೆ.ಆದ್ರೆ, ಬೆಳಗ್ಗೆ 9 ಗಂಟೆಯ ನಂತರ ವೈಟ್‌ ಫೀಲ್ಡ್ ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ಸಂಪೂರ್ಣ ನೇರಳೆ ಮಾರ್ಗದಲ್ಲಿ ವೇಳಾಪಟ್ಟಿಯಂತೆ ಮೆಟ್ರೋ ರೈಲು ಸೇವೆಗಳು ಲಭ್ಯವಿರುತ್ತವೆ. https://ainlivenews.com/land-record-staff-committed-suicide-by-drinking-acid/ ಇನ್ನು ಹಸಿರು ಮಾರ್ಗದಲ್ಲಿ ರೈಲುಗಳ ಸೇವೆ ಆಯಾ ಟರ್ಮಿನಲ್ ನಿಲ್ದಾಣಗಳಿಂದ ವೇಳಾಪಟ್ಟಿಯ ಪ್ರಕಾರ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿ ಎಂದಿನಂತೆ ಚಲಿಸುತ್ತವೆ ಎಂದು ಬಿಎಂಆರ್​ಸಿಎಲ್​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

Read More

ನವದೆಹಲಿ: ಮಂಡ್ಯ ಲೋಕಸಭಾ ಚುನಾವಣೆ ರಂಗೇರಿದ್ದು ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅವರು ಪ್ರಧಾನಿ  ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿಯ ಸಮಯದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. https://ainlivenews.com/send-love-messages-to-your-partner-on-chocolate-day/ ಅಷ್ಟೇ ಅಲ್ಲದೇ ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಮಧ್ಯೆ ಯಾರಿಗೆ ಟಿಕೆಟ್‌ ಸಿಗಲಿದೆ ಎನ್ನುವುದು ಇನ್ನೂ ಫೈನಲ್‌ ಆಗಿಲ್ಲ. https://twitter.com/sumalathaA/status/1755872847766135058 ಈ ಹಿಂದೆ ಸುಮಲತಾ ಅಂಬರೀಶ್‌ ಅವರು ನಾನು ಈ ಬಾರಿ ಕಣಕ್ಕೆ ಇಳಿಯುತ್ತೇನೆ ಎಂದು ಹೇಳಿದ್ದರು. ಮೋದಿ ಭೇಟಿಗೂ ಮೊದಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಅವರನ್ನು ಭೇಟಿಯಾಗಿದ್ದರು.

Read More

ರಾಯಚೂರು: ರಾಯಚೂರು ಎಸಿ ಕಚೇರಿಯ ಲ್ಯಾಂಡ್ ರೆಕಾರ್ಡ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ನೌಕರನೊಬ್ಬ ಆ್ಯಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಯಚೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದ ಬಳಿ ಈ ಘಟನೆ ನಡೆದಿದೆ. ವಾಸಿಂ ಚೌದರಿ (36) ಮೃತ ದುರ್ದೈವಿ. ವಾಸಿಂ ಲ್ಯಾಂಡ್ ರೆಕಾರ್ಡ್ ಕಿಪರ್ ಹುದ್ದೆಯಲ್ಲಿ ಡಿ ದರ್ಜೆ ಸಿಬ್ಬಂದಿ ಆಗಿದ್ದ. ನಗರದಲ್ಲಿರುವ ಈಜುಕೊಳದ ಬಳಿ ತೆರಳಿದ ವಾಸಿಂ ಕೂಲೆಂಟ್ ವಾಟರ್ ಬಾಟಲ್‌ಗೆ ಆ್ಯಸಿಡ್ ಬೇರಸಿ ಕುಡಿದಿದ್ದ. ಮೇಲಾಧಿಕಾರಿ ಗುಲ್ಬರ್ಗಕ್ಕೆ ತೆರಳಿದ್ದ ವೇಳೆಯೇ ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಆತನನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ ವಾಸಿಂ ಚಿಕಿತ್ಸೆ ಫಲಿಸದೇ ಫೆ.9ರಂದು ಮೃತಪಟ್ಟಿದ್ದಾನೆ. ವಾಸಿಂ ಮೇಲಾಧಿಕಾರಿ ಕಿರುಕುಳಕ್ಕೆ ಬೇಸತ್ತಿದ್ದ ಎಂದು ತಿಳಿದು ಬಂದಿದೆ. ಕಚೇರಿಯ ಫೈಲ್ ವಿಚಾರಕ್ಕೆ ಸಿಬ್ಬಂದಿ ಮನನೊಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಘಟನೆ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿರುವ ಕುಟುಂಬಸ್ಥರು, ಬಲವಂತವಾಗಿ ಆ್ಯಸಿಡ್ ಕುಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಸೂಕ್ತ…

Read More

ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಇತ್ತೀಚೆಗೆ ಬಹಿರಂಗಪಡಿಸಿದ್ದರು. ಆದರೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಎಬಿ ಡಿವಿಲಿಯರ್ಸ್ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ನನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದಂತೆ ಕುಟುಂಬ ಮೊದಲ ಆದ್ಯತೆಯಾಗಿದೆ. ಅದೇ ಸಮಯದಲ್ಲಿ ನಾನು ದೊಡ್ಡ ತಪ್ಪೊಂದನ್ನು ಮಾಡಿದ್ದೇನೆ, ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದೆ. ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾ  2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದ್ದೇನೆ. ಇದಕ್ಕಾಗಿ ಕ್ಷಮೆ ಇರಲಿ ಎಂದು ಎಬಿ ಡಿವಿಲಿಯರ್ಸ್ ಹೇಳಿದ್ದಾರೆ. ಎಬಿ ಡಿವಿಲಿಯರ್ಸ್ ಹೇಳಿದ್ದೇನು..?: ನಾನು ವಿಡಿಯೋ ಮೂಲಕ ಕುಟುಂಬ ಮೊದಲು ಎಂದು ಹೇಳಿದ್ದೆ. ಇದು ಸತ್ಯ ಕೂಡ. ಇದೇ ವೇಳೆ ಮಾತು ಮುಂದುವರಿಸಿ ಕೊಹ್ಲಿ ಹಾಗೂ ಅನುಷ್ಕಾ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಅಂತಾ ಹೇಳಿದ್ದೆ. ಆದರೆ ಈ ಮಾಹಿತಿ ತಪ್ಪಾಗಿದೆ. ವಿರಾಟ್ ಕೊಹ್ಲಿ ಅವರ ಕುಟುಂಬದ ಜೊತೆಗಿದ್ದಾರೆ. ಕೊಹ್ಲಿ ಟೆಸ್ಟ್…

Read More

ಗದಗ :- ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಬಿಜೆಪಿ ಪಕ್ಷದಿಂದ ಗೋಡೆ ಮೇಲೆ ಚಿತ್ರ ಹಾಕಲಾಗಿದೆ. ಪಟ್ಟಣದ ಹಳ್ಳದಕೇರಿಯಲ್ಲಿ ಮನೆಗಳ ಗೋಡೆ ಮೇಲೆ ಚಿತ್ರ ಹಾಕಲಾಗಿದ್ದು, ಮತ್ತೊಮ್ಮೆ ಮೋದಿ ಸರ್ಕಾರ ಎಂಬ ಚಿತ್ರದ ಬರವಣಿಗೆ ಹಾಕಲಾಗಿದೆ. ಶಾಸಕ ಡಾ. ಚಂದ್ರು ಲಮಾಣಿ ನೇತೃತ್ವದಲ್ಲಿ ಬರವಣಿಗೆ ಹಾಕಲಾಗಿದ್ದು, ಅಬ್ ಕೀ ಬಾರ ಚಾರಸೋ ಪಾರ್, ಅಬಕೀ ಬಾರ ಮೋದಿ ಸರ್ಕಾರ ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಚಿತ್ರ ಬಿಡಿಸಿದ್ದಾರೆ.

Read More