Author: AIN Author

ನವದೆಹಲಿ:- 10 ವರ್ಷಗಳ ಯುಪಿಎ, 10 ವರ್ಷಗಳ ಎನ್‌ಡಿಎ ಸರ್ಕಾರದ ಆಡಳಿತದ ಅವಧಿ ಶ್ವೇತಪತ್ರವನ್ನು ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಹೊರಡಿಸಿದ್ದಾರೆ. 2014 ರಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗ, ಆರ್ಥಿಕತೆಯು ಕೆಟ್ಟ ಸ್ಥಿತಿಯಲ್ಲಿತ್ತು. ಒಂದು ದಶಕದ ತಪ್ಪು ನಿರ್ವಹಣೆಯ ಆರ್ಥಿಕತೆಯನ್ನು ಸರಿಪಡಿಸುವ ಪ್ರಯತ್ನ ಮಾಡಿದ್ದೇವೆ. ಈಗ ಭಾರತ ‘ಟಾಪ್ ಫೈವ್’ ಆರ್ಥಿಕತೆಗಳಲ್ಲಿ ಒಂದಾಗಿದ್ದೇವೆ. ಪ್ರತಿ ವರ್ಷ ಜಾಗತಿಕ ಬೆಳವಣಿಗೆಗೆ ಮೂರನೇ ಅತಿದೊಡ್ಡ ಕೊಡುಗೆಯನ್ನು ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ ಯುಪಿಎ ಅವಧಿಯಲ್ಲಿ ಜಗತ್ತು ಭಾರತದ ಆರ್ಥಿಕ ಸಾಮರ್ಥ್ಯ ಮತ್ತು ಕ್ರಿಯಾಶೀಲತೆಯ ಮೇಲೆ ವಿಶ್ವಾಸ ಕಳೆದುಕೊಂಡಿತ್ತು. ಈಗಿನ ಆರ್ಥಿಕ ಸ್ಥಿರತೆ ಮತ್ತು ಬೆಳವಣಿಗೆಯ ನಿರೀಕ್ಷೆ ಹೊಂದಿದೆ. ಯುಪಿಎ ಆಡಳಿತ ಅವಧಿ ಹಗರಣಗಳಿಂದ ತುಂಬಿತ್ತು. ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಹಗರಣ ಮಾಡಲಾಗಿತ್ತು ಎಂದು ಆರೋಪಿಸಿದ್ದಾರೆ. ನಾವು 2023 ರಲ್ಲಿ ಅತ್ಯಂತ ದೊಡ್ಡ ಮತ್ತು ವರ್ಷಾವಧಿಯ G20 ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದೇವೆ. ಜಾಗತಿಕ ಸಮಸ್ಯೆಗಳಿಗೆ ಭಾರತ ಪರಿಹಾರಗಳನ್ನು ಒದಗಿಸಿದೆ. ಲಾಜಿಸ್ಟಿಕ್ಸ್ ವಿಷಯದಲ್ಲಿ ಭಾರತವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯುಪಿಎ…

Read More

ಬೆಂಗಳೂರು:- ನಾಳೆಯಿಂದ ಮೂರು ದಿನ ಗ್ರಾಮ ಚಲೋ’ ಅಭಿಯಾನ ನಡೆಯಲಿದೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾಜೀ ಮತ್ತು ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಅಪೇಕ್ಷೆಯಂತೆ ‘ಗ್ರಾಮ ಚಲೋ’ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ಕರ್ನಾಟಕ ರಾಜ್ಯದಲ್ಲಿ 28 ಸಾವಿರಕ್ಕೂ ಹೆಚ್ಚು ಹಳ್ಳಿಗಳು, 19 ಸಾವಿರ ನಗರ ಬೂತ್‌ಗಳಲ್ಲಿ ಒಟ್ಟಾರೆಯಾಗಿ 42 ಸಾವಿರ ಕಾರ್ಯಕರ್ತರು ಮೂರು ದಿನಗಳ ಕಾಲ ನಿರಂತರವಾಗಿ ಈ ಅಭಿಯಾನದಲ್ಲಿ ಭಾಗವಹಿಸುತ್ತಾರೆ ಎಂದು ವಿವರಿಸಿದರು. ನಾನು ಇವತ್ತು ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಸಂಖ್ಯೆ 454, 455ರಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ್ದೇನೆ. 2047ನೇ ಇಸವಿಗೆ ಭಾರತವು ‘ವಿಕಸಿತ ಭಾರತ’ವಾಗಿ ಪರಿವರ್ತನೆ ಹೊಂದಬೇಕು. ಭಾರತವು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತನೆ ಕಾಣಬೇಕೆಂಬ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಕನಸು ನನಸಾಗಲು ಗ್ರಾಮಗಳೂ ಅಭಿವೃದ್ಧಿ ಹೊಂದಬೇಕಿದೆ ಎಂದು ವಿಶ್ಲೇಷಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತುಗಳು ಸಿಗಬೇಕು ಎಂದರು ಈ ನಿಟ್ಟಿನಲ್ಲಿ…

Read More

ಬೆಂಗಳೂರು:- ನಾನ್‌ ವೆಜ್‌ ತಿಂದು ಸುತ್ತೂರು ಮಠಕ್ಕೆ ಭೇಟಿ ನೀಡಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಇಂತಹ ಸಿಲ್ಲಿ ಪ್ರಶ್ನೆಗಳನ್ನು ಕೇಳಬೇಡಿ. ಊಟ, ತಿಂಡಿ ತಿನ್ನೋದು, ಬಟ್ಟೆ ಹಾಕುವುದರ ಬಗ್ಗೆ ಮಾತಾಡಕ್ಕಾಗುತ್ತಾ? ಬಡವರ ಸಮಸ್ಯೆ ಹಾಗೂ ನಿರುದ್ಯೋಗ ಇದೆಲ್ಲ ಮಾತಾಡೋಣ. ಅದನ್ನು ಬಿಟ್ಟು ಮಾಂಸ ಸೇವಿಸಿ ಮಠಕ್ಕೆ ಭೇಟಿ ಹೀಗೆಲ್ಲಾ ಕೇಳಬೇಡಿ ಎಂದು ಗರಂ ಆದರು. ಇನ್ನೂ ಬುಧವಾರ ದೆಹಲಿಯಲ್ಲಿ ನಡೆದ ನಮ್ಮ ತೆರಿಗೆ ನಮ್ಮ ಹಕ್ಕ ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದರು. ಜಂತರ್ ಮಂತರ್​ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಭೋಜನಕೂಟದಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದರು. ಆದ್ರೆ, ಅವರು ಮಧ್ಯಾಹ್ನ ಮಾಂಸದ ಊಟ ಮಾಡಿ ಬಳಿಕ ನೇರವಾಗಿ ದೆಹಲಿಯಿಂದ ಮೈಸೂರಿಗೆ ಬಂದಿದ್ದಾರೆ. ಬಳಿಕ ಅಲ್ಲಿಂದ ಹೆಲಿಕಾಪ್ಟರ್​ ಮೂಲಕ ಸುತ್ತೂರು ಮಠಕ್ಕೆ ಭೇಟಿ ನೀಡಿ ಜಾತ್ರೆಯಲ್ಲಿ ಭಾಗವಹಿಸಿದ್ದಾರೆ. ಹೀಗೆ ಮಾಂಸದೂಟ ಮಾಡಿದ…

Read More

ಬೆಂಗಳೂರು:- ಫೆ.10 ಶನಿವಾರದಂದು ಕೇಂದ್ರ ಸಚಿವ ಅಮಿತ್ ಶಾ ಅವರು ರಾತ್ರಿ 10.50 ಗಂಟೆಗೆ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ರಾಡಿಸನ್ ಬ್ಲೂ ಹೋಟೆಲ್‌ಗೆ ತೆರಳಲಿರುವ ಶಾ, ಫೆ.11 ರಂದು ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಫೆ.11 ರಂದು ಬೆಳಗ್ಗೆ 11 ಗಂಟೆಗೆ ಅಮಿತ್ ಶಾ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದರ್ಶನ‌ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಅಲ್ಲಿಂದ 11.45ಕ್ಕೆ ಹೆಲಿಕಾಪ್ಟರ್​ನಲ್ಲಿ ಸುತ್ತೂರು ಗ್ರಾಮಕ್ಕೆ ಪ್ರಯಾಣ ಬೆಳಸಲಿದ್ದು, ಸುತ್ತೂರು ಜಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಅದೇ ದಿನ ಮಧ್ಯಾಹ್ನ 1.30ಕ್ಕೆ ಸುತ್ತೂರು ಮಠದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಅದನ್ನು ಮುಗಿಸಿಕೊಂಡು ಮಧ್ಯಾಹ್ನ 2.30ಕ್ಕೆ ರಾಡಿಸನ್ ಬ್ಲೂ ಹೋಟೆಲ್‌ಗೆ ಆಗಮಿಸಲಿದ್ದಾರೆ. ನಂತರ ಮಧ್ಯಾಹ್ನ 2.40ಕ್ಕೆ ಕೇಂದ್ರ ಸಚಿವ ಅಮಿತ್ ಶಾ ಸಭೆ ನಿಗದಿಪಡಿಸಿದ್ದು, ಸುಮಾರು 2 ಗಂಟೆ ಕಾಲ ಮುಖಂಡರ ಜೊತೆ ಚರ್ಚೆ ನಡೆಯಲಿದೆ. ಈ ಸಭೆ ಮೂಲಕ ಚುನಾವಣಾ ಸಿದ್ಧತೆಗೆ ಅಮಿತ್ ಶಾ ಚಾಲನೆ ನೀಡಲಿದ್ದಾರಾ?, ಸುತ್ತೂರು…

Read More

ದಾವಣಗೆರೆ:- ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತರಬೇಕು ಎಂದು ಮಾಜಿ ಶಾಸಕ ಕೆಎಸ್​ ಈಶ್ವರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ ಕುಲಕರ್ಣಿ ಮಾದರಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ. ನಾವು ಹೀಗೆ ಬಿಡಲ್ಲ. ನಾವು ಬಿಜೆಪಿಯವರು ಪಾಕಿಸ್ತಾನವನ್ನ ಭಾರತದಲ್ಲಿ ಸೇರ್ಪಡೆ ಮಾಡಿ ಅಖಂಡ ಭಾರತ ಮಾಡುತ್ತೇವೆ. ಒಂದು ಕಡೆ ಮೋದಿ ಹಾಗೂ ಹಾಗೂ ಇನ್ನೊಂದು ಕಡೆ ಶ್ರೀರಾಮ ಚಂದ್ರ ಇದು ಬಿಜೆಪಿ ಸಿದ್ದಾಂತ ಎಂದು ಹೇಳಿದ್ದಾರೆ. ಈ ದೇಶದಲ್ಲಿ ಕಾಂಗ್ರೆಸ್​ನವರಿಗೂ ಹಿಂದು ಧರ್ಮದ ಬಗ್ಗೆ ಗೌರವ ಇದೆ. ಮಾಗಡಿ ಶಾಸಕ ಬಾಲಕೃಷ್ಣ ಒಂದು ಮುತ್ತು.‌ ಬಿಜೆಪಿ ಸಂಸದರು ಗಂಡಸರೇ ಅಲ್ಲಾ ಅಂತಾರೆ. ನಾವು ಗಂಡಸರು ಅಂತಾ ಎಲ್ಲಿ ತೊರಿಸಬೇಕು ಎಂದು ಕಿಡಿಕಾರಿದ್ದಾರೆ.

Read More

ಬೆಂಗಳೂರು:- ಮೆಟ್ರೋ ಸುರಂಗ ಮಾರ್ಗ ಕೊರೆದು ವರ್ಷಕ್ಕೆ 8 ದಿನ ಬಾಕಿ ಇರುವಾಗಲೇ ಟಿಬಿಎಂ ಭದ್ರ ಹೊರಬಂದಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ‘ಭದ್ರಾ’ ಹೆಸರಿನ ಟನಲ್ ಬೋರಿಂಗ್ ಮೆಷಿನ್ ಸದ್ಯ ಪ್ರಸ್ತುತ ವೆಂಕಟೇಶಪುರದಿಂದ ಕೆಜಿ ಹಳ್ಳಿಯವರೆಗೆ ಬರೋಬ್ಬರಿ 1,186 ಮೀಟರ್ ಉದ್ದದ ಸುರಂಗ ಕೊರೆದು ಹೊರಬಂದಿದೆ. ಒಂದು ವರ್ಷಕ್ಕೆ ಎಂಟು ದಿನಗಳು ಬಾಕಿ ಇರುವಾಗಲೇ ಇಂದು ಟಿಬಿಎಂ ಭದ್ರ ಕಾಡುಗೊಂಡನಹಳ್ಳಿ ನಿಲ್ದಾಣದಿಂದ ಹೊರ ಬಂದಿದ್ದು, ಸ್ಥಳದಲ್ಲಿ ಮೆಟ್ರೋ ನೌಕರರು ಭಾರತ್ ಮಾತಾಕೀ ಜೈ ಎಂದು ಘೋಷಣೆ ಕೂಗಿ ಬರಮಾಡಿಕೊಂಡರು. ವೆಂಕಟೇಶಪುರದಿಂದ ಕಾಡುಗೊಂಡನಹಳ್ಳಿ ನಿಲ್ದಾಣದ ವರೆಗಿನ ಸುರಂಗ ಮಾರ್ಗ ಕೊರೆಯಲು ಟಿಬಿಎಂ ಭದ್ರ 2023ರ ಫೆಬ್ರವರಿ 16ರಂದು ಕಾಮಗಾರಿ ಆರಂಭಿಸಿತ್ತು. ಇಂದು ಅಂದರೆ ಒಂದು ವರ್ಷಕ್ಕೆ ಕೇವಲ 8 ದಿನಗಳು ಬಾಕಿ ಇರುವಾಗಲೇ ಭದ್ರ, 1,185 ಮೀಟರ್ ಸುರಂಗ ಕೊರೆದು ಆಚೆ ಬಂದಿದೆ. ಈ ಮೂಲಕ 20,992 ಮೀಟರ್ ಸುರಂಗ ಮಾರ್ಗದ ಪೈಕಿ 19,120 ಮೀಟರ್ ಸುರಂಗ ಮಾರ್ಗ ಕಾಮಗಾರಿ…

Read More

ವಿಜಯಪುರ:- ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಧಬಾವಿ ಕ್ರಾಸ್​​ ಬಳಿ ಗೂಡ್ಸ್​​ ವಾಹನ ಮತ್ತು ಕ್ರೂಸರ್​​ ಮಧ್ಯೆ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಜರುಗಿದೆ. ಸುನಂದಾ ಹಾದಿಮನಿ (40) ಮೃತ ರ್ದುದೈವಿ. ಇನ್ನುಳಿದಂತೆ ಇತರರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ವಿಜಯಪುರ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು:- ಕೆಲಸದಲ್ಲಿ ನಿರ್ಲಕ್ಷ್ಯ ತೋರಿದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ ನೀಡಿದ್ದಾರೆ. ಇವತ್ತು ಸ್ವೀಕರಿಸಿದ ಎಲ್ಲ ಅರ್ಜಿಗಳನ್ನು ಸಾಧ್ಯವಾದಷ್ಟು ಬೇಗ ಇತ್ಯರ್ಥಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಳಮಟ್ಟದಲ್ಲಿ ಅಧಿಕಾರಿಗಳು ಸಮರ್ಥವಾಗಿ ಕೆಲಸ ಮಾಡಿದರೆ ಜನರು ತಮ್ಮ ಸಮಸ್ಯೆಗಳನ್ನು ತೆಗೆದುಕೊಂಡು ಬೆಂಗಳೂರುವರೆಗೆ ಬರುವ ಪರಿಸ್ಥಿತಿ ಉದ್ಭವಿಸುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಸರ್ಕಾರಿ ಅಧಿಕಾರಿಗಳಲ್ಲಿ ಜಡತ್ವ ಇರಕೂಡದು, ಜಡತ್ವ ತಲೆದೋರಿದರೆ ಸಮಸ್ಯೆಗಳು ತಲೆದೋರುತ್ತವೆ, ಕೆಲಸ ಸರಿಯಾದ ನಿಟ್ಟಿನಲ್ಲಿ ಸಾಗಿದರೆ ಆಡಳಿತ ಯಂತ್ರ ಚುರುಕಾಗಿದೆ ಅಂತ ಜನರಿಗೆ ಮನವರಿಕೆಯಾಗತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಪ್ರಮುಖವಾಗಿ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಬೇಕು, ಯಾರೇ ಆಗಲಿ ಕೆಲಸದಲ್ಲಿ ನಿರ್ಲಕ್ಷ್ಯ ತೋರಿದರೆ, ಜನರಿಗೆ ಅಗೌರವ ತೋರಿದರೆ ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆಯನ್ನು ಸಿಎಂ ರವಾನಿಸಿದರು.

Read More

ಗೋಕಾಕ: ಭಾರತವು ಮತ್ತಷ್ಟು ಗಟ್ಟಿಯಾಗಲು ನರೇಂದ್ರ ಮೋದಿಯವರು ಮತ್ತೋಮ್ಮೆ ನಮ್ಮ ರಾಷ್ಟ್ರದ ಪ್ರಧಾನಿಯಾಗಬೇಕು. ಮತ್ತೋಮ್ಮೆ ಮೋದಿಯವರಿಗಾಗಿ ಕಾರ್ಯಕರ್ತರು ಪ್ರತಿ ಮನೆ-ಮನೆ ಬಾಗಿಲಿಗೆ ತೆರಳಿ ಕೇಂದ್ರ ಸರ್ಕಾರದ ಯೋಜನೆಗಳನ್ನು ವಿವರಿಸಬೇಕು. ಬರುವ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಶ್ರಮಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಬುಧವಾರದಂದು ನಗರದ ಎನ್‍ಎಸ್‍ಎಫ್ ಕಚೇರಿಯಲ್ಲಿ ಗೋಕಾಕ ಮತ್ತು ಅರಭಾವಿ ಮಂಡಲ ಜಂಟಿಯಾಗಿ ಹಮ್ಮಿಕೊಂಡಿದ್ದ ಗ್ರಾಮ ಚಲೋ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶಕ್ಕೆ ನರೇಂದ್ರ ಮೋದಿಯವರು ಮತ್ತೋಮ್ಮೆ ಪ್ರಧಾನಿಯಾಗಬೇಕೆಂಬುವುದು ಇಡೀ ದೇಶದ ನಾಗರೀಕರ ಆಶಯವಾಗಿದೆ ಎಂದು ಹೇಳಿದರು. ಪ್ರಧಾನಿಯಾಗಿ ಮೋದಿಯವರು ಎರಡು ಅವಧಿಯನ್ನು ಯಶಸ್ವಿಯಾಗಿ ಪೂರೈಸುತ್ತಿದ್ದಾರೆ. ಅವರು ಜಾರಿಗೊಳಿಸಿರುವ ನೂರಾರು ಜನೋಪಯೋಗಿಯ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿವೆ. ವಿಶ್ವದಲ್ಲಿಯೇ ಭಾರತ ಸಶಕ್ತ ಹಾಗೂ ಬಲಿಷ್ಠ ರಾಷ್ಟ್ರವಾಗಲು ಕಾರಣರಾಗಿದ್ದಾರೆ. ಮೋದಿಯವರಿಂದ ಜಗತ್ತಿನ ಬಲಾಢ್ಯ ರಾಷ್ಟ್ರಗಳು ಪ್ರೇರಣೆಗೊಂಡು ಭಾರತದ ಮಾದರಿಯಲ್ಲಿ ಆಡಳಿತ ನಡೆಸುತ್ತಿವೆ. ಜೆಜೆಎಮ್,…

Read More

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಬಿಜೆಪಿ – ಜೆಡಿಎಸ್‌ ಮೈತ್ರಿ (BJP JDS Alliance) ಮಾಡಿಕೊಂಡಿದ್ದು, ರಾಜ್ಯದಲ್ಲಿ ಲೋಕ ಸಮರಕ್ಕೆ ಸಜ್ಜಾಗಿದೆ. ಈಗ ಇದಕ್ಕಿಂತ ಮುಂಚಿತವಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ (Bangalore Teachers Constituency) ಫೆ. 16ರಂದು ಉಪ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ  ಇಂದು  ಜಂಟಿ  ಸಭೆ ನಡೆಸಲಾಯಿತು. ಹಾಗೆ ನಗರದ ಮಲ್ಲೇಶ್ವರಂನ ಬಾಬು ದೇಶಪಾಂಡೆ ಭವನದಲ್ಲಿ  ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದ ಶಾಸಕರುಗಳ ಸಭೆಯಲ್ಲಿ  ಬಿಜೆಪಿ ಮಾಜಿ  ಸಚಿವರು , ಶಾಸಕರು , ಜೆಡಿಎಸ್ ಶಾಸಕರು ಉಪಸ್ಥಿತರಿದ್ದರು. ಅಲ್ಲದೆ ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ ಸೇರಿದಂತೆ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಶ್ರೀ ಎ.ಪಿ. ರಂಗನಾಥ್ ಭಾಗಿಯಾಗಿದ್ದು ವಿರೋಧ ಪಕ್ಷದ ನಾಯಕರಾದ ಶ್ರೀ ಆರ್ ಅಶೋಕ್,ಮಾಜಿ ಸಚಿವರಾದ ಶ್ರೀ ಮುನಿರತ್ನ, ಮಾಜಿ ಡಿಸಿಎಂ ಶ್ರೀ ಅಶ್ವಥ್ ನಾರಾಯಣ್, MLC ಶ್ರೀ ಟಿ. ಎ.ಶರವಣ, ಶ್ರೀ ತಿಪ್ಪೇಸ್ವಾಮಿ, MLA ಶ್ರೀ ಉದಯ್ ಗರುಡಾಚಾರ್,MLA ಶ್ರೀ…

Read More