Author: AIN Author

ಹೊಸಪೇಟೆ: ಮಾನ್ಯ ಮುಖ್ಯಮಂತ್ರಿಗಳ ಮಹತ್ವದ ಜನತಾ ದರ್ಶನ ಕಾರ್ಯಕ್ರಮವು ಬೆಂಗಳೂರಿನಲ್ಲಿ ಫೆ.8ರಂದು ಯಶಸ್ವಿಯಾಗಿ ಆರಂಭವಾಯಿತು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ನೇರವಾಗಿ ಭೇಟಿ ಮಾಡಿ ಅಹವಾಲು ಸಲ್ಲಿಸುವ ಮಹತ್ವದ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಸಿಇಓ ಸೇರಿದಂತೆ ಜಿಲ್ಲಾ, ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ. ಹೊಸಪೇಟೆ ನಗರದ ಜಿಲ್ಲಾಡಳಿತ ಭವನದಲ್ಲಿನ ವಿಡಿಯೋ ಕಾನ್ಫರೆನ್ಸ್ ಹಾಲನಲ್ಲಿ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಹಾಗೂ ಜಿಪಂ ಸಿಇಓ‌ ಸದಾಶಿವ ಪ್ರಭು ಬಿ ಅವರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಮಹದ್ ಅಲಿ ಅಕ್ರಮ ಷಾಹ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Read More

ಗದಗ: ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಜಿಗೇರಿ ಗ್ರಾಮದ ಹೊರವಲಯದಲ್ಲಿ ಮರಿಗಳೊಂದಿಗೆ ಚಿರತೆ ಅವಿತು ಕುಳಿತಿರುವ ಸಂಬಂಧ ಅರಣ್ಯ ಇಲಾಖೆಯಿಂದ ಆಪರೇಷನ್ ಚಿರತೆ ಆರಂಭವಾಗಿದೆ. ನಿನ್ನೆ 18 ವರ್ಷದ ಉದಯ ಎಂಬ ಯುವಕನ ಮೇಲೆ ದಾಳಿ ಮಾಡಿತ್ತು. ನಂತರ ಎರಡು ಮರಿಗಳೊಂದಿಗೆ ಬಾಳೆ ತೋಟದಲ್ಲಿ ಠಿಕಾಣಿ ಹೂಡಿದೆ. ಕಾರ್ಯಾಚರಣೆ ವೇಳೆಯೂ ಮುದಕಪ್ಪ ಎಂಬಾತನ ಮೇಲೆ ದಾಳಿ‌ ಮಾಡಿತ್ತು. ಇದಾದ ಬಳಿಕ ಅರಣ್ಯ ಇಲಾಖೆ ಅಲರ್ಟ್ ಆಗಿದ್ದು, ಜೆಸಿಬಿ ಮೂಲಕ ಬಾಳೆ ತೋಟಕ್ಕೆ ಎಂಟ್ರಿಯಾಗಿ ಕಾರ್ಯಾಚರಣೆಗೆ ಸಜ್ಜು ಆಗಿದೆ.

Read More

ಬೆಂಗಳೂರು: ಜನಸಾಮಾನ್ಯರ ಅಹವಾಲು ಆಲಿಸಿ, ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಸಿಎಂ ಸಿದ್ದರಾಮಯ್ಯರಿಂದ ‘ಜನಸ್ಪಂದನ’ ಕಾರ್ಯಕ್ರಮ ನಡೆಯುತ್ತಿದ್ದು ಈ ವೇಳೆ  ನಾನು ಡಬ್ಬಲ್ ಡಿಗ್ರಿ ಮಾಡಿದ್ದೇನೆ. ಆದರೂ ನನಗೆ ಉದ್ಯೋಗ ಇಲ್ಲ. ಕೆಲಸ ಕೊಡಿಸಿ ಎಂದು  ವಿಶೇಷ ಚೇತನ ನವ್ಯಶ್ರೀ ಜನಸ್ಪಂದನದಲ್ಲಿ ತಮ್ಮ ಸಮಸ್ಯೆ ತೋಡಿಕೊಂಡಿದ್ದರು. ಈಕೆಯ ಮನವಿ ಸ್ವೀಕಾರ ಮಾಡಿದ ಸಿಎಂ ಸಿದ್ದರಾಮಯ್ಯ ಉದ್ಯೋಗ ಮೇಳದ ವೇಳೆ ಈ ಅರ್ಜಿಯನ್ನು ಪರಿಗಣಿಸುವಂತೆ ಮುಖ್ಯಮಂತ್ರಿಗಳು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಹಾಗೆ ಶಾಂಭವಿ ಮಗುವಿಗೆ ಕಿವಿ ಸಮಸ್ಯೆ ವಿಚಾರವಾಗಿ ಸ್ಥಳದಲ್ಲೆ 50 ಸಾವಿರ ಮಂಜೂರು ಮಾಡಿದ್ದು  ಸಿಎಂ ಪರಿಹಾರ‌ ನಿಧಿಯಿಂದ ಸಿದ್ದರಾಮಯ್ಯರಿಂದ ಮಂಜೂರಾತಿ ಮಾಡಲಾಗಿದೆ. ಹಾಗೆ ಬಸನಗೌಡ್ ಬಿರಾದರ್ ಎಂಬುವವರಿಗೆ ಬೋನ್ ಮ್ಯಾರೋ ಚಿಕಿತ್ಸೆಗೆ ಸ್ಥಳದಲ್ಲೆ 4 ಲಕ್ಷ ರೂಪಾಯಿ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

Read More

ಕಲಬುರ್ಗಿ: ಪೊಲೀಸ್ ಕಮಿಷನರ್ ಹೆಸರಲ್ಲೆ ನಕಲಿ FB ಖಾತೆ ಓಪನ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣ, ಕಲಬುರ್ಗಿಯಲ್ಲಿ ನಡೆದಿದೆ. ನಗರ ಪೋಲೀಸ್ ಕಮೀಷನರ್ ಆರ್ ಚೇತನ್ ಫೋಟೋ ಬಳಸಿ ನಕಲಿ FB ಅಕೌಂಟ್ ಓಪನ್ ಮಾಡಿದ್ದಾರೆ ಕಿರಾತಕರು.. ಕಮಿಷನರ್ ಫೋಟೊ ಬಳಸಿ.ನಕಲಿ ಅಕೌಂಟ್ ಮೂಲಕ ಕಮಿಷನರ್ ಸ್ನೇಹಿತರ ಬಳಿ ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿದ್ದಾರೆ.. ಈ ಕುರಿತಂತೆ ನಗರದ ಸೈಬರ್ ಕ್ರೈಂ ವಿಭಾಗದಲ್ಲಿ ಕಮಿಷನರ್ ದೂರನ್ನ ದಾಖಲಿಸಿದ್ದಾರೆ.

Read More

ನವದೆಹಲಿ: ದೇಶದ ಪ್ರಥಮ ಪ್ರಜೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ರೀಸಾಮಾನ್ಯರ ರೀತಿ ದೆಹಲಿ ಮೆಟ್ರೋದಲ್ಲಿ ಸಂಚರಿಸಿದ್ದಾರೆ. ಭಾರೀ ಭದ್ರತೆಯ ಅಂಗರಕ್ಷಕ ಪಡೆಯನ್ನು ತೊರೆದ ರಾಷ್ಟ್ರಪತಿಗಳು ಕೆಲ ಹೊತ್ತು ಮೆಟ್ರೋದಲ್ಲಿ ಸಂಚರಿಸಿ ಸಹ ಪ್ರಯಾಣಿಕರ ಅಚ್ಚರಿಗೆ ಕಾರಣರಾದರು. https://ainlivenews.com/this-card-is-enough-if-you-have-it-get-2-lakh-insurance-from-the-government-3000-thousand-rupees-per-month/ ದೇಶದ ಪ್ರಥಮಪ್ರಜೆಯನ್ನು ಹತ್ತಿರದಿಂದ ಕಂಡು ಜನ ಸಂಭ್ರಮಿಸಿದರು. ಪಕ್ಕದಲ್ಲೇ ಕುಳಿತಿದ್ದ ವಿದ್ಯಾರ್ಥಿಗಳ ಜೊತೆ ರಾಷ್ಟ್ರಪತಿಗಳು ಸಂವಾದ ನಡೆಸಿದ್ರು. ದೆಹಲಿ ಮೆಟ್ರೊದ ನೇರಳೆಮಾರ್ಗದಲ್ಲಿ ಮುರ್ಮು ಪ್ರಯಾಣಿಸಿದ್ದಾರೆ. ಕಾಶ್ಮೀರ್ ಗೇಟ್- ರಾಜಾ ನಹರ್ ಸಿಂಗ್ (ಬಲ್ಲಭಗಢ) ನಡುವೆ ಈ ನೇರಳೆ ಮಾರ್ಗ ಚಲಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮತ್ತು ತಂಬಾಕು ರಹಿತ ಹುಕ್ಕಾ ಬಳಕೆ ಮತ್ತು ಮಾರಾಟ, ಸೇವನೆಯನ್ನ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಸಾರ್ವಜನಿಕರ ಆರೋಗ್ಯದ ವಿಷಯದಲ್ಲಿ ಕಳವಳ ವ್ಯಕ್ತಪಡಿಸುತ್ತಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹುಕ್ಕಾ ನಿಷೇಧಿಸುವಲ್ಲಿ (Hookah Ban) ಪ್ರಮುಖ ಪಾತ್ರ ವಹಿಸಿದ್ದಾರೆ. ತಂಬಾಕು ರಹಿತ ಎಂದು ಹೇಳಿಕೊಂಡು‌ ನಡೆಯುತ್ತಿದ್ದ ಅನಾರೋಗ್ಯಕರ ಹುಕ್ಕಾ ಹಾವಳಿಗೆ ಕಡಿವಾಣ ಹಾಕಿದ್ದಾರೆ. ಸಾರ್ವಜನಿಕರ ಆರೋಗ್ಯವನ್ನು ಕಾಪಾಡಲು ಮತ್ತು ತಂಬಾಕು ಸಂಬಂಧಿತ ರೋಗಗಳ ಹೆಚ್ಚಳವನ್ನು ತಡೆಯುವ ನಿಟ್ಟಿನಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆಯನ್ನ ನಿಷೇಧಿಸುತ್ತಿರುವುದಾಗಿ ಆರೋಗ್ಯ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ. ವಿಶ್ವ ಆರೋಗ್ಯ, ಸಂಸ್ಥೆ (WHO) ನಡೆಸಿರುವ ಗ್ಲೋಬಲ್ ಅಡಲ್ಸ್ ಟೊಬ್ಯಾಕೋ ಸರ್ವೇ 2016-17, ಅಧ್ಯಯನದ ಪ್ರಕಾರ, ಕರ್ನಾಟಕದಲ್ಲಿ 22.8% ವಯಸ್ಕರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಾರೆ. ಈ ಪೈಕಿ 8.8% ರಷ್ಟು ಮಂದಿ ಧೂಮಪಾನಿಗಳಾಗಿದ್ದಾರೆ. ಕರ್ನಾಟಕದಲ್ಲಿ 23.9% ವಯಸ್ಕರು ಸಾರ್ವಜನಿಕ ಸ್ಥಳಗಳಲ್ಲಿ ಒಟ್ಟಾಗಿ ಧೂಮಪಾನ ಮಾಡುತ್ತಾರೆ. ಇದು ರಾಜ್ಯದಲ್ಲಿ ತಂಬಾಕು…

Read More

ಬೆಂಗಳೂರು: ನಾನು ಪಾರ್ಲಿಮೆಂಟ್‌ ಸದಸ್ಯತ್ವ ಕೇಳಿದ್ದೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ (V Somanna) ಹೇಳಿದ್ದಾರೆ. ತುಮಕೂರು ಲೋಕಸಭಾ (Tumakuru Lok Sabha Election) ಕ್ಷೇತ್ರದ ಟಿಕೆಟ್‌ ಕೇಳಿದ್ದೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ನಾನು ತುಮಕೂರು ಕ್ಷೇತ್ರದ ಆಕಾಂಕ್ಷಿ ಎಂದು ಎಲ್ಲಿಯೂ ಹೇಳಿಲ್ಲ. ತುಮಕೂರು ಅಭಿವೃದ್ಧಿಗಾಗಿ ನಾನು ಶ್ರಮವಹಿಸಿದ್ದೇನೆ. ನಾನು ಯಾವುದೇ ಕ್ಷೇತ್ರವನ್ನು ಕೇಳಿಲ್ಲ ಎಂದು ಹೇಳಿದರು ಕಳೆದ ಬಾರಿ ನನಗೆ ಸೋಲಾಗಿದೆ. ಆದರೆ ನನ್ನ ಕಾರ್ಯವೈಖರಿ ನೋಡಿ ಹೈಕಮಂಡ್ ಯಾವ ಕ್ಷೇತ್ರ ನೀಡಿದರೂ ನನಗೆ ತೊಂದರೆಯಿಲ್ಲ. ವರಿಷ್ಠರ ಆದೇಶವನ್ನು ನಾನು ಮೀರುವುದಿಲ್ಲ. ಆದರೆ ಪಾರ್ಲಿಮೆಂಟ್ ಸದಸ್ಯತ್ವ ಕೇಳಿದ್ದೇನೆ. ರಾಜೀವ್ ಚಂದ್ರಶೇಖರ್ (Rajeev Chandrasekhar) ಅವರಿಗೆ ಪಾರ್ಲಿಮೆಂಟ್‌ ಸದಸ್ಯತ್ವ ಕೊಡದಿದ್ದರೆ ನನಗೆ ಕೊಡಿ ಎಂದಿದ್ದೇನೆ ಎಂದರು.

Read More

ಬೆಂಗಳೂರು : ರಾಜ್ಯದಲ್ಲಿ 40 ಪರ್ಸೆಂಟ್ ಪರಿಸ್ಥಿತಿ ಮತ್ತೆ ಮುಂದುವರಿದಿದೆ. ಈ ಹಿಂದೆ ಶಾಸಕರೇ ನೇರವಾಗಿ ಕಮಿಷನ್ ಕೇಳುತ್ತಿದ್ದರು. ಈಗ ಅಧಿಕಾರಿಗಳು ಬೇರೆಯವರ ಹೆಸರಿನಲ್ಲಿ ಹಣ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳಿಂದಲೇ ಭ್ರಷ್ಟಾಚಾರ ರಾಜ್ಯದಲ್ಲಿ ಬೇರೂರಿದೆ. ಮಿತಿಮೀರಿದ ಭ್ರಷ್ಟಾಚಾರಿ ಅಧಿಕಾರಿಗಳಿದ್ದಾರೆ. ಬಿಬಿಎಂಪಿ, ನೀರಾವರಿ ಸೇರಿದಂತೆ ಎಲ್ಲಾ ಅಧಿಕಾರಿಯಾಗಳಿದ್ದಾರೆ ಎಂದು ದೂರಿದರು. ಬಿಬಿಎಂಪಿಯಲ್ಲಿ 15 ಮಂದಿ ಅಧಿಕಾರಿಗಳು ಭ್ರಷ್ಟರಿದ್ದಾರೆ. ಅಧಿಕಾರಿಗಳದ್ದೇ ಕಾರುಬಾರು ಆಗಿ ಹೋಗಿದೆ. ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತರಲಾಗುವುದು ಎಂದು ಹೇಳಿದರು. ಮಾರ್ಚ್ 4 ರಂದು ಅರಮನೆ ಮೈದಾನದಲ್ಲಿ ಕಾಂಟ್ರಾಕ್ಟರ್ ಅಸೋಸಿಯೇಷನ್ ಸಮ್ಮೇಳನ ನಡೆಸಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಹ್ವಾನಿಸಲಾಗುವುದು. ಅಧಿಕಾರಿಗಳ ಭ್ರಷ್ಟಾಚಾರ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನು ಭೇಟಿ ಮಾಡಲಾಗುವುದು ಎಂದು ಕೆಂಪಣ್ಣ ತಿಳಿಸಿದರು.

Read More

ಮೈಸೂರು: ಮುಂದಿನ ದಿನಗಳಲ್ಲಿ ಎದುರಾಗುವ ಬರಗಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕಟ್ಟೆಚ್ಚರವಹಿಸಬೇಕು. ಜನ-ಜಾನುವಾರುಗಳಿಗೆ ನೀರು,ಮೇವಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು. ಅಧಿಕಾರಿಗಳು ಐದಾರು ತಿಂಗಳ ಕಾಲ ಹಳ್ಳಿಗಳಿಗೆ ತಪ್ಪದೆ ಭೇಟಿ ನೀಡಿ ಪರಿಸ್ಥಿತಿ ಅರಿತು ಕೆಲಸ ಮಾಡಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅಧಿಕಾರಿಗಳಿಗೆ ತಾಕೀತು ಮಾಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ  ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುವ ನಗರಸಭೆ,ಪಟ್ಟಣ ಪಂಚಾಯಿತಿ,ಗ್ರಾಪಂ ಅಧಿಕಾರಿಗಳ, ವಿ.ಎ.‌ ಸರ್ವೆಯರ್ ಗಳ ಸಭೆ ನಡೆಸಿದ ಅವರು, ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಗಳಲ್ಲಿ ಜನ-ಜಾನುವಾರಿಗೆ ಕುಡಿುುಂವ ನೀರು ಸರಬರಾಜಿನಲ್ಲಿ ಕೊರತೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು. ಬೇಸಿಗೆ ಬರಲಿದ್ದು, ನೀರು ಪೂರೈಕೆಗೆ ಸಂಬಂಧಿಸಿದಂತೆ ಪೂರ್ವ ತಾಂರಿ ವಾಡಿಕೊಳ್ಳಬೇಕು. ಈ ವಿಷುಂದಲ್ಲಿ ನಿರ್ಲಕ್ಷ್ಯ ವಹಿಸಬಾರದು’ ಎಂದು ನಿರ್ದೇಶನ ನೀಡಿದರು. ಕ್ಷೇತ್ರದ ಗ್ರಾಮ ಪಂಚಾಯಿತಿವಾರು ಪ್ರಗತಿ ಪರಿಶೀಲನೆ ನಡೆಸಿದ ಶಾಸಕರು, ಕುಡಿುುಂವ ನೀರಿನ ಪರಿಸ್ಥಿತಿ, ನರೇಗಾ ಸೇರಿದಂತೆ ಅಭಿವೃದ್ಧಿ ಕಾಂರ್ುಕ್ರಮಗಳ ಬಗ್ಗೆ ಪಿಡಿಒಗಳಿಂದ ವಾಹಿತಿ ಪಡೆದು ಚಾಟಿ ಬೀಸಿದರು.ಮನ್ರೇಗಾ,೧೫ನೇ…

Read More

ಬೆಂಗಳೂರು:  “ಸಂಸತ್ತಿನಲ್ಲಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಮಾತನಾಡಲೂ ಅವಕಾಶ ಕೊಡದೆ, ನಮ್ಮ ಧ್ವನಿ ಅಡಗಿಸುವ ಯತ್ನ ನಡೆದಿದೆ. ಜತೆಗೆ ಕೇಂದ್ರ ಸರ್ಕಾರ ರಾಜ್ಯದ ಪ್ರತಿ ಬಡವನ ಹೊಟ್ಟೆ ಮೇಲೆ ಹೊಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯಲ್ಲಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು “ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಮಾತಿನ ನಂತರ ಕಲಾಪ ಅಂತ್ಯಗೊಳಿಸಿ, ರಾಜ್ಯದ ಪರ ಸುರೇಶ್ ಅವರ ಧ್ವನಿ ಎತ್ತಲು ಅವಕಾಶ ಕೊಡದೆ ಅನ್ಯಾಯ ಮಾಡಲಾಗಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ರಾಜ್ಯದ ಪರವಾಗಿ ಮಾತನಾಡದೆ ಪಕ್ಷಪಾತಿಯಾಗಿ ಮಾತನಾಡುತ್ತಿದ್ದರು. ನಮ್ಮ ಪಕ್ಷದ ಎಲ್ಲಾ ಮಂತ್ರಿಗಳು, ಶಾಸಕರು, ಸಂಸದರು ದೆಹಲಿಗೆ ಬಂದು ರಾಜ್ಯದ ಪರ ದನಿ ಎತ್ತಿದರು. ಈ ಬಗ್ಗೆ ಬಿಜೆಪಿ ಎಂಪಿಗಳಿಗೆ ನಾಚಿಕೆಯಾಗಬೇಕು. ನಾವು ರಾಜ್ಯದ ಕೂಲಿ ಕಾರ್ಮಿಕರ ಪರವಾಗಿ ಹೋರಾಡುತ್ತೇವೆ. ಉದ್ಯೋಗ ಖಾತ್ರಿ ಯೋಜನೆ ಹಾಗೂ ರಾಜ್ಯದ ಅಭಿವೃದ್ದಿಗೆ ಬೇಕಾದ ಅನುದಾನಕ್ಕಾಗಿ ಹೋರಾಡುತ್ತೇವೆ. ಕರ್ನಾಟಕ ಸರ್ಕಾರ ನೀಡಿರುವ ಅಂಕಿ-ಅಂಶಗಳು ಸುಳ್ಳು ಎಂದು…

Read More