Author: AIN Author

ತುಮಕೂರು: ನಗರದಿಂದ ಅಯೋಧ್ಯೆಗೆ (Ayodhya) ವಿಶೇಷ ರೈಲು ಇಂದು ಬೆಳಗಿನ ಜಾವ 5:50ಕ್ಕೆ ಹೊರಟಿದೆ. ನಗರದಲ್ಲಿ ಇಂದು ತುಮಕೂರು to  ಅಯೋಧ್ಯೆ ಎಂಬ ನಾಮಫಲಕ ಹೊತ್ತ ರೈಲು (Train ) ಅಯೋಧ್ಯೆಗೆ ಹೊರಟಿದೆ. ಈ ರೈಲಿನಲ್ಲಿ ತುಮಕೂರಿನಿಂದ ಸುಮಾರು 250 ರಾಮಭಕ್ತರು ಅಯೋಧ್ಯೆಗೆ ಪ್ರಯಾಣಿಸುತ್ತಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಹಿಂದೂ ಕಾರ್ಯಕರ್ತರು (Hindu Activists)  ರಾಮಲಲ್ಲಾಗೆ  ಪೂಜೆ ಮಾಡಿ, ಭಜನೆ ಹಾಡಿ, ಯಾತ್ರೆಗೆ ಹೊರಟ ರಾಮಭಕ್ತರಿಗೆ ಆರತಿ ಬೆಳಗಿಸಿ ಬೀಳ್ಕೊಟ್ಟಿದ್ದಾರೆ. ಫೆ.9ರಂದು ಈ ರೈಲು ಅಯೋಧ್ಯೆಗೆ ತಲುಪಲಿದೆ.

Read More

ಬಾಗಲಕೋಟೆ : ಶ್ರೀ ರಾಮನಗರ ನಾಮಕರಣ ಮಾಡಿ ಎಂದು ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ನಗರದ ಪ್ರದೇಶವನ್ನು ಶ್ರೀ ರಾಮ ನಗರವೆಂದು ನಾಮಕರಣ ಮಾಡಿ ಎಂದು ರಬಕವಿ ಬನಹಟ್ಟಿ ನಗರಸಭೆ ಪೌರಾಯುಕ್ತ ಜಗದೀಶ್ ಈಟಿರವರಿಗೆ ಮನವಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಡಾ ರವಿ ಜಮಖಂಡಿ ವಿಜಯಕುಮಾರ ಹಲಕುರ್ಕಿ ಸದಾಶಿವ ನಾಯಕ ಸಂಜಯ ತೆಗ್ಗಿ ಪ್ರಭು ನಾಯಕ ಯಲ್ಲಪ್ಪ ಗೋಸುರವಾಡ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು. ಪ್ರಕಾಶ ಕುಂಬಾರ ಬಾಗಲಕೋಟೆ

Read More

ಬೆಂಗಳೂರು: ಈ ಚಳವಳಿ ರಾಜಕೀಯ ಚಳವಳಿ ಅಲ್ಲ. ಇದು ರಾಜಕೀಯೇತರ ಚಳವಳಿ. ಕರ್ನಾಟಕ (Karnataka), ಕನ್ನಡಿಗರ ಹಿತ ಕಾಯಲು ಮಾಡುತ್ತಿರುವ ಪ್ರತಿಭಟನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ. ಈ ಪ್ರತಿಭಟನೆ ಯಾವುದೇ ಪಕ್ಷದ ವಿರುದ್ಧ ಅಲ್ಲ. ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕು ಎಂಬ ಕಾರಣಕ್ಕೆ ಈ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು. ಬಿಜೆಪಿಯಿಂದ ನಮಗೆ ಅನ್ಯಾಯ, ಕರ್ನಾಟಕದ ಜನರಿಗೆ ದ್ರೋಹ. ತೆರಿಗೆ ಇಳಿಕೆ ಆದ ಮೇಲೆ ನಮಗೆ 62,098 ಕೋಟಿ ರೂ. ಕಡಿಮೆಯಾಗಿದೆ. ಜಿಎಸ್‌ಟಿ ಅವೈಜ್ಞಾನಿಕ ಎಂದು ಹೇಳಿದ್ದೆವು. ವೈಜ್ಞಾನಿಕವಾಗಿ ಮಾಡಲು ನಾವು ಮನವಿ ಮಾಡಿದ್ದರೂ ಮಾಡಲಿಲ್ಲ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು.

Read More

ಬೆಂಗಳೂರು: ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್‌ ಪಕ್ಷದ ಎರಡು ತಲೆ ರಾಜಕಾರಣ ಇದೀಗ ಬೆತ್ತಲಾಗಿದೆ. ಇದರ ಉದ್ದೇಶ ಲೋಕಸಭೆ ಚುನಾವಣೆ ಮಾತ್ರ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಕುರಿತು ಎಕ್ಸ್‌ ಪೋಸ್ಟ್‌ ಮಾಡಿರುವ ಅವರು, ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ., ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ! ಉದ್ದೇಶ ಲೋಕಸಭೆ ಚುನಾವಣೆಗಾಗಿ ಮಾತ್ರ ಕೇರಳದ ಸಿಎಂ ಶ್ರೀ ಪಿಣರಾಯಿ ವಿಜಯನ್ ಅವರು, “ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ” ಎಂದು ಕರೆದರೆ, ಅದಕ್ಕೆ ಕೇರಳ ಕಾಂಗ್ರೆಸ್ಸಿಗರು ಕೊಟ್ಟ ಉತ್ತರ ಹೀಗಿತ್ತು; “ಜನರ ಹಣವನ್ನು ನೀವು ಅನಗತ್ಯ ವೆಚ್ಚಗಳಿಗೆ ಪೋಲು ಮಾಡುತ್ತಿದ್ದೀರಿ, ನಾವು ಬರಲ್ಲ” ಎಂದಿದ್ದಾರೆ.  ವಿಜಯನ್ ಅವರು…

Read More

ದೆಹಲಿ: “ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ ಆ ಸರ್ಕಾರ ಯಾಕಿರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು. ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಶಿವಕುಮಾರ್ ಅವರು ಬುಧವಾರ ಹೇಳಿದ್ದಿಷ್ಟು. “ರಾಜ್ಯಕ್ಕೆ ಅನುದಾನ ನೀಡುವ ಅಧಿಕಾರ ಹಣ ಕಾಸು ಆಯೋಗದ ಮುಂದೆ ಇದೆ. ಕೇಂದ್ರ ಸರ್ಕಾರದ ಕೈಯಲ್ಲಿಲ್ಲ ಎಂದು ಶ್ರೀಮತಿ ನಿರ್ಮಲಾ ಸೀತರಾಮನ್ ಅವರು ಹೇಳಿದ್ದಾರೆ. ನಿಮ್ಮ ಬಳಿ ಅಧಿಕಾರವೇ ಇಲ್ಲವಾದರೆ ಸರ್ಕಾರ ಯಾಕಿರಬೇಕು? ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕೆಲಸವಲ್ಲವೇ?. ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನ. ಮನುಷ್ಯ ಹುಟ್ಟಿದ ನಂತರ ಏನಾದರೂ ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು. ಅದರಂತೆ ಈ ಹೋರಾಟ ಮುಂದಿನ ಪೀಳಿಗೆಗೆ ಒಂದು ಸಾಕ್ಷಿಗುಡ್ಡೆಯಾಗಲಿದೆ. ಇಲ್ಲಿ ನಾನು ಹಾಗೂ…

Read More

ನವದೆಹಲಿ:  ಕೇಂದ್ರ ಸರಕಾರದ ಅನುದಾನ ಹಂಚಿಕೆ ತಾರತಮ್ಯ ವಿರೋಧಿಸಿ ಕರ್ನಾಟಕ ಸರಕಾರವು ದೆಹಲಿಯ ಜಂತರ್ ಮಂಥರ್ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಎಲ್ಲಾ ಸಚಿವರು , ಶಾಸಕರು ಭಾಗಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವರಾದ ಎಚ್ ಕೆ ಪಾಟೀಲ್, ಡಾ. ಜಿ ಪರಮೇಶ್ವರ, ರಾಮಲಿಂಗಾ ರೆಡ್ಡಿ, ಕೆ ಎಚ್ ಮುನಿಯಪ್ಪ ಸೇರಿದಂತೆ ಸಚಿವರು, ಶಾಸಕರು, ಮೇಲ್ಮನೆ ಸದಸ್ಯರು, ಕಾಂಗ್ರೆಸ್ ಮುಂಚೂಣಿ ಘಟಕಗಳ ಮುಖಂಡರು ಭಾಗವಹಿಸಿದ್ದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಸಿಎಂ, ಡಿಸಿಎಂ ಮತ್ತಿತರರು ಮಾತನಾಡಿದರು. ತೆರಿಗೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ‘ನಮ್ಮ ತೆರಿಗೆ ನಮ್ಮ ಹಕ್ಕು’ ಹೆಸರಿನಲ್ಲಿ ಇಂದು ದೆಹಲಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ ನಡೆಯುತ್ತಿದೆ.

Read More

ರಾಯಚೂರು : ಫೆ. 12 ರಿಂದ 23 ವರೆಗೆ ಬಜೆಟ್  ಅಧಿವೇಶನ ನಡೆಯಲಿದೆ 12ನೇ ತಾರೀಕು ಜಂಟಿ ಸದನ ಸದನ ಉದ್ದೇಶ ಸಿ ರಾಜ್ಯಪಾಲರು ಮಾತನಾಡಲಿದ್ದಾರೆ ಹಾಗೆ  14ನೇ ತಾರೀಕು ಮುಖ್ಯಮಂತ್ರಿಗಳು ಸರ್ಕಾರದ ಪರವಾಗಿ ಬಜೆಟನ್ನು ಮಂಡಿಸುತ್ತಾರೆ ಎಂದು ರಾಯಚೂರಿನಲ್ಲಿ ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮ ಉದ್ದೇಶಿಸಿ ಮಾತನಾಡಿದ ಅವರು,  ನೂತನ  ಶಾಸಕರಿಗೆ 9ನೇ ತಾರೀಕಿನಿಂದ ಬಜೆಟ್ ಬಗ್ಗೆ ತರಬೇತಿ ನೀಡಲಾಗಿದ್ದು  ಇನ್ನೊಂದು ಕಡೆ ಪತ್ರಕರ್ತರಿಗೂ ವರ್ಕ್ ಶಾಪ್ ನಡೆಯಲಿದೆ ಬಹಳಷ್ಟು ಜನ ಭಾಗವಹಿಸುತ್ತಾರೆ ಎಂಬುವ ನಿರೀಕ್ಷೆ ಇದೆ ಅಧಿವೇಶನ ಸಂದರ್ಭದಲ್ಲಿ ಕೂಡ ಹೆಚ್ಚಿನ ವಿದ್ಯಾರ್ಥಿಗಳು ಬರುತ್ತಾರೆ ಬೆಳಗ್ಗೆನಿಂದ ಮಧ್ಯಾಹ್ನವರೆಗೂ ಬಿಸಿಲಲ್ಲಿ ಕ್ಯೂನಲ್ಲಿ ನಿಂತಿರುತ್ತಾರೆ ಅಧಿವೇಶನ ಪ್ರಾರಂಭ ಆಗದ ಮುಂಚೆಯೇ ಬರುವ ವಿದ್ಯಾರ್ಥಿಗಳಿಗೆ ವಿಧಾನಸೌಧದಲ್ಲಿ ಪ್ರವೇಶ ಇಲ್ಲ ಹಾಗೆ  ಅಧಿವೇಶನ ಅಷ್ಟೇ ಅಲ್ಲ ಇಸ್ರೋ, ಕಿದ್ವಾಯ್,ನಿಮಾನ್ಸ್ ಸಂಸ್ಥೆಗಳನ್ನು ನೋಡಬೇಕಾದರೆ ಅನುಮತಿ ಕೂಡ ಸರ್ಕಾರವೇ ಕೊಡುತ್ತದೆ.

Read More

ಜಾರ್ಖಾಂಡ್ : ಉತ್ತರಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಮಂಡಿಸಿದ್ದಾರೆ. ಸೋಮವಾರದಿಂದ ಉತ್ತರಾಖಂಡ್ ವಿಧಾನಸಭೆಯಲ್ಲಿ ನಾಲ್ಕು ದಿನಗಳ ವಿಶೇಷ ಅಧಿವೇಶನ ಆರಂಭಗೊಂಡಿದ್ದು, ಇಂದು ಕಾಂಗ್ರೆಸ್ ಶಾಸಕರ ವಿರೋಧದ ನಡುವೆಯೇ ಸಿಎಂ ಪುಷ್ಕರ್ ಸಿಂಗ್ ಯುಸಿಸಿ ಮಸೂದೆಯನ್ನು ಮಂಡಿಸಿದರು. ಇದೊಂದು ಹೆಮ್ಮೆಯ ಕ್ಷಣವಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ ಬಣ್ಣಿಸಿದ್ದಾರೆ. ಇದರೊಂದಿಗೆ ಬಿಜೆಪಿ ಆಡಳಿತವಿರುವ ಉತ್ತರಾಖಂಡ್ ರಾಜ್ಯವು ಏಕರೂಪ ನಾಗರಿಕ ಸಂಹಿತೆಯನ್ನ ಅಳವಡಿಸಿಕೊಂಡ ದೇಶದ ಮೊದಲ ರಾಜ್ಯವಾಗಿ ಹೊರಹೊಮ್ಮಿದೆ. ಇನ್ನು, ಯುಸಿಸಿ ಜಾರಿಯಾದಲ್ಲಿ ಮದುವೆ, ವಿಚ್ಛೇದನ, ಆಸ್ತಿ ಹಕ್ಕು ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆ ಎಲ್ಲ ಧರ್ಮಗಳಿಗೂ ಒಂದೇ ಕಾನೂನು ಅನ್ವಯವಾಗಲಿದ್ದು, ಈವರೆಗೂ ಆಯಾಯ ಧರ್ಮಗಳು ಆಯಾಯ ವೈಯಕ್ತಿಕ ಕಾನೂನು ಕ್ರಮಗಳನ್ನು ಅನುಸರಿಸುತ್ತಿದ್ದವು. ಇದು ಸಮಾಜದಲ್ಲಿ ಗೊಂದಲಕ್ಕೆ ಕಾರಣವಾಗುತ್ತಿತ್ತು. ಆದರೆ ಈ ಮಸೂದೆ ಮಂಡನೆಯಾದರೆ ಎಲ್ಲ ಧರ್ಮಗಳಿಗೂ ಒಂದೇ ಕಾನೂನು ಅನ್ವಯವಾಗಲಿದೆ.

Read More

ನವದೆಹಲಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ , ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು. ಇದು ರಾಜಕೀಯ ಚಳವಳಿ ಅಲ್ಲ ಕಳೆದ ಐದಾರು ವರ್ಷಗಳಲ್ಲಿ 1,87,000 ಕೋಟಿ ರೂ.ಗಳಷ್ಟು ನ್ಯಾಯಯುತವಾಗಿ ಬರಬೇಕಾಗಿದ್ದ ಅನುದಾನವನ್ನು ರಾಜ್ಯಕ್ಕೆ ನೀಡಲಾಗಿಲ್ಲ. ಈ ಅನ್ಯಾಯದ ವಿರುದ್ಧ ಪ್ರತಿಭಟನೆಯನ್ನು ಮಾಡಲಾಗುತ್ತಿದೆ.ಜಂತರ್ ಮಂತರ್ ಐತಿಹಾಸಿಕ ಸ್ಥಳವಾಗಿದ್ದು, ಅನೇಕ ಚಳವಳಿಗೆ ಸಾಕ್ಷಿಯಾದ ಸ್ಥಳ. ಇಂತಹ ಜಾಗದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರು, ಶಾಸಕರು ಈ ಹೋರಾಟದಲ್ಲಿ ಭಾಗವಹಿಸಿದ್ದಾರೆ. ಇದು ರಾಜಕೀಯ ಚಳವಳಿ ಅಲ್ಲ. ಕೇಂದ್ರ ಸರ್ಕಾರದ ವಿರುದ್ಧದ ಈ ಹೋರಾಟವನ್ನು ಪಕ್ಷಾತೀತವಾಗಿ ಮಾಡಬೇಕೆಂಬ ಮನವಿಯನ್ನು ರಾಜ್ಯ ಬಿಜೆಪಿಯ ನಾಯಕರಿಗೂ ಮಾಡಲಾಗಿದೆ ಎಂದರು. 100 ರೂ. ಗಳಲ್ಲಿ ರಾಜ್ಯಕ್ಕೆ…

Read More

ಬಳ್ಳಾರಿ : ಬಳ್ಳಾರಿಯಲ್ಲಿ ಐಟಿ ಅಧಿಕಾರಿಗಳ ಶಾಕ್ ನೀಡಿದ್ದು   ಶ್ರೀನಿವಾಸ್ ಕನ್ಸಟ್ರಕ್ಷನ್ಸ್ ಮಾಲಿಕರ ಮೇಲೆ ಐಟಿ ದಾಳಿ ನಡೆಸಲಾಗಿದೆ.  ರಸ್ತೆ, ಕ್ಯಾನಲ್ ಸೇರಿದಂತೆ ವಿವಿಧ ಬೃಹತ್ ಕಾಮಗಾರಿಗಳ ಕಾಂಟ್ರಾಕ್ಟ್ ಮಾಡಿರುವ ಪಿಚ್ಚೇಶ್ವರ ರಾವ್ ಆದಾಯ ತೆರಿಗೆ ವಂಚನೆ ಹಾಗೂ ಆದಾಯಕ್ಕೂ ಮಿರಿದ ಆಸ್ತಿಗಳಿಕೆ ಆರೋಪ ಹಿನ್ನೆಲೆ ದಾಳಿ ನಡೆಸಲಾಗುತ್ತಿದೆ. ಶ್ರೀನಿವಾಸ್ ರಾವ್ ಕನ್ಸಟ್ರಕ್ಷನ್ಸ್ ಮಾಲಿಕ ಪಿಚ್ಚೇಶ್ವರ ರಾವ್ ಮನೆ ಹಾಗು ಕಚೇರಿ ಮೇಲೆ ಐಟಿ ದಾಳಿ ಬಳ್ಳಾರಿಯ ತಾಳುರು ರಸ್ತೆಯಲ್ಲಿರುವ ಶ್ರೀನಿವಾಸ ಕನ್ಸಟ್ರಕ್ಷನ್ಸ್ ಕಛೇರಿ, ಬೆಂಗಳೂರಿನಿಂದ ಬಂದಿರುವ ನಾಲ್ಕು ಐಟಿ ಅಧಿಕಾರಿಗಳ ತಂಡದಿಂದ ದಾಳಿ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ, ಪಿಚ್ಚೇಶ್ವರ ರಾವ್ ರಿಂದ ಮಾಹಿತಿ ಪಡೆಯುತ್ತಿರುವ ಅಧಿಕಾರಿಗಳು

Read More