Author: AIN Author

ಅಂಡರ್​-19 ವಿಶ್ವಕಪ್​ನ ಸೆಮಿಫೈನಲ್​ ಪಂದ್ಯದಲ್ಲಿ ಹರಿಣಗಳನ್ನು ಬಗ್ಗುಬಡಿದ ಭಾರತದ ಯುವ ಹುಲಿಗಳು 9ನೇ ಬಾರಿಗೆ ವಿಶ್ವಕಪ್​ ಫೈನಲ್ ಪ್ರವೇಶ ಮಾಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ 2 ವಿಕೆಟ್​ಗಳ ಜಯಭೇರಿ ಬಾರಿಸಿದೆ. ಈ ಮೂಲಕ ಮೊದಲ ತಂಡವಾಗಿ ಫೈನಲ್​ಗೆ ಲಗ್ಗೆ ಇಟ್ಟಿದೆ. 245 ರನ್​ಗಳ ಟಾರ್ಗೆಟ್​ ಬೆನ್ನಟ್ಟಿದ ಭಾರತ 48.5 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಆರಂಭಿಕ ಆಘಾತ ಎದುರಿಸಿದ್ದ ಭಾರತಕ್ಕೆ ಸಚಿನ್ ದಾಸ್ 96, ನಾಯಕ ಉದಯ್ ಸಹರಾನ್ 81 ರನ್​ ಸಿಡಿಸಿ ಆಸರೆಯಾಗುವ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಉಳಿದಂತೆ ರಾಜ್​ ಲಿಂಬಾನಿ ಅಜೇಯ 19, ಅರ್ಶಿನ್ ಕುಲಕರ್ನಿ 12, ಅರವೆಲ್ಲಿ ಅವನೀಶ್ 10 ರನ್​ ಸಿಡಿಸಿದರು. ಆದರ್ಶ್​ ಸಿಂಗ್, ಮುಶೀರ್ ಖಾನ್ ನಿರಾಸೆ ಮೂಡಿಸಿದರು. ದಕ್ಷಿಣ ಆಫ್ರಿಕಾ ಪರ ಟ್ರಿಸ್ಟಾನ್ ಹಾಗೂ ಕ್ವೆನಾ ಮಫಕಾ ತಲಾ 3 ವಿಕೆಟ್ ಪಡೆದರು. ನಾಯಕ ಉದಯ್ ಸಹರಾನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.…

Read More

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿರುವ ಕಾಂಗ್ರೆಸ್​ಗೆ ಕೌಂಟರ್​​ ನೀಡಲು ಸಿದ್ಧವಾಗಿರುವ ರಾಜ್ಯ ಬಿಜೆಪಿ ಇಂದು ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಸರ್ಕಾರದ ವಿರುದ್ಧ ಧರಣಿ ರಾಜ್ಯ ಬಿಜೆಪಿ ವತಿಯಿಂದ  ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ಪ್ರತಿ ಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಧರಣಿ ನಡೆಯಲಿದ್ದು, ಈ ಹೋರಾಟದಲ್ಲಿ ಪಕ್ಷದ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗಿಯಾಗಿದ್ದಾರೆ ತೆರಿಗೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ‘ನಮ್ಮ ತೆರಿಗೆ ನಮ್ಮ ಹಕ್ಕು’ ಹೆಸರಿನಲ್ಲಿ ಇಂದು ದೆಹಲಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ ನಡೆಸಲಿದೆ. ಇತ್ತ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯೂ ರಾಜ್ಯದ ಶಕ್ತಿ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಿದೆ. ಬರ ಪರಿಹಾರ ವಿತರಣೆ ಮಾಡದಿರುವ ಸರ್ಕಾರದ ಕ್ರಮ ಖಂಡಿಸುವುದು ಸೇರಿದಂತೆ ರಾಜ್ಯ ಸರ್ಕಾರದ ವೈಫಲ್ಯಗಳ ಮೇಲೆ ಬೆಳಕು ಚೆಲ್ಲಿ…

Read More

ನವದೆಹಲಿ: ನಾಯಿ ಬಿಸ್ಕೆಟ್‌ (Dog Biscuit) ವಿಚಾರವಾಗಿ ತಮ್ಮ ವಿರುದ್ಧ ಟೀಕೆ ವ್ಯಕ್ತಪಡಿಸಿರುವ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಕಿಡಿಕಾರಿದ್ದಾರೆ ನಾಯಿ ಬಿಸ್ಕೆಟ್‌ ಕುರಿತು ಸ್ಪಷ್ಟನೆ ನೀಡಿರುವ ರಾಹುಲ್‌ ಗಾಂಧಿ, ನಾಯಿಗೆ ನಾನು ಬಿಸ್ಕೆಟ್‌ ತಿನ್ನಿಸಲು ಪ್ರಯತ್ನಿಸಿದೆ. ಆದರೆ ಅದು ಸ್ವೀಕರಿಸಲಿಲ್ಲ, ನಡುಗುತ್ತಿತ್ತು. ಹೀಗಾಗಿ ಅದರ ಮಾಲೀಕರಿಗೆ ನಾನು ಬಿಸ್ಕೆಟ್‌ ನೀಡಿದೆ. ಮಾಲೀಕನ ಕೈ ಸೇರುತ್ತಿದ್ದಂತೆ ನಾಯಿ ಬಿಸ್ಕೆಟ್‌ಗಳನ್ನು ತಿಂದಿತು. ಅದರಲ್ಲಿ ಏನು ಸಮಸ್ಯೆ ಇದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ನಾಯಿ ತಿರಸ್ಕರಿಸಿದ ಬಿಸ್ಕೆಟ್ ಅನ್ನು ರಾಹುಲ್‌ ಗಾಂಧಿ ವ್ಯಕ್ತಿಯೊಬ್ಬರಿಗೆ ನೀಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಕ್ಕೆ ಟೀಕೆ ಕೂಡ ವ್ಯಕ್ತವಾಗಿತ್ತು. ರಾಹುಲ್‌ ಗಾಂಧಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಈ ರೀತಿ ನಡೆಸಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದರು ಭಾರತ್ ಜೋಡೊ ನ್ಯಾಯ ಯಾತ್ರಾ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ರಾಹುಲ್‌ ಗಾಂಧಿ, ನಾಯಿಗೆ ಬಿಸ್ಕೆಟ್ ನೀಡಿದ್ದಾರೆ. ಆದರೆ ನಾಯಿ ಅದನ್ನು…

Read More

ದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರ ದೆಹಲಿಯ ಜಂತರ್​ ಮಂತರ್​​ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಯೋಜಿಸಿರುವ ‘ಛಲೋ ದೆಹಲಿ’ ಪ್ರತಿಭಟನೆಗೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು,  ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಅಷ್ಟೆ. ಇದು ರಾಜಕೀಯ ಚಳವಳಿ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು. ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಹೋರಾಟ ಮಾಡ್ತಿದ್ದೇವೆ. ರಾಜ್ಯದ ಸಂಸದರಿಗೂ ಪತ್ರ ಬರೆದು ಮನವಿ ಮಾಡಿದೆ. ಇದು ಐತಿಹಾಸಿಕವಾದ ಚಳವಳಿ. ಸುಮಾರು ಶೇ 40-45 ರಷ್ಟು ತೆರಿಗೆ ಪಾಲು ನಮಗೆ ಬರಬೇಕು. ನಾವು 4 ಲಕ್ಷ 30 ಸಾವಿರ ಕೋಟಿ ತೆರಿಗೆ ಕಟ್ಟುತ್ತಿದ್ದೇವೆ. 100 ರೂ. ತೆರಿಗೆ ಕಟ್ಟಿದ್ದರೆ ಕೇವಲ 12 ರೂಪಾಯಿ ಅಷ್ಟೇ ನಮಗೆ ಬರುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು. ಕರ್ನಾಟಕದಲ್ಲಿ ಬರಗಾಲ ಇದೆ. ಐದು ತಿಂಗಳಾದರೂ ಕೇಂದ್ರ ಸರ್ಕಾರ ಇದುವರೆಗೂ ಹಣ ನೀಡಿಲ್ಲ. ನಮ್ಮ ಸಚಿವರು ಕೇಂದ್ರ ಸರ್ಕಾರದ ಮಂತ್ರಿಗಳನ್ನು ಭೇಟಿಯಾದರು. ನಾನೇ…

Read More

ಬೆಂಗಳೂರು: ಸರ್ಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್- KFD) ಇಬ್ಬರು ಬಲಿಯಾಗಿದ್ದು, ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿರುವುದರಿಂದ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ (R Ashok) ಆರೋಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು “ಚಲೋ ದಿಲ್ಲಿ” ಎಂದು ಬೀದಿ ನಾಟಕ ಮಾಡಲು ಹೊರಟಿದ್ದಾರೆ.ಆದರೆ ಕರ್ನಾಟಕದಲ್ಲಿ… ರೈತರು ಬರ ಪರಿಹಾರ ಎಲ್ಲಿ? ಎನ್ನುತ್ತಿದ್ದಾರೆ. ಅನ್ನದಾತರು ಕಿಸಾನ್‌ ಸಮ್ಮಾನ್‌ ನ 4,000 ರೂ ಎಲ್ಲಿ? ಎಂದು ಕೇಳುತ್ತಿದ್ದಾರೆ. ಹಾಲು ಉತ್ಪಾದಕರು 7 ರೂಪಾಯಿ ಸಹಾಯಧನ ಎಲ್ಲಿ? ಎಂದು ಕೇಳುತ್ತಿದ್ದಾರೆ. ಬಡವರು 10 ಕೆಜಿ ಅಕ್ಕಿ ಎಲ್ಲಿ? ಎಂದು ಕೇಳುತ್ತಿದ್ದಾರೆ. ನಿರುದ್ಯೋಗಿ ಯುವಕರು 3,000 ರೂ. ಎಲ್ಲಿ? ಎಂದು ಕೇಳುತ್ತಿದ್ದಾರೆ. ನಮ್ಮ ಕ್ಷೇತ್ರಕ್ಕೆ ಅನುದಾನ ಎಲ್ಲಿ?  ಎಂದು ಶಾಸಕರು ಕೇಳುತ್ತಿದ್ದಾರೆ.  ಕಾಂಗ್ರೆಸ್‌  ನಾಯಕರೇ, ದಿಲ್ಲಿ ಬಿಡಿ, ಕನ್ನಡಿಗರ ಈ ‘ಎಲ್ಲಿ’ಗಳಿಗೆ ಮೊದಲು ಉತ್ತರ ಕೊಡಿ ಎಂದು ಆರ್.‌ ಅಶೋಕ್‌ ವಾಗ್ದಾಳಿ…

Read More

ಕಲಬುರಗಿ: ಜಮೀನು ವಿಚಾರಕ್ಕೆ ಜಗಳ ತೆಗೆದ ಗುಂಪು ಕಣ್ಣಿಗೆ ಖಾರದ ಪುಡಿ ಎರಚಿ ತಂದೆ ಹಾಗು ಆತನ ಇಬ್ಬರು ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕಲಬುರಗಿಯಲ್ಲಿ ನಡಿದಿದೆ. ಜೇವರ್ಗಿ ತಾಲ್ಲೂಕಿನ ನಿರನಕೋಡ ಗ್ರಾಮದಲ್ಲಿ ಘಟನೆ ನಡೆದಿದ್ದು ಶೇಶಪ್ಪಗೌಡ ಕನ್ಮಯ್ಯ ಮತ್ತು ಸಿದ್ದ ಒಡೆಯರ್ ಹಲ್ಲೆಗೊಳಗಾದವರು ಎನ್ನಲಾಗಿದೆ. ದಾಯಾದಿಗಳೇ ಹಲ್ಲೆ ಮಾಡಿದವರು ಅಂತ ಶಂಕಿಸಲಾಗಿದೆ. ಶಿವಯೋಗಿಯಪ್ಪ ಮಲ್ಲಪ್ಪ ಸಿದ್ದರಾಮ ಲಕ್ಷ್ಮಿಪುತ್ರ ಸೇರಿ ಹಲವರ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ.. ಮೂರು ಎಕರೆ ಜಮೀನು ಕೊಡುವಂತೆ ಕೇಳಿದ ವಿಚಾರದಲ್ಲಿ ಶುರುವಾದ ಗಲಾಟೆ ವಿಕೋಪಕ್ಕೆ ಹೋಗಿದೆ..ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Read More

ಇಂದೋರ್‌: ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮೊಮ್ಮಗ ಧೀರಜ್ ಗೆಹ್ಲೋಟ್ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಶುಭ ಕೋರಿದರು. ಗೆಹ್ಲೋಟ್‌ ಅವರ ಮೊಮ್ಮಗ ಧೀರಜ್‌ ಗೆಹ್ಲೋಟ್‌ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಮಿಂಚಿದ ಸಿಎಂ, ಡಿಸಿಎಂ ಮಧ್ಯಪ್ರದೇಶದ ಇಂದೋರ್ ನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮೊಮ್ಮಗ ಧೀರಜ್ ಗೆಹ್ಲೋಟ್ ಅವರ ವಿವಾಹ ಆರತಕ್ಷತೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಕೆ.ಜೆ.ಜಾರ್ಜ್‌, ಡಾ. ಜಿ.ಪರಮೇಶ್ವರ್‌, ಸುಧಾಕರ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.

Read More

ನವದೆಹಲಿ: ಬ್ಯಾಡ್ಮಿಂಟನ್‌ ಪಟು ಪಿವಿ ಸಿಂಧು (PV Sindhu) ಮತ್ತು ಜಾವೆಲಿನ್ ತಾರೆ ನೀರಜ್‌ ಚೋಪ್ರಾ (Neeraj Chopra) ಪರಸ್ಪರ ಪ್ರೀತಿಸುತ್ತಿದ್ದಾರಾ ಹೀಗೊಂದು ಪ್ರಶ್ನೆಯನ್ನು ಅಭಿಮಾನಿಗಳು ಈಗ ಕೇಳುತ್ತಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಇವರಿಬ್ಬರೂ ಒಂದೇ ಸಮಯದಲ್ಲಿ ಅಪ್‌ಲೋಡ್‌ ಮಾಡಿದ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ. ಪೋಸ್ಟ್‌ನಲ್ಲಿ ಏನಿತ್ತು? ನೀರಜ್‌ ಚೋಪ್ರಾ ಬ್ಯಾಡ್ಮಿಂಟನ್‌ ರಾಕೆಟ್‌ ಮತ್ತು ಕಾಕ್‌ನ ಫೋಟೋ ಹಂಚಿಕೊಂಡು, ಇದರ ಅರ್ಥ ಏನು ಊಹೆ ಮಾಡುವಿರಾ ಎಂದು ಪ್ರಶ್ನಿಸಿ ಪೋಸ್ಟ್‌ ಅನ್ನು ಪಿವಿ ಸಿಂಧು ಅವರಿಗೆ ಟ್ಯಾಗ್‌ ಮಾಡಿದ್ದರು ಪಿವಿ ಸಿಂಧು ಕೂಡ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಜಾವೆಲಿನ್‌ ಫೋಟೋ ಹಂಚಿಕೊಂಡು, ಅರೇ ಇದು ಹೇಗೆ ನನ್ನ ಬಳಿ ಬಂತು? ಊಹೆ ಮಾಡ್ತೀರಾ ಎಂದು ಪ್ರಶ್ನಿಸಿ ನೀರಜ್‌ ಚೋಪ್ರಾ ಅವರಿಗೆ ಅನ್ನು ಟ್ಯಾಗ್‌ ಮಾಡಿದ್ದರು ಇಬ್ಬರು ಪೋಸ್ಟ್‌ ಹಾಕಿದ್ದು ಯಾಕೆ? ಅಭಿಮಾನಿಗಳು ಇವರಿಬ್ಬರ ಮಧ್ಯೆ ಪ್ರೇಮಾಂಕುರವಾಗಿದೆ ಎಂದು ಹೇಳಿದರೂ ಈ ತಾರೆಯರು ಕಂಪನಿಯೊಂದರ ಪ್ರಚಾರ ಸಂಬಂಧ ಪೋಸ್ಟ್‌ ಹಾಕಿದ್ದಾರೆ. ಒಲಿಂಪಿಕ್ಸ್‌ ಜಾವೆಲಿನ್‌ನಲ್ಲಿ…

Read More

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿರುವ ಕಾಂಗ್ರೆಸ್​ಗೆ ಕೌಂಟರ್​​ ನೀಡಲು ಸಿದ್ಧವಾಗಿರುವ ರಾಜ್ಯ ಬಿಜೆಪಿ ಇಂದು ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಸರ್ಕಾರದ ವಿರುದ್ಧ ಧರಣಿ ನಡೆಸಲಿದೆ. ರಾಜ್ಯ ಬಿಜೆಪಿ ವತಿಯಿಂದ ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ಪ್ರತಿ ಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಧರಣಿ ನಡೆಯಲಿದ್ದು, ಈ ಹೋರಾಟದಲ್ಲಿ ಪಕ್ಷದ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ. ತೆರಿಗೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ‘ನಮ್ಮ ತೆರಿಗೆ ನಮ್ಮ ಹಕ್ಕು’ ಹೆಸರಿನಲ್ಲಿ ಇಂದು ದೆಹಲಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ ನಡೆಸಲಿದೆ. ಇತ್ತ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯೂ ರಾಜ್ಯದ ಶಕ್ತಿ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಿದೆ. ಬರ ಪರಿಹಾರ ವಿತರಣೆ ಮಾಡದಿರುವ ಸರ್ಕಾರದ ಕ್ರಮ ಖಂಡಿಸುವುದು ಸೇರಿದಂತೆ ರಾಜ್ಯ…

Read More

ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿ ತೆರಿಗೆ ನ್ಯಾಯಕ್ಕಾಗಿ ಸರ್ಕಾರದಿಂದಲೇ ಕೇಂದ್ರದ  ಬೃಹತ್​ ಪ್ರತಿಭಟನೆ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಜಂತ‌ರ್ ಮಂತರ್‌ನಲ್ಲಿ ಕಾಂಗ್ರೆಸ್‌ನ ಸಚಿವರು, ಶಾಸಕರು, ಸಂಸದರು ತೆರಿಗೆಗಾಗಿ ದೆಹಲಿ ಚಲೋ ಧರಣಿ ನಡೆಸುತ್ತಿದ್ದಾರೆ. ಇನ್ನೂ ಇವರು #ನನ್ನತೆರಿಗೆನನ್ನಹಕ್ಕು ಹ್ಯಾಶ್‌ಟ್ಯಾಗ್‌ ಮೂಲಕ  ಕೇಂದ್ರದ ವಿರುದ್ಧ ಸಿಡಿದೆದ್ದಿದ್ದಾರೆ. ಕೇಂದ್ರ ಸರ್ಕಾರ ತೆರಿಗೆ ಪಾಲು, ಅನುದಾನ ಹಂಚಿಕೆ ಮತ್ತು ಬರ ಪರಿಹಾರ ನೀಡುವುದರಲ್ಲಿ ತೋರುತ್ತಿರುವ ಮಲತಾಯಿ ಧೋರಣೆ ಹಾಗೂ ಈ ವಿಚಾರ ದಲ್ಲಿ ರಾಜ್ಯಕ್ಕೆ ಸತತ ವಾಗಿ ಆಗುತ್ತಿರುವ ಭಾರೀ ಅನ್ಯಾಯ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ದೆಹಲಿಯಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಿದೆ. ಸೆಪ್ಟೆಂಬರ್ 23 ರಂದು ಕೇಂದ್ರ ತಂಡ ಬಂದು ಬರಗಾಲ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ಕೊಟ್ಟಿದೆ. ಬಳಿಕ ಶಬರಿ ಕಾದಂತೆ ನಮ್ಮ ಮಂತ್ರಿಗಳು ಭೇಟಿಗೆ ಕಾದು ವಾಪಾಸ್ ಬಂದಿದ್ದಾರೆ. ಭೇಟಿ ಮಾಡಿದಾಗ ಸಭೆ ಕರೆಯುತ್ತೇನೆ ಎಂದ ಅಮಿತ್ ಶಾ ಇವತ್ತಿನವರೆಗೂ ಸಭೆಯನ್ನೇ ಕರೆದಿಲ್ಲ. ಸಭೆ…

Read More