Author: AIN Author

ಬೆಂಗಳೂರು:- ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆ ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಭರ್ಜರಿ ತಿರುಗೇಟು ಕೊಟ್ಟಿದ್ದಾರೆ. ದಿಲ್ಲಿ ಯಾತ್ರೆಗೆ ಹೊರಟ ಕಾಂಗ್ರೆಸ್​ನ 2 ತಲೆ ರಾಜಕಾರಣ ಬೆತ್ತಲಾಗಿದೆ. ಕರ್ನಾಟಕಕ್ಕೆ ಒಂದು ನೀತಿ, ಕೇರಳಕ್ಕೆ ಮತ್ತೊಂದು ನೀತಿ. ಉದ್ದೇಶ ಮಾತ್ರ ಲೋಕಸಭೆ ಚುನಾವಣೆ ಎಂದು ತಿರುಗೇಟು ನೀಡಿದ್ದಾರೆ. ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ರಾಜ್ಯ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ, ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ! ಉದ್ದೇಶ: ಲೋಕಸಭೆ ಚುನಾವಣೆ” ಎಂದು ಹೇಳಿದ್ದಾರೆ. ಅಲ್ಲದೆ, ರಾವಣ ತಲೆಗಳ ಕಾಂಗ್ರೆಸ್ ರಾಜಕಾರಣ ಎಂದು ಹ್ಯಾಷ್ ಟ್ಯಾಗ್ ಮಾಡಿದ್ದಾರೆ. ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರು, “ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ” ಎಂದು ಕರೆದರೆ, ಅದಕ್ಕೆ ಕೇರಳ…

Read More

ನವದೆಹಲಿ:- ಕರ್ನಾಟಕಕ್ಕೆ ಬರಬೇಕಿದ್ದ ಅನುದಾನದಲ್ಲಿ ಮೋಸವಾಗಿಲ್ಲ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಯಾ ಪೈಸೆ ಜಿಎಸ್​ಟಿ ಬಾಕಿ ಉಳಿಸಿಕೊಂಡಿಲ್ಲ. ಒಟ್ಟಾರೆ ಕೇಂದ್ರ ಸರ್ಕಾರ ರಾಜ್ಯಕ್ಕೆ 2.36 ಲಕ್ಷ ಕೋಟಿ ನೀಡುತ್ತಿದೆ ಎಂದರು. ಹಣಕಾಸು ಆಯೋಗ ಮಾಡಿದ ಶಿಫಾರಸು ಅಂತಿಮವಾಗಿದೆ. ಕರ್ನಾಟಕಕ್ಕೆ ವಿಶೇಷ ಅನುದಾನಕ್ಕೆ ಎಲ್ಲೂ ಶಿಫಾರಸು ಮಾಡಿಲ್ಲ. ಅಂತರರಾಜ್ಯ ಜಿಎಸ್​​ಟಿ ಶೇಕಡಾ 50ರಷ್ಟು ರಾಜ್ಯಕ್ಕೆ ಹೋಗುತ್ತಿದೆ. ಈ ತೆರಿಗೆ ಪದ್ಧತಿ ನೆಹರೂ ಕಾಲದಿಂದಲೂ ಇದೆ ಕೇಂದ್ರ ಸರ್ಕಾರ ನಯಾ ಪೈಸೆ ಜಿಎಸ್​ಟಿ ಬಾಕಿ ಉಳಿಸಿಕೊಂಡಿಲ್ಲ ಎಂದರು. ರಾಜ್ಯಕ್ಕೆ 6,280 ಕೋಟಿ ಬಡ್ಡಿ ರಹಿತ ಸಾಲ ನೀಡಲಾಗಿದೆ. ರಾಜ್ಯಕ್ಕೆ 18,000 ಕೋಟಿ ರೂಪಾಯಿ ಅನುದಾನ ನೀಡಲಿದ್ದೇವೆ ಒಟ್ಟಾರೆ ಕೇಂದ್ರ ಸರ್ಕಾರ ರಾಜ್ಯಕ್ಕೆ 2.36 ಲಕ್ಷ ಕೋಟಿ ನೀಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಜನರ ದಾರಿ ತಪ್ಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದರು. ದೆಹಲಿಯಲ್ಲಿ ನಾಳೆ ಕಾಂಗ್ರೆಸ್ ಶಾಸಕರಿಂದ ಪ್ರತಿಭಟನೆ…

Read More

ಚಿಕ್ಕಮಗಳೂರು:- ಲಂಚ ಸ್ವೀಕಾರ ಹಿನ್ನೆಲೆ ಚಿಕ್ಕಮಗಳೂರು KSRTC ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಸವರಾಜು ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲೇ ಬಸ್ ಚಾಲಕನಿಂದ 10 ಸಾವಿರ ರೂ. ಲಂಚ ಸ್ವೀಕರಿಸುವಾಗ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದು, ಚಿಕ್ಕಮಗಳೂರಿನಿಂದ ಕಡೂರು ಡಿಪೋಗೆ ವರ್ಗಾವಣೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆ ಚಾಲಕ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಚಾಲಕ ನೀಡಿದ ದೂರಿನ ಮೇರೆಗೆ ದಾಳಿ ನಡೆಸಿದ್ದ ಲೋಕಾಯುಕ್ತರು, ಅಧಿಕಾರಿಯನ್ನು ಬಂಧಿಸಿದ್ದಾರೆ.

Read More

ಮಂಡ್ಯ :- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಇತರೆ ಇಲಾಖೆಗಳ ಸೌಲಭ್ಯಗಳ ಸಮಾವೇಶವನ್ನು ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಫೆಬ್ರವರಿ 11ರ ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಸಮಾವೇಶದ ಹಿನ್ನೆಲೆಯಲ್ಲಿ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಮಂಗಳವಾರ ಆಗಮಿಸಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇತಿಹಾಸ ಸೃಷ್ಟಿಸುವ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನತೆಗೆ ಸಮರ್ಪಣೆ ಮಾಡಲಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಬಡವರಿಗೆ ಹಲವು ಜನಪರ ಯೋಜನೆಗಳನ್ನು ಸರ್ಕಾರ ನೀಡಿದ್ದು ಅದನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ದೃಷ್ಟಿಯಿಂದ ಹಾಗೂ ಈ ಸೌಲಭ್ಯಗಳಿಂದ ವಂಚಿತರಾದವರಿಗೆ ಸೌಲಭ್ಯ ಪಡೆಯುವಂತೆ ಅರಿವು ಮೂಡಿಸುವ ಉದ್ದೇಶದಿಂದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ 10 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು. ಸಮಾವೇಶದ ಹಿನ್ನೆಲೆಯಲ್ಲಿ ಕ್ರೀಡಾಂಗಣದಲ್ಲಿ ಶಾಮಿಯಾನ, ಆಸನ ಮತ್ತು ಊಟದ ವ್ಯವಸ್ಥೆ ಸೇರಿದಂತೆ…

Read More

ಕೋಲಾರ:- ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಅನುಧಾನಕ್ಕೆ ಸಂಬಂದಿಸಿದಂತೆ ಕಾಂಗ್ರೇಸ್ ಪಕ್ಷದಿಂದ ರಾಜ್ಯದ ಎಲ್ಲಾ ಶಾಸಕರು ಸಂಸದರು ಸೇರಿ ದೆಹಲಿಯಲ್ಲಿ ಧರಣಿ ಸತ್ಯಾಗ್ರಹ‌ ಮಾಡಲಾಗುವುದು ಎಂದು ಕೋಲಾರ‌ ಶಾಸಕರಾದ ಡಾ ಜಿ‌ ಕೊತ್ತೂರು ಮಂಜುನಾಥ್ ಅವ್ರು‌ ಹೇಳಿದ್ರು. ಇಂದು ನಗರದ. ತಾಲೂಕು ಪಂಚಾಯಿತಿ ಸಭಾಂಗಣದ ಕೆಡಿಪಿ ಸಭೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರಾರೊಂದಿಗೆ ಮಾತನಾಡಿದ್ರು, ದೇಶದ ಪ್ರಧಾನ ಮಂತ್ರಿಗಳಿಗೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ಮಕ್ಕಳು ಇದ್ದಂತೆ ಎಲ್ಲರನ್ನೂ ಒಂದೇ ತರ ನೋಡಬೇಕು ಸರಿಯಾಗಿ ಪಾಲು ನೀಡಬೇಕು ಅನ್ನೋ ನಿಯಮವೇ ಇದೆ ದೇಶದಲ್ಲಿ ಅತಿ ಹೆಚ್ಚಿನ ತೆರಿಗೆ ಪಾವತಿಸುವಲ್ಲಿ ನಮ್ಮ ರಾಜ್ಯ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ನಮಗೆ ಹೆಚ್ಚಿನ ಅನುದಾನ ಕೊಡಿ ಅಂತ ಕೇಳುತ್ತಿಲ್ಲ, ನಮ್ಮ ರಾಜ್ಯಕ್ಕೆ ಬರಬೇಕಾಗಿರುವ ಅನುದಾನವನ್ನು ಮಾತ್ರ ನಾವು ಕೇಳುತ್ತಿದ್ದೇವೆ, ಆದರೆ ಪ್ರಧಾನ ಮಂತ್ರಿಗಳು ಎಲ್ಲರಿಗೂ ಒಂದೇ ರೀತಿ ನೀಡದೇ ಒಂದೊಂದು ರಾಜ್ಯಕ್ಕೆ ಒಂಧೊಂದು ರೀತಿಯಲ್ಲಿ ತೆರೆಗಿಯನ್ನು ನೀಡುತ್ತಿದ್ದಾರೆ ರಾಜ್ಯದಿಂದ ಕೇಂದ್ರಕ್ಕೆ ಹೋಗುವ ತೆರಿಗೆಯಲ್ಲಿ ನಮ್ಮ ರಾಜ್ಯಕ್ಕೆ ನೀಡಬೇಕಾದ ಪಾಲನ್ನು…

Read More

ಕೋಲಾರ:- ಅಜ್ಜಪ್ಪನಹಳ್ಳಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಸೇರಿದ ಸ್ಥಳ ಉಳಿಸುವಂತೆ ಹಾಗೂ ಇ ಸ್ವತ್ತು ಮಾಡಿಕೊಡುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಮುಂದೆ ಪ್ರತಿಭಟನೆ. ಕೋಲಾರ ತಾಲೂಕಿನ ಹುತ್ತೂರು ಹೋಬಳಿ,ವಡಗೂರು ಗ್ರಾಮ ಪಂಚಾಯತಿಗೆ ಸೇರಿದ ಅಜ್ಜಪ್ಪನಹಳ್ಳಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಸೇರಿದ ಸ್ಥಳ ಉಳಿಸುವಂತೆ ಹಾಗೂ ಇ ಸ್ವತ್ತು ಮಾಡಿಕೊಡುವಂತೆ ಕರ್ನಾಟಕ ದಲಿತ ರಕ್ಷಣಾ ರಾಜ್ಯ ಸಮಿತಿ ಹಾಗೂ ಕಾಂಗ್ರೆಸ್ ವೈದ್ಯಕೀಯ ಘಟಕದ ನೇತೃತ್ವದಲ್ಲಿ ಅಜ್ಜಪ್ಪನ ಹಳ್ಳಿ ಗ್ರಾಮಸ್ಥರು ಜಿಲ್ಲಾ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಕರ್ನಾಟಕ ದಲಿತ ರಕ್ಷಣಾ ಸಮಿತಿಯ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಎಂ. ಎಸ್ .ನಾರಾಯಣಸ್ವಾಮಿ ಮಾತನಾಡಿ ಅಜ್ಜಪ್ಪನ ಹಳ್ಳಿ ಗ್ರಾಮದಲ್ಲಿ ಹಾಲಿ ಜಾಗದಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯ ಇದ್ದು,2015 ನೇ ಸಾಲಿನಲ್ಲಿ ಪಂಚಾಯಿತಿಯಲ್ಲಿ ಖಾತೆ ನಂಬರ್ 142 ರಂತೆ 35* 33* ಅಡಿಗಳ ಜಾಗ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಸೇರಿದ್ದಾಗಿರುತ್ತದೆ. ದೇವಸ್ಥಾನದ ಪಕ್ಕದಲ್ಲಿ ಅದೇ ಗ್ರಾಮದ ಚಿಕ್ಕ…

Read More

ಗೋಕಾಕ: ಕುಡಿಯುವ ನೀರಿನ ಆಹಾಕಾರ ತಪ್ಪಿಸಲು ಸ್ಥಳೀಯ ಪಿಡಿಓ, ವಿಎ ಮತ್ತು ಆರ್‍ಡಿಪಿಆರ್ ಇಂಜನೀಯರ್‍ಗಳು ಸಮನ್ವತೆಯಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಅಗತ್ಯವಿರುವ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಕೊಡುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರದಂದು ನಗರದ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಟಾಸ್ಕ್‍ಫೋರ್ಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದೇ ತಿಂಗಳಿನಿಂದ ಮೇ-ತಿಂಗಳಿನವರೆಗೆ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಲು ಈಗಿನಿಂದಲೇ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಅರಭಾವಿ ಮತಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಇಲ್ಲಿಯತನಕ ಉದ್ಭವಿಸಿಲ್ಲ. ಕೆಲವೊಂದು ಗ್ರಾಮಗಳಲ್ಲಿ ಮಾತ್ರ ನೀರಿನ ಸಮಸ್ಯೆಗಳು ಇರುವುದು ಕಂಡು ಬಂದಿದೆ. ಕೂಡಲೇ ಅಧಿಕಾರಿಗಳು ಜಾಗೃತರಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಬೇಕು. ಕೆಲವೊಂದು ಗ್ರಾಮಗಳಲ್ಲಿ ಉದ್ಭವಿಸುತ್ತಿರುವ ನೀರಿನ ಸಮಸ್ಯೆಯನ್ನು ಸ್ಥಳೀಯ ಮಟ್ಟದ ಅಧಿಕಾರಿಗಳು ಪರಿಹರಿಸಬೇಕು. ಖಾಸಗಿ ಬೋರವೆಲ್‍ಗಳನ್ನು ಗುರುತಿಸಿ ಸಾರ್ವಜನಿಕರಿಗೆ…

Read More

ಬೆಂಗಳೂರು:- ಐಷಾರಾಮಿ ಕಾರ್ ಹಿಂದೆ ಹೋಗುವ ಮುನ್ನ ಎಚ್ಚರ. ಕಾರ್ ಚೆನ್ನಾಗಿದೆ ಅಂತ ಚೇಸ್ ಮಾಡಿಕೊಂಡು ಹೋದ್ರೆ ಬೀಳೋದು ಗ್ಯಾರಂಟಿ. ಇಂದು ಬೆಳಗ್ಗೆ ವಿಠಲ್ ಮಲ್ಯ ರಸ್ತೆಯಲ್ಲಿ ಸೂಪರ್ ಕಾರ್ ಹೋಗುತ್ತಿತ್ತು. ಕಾರ್ ವಿಡಿಯೋ ಮಾಡ್ಕಂಡ್ ಹಿಂದೆ ಬೈಕ್ ಸವಾರರು ಹೋಗ್ತಿದ್ದರು. ಕಾರ್ ಹತ್ತಿರ ಹೋಗಿ ಸವಾರ ವಿಡಿಯೋ ರೆಕಾರ್ಡ್ ಮಾಡ್ತಿದ್ದ. ಇದೇ ಸಮಯದಲ್ಲಿ ಸೈಡಿಗೆ ಚಾಲಕ ಕಾರ್ ಎಳೆದಿದ್ದಾನೆ. https://x.com/3rdEyeDude/status/1754722740018545023?t=gyGW45Wx4FumdIBN5IIMVQ&s=08 ಈ ವೇಳೆ ನಿಯಂತ್ರಣ ತಪ್ಪಿ ನಡು ರಸ್ತೆಯಲ್ಲಿ ಮೂರ್ನಾಲ್ಕು ಮಂದಿ ಬೈಕ್ ಸವಾರರು ಕೆಳಬಿದ್ದಿದ್ದಾರೆ. ಹಿಂಬದಿ ಬರ್ತಿದ್ದ ಬೈಕ್ ಸವಾರನ ಮೊಬೈಲ್ ನಲ್ಲಿ ದೃಶ್ಯ ಸೆರೆಯಾಗಿದೆ.

Read More

ಮಂಡ್ಯ :- ಮದ್ದೂರು ತಾಲೂಕಿನ ಸೋಮನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಸಿ ಲಾವಣ್ಯ, ಉಪಾಧ್ಯಕ್ಷರಾಗಿ ಎಸ್.ಎಲ್.ಶಂಕರ್ ಅವಿರೋಧವಾಗಿ ಆಯ್ಕೆಯಾದರು. ಸಂಘದ ಸಭಾಂಗಣದಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಇಬ್ಬರನ್ನು ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಆಶಾ ಅವರು ಆಯ್ಕೆಯನ್ನು ಘೋಷಣೆ ಮಾಡಿದರು. ಇದೇ ವೇಳೆ ಸೋಮನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಿ.ಟಿ.ಶಂಕರ್ ಅಧ್ಯಕ್ಷೆ ಎಂ.ಲಾವಣ್ಯ ಅವರನ್ನು ಅಭಿನಂದಿಸಿ ಮಾತನಾಡಿ, 1976 ರಿಂದ ಇಲ್ಲಿಯವರೆಗೂ ಸೋಮನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಮಹಿಳೆಯರು ಅಧ್ಯಕ್ಷರಾಗಿರಲಿಲ್ಲ. ಈ ಬಾರಿ ಎಂ.ಸಿ.ಲಾವಣ್ಯ ಅವರನ್ನು ಪ್ರಥಮ ಮಹಿಳಾ ಅಧ್ಯಕ್ಷರನ್ನಾಗಿ ಅವಿರೋಧ ಆಯ್ಕೆಯಾಗಿರುವುದು ಸಂತೋಷದ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರೈತರಿಗೆ ಮತ್ತು ಸಹಕಾರ ಸಂಘದ ಷೇರುದಾರರಿಗೆ ಅನುಕೂಲವಾಗುವಂತೆ ಎಲ್ಲಾ ನಿರ್ದೆಶಕರ ವಿಶ್ವಾಸ ಪಡೆದು ಸಂಘವನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗಲಿ ಎಂದು ಕಿವಿಮಾತು ಹೇಳಿದರು. ಸೋಮನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾದ ಸುರೇಶ್, ಪ್ರಕಾಶ್, ಚಿಕ್ಕಹೈದ ಶೆಟ್ಟಿ,…

Read More

ದೊಡ್ಡಬಳ್ಳಾಪುರ: ಮಹಿಳೆಯ ಗರ್ಭಕೋಶದಲ್ಲಿ ಬೆಳೆದಿದ್ದ ಬೃಹತ್ ಗಾತ್ರದ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆಯುವಲ್ಲಿ ದೊಡ್ಡಬಳ್ಳಾಪುರ ತಾಯಿ-ಮಗು ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿದೆ. ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶಿಲ್ಪಾ (35) ಎಂಬುವರು ಮಂಗಳವಾರ ನಗರದ ಸರ್ಕಾರಿ ಆಸ್ಪತ್ರೆಗೆ ಹೊಟ್ಟೆನೋವು, ಸುಸ್ತು ಎಂದು ದಾಖಲಾಗಿದ್ದರು. ವೈದ್ಯರು ಮಹಿಳೆಯನ್ನು ಪರೀಕ್ಷಿಸಿದಾಗ ಹೊಟ್ಟೆಯಲ್ಲಿ 4 ರಿಂದ 5 ಕೆ.ಜಿಯಷ್ಟು ದೊಡ್ಡ ಗಾತ್ರದ ಗಡ್ಡೆ ಇರುವುದು ಪತ್ತೆಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪ್ರಸೂತಿ ಸ್ತ್ರಿರೋಗ ತಜ್ಞರಾದ ಡಾ.ಅರ್ಚನಾ ಕೆ.ಎಲ್ ನೇತೃತ್ವದ ವೈದ್ಯರ ತಂಡ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದೆ. ವೈದ್ಯೆ ಡಾ.ಅರ್ಚನಾ ಕೆ.ಎಲ್ ಮಾತನಾಡಿ ಸಾಮಾನ್ಯವಾಗಿ ಮಹಿಳೆಯರ ಗರ್ಭಕೋಶ, ಅಂಡಾಶಯಗಳಲ್ಲಿ ಗಡ್ಡೆಯು 100ಕ್ಕೆ 10 ಮಂದಿಯಲ್ಲಿ ಸಣ್ಣಪುಟ್ಟದಾಗಿ ಕಂಡುಬರುತ್ತದೆ. ಆದರೆ, ಅಚ್ಚರಿ ಎಂಬಂತೆ ಈ ಮಹಿಳೆಯ ಹೊಟ್ಟೆಯಲ್ಲಿ 4 ರಿಂದ 5 ಕೆಜಿ ಗಡ್ಡೆ ಪತ್ತೆಯಾಗಿದೆ. ಮಹಿಳೆ ಒಂದೆರಡು ದಿನ ತಡವಾಗಿ ಬಂದಿದ್ದರೆ ಆಕೆಯ ಜೀವಕ್ಕೆ ಹಾನಿಯಾಗುತ್ತಿತ್ತು. ಸದ್ಯ ಗರ್ಭಕೋಶದಲ್ಲಿ ಬೆಳೆದಿದ್ದ ದೊಡ್ಡ ಗಾತ್ರದ ಗಡ್ಡೆ…

Read More