Author: AIN Author

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೇರಿ ಕಾಂಗ್ರೆಸ್‌ ನಾಯಕರಿಗೆ (Congress Leaders) ಹೈಕೋರ್ಟ್‌ 10 ಸಾವಿರ ರೂ. ದಂಡ ವಿಧಿಸಿದೆ. 2022ರ ಏಪ್ರಿಲ್ 14ರಂದು ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ಪ್ರತಿಭಟನೆ (Protest) ನಡೆಸಿತ್ತು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.‌ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ನಾಯಕರು ರೇಸ್‌ಕೋರ್ಸ್‌ ರಸ್ತೆಯಲ್ಲಿ ಪ್ರತಿಭಟಿಸಿದ್ದರು ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಸಿದ್ದರಾಮಯ್ಯ, ಸುರ್ಜೆವಾಲಾ ಸೇರಿದಂತೆ ಕಾಂಗ್ರೆಸ್‌ ನಾಯಕರಿಗೆ ದಂಡ ವಿಧಿಸಿದೆ. ಸಿದ್ದರಾಮಯ್ಯನವರಿಗೆ ಮಾರ್ಚ್‌ 6 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ. ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ ನಡೆಸುವಂತಿಲ್ಲ. ಪೊಲೀಸರಿಂದ ಅನುಮತಿ ಪಡೆದವರಿಗೆ ಮಾತ್ರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಲು ಅವಕಾಶ ನೀಡಲಾಗುತ್ತದೆ. ಬೇರೆ ಕಡೆ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ಕೇಸ್‌ ಹಾಕಲಾಗುತ್ತದೆ.

Read More

ಬೆಂಗಳೂರು: ಭಾರತ ಹಾಕಿ (Team India Hockey) ತಂಡದ ಡಿಫೆಂಡರ್ ಆಟಗಾರ ವರುಣ್‌ ಕುಮಾರ್‌ (Varun Kumar) ಮದುವೆಯಾಗೋದಾಗಿ ನಂಬಿಸಿ ಸ್ಟಾರ್ ಆಟಗಾರ್ತಿಗೆ ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ಪ್ರತಿಷ್ಠಿತ ಕ್ರೀಡೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಯುವತಿಯ ಮೇಲೆ ಭಾರತೀಯ ಹಾಕಿ ತಂಡದ ಡಿಫೆಂಡರ್ ವರುಣ್ ಕುಮಾರ್ ಅತ್ಯಾಚಾರ ನಡೆಸಿದ್ದಾರೆ ಎಂದು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ (Jnanabharathi Police Station) ದೂರು ನೀಡಿದ್ದು ಎಫ್‌ಐಆರ್‌ ದಾಖಲಾಗಿದೆ. ಜ್ಙಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟ್ರೈನಿಂಗ್ ಪಡೆಯುವಾಗ ವರುಣ್ ಕುಮಾರ್‌ಗೆ ಇನ್‌ಸ್ಟಾ ಮೂಲಕ ಯುವತಿಯ ಪರಿಚಯವಾಗಿತ್ತು. ಯುವತಿ 17 ವರ್ಷದವಳಾಗಿದ್ದಾಗಲೇ ಪ್ರೀತಿ (Love) ಮಾಡುವಂತೆ ಹಿಂದೆ ಬಿದ್ದಿದ್ದ ವರುಣ್‌ ಕುಮಾರ್‌ ಮದುವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ. 2019 ರಿಂದ ಯುವತಿ ಜೊತೆಗೆ ಸಂಪರ್ಕದಲ್ಲಿದ್ದ ವರುಣ್ ಕುಮಾರ್ ಐದು ವರ್ಷಗಳಿಂದ ಹಲವಾರು ಬಾರಿ ಅತ್ಯಾಚಾರ ನಡೆಸಿದ್ದು, ಈಗ ಮದುವೆಯಾಗದೇ ವಂಚಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಮೂಲತಃ ಹಿಮಾಚಲ ಪ್ರದೇಶದವರಾಗಿರುವ ಕುಮಾರ್ ಹಾಕಿಗಾಗಿಯೇ ಪಂಜಾಬ್ ಗೆ…

Read More

ಧಾರವಾಡ: ಭಾರತೀಯ ಜನತಾ ಪಕ್ಷದವರು ಕೇವಲ ಟಿವಿಯಲ್ಲಿ ದೇವರನ್ನು ತೋರಿಸುತ್ತಾರೆ. ನಾವು ದೇವಾಲಯಗಳಿಗೆ ಹೋಗಲು ಉಚಿತ ಪ್ರಯಾಣದ ಅವಕಾಶ ಕಲ್ಪಿಸಿದ್ದೇವೆ ಎಂದು ಸಚಿವ ಸಂತೋಷ್ ಲಾಡ್ ಬಿಜೆಪಿಗೆ ಕುಟುಕಿದ್ದಾರೆ. ನಗರದ ಕೆಸಿಡಿ ಮೈದಾನದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ನಮ್ಮ ಸಿದ್ದರಾಮಯ್ಯ ಪರ ನೀವು ಇರಬೇಕೊ ಬೇಡವೋ? ಅದಕ್ಕೆ ತಾವು ಬೆಂಬಲ ಕೊಡಬೇಕು ಎಂದು ಫಲಾನುಭವಿಗಳಲ್ಲಿ ಮನವಿ ಮಾಡಿದರು. https://ainlivenews.com/do-you-know-the-benefits-of-eating-white-onion/ ಬಿಜೆಪಿಯವರು ಕೇವಲ ಟಿವಿಯಲ್ಲಿ ದೇವರನ್ನು ತೋರಿಸುತ್ತಾರೆ. ನಮ್ಮ ಸರ್ಕಾರ ದೇವಸ್ಥಾನಗಳಿಗೆ ಉಚಿತವಾಗಿ ಹೋಗಲು ಅವಕಾಶ ಮಾಡಿಕೊಟ್ಟಿದೆ. ನಿಮಗೆ ಐದು ಕೆಜಿ ಅಕ್ಕಿ ಸಿಗುತ್ತಿದೆ, ಅಕ್ಕಿ ಬದಲಿಗೆ ದುಡ್ಡು ಬರುತ್ತಿದೆ. ಯಾರೂ ಹಸಿವಿನಿಂದ ಬಳಲಬಾರದು ಎಂದು ಕಾರ್ಯಕ್ರಮ ತಂದಿದ್ದೇವೆ. ಇದು ಬಿಜೆಪಿ ಗ್ಯಾರಂಟಿ ಅಲ್ಲ, ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ. 9 ವರ್ಷಗಳಿಂದ ಅವರು (ಬಿಜೆಪಿ) ಪ್ರಚಾರ ಮಾಡಲಿಲ್ಲ. ನಮ್ಮ ಗ್ಯಾರಂಟಿಗಳು ಬರುತಿದ್ದಂತೆ ಆ ಹೆಸರು ಕಾಪಿ ಮಾಡಿ ಮೋದಿ ಗ್ಯಾರಂಟಿ ಎನ್ನುತಿದ್ದಾರೆ. ಇತಿಹಾಸವನ್ನು ತಿರುಚಿ ಹೇಳುವ…

Read More

ಬೆಂಗಳೂರು: ನಾಳೆ ದೆಹಲಿಯ ಜಂತರ್‌ ಮಂತರ್‌ʼನಲ್ಲಿ ಕಾಂಗ್ರೆಸ್ ಪ್ರತಿಭಟನೆ ವಿಚಾರ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು,  ಕೇಂದ್ರ ಸರಕಾರ ಯಾವುದೇ ಬಾಕಿ ಉಳಿಸಿಕೊಂಡಿಲ್ಲ ಅಂತ ನಿರ್ಮಲಾ ಸೀತಾರಾಮನ್ ಹೇಳ್ತಾರೆ ನಮಗೆ ಹಣಕಾಸು ಆಯೋಗ ಕೊಡಬಾರದು ಅಂತ ತೀರ್ಮಾನ ಮಾಡಿಲ್ಲ ಬೇರೆಯವರಿಗೆ ಏನು ಬೇಕಾದ್ರು ಹೇಳಬಹುದು. ಆದರೆ ಕೇಂದ್ರ ಸಚಿವರು ವಸ್ತುಸ್ಥಿತಿಯಲ್ಲಿ ಮಾತಾಡಬೇಕು. ಸತ್ಯಕ್ಕೆ ದೂರವಾದ ವಿಚಾರ ನಾವು ಹೇಳೋಕೆ ಆಗೊಲ್ಲ ಒಂದು ಸರ್ಕಾರವಾಗಿ ನಾವು ಸುಳ್ಳು ಹೇಳೋಕೆ ಆಗೊಲ್ಲ ಎಂದರು. ಹಾಗೆ ನಮಗೆ ಹಣ ಬಂದಿಲ್ಲ, ಅದನ್ನ ಹೇಳ್ತಿದ್ದೇವೆ ಬರ ಪರಿಹಾರ ಅಂತ 18 ಸಾವಿರ ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿದೆ ನೀವು ಕೊಟ್ಟಿದ್ದೀರಾ ಅದನ್ನ ಹೇಳಿ ನಮಗೆ GST ಪಾಲು ಎಷ್ಟು ಬರಬೇಕು ನೀವೇ ಹೇಳಿಬಿಡಿ ನಿರ್ಮಲಾ ಸೀತಾರಾಮನ್ ಬಗ್ಗೆ ಗೌರವ ಇದೆ, ಆದರೆ ಅವರು ಹೇಳುವ ಮಾತು ಸಮಂಜಸ ಅಲ್ಲ GST ನಾವು ಎಷ್ಟು ಕೊಟ್ಟಿದ್ದೇವೆ. ನಮ್ಮ ಶೇರ್ ಎಷ್ಟು,ಎಷ್ಟು…

Read More

ನವದೆಹಲಿ: ಬಿಜೆಪಿ (BJP) ನೇತೃತ್ವದ ಎನ್‌ಡಿಎ ಸರ್ಕಾರದ 3ನೇ ಅವಧಿಯಲ್ಲಿ ದೇಶವು ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಭರವಸೆ ವ್ಯಕ್ತಪಡಿಸಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. 2014-15ರ ಮಧ್ಯಂತರ ಬಜೆಟ್ ಮಂಡಿಸಿದ ಅಂದಿನ ಹಣಕಾಸು ಸಚಿವ ಪಿ.ಚಿದಂಬರಂ ಅವರು ಹಳೆಯ ಪಕ್ಷ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನವರು 11ನೇ ಸ್ಥಾನಕ್ಕೆ ಹೆಮ್ಮ ಪಡುತ್ತಿದ್ದಾರೆ. ನಾವು ಐದನೇ ಸ್ಥಾನಕ್ಕೆ ಬಂದಿದ್ದೇವೆ. ನೀವು ಹನ್ನೊಂದು ಸ್ಥಾನಕ್ಕೆ ಬಂದಾಗ ಖುಷಿಪಡುತ್ತಿದ್ರಿ. ಈಗ ಐದನೇ ಸ್ಥಾನಕ್ಕೆ ಬಂದಾಗಲೂ ಖುಷಿಪಡಬೇಕು ಎಂದು ಕಾಂಗ್ರೆಸ್‌ಗೆ ಟಾಂಗ್‌ ಕೊಟ್ಟಿದ್ದಾರೆ.  ಇಂದು ಭಾರತವು 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಆದರೆ ಅವರು (ಕಾಂಗ್ರೆಸ್) ಮೌನವಾಗಿದ್ದಾರೆ. 30 ವರ್ಷಗಳಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಲಿದೆ ಎಂಬ ದೃಷ್ಟಿಯನ್ನು ಅವರು ಕಂಡಿದ್ದಾರೆ. ರಾಷ್ಟ್ರವನ್ನು ಇಷ್ಟು ದಿನ ಕಾಯಲು ನಾವು ಬಿಡುವುದಿಲ್ಲ. ನಮ್ಮ ಮೂರನೇ ಅವಧಿಯಲ್ಲಿ ಭಾರತ ಮೂರನೇ ಅತಿದೊಡ್ಡ…

Read More

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಸರಣಿ ಬಾಂಬ್‌ ಸ್ಫೋಟ (Serial Bomb Blast) ಮಾಡಲು ಸಂಚು ರೂಪಿಸಿದ್ದ 6 ಜನ ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ (NIA) ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಕಳೆದ ಜುಲೈನಲ್ಲಿ ಆರ್‌ಟಿ ನಗರದ ಮನೆ ಮೇಲೆ ದಾಳಿ ಮಾಡಿದ ಬೆಂಗಳೂರು ಸಿಸಿಬಿ ಪೊಲೀಸರು (CCB Police) ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಜೀವಂತ ಗ್ರೆನೇಡ್‌ ಪತ್ತೆಯಾಗಿತ್ತು. ನಂತರ ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿತ್ತು. ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದರು ಎಂಬ ವಿಚಾರ ತನಿಖೆಯಿಂದ ಬಯಲಾಗಿತ್ತು. ಈ ಎಲ್ಲಾ ಅಂಶಗಳನ್ನು ಒಳಗೊಂಡು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಪೌಡರ್ ರೂಪದ ಕೆಮಿಕಲ್ ಬಳಸಿ ಪೆಟ್ಟಿಗೆಯೊಂದರಲ್ಲಿ ಆರೋಪಿಗಳು ಅಡಗಿಸಿಟ್ಟಿದ್ದರು. ಈ ಬಗ್ಗೆ ಮಾಹಿತಿ ಪಡೆದ ನಂತರ ತನಿಖಾಧಿಕಾರಿಗಳು ಬಾಂಬ್ ನಿಷ್ಟ್ರೀಯ…

Read More

ಬೆಂಗಳೂರು: ನಗರದ ಫ್ರೀಡಂ ಪಾರ್ಕ್‌ ನಲ್ಲಿ   ಹಾಲಿನ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಯುತ್ತಿದ್ದು  ಹಸುಗಳನ್ನು ಮುಂದಿಟ್ಟುಕೊಂಡು ಬಿಜೆಪಿಯಿಂದ ಪ್ರತಿಭಟನೆ ನಗರದ ಫ್ರೀಡಂ ಪಾರ್ಕ್‌ʼನಲ್ಲಿ  ಹಸುಗಳ ಕೊರಳಿಗೆ ಧಿಕ್ಕಾರ ಅಂತ ಬರೆದಿರುವ ಪ್ಲೆ ಕಾರ್ಡ್‌ಗಳನ್ನು ಹಾಕಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ  ಬಿಜೆಪಿ ಮುಖಂಡರಾದ ಎಸ್ ಹರೀಶ್, ಸಪ್ತಗಿರಿಗೌಡ, ತಮ್ಮೇಶ್ ಗೌಡ ಸೇರಿ ಕಾರ್ಯಕರ್ತರು ಭಾಗಿಯಾಗಿದ್ದು  716 ಕೋಟಿ ರೂ ಹಾಲಿನ ಬಾಕಿ ಪ್ರೋತ್ಸಾಹ ಹಣ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ. ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರಿಂದ ಹಸುಗಳೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಯತ್ನಹಸುಗಳನ್ನ ಬಿಟ್ಟು ಕಾರ್ಯಕರ್ತರನ್ನ ಬಂಧಿಸಿದ ಪೊಲೀಸರು

Read More

ಬೆಂಗಳೂರು:  ನಾಳೆ ಕಾಂಗ್ರೆಸ್ ನಿಂದ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಹಿನ್ನೆಲೆ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ರಾಜ್ಯದ ಎಲ್ಲಾ ಸಂಸದರು, ರಾಜ್ಯಸಭಾ ಸದಸ್ಯರು, ರಾಜ್ಯದ ಕೇಂದ್ರ ಸಚಿವರಿಗೆ ಖುದ್ದಾಗಿ ಪತ್ರ ಬರೆದ‌ ಸಿಎಂ ಸಿದ್ದರಾಮಯ್ಯ ಹೋರಾಟಕ್ಕೆ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಕನ್ನಡಿಗರ ಹಕ್ಕು ಮತ್ತು ಸ್ವಾಭಿಮಾನಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ ಮತ್ತು ಕನ್ನಡಿಗರ ತೆರಿಗೆ ಹಣಕ್ಕೆ ಆಗುತ್ತಿರುವ ವಂಚನೆಯ ವಿರುದ್ಧ ಹೋರಾಟಕ್ಕೆ ಎಲ್ಲರು ಒಂದಾಗೋಣ‌ ಅಂತ ಕರೆ ಕೊಟ್ಟ‌ ಸಿಎಂ ಸಿದ್ದರಾಮಯ್ಯ

Read More

ನವದೆಹಲಿ: ಅಂಧ ಭಕ್ತರು ಹೆಚ್ಚಿರುವ ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡಿ ಮತಬ್ಯಾಂಕ್ ಗಟ್ಟಿ ಮಾಡಿಕೊಳ್ಳುವ ಪ್ರಯತ್ನ ಬಿಜೆಪಿ (BJP) ಮಾಡುತ್ತಿದೆ. ದಕ್ಷಿಣ ಭಾರತದವರು ಅಂಧ ಭಕ್ತರು ಅಲ್ಲ ಎನ್ನುವ ಕಾರಣಕ್ಕೆ ಮಲತಾಯಿ ಧೋರಣೆ ಮಾಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (BK Hariprasad) ಆರೋಪಿಸಿದ್ದಾರೆ. ದೆಹಲಿಯಲ್ಲಿ (New Delhi) ನಡೆಯಲಿರುವ ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು, https://ainlivenews.com/do-you-know-the-benefits-of-eating-white-onion/ ಡಿ.ಕೆ ಸುರೇಶ್ (DK Suresh) ಹೇಳಿಕೆ ಬಹಳಷ್ಟು ಚರ್ಚೆಯಾಗುತ್ತಿದೆ. ತೆರಿಗೆ ರೂಪದಲ್ಲಿ ಬರುವ ಹಣ ಹೇಗೆ ವಿಕೇಂದ್ರಿಕರಣಗೊಳ್ಳಬೇಕು ಎಂದು ಫೈನಾನ್ಸ್ ಕಮಿಷನ್ ನಿರ್ಧರಿಸುತ್ತದೆ. ಈಶಾನ್ಯ ರಾಜ್ಯಗಳಿಗೆ ಅನುದಾನದ ಕೊರತೆ ಇದೆ. ಅವರಿಗೆ ಆರ್ಥಿಕ ಸಹಾಯ ಮಾಡುವುದು ನ್ಯಾಯ ಆದರೆ ಉತ್ತರ ಭಾರತದ ಕೆಲವು ರಾಜ್ಯಗಳು ರೋಗಗ್ರಸ್ಥ ರಾಜ್ಯಗಳು ಉತ್ಪಾದನೆ, ಉದ್ಯೋಗ ಸೃಷ್ಟಿ ಮಾಡಿದ್ದರೆ ಈ ರೀತಿಯ ಸಮಸ್ಯೆ ಬರುತ್ತಿರಲಿಲ್ಲ. ಈ ವಿಚಾರದ ಬಗ್ಗೆ ಸುರೇಶ್ ಮಾತನಾಡಿದ್ದಾರೆ. ಅದನ್ನು ತಿರುಚುವ ಪ್ರಯತ್ನ ನಡೆಯುತ್ತಿದೆ ಎಂದು ಕಿಡಿಕಾರಿದರು.   

Read More

ಬೆಂಗಳೂರು: ಅಕ್ಕಿ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಭಾರತ್ ಬ್ರ್ಯಾಂಡ್‌‌ ಅಕ್ಕಿ ಇಂದಿನಿಂದ ಗ್ರಾಹಕರ ಕೈಗೆ ಸಿಗಲಿದೆ. ಹೌದು,ಇಂದು ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಾಹನಗಳಿಗೆ ಚಾಲನೆ ಸಿಗಲಿದೆ. ಈ ಮೂಲಕ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಲಾಗುತ್ತಿದೆ. ಕೆಜಿ ಭಾರತ್ ಬ್ರ್ಯಾಂಡ್​ ಅಕ್ಕಿಗೆ 29 ರೂ.ದರ ನಿಗದಿ ಮಾಡಲಾಗಿದೆ. ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿಗೆ ಅವಕಾಶ ರಿಲಯನ್ಸ್​​, ಫ್ಲಿಪ್​​ಕಾರ್ಟ್​, ಬಿಗ್​ ಬಾಸ್ಕೆಟ್​ ಅಷ್ಟೇ ಅಲ್ಲದೆ ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದು. ಇನ್ನೊಂದು ವಾರದಲ್ಲಿ ಇತರೆ ಸ್ಟೋರ್​ಗಳಲ್ಲೂ ಭಾರತ್ ಅಕ್ಕಿ ಲಭ್ಯವಾಗಲಿದೆ. ಎನ್‌ಸಿಸಿಎಫ್‌ನ ಮುಖ್ಯ ಗೋಡಾನ್ ಯಶವಂತಪುರದಲ್ಲಿದ್ದು ಬೆಂಗಳೂರಿನ 50 ಏರಿಯಾಗಳಿಗೆ ಮೊಬೈಲ್ ವ್ಯಾನ್ ಮೂಲಕ ಮನೆ ಮನೆಗೆ ಅಕ್ಕಿ ತಲುಪಿಸಲು ಸಿದ್ಧತೆ ನಡೆದಿದೆ. ದಿನಸಿ, ಧಾನ್ಯ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದೆ. ಇದರಿಂದ ಜನ ಕಂಗೆಟ್ಟಿದ್ದಾರೆ. ಈ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ನಾನಾ ಪ್ರಯತ್ನಗಳನ್ನು…

Read More