Author: AIN Author

ನವದೆಹಲಿ: ಪ್ರತಿಭಟನೆ, ಹೆದ್ದಾರಿ ತಡೆ, ಬಂದ್‌ ಇನ್ನಿತರ ಸಂದರ್ಭಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ್ರೆ, ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕಾನೂನು ತಿದ್ದುಪಡಿ ಮಾಡಬೇಕು. ಪ್ರತಿಭಟನೆ ವೇಳೆ ಹಾನಿಯಾದ ಆಸ್ತಿಯ ಮೌಲ್ಯವನ್ನು ಹಾನಿಕೋರರಿಂದಲೇ ಸಂಪೂರ್ಣವಾಗಿ ವಸೂಲಿ ಮಾಡಬೇಕು. ನಂತರ ಮಾತ್ರವೇ ಜಾಮೀನು ನೀಡಬೇಕು ಎಂದು ಕಾನೂನು ಆಯೋಗವು ಕೇಂದ್ರ ಸರ್ಕಾರಕ್ಕೆ  ಶಿಫಾರಸು ಮಾಡಿದೆ. ಪ್ರತಿಭಟನೆಯಂತಹ ಸಂದರ್ಭಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾದ  ಸಂದರ್ಭದಲ್ಲಿ, ಯಾರು ಪ್ರತಿಭಟನೆಯ ನೇತೃತ್ವ ವಹಿಸಿರುತ್ತಾರೋ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು. ಅವರಿಂದಲೇ ಹಾನಿಗೊಳಗಾದ ಆಸ್ತಿ ಮೌಲ್ಯವನ್ನು ವಸೂಲಿ ಮಾಡಬೇಕು. ನಂತರ ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಇಂತಹ ಪ್ರಕರಣಗಳಲ್ಲಿ ಜಾಮೀನು ನೀಡುವುದಕ್ಕೂ ಮುನ್ನ ಆಸ್ತಿಯ ಮೌಲ್ಯವನ್ನು ವಸೂಲಿ ಮಾಡಬೇಕು ಎಂದು ಸಲಹೆ ನೀಡಿದೆ.  ಸಾಮಾನ್ಯವಾಗಿ ಯಾವುದೇ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದಾಗ ಪ್ರತಿಭಟನಾಕಾರರಿಗೆ ಅಲ್ಪ ಪ್ರಮಾಣದ ದಂಡ ವಿಧಿಸಲಾಗುತ್ತದೆ. ಆದರೆ, ಕಾನೂನು ಆಯೋಗವು ಜಾಮೀನು ನೀಡುವಾಗಲೇ ದಂಡದ ಮೊತ್ತ ವಸೂಲಿ ಮಾಡಬೇಕು ಎಂದು ಹೇಳಿದೆ. ಅದೂ ಕೂಡಾ…

Read More

ಬೆಂಗಳೂರು: SSLC ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿಯಲ್ಲಿ ಮುಸ್ಲಿಂ ತುಷ್ಟೀಕರಣದ ಆರೋಪ ಕೇಳಿಬಂದಿದೆ. ರಾಜ್ಯ ಸರ್ಕಾರದ ನಿರ್ದೇಶನದಂತೆ ಬೆಳಗ್ಗೆ ನಮಾಜ್‌ಗೆ ಅನುಕೂಲವಾಗುವಂತೆ SSLC ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಬದಲಿಸಿದೆ ಎಂದು ಹಿಂದೂ ಮುಖಂಡರು ಹಾಗೂ ವಿಪಕ್ಷ ಬಿಜೆಪಿ ಪಕ್ಷ ಆರೋಪ ಮಾಡಿದೆ. ಈ ಬಗ್ಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆ ಹುಟ್ಟು ಹಾಕಿದೆ. ಫೆಬ್ರವರಿ 26ರಿಂದ ಮಾರ್ಚ್ 3ರವರೆಗೆ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದೆ. ಅದರಲ್ಲಿ ಎಲ್ಲಾ ವಿಷಯದ ಪರೀಕ್ಷೆ ಬೆಳಗ್ಗೆ 10.15ಕ್ಕೆ ನಡೆದರೆ ಶುಕ್ರವಾರ ನಡೆಯಲಿರುವ ವಿಜ್ಞಾನ ಪರೀಕ್ಷೆ ಮಾತ್ರ ಮಧ್ಯಾಹ್ನ 2 ಗಂಟೆಗೆ ನಿಗದಿಮಾಡಿದೆ. ಉಳಿದ ಎಲ್ಲ ಪರೀಕ್ಷೆಗಳು ಬೆಳಗ್ಗೆ ಇದ್ದರೆ ಶುಕ್ರವಾರದ ಪರೀಕ್ಷೆ ಮಧ್ಯಾಹ್ನವಿದೆ. ಈ ಬದಲಾವಣೆಯೇ ಇದೀಗ ವಿವಾದಕ್ಕೆ ಕಾರಣವಾಗಿದೆ.. ಬೆಳಗ್ಗ ನಮಾಜ್‌ಗೆ ಅನುಕೂಲ ಮಾಡಿಕೊಡಲು ಉದ್ದೇಶದಿಂದಲೇ ರಾಜ್ಯಸರ್ಕಾರದ ನಿರ್ದೇಶನದಂತೆ ಪರೀಕ್ಷೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಸಿದ್ಧಪಡಿಸಿದೆ ಎಂದು ಹಿಂದೂ ಮುಖಂಡರು ಆರೋಪಿಸಿದ್ದಾರೆ. ಇನ್ನೂ ಮಾರ್ಚ್ 1ರಂದು ಪಿಯುಸಿ ಮುಖ್ಯ ಪರೀಕ್ಷೆ…

Read More

ಬೆಂಗಳೂರು:  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನನ್ನ ಮಗ ಮೃಣಾಲ್ ಹೆಬ್ಬಾಳ್ಕರ್‌ ಸ್ಪರ್ಧೆ ಮಾಡಬೇಕೆಂದು ಬೆಳಗಾವಿ ಜನ ಬಯಸಿದ್ದಾರೆ. ಆದರೆ ಈ ವಿಚಾರದಲ್ಲಿ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದನ್ನು ಪಾಲಿಸುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ನನ್ನ ಪುತ್ರ ಸ್ಪರ್ಧೆ ಮಾಡಬೇಕು ಎನ್ನುವ ಬಯಕೆ ಜನರದ್ದು. ಈ ನಿಟ್ಟಿನಲ್ಲಿ ಆತನ ಹೆಸರು ಹೈಕಮಾಂಡ್‌ಗೆ ಹೋಗಿರುವ ವಿಚಾರ ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ನನ್ನ ಸಹೋದರ ಪರಿಷತ್ತಿನ ಸದಸ್ಯನಾಗುವಾಗಲೂ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನದ ಮೇರೆಗೆ ಒಪ್ಪಿಗೆ ನೀಡಿದ್ದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಮೃಣಾಲ್ ಅಥವಾ ಬೇರೆ ಇನ್ಯಾರಿಗೆ ನೀಡಿದರೂ ಕೆಲಸ ಮಾಡುತ್ತೇನೆ. ಈಗಾಗಲೇ ಟಿಕೆಟ್‌ಗೆ ಸಂಬಂಧಿಸಿ ಸರ್ವೇ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

Read More

ಬೆಂಗಳೂರು: ಲಾಬರಿ ರಾಜ್ಯಾಧ್ಯಕ್ಷನೆಂದ ಡಿಸಿಎಂ ಡಿಕೆಶಿಗೆ ಬಿಜೆಪಿ ರಾಜ್ಯಾಧ್ಯಕ್ಷ  ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,  ಇದಕ್ಕೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡುತ್ತೇವೆ ಲೋಕಸಭಾ ಚುನಾವಣೆಯಲ್ಲಿ ಇದಕ್ಕೆ ರಾಜ್ಯದ ಜನ ಉತ್ತರಿಸ್ತಾರೆ ಎಂದು ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿದ್ದಾರೆ ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಾಕಿ ಉಳಿಸಿದ ಹಣ ಬಾಕಿ ಉಳಿಸಿದ್ದರಿಂದ ಹಾಲು ಉತ್ಪಾದನೆಯೂ ಕಡಿಮೆಯಾಗಿದೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು. BSY ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡ್ತಿದ್ರು ಹೀಗಾಗಿ ಪ್ರತಿನಿತ್ಯ 26 ಲಕ್ಷ ರೈತರಿಂದ 85 ಲಕ್ಷ ಲೀಟ‌ರ್ ಹಾಲು ಸಂಗ್ರಹ ಆದ್ರೆ ಕಾಂಗ್ರೆಸ್ ಸರ್ಕಾರ 716 ಕೋಟಿ ಬಾಕಿ ಹಣ ಉಳಿಸಿಕೊಂಡಿದೆ ಇದರಿಂದ ರಾಜ್ಯದಲ್ಲಿ 10 ಲಕ್ಷ ಲೀಟರ್ ಹಾಲು ಸಂಗ್ರಹ ಕಡಿಮೆಯಾಗಿದೆ ಜನ ಅಷ್ಟೇ ಅಲ್ಲ ಜಾನುವಾರುಗಳೂ ಸರ್ಕಾರಕ್ಕೆ ಶಾಪ ಹಾಕ್ತಿವೆ ರಾಜ್ಯ ಸರ್ಕಾರ ಜಾನುವಾರುಗಳ ಕೋಪಕ್ಕೂ ಬಲಿಯಾಗಿದೆ ಎಂದರು. ರಾಜ್ಯ ಸರ್ಕಾರ ತನ್ನ ಹೊಣೆ ಮರೆತು ಕೇಂದ್ರದ…

Read More

ಬೆಂಗಳೂರು: ಶಕ್ತಿ ಯೋಜನೆಯಡಿ 146 ಕೋಟಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣ ಮಾಡಿದ್ದು, ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸ ಕರ್ನಾಟಕ ಸಾರಿಗೆ ಬಸ್ಸುಗಳ (ಅಶ್ವಮೇಧ ಕ್ಲಾಸಿಕ್ ಪ್ರಯಾಣದ ಮರುಕಲ್ಪನೆ ಪಾಯಿಂಟ್ to ಪಾಯಿಂಟ್ ಎಕ್ಸ್ಪ್ರೆಸ್) ಬಸ್ಸುಗಳನ್ನು ಲೋಕಾರ್ಪಣೆ ಮಾಡಿದ ನಂತರ ಮಾತನಾಡಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಈ ವರ್ಷ ಒಂದು ಸಾವಿರ ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದು ಇಂದು ನೂರು ಬಸ್ಸುಗಳ ಬಿಡುಗಡೆಯಾಗಿದೆ. ರಾಜ್ಯದ ಜನರಿಗೆ 4 ಕಾರ್ಪೋರೇಷನ್‍ಗಳು ಬಸ್ಸುಗಳ ಸೇವೆಯನ್ನು ಒದಗಿಸುತ್ತಿದೆ. ನಾಲ್ಕು ವರ್ಷಗಳಿಂದ ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಿರಲಿಲ್ಲ. ಕೋವಿಡ್ ಸಂದರ್ಭದಲ್ಲಿ ಕೂಡ ಕೆಲವು 3800 ಬಸ್ಸುಗಳನ್ನು ಸ್ಥಗಿತಗೊಳಿಸಲಾಗಿತ್ತು. ನಾವು ಅಧಿಕಾರಕ್ಕೆ ಬಂದ ನಂತರ ಸಂಸ್ಥೆಗೆ 5800 ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದೇವೆ. ಈ ರಾಜ್ಯದ ಜನರಿಗೆ ಸುರಕ್ಷಿತ ಮತ್ತು ಸರಾಗ ಪ್ರಯಾಣ…

Read More

ಬೆಂಗಳೂರು: ರಾಜ್ಯಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಲಾಬಿ ಶುರುವಾಗಿದ್ದು ಮಾಜಿ ಸಚಿವ ವಿ.ಸೋಮಣ್ಣ (v.Somanna)  ವರಿಷ್ಠರ ಭೇಟಿಗೆ ಪ್ರಯತ್ನ ಆರಂಭಿಸಿದ್ದಾರೆ. ಭಾನುವಾರವ ರಾತ್ರಿಯೇ ದೆಹಲಿಗೆ ಆಗಮಿಸಿರುವ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಪ್ರಮುಖ ನಾಯಕರ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ. ರಾಜ್ಯದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೂರು ಸ್ಥಾನ ಕಾಂಗ್ರೆಸ್‌ಗೆ (Congress) ಲಭ್ಯವಾಗಲಿದೆ. ಉಳಿದ ಬಾಕಿ ಒಂದು ಸ್ಥಾನ ಆಯ್ಕೆ ಮಾಡಿಕೊಳ್ಳಲು ಬಿಜೆಪಿಗೆ (BJP) ಅವಕಾಶವಿರುತ್ತದೆ. ಈ ಹಿನ್ನಲೆಯಲ್ಲಿ ದೆಹಲಿಯಲ್ಲಿ ಠಿಕಾಣಿ ಹೂಡಿರುವ ಅವರು ಲೋಕಸಭೆ ಬದಲಿಗೆ ರಾಜ್ಯಸಭೆಗೆ ತಮ್ಮ ಹೆಸರು ಘೋಷಿಸುವಂತೆ ವರಿಷ್ಠರಿಗೆ ಮನವಿ ಮಾಡುತ್ತಿದ್ದಾರೆ. ಕಳೆದ ಬಾರಿ ವರಿಷ್ಠರಿಗೆ ನನ್ನ ಭಾವನೆ ವ್ಯಕ್ತಪಡಿಸಿದ್ದೇನೆ. ಯಾರಿಗೆ ಅವಕಾಶ ಕೊಡುತ್ತಾರೆ ಗೊತ್ತಿಲ್ಲ. ಒಂದು ವೇಳೆ ಕೊಟ್ಟರೆ ಒಳ್ಳೆ ರೀತಿಯಲ್ಲಿ ಕೆಲಸ ಮಾಡುತ್ತೇನೆ. ಕೊಡಲಿಲ್ಲ ಅಂದರೆ ಯಾವುದೇ ಬೇಸರ ಇಲ್ಲ ಎಂದಿದ್ದಾರೆ. ತುಮಕೂರು ಕ್ಷೇತ್ರಕ್ಕೆ ನಾನು ಸ್ಪರ್ಧಿಸಬೇಕು ಎನ್ನುವುದು ಹಾಲಿ ಸಂಸದ ಬಸವರಾಜು ಅವರ…

Read More

‘ಕಾಟೇರ’.. ಸಂಕಷ್ಟದಲ್ಲಿದ್ದ ಕನ್ನಡ ಚಿತ್ರರಂಗವನ್ನು ಅದ್ರಿಂದ ಪಾರು ಮಾಡಿ, ಹೊಸ ಜೋಶ್ ತುಂಬಿದ ಸಿನಿಮಾ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಈ ಚಿತ್ರ 250 ಕೋಟಿ ಕ್ಲಬ್ ಸೇರೋದ್ರ ಜೊತೆಗೆ ಅಕ್ಷರಶಃ ಇಂಡಸ್ಟ್ರಿಯನ್ನ ಜೀವಂತವಾಗಿಸಿದೆ. ಬರೋಬ್ಬರಿ 250 ಸ್ಕ್ರೀನ್ಸ್​​ನಲ್ಲಿ ಯಶಸ್ವಿ 50 ದಿನದತ್ತ ಪಸಂದಾಗಿ ಮುನ್ನುಗ್ಗುತ್ತಿರೋ ಕಾಟೇರನ ಅಬ್ಬರ, ಆರ್ಭಟದ ಕಥೆ ಇಲ್ಲಿದೆ ನೋಡಿ. ಜನ ಥಿಯೇಟರ್​ಗೆ ಬರ್ತಿಲ್ಲ. ಕನ್ನಡ ಸಿನಿಮಾಗಳು ಬ್ಯುಸಿನೆಸ್ ಆಗ್ತಿಲ್ಲ. ಅಯ್ಯೋ ನಿರ್ಮಾಪಕರು ಉಸಿರಾಡೋದು ಹೇಗೆ..? ಹೀಗೆ ಹತ್ತಾರು ಪ್ರಶ್ನೆಗಳಿಗೆ ಉತ್ತರ ಕೊಟ್ಟ ಸಿನಿಮಾ ಕಾಟೇರ. ಹೌದು.. ಬಿಗ್ ಸ್ಟಾರ್ಸ್​ ಬಿಗ್ ಹಿಟ್ಸ್ ಇಲ್ಲದೆ ಸೊರಗಿ ಹೋಗಿದ್ದ ಸ್ಯಾಂಡಲ್​ವುಡ್​ಗೆ ಬೂಸ್ಟರ್​​ ಡೋಸ್​​ನಂತೆ ಹೊಸ ಜೋಶ್ ತುಂಬಿದ ಚಿತ್ರ ನಟ ದರ್ಶನ್ ನಟನೆಯ ಕಾಟೇರ. 2023ರ ವರ್ಷಾಂತ್ಯಕ್ಕೆ ಬಂದ ಕಾಟೇರ, ಅಚ್ಚ ಕನ್ನಡದ ಮಣ್ಣಿನ ಚಿತ್ರವಾಗಿ ನೂತನ ದಾಖಲೆ ಬರೆದಿದೆ. ಕೆಜಿಎಫ್, ಕಾಟೇರ ಸಿನಿಮಾಗಳು ಕೂಡ ಮಾಡಲಾರದ ರೆಕಾರ್ಡ್​ನ ಮಾಡಿರೋ ಕಾಟೇರ, ಫಾಸ್ಟೆಸ್ಟ್ 100 ಕ್ರೋರ್ ಬಾಕ್ಸ್ ಆಫೀಸ್…

Read More

ಮೂಲವ್ಯಾಧಿ ಸಮಸ್ಯೆ ಬಂದ ನಂತರದಲ್ಲಿ ಮನುಷ್ಯನ ಜೀವನ ಒಂದು ರೀತಿಯ ವಿಪರೀತ ಬೇಸರವನ್ನು ಉಂಟುಮಾಡುವ ಜೀವನ ಆಗಿಬಿಡುತ್ತದೆ. ಇತರರ ಮುಂದೆ ಕಿರಿಕಿರಿ ಆಗುವುದಂತೂ ಸತ್ಯ.  ಮೂಲವ್ಯಾಧಿ ಸಮಸ್ಯೆಯಿಂದ ಸಂಪೂರ್ಣವಾಗಿ ಗುಣಮುಖರಾಗಲು ಸಾಧ್ಯವಾಗುವುದಿಲ್ಲ ಎಂಬುದು ಹಲವರ ವಾದ. ಅದೇನೇ ಇರಲಿ. ಚಳಿಗಾಲದಲ್ಲಿ ಈ ಸಮಸ್ಯೆ ಹೆಚ್ಚಾಗದಂತೆ ನೋಡಿಕೊಂಡರೆ ಸಾಕು. ಮೂಲವ್ಯಾಧಿ ಬರಲು ಕಾರಣಗಳೇನು, ಬಂದ ನಂತರದಲ್ಲಿ ಹೇಗಿರಬೇಕು ಮತ್ತು ಬರದಂತೆ ತಡೆಯಲು ಏನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಇಲ್ಲಿ ವೈದ್ಯರ ಮಾತಿನಲ್ಲಿ ತಿಳಿಸಿಕೊಡಲಾಗಿದೆ. ​ಮೂಲವ್ಯಾಧಿ ಚಳಿಗಾಲದಲ್ಲಿ ನಿಜವಾಗಲೂ ಹೆಚ್ಚಾಗುತ್ತಾ? ಕೆಲವೊಂದು ಕಾರಣಗಳಿಂದ ಚಳಿಗಾಲದಲ್ಲಿ ಪೈಲ್ಸ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇರುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಉದಾಹರಣೆಗೆ ಗರ್ಭಾವಸ್ಥೆ, ಬೊಜ್ಜು, ಮಾನಸಿಕ ಒತ್ತಡ ಮತ್ತು ಅನುವಂಶಿಯ ಕಾರಣಗಳಿಂದಲೂ ಕೂಡ ಮೂಲವ್ಯಾಧಿ ಅಭಿವೃದ್ಧಿ ಯಾಗುತ್ತದೆ. ಪೈಲ್ಸ್ ಹೆಚ್ಚಾದಾಗ ಗುದದ್ವಾರದಿಂದ ರಕ್ತಸ್ರಾವ ಉಂಟಾಗುವುದು, ಕೆರೆತ, ನೋವು, ಅಸ್ವಸ್ಥತೆ ಹೆಚ್ಚಾಗುತ್ತದೆ. ಪೈಲ್ಸ್‌ನಿಂದ ಪರಿಹಾರ ಪಡೆಯುವುದು ಹೇಗೆ? ಚಳಿಗಾಲದಲ್ಲಿ ತಾಪಮಾನ ಕಡಿಮೆಯಾದಾಗ, ರಕ್ತನಾಳಗಳು ಸಂಕುಚಿತಗೊಳ್ಳುತ್ತವೆ ಮತ್ತು ರಕ್ತದ ಹರಿವಿನಲ್ಲಿ ಅಡಚಣೆ…

Read More

ಇಂದು 66ನೇ ಸಾಲಿನ ಗ್ರ್ಯಾಮಿ ಅವಾರ್ಡ್ (Grammy Award) ಪ್ರಶಸ್ತಿ ಪ್ರಕಟವಾಗಿದ್ದು, ಭಾರತಕ್ಕೆ ಮೂರು ಪ್ರಶಸ್ತಿಗಳು ಸಂದಿವೆ. ದಿ ಮೂಮೆಂಟ್ ಆಲ್ಬಂಗಾಗಿ ಖ್ಯಾತ ಸಂಗೀತಗಾರ ಜಾಕಿರ್ ಹುಸೇನ್ (Zakir Hussain) ಅವರ ಬ್ಯಾಂಡ್ ಶಕ್ತಿಗೆ ಪ್ರಶಸ್ತಿ ಬಂದಿದ್ದು, ಬೆಸ್ಟ್ ಗ್ಲೋಬಲ್ ಮ್ಯೂಸಿಕ್ ಆಲ್ಬಂನಲ್ಲಿ ಈ ಪ್ರಶಸ್ತಿ ಸಂದಿದೆ. ರಾಕೇಶ್ ಚೌರಾಸಿಯಾಗೆ (Rakesh Chaurasi) ಎರಡು ಗ್ರ್ಯಾಮಿ ಅವಾರ್ಡ್ ದೊರಕಿದ್ದು, ಗ್ಲೋಬಲ್ ಮ್ಯೂಸಿಕ್ ಪರ್ಫಾರ್ಮೆನ್ಸ್ ಹಾಗೂ ವಾದ್ಯಗಳ ವಿಭಾಗದಲ್ಲಿ ಈ ಎರಡು ಪ್ರಶಸ್ತಿಗಳನ್ನು ಅವರು ತಮ್ಮದಾಗಿಸಿಕೊಂಡಿದ್ದಾರೆ. ಇದರ ಜೊತೆಗೆ ಇನ್ನೂ ಹಲವಾರು ಪ್ರಶಸ್ತಿಗಳು ಬೇರೆ ಬೇರೆ ಸಂಗೀತಗಾರರು ಪಡೆದುಕೊಂಡಿದ್ದಾರೆ ಭಾರತಕ್ಕೆ ಈ ಬಾರಿ ಮೂರು ಗ್ರ್ಯಾಮಿ ಪ್ರಶಸ್ತಿಗಳು ಬಂದಿರುವುದಕ್ಕೆ ರಿಕಿ ಕೇಜ್ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತಂತೆ ಅವರು ಸೋಷಿಯಲ್ ಮೀಡಿಯಾದಲ್ಲಿ ಅಭಿನಂದನೆಯ ಸಂದೇಶವನ್ನು ಹಂಚಿಕೊಂಡಿದ್ದಾರೆ

Read More

ಶಿವಮೊಗ್ಗ: ದೇಶ ವಿಭಜನೆ ಮಾಡುವುದು ಕಾಂಗ್ರೆಸ್‌ನ (Congress) ಸಂಸ್ಕೃತಿ. ಈಗಾಗಲೇ ದೇಶವನ್ನು ಮೂರು ವಿಭಾಗ ಮಾಡಿದ್ದಾರೆ ಎಂದು ಸಂಸದ ಬಿವೈ ರಾಘವೇಂದ್ರ (BY Raghavendra) ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಡಿಕೆ ಸುರೇಶ್ (DK Suresh) ರಾಷ್ಟ್ರ ವಿಭಜನೆ ಹೇಳಿಕೆ ವಿಚಾರವಾಗಿ ಶಿವಮೊಗ್ಗದಲ್ಲಿ (Shivamogga) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶ ಒಡೆಯುವ ವಿಚಾರದಲ್ಲಿ ರಾಜಕೀಯ ನಾಯಕರು ಹೇಳಿಕೆ ಕೊಡುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಸಹ ಈ ಹೇಳಿಕೆಯನ್ನು ವಿರೋಧ ಮಾಡಿದ್ದಾರೆ. ಕಾಂಗ್ರೆಸ್ ನಾಯಕರಲ್ಲಿಯೇ ಭಿನ್ನ ನಿಲುವು ಇದೆ. ಇದನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದರು. 28 ಕ್ಷೇತ್ರದಲ್ಲೂ ಗೆಲ್ಲಲು ನಮ್ಮ ಸಂಘಟನೆ ಮುಂದಾಗಿದೆ. ಲೋಕಸಭಾ ಯುದ್ಧಕ್ಕೆ ಬೂತ್ ಮಟ್ಟದಿಂದ ಕಾರ್ಯಕರ್ತರು ಅಣಿಯಾಗುತ್ತಿದ್ದಾರೆ. ದೇಶದಲ್ಲಿ 400 ಕ್ಷೇತ್ರ ಗೆಲ್ಲುವ ನಿರೀಕ್ಷೆ ಇದೆ. ದೇಶದಲ್ಲಿ ಬಿಜೆಪಿ (BJP) ಪರ ವಾತಾವರಣ ಇದೆ. ಶಿವಮೊಗ್ಗ ಕ್ಷೇತ್ರದಲ್ಲಿ ಅಭಿವೃದ್ಧಿ ನೋಡಿ ನನ್ನನ್ನು ಕೈ ಹಿಡಿಯುತ್ತಾರೆ ಎನ್ನುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Read More