Author: AIN Author

ಬೆಂಗಳೂರು: ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ಬಿಜೆಪಿ ನಾಯಕರು ರಾಜ್ಯಕ್ಕೆ ನ್ಯಾಯ ಒದಗಿಸುವಲ್ಲಿ ವಿಫಲವಾಗಿದೆ. ಈ ವಿಚಾರದಲ್ಲಿ ಮೊದಲು ಆತ್ಮಾವಲೋಕನ ಮೊದಲು ಮಾಡಿಕೊಳ್ಳಲಿ ಎಂದರು. ಬಿಜೆಪಿಯವರು ಒಂದು ದಿನವೂ ಪ್ರಧಾನಿ ಭೇಟಿ ಮಾಡಿ, ರಾಜ್ಯದ ಹಿತದ ಬಗ್ಗೆ ಧ್ವನಿ ಎತ್ತಲಿಲ್ಲ. ಮೊದಲು ಕೇಂದ್ರದ ಮೇಲೆ ಒತ್ತಡ ತಂದು ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಿ. ಇದೇ ಕಾರಣಕ್ಕೆ ರಾಜ್ಯದ ಜನ ಅವರನ್ನು ಧಿಕ್ಕರಿಸಿದ್ದಾರೆ ಎಂದು ಚಾಟಿ ಬೀಸಿದ್ದಾರೆ. ಬರಗಾಲದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಪರಿಹಾರ ನೀಡದಿರುವುದು, ಬಜೆಟ್‌ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ. ಈ ಹಿಂದಿನ ಬಜೆಟ್‌ನಲ್ಲಿ ಘೋಷಣೆ ಮಾಡಿದ ಅನುದಾನ ಬಿಡುಗಡೆ ಮಾಡದಿರುವುದರ ವಿರುದ್ಧ ಫೆ. 7ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನ ಮಾಡಿದ್ದೇವೆ ಎಂದರು.

Read More

ದಾವಣಗೆರೆ: ನಾವು ಲಿಂಗೈಕ್ಯರಾಗಿರುವ ತುಮಕೂರು ಸಿದ್ಧಗಂಗಾ ಮಠದ ತ್ರಿವಿಧ ಡಾ. ಶಿವಕುಮಾರ ಶ್ರೀಗಳಿಗೆ ‘ಭಾರತ ರತ್ನ’ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಎಂ.ಬಿ.ಎ. ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇಂದು ಹಿರಿಯ ಬಿಜೆಪಿ ಮುಖಂಡ ಎಲ್‌ ಕೆ ಅಡ್ವಾಣಿ ಅವರಿಗೆ ಕೇಂದ್ರ ಸರ್ಕಾರವು ‘ಭಾರತ ರತ್ನ’ಕ್ಕೆ ಆಯ್ಕೆ ಕೊಟ್ಟಿರುವುದಕ್ಕೆ ನಾವೇನೂ ಬೇಡ ಅನ್ನುವುದಿಲ್ಲ. ನಾವು ಲಿಂಗೈಕ್ಯರಾಗಿರುವ ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳಿಗೆ ನೀಡುವಂತೆ ಆಗ್ರಹಿಸಿ ಪತ್ರ ಬರೆದಿದ್ದೆವು” ಎಂದು ತಿಳಿಸಿದರು. ಕನಕದಾಮದ ಈಶ್ವರಾನಂದಪುರಿ ಸ್ವಾಮೀಜಿ ಅವರಿಗೆ ಬಾಗೂರಿನಲ್ಲಿರುವ ಚನ್ನಕೇಶವ ದೇವಾಲಯದ ಗರ್ಭಗುಡಿಗೆ ಪ್ರವೇಶಿಸದಂತೆ ತಡೆದ ವಿಚಾರದ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ಏನೂ ಮಾಹಿತಿ ಬಂದಿಲ್ಲ. ನನ್ನ ಗಮನಕ್ಕೂ ಬಂದಿಲ್ಲ. ಗೊತ್ತಿಲ್ಲದ ವಿಚಾರಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

Read More

ಬೆಂಗಳೂರು: ಸಿಲಿಕಾನ್ ಸಿಟಿ ಜನರ ನಾಡಿಮಿಡಿತವಾಗಿರೋದು ನಮ್ಮ ಮೆಟ್ರೋ (Namma Metro). ಸುರಕ್ಷಿತ ಪ್ರಯಾಣದೊಂದಿಗೆ ಸಮಯ ಕೂಡ ಉಳಿತಾಯವಾಗುತ್ತೆ. ಟ್ರಾಫಿಕ್ ಸಮಸ್ಯೆಯಂತೂ ಇಲ್ಲವೇ ಇಲ್ಲ. ಅದಕ್ಕಾಗಿ ಮೆಟ್ರೋ ಕಡೆ ಮುಖ ಮಾಡಿರುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಜನರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲು ಬಿಎಂಆರ್‌ಸಿಎಲ್ (BMRCL) ಮುಂದಾಗಿದೆ. ಸದ್ಯ ನಮ್ಮ ಮೆಟ್ರೋ ಈಗಾಗಲೇ ಕ್ಯೂಆರ್ ಕೋಡ್ ವ್ಯವಸ್ಥೆಯನ್ನ ಹೊಂದಿದೆ. ಆದ್ರೆ ಈಗಿರುವ ಕ್ಯೂಆರ್ ಕೋಡ್ ಎಲ್ಲ ಆ್ಯಪ್‌ಗಳಿಗೂ ಸಹಕರಿಸಲ್ಲ. ಪೇಟಿಎಂ, ವಾಟ್ಸಪ್, ಯಾತ್ರಾ ಆ್ಯಪ್‌ಗಳಿಗೆ ಮಾತ್ರ ಕ್ಯೂಆರ್ ಕೋಡ್ (QR Code App) ಸೌಲಭ್ಯವಿದೆ. ಇದನ್ನ ಯುನಿವರ್ಸೆಲ್ ವೇದಿಕೆಗೆ ತರಲು ಬಿಎಂಆರ್‌ಸಿಎಲ್ ನಿರ್ಧರಿಸಿದ್ದು, ಹೊಸ ಆ್ಯಪ್‌ ವ್ಯವಸ್ಥೆಯನ್ನ ಅನುಷ್ಠಾನಗೊಳಿಸಿದೆ.

Read More

ಕಾಲಿವುಡ್ ನಟ ವಿಜಯ್ ದಳಪತಿ (Vijay Thalapathy) ಅವರು ಸಾಕಷ್ಟು ಸಮಯದಿಂದ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಈಗ ‘ತಮಿಳಿಗ ವೆಟ್ರಿ ಕಳಗಂ’ (TVK) ಎಂಬ ಪಕ್ಷ ಸ್ಥಾಪಿಸಿ ವಿಜಯ್ ರಾಜಕೀಯ (Politics) ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಈ ಹಿಂದೆ ಅವರು ನೀಡಿರುವ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ನೀವು ನಿಜ ಜೀವನದಲ್ಲಿ ಮುಖ್ಯಮಂತ್ರಿಯಾದರೆ ಏನಾಗುತ್ತದೆ ಎಂದು ಕೇಳಲಾಗಿತ್ತು. ಈ ಪ್ರಶ್ನೆ ವಿಜಯ್, ಸಿಎಂ ಆದರೆ ʻನಾನು ಎಂದಿಗೂ ನಟಿಸುವುದಿಲ್ಲ’ ಎಂದು ಉತ್ತರಿಸಿದ್ದರು. ರಾಜಕೀಯಕ್ಕೆ ವಿಜಯ್ ಎಂಟ್ರಿ ಕೊಟ್ಟಿರೋ ಬೆನ್ನಲ್ಲೇ ಸಿಎಂ ಸ್ಥಾನದ ಕುರಿತು ನೀಡಿದ್ದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ಸದ್ಯ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷ ವಿಜಯ್ ಸ್ಥಾಪಿಸಿರುವುದಕ್ಕೆ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಅವರ ಮುಂದಿನ ನಡೆಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

Read More

ಬೆಂಗಳೂರು: ಧೀಮಂತ ರಾಜಕಾರಿಣಿ, ಬಿಜೆಪಿ ಭೀಷ್ಮ, ಮಾಜಿ ಉಪಪ್ರಧಾನಿ  ಎಲ್. ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿರುವುದು ಅತ್ಯಂತ ಸ್ವಾಗತಾರ್ಹ ಎಂದು ಆರ್.‌ ಅಶೋಕ್‌ ತಿಳಿಸಿದ್ದಾರೆ. https://x.com/RAshokaBJP/status/1753669554537144461?t=cFFxm2GIn7Omd321CV9SWw&s=08 ತಮ್ಮ ರಥಯಾತ್ರೆಯ ಮೂಲಕ ಭಾರತೀಯರ ಸಾಂಸ್ಕೃತಿಕ ಅಸ್ಮಿತೆಯನ್ನ ಬಡಿದೆಬ್ಬಿಸಿ, ಬಿಜೆಪಿಯನ್ನ ತಳಮಟ್ಟದಿಂದ ಕಟ್ಟಿ ಬೆಳೆಸುವ ಮೂಲಕ ಈ ದೇಶಕ್ಕೆ ಪರ್ಯಾಯ ರಾಜಕೀಯ ಶಕ್ತಿ ನೀಡಿದ ಶ್ರೀ ಅಡ್ವಾಣಿ ಅವರು ಸ್ವಾತಂತ್ರೋತ್ತರ ಆಧುನಿಕ ಭಾರತ ನಿರ್ಮಾಣದಲ್ಲಿ ಅತ್ಯಂತ ನಿರ್ಣಾಯಕ ಪಾತ್ರ ವಹಿಸಿದ ನಾಯಕರಲ್ಲಿ ಅಗ್ರಗಣ್ಯರು. ರಾಷ್ಟ್ರೀಯತೆ, ತಾವು ನಂಬಿದ ಸಿದ್ಧಾಂತ, ಸಾರ್ವಜನಿಕ ಜೀವನದಲ್ಲಿ ಇರಬೇಕಾದ ಪ್ರಾಮಾಣಿಕತೆ ಇವುಗಳಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳದ ಅಡ್ವಾಣಿ ಅವರಿಗೆ ಭಾರತ ರತ್ನ ಸಂದಿರುವುದು ಪ್ರಶಸ್ತಿಯ ಗರಿಮೆ ಹೆಚ್ಚಿಸಿದೆ ಎಂದರೆ ತಪ್ಪಾಗಲಾರದು.

Read More

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ನಟನೆಯ ಕಾಟೇರ (Katera) ಸಿನಿಮಾ ಆರನೇ ವಾರವೂ ಅದ್ಭುತ ಪ್ರದರ್ಶನ ಕಾಣುತ್ತಿದೆ. 196 ಚಿತ್ರಮಂದಿರ ಹಾಗೂ 63 ಮಲ್ಟಿಫ್ಲೆಕ್ಸ್ ಗಳಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಡಿಬಾಸ್ ಚಿತ್ರ ಈಗ ಒಟಿಟಿಗೆ (OTT) ಬರಲು ದಿನಾಂಕ ನಿಗದಿಯಾಗಿದೆ. ದರ್ಶನ್ ಸಿನಿಕರಿಯರ್ ನಲ್ಲಿ ಹೊಸ ಮೈಲುಗಲ್ಲು ಸೃಷ್ಟಿಸಿದ್ದ ಕಾಟೇರ ಬಾಕ್ಸಾಫೀಸ್ ನಲ್ಲಿ ಕೋಟಿ ಕೋಟಿ ಲೂಟಿ ಮಾಡಿತ್ತು. ಪ್ಯಾನ್ ಇಂಡಿಯಾ ಚಿತ್ರಗಳ ಅಬ್ಬರದ ನಡುವೆಯೂ  ನಮ್ಮ ನೆಲದ ಕಥೆಗೆ ಪ್ರೇಕ್ಷಕ ಜೈಕಾರ ಹಾಕಿದ್ದರು. ರಾಕ್ಲೈನ್ ವೆಂಕಟೇಶ್ ನಿರ್ಮಿಸಿರುವ ಈ ಸಿನಿಮಾ ಈಗಾಗಲೇ Zee5 ಜೊತೆ ವ್ಯಾಪಾರ ವಹಿವಾಟು ಮುಗಿಸಿದೆ.  ನಿರ್ಮಾಪಕರು ಹಾಗೂ ಓಟಿಟಿ ವೇದಿಕೆ ಜೊತೆ ಮಾಡಿಕೊಂಡ ಒಡಂಬಡಿಕೆಯಂತೆ ‘ಕಾಟೇರ’ ಮುಂದಿನ ವಾರ ಪ್ರೀಮಿಯರ್ ಆಗುತ್ತಿದೆ. Zee5 ತಾನು ಖರೀದಿಸಿದ ಹೊಸ ಸಿನಿಮಾಗಳನ್ನು ಪ್ರತಿ ಶುಕ್ರವಾರ ಬಿಡುಗಡೆ ಮಾಡುತ್ತೆ. ಅಲ್ಲದೆ ನಿರ್ಮಾಪಕರು ಹಾಗೂ ಓಟಿಟಿ ಸಂಸ್ಥೆಯೊಂದಿಗೆ ಸಿನಿಮಾ ಬಿಡುಗಡೆಯಾದ 30 ರಿಂದ 40 ದಿನಗಳ ಅಂತರದಲ್ಲಿ ಓಟಿಟಿಯಲ್ಲಿ ಪ್ರೀಮಿಯರ್ ಮಾಡುವ…

Read More

ಬೆಂಗಳೂರು: ನಗರದಲ್ಲಿ ವಾಹನಗಳ‌ ಸಂಖ್ಯೆ ಜಾಸ್ತಿಯಾಗುತ್ತಿದೆ.. ಅದೇ ರೀತಿ ರೋಡ್ ರೇಜ್ ಪ್ರಕರಣಗಳು ಸಹ ಜಾಸ್ತಿಯಾಗುತ್ತಿದೆ.. ಸಣ್ಣ ಪುಟ್ಟ ವಿಚಾರಗಳಿಗೆ ರಸ್ತೆಯಲ್ಲಿಯೇ ವಾಹನ ಸವಾರರು ಬೈದಾಡುತ್ತಿದ್ದಾರೆ, ಕೈ ಕೈ ಮಿಲಾಯಿಸುತ್ತಿದ್ದಾರೆ, ಈ ಕುರಿತ ಒಂದು ರಿಪೋರ್ಟ್ ಇಲ್ಲಿದೆ.. ಈ ಡ್ಯಾಶ್ ಕ್ಯಾಮ್ ನ ಕ್ಯಾಮಾರದಲ್ಲಿ ವಿಡಿಯೋವನ್ನು ಒಮ್ಮೆ ಸರಿಯಾಗಿ ನೋಡಿ.. ಒಬ್ಬರಿಗೊಬ್ಬರು ಇಲ್ಲಿ ಬೈಡಾಡುಕೊಳ್ಳುತ್ತಿದ್ದಾರೆ.. ಈ ಘಟನೆಗೆ‌ ಕಾರಣ ಅಂದ್ರೆ ಅದು ರೋಡ್ ರೇಜ್ ಗಲಾಟೆ.. ಹೌದು.. ನಗರದಲ್ಲಿ ದಿನೇ ದಿನೇ ರೋಡ್ ರೇಜ್ ಪ್ರಕರಣಗಳು ಹೆಚ್ಚಾಗುತ್ತಿದೆ.. ಇದೇ‌ ತಿಂಗಳ ಒಂದನೇ ತಾರೀಖಿನಂದು ಬೇಗೂರು ರಸ್ತೆಯ ಯೆಲ್ಲೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ.. ಆಟೋ ಚಾಲಕ ಮೊದಲಿಗೆ ಬಲ ಭಾಗದ ಇಂಡಿಕೇಟರ್ ಆನ್ ಮಾಡಿದ್ದಾನೆ.. ಹೀಗಾಗಿ ಹಿಂದೆ ಬರುತ್ತಿದ್ದ ಕಾರಿನ ಚಾಲಕನಿಗೆ ಇಂಡಿಕೇಟರ್ ಆನ್ ಆಗಿದ್ದರಿಂದ ಆಟೋ ಚಾಲಕ‌ ಯಾವ ‌ಕಡೆ ಹೋಗ್ತಾನೆ ಅಮನತ ಗೊತ್ತಾಗಿಲ್ಲ… ಹೀಗಾಗಿ ಓವರ್ ಟೇಕ್‌ ಮಾಡಿ ಆಟೋ ಚಾಲಕನಿಗೆ ಇಂಡಿಕೇಟರ್ ಆಫ್ ಮಾಡುವಂತೆ ಹೇಳಿದ್ದಾನೆ.. ಕಾರು…

Read More

ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರವನ್ನು ಗತಿಗೆಟ್ಟ ಸರಕಾರ ಎಂದು ಕಟುವಾಗಿ ಟೀಕೆ ಮಾಡಿರುವ ಅವರು; ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷಾ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ. ಅಲ್ಲದೆ, ಸರಕಾರದ ಆದೇಶದ ಪ್ರತಿಯನ್ನು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ SSLC ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಅವರು ಕಿಡಿಕಾರಿದ್ದಾರೆ. ಅಕ್ರಮ ಸುಲಿಗೆಯಲ್ಲಿ ‘ಸಿದ್ದಹಸ್ತ’ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ…

Read More

ಬೆಂಗಳೂರು: ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿಯವರಿಗೆ ‘ಭಾರತ ರತ್ನ’ ಪ್ರಶಸ್ತಿ ಘೋಷಿಸಿದ ಕೇಂದ್ರ ಬಿಜೆಪಿ ಸರಕಾರದ ಕ್ರಮವನ್ನು  ಪರಿಷತ್‌ ಸದಸ್ಯ ಟಿ.ಎ.ಶರವಣ ಅವರು   ಸ್ವಾಗತಿಸಿದ್ದಾರೆ. https://x.com/SharavanaTa/status/1753698238912516194?t=6CZSRhjx7Ph6qIqylK69UQ&s=08 ರಾಷ್ಟ್ರ ರಾಜಕಾರಣದ ಭೀಷ್ಮ ಎಂದೇ ಜನಪ್ರಿಯರಾದ ಮಾಜಿ ಉಪ ಪ್ರಧಾನಿ, ಅಪ್ರತಿಮ ಹೋರಾಟಗಾರ, ಹಿರಿಯ ಮುತ್ಸದ್ದಿ ರಾಜಕಾರಣಿ, ಸಂಘಟಕ, ಶ್ರೀ ಎಲ್.ಕೆ.ಅಡ್ವಾಣಿ ಅವರಿಗೆ ಭಾರತರತ್ನ ನೀಡುವ ಕೇಂದ್ರ ಸರ್ಕಾರದ ನಿರ್ಣಯ ಅತ್ಯಂತ ಶ್ಲಾಘನೀಯ. ಈ ಮೂಲಕ ಅಡ್ವಾಣಿಜೀ ಅವರ ದೇಶಸೇವೆಗೆ ಸೂಕ್ತವಾದ ಗೌರವ ದೊರೆತಿದೆ ಹಾಗಾಗಿ ಹಾರ್ದಿಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

Read More

ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲ್ಲೂಕಿನ ತಾಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಇಂದು ರೀಡ್ ಸಂಸ್ಥೆ ಹಾಗೂ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ಬಾಲ್ಯ ವಿವಾಹಗಳನ್ನು ತಡೆಯುವ ತಾಲ್ಲೂಕು ಮಟ್ಟದ ಸಮನಯ ಮತ್ತು ಪರಿಶೀಲನಾ ಸಮಿತಿ ಸಭೆ ಮಾಡಲಾಯಿತು ಬಾಲ್ಯ ವಿವಾಹ ಅಪರಾಧ, ಅದಕ್ಕೆ ಸಹಾಯ ಮಾಡುವುದು ಅಪರಾಧ, ಅದರ ಪ್ರಯತ್ನವೂ ಅಪರಾಧ, ಅದು ಕಾನೂನಿನ ಉಲ್ಲಂಘನೆ, ಅದಕ್ಕೆ ಕ್ರಿಮಿನಲ್ ಪ್ರಕರಣ ದಾಖಲು ಮಾಡಲಾಗುವುದು ಎಂಬ ಮಾಹಿತಿ ಪ್ರತಿಯೊಬ್ಬರಿಗೂ ತಲುಪಬೇಕು, ಜಿಲ್ಲೆಯ ಪ್ರತಿಯೊಂದು ಶಾಲೆಯ ಹಣ್ಣು ಮಕ್ಕಳಿಗೂ ಮಹಿಳಾ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು, ಪ್ರತಿಯೊಂದು ಶಾಲೆಯ ಮುಖ್ಯೋಪಧ್ಯಾಯರೂ ಕೂಡ ಮಕ್ಕಳ ರಕ್ಷಣಾಧಿಕಾರಿಯಾಗಿ ಕೆಲಸ ಮಾಡಬೇಕು, ಹೆಣ್ಣು ಮಕ್ಕಳು ಶಾಲೆಗೆ ಗೈರಾದರೆ ಅದಕ್ಕೆ ನೈಜಕಾರಣಗಳ ಪತ್ತೆ ಮಾಡಬೇಕು ಎಂದು ಕಂಪ್ಲಿ ತಹಸಿಲ್ದಾರ್ ಎಸ್ ಶಿವರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು ಈ ಸಂದರ್ಭದಲ್ಲಿ ತಹಶೀಲ್ದಾರ್ ಎಸ್ ಶಿವರಾಜ್ ಎ ಎಸ್ ಐ ಬಸವರಾಜ್. ಎಸ್ ಸಿ ರಾಘವೇಂದ್ರ ಆರೋಗ್ಯ…

Read More