Author: AIN Author

ಬೆಂಗಳೂರು: ಕುಮಾರಸ್ವಾಮಿ ಅವರು ಬಿಜೆಪಿ ವಕ್ತಾರರಾಗಿದ್ದಾರೆ. ದೇವೇಗೌಡರಿಗೆ ಇಷ್ಟು ನೋವು ತರುತ್ತಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಳ್ಳಬಾರದಿತ್ತು, ಅವರು ಪಕ್ಷದ ಶಾಲು ಹಾಕಿಕೊಳ್ಳಬೇಕಿತ್ತು. ನಾನು ಕೇಸರಿ ಶಾಲು ಹಾಕುವುದಿಲ್ಲ ಎಂಬ ದೇವೇಗೌಡರ ಹೇಳಿಕೆ ಬಗ್ಗೆ ಡಿಸಿಎಂ ಪ್ರತಿಕ್ರಿಯಿಸಿದರು. ದೇವೇಗೌಡರ ಸಿದ್ಧಾಂತವನ್ನು ನಾನು ಕಂಡಿದ್ದೇನೆ. ಮಕ್ಕಳಿಗಾಗಿ ಅವರು ಏನೆಲ್ಲಾ ಮಾಡಬೇಕು. ನನಗೆ ವಯಸ್ಸಾದ ಮೇಲೆ ನಮ್ಮ ಮನೆಗಳಲ್ಲಿ ಯಾವೆಲ್ಲಾ ಸಮಸ್ಯೆಗಳು ಬರುತ್ತವೆಯೋ ಗೊತ್ತಿಲ್ಲ. ಇದನೆಲ್ಲಾ ನೋಡಿದರೆ ನನಗೂ ಭಯವಾಗುತ್ತದೆ. ಪರಿಸ್ಥಿತಿ ನಾವು ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ಹೋಗಬೇಕಾಗುವಂತೆ ಮಾಡುತ್ತದೆ. ಮರಕ್ಕೆ ಬೇರು ಎಷ್ಟು ಮುಖ್ಯವೋ ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ ಎಂದರು. ಕನಕಪುರದಲ್ಲಿ ಕಲ್ಲು ಹೊಡೆಯುವವರನ್ನು ಶಾಸಕರು ಸಂಸದರನ್ನಾಗಿ ಮಾಡಿದರೆ ದೇಶ ಒಡೆಯುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆ ಪ್ರತಿಕ್ರಿಯಿಸಿದ ಅವರು ಕನಕಪುರದ ಜನರನ್ನು ಕೇಳಿ. ಅವರು ಅವರ ಮನೆಯವರೂ ಕಲ್ಲು ಹೊಡೆಯುತ್ತಿದ್ದರಲ್ಲ. ಅದರ ಪಟ್ಟಿ ನೀಡಲಾ? ಎಲ್ಲ ಪಟ್ಟಿ ನೀಡಲು ಕಳೆದ ಅಧಿವೇಶನದಲ್ಲಿ…

Read More

ಬೆಂಗಳೂರು: ಸಂಸದ ಡಿಕೆ ಸುರೇಶ್ ಭಾರತ ವಿಭಜನೆ ಹೇಳಿಕೆ ಈಗ ಕೋರ್ಟ್ ಅಂಗಳ ತಲುಪಿದೆ. ಬಂಟ್ವಾಳ ಮೂಲದ ವಿಕಾಸ್ ಪಿ ಎಂಬುವವರು ಡಿಕೆಸು ವಿರುದ್ಧ 2ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ನೀಡಿದ್ದಾರೆ. ಡಿ ಕೆ ಸುರೇಶ್ ಅವರ ಹೇಳಿಕೆ ದೇಶ ವಿರೋಧಿ ಮತ್ತು ಪ್ರಚೋದನಕಾರಿ ಹೇಳಿಕೆಯಾಗಿದೆ. ಐಪಿಸಿ ಸೆಕ್ಷನ್ 124(ಎ) ಪ್ರಕಾರ ಡಿಕೆಸು ಹೇಳಿಕೆ ಶಿಕ್ಷಾರ್ಹ ಅಪರಾಧ ಆಗಲಿದೆ. ದೇಶದ ನಾಗರೀಕರಿಗೆ ಡಿಕೆಸು ಹೇಳಿಕೆ ಮಾನಸಿಕ ಆಘಾತ ತಂದಿದೆ. https://ainlivenews.com/do-you-know-the-benefits-of-eating-jalebi-with-hot-milk/ ಹೀಗಾಗಿ ನ್ಯಾಯಾಲಯವು ಈ ಹೇಳಿಕೆ ಕುರಿತ ಮುಂದಿನ ತನಿಖೆಯನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ನಿರ್ದೇಶಿಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ. ಇನ್ನೊಂದು ಕಡೆ ಸಂಸದ ಡಿಕೆಸು ಹೇಳಿಕೆ ವಿರುದ್ಧ ಲೋಕಸಭೆ ಸ್ಪೀಕರ್ ಅವರಿಗೂ ದೂರು ಸಲ್ಲಿಸಲಾಗಿದೆ. ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿಅವರು ಲೋಕಸಭೆ ಸ್ಪೀಕರ್‌ಗೆ ಎರಡು ಪುಟಗಳ‌ ಪತ್ರದ ಮೂಲಕ ದೂರು ಸಲ್ಲಿಸಿದ್ದಾರೆ.

Read More

ನಟಿ ಪೂನಂ ಪಾಂಡೆ ನಿಧನದ ಸುದ್ದಿ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ಸದಾ ಕಾಂಟ್ರವರ್ಸಿಗಳಿಂದ ಸುದ್ದಿ ಮಾಡಿದ್ದ ಪೂನಂ ಪಾಂಡೆ ಅವರ ಸಾಕಷ್ಟು ವಿಚಾರಗಳು ಇದೀಗ ಮತ್ತೆ ಚಾಲ್ತಿಗೆ ಬಂದಿದೆ. ಅದರಲ್ಲಿ 2011ರಲ್ಲಿ ಇಂಡಿಯಾ ವಿಶ್ವಕಪ್ ಗೆದ್ದರೆ ಬೆತ್ತಲಾಗ್ತೀನಿ ಎಂದು ಪೂನಂ ಪಾಂಡೆ ಓಪನ್ ಚಾಲೆಂಜ್ ಹಾಕಿದ್ದರು. ಸುದ್ದಿಯಲ್ಲಿ ಇರೋದಕ್ಕಾಗಿ ಸದ್ದಾ ಒಂದಲ್ಲಾ ಒಂದು ಕಾಂಟ್ರವರ್ಸಿ ಆಗುವಂತಹ ಹೇಳಿಕೆ ಕೊಟ್ಟು ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. 2011ರಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ವಿಶ್ವಕಪ್ ಗೆದ್ದರೆ ಬಟ್ಟೆ ಇಲ್ಲದೇ ಓಡಾಡುತ್ತೇನೆ ಎಂದು ಪೂನಂ ಹೇಳಿಕೆ ನೀಡಿ ತಡರಾತ್ರಿ ಫೇಮಸ್ ಆಗಿದ್ದರು. ಕೊಹ್ಲಿ ಪಡೆ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಕೀವಿಸ್ ವಿರುದ್ಧ ಸೆಣಸಾಡುತ್ತಿರುವ ಬಗ್ಗೆ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿದ ಪೂನಂ ಪಾಂಡೆ, ಕ್ರಿಕೆಟ್ ಚಾಲು ಹೈ, ಲೋಗ್ ಕ್ರಿಕೆಟ್ ಖೇಲ್ ರಹೇ ಹೈ. ಈ ಬಾರಿ ಮತ್ತೆ ಹೇಳುತ್ತಿದ್ದೇನೆ ಭಾರತ ತಂಡ ಟೆಸ್ಟ್ ವಿಶ್ವಚಾಂಪಿಯನ್‌ಶಿಪ್ ಗೆದ್ದರೆ ಮತ್ತೆ ಬೆತ್ತಲಾಗಿ ವಿವಾದ ಎದುರಿಸಲು ಸಿದ್ಧ ಎಂದಿದ್ದರು. 2011ರಲ್ಲಿ…

Read More

ಬೆಂಗಳೂರು: ದೇಶ ವಿಭಜನೆ ಹೇಳಿಕೆ ನೀಡಿದ ಸಂಸದ ಡಿ.ಕೆ ಸುರೇಶ್ (DK Suresh) ಅವರಿಗೆ ಬುದ್ಧಿವಾದ ಹೇಳುವ ಕೆಲಸ ಆಗಬೇಕು. ಹೊರತು ಅವರನ್ನು ಸಮರ್ಥಿಸುವುದಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸುನೀಲ್‍ಕುಮಾರ್ (V. Sunil Kumar) ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಒಬ್ಬ ಜನಪ್ರತಿನಿಧಿಯಾಗಿದ್ದರೂ ಅನುದಾನ ಕಡಿಮೆ ಆಗಿದೆ ಎಂದು ದೇಶ ವಿಭಜನೆಯ ಮಾತನಾಡಿದ್ದಾರೆ. ಅದನ್ನು ಸಮರ್ಥನೆ ಮಾಡಿಕೊಂಡದ್ದು ನಾಚಿಕೆಗೇಡಿನ ಸಂಗತಿ. ಸಮರ್ಪಕ ಮಾಹಿತಿ ಇಲ್ಲದೆ, ದಕ್ಷಿಣ ಭಾರತ ವಿಭಜನೆ ಆಗಬೇಕು ಅನ್ನೋ ಕಲ್ಪನೆಯೇ ಸರಿಯಲ್ಲ. ಇವರದು ಹತಾಶೆಯ ಹೇಳಿಕೆ. ಯಾವುದೇ ಕಾರಣಕ್ಕೂ ದೇಶ ವಿಭಜನೆ ಆಗಬಾರದು ಎಂದರಲ್ಲದೆ, https://ainlivenews.com/do-you-know-the-benefits-of-eating-jalebi-with-hot-milk/ ಇವರ ಹೇಳಿಕೆಗೆ ಜನಾಕ್ರೋಶ ಶುರುವಾಗಿದೆ. ಅದನ್ನು ಸಮರ್ಥನೆ ಮಾಡಿಕೊಳ್ಳಬಾರದು ಎಂದು ತಿಳಿಸಿದರು. ಎರಡೂವರೆ ವರ್ಷಗಳಾದ ಬಳಿಕ ಸಿದ್ದರಾಮಯ್ಯ (Siddaramaiah) ಅವರು ಡಿಕೆಶಿಗೆ (DK Shivakumar) ಅಧಿಕಾರ ಬಿಟ್ಟುಕೊಡಲಿಲ್ಲ ಎಂದು ರಾಮನಗರವನ್ನೇ…

Read More

ರಾಮನಗರ: ಸಚಿವ ಚಲುವರಾಯಸ್ವಾಮಿ ನನಗೇನು ಎದುರಾಳಿನಾ, ಅವರ ಬಗ್ಗೆ ಚರ್ಚೆ ಅಪ್ರಸ್ತುತ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಚಲುವರಾಯಸ್ವಾಮಿ ಸ್ಪರ್ಧೆಯ ಕುರಿತು ಬಿಡದಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನ್ನ ಸೋಲಿನ ಬಗ್ಗೆ ಮಾತನಾಡುವವರು ಇವರೇಕೆ ಸೋತಿದ್ರು. ಮಂತ್ರಿ ಆಗಿದ್ದರೂ ಕೂಡಾ ಚಲುವರಾಯಸ್ವಾಮಿ ಸೋತಿದ್ರಲ್ಲ. https://ainlivenews.com/do-you-know-the-benefits-of-eating-jalebi-with-hot-milk/  ಈಗ ದೇವೇಗೌಡರ ಮುಖ ನೋಡಿಕೊಂಡು ಸುಮ್ಮನಿದ್ದೀನಿ ಅಂದ್ರಲ್ಲಾ? ಇಲ್ಲ ಅಂದರೆ ಏನು ಮಾಡ್ತಿದ್ರಿ. ನಿಮ್ಮ ಮಾತಿನ ಅರ್ಥ ಏನು. ನಾನು ಅವರನ್ನು ತುಂಬಾ ಹತ್ತಿರದಿಂದ ನೋಡಿದ್ದೀನಿ. ಅವರು ನನಗೇನು ಎದುರಾಳಿನಾ? ಅವರ ಬಗ್ಗೆ ಚರ್ಚೆ ಅಪ್ರಸ್ತುತ. ಅದೇನು ಮಾಡ್ತಿರೋ ಮಾಡಿ ನೋಡೊಣ ಎಂದು ಚಲುವರಾಯಸ್ವಾಮಿಗೆ ಹೆಚ್‌ಡಿಕೆ ಸವಾಲ್ ಹಾಕಿದ್ದಾರೆ. 

Read More

ಬೆಂಗಳೂರು: ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಅಂತ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ಗೆ ಬೆಂಗಳೂರು ಕೋರ್ಟ್ (Bengaluru Court) ಸಮನ್ಸ್ ನೀಡಿದೆ. ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ಗೆ (Udhayanidhi Stalin) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ನೀಡಿದ್ದು, ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. https://ainlivenews.com/do-you-know-the-benefits-of-eating-jalebi-with-hot-milk/ ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಲಾಗಿದೆ. ಬೆಂಗಳೂರಿನ ಪರಮೇಶ್ ಎಂಬುವವರು ಉದಯನಿಧಿ ಹೇಳಿಕೆ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ. ಪ್ರೀತ್ ಅವರಿದ್ದ ಪೀಠ ಸಮನ್ಸ್‌ ಜಾರಿಗೊಳಿಸಿದೆ. ಏನಿದು ಪ್ರಕರಣ? 2023ರ ಸೆಪ್ಟೆಂಬರ್‌ 3 ರಂದು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ಉದಯನಿಧಿ ಸ್ಟಾಲಿನ್‌ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸನಾತನ ಧರ್ಮದ ನಿರ್ಮೂಲನೆ ಆಗಬೇಕು. ಅದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ…

Read More

ಹೊಸಪೇಟೆ ಫೆಬ್ರವರಿ 02: ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಸಾರುವ ಈ ಬಾರಿಯ ಹಂಪಿ ಉತ್ಸವದ ಪ್ರಯುಕ್ತ ತೋಟಗಾರಿಕೆ ಇಲಾಖೆಯಿಂದ ಏರ್ಪಡಿಸಲಾದ ಫಲ ಪುಷ್ಪ ಪ್ರದರ್ಶನದಲ್ಲಿ ಹಂಪಿಯ ಕಮಲ್ ಮಹಲ್ 2 ಲಕ್ಷ ಚಂಡು ಹೂಗಳು, 1 ಲಕ್ಷ ಗುಲಾಬಿ ಹೂವುಗಳು ಹಾಗೂ ವಿವಿಧ ರೀತಿಯ ಹೂವುಗಳಿಂದ ಅರಳಿದೆ. ತೋಟಗಾರಿಕೆ ಇಲಾಖೆಯಿಂದ ಫೆ. 2 ರಿಂದ 4 ರವರೆಗೆ ಹಂಪಿ ಮಾತಂಗ ಪರ್ವತ ಮೈದಾನದಲ್ಲಿ ಹಮ್ಮಿಕೊಳ್ಳಲಾದ ಫಲ-ಪುಷ್ಷ ಪ್ರದರ್ಶನಕ್ಕೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಜಯನಗರ ಶಾಸಕರಾದ ಹೆಚ್.ಆರ್.ಗವಿಯಪ್ಪ, ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್., ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಸೇರಿದಂತೆ ಜನಪ್ರತಿನಿಧಿಗಳು, ಹಲವು ಗಣ್ಯರು, ರೈತರು, ಸಾರ್ವಜನಿಕರು ಉಪಸ್ಥಿತರಿದ್ದರು. ಫಲಪುಷ್ಪ ಪ್ರದರ್ಶನದಲ್ಲಿ ಮಳೆ ನೀರು ಕೊಯ್ಲುಘಟಕಗಳು, ಮಿಶ್ರ ತೋಟಗಾರಿಕೆ ಕೃಷಿ ಮಾದರಿ, ಸ್ವಾತಂತ್ರ‍್ಯ ಹೋರಾಟಗಾರರಾದ…

Read More

ವಿಜಯನಗರ ಫೆಬ್ರವರಿ 02: ಇದೇ ಮೊದಲ ಬಾರಿಗೆ ಹಂಪಿ ಉತ್ಸವದಲ್ಲಿ ಆಯೋಜಿಸಲಾದ ಎತ್ತುಗಳ ಪ್ರದಶನ ಜನಮನ ಸೂರೆಗೊಂಡಿದೆ. ರೈತರ ಸಂಗಾತಿ, ಉಳುಮೆ ಸಹಕಾರಿಯಾಗಿರುವ ವಿವಿಧ ದೇಶಿ ತಳಿಯ ಎತ್ತುಗಳು ಪ್ರದರ್ಶನದ ಆಕರ್ಷಣೆ ಎನಿಸಿದವು. ಕಮಲಾಪುರ ಪಟ್ಟಣದ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಹಿಂಭಾಗದ ಆವರಣದಲ್ಲಿ ಫೆಬ್ರವರಿ 2ರಂದು ನಡೆದ ಎತ್ತುಗಳ ಪ್ರದರ್ಶನಕ್ಕೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಗೋ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು. ಸುಮಾರು 52 ಜೊತೆ ಎತ್ತುಗಳು ಈ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದವು. ಹಳ್ಳಿಕಾರ್, ಅಮೃತ್ ಮಹಲ್, ಕಿಲಾರ್ ಸೇರಿದಂತೆ ಹಲವು ದೇಶಿ ತಳಿಯ ಎತ್ತುಗಳು ರೈತರ ಮನಗೆದ್ದವು. ಹೊಸಪೇಟೆ ನಗರದ ಬಂಡಿ ಕೃಷ್ಣಪ್ಪ ಅವರ ಜೋಡೆತ್ತುಗಳು ಚಾಂಪಿಯನ್ ಆಫ್ ಚಾಂಪಿಯನ್ ಪ್ರಶಸ್ತಿಗೆ ಭಾಜನವಾಗಿ ಮೊದಲ ಸ್ಥಾನಗಳಿಸಿದವು. ಹೊಸಪೇಟೆ ತಾಲ್ಲೂಕಿನ ನಲ್ಲಾಪುರ ಗ್ರಾಮದ ರೈತ ಹನುಮಂತಪ್ಪ ಮುದಿಯಪ್ಪನವರ ಜೋಡೆತ್ತುಗಳು ದ್ವಿತೀಯ ಸ್ಥಾನಗಳಿಸಿದರೆ, ವೆಂಕಟಾಪುರ ಗ್ರಾಮದ…

Read More

ವಿಜಯನಗರ: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಶುಕ್ರವಾರ ಹೊಸಪೇಟೆ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ ಮಾಡಿದರು. ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಗಣ್ಯರು ತೆಂಗಿನ ಸಸಿಗಳನ್ನು ನೆಟ್ಟರು. ಒಟ್ಟು ರೂ‌ 4.6 ಕೋಟಿ ವೆಚ್ಚದಲ್ಲಿ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ನಿರ್ಮಿಸಲಾಗಿದೆ. 27 ಸೆಪ್ಟೆಂಬರ್ 2022 ರಂದು ಕಾಮಗಾರಿ ಪ್ರಾರಂಭಿಸಿ, 28 ಆಗಸ್ಟ್ 2023 ಕ್ಕೆ ಪೂರ್ಣಗೊಳಿಸಲಾಗಿದೆ. ನೂತನ ಜಿಲ್ಲಾ ಪೊಲೀಸ್ ಕಚೇರಿ ನಿರ್ಮಾಣಕ್ಕೆ ಒಟ್ಟು 3 ಎಕರೆ ಜಮೀನು ಮಂಜೂರು ಮಾಡಲಾಗಿದೆ. 1255 ಚದರ ಮೀಟರ್ ಜಾಗದಲ್ಲಿ ಕಚೇರಿ ಕಟ್ಟಡ ನಿರ್ಮಿಸಲಾಗಿದೆ. ಲೋಕೋಪಯೋಗಿ ಇಲಾಖೆಯಿಂದ ಕಾಮಗಾರಿ ಅನುಷ್ಠಾನಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ…

Read More

ಹಂಪಿ.ಫೆ.೨ ಜನರಿಗಾಗಿ ಹಾಗೂ ಕಲಾವಿದರ ಹಿತರಕ್ಷಣೆಗಾಗಿ ಉತ್ಸವಗಳನ್ನು ಮಾಡುತ್ತಿದ್ದೇವೆ. ಹಂಪಿ ಉತ್ಸವವು ಒಂದು ಸಾಂಸ್ಕೃತಿಕ ಉತ್ಸವವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದರು. ಶುಕ್ರವಾರ ಹಂಪಿ‌ ಉತ್ಸವ ಉದ್ಘಾಟನೆಗಾಗಿ ಹೆಲಿಪ್ಯಾಡ್ ಗೆ ಆಗಮಿಸಿದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಬರಗಾಲ ಇದ್ದರೂ ಸಹ ಉತ್ಸವವನ್ನು ಜನರಿಗಾಗಿ, ಕಲಾವಿದರ ಹಿತರಕ್ಷಣೆಗಾಗಿ ಮಾಡುತ್ತಿದ್ದೇವೆ. ಇದೊಂದು ನಾಡಿನ‌‌ ಸಾಂಸ್ಕೃತಿಕ ಉತ್ಸವವಾಗಿದೆ ಎಂದರು. ಈ ಸಂದರ್ಭದಲ್ಲಿ ವಸತಿ, ವಕ್ಪ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್. ಜಮೀರ ಅಹ್ಮದ್ ಖಾನ್, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರ, ಶಾಸಕರಾದ ಜೆ.ಎನ್. ಗಣೇಶ, ಬಿ.ಎಂ.ನಾಗರಾಜ, ಎಚ್.ಆರ್. ಗವಿಯಪ್ಪ, ರಾಘವೇಂದ್ರ ಹಿಟ್ನಾಳ, ಅಜೇಯ ಧರ್ಮಸಿಂಗ್, ನಾರಾ ಭರತ್ ರೆಡ್ಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನರಾಜ್ ಸಿಂಗ್, ಐಜಿಪಿ ಲೋಕೇಶಕುಮಾರ, ಜಿಲ್ಲಾಧಿಕಾರಿ ಎಮ್. ಎಸ್. ದಿವಾಕರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀ ಹರಿಬಾಬು,…

Read More