Author: AIN Author

ನವದೆಹಲಿ:- ಮಂಡ್ಯದಲ್ಲಿ ನಡೆದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​ಡಿ ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿದಕ್ಕೆ ಸ್ವತಃ ಹೆಚ್​ಡಿ ದೇವೇಗೌಡ ಖಂಡಿಸಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ದೇವೇಗೌಡ, ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು, ನಮ್ಮ ಪಕ್ಷದ ಶಾಲು ಹಾಕಬಹುದಿತ್ತು ಎಂದು ಹೇಳಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಕೇಸರಿ ಶಾಲು ಹಾಕಿರುವುದನ್ನು ಪರೋಕ್ಷವಾಗಿ ಖಂಡಿಸಿದ್ದಾರೆ. ನಾಳೆ ನರೇಂದ್ರ ಮೋದಿ ಜೊತೆಗೆ ಹೋದಾಗಲೂ ನನ್ನ ಪಕ್ಷದ ಶಾಲು ಹಾಕುತ್ತೇನೆ. ನಾನು ಖಂಡಿತವಾಗಿ ಕೇಸರಿ ಶಾಲು ಹಾಕುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿರುವ ದೇವೇಗೌಡ, ಪ್ರತಿಭಟನೆಯ ವೇಳೆ ಯಾರೋ ಬಂದು ಕೇಸರಿ ಶಾಲು ಹಾಕಿರುತ್ತಾರೆ. ಆಯಾ ಸಂದರ್ಭಕ್ಕೆ ಹಾಕಿರುತ್ತಾರೆ, ದೊಡ್ಡ ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ ಎಂದು ಕುಮಾರಸ್ವಾಮಿ ಕೇಸರಿ ಶಾಲು ಹಾಕಿರುವುದನ್ನು ಕೊನೆಗೆ ಸಮರ್ಥಿಸಿಕೊಂಡರು. ಇನ್ನೂ ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರು ಬಿಜೆಪಿ ಜೊತೆಗಿನ ಮೈತ್ರಿಯ ಬೆನ್ನಲ್ಲೇ ಕೇಸರಿ ಶಾಲನ್ನು ಹೆಗಲಿಗೆ ಹಾಕಿಕೊಂಡಿರುವುದು ರಾಜಕೀಯ ಪಡಸಾಲೆ ಹಾಗೂ ಸಾರ್ವಜನಿಕ…

Read More

ದೆಹಲಿ:- ಜಾರ್ಖಂಡ್ ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಹಿರಿಯ ನಾಯಕ ಚಂಪೈ ಸೊರೆನ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಚಂಪೈ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇವರೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ ಅಲಂಗೀರ್ ಆಲಂ ಮತ್ತು ಆರ್‌ಜೆಡಿ ನಾಯಕ ಸತ್ಯಾನಂದ್ ಭೋಕ್ತಾ ಕೂಡ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜಾರ್ಖಂಡ್‌ನ 12 ನೇ ಮುಖ್ಯಮಂತ್ರಿಯಾಗಿ 67 ವರ್ಷ ವಯಸ್ಸಿನ ಚಂಪೈ ಸೊರೆನ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ಜಾರ್ಖಂಡ್‌ನ ಕೊಲ್ಹಾನ್ ಪ್ರದೇಶದಿಂದ ಆರನೇ ಮುಖ್ಯಮಂತ್ರಿಯಾಗಿದ್ದಾರೆ. ಇದು ಪೂರ್ವ ಸಿಂಗ್‌ಭೂಮ್, ಪಶ್ಚಿಮ ಸಿಂಗ್‌ಭೂಮ್ ಮತ್ತು ಸೆರೈಕೆಲಾ-ಖಾರ್ಸಾವಾನ್ ಜಿಲ್ಲೆಗಳನ್ನು ಒಳಗೊಂಡಿದೆ. ಹಿಂದೆ ಜಾರ್ಖಂಡ್ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ ಚಂಪೈ ಪ್ರಮುಖ ಬುಡಕಟ್ಟು ನಾಯಕ ಮತ್ತು ರಾಜಕಾರಣಿ. ಜಾರ್ಖಂಡ್‌ನ ಹುಲಿ” ಎಂದು ಕರೆಯಲ್ಪಡುವ ಚಂಪೈ ಸೊರೆನ್ 1990 ರ ದಶಕದಲ್ಲಿ ಪ್ರತ್ಯೇಕ ಜಾರ್ಖಂಡ್ ರಾಜ್ಯ ರಚನೆಯ ಹೋರಾಟದಲ್ಲಿ…

Read More

ಬೆಂಗಳೂರು:  ರಾಜ್ಯದಲ್ಲಿ ಕುಸಿಯುತ್ತಿರುವ ಅಂತರ್ಜಲ ಮಟ್ಟವನ್ನು ಸುಧಾರಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಜಲಾನಯನ ಅಭಿವೃದ್ಧಿ ಇಲಾಖೆ ಮತ್ತು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಜಲಾನಯನ ನಿರ್ವಹಣೆಯ ಉತ್ಕೃಷ್ಠ ಕೇಂದ್ರ, ಜಿಕೆವಿಕೆ ಆವರಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಇಂದು ನಡೆಸಲಾಯಿತು.. ರಾಜ್ಯದಲ್ಲಿ ಅಂತರ್ಜಲದ ಸಮರ್ಪಕ ಬಳಕೆಗಾಗಿ ಜಲ-ಸಮರ್ಥ ನೀರಾವರಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದು, ರೈತರಿಗೆ ನೀರಿನ ಸದ್ಬಳಕೆ ಕುರಿತು ಶಿಕ್ಷಣ, ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಒಗ್ಗೂಡಿಸುವ ಕಾರ್ಯತಂತ್ರ ಹಾಗೂ ಅಂತರ್ಜಲ ನಿರ್ವಹಣೆ ಕುರಿತು ನೀತಿ ನಿಯಮಾವಳಿಗಳ ಬಗ್ಗೆ (ನೀರಿನ ಕ್ರೆಡಿಟ್ ಪದ್ಧತಿ) ಚರ್ಚಿಸಿ ಸಮಗ್ರ ಕ್ರಿಯಾ ಯೋಜನೆಯ ಮಾನದಂಡಗಳನ್ನು ರೂಪಿಸಿ, ಸದರಿ ಕ್ರಿಯಾ ಯೋಜನೆಯನ್ನು ಜಲಾನಯನ ಅಭಿವೃದ್ಧಿ ಇಲಾಖೆ ಮತ್ತು ಜಲಾನಯನ ನಿರ್ವಹಣೆಯ ಉತ್ಕೃಷ್ಠ ಕೇಂದ್ರ, ಶೀಘ್ರದಲ್ಲಿಯೇ ಸಿದ್ದಪಡಿಸಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ತೀರ್ಮಾನಿಸಲಾಯಿತು… ಸಮಗ್ರ ಕ್ರಿಯಾ ಯೋಜನೆಯಲ್ಲಿ ಅಂತರ್ಜಲ ಅಭಿವೃದ್ಧಿಗಾಗಿ ಸೂಕ್ತ ಸ್ಥಳಗಳಲ್ಲಿ ನೀರು ಶೇಕರಣಾ ವಿನ್ಯಾಸಗಳಾದ ಚೆಕ್ ಡ್ಯಾಮ್, ಇಂಗು ಗುಂಡಿ ನಿರ್ಮಾಣ, ಚಾಲ್ತಿಯಲ್ಲಿರುವ ಕೃತಕ ಮರು…

Read More

ಸ್ಯಾಂಡಲ್‌ವುಡ್ ನಟಿ ರಾಧಿಕಾ ಪಂಡಿತ್ (Radhika Pandit) ಅವರು ಸಿನಿಮಾದಿಂದ ದೂರವಿದ್ರು ಕೂಡ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇದೀಗ ಲವ್ ಸೆಲೆಬ್ರೇಷನ್‌ಗೆ ಗೊಂಬೆಯಂತೆ ರಾಧಿಕಾ ರೆಡಿಯಾಗಿದ್ದಾರೆ. ಯಶ್ ಪತ್ನಿಯ ಸುಂದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ ಫೆಬ್ರವರಿ ಪ್ರೇಮಿಗಳು ಆಚರಿಸುವ ತಿಂಗಳು. ಪ್ರೇಮಿಗಳ ದಿನವನ್ನು ಆಚರಿಸಲು ರಾಧಿಕಾ ರೆಡಿಯಾದಂತಿದೆ. ‘ಹಲೋ ಟು ಮಂತ್ ಆಫ್ ಲವ್’ ಎಂದು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಫೆಬ್ರವರಿ ತಿಂಗಳನ್ನು ನಟಿ ವೆಲ್‌ಕಮ್ ಮಾಡಿದ್ದಾರೆ. ಗೋಲ್ಡನ್ ಕಲರ್ ಡ್ರೆಸ್‌ನಲ್ಲಿ ಕುಳಿತು ರಾಧಿಕಾ ಪಂಡಿತ್ ವಿವಿಧ ಭಂಗಿಯಲ್ಲಿ ಪೋಸ್ ನೀಡಿದ್ದಾರೆ. ರಾಧಿಕಾರ ಸ್ಟೈಲೀಶ್ ಲುಕ್, ಮುಖದಲ್ಲಿರುವ ಮಂದಹಾಸ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ನಟ ಯಶ್ (Yash) ಮತ್ತು ರಾಧಿಕಾ 2016ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ಐರಾ ಮತ್ತು ಯಥರ್ವ್ ಎಂಬ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಮದುವೆಯ ಬಳಿಕ ರಾಧಿಕಾ ನಟನೆಯಿಂದ ದೂರ ಉಳಿದ್ದಾರೆ. ಕೆಲ ನೆಟ್ಟಿಗರು ರಾಧಿಕಾ ಹೊಸ…

Read More

ರಾಯಚೂರು:- ಟಿಪ್ಪು ಭಾವಚಿತ್ರಕ್ಕೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದಡಿ ಇಬ್ಬರು ಕಾನ್ಸ್​​ಟೇಬಲ್​ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಮಾನ್ವಿ ತಾಲೂಕಿನ ಸಿರವಾರದಲ್ಲಿ ಈ ಘಟನೆ ನಡೆದಿತ್ತು. ಸಿರವಾರ ಠಾಣೆಯ ಕಾನ್ಸ್​ಟೇಬಲ್​ಗಳಾದ ಇಸ್ಮಾಯಿಲ್ ಹಾಗೂ ರೇವಣಸಿದ್ದ ಅವರು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಕರ್ತವ್ಯಲೋಪ ಹಿನ್ನಲೆ ಅಮಾನತು ಮಾಡಲಾಗಿದೆ. ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿ ಇರುವ ಟಿಪ್ಪು ಸರ್ಕಲ್‌ನಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ರಾತ್ರೋರಾತ್ರಿ ಕೆಲ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದರು. ಇದನ್ನು ನೋಡಿದ ಮುಸ್ಲಿಂ ಮುಖಂಡರು ತೀವ್ರ ಆಕ್ರೋಶ ಹೊರ ಹಾಕಿದ್ದರು. ಕೂಡಲೇ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು. ಬಳಿಕ ಸಿರವಾರ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನಾಕಾರರು ರಸ್ತೆ ಮಧ್ಯದಲ್ಲಿ ಕುಳಿತು ಸಂಚಾರಕ್ಕೆ ಬಂದ್ ಮಾಡಿ, ರಸ್ತೆ ಮಧ್ಯೆ ಟಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದರು. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವ…

Read More

ಗದಗ: ಗುರು ಇನ್ಸ್ಟಿಟ್ಯೂಟ್ ವತಿಯಿಂದ ಗದಗ ನಗರದಲ್ಲಿ ಇದೇ ಭಾನುವಾರ ದಿ. 11 ರಂದು ಸೂಪರ್ ಸಂಸಾರ ನಾಟಕ ಪ್ರದರ್ಶನಗೊಳ್ಳಲಿದೆ. ಆ ಕುರಿತು ಗದಗ ನಗರದ ಪತ್ರಿಕಾಭವನದಲ್ಲಿ ಸುದ್ದಿ ಗೋಷ್ಠಿ ನಡೆಸಿ ಯಶವಂತ್ ಸರದೇಶಪಾಂಡೆ ಮಾತನಾಡಿದ್ರು. ನಾನು ಹಾಗೂ ನಮ್ಮ ತಂಡ ಅಭಿನಯಿಸಿರೋ ಹಾಸ್ಯಭರಿತ ಸೂಪರ್ ಸಂಸಾರ ನಾಟಕ ದಿನಾಂಕ ಫೆಭ್ರುವರಿ 11 ರಂದು ವಿದ್ಯಾದಾನ ಸಮಿತಿ ಮೈದಾನದಲ್ಲಿ ಸಂಜೆ 6.30 ಕ್ಕೆ ನಡೆಯಲಿದೆ ಹಾಗಾಗಿ ಈ ಹಾಸ್ಯಭರಿತ ನಾಟಕವನ್ನು ಜನರು ನೋಡಿ ನಕ್ಕು ನಲಿದು ನಾಟಕವನ್ನು ಪ್ರೋತ್ಸಾಹಿಸಬೇಕು ಅಂದ್ರು.

Read More

ಬೆಂಗಳೂರು:  ಕಲ್ಲು ಹೊಡೆದುಕೊಂಡು ಇದ್ದವರನ್ನ ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತೆ ಎಂದು ಸಂಸದ ಡಿ.ಕೆ.ಸುರೇಶ್ (D.k.Suresh) ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy)  ವಾಗ್ದಾಳಿ ನಡೆಸಿದ್ದಾರೆ. ಪ್ರತ್ಯೇಕ ರಾಷ್ಟ್ರದ ಬಗ್ಗೆ ಡಿ.ಕೆ.ಸುರೇಶ್ ಹೇಳಿಕೆ ವಿಚಾರ ಕುರಿತು ಬಿಡದಿಯಲ್ಲಿ ಸುದ್ದಿಗಾರೊಂದಿಗೆ ಪ್ರತಿಕ್ರಿಯಿಸಿದ ಅವರು, ನಿನ್ನೆಯ ದಿನ ಡಿ.ಕೆ.ಸುರೇಶ್ ದೇಶ ವಿಭಜನೆ ಬಗ್ಗೆ ಮಾತನಾಡಿದ್ದಾರೆ. ಕೇಂದ್ರ ಸರ್ಕಾರ ಆರ್ಥಿಕ ತಾರತಮ್ಯ, ಕರ್ನಾಟಕಕ್ಕೆ ಅನ್ಯಾಯ ಎಂಬ ಕಾರಣ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೊ ನ್ಯಾಯ ಯಾತ್ರೆ ಮಾಡಿದರು. ಈಗ ವಿಭಜನೆ ಬಗ್ಗೆ ಮಾತನಾಡುತ್ತಿದ್ದಾರೆ. ಒಂದು ವೇಳೆ ವಿಭಜನೆ ಆಯ್ತು ಅಂತ ತಿಳಿದುಕೊಳ್ಳಿ. ತಮಿಳುನಾಡಿನಿಂದ ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯಲು ಸಾಧ್ಯವೇ ಎಂದು ಟಾಂಗ್ ಕೊಟ್ಟಿದ್ದಾರೆ ಕಲ್ಲು ಹೊಡೆದುಕೊಂಡು ಇದ್ದೋರನ್ನ ಲೋಕಸಭೆಗೆ ಕಳುಹಿಸಿದ್ರೆ ಇನ್ನೇನಾಗುತ್ತೆ. ಇಲ್ಲಿ ಬಡ ಜನರ ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ. ಅಂಥವರನ್ನ ತೆಗೆದುಕೊಂಡು ಹೋಗಿ ದೇಶ ಕಟ್ಟು ಅಂತ ಕಳುಹಿಸಿದ್ರೆ ಕಟ್ತಾರಾ? ಅವರ ಸಾಮ್ರಾಜ್ಯ ಕಟ್ಟುಕೊಳ್ತಾರೆ ಅಷ್ಟೇ. ಇವರಿಂದ ಇನ್ನೇನು…

Read More

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಪರೇಷನ್ ಕಮಲ ಕುರಿತು ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಡಿಮಿಡಿಗೊಂಡರು. ನಗರದಲ್ಲಿ ಮಾತನಾಡಿ ಅವರು,  ಆಪರೇಷನ್ ಅಂದ್ರೆ ಏನು..? ಹೇಳು.. ಆಪರೇಷನ್ ಅಂದ್ರೆ ಏನಯ್ಯಾ..? ಅವರಿಗೆ ಆಪರೇಷನ್ ಬಿಟ್ರೆ ಬೇರೆ ಗೊತ್ತಿಲ್ಲ ಎಂದು ಗರಂ ಆದರು. ಆಪರೇಷನ್ ಅಂದ್ರೆ ದುಡ್ಡು ಕೊಟ್ಟು ಕೊಂಡುಕೊಳ್ಳೋದು. ಅವರಿಗೆ ಜನರಲ್ಲಿ ವಿಶ್ವಾಸ ಗಳಿಸೋದು ಗೊತ್ತಿಲ್ಲಾ. ಅವರು ಈ ಹಿಂದೇನೂ ಎರಡು ಸಲಿ ಹಾಗೆ ಮಾಡಿದಾರೆ. ಪೂರ್ಣ ಪ್ರಮಾಣದಲ್ಲಿ ಇವರು ಗೆದ್ದೇ ಇಲ್ಲಾ. ಅವರು ಯಾವಾಗಲೂ ಮೆಜಾರಿಟಿಯಿಂದ ಗೆದ್ದಿಲ್ಲ. ಆದ್ರೆ, 2013, 2023 ರಲ್ಲಿ ನಾವು ಕಾಂಗ್ರೆಸ್ ನವರು ಗೆದ್ದಿದ್ದೇವೆ. ನಾವು ಜನಮತ ಪಡೆದು ಬರ್ತೆವೆ, ಅವರು ಆಪರೇಷನ್ ಮಾಡಿ ಬರ್ತಾರೆ ಎಂದು ಛೇಡಿಸಿದರು.

Read More

ಬೆಳಗಾವಿ:- ಸಂಸದ ಡಿಕೆ ಸುರೇಶ್ ಅವರ ಪ್ರತ್ಯೇಕ ರಾಷ್ಟ್ರದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ವಿಷಯವನ್ನು ಅರ್ಥಮಾಡಿಕೊಳ್ಳಬೇಕಿದೆ. ಅನುದಾನ ಹಂಚಿಕೆಯ ವಿಷಯದಲ್ಲಿ ಬಹಳಷ್ಟು ಏರುಪೇರಾಗುತ್ತಿದೆ, ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುವುದು ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಜವಾಬ್ದಾರಿಯಾಗಿದೆ, ಎಲ್ಲ ರಾಜ್ಯಗಳನ್ನು ಅವರು ಸಮಾನ ದೃಷ್ಟಿಯಿಂದ ನೋಡಬೇಕು ಎಂದರು. ಬರ ಪರಿಹಾರ ನಿಧಿಗಾಗಿ ಕರ್ನಾಟಕ ಮನವಿ ಸಲ್ಲಿಸಿ ತಿಂಗಳುಗಳು ಕಳೆದರೂ ಇನ್ನೂ ಬಿಡುಗಡೆಯಾಗಿಲ್ಲ. ಮಳೆಗಾಲದಲ್ಲಿ ಪ್ರವಾಹದಂಥ ಸ್ಥಿತಿ ಕರ್ನಾಟಕದಲ್ಲಿ ತಲೆದೋರಿದಾಗಲೂ ಪರಿಹಾರಕ್ಕಾಗಿ ಕೇಂದ್ರದಿಂದ ಹಣ ಬಿಡುಗಡೆಯಾಗಿರಲಿಲ್ಲ ಎಂದು ಹೇಳಿದ ಸಚಿವ, ಎಲ್ಲ ಅಂಶಗಳ ಆಧಾರವಾಗಿಟ್ಟುಕೊಂಡೇ ಸುರೇಶ್ ಆತಂಕ ವ್ಯಕ್ತಪಡಿಸಿದ್ದಾರೆ, ಮುಂಬರುವ ವರ್ಷಗಳಲ್ಲಿ ಅಂಥದೊಂದು ಕೂಗು ಕೇಳಿ ಬರಬರಬಹುದು ಅನ್ನೋದು ಅವರ ಮಾತಿನ ತಾತ್ಪರ್ಯ ಆಗಿದೆ ಎಂದರು.

Read More

ಬೆಂಗಳೂರು: ಶಾಸಕ ಬಾಲಕೃಷ್ಣ ಹೇಳಿಕೆ ಮತ್ತು ಕಾಂಗ್ರೆಸ್ (Congress) ನಾಯಕ ಬಿ. ಶಿವರಾಂ ಹೇಳಿಕೆ ಅವರ ವೈಯಕ್ತಿಕವಾದದ್ದು. ಅದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ (G.Parameshwar) ಹೇಳಿದ್ದಾರೆ. ನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ 50% ಕಮಿಷನ್ ಇದೆ ಎಂಬ ಶಿವರಾಂ ಹೇಳಿಕೆ ಹಾಗೂ ಗ್ಯಾರಂಟಿ ರದ್ದು ಮಾಡಲಾಗುತ್ತದೆ ಎಂಬ ಬಾಲಕೃಷ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಸಿಎಂ ಗಮನಕ್ಕೆ ಅವರು ತಂದಿದ್ದರೆ ಸಿಎಂ ಕ್ರಮ ತೆಗೆದುಕೊಳ್ತಾರೆ. ಶಿವರಾಂ ಹೇಳಿಕೆ, ಬಾಲಕೃಷ್ಣ ಹೇಳಿಕೆಗಳು ವೈಯಕ್ತಿಕ ಹೇಳಿಕೆಗಳು. ಅವು ಪಕ್ಷದ ಹೇಳಿಕೆಗಳಲ್ಲ. ಅವರು ಏನೋ ಹೇಳಿರುತ್ತಾರೆ. ಅದು ಅವರ ವಯಕ್ತಿಕ ಅಭಿಪ್ರಾಯ ಎಂದಿದ್ದಾರೆ. ತುಮಕೂರಿನಿಂದ ಮುದ್ದ ಹನುಮೇಗೌಡ ಅವರಿಗೆ ಟಿಕೆಟ್ ನೀಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾರಿಗೆ ಟಿಕೆಟ್ ಎಂದು ಹೈಕಮಾಂಡ್ ತೀರ್ಮಾನ ಮಾಡಲಿದೆ. ಪಕ್ಷದಲ್ಲಿ ಯಾರಿಗೆ ತೀರ್ಮಾನ ಮಾಡಿ ಟಿಕೆಟ್ ಕೊಡ್ತಾರೋ ಅವರಿಗೆ ನಾವು ಕೆಲಸ ಮಾಡುತ್ತೇವೆ. ನಮ್ಮ ಅಭಿಪ್ರಾಯ ಪಕ್ಷಕ್ಕೆ ಹೇಳಿದ್ದೇವೆ ಎಂದಿದ್ದಾರೆ

Read More