Author: AIN Author

ಬೆಂಗಳೂರು: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮಧ್ಯಂತರ ಬಜೆಟ್ ಅನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ವಾಗತಿಸಿದ್ದಾರೆ. ಕೃಷಿ ವಲಯ ಮತ್ತು ಕೃಷಿಧಾನ್ಯಗಳ ಬೆಳೆಗೆ ಉತ್ತೇಜನ, ಉದ್ಯೋಗ ಸೃಷ್ಟಿ, ಯುವ ಉದ್ಯಮಿಗಳಿಗೆ ಪ್ರೋತ್ಸಾಹ, ಉತ್ಪಾದನೆಗೆ ಒತ್ತು ಇತ್ಯಾದಿ ಕಮಗಳು ಸ್ವಾಗತಾರ್ಹ ಎಂದಿರುವ ಅವರು, ದೇಶೀಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಕಲ್ಪ ಮಾಡಿ ಲಕ್ಷದ್ವೀಪ ಸೇರಿ ರಾಜ್ಯದ ಕರಾವಳಿ ಪ್ರವಾಸೋದ್ಯಮದ ಬೆಳವಣಿಗೆಗೆ ಮನ್ನಣೆ ಹಾಕಲಾಗಿದೆ ಎಂದಿದ್ದಾರೆ. ಇದೊಂದು ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕ ಬಜೆಟ್. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಈ ಆಯವ್ಯಯದಲ್ಲಿ ಅಡಗಿದೆ. ಹಿಂದಿನ ಐದು ವರ್ಷದ ಆಡಳಿತದಲ್ಲಿ ಯಾವ ಯಾವ ವಲಯಕ್ಕೆ ಶಕ್ತಿ ತುಂಬಿದ್ದೇವೆ ಅನ್ನುವ ಮಾಹಿತಿಯನ್ನು ಹಣಕಾಸು ಸಚಿವರು ನೀಡಿದ್ದಾರೆ. ಯುವಜನತೆ ಸೇರಿ ಹಲವು ವರ್ಗಕ್ಕೆ ಹೆಚ್ಚಿನ ಆರ್ಥಿಕ ಶಕ್ತಿ ನೀಡುವ ಭರವಸೆ ನೀಡಿದ್ದಾರೆ. ಉತ್ಪಾದನಾ ಕ್ಷೇತ್ರದ ಓಟಕ್ಕೆ ಇಂಬು ಕೊಡಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮಧ್ಯಂತರ ಬಜೆಟ್ ನಲ್ಲಿ ಪ್ರವಾಸೋದ್ಯಮ, ಮೀನುಗಾರಿಕೆಗೆ ಆದ್ಯತೆ…

Read More

ಈಗ ನಾನು ಜೀವನದಲ್ಲಿ ಏನು ಮಾಡಿದರೂ, ಅದಕ್ಕೆ ನಟ ವಿಜಯ್ ದೇವರಕೊಂಡ ಅವರ ಕೊಡುಗೆ ಇದೆ ಎಂದು ನಟಿ ರಶ್ಮಿಕಾ ಮಂದಣ್ಣ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ವಿಜಯ್ ದೇವರಕೊಂಡ ಅವರ ಗೆಳೆತನದ ಬಗ್ಗೆ ಅವರು ಮಾತನಾಡಿದ್ದಾರೆ. ನಾನು ಯಾವ ಕೆಲಸ ಮಾಡಿದರೂ ಅವರ ಸಲಹೆಯನ್ನು ಪಡೆದುಕೊಳ್ಳುತ್ತೇನೆ. ಅವರ ಅಭಿಪ್ರಾಯದಂತೆ ನಾನು ಅದನ್ನು ಮಾಡುತ್ತೇನೆ ಎಂದು ತಿಳಿಸಿದ್ದಾರೆ. ವಿಜಯ್ ಎಲ್ಲದಕ್ಕೂ ಹೌದು ಎಂದು ಒಪ್ಪುವ ವ್ಯಕ್ತಿಯಲ್ಲ. ಅವರ ಅಭಿಪ್ರಾಯ ವಿಚಾರದ ಮೇಲಿರುತ್ತದೆ. ಇದು ಒಳ್ಳೆಯದು, ಒಳ್ಳೆಯದಲ್ಲ. ನಾನು ಏನು ಯೋಚಿಸುತ್ತೇನೋ..? ಏನು ಯೋಚಿಸುವುದಿಲ್ಲವೋ..? ಎಲ್ಲದಕ್ಕೂ ಅವರು ನನಗೆ ಬೆಂಬಲ ನೀಡುತ್ತಾರೆ ಎಂದು ಹೇಳಿದ್ದಾರೆ.

Read More

ಬೆಂಗಳೂರು: ರಾಜ್ಯದಲ್ಲಿ ವಿವಾಹ ನೋಂದಣಿ ಕಾರ್ಯ ಇನ್ನು ಮುಂದೆ ಸುಲಭವಾಗಲಿದೆ. ಹೌದು,ಕರ್ನಾಟಕ ಹಿಂದೂ ಮ್ಯಾರೇಜ್ ಆ್ಯಕ್ಟ್ ಗೆ ತಿದ್ದುಪಡಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದ್ದ ಹಿಂದೂ ಮ್ಯಾರೇಜ್ ರಿಜಿಸ್ಟರ್ ಆಕ್ಟ್ ತಿದ್ದುಪಡಿ ಹಿನ್ನೆಲೆಯಲ್ಲಿ ವಿವಾಹ ನೋಂದಣಿ ಸರಳೀಕರಣವಾಗಲಿದೆ. ಈ ಹಿಂದೆ ನೋಂದಣಿ ಕಚೇರಿಗಳಿಗೆ ಹೋಗಬೇಕಾಗುವ ಪರಿಸ್ಥಿತಿ ‌ಇತ್ತು. ಆದರೆ ಇವಾಗ ಆನ್ಲೈನ್ ಮೂಲಕ ನೊಂದಣಿಗೆ ಅವಕಾಶ ಇದೆ. ಗ್ರಾಮ1,ಕಾವೇರಿ 2, ಬಾಪೂಜಿ ಸೇವಾಕೇಂದ್ರಗಳಲ್ಲಿ ನೋಂದಣಿ ಮಾಡಲು ಅವಕಾಶ ಇದೆ ಎಂದರು. ಸಂಪುಟದ ಪ್ರಮುಖ ನಿರ್ಧಾರಗಳು ಹೀಗಿವೆ *ಹಾಸನ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಮೊತ್ತ 142 ಕೋಟಿಗೆ ಆಡಳಿತಾತ್ಮಕ ಅನುಮೋದನೆ. *ರಾಯಚೂರು ಯುನಿವರ್ಸಿಟಿ ಆವರಣದಲ್ಲಿ ಮಾನವ ಜಿನೋಮ್ ಸಂಸ್ಥೆ ಸ್ಥಾಪನೆಗೆ ಸಂಪುಟ ಒಪ್ಪಿಗೆ. * 104 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಕಲಿಕಾ ವಾತಾವರಣ ಅಭಿವೃದ್ಧಿ ಗೆ 26…

Read More

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮಂಡಿಸಿದ ಮಧ್ಯಂತರ ಬಜೆಟ್‍ನ್ನು (Interim Budget) ಪ್ರಧಾನಿ ನರೇಂದ್ರ ಮೋದಿಯವರು (Narendra Modi) ವಿನೂತನ ಬಜೆಟ್ ಎಂದು ಕರೆದಿದ್ದಾರೆ. ಈ ಬಜೆಟ್ ಯುವ ಭಾರತದ ಯುವ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದ್ದಾರೆ. ಬಜೆಟ್‍ನಲ್ಲಿ ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಂಶೋಧನೆ ಮತ್ತು ಆವಿಷ್ಕಾರಕ್ಕಾಗಿ 1 ಲಕ್ಷ ಕೋಟಿ ರೂ. ನಿಧಿಯನ್ನು ಘೋಷಿಸಲಾಗಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಭರವಸೆಯನ್ನು ಈ ಬಜೆಟ್ ನೀಡುತ್ತದೆ. ಇದು ವಿಕಸಿತ ಭಾರತದ ಎಲ್ಲಾ 4 ಸ್ತಂಭಗಳಾದ ಯುವ, ಗರೀಬ್, ಮಹಿಳಾ ಮತ್ತು ಕಿಸಾನ್ ಅಂಶಗಳನ್ನು ಸಶಕ್ತಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ. https://ainlivenews.com/rbi-gave-a-big-shock-to-paytm-ban-on-transactions-after-february-29/ ಆದಾಯ ತೆರಿಗೆ ವಿನಾಯಿತಿಯಿಂದ ಮಧ್ಯಮ ವರ್ಗದ ಸುಮಾರು 1 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವಾಗಲಿದೆ. ಈ ಬಜೆಟ್‍ನಲ್ಲಿ ರೈತರಿಗಾಗಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಬಡವರು ಮತ್ತು ಮಧ್ಯಮ ವರ್ಗದವರ ಸಬಲೀಕರಣ ಮತ್ತು ಅವರಿಗೆ ಅವಕಾಶಗಳನ್ನು ಸೃಷ್ಟಿಸಲು ಬಜೆಟ್…

Read More

ಬೆಂಗಳೂರು: ಪ್ರತ್ಯೇಕ ರಾಷ್ಟ್ರದ ಹೇಳಿಕೆ ವಿಚಾರ ಸಂಬಂದಿಸಿದಂತೆ ಸಚಿವ HK ಪಾಟೀಲ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಒಬ್ಬ ಮಂತ್ರಿಯಾಗಿ ಇಷ್ಟು ವರ್ಷ ರಾಜಕಾರಣದಲ್ಲಿ ಇರುವವನಾಗಿ ಯಾವುದೇ ರಾಜ್ಯಕ್ಕೆ ಗದ ಪ್ರಹಾರ ಮಾಡುವ ನೀತಿ ಖಂಡನೀಯ ಎಂದು ಕಿಡಿ ಕಾರಿದ್ದಾರೆ. ಯಾವ ಕಾರಣಕ್ಕೆ ಕರ್ನಾಟಕಕ್ಕೆ ಇಷ್ಟು ಪ್ರಮಾಣದ ಕಡಿಮೆ ಹಣ ಕೊಡ್ತೀರಿ? ಬಿಡುಗಡೆ ಯಾವಾಗ ಮಾಡ್ತೀರಿ? ಇಷ್ಟು ದೊಡ್ಡ ಪ್ರಮಾಣದ ಬರ ಇದ್ದಾಗಲೂ ನಯಾ ಪೈಸೆ ಪರಿಹಾರ ಕೊಡಲಿಲ್ಲ ಇದು ಯಾವ ಧೋರಣೆ? ಒಕ್ಕೂಟ ವ್ಯವಸ್ಥೆಯಲ್ಲಿ ವಿಶ್ವಾಸ ಕುದುರಬೇಕೇ ಹೊರತು ವಿಶ್ವಾಸ ಕುಂದಬಾರದು ಎಂದರು. ಎಲ್ಲಿ ಹೆಚ್ಚು ಶ್ರಮ ಇದೆ ಆ ರಾಜ್ಯಕ್ಕೆ ನ್ಯಾಯಯುತ ಪಾಲು ಸಿಗಬೇಕು ಆರ್ಥಿಕತೆಯ ವಿಚಾರದಲ್ಲೂ ರಾಜಕೀಯವೇ ಮಾಡುವುದಾದರೆ ಯಾವ ರೀತಿಯಿಂದ ರಾಜ್ಯಗಳ ವಿಶ್ವಾಸಾರ್ಹತೆ ಕುದುರಿಸಿಕೊಳ್ಳುತ್ತೀರಿ? ಎಂದು ಹೇಳಿದರು.

Read More

ಶಿವಮೊಗ್ಗ: ಶಿವಮೊಗ್ಗದ ಲಯನ್​ ಸಫಾರಿ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮ ದಲ್ಲಿ ಸಿಂಹವೊಂದು ಸಾವನ್ನಪ್ಪಿದೆ. 13 ವರ್ಷದ ಸರ್ವೇಶ ಸಾವನ್ನಪ್ಪಿರುವ ಸಿಂಹ. ಇದು ಬನ್ನೇರುಘಟ್ಟದಿಂದ ಶಿವಮೊಗ್ಗಕ್ಕೆ ಶಿಫ್ಟ್ ಆಗಿತ್ತು. ಕಳೆದ ನಾಲ್ಕು ವರ್ಷಗಳಿಂದ ಲಯನ್ ಸಫಾರಿಯಲ್ಲಿ ಪ್ರವಾಸಿಗರ ವೀಕ್ಷಣೆಗೆ ಕಾಣಿಸಿಕೊಂಡಿತ್ತು. ಈ ಸಿಂಹ ಸಾವನ್ನಪ್ಪಿರುವ ಬಗ್ಗೆ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.  ಮಂಗಳವಾರವೂ ಸಹ ಆರಾಮಾಗಿದ್ದ ಸಿಂಹವೂ ನಿನ್ನೆ ವಾಂತಿ  ಮಾಡಿಕೊಂಡಿತ್ತು. ತಕ್ಷಣವೇ ಪಶುವೈದ್ಯಕೀಯ ಕಾಲೇಜಿನಲ್ಲಿ ಸಿಂಹಕ್ಕೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ. ಸಿಂಹಗಳ ವಾಡಿಕೆ ವಯಸ್ಸಿನ ಗಡಿಯಲ್ಲಿದ್ದ ಸಿಂಹ ಹಿಮೋ ಫ್ರೋಟೋಜೋನ್ ಎಂಬ ಕಾಯಿಲೆಯಿಂದ ಬಳಲುತ್ತಿತ್ತು. ಈ ಸೋಂಕು ಕಾಣಿಸಿಕೊಳ್ಳುವ ಪ್ರಾಣಿಗಳನ್ನು ಉಳಿಸಿಕೊಳ್ಳುವುದು ಕಷ್ಟ ಎನ್ನುತ್ತಾರೆ ವನ್ಯಜೀವಿ ತಜ್ಞರು. ರಕ್ತಕಣಗಳನ್ನು ನಾಶಮಾಡುತ್ತಾ ಬರುವ ಸೋಂಕು ಅಂತಿಮವಾಗಿ ಪ್ರಾಣಿಯನ್ನು ಬಲಿತೆಗೆದುಕೊಳ್ಳುತ್ತದೆ. ಅನಾರೋಗ್ಯದ ಲಕ್ಷಣ ಕಾಣಿಸಿಕೊಳ್ಳುವುದಕ್ಕೂ ಮೊದಲೇ ಕಾಯಿಲೆ ಉಲ್ಬಣಗೊಂಡಿರುತ್ತದೆ. ಸರ್ವೇಶ ಸಿಂಹವೂ ಪ್ರವಾಸಿಗರ ಫೇವರಿಟ್ ಸಿಂಹವಾಗಿತ್ತು. ವಯಸ್ಸು ಹಾಗೂ ಅನಾರೋಗ್ಯದ ಹಿನ್ನೆಲೆಯಲ್ಲಿ ಸಾವನ್ನಪ್ಪಿದೆ ಎಂದು…

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆರ್ಥಿಕತೆಗೆ ಬೂಸ್ಟ್‌ ನೀಡಿದರೆ, ಸಿದ್ದರಾಮಯ್ಯ ಅವರು ಗಂಡನ ಹಣವನ್ನು ಕಿತ್ತು ಹೆಂಡತಿಗೆ ಕೊಡುತ್ತಾರಾ ಎಂದು ವಿಪಕ್ಷನಾಯಕ ಆರ್​.ಅಶೋಕ್​ ಪ್ರಶ್ನೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್‌ ಉತ್ತಮವಾಗಿದೆ. ಭಾರತದ ತಂತ್ರಜ್ಞಾನ ಹಾಗೂ ಆರ್ಥಿಕತೆಯ ಏಳ್ಗೆಗೆ ಇದು ಸಹಕಾರಿಯಾಗಿದೆ. ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಹೆಸರಲ್ಲಿ ಬಜೆಟ್ ಮಂಡನೆಯಾಗಿದೆ. ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಬಜೆಟ್ ಅನ್ನು ಮಂಡಿಸಿಲ್ಲ. ಸರ್ವರ ಏಳ್ಗೆಗೆ, ಬಡವರ ಏಳ್ಗೆಗೆ ಮಂಡನೆಯಾಗಿರುವ ಬಜೆಟ್ ಇದಾಗಿದೆ. ಏಳು ಲಕ್ಷ ರೂಪಾಯಿವರೆಗೂ ತೆರಿಗೆ ಇಲ್ಲ. ಒಂದು ಲಕ್ಷ ಕುಟುಂಬಕ್ಕೆ ಸೋಲಾರ್ ಎನರ್ಜಿ ಬಳಕೆಗೆ ಒತ್ತು ನೀಡಲಾಗಿದೆ. ದೇಶದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಯೋಜನೆಯನ್ನು ನೀಡಲಾಗಿದೆ. 9-15 ವರ್ಷದ ಮಕ್ಕಳಿಗೆ ಉಚಿತ ಲಸಿಕೆ ನೀಡಲು ತೀರ್ಮಾನ ಮಾಡಲಾಗಿದೆ. ಮೀನುಗಾರಿಕೆಗೆ ಪ್ರತ್ಯೇಕ ವಸತಿ ನೀಡಲು ಮುಂದಾಗಲಾಗಿದೆ ಎಂದು ವಿವರಿಸಿದರು.

Read More

ಬೆಂಗಳೂರು: ಬಿಜೆಪಿ-ಜೆಡಿಎಸ್‌ನವರು ಮಂಡ್ಯಕ್ಕೆ ಬೆಂಕಿ ಹಚ್ಚೋ ಪ್ರಯತ್ನ ಮಾಡ್ತಿದ್ದಾರೆ. ಆದರೆ ಮಂಡ್ಯದಲ್ಲಿ ಬೆಂಕಿ ಹಚ್ಚೋಕೆ ಸಾಧ್ಯವಿಲ್ಲ ಅಂತ ಸಚಿವ ಚೆಲುವರಾಯಸ್ವಾಮಿ (Chaluvaraya Swamy) ತಿರುಗೇಟು ನೀಡಿದ್ದಾರೆ. ಕೆರಗೋಡು ಹನುಮಧ್ವಜ ವಿವಾದ (Hanuman Flag Controversy) ಘಟನೆ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾವು ಹಿಂದೂ ವಿರೋಧಿ ಅಲ್ಲ, ಯಾವುದೇ ಧ್ವಜದ ವಿರೋಧಿಗಳೂ ಅಲ್ಲ. ಪಂಚಾಯತಿಯಲ್ಲಿ ರಾಷ್ಟ್ರ ಧ್ವಜ, ನಾಡ ಧ್ವಜಕ್ಕೆ ಅನುಮತಿ ಕೊಟ್ಟಿದ್ದರು, ಆದ್ರೆ ಬೇರೆ ಧ್ವಜ ಹಾರಿಸಿದ್ದಾರೆ. ಪಂಚಾಯತಿಯಲ್ಲಿ ನಿರ್ಣಯವನ್ನ ವಜಾ ಮಾಡಿದ್ದಾರೆ. ಜ.26ರಂದು ರಾಷ್ಟ್ರಧ್ವಜ ಹಾರಿಸಿ ಸಂಜೆ ಇಳಿಸಿದ್ದಾರೆ. ಮಂಡ್ಯದಲ್ಲಿ ಅನೇಕ ಜನರು ಶಾಂತಿ ಹಾಳುಮಾಡೋಕೆ ಬರೋದು ಬೇಡ, ಮಂಡ್ಯದ ನೆಮ್ಮದಿ ಹಾಳು ಮಾಡಬೇಡಿ ಅಂತ ಕೇಳಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಗ್ರಾಮದ ಮುಖಂಡರೊಂದಿಗೆ ಮಾತುಕತೆ ನಡೆಸಲು ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ. ಬಿಜೆಪಿ-ಜೆಡಿಎಸ್ ಅವರು ಜನರನ್ನ ಪ್ರವೋಕ್ ಮಾಡ್ತಿದ್ದಾರೆ. ಕುಮಾರಸ್ವಾಮಿ (HD Kumaraswamy) ಮತ್ತು ಅಶೋಕ್ (R Ashok) ತೀಟೆ ಮಾಡೋಕೆ ಹೋಗ್ತಿದ್ದಾರೆ. ಮಂಡ್ಯದಲ್ಲಿ ಇದು ನಡೆಯಲ್ಲ. ಬಂದ್ ಬೇಡ…

Read More

ಬೆಂಗಳೂರು: ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ರಣೋತ್ಸಾಹದಲ್ಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಅನಿರೀಕ್ಷಿತವಾದ ಸೋಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ದೇಶದಲ್ಲಿ ಬಿಜೆಪಿ ಅಲೆ ಎದ್ದಿದೆ ಎಂದು ತಿಳಿಸಿದರು. ಉಚಿತ ಗ್ಯಾರಂಟಿ ಮೂಲಕ ಜನರ ಕಣ್ಣಿಗೆ ಮಣ್ಣೇರಚಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿ 500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡವರ, ರೈತ ವಿರೋಧಿ ಸರ್ಕಾರ ಇದು. ಯುವಕರನ್ನ ಭಿಕ್ಷುಕರ ತರ ಕಾಣುತ್ತಿದೆ ಈ ಸರ್ಕಾರ ಎಂದು ಕಾಂಗ್ರೆಸ್​ ವಿರುದ್ಧ ಗುಡುಗಿದರು. ರಾಜ್ಯ ಕಾಂಗ್ರೆಸ್​ ಸರ್ಕಾರ ಯಾವುದೇ ಹೊಸ ಯೋಜನೆ ಕೊಟ್ಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ಗ್ಯಾರಂಟಿ ಬಂದ್ ಮಾಡ್ತಿವಿ ಅಂತ ಕಾಂಗ್ರೆಸ್​ ಶಾಸಕರೇ ಹೇಳುತ್ತಾರೆ. ಇದು ಮಾಗಡಿ ಶಾಸಕರ ಮಾತಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನರೇ ಧಮ್ಕಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್​ ಮಕ್ಮಲ್ ಟೋಪಿ ಹಾಕುತ್ತಿದೆ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಹಾಗೂ ಜೆಡಿಎಸ್…

Read More

ಬೆಂಗಳೂರು: ಇತ್ತೀಚೆಗೆ ಹಂಪಿಯಲ್ಲಿ ಡ್ರೆಸ್ ಕೋಡ್ (Dress Code Temple) ಜಾರಿ ಮಾಡಲಾಗಿತ್ತು. ಆದರೆ ಇದೀಗ ದೇಗುಲಗಳಲ್ಲಿ ವಸ್ತ್ರಸಂಹಿತೆ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸುವುದರ ಜೊತೆಗೆ ವಿವಾದಾತ್ಮಕ ಹೇಳಿಕೆಯೊಂದನ್ನು ಕೂಡ ನೀಡಿದ್ದಾರೆ. ಬುಧವಾರ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಬಗ್ಗೆ ಹಿರಿಯ ಸಾಹಿತಿ ಮರುಳಸಿದ್ಧಪ್ಪ ಅವರು ಸಿಎಂ ಮುಂದೆಯೇ ಅಕ್ಷೇಪ ವ್ಯಕ್ತಪಡಿಸಿದ್ದರು. ಮೈತುಂಬಾ ಬಟ್ಟೆ ಹಾಕಿಕೊಂಡು ಹೋಗಬೇಕು ನಿಜ. ಹಾಗಂತ‌ ಮಹಿಳೆಯರು ಸೀರೆ, ಪುರುಷರು ಪಂಚೆ ಉಡಬೇಕು ಅನ್ನೋದು ಯಾಕೆ? ಇದು ಪ್ರಜಾಪ್ರಭುತ್ವ ತತ್ವಕ್ಕೆ ಮಾರಕ ಅಂತಾ ಮರುಳ ಸಿದ್ಧಪ್ಪ ಆಕ್ಷೇಪ ಎತ್ತಿದರು. ಇದಾದ ಬಳಿಕ ವೇದಿಕೆಯಲ್ಲಿಯೇ ಸ್ಪಷ್ಟೀಕರಣ ನೀಡಿದ ಸಿಎಂ, ನಮ್ಮ ಮುಜರಾಯಿ ಇಲಾಖೆ ಈ ತೀರ್ಮಾನ ಎಲ್ಲಾ ಮಾಡಿಲ್ಲ. ಇಂಥದ್ದೇ ಡ್ರೆಸ್ ಹಾಕಬೇಡಿ ಅಥವಾ ಹಾಕಿ ಅನ್ನೋದು ತಪ್ಪು. ಶರ್ಟ್, ಪ್ಯಾಂಟ್ ಧರಿಸಿಕೊಂಡು ಹೋಗಬೇಡಿ, ಸೀರೆ ಹಾಕ್ಕೊಂಡು ಹೋಗಿ ಅಂತಾ ಹೇಳೋದು ಸರಿಯಲ್ಲ. ನಾವು ಇಂಥದ್ದೇ ಡ್ರೆಸ್ ಹಾಕಿಕೊಳ್ಳಿ ಅಥವಾ ಬಟ್ಟೆ ಬಿಚ್ಚಾಕ್ಕೊಂಡು ಬನ್ನಿ ಅಂತಾ…

Read More