Author: AIN Author

ಬೆಂಗಳೂರು: ರಾಜ್ಯ ಬಜೆಟ್ ಗೂ ಮೊದಲೇ ಕಾಂಗ್ರೆಸ್ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ಕಾವೇರಿದ್ದು ಹಲವು ಬೇಡಿಕೆ ಮುಂದಿಟ್ಟು ಸರ್ಕಾರದ ವಿರುದ್ಧ ಕಾರ್ಮಿಕರ ಪ್ರತಿಭಟನೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಹೋರಾಟ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಕಟ್ಟಡ,‌ ಕಾರ್ಖನೆ ಕಾರ್ಮಿಕರು ಸೇರಿ ಸಾವಿರಾರು ಕಾರ್ಮಿಕರಿಂದ ಅಲ್ ಇಂಡಿಯಾ ಟ್ರೆಡ್ ಯೂನಿಯನ್ ಕಾಂಗ್ರೆಸ್ ವತಿಯಿಂದ ಧರಣಿ. ಬೇಡಿಕೆಗಳೇನು? 1. ಕನಿಷ್ಠ ವೇತನ ಕಾನೂನು ಬದ್ಧವಾಗಿ ₹31.500/- ಕ್ಕೆ ನಿಗದಿಗೊಳಿಸಿ 2. ಅಂಗನವಾಡಿ, ಬಿಸಿ ಊಟ ಹಾಗೂ ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ಹೆಚ್ಚಿಸಿ 3. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಸೌಲಭ್ಯಗಳ ಕಡಿತ ನಿಲ್ಲಿಸಿ 4 ಸೆಸ್ ಸಂಗ್ರಹ ಹೆಚ್ಚಿಸಿ ಹಾಗೂ ಕಲ್ಯಾಣ ಮಂಡಳಿಯ ಲೆಕ್ಕ ಪತ್ರಗಳ ಶ್ವೇತ ಪತ್ರವನ್ನು ಕೂಡಲೇ ಬಿಡುಗಡೆ ಮಾಡಿ 5. ಕೆಲಸದ ಅವಧಿಯ ತಿದ್ದುಪಡಿ ಮಾಡಿ, 8 ಗಂಟೆಗಳಿಗೆ ಮರುಸ್ಥಾಪಿಸಿ 6. ಕಾರ್ಮಿಕರ ತುಟ್ಟಿ ಭತ್ಯೆವನ್ನು (2015-18) ನೀಡಲು ಕೂಡಲೆ ಕ್ರಮ ವಹಿಸಬೇಕು. 6. ತೋಟದ…

Read More

ಬೆಂಗಳೂರು: ಜಯದೇವ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ ಅವರು ಆಯ್ಕೆಯಾಗಿದ್ದಾರೆ. 69 ವಯಸ್ಸಾಗಿರುವ ಡಾ.ರವೀಂದ್ರನಾಥ್ ಅವರು ಜಯದೇವ ಆಸ್ಪತ್ರೆಯಲ್ಲಿ ಪ್ರಾಧ್ಯಾಪಕರಾಗಿದ್ದರು. ಇದೀಗ ಇಂದು ಜಯದೇವ ಆಸ್ಪತ್ರೆ (Jayadeva Hospital) ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ (Dr C.N Manjunath) ಅವಧಿ ಮುಕ್ತಾಯ ಹಿನ್ನೆಲೆ ಅವರ ಸ್ಥಾನಕ್ಕೆ ಡಾ.ರವೀಂದ್ರನಾಥ್ (Dr Ravindranath) ಅವರನ್ನು ನೇಮಿಸಲಾಗಿದೆ. ಡಾ.ಸಿ.ಎನ್ ಮಂಜುನಾಥ್ (Dr CN Manjunath ಅವರ ಸೇವಾವಧಿ ಇಂದಿಗೆ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಮಂಗಳವಾರ ಜಯದೇವ ಆಸ್ಪತ್ರೆ (Jayadeva Hospital) ಸಿಬ್ಬಂದಿ ಹೃದಯಪೂರ್ವಕ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಿದ್ದರು. ಈ ವಿಶೇಷ ಕಾರ್ಯಕ್ರಮದಲ್ಲಿ ನೂರಾರು ಸಿಬ್ಬಂದಿ ಮಂಜುನಾಥ್ ಅವರಿಗೆ ಅಭಿನಂದನೆ ಸಲ್ಲಿಸುವುದರ ಜೊತೆಗೆ ಆರತಿ ಬೆಳಗಿ ಗೌರವಿಸಿದ್ದರು. ನಾವು ಪಂಚತಾರಾ ಖಾಸಗಿ ಆಸ್ಪತ್ರೆಯಂತೆ ಮಾಡುವ ಗುರಿ ಇತ್ತು. ಅದು 100 ಕ್ಕೆ100 ಆಗಿದೆ. ಇಲ್ಲಿ ಪ್ರತಿಯೋಬ್ಬರಿಗೂ ಸೇವಾ ಮನೋಭಾವ ಬೆಳಸಲಾಗಿದೆ. ಸರ್ಕಾರದ ಸಹಕಾರ, ದಾನಿಗಳ ಸಹಕಾರದಿಂದ ಇವತ್ತು ಈ ಮಟ್ಟಕ್ಕೆ ಆಸ್ಪತ್ರೆ ಬೆಳೆದಿದೆ. ನಾನು ಇಲ್ಲಿಗೆ ಬಂದಾಗ 300 ಹಾಸಿಗೆ ಇತ್ತು, ಈಗ…

Read More

ಬೆಂಗಳೂರು: ರಾಜ್ಯಸಭೆ ಚುನಾವಣೆ (Rajya Sabha Election) ಘೋಷಣೆಯಾಗಿದ್ದು, ಆ ಸ್ಥಾನಕ್ಕೆ ಮಲೆನಾಡು ಮತ್ತು ಕರಾವಳಿ ಭಾಗದ ಸಮಸ್ಯೆಗಳಿಗೆ ಧ್ವನಿಯಾಗುವ ಕಾಂಗ್ರೆಸ್‌ನ (Congress) ಹಿರಿಯ ನಾಯಕ ಬಿ.ಎಲ್.ಶಂಕ‌ರ್ (BL Shankar) ಅವರನ್ನು ಆಯ್ಕೆ ಮಾಡಬೇಕು ಎಂದು ಮಲೆನಾಡು ಕರಾವಳಿ ಜನಪರ ಒಕ್ಕೂಟ ಸಂಘಟನೆ ಒತ್ತಾಯಿಸಿದೆ. ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಲೆನಾಡು ಕರಾವಳಿ ಜನಪರ ಒಕ್ಕೂಟದ ಸದಸ್ಯರು ಮಲೆನಾಡು ಹಾಗೂ ಕರಾವಳಿಯಲ್ಲಿ ಅರಣ್ಯ ಇಲಾಖೆ, ಕಸ್ತೂರಿ ರಂಗನ್ ವರದಿ, ಹಳದಿ ಎಲೆ ರೋಗ ಸೇರಿ ಹಲವು ಸಮಸ್ಯೆಗಳು ಬಾಧಿಸುತ್ತಿವೆ.ಹಾಲಿ ಸಂಸದರುಗಳು ಜನರಿಗೆ, ರೈತರಿಗೆ ನ್ಯಾಯ ದೊರಕಿಸುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ರಾಷ್ಟ್ರ ಮಟ್ಟದಲ್ಲಿ ಇಲ್ಲಿನ ಸಮಸ್ಯೆಯನ್ನು ಬಿಂಬಿಸಿ ನ್ಯಾಯ ದೊರಕಿಸಲು ಬಿ.ಎಲ್.ಶಂಕರ್ ಅವರನ್ನು ಕಾಂಗ್ರೆಸ್‌ನಿಂದ ರಾಜ್ಯಸಭೆ ಸದಸ್ಯರಾಗಿ ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಬಿ.ಎಲ್.ಶಂಕರ್ ಅವರ ಶ್ರಮವನ್ನು ಮರೆಯುವಂತಿಲ್ಲ. ಆದ್ದರಿಂದ ಕಾಂಗ್ರೆಸ್‌ನಿಂದ ಶಂಕರ್‌ ಅವರನ್ನು ಅಯ್ಕೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದಿದ್ದಾರೆ. ಎಐಸಿಸಿ ಅಧ್ಯಕ್ಷ…

Read More

ಬಿಗ್ ಬಾಸ್ (Bigg Boss)ನಿಂದ ಏನೆಲ್ಲ ಆಗಬಹುದು ಎನ್ನುವುದಕ್ಕೆ ಸಾಕಷ್ಟು ಉದಾಹರಣೆಗಳು ಈಗಾಗಲೇ ಇವೆ. ಇದೀಗ ಅಚ್ಚರಿ ಪಡುವಂಥ ಸಂಗತಿಯೊಂದು ಕನ್ನಡ ಬಿಗ್ ಬಾಸ್ ನಿಂದಾಗಿ ನಡೆದಿದೆ. ಹಲವರು ವರ್ಷಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಬಿಗ್ ಬಾಸ್ ನಿಂದಾಗಿ ತೃತೀಯ ಲಿಂಗಿಯಾಗಿ (Transgender) ಪತ್ತೆಯಾಗಿದ್ದಾರೆ. ನಿಜಕ್ಕೂ ಇದು ರೋಚಕ ಘಟನೆಯೇ ಸರಿ. ರಾಮನಗರ ಮೂಲದ ವ್ಯಕ್ತಿ ಲಕ್ಷ್ಮಣ್ ರಾವ್ (Laxman Rao), ಕಳೆದ ಏಳು ವರ್ಷಗಳ ಹಿಂದೆ ಸಾಲ ಮಾಡಿದ್ದರು. ಸಾಲವನ್ನು ತೀರಿಸಲಾಗದೇ ಊರು ಬಿಟ್ಟು ಹೋಗಿದ್ದರು. ಇಬ್ಬರು ಮಕ್ಕಳು ಮತ್ತು ಪತ್ನಿ ಕಂಗಾಲಾಗಿದ್ದರು. ಲಕ್ಷ್ಮಣ್ ರಾವ್ ನಾಪತ್ತೆ ಕುರಿತಂತೆ ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಪತ್ತೆಯಾಗಿ ಪೋಲಿಸರು ಸಾಕಷ್ಟು ಪ್ರಯತ್ನ ಕೂಡ ಪಟ್ಟಿದ್ದರು. ಈ ಲಕ್ಷ್ಮಣ್ ರಾವ್ ಸಿಕ್ಕಿದ್ದೇ ಒಂದು ರೋಚಕ. ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ತೃತೀಯ ಲಿಂಗಿ ನೀತು (Neetu) ಎಂಟ್ರಿ ಕೊಟ್ಟಾಗ ಅವರನ್ನು ಸ್ವಾಗತಿಸಲು ಲಕ್ಷ್ಮಣ್ ರಾವ್ ಕೂಡ ಹೋಗಿದ್ದರು. ಸನ್ಮಾನ ಮಾಡುವ…

Read More

ಮತ್ತೊಂದು ಹೊಸ ತನದ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿ ತಯಾರಾದ ಸಂತೋಷ್ ಕೊಡೆಂಕೇರಿ (Santhosh Kodenkeri) ನಿರ್ದೇಶನದ ರವಿಕೆ ಪ್ರಸಂಗ (Ravike Prasanga) ಸಿನಿಮಾವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಿ ಯು-ಎ ಸರ್ಟಿಫಿಕೇಟ್ ನೀಡಿದೆ.ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡು (Release) ಜನರಿಂದ ಮೆಚ್ಚುಗೆ ಗಳಿಸಿದೆ. ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್‌ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ  ‘ರವಿಕೆ ಪ್ರಸಂಗ’. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸ‌ರ್ ಮತ್ತು ಟ್ರೈಲರ್  ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ರವಿಕೆ ಅಂದರೆ ಬ್ಲೌಸನ್ನು ಪ್ರಮುಖವಾಗಿ ಇಟ್ಟುಕೊಂಡು ಕೌಟುಂಬಿಕ ಕಥಾ ಹಂದರದಿಂದ ಹಾಸ್ಯಭರಿತ ಉತ್ತಮ ಸಂದೇಶವನ್ನು ಸಮಾಜಕ್ಕೆ ತಿಳಿಸುವ ಪ್ರಯತನವನ್ನು ನಿರ್ದೇಶಕರು ರವಿಕೆಪ್ರಸಂಗ ಸಿನಿಮಾದಲ್ಲಿ ಮಾಡಿದ್ದಾರೆ. ದೃಷ್ಟಿ ಮೀಡಿಯಾ’ ಪ್ರೊಡಕ್ಷನ್‌ನಡಿ ಚಿತ್ರ ನಿರ್ಮಾಣವಾಗಿದೆ. ಚಿತ್ರದ ರವಿಕೆ ಸಾಂಗ್ ಅನ್ನು ಚೈತ್ರಾ ಹಾಗೂ ಚೇತನ್ ನಾಯಕ್ ಹಾಡಿದ್ದಾರೆ. ಮನಸಲಿ ಜೋರು ಕಲರವ ಹಾಡನ್ನು…

Read More

ಬೆಂಗಳೂರು: ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮಂತ್ರದಡಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಹಾಗೆ ಈ ಬಜೆಟ್ ಬಡವರು, ರೈತರು, ಮಧ್ಯಮ ವರ್ಗಕ್ಕೆ‌ ಪೂರಕವಾಗಿದ್ದು ಇದೊಂದು ಆಶಾದಾಯಕವಾಗಿದೆ ಹಾಗೆ ಚಾರಿತ್ರಿಕ ಬಜೆಟ್ ಆಗಿದೆ ಎಂದು ಎಂದು ಪರಿಷತ್‌ ಸದಸ್ಯ ಟಿ.ಎ.ಶರವಣ ಅವರು ತಿಳಿಸಿದ್ದಾರೆ. ಆರ್ಥಿಕ ಸ್ಥಿರತೆ, ಸಮಗ್ರ ಅಭಿವೃದ್ದಿ, ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡುವ, ಬಡವರು, ರೈತರು, ಮಾಧ್ಯಮ ವರ್ಗಕ್ಕೆ ಸ್ಪಂದಿಸುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2024-2 5ನೆ ಸಾಲಿನ ಬಜೆಟ್ ಪ್ರಗತಿಗೆ ಪೂರಕವಾಗಿದೆ ಎಂದು ತಿಳಿಸಿದ್ದಾರೆ ಹಾಗೆ  ಕೈಗಾರಿಕೆ, ಉದ್ಯೋಗ ಸೃಷ್ಟಿ, ಬಡತನ ನಿವಾರಣೆ, ರೈತರ ಪ್ರಗತಿ ಹೀಗೆ ಸರ್ವತೋ ಮುಖಿ ಮತ್ತು ಸರ್ವ ಸ್ಪರ್ಶಿಯಾಗಿರುವ ಈ ಬಜೆಟ್ ಭಾರತದ ಭವಿಷ್ಯತ್ತಿನ ದೃಷ್ಟಿಯಿಂದ ಸುಸ್ಥಿರ ವಾಗಿದೆ. ಐದು ಟ್ರಿಲಿಯನ್ ಡಾಲರ್ ಎಕಾನಮಿ ಎನ್ನುವುದು ಭಾರತವನ್ನು ವಿಶ್ವದ ಬಲಿಷ್ಠ ರಾಷ್ಟ್ರ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಆಗಿದ್ದು, ಆ ದಿಕ್ಕಿನಲ್ಲಿ…

Read More

ನವದೆಹಲಿ: ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಕೇಂದ್ರ ಬಜೆಟ್ ನ್ನು ಇಂದು ಮಂಡನೆ ಮಾಡಿದ್ದು,  ಈ ಮೂಲಕ ಮೊರಾರ್ಜಿ ದೇಸಾಯಿ ಬಳಿಕ ಸತತ 6 ಬಾರಿ ಕೇಂದ್ರ ಬಜೆಟ್‌ ಮಂಡಿಸಿದ ವಿತ್ತ ಮಂತ್ರಿಯಾಗಿ ದಾಖಲೆ ಬರೆದಿದ್ದಾರೆ. ಅಲ್ಲದೆ, 2019ರಿಂದ ಈವರೆಗೆ ಪೂರ್ಣಾವಧಿ ವಿತ್ತ ಮಂತ್ರಿಯಾಗಿ ಕೆಲಸ ಮಾಡಿದ ದೇಶದ ಮೊದಲ ಮಹಿಳೆ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ. ಸತತ ಐದು ಬಜೆಟ್‌ಗಳನ್ನು ಮಂಡಿಸಿರುವ ಮನಮೋಹನ್ ಸಿಂಗ್‌, ಅರುಣ್‌ ಜೇಟ್ಲಿ, ಪಿ.ಚಿದಂಬರಂ ಹಾಗೂ ಯಶವಂತ್‌ ಸಿನ್ಹಾ ಅವರ ದಾಖಲೆಗಳನ್ನೂ ನಿರ್ಮಲಾ ಸೀತಾರಾಮನ್ ಅವರು ಮುರಿದಿದ್ದಾರೆ. ಇದು ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಆಗಿದ್ದು, ಚುನಾವಣೆಗೂ ಮುನ್ನ ಮಂಡಿಸಲಿರುವ ಬಜೆಟ್ ಆಗಿರುವುದರಿಂದ ಇದು ಪೂರ್ಣ ಪ್ರಮಾಣದ ಬಜೆಟ್ ಆಗಿರದೆ ಮಧ್ಯಂತರ ಬಜೆಟ್ ಆಗಿದೆ. https://ainlivenews.com/rbi-gave-a-big-shock-to-paytm-ban-on-transactions-after-february-29/ ಆರ್ಥಿಕ ವರ್ಷದ ಬಜೆಟ್ ಮಂಡಿಸಿಲು ಅವರು ತಗೆದುಕೊಂಡಿದ್ದ ಕೇವಲ 1 ಗಂಟೆ ಮಾತ್ರ ಇದು ಅತಿ ಕಡಿಮೆ ಅವಧಿಯ ಬಜೆಟ್ ಮಂಡನೆ…

Read More

ರಸ್ತೆ ತುಂಬಾ ಜನರು. ತಿರುಪತಿ (Tirupati) ತಿಮ್ಮಪ್ಪನ ದರ್ಶನಕ್ಕೆ ಹೋಗುತ್ತಿದ್ದವರೆಲ್ಲ ಟ್ರಾಫಿಕ್ ಜಾಮ್ ನಿಂದ ಪರದಾಡಬೇಕಾಯಿತು. ಈ ನಡುವೆ ಭಿಕ್ಷಕುನಂತೆ ಬೀದಿ ಬೀದಿಯಲ್ಲಿ ಅಲೆಯುತ್ತಿದ್ದರು ತಮಿಳಿನ ಖ್ಯಾತ ನಟ ಧನುಷ್ (Dhanush). ಅವರ ನಟನೆ 51ನೇ ಸಿನಿಮಾ ತಿರುಪತಿಯಲ್ಲಿ ನಡೆಯುತ್ತಿದ್ದು, ಭಿಕ್ಷುಕನಂತೆ ಕಾಣುತ್ತಿದ್ದ ದೃಶ್ಯವನ್ನು ಬೀದಿಯಲ್ಲಿ ಸೆರೆ ಹಿಡಿಯಲಾಗಿದೆ. ಬೀದಿಯಲ್ಲಿ ಚಿತ್ರೀಕರಣ (Shooting) ಮಾಡುತ್ತಿದ್ದರಿಂದ ವಾಹನ ಸವಾರರು ಕಿರಿಕಿರಿ ಅನುಭವಿಸಿದ್ದಾರೆ. ಚಿತ್ರತಂಡಕ್ಕೆ ಹಿಡಿಶಾಪ ಹಾಕಿದ್ದಾರೆ. ಪೊಲೀಸರು ಶೂಟಿಂಗ್ ನಿಲ್ಲಿಸುವಂತೆ ಸೂಚನೆ ಕೊಟ್ಟಿದ್ದಾರೆ. ಇಷ್ಟೆಲ್ಲ ನಡೆದರೂ, ಚಿತ್ರೀಕರಣ ಯಶಸ್ವಿಯಾಗಿದೆ ಎನ್ನುವುದು ಸಮಾಧಾನ ತರುವಂಥದ್ದು. ಇದೊಂದು ಮಾಫಿಯಾ ಕಥೆಯನ್ನು ಹೊಂದಿರುವ ಸಿನಿಮಾವಾಗಿದ್ದು, ಕನ್ನಡದ ಕುವರಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಮೂಲಕ ಮತ್ತೊಂದು ತಮಿಳು ಚಿತ್ರವನ್ನು ಅವರು ಒಪ್ಪಿಕೊಂಡಿದ್ದಾರೆ. ಶೂಟಿಂಗ್ ಮುಗಿಯುತ್ತಿದ್ದಂತೆಯೇ ಚಿತ್ರತಂಡ ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡು ವಾಪಸ್ಸು ಚೆನ್ನೈಗೆ ತೆರೆಳಿದೆಯಂತೆ. ಬೀದಿಯಲ್ಲಿ ಶೂಟಿಂಗ್ ಮಾಡುತ್ತಿರುವ ವಿಡಿಯೋ ಸಖತ್ ವೈರಲ್ ಕೂಡ ಆಗಿದೆ.

Read More

ನವದೆಹಲಿ: ಗರ್ಭಕೋಶ ಕ್ಯಾನ್ಸರ್‌ ತಡೆಗಾಗಿ ಕೇಂದ್ರ ಸರ್ಕಾರವು ಉಚಿವಾಗಿ ಲಸಿಕೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. 9-14 ವರ್ಷದ ಬಾಲಕಿಯರಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್‌ ಘೋಷಿಸಿದರು. ಇನ್ನೂ ಹಣಕಾಸು ಸಚಿವರು, ಮುಂಬರುವ ರಾಷ್ಟ್ರೀಯ ಚುನಾವಣೆಯಲ್ಲಿ ನರೇಂದ್ರ ಮೋದಿ (Narendra Modi) ಸರ್ಕಾರ ಮತ್ತೊಮ್ಮೆ ಆಯ್ಕೆಯಾಗಲಿದೆ. ಕೇಂದ್ರ ಸರ್ಕಾರದ ಉತ್ತಮ ನೀತಿಗಳು ಮತ್ತು ಕೆಲಸಗಳು ಸತತ 3ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಮರಳಲು ಸಹಾಯ ಮಾಡುತ್ತದೆ. ಮುಂದಿನ ಜುಲೈನಲ್ಲಿ ನಮ್ಮ ಸರ್ಕಾರವು ಅಭಿವೃದ್ಧಿ ಹೊಂದಿದ ಭಾರತದ ಪರಿಕಲ್ಪನೆಗಾಗಿ ಪೂರ್ಣಪ್ರಮಾಣದ ಬಜೆಟ್ ಮಂಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Read More

ನವದೆಹಲಿ: ಮಾರುಕಟ್ಟೆಯಿಂದ ಹೆಚ್ಚಿನ ಹಣವನ್ನು ಸಂಗ್ರಹಿಸಲು ಖಾಸಗಿ ವಲಯಕ್ಕೆ ಸರ್ಕಾರ ಅವಕಾಶ ನೀಡುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದರು. ಅದಲ್ಲದೆ  ಇತ್ತೀಚೆಗೆ ಘೋಷಣೆಯಾದ `ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ’ಗೆ ವಿಶೇಷ ಒತ್ತು ನೀಡಲಾಗಿದೆ. ಮನೆಗಳಿಗೆ ಸೋಲಾರ್ ಮೇಲ್ಛಾವಣಿ ಅಳವಡಿಸುವ ಈ ಯೋಜನೆ ಬಗ್ಗೆ ಅವರು ತಮ್ಮ ಬಜೆಟ್ ಭಾಷಣದಲ್ಲಿ ವಿಶೇಷವಾದ ಮಾಹಿತಿ ಹಂಚಿಕೊಂಡಿದ್ದಾರೆ. ಈ ಯೋಜನೆಯ ಮೂಲಕ ಒಂದು ಕೋಟಿ ಮನೆಗಳಲ್ಲಿ ಸೌರ ಮೇಲ್ಛಾವಣಿ ಅಳವಡಿಸಲು ಉದ್ದೇಶಿಸಲಾಗಿದೆ. ಇದರಿಂದ ಒಂದು ಮನೆಗೆ ತಿಂಗಳಿಗೆ ಸುಮಾರು 300 ಯೂನಿಟ್ ವಿದ್ಯುತ್ ಉಳಿತಾಯವಾಗುತ್ತದೆ. ವಾರ್ಷಿಕವಾಗಿ 15,000-18,000 ರೂ.ಗಳ ಉಳಿತಾಯವಾಗಲಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರಿ ಸ್ವಾಮ್ಯದ ಆರ್‌ಇಸಿ ಲಿಮಿಟೆಡ್‍ನ್ನು ಯೋಜನೆಯ ಅನುಷ್ಠಾನ ಏಜೆನ್ಸಿಯಾಗಿ ನೇಮಿಸಲಾಗಿದೆ. ಒಂದು ವರ್ಷದೊಳಗೆ ಒಂದು ಕೋಟಿ ಮನೆಗಳಲ್ಲಿ ಮೇಲ್ಛಾವಣಿ ಸೌರ ಅಳವಡಿಕೆಗಳನ್ನು ಹೊಂದುವ ಗುರಿಯನ್ನು ಹೊಂದಿದೆ. ಜ.22 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಸಮಾರಂಭದ ನಂತರ ಅಯೋಧ್ಯೆಯಿಂದ ಹಿಂದಿರುಗಿದ ನಂತರ ಒಂದು…

Read More