Author: AIN Author

ಬೆಂಗಳೂರು: ನಿಯಮಾವಳಿ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಮಾಡುತ್ತಿರುವುದಾಗಿ ಆರೋಪಿಸಿ ಬಿಲ್ಡರ್ ಗಳನ್ನ ಬೆದರಿಸಿ ಲಕ್ಷ‌-ಲಕ್ಷ ಹಣ ನೀಡುವಂತೆ ಬೆದರಿಸುತ್ತಿದ್ದ ರೌಡಿಶೀಟರ್ ಹಾಗೂ ನಕಲಿ ಆರ್ ಟಿಐ ಕಾರ್ಯಕರ್ತನನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತಾವರಕೆರೆ ಠಾಣೆಯ ರೌಡಿಶೀಟರ್ ರಕ್ಷಿತ್ (26) ಹಾಗೂ ಜೈಹಿಂದ್ ಸಂಘಟನೆ ಅಧ್ಯಕ್ಷ ರಾಘವ ಗೌಡ ಬಂಧಿತ ಆರೋಪಿಗಳಾಗಿದ್ದಾರೆ. ರಕ್ಷಿತ್ ಹಾಗೂ ರಾಘವಗೌಡ ಇಬ್ಬರು ತಾವರಕೆರೆ ಮೂಲದವರಾಗಿದ್ದಾರೆ. ಅಕ್ರಮವಾಗಿ ಹಣ ಸಂಪಾದನೆ‌ ಮಾಡಲು ರಾಘವಗೌಡ, ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ದೊಡ್ಡ ದೊಡ್ಡ ಭೂ ವೆಂಚರ್ಸ್ ಗಳಿಗೆ ತೆರಳಿ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಕಾನೂನು ಉಲ್ಲಂಘಿಸುತ್ತಿದ್ದೀರಾ ಎಂದು ಹೆದರಿಸಿ ಅವರಿಂದ ಹಣ ವಸೂಲಿಗೆ ಇಳಿದಿದ್ದ.‌ ಇದೇ ರೀತಿ ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯ ವೆಸ್ಟ್ ಆಫ್ ಕಾರ್ಡ್ ರೋಡ್ ನಲ್ಲಿರುವ ಬಿಂದು ವೆಂಚರ್ಸ್ ಮಾಲೀಕರ ಬಳಿ ರೌಡಿಶೀಟರ್ ನನ್ನ ಕರೆದೊಯ್ದು ತಾನು‌ ಆರ್ ಟಿಐ ಕಾರ್ಯಕರ್ತನಾಗಿದ್ದು, ನಿಮ್ಮ ಸಂಸ್ಥೆಯು ಬಿಬಿಎಂಪಿಯಿಂದ ಮಂಜೂರಾದ ಯೋಜನೆಯಂತೆ ಕಟ್ಟಡ ನಿರ್ಮಿಸದೆ ಅಕ್ರಮವೆಸಗಿದ್ದೀರಾ ಎಂದು ಬೆದರಿಸುತ್ತಿದ್ದ. 80…

Read More

ನವದೆಹಲಿ: ಕಿಸಾನ್ ಸಂಪದ ಯೋಜನೆಯಿಂದ 38 ಲಕ್ಷ ರೈತರಿಗೆ ಲಾಭವಾಗಿದೆ. ದೇಶದಲ್ಲಿ ಹಾಲು ಉತ್ಪಾದನಾ ಡೇರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಪ್ರತ್ಯೇಕ ಮತ್ಸ ಸಂಪದ ಯೋಜನೆ ಜಾರಿಗೊಳಿಸಿದೆ. ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆ ವಿಸ್ತರಿಸಲಾಗುವುದು. ಜೈಜವಾನ್, ಜೈಕಿಸಾನ್, ಜೈವಿಜ್ಞಾನ, ಜೈ ಅನುಸಂಧಾನ ಎಂಬ ಪ್ರಧಾನಿ ಮೋದಿ ಅವರ ಘೋಷಣೆಯಡಿ ಕಾರ್ಯನಿರ್ವಹಿಸುತ್ತೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ಹೇಳಿದ್ದಾರೆ.  ಬಡವರು, ಮಹಿಳೆಯರು, ಯುವಜನತೆ ಮತ್ತು ರೈತರು ನಮ್ಮ ಸರ್ಕಾರದ 4 ಜಾತಿಗಳು. ಈ ನಾಲ್ಕು ಜಾತಿಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. https://ainlivenews.com/rbi-gave-a-big-shock-to-paytm-ban-on-transactions-after-february-29/ ಕೋವಿಡ್‌ ಸವಾಲುಗಳ ನಡುವೆಯೂ, ಪ್ರಧಾನಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಅನುಷ್ಠಾನವು ಮುಂದುವರೆದಿದೆ ಮತ್ತು ನಾವು 3 ಕೋಟಿ ಮನೆಗಳ ಗುರಿಯನ್ನು ಸಾಧಿಸುವ ಸಮೀಪದಲ್ಲಿ ಇದ್ದೇವೆ. ಕುಟುಂಬಗಳ ಸಂಖ್ಯೆಯಲ್ಲಿನ ಹೆಚ್ಚಳದಿಂದ ಉಂಟಾಗುವ ಅವಶ್ಯಕತೆಗಳನ್ನು ಪೂರೈಸಲು ಮುಂದಿನ 5 ವರ್ಷಗಳಲ್ಲಿ 2 ಕೋಟಿ ಹೆಚ್ಚಿನ ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದರು. ಪ್ರಧಾನಮಂತ್ರಿ ಮುದ್ರಾ…

Read More

ಹಾಸನ: ರಸ್ತೆಯಲ್ಲಿ ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ  ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಆಲೂರಿನ ಕೂಡಿಗೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಪ್ರದೀಪ್ (30), ಗುರು (25) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಜಾನೆ ಹೋಟೆಲ್ ಒಂದರ ಪೂಜೆಗೆ ಹೊರಟಿದ್ದ ವೇಳೆ, ಕೂಡಿಗೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ. ಟೈರ್ ಪಂಕ್ಚರ್ ಆಗಿ ರಸ್ತೆ ಮಧ್ಯೆಯೇ ಟಿಂಬರ್ ತುಂಬಿದ್ದ ಲಾರಿ ನಿಂತಿತ್ತು. https://ainlivenews.com/rbi-gave-a-big-shock-to-paytm-ban-on-transactions-after-february-29/ ಮುಂಜಾನೆ ಮಂಜು ಆವರಿಸಿದ್ದ ಕಾರಣ ಕಾರಿನ ಚಾಲಕನಿಗೆ ಲಾರಿ ನಿಂತಿರುವುದು ಗಮನಕ್ಕೆ ಬಂದಿಲ್ಲ. ಇದರಿಂದ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಲ್ಲಿ ಉರುಳಿ ಬಿದ್ದಿದೆ. ಆಲೂರು ಪೊಲೀಸ್ (Police) ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ನವದೆಹಲಿ: ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಇನ್ನೂ  ಫಲಾನುಭವಿಗಳಿಗೆ ಒಟ್ಟು 34 ಲಕ್ಷ ಕೋಟಿ ರೂ. ಸಬ್ಸಿಡಿ ಹಣವನ್ನು ನೇರ ವರ್ಗಾವಣೆ (DBT) ಮಾಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಹೇಳಿದ್ದಾರೆ. ಹೊಸ ಲೋಕಸಭೆಯಲ್ಲಿ ಬಜೆಟ್‌ (Union Budget) ಮಂಡನೆ ಮಾಡಿದ ಅವರು ಡಿಬಿಟಿಯಿಂದಾಗಿ 2.7 ಲಕ್ಷ ಕೋಟಿ ರೂ. ಹಣ ಸರ್ಕಾರಕ್ಕೆ ಉಳಿತಾಯವಾಗಿದೆ ಎಂದು ತಿಳಿಸಿದರು.  ಕಾಲಕಾಲ ರೈತರಿಗೆ ನೀಡುವ ಕನಿಷ್ಠ ಬೆಂಬಲ ಬೆಲೆ ಏರಿಕೆ ಮಾಡಲಾಗಿದೆ. ಸಬ್ಕಾ ಸಾಥ್‌, ಸಬ್ಕಾ ವಿಕಾಸ್‌ ನಮ್ಮ ಸರ್ಕಾರ ಮಂತ್ರವಾಗಿದೆ. ಒಟ್ಟು ಇಲ್ಲಿಯವರೆಗೆ 80 ಕೋಟಿ ಜನರಿಗೆ ಉಚಿತ ಪಡಿತರ ವಿತರಣೆ ಮಾಡಲಾಗಿದೆ ಎಂದು ಹೇಳಿದರು.

Read More

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಅಡಿಯಲ್ಲಿ, ಗ್ರಾಮೀಣ ಪ್ರದೇಶದಲ್ಲಿ 70 ಪ್ರತಿಶತ ಮನೆಗಳನ್ನು ಮಹಿಳೆಯರಿಗೆ ನೀಡಲಾಗಿದೆ ಎಂದು ಮಧ್ಯಂತರ ಬಜೆಟ್‌ನಲ್ಲಿ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಕಳೆದ 10 ವರ್ಷಗಳಲ್ಲಿ ಉನ್ನತ ಶಿಕ್ಷಣದಲ್ಲಿ ಮಹಿಳೆಯರ ದಾಖಲಾತಿ 28% ಹೆಚ್ಚಾಗಿದೆ. ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (STEM) ಕೋರ್ಸ್‌ಗಳಲ್ಲಿ ಹುಡುಗಿಯರು ಮತ್ತು ಮಹಿಳೆಯರು 43% ದಾಖಲಾತಿಯನ್ನು ಮಾಡುತ್ತಾರೆ. https://ainlivenews.com/rbi-gave-a-big-shock-to-paytm-ban-on-transactions-after-february-29/ ಇದು ವಿಶ್ವದಲ್ಲೇ ಅತಿ ಹೆಚ್ಚು ಎಂದು ತಿಳಿಸಿದ್ದಾರೆ. ತ್ರಿವಳಿ ತಲಾಖ್ ನಿಷೇಧ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ 70% ರಷ್ಟು ಮನೆಗಳು ಮಹಿಳೆಯರ ಘನತೆಯನ್ನು ಹೆಚ್ಚಿಸಿವೆ ಎಂದರು. 

Read More

ನವದೆಹಲಿ: ತ್ರಿವಳಿ ತಲಾಖ್ ಅನ್ನು ಕಾನೂನುಬಾಹಿರವಾಗಿಸುವುದು, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 70% ಕ್ಕಿಂತ ಹೆಚ್ಚು ಮನೆಗಳನ್ನು ನೀಡುವುದು ಅವರ ಘನತೆಯನ್ನು ಹೆಚ್ಚಿಸಿದೆ ಎಂದು  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಅಡಿಯಲ್ಲಿ, ಗ್ರಾಮೀಣ ಪ್ರದೇಶದಲ್ಲಿ 70 ಪ್ರತಿಶತ ಮನೆಗಳನ್ನು ಮಹಿಳೆಯರಿಗೆ ನೀಡಲಾಗಿದೆ. ಎಲ್ಲಾ ಮೂಲಭೂತ ಯೋಜನೆಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳುತ್ತಿವೆ, ತೆರಿಗೆ ಸುಧಾರಣೆಗಳಿಂದ ತೆರಿಗೆ ವ್ಯಾಪ್ತಿ ಹೆಚ್ಚಿದೆ. ಸರ್ಕಾರದ ಗಮನವು ಜಿಡಿಪಿ ಮೇಲೆ ಇದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಹೇಳಿದರು. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನಹರಿಸುತ್ತಿದೆ. ಅದಲ್ಲದೆ ಕ್ರೀಡೆಯಲ್ಲಿ ಹೊಸ ಎತ್ತರಕ್ಕೆ ಏರುತ್ತಿರುವ ನಮ್ಮ ಯುವಕರ ಬಗ್ಗೆ ದೇಶಕ್ಕೆ ಹೆಮ್ಮೆ ಇದೆ. 2023 ರಲ್ಲಿ ಏಷ್ಯನ್ ಗೇಮ್ಸ್ ಮತ್ತು ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಅತ್ಯಧಿಕ ಪದಕಗಳ ಸಂಖ್ಯೆಯು ಹೆಚ್ಚಿನ ಆತ್ಮವಿಶ್ವಾಸವನ್ನು ತೋರಿಸುತ್ತದೆ ಎಂದು ಹೇಳಿದರು.

Read More

ಬೆಂಗಳೂರು: ಕೆರಗೋಡಿನಲ್ಲಿ ಧ್ವಜಸ್ತಂಭದಿಂದ ಹನುಮಧ್ವಜ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್‌.ಅಶೋಕ್‌ ಠಕ್ಕರ್‌ ಕೊಟ್ಟಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಆರ್‌.ಅಶೋಕ್‌, ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿದ ಮೇಲೆ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿರುವ ಕಾಂಗ್ರೆಸ್ ಸರ್ಕಾರ ಈಗ ದಿಢೀರನೆ ರಾಷ್ಟ್ರ ಧ್ವಜದ ಮೇಲೆ ಎಲ್ಲಿಲ್ಲದ ಭಕ್ತಿ ಉಕ್ಕಿ ಹರಿಯುತ್ತಿದೆ. ತಮಗೆ ಹನುಮಧ್ವಜದ ಮೇಲಿನ ನಿಮ್ಮ ದ್ವೇಷವನ್ನ ಮರೆಮಾಚಲು ರಾಷ್ಟ್ರಧ್ವಜದ ಮುಖವಾಡ ಹಾಕಿಕೊಳ್ಳುವ ಅಗತ್ಯ ಏನಿದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದರು. ತಾವು ಹನುಮ ಧ್ವಜವನ್ನು ಇಳಿಸಿದ ರೀತಿಯಲ್ಲೇ ಹಿಂದೂಗಳು ತಮ್ಮನ್ನು ಕುರ್ಚಿಯಿಂದ ಇಳಿಸುವ ದಿನ ಬಹಳ ದೂರವಿಲ್ಲ ಎಂದು ಎಚ್ಚರಿಸಿದ್ದಾರೆ.

Read More

ನವದೆಹಲಿ: ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ, 54 ಲಕ್ಷ ಯುವಕರಿಗೆ ತರಬೇತಿ ನೀಡಿದೆ ಮತ್ತು 3000 ಹೊಸ ಐಟಿಐಗಳನ್ನು ಸ್ಥಾಪಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ. 2014ರಲ್ಲಿ ಪ್ರಧಾನಿ ಮೋದಿ ಅಧಿಕಾರ ಸ್ವೀಕರಿಸಿದಾಗ ಹಲವು ಸವಾಲುಗಳಿದ್ದವು. ಸಾರ್ವಜನಿಕರ ಹಿತದೃಷ್ಟಿಯಿಂದ ಆರ್ಥಿಕತೆಯನ್ನು ಬಲಪಡಿಸಲು ಮತ್ತು ಜನರಿಗೆ ಉದ್ಯೋಗವನ್ನು ಪಡೆಯಲು ಅನೇಕ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಮಾಡಲಾಗಿದೆ. ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಯತ್ತ ಸರ್ಕಾರದ ಗಮನ ಕೇಂದ್ರೀಕರಿಸಿದೆ ಮತ್ತು ಎಲ್ಲಾ ವರ್ಗ ಮತ್ತು ಜನರ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಯುತ್ತಿದೆ. 2047 ರ ವೇಳೆಗೆ ನಾವು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Read More

ನವದೆಹಲಿ: ಫಸಲ್ ಭೀಮಾ ಯೋಜನೆಯಿಂದ ನಾಲ್ಕು ಕೋಟಿ ರೈತರಿಗೆ ಲಾಭವಾಗಿಗೆ ಎಂದು ಮಧ್ಯಂತರ ಬಜೆಟ್​ ಮಂಡನೆಯಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದರು. ನಮ್ಮ ಯುವ ದೇಶವು ಹೆಚ್ಚಿನ ಆಕಾಂಕ್ಷೆಗಳನ್ನು ಹೊಂದಿದೆ, ಅದರ ವರ್ತಮಾನದ ಬಗ್ಗೆ ಹೆಮ್ಮೆಯಿದೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಭರವಸೆ ಮತ್ತು ನಂಬಿಕೆಯನ್ನು ಹೊಂದಿದೆ. https://ainlivenews.com/rbi-gave-a-big-shock-to-paytm-ban-on-transactions-after-february-29/ ನಮ್ಮ ಸರ್ಕಾರದ ಅತ್ಯುತ್ತಮ ಕೆಲಸದ ಆಧಾರದ ಮೇಲೆ ಜನರು ಮತ್ತೊಮ್ಮೆ ಬಲವಾದ ಜನಾದೇಶವನ್ನು ನೀಡುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದರು. ಇನ್ನೂ ಬಡವರು, ಮಹಿಳೆಯರು ಮತ್ತು ಯುವಕರ ಕಡೆ ಗಮನ ಹರಿಸುವ ಅಗತ್ಯವಿದೆ ಎಂದು ಮಧ್ಯಂತರ ಬಜೆಟ್​ ಮಂಡನೆಯಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದರು.

Read More

ನವದೆಹಲಿ: ದೇಶಕ್ಕೆ ಹೊಸ ದಿಕ್ಕು ಮತ್ತು ಭರವಸೆ ಸಿಕ್ಕಿದೆ, ಎಲ್ಲರಿಗೂ ಮನೆ, ಎಲ್ಲರಿಗೂ ನೀರು, ಪ್ರತಿ ಮನೆಗೆ ವಿದ್ಯುತ್‌ಗೆ ಒತ್ತು ಕೊಡಲಾಗುತ್ತಿದೆ. ಕಳೆದ 10 ವರ್ಷಗಳಲ್ಲಿ ಭಾರತದ ಆರ್ಥಿಕತೆ ಉತ್ತಮ ಸಾಧನೆ ಮಾಡಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇನ್ನೂ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯ ತಲುಪುತ್ತಿದೆ. ಗ್ರಾಮೀಣ ಜನರ ಆದಾಯ ಹೆಚ್ಚಿದೆ ಎಂದು ಹೇಳಿದರು.

Read More