Author: AIN Author

ರಾಕಿಂಗ್ ಸ್ಟಾರ್ ಯಶ್ (Yash) ಮಲೇಷಿಯಾದಲ್ಲಿ ಕಾಣಿಸಿಕೊಂಡಿದ್ದಾರೆ. ಮಲೇಷಿಯಾ (Malaysia) ವಿಮಾನ ನಿಲ್ದಾಣದಲ್ಲಿ ಬಂದಿಳಿದ ನೆಚ್ಚಿನ ನಟನನ್ನು ಅಲ್ಲಿನ ಅಭಿಮಾನಿಗಳು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಹುಟ್ಟು ಹಬ್ಬದ ದಿನದಂದು ನಡೆದ ಅಭಿಮಾನಿಗಳ ದುರಂತ ಅಂತ್ಯದ ನೋವಿನಲ್ಲಿದ್ದ ಯಶ್, ಇದೀಗ ಮತ್ತೆ ತಮ್ಮ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಹಾಗಂತ ಅವರು ಮಲೇಷಿಯಾಗೆ ಹೋಗಿದ್ದು, ಶೂಟಿಂಗಾಗಿ ಅಲ್ಲ, ಖಾಸಗಿ ಸಮಾರಂಭದಲ್ಲಿ ಭಾಗಿ ಆಗುವುದಕ್ಕಾಗಿ ಯಶ್ ಮಲೇಷಿಯಾಗೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿನ ಕಾರ್ಯಕ್ರಮ ಮುಗಿಸಿಕೊಂಡು ಮತ್ತೆ ಅವರು ಟಾಕ್ಸಿಕ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ ಎನ್ನುವ ಮಾಹಿತಿ ಇದೆ. ಟಾಕ್ಸಿಕ್ ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸ ಬಹುತೇಕ ಮುಗಿದೆ. ಇನ್ನೇನು ಚಿತ್ರೀಕರಣಕ್ಕೆ ಹೊರಡಬೇಕು. ಬಹುತೇಕ ಶೂಟಿಂಗ್ ವಿದೇಶದಲ್ಲಿ ನಡೆಯಲಿದ್ದು, ಕೆಲವು ಭಾಗಗಳನ್ನು ಮಾತ್ರ ಈ ನೆಲದಲ್ಲಿ ಚಿತ್ರೀಕರಣ ಮಾಡಲಾಗುತ್ತದೆ ಎನ್ನುವುದು ಹರಿದಾಡುತ್ತಿರುವ ಮಾಹಿತಿ. ಇದಕ್ಕೆ ಚಿತ್ರತಂಡವೇ ಸ್ಪಷ್ಟನೆ ಕೊಡಬೇಕಿದೆ

Read More

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman) ಇಂದು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್‌ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ. ಅಲ್ಲದೇ ಪ್ರಧಾನಿ ಮೋದಿ (Narendra Modi) ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್‌ ಕೂಡ ಆಗಲಿದೆ. ಲೋಕಸಭೆ ಚುನಾವಣೆಯ ನಂತರ ಸರ್ಕಾರ ರಚನೆಯಾಗುವವರೆಗೆ ಮಧ್ಯಂತರ ಬಜೆಟ್ (Union Budget 2024) ಮಧ್ಯಂತರ ಅವಧಿಯ ಹಣಕಾಸಿನ ಅಗತ್ಯಗಳನ್ನು ನೋಡಿಕೊಳ್ಳುತ್ತದೆ. ಹೊಸ ಸರ್ಕಾರದಿಂದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುವುದು. ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡುವ ಮೂಲಕ ಸಂಸತ್ತಿನ ಬಜೆಟ್ ಅಧಿವೇಶನ ಬುಧವಾರ ಪ್ರಾರಂಭವಾಯಿತು. ರಾಷ್ಟ್ರಪತಿ ಭಾಷಣದಲ್ಲಿ, 2023 ದೇಶಕ್ಕೆ ಐತಿಹಾಸಿಕ ವರ್ಷವಾಗಿದೆ. ದೇಶವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯ ವೇಗವನ್ನು ಮುಂದುವರೆಸಿದೆ ಎಂದು ಹೇಳಿದ್ದರು. https://ainlivenews.com/rbi-gave-a-big-shock-to-paytm-ban-on-transactions-after-february-29/ ಈ ಏಪ್ರಿಲ್‌ನಲ್ಲಿ ಪ್ರಾರಂಭವಾಗುವ 2024-25 ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇ.7 ರ ಸಮೀಪಕ್ಕೆ ಬರುವ ನಿರೀಕ್ಷೆಯಿದೆ ಎಂದು ಹಣಕಾಸು…

Read More

ಬ್ಯಾಂಕಿಂಗ್ ನಿಯಮಗಳ ಉಲ್ಲಂಘನೆ (Violation of Rules) ಹಿನ್ನೆಲೆ ಪೇಟಿಎಂಗೆ (Paytm) ಆರ್‌ಬಿಐ (RBI) ನೋಟಿಸ್ ನೀಡಿದ್ದು, ಪೇಟಿಎಂ ಹೊಸ ಡೆಪಾಸಿಟ್ ಪಡೆಯುವಂತಿಲ್ಲ ಎಂದು ಸೂಚನೆ ನೀಡಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ ಹೇರಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಯಾವುದೇ ಹೊಸ ಖಾತೆ ರಚಿಸಲು ಮತ್ತು ಡೆಪಾಸಿಟ್ ಪಡೆಯುವಂತಿಲ್ಲ. ವಿವಿಧ ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ನೋಟಿಸ್ (Notice) ನೀಡಲಾಗಿದೆ. ಇನ್ನು ಫೆಬ್ರವರಿ 29ರ ನಂತರ ಪೇಮೆಂಟ್ಸ್ ಬ್ಯಾಂಕ್ ಖಾತೆಗೆ ವ್ಯಾಲಟ್, ಫಾಸ್ಟ್ಟ್ಯಾಗ್ ಇತ್ಯಾದಿ ಪ್ರೀಪೇಯ್ಡ್ ಯಂತ್ರಗಳಿಗೆ ಟಾಪ್‌ಅಪ್ ಹಾಕಿಸುವಂತಿಲ್ಲ ಎಂದು ಆರ್‌ಬಿಐ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ

Read More

ತನ್ನ ಭಾರತ ವಿರೋಧಿ ನಿಲುವಿಗಾಗಿ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮದ್‌ ಮುಯಿಝು ಅಧಿಕಾರ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ. ಮಾಲ್ಡೀವ್ಸ್‌ ದೇಶದ ಪ್ರಧಾನ ವಿರೋಧ ಪಕ್ಷ ಹಾಗೂ ಸಂಸತ್ತಿನಲ್ಲಿ ದೊಡ್ಡ ಮಟ್ಟದ ಬಹುಮತವನ್ನು ಹೊಂದಿರುವ ಮಾಲ್ಡೀವಿಯನ್‌ ಡೆಮಾಕ್ರಟಿಕ್‌ ಪಾರ್ಟಿ (ಎಂಡಿಪಿ), ಅಧ್ಯಕ್ಷ ಮೊಹಮದ್‌ ಮುಯಿಝು ವಿರುದ್ಧ ಮಹಾಭಿಯೋಗ ಅಂದರೆ ಇಂಪೀಚ್‌ಮೆಂಟ್‌ ನಿರ್ಣಯವನ್ನು ಸಲ್ಲಿಸಲು ಸಜ್ಜಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸೋಮವಾರ ಮಧ್ಯಾಹ್ನ ಮಹಾಭಿಯೋಗದ ನಿರ್ಣಯಕ್ಕೆ ಅಗತ್ಯವಾಗಿರುವಷ್ಟು ಸಹಿಗಳನ್ನು ಪಡೆಯಲು ಎಂಡಿಪಿ ಯಶಸ್ವಿಯಾಗಿದೆ. ಕೆಲವು ಡೆಮೋಕ್ರಾಟ್‌ಗಳು ಕೂಡ ಇದನ್ನು ಬೆಂಬಲಿಸಿದ್ದಾರೆ. ಆದರೆ, ಈ ದೇಶದ ವಿರೋಧಪಕ್ಷಗಳು ಈ ನಿರ್ಣಯವನ್ನು ಇನ್ನು ಸಂಸತ್ತಿನಲ್ಲಿ ಸಲ್ಲಿಕೆ ಮಾಡುವುದು ಮಾತ್ರವೇ ಬಾಕಿ ಉಳಿದಿದೆ. ಮಾಲ್ಡೀವ್ಸ್ ಪಾರ್ಲಿಮೆಂಟ್‌ನಲ್ಲಿ ಹಿಂಸಾಚಾರ ಭುಗಿಲೆದ್ದ ಒಂದು ದಿನದ ನಂತರ ಇಂಪೀಚ್‌ಮೆಂಟ್‌ ನಿರ್ಣಯದ ಸುದ್ದಿ ಬಂದಿದೆ. ಸರ್ಕಾರದ ಪರ ಪಕ್ಷಗಳಾದ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ (ಪಿಎನ್‌ಸಿ) ಮತ್ತು ಪ್ರೋಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್ (ಪಿಪಿಎಂ) ಸಂಸದರು ಕಲಾಪಕ್ಕೆ ಅಡ್ಡಿಪಡಿಸಿದ್ದು ಮಾತ್ರವಲ್ಲದೆ, ಸ್ಪೀಕರ್‌ಗಳ ಕಿವಿಗೆ ತುತ್ತೂರಿ…

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ದೇಶದ್ರೋಹಿಗಳಿಗೆ ರಕ್ಷಣೆ ನೀಡುತ್ತಿರುವ ಸರ್ಕಾರ, ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನಾ ಚಟುವಟಿಕೆ ಹೆಚ್ಚಿದೆ. ಮುಸ್ಲಿಂ ಮೂಲಭೂತವಾದಿಗಳು ಗಲಾಟೆ ಮಾಡುತ್ತಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕಿದವರನ್ನು ಬಂಧಿಸಿ ಎಂದು ಆಗ್ರಹಿಸಿದರೆ ಸರ್ಕಾರ ಅವರನ್ನು ಬಿಟ್ಟುಬಿಡಿ ಎಂದು ಪೊಲೀಸರಿಗೆ ಸೂಚಿಸಿದೆ. ಎಫ್ಎಸ್ಎಲ್ ವರದಿ ಪರಿಶೀಲನೆ ಎಂದು ಹೇಳಿ ಯಾವುದೋ ವಾಹಿನಿಯ ವೀಡಿಯೋ ಪಡೆದು ಪರೀಕ್ಷೆ ನಡೆಸಿ ಸುಳ್ಳು ವರದಿ ರೂಪಿಸಲಾಗುತ್ತಿದೆ. ಇದನ್ನು ಮುಚ್ಚಿ ಹಾಕಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ವರದಿಯನ್ನು ತಿರುಚುವುದು ಖಂಡಿತ ಎಂದರು. ಜೈಕಾರದ ಸುದ್ದಿ ಮಾಧ್ಯಮಗಳಲ್ಲಿ ಬಂದು ಜನರಿಗೆ ಗೊತ್ತಾದರೂ ಜನರ ಕಣ್ಣಿಗೆ ಮಣ್ಣೆರಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಹೀಗೆಯೇ ಬಿಟ್ಟರೆ ವಿಧಾನಸೌಧ ಕೂಡ ಭಯೋತ್ಪಾದಕರ ತಾಣವಾಗಲಿದೆ. ಕೆಂಗಲ್ ಹನುಮಂತಯ್ಯ ಅವರು ಕಟ್ಟಿದ ವಿಧಾನಸೌಧವನ್ನು ಉಳಿಸಲು ನಾವು ಹೋರಾಟ ಮಾಡುತ್ತಿದ್ದೇವೆ.…

Read More

ಹಾಸನ: ರಾಜ್ಯದ ರೈತರನ್ನು ಸಧೃಡಗೊಳಿಸುವ ಜೊತೆಗೆ ಕೃಷಿ ಕ್ಷೇತ್ರಕ್ಕೆ ವಿಶೇಷ ಮನ್ನಣೆ ಒದಗಿಸುವುದು ಸರ್ಕಾರದ ಆಶಯ. ಅದಕ್ಕಾಗಿ ಈ ಬಾರಿ ಸಮಗ್ರ ಬೇಸಾಯ ಸೇರಿದಂತೆ ಹತ್ತಾರು ಹೊಸ ಯೋಜನೆ ರೂಪಿಸಿ ಜಾರಿಗೆ ತರಲಾಗುತ್ತದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಹಾಸನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ, Health Insurance: ನೀವು ಆರೋಗ್ಯ ವಿಮೆ ತೆಗೆದುಕೊಳ್ಳುತ್ತಿದ್ದೀರಾ..? ಹಾಗಿದ್ದರೆ ಈ ವಿಷಯಗಳನ್ನು ತಿಳಿದುಕೊಳ್ಳಿ ಉಪ‌ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಹಲವು ಸಚಿವ ಸಹದ್ಯೋಗಿಗಳೋಂದಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃಷಿ ಸಚಿವರು ಮಾತನಾಡಿದರು. ಸಂಶೋಧನೆಗಳ ಜೊತೆಗೆ ,ತಂತ್ರಜ್ಞಾನ ಯಾಂತ್ರೀಕರಣದ ಲಾಭವನ್ನು ರೈತರಿಗೆ ತಲುಪಿಸಬೇಕು ಆ ಮೂಲಕ ಕೃಷಿಕರನ್ನು ಸಭಲರನ್ನಾಗಿಸಬೇಕು ಎಂಬುದು ನಮ್ಮ ಚಿಂತನೆ ಎಂದು ಚಲುವರಾಯಸ್ವಾಮಿ ಹೇಳಿದರು. ಬರ ನಿರ್ವಹಣೆ ಕೇಂದ್ರದ ತಾರತಮ್ಯ ನೀತಿ: ರಾಜ್ಯದಲ್ಲಿ ತೀವ್ರ ಬರ ಇದೆ ರಾಜ್ಯದಿಂದ 26 ಬಿ.ಜೆ.ಪಿ ಸಂಸದರಿದ್ದಾರೆ ಆದರೂ ಕೇಂದ್ರ ಸರ್ಕಾರ…

Read More

ಶ್ರೀನಗರ:- ಕ್ಯಾಬ್ ಒಂದು ಸ್ಕಿಡ್ ಆಗಿ ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ ಏಳು ಜನ ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಜರುಗಿದೆ. ಅಲ್ಲದೇ ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾಶ್ಮೀರದ ಟ್ರಾಫಿಕ್ ರೂರಲ್ ಕಾಶ್ಮೀರದ ಹಿರಿಯ ಪೊಲೀಸ್ ಅಧೀಕ್ಷಕ ರವೀಂದರ್ ಪಾಲ್ ಸಿಂಗ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Read More

ಮಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅಭಿಪ್ರಾಯಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣವಾಗಿದೆ. ಭಾರತ ಸಂವಿಧಾನದ ಮೂಲ ಪ್ರತಿಯಲ್ಲಿ ರಾಮಾಯಣದ ಉಲ್ಲೇಖವಿದೆ. ಅಂಬೇಡ್ಕರ್ ರಚಿಸಿದ ಸಂವಿಧಾನದ ರಚನೆಯಲ್ಲಿ ಮೂಲಭೂತ ಹಕ್ಕುಗಳನ್ನು ವಿವರಿಸುವ ಮೂಲ ಪ್ರತಿಯ ಮೊದಲ ಪುಟದಲ್ಲಿ ರಾಮ, ಸೀತೆ ಮತ್ತು ಲಕ್ಷ್ಮಣ ಭಾವಚಿತ್ರ ಇಡಲಾಗಿದೆ. ಈ ಮೂಲಕ ರಾಮನೇ ಜನರ ಹಕ್ಕು ರಕ್ಷಿಸುವ ರಕ್ಷಕ ಎಂದು ಅಂಬೇಡ್ಕರ್ ಅವರೇ ಸಾರಿದ್ದಾರೆ. ಬಹಳ ಸ್ಪಷ್ಟವಾಗಿ ರಾಮರಾಜ್ಯ ಮತ್ತು ರಾಮ ಈ ದೇಶಕ್ಕೆ ಪೂರಕ ಅಂದಿದ್ದಾರೆ ಎಂದು ಹೇಳಿದ್ದಾರೆ. ಈ ದೇಶದಲ್ಲಿ 65 ವರ್ಷಗಳ ಆಡಳಿತ ನಡೆಸಿದ ಕಾಂಗ್ರೆಸ್ ರಾಮನ ಪ್ರತಿಷ್ಠೆ ಬಹಿಷ್ಕಾರ ಮಾಡುತ್ತೆ. ಗಾಂಧೀಜಿಯವರ ರಾಮ ಬೇಕು, ನಿಮ್ಮ(ಬಿಜೆಪಿ) ರಾಮ ಬೇಡ ಅಂದಿದ್ದಾರೆ. ಆದರೆ ವಾಲ್ಮೀಕಿ ನಂಬಿದ, ಗಾಂಧೀಜಿ ಹೇಳಿದ, ಹಿಂದೂ ಸಮಾಜದ ಮರ್ಯಾದ ಪುರುಷೋತ್ತಮ ರಾಮ ಹುಟ್ಟಿದ್ದು ಅಯೋಧ್ಯೆಯಲ್ಲಿ.…

Read More

ಬೆಂಗಳೂರು:- ಬಿಬಿಎಂಪಿಯ ಕೇರ್ ಲೆಸ್ ನಿಂದ ಕಾಮಗಾರಿ ಫುಲ್ ಸ್ಲೋ ಸ್ಲೋ ಆಗುತ್ತಿದೆ. ಎರಡು ವರ್ಷ ಕಳೆದ್ರೂ ಬಿಬಿಎಂಪಿ ಸಮುದಾಯ ಭವನ ಕಂಪ್ಲೀಟ್ ಆಗಿಲ್ಲ. ಪುಲಿಕೇಶಿ ನಗರದ ಸಮುದಾಯ ಭವನ ಎಂಟು ತಿಂಗಳಿಂದ ಕಾಮಗಾರಿ ಬಂದ್ ಆಗಿದೆ. ಕಾಕ್ಸ್‌ ಟೌನ್ ಮತ್ತು ಸುತ್ತಮುತ್ತ ಯಾವುದೇ ಸಮುದಾಯ ಭವನಗಳಿಲ್ಲ. ಬಡ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬಗಳು ಸಮಾರಂಭಗಳಿಗಾಗಿ ಅನುಕೂಲ ಆಗಬೇಕಿತ್ತು. ಹಳೆ ಕಟ್ಟಡಗಳನ್ನು ಕೆಡವಿ ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಿತ್ತು. ಕಾಮಗಾರಿ ಆರಂಭಗೊಂಡು ಎರಡು ವರ್ಷ ಕಳೆದರೂ ಶೇ. 50ರಷ್ಟೂ ಮಾತ್ರ ಕಂಪ್ಲೀಟ್ ಆಗಿದೆ. ಇದರಿಂದ ಪುಲಿಕೇಶಿ ನಗರ, ಕಾಕ್‌ಟೌನ್, ಕಲ್ಲಹಳ್ಳಿ ನಿವಾಸಿಗಳು ಬೇಸರ ಹೊರ ಹಾಕಿದ್ದಾರೆ. ಅರ್ಧಂಬರ್ದ ಕಟ್ಟಡ ವಸತಿ ರಹಿತರಿಗೆ ಆಶ್ರಯವಾಗಿ ಮಾರ್ಪಟ್ಟಿದೆ. ರಾತ್ರಿಯಾದ್ರೆ ಅನೈತಿಕ ಚಟುವಟಿಕೆಗಳ ತಾಣವಾಗುತ್ತೆ. ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದಾರೆ.

Read More

ಹುಬ್ಬಳ್ಳಿ: ತಾನು ಯಾವ ಲೋಕಸಭೆ ಕ್ಷೇತ್ರದ ಮೇಲೂ ಕಣ್ಣಿಟ್ಟಿಲ್ಲ. ಅಕಸ್ಮಾತ್ ಸ್ಪರ್ಧೆ ಮಾಡು ಅಂತ ಸೂಚಿಸಿದರೆ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಮೂರು ನಾಲ್ಕು ತಿಂಗಳಿಂದ ನಾನು ಪ್ರವಾಸ ಮಾಡಿದಾಗ ಅನೇಕರು ಬಿಜೆಪಿಗೆ ವಾಪಸ್ ಬರಬೇಕು ಅಂತ ಸಲಹೆ ನೀಡುತ್ತಿದ್ದರು. ಎಲ್ಲಿ ಪ್ರವಾಸ ಮಾಡಿದರೂ ನಮಗೆ ಒತ್ತಡ ಬರುತ್ತಿತ್ತು. ಹಿರಿಯರಾಗಿ ಮನೆಗೆ ಬರಬೇಕು ಎಂದು ಹೇಳುತ್ತಿದ್ದರು. ಮುಂದೆ ವಿಜಯೇಂದ್ರ ಅಧ್ಯಕ್ಷರಾದ ಮೇಲೆ ನನ್ನ ಜೊತೆ ಮಾತನಾಡಿದ್ದರು ಎಂದರು. ರಾಷ್ಟ್ರೀಯ ನಾಯಕರು ಮನಸು ಮಾಡಿದ ಮೇಲೆ ನಾನು ದೆಹಲಿಗೆ ಹೋಗಿದ್ದೆ. ಅಮಿತ್ ಶಾ, ಜೆಪಿ ನಡ್ಡಾ ಅವರನ್ನು ಭೇಟಿಯಾದಾಗ ಹಿಂದೆ ಆಗಿರೋದನ್ನ ಮರೆತು ಬಿಡಿ ಎಂದಿದ್ದರು. ನಿಮಗೆ ಗೌರವ ಕೊಡುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ನಾನು ಬಿಜೆಪಿ ಸೇರಿದ್ದೇನೆ. ಕಾರ್ಯಕಾರಿಣಿ ಸಭೆಯಲ್ಲಿ ಅನೇಕರು ಸಿಕ್ಕಿದ್ದರು. ಎಲ್ಲರೂ ಪ್ರೀತಿ ವಿಶ್ವಾಸ ತೋರಿದರು. ನಂಗೂ ಬಹಳ ಖುಷಿಯಾಯ್ತು ಎಂದರು.

Read More