Author: AIN Author

ವಿಜಯಪುರ: ಲೇಡಿ ಕಂಡಕ್ಟರ್ ಗೆ ಅವಾಚ್ಯ ಶಬ್ದ ಬಳಿಸಿದ ಪ್ರಯಾಣಿಕನಿಗೆ ಶೂ ಸೇವೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಚಿಲ್ಲರೆ ಹಣ ಕೊಡುವ ವಿಷಯವಾಗಿ ಪ್ರಯಾಣಿಕ ಲೇಡಿ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ.‌ ಇದರಿಂದ ಕುಪಿತಗೊಂಡ ಲೇಡಿ ಕಂಡಕ್ಟರ್ ಬೂಟಿನಿಂದ ಧರ್ಮದೇಟು ನೀಡಿದ್ದಾರೆ. ಬಳಿಕ ಲೇಡಿ ಕಂಡಕ್ಟರ್ ಗೆ ಜನ ಸಮಾಧಾನ ಪಡಿಸಿ ಕಳುಹಿಸಿದ್ದಾರೆ. ಈ ವೇಳೆ ಲೇಡಿ ಕಂಡಕ್ಟರ್ ಥಳಿಸುತ್ತಿರೋ ದೃಶ್ಯಗಳನ್ನು ಸ್ಥಳೀಯರು ವಿಡಿಯೋ ಮಾಡಿದ್ದು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

Read More

ಬಿಗ್‌ಬಾಸ್‌ ಕನ್ನಡ ಸೀಸನ್‌ 10ನಲ್ಲಿ ಎಲ್ಲ ಸ್ಪರ್ಧಿಗಳ ನಗುವಿನ ಮೊತ್ತ ತೆಗೆದರೆ ಅದರ ಬಹುಪಾಲು ತುಕಾಲಿ ಸಂತೋಷ್ ಅವರಿಗೆ ಹೋಗುತ್ತದೆ. ಅಷ್ಟೇ ಅಲ್ಲ, ಮನೆಯೊಳಗಿನ ಭಿನ್ನಾಭಿಪ್ರಾಯಗಳ ಮೂಲಗಳನ್ನು ಹುಡುಕಿಕೊಂಡು ಹೋದರೆ ಅದರಲ್ಲಿಯೂ ತುಕಾಲಿ ಸಂತೋಷ್ ಅವರ ಕೊಡುಗೆ ಸಣ್ಣದಲ್ಲ!! ಹೀಗೆ ನಗುನಗಿಸುತ್ತಲೇ ಚಾಣಾಕ್ಷ ತಂತ್ರವನ್ನೂ ಹೆಣೆಯುವ ವ್ಯಕ್ತಿತ್ವ ತುಕಾಲಿ ಸಂತೋಷ್ ಅವರದ್ದು. ಬಿಗ್‌ಬಾಸ್‌ನ ಐದನೇ ರನ್ನರ್ ಅಪ್ ಆಗಿ ಹೊಮ್ಮಿರುವ ತುಕಾಲಿ ಅವರು ಜಿಯೊಸಿನಿಮಾ ಜೊತೆಗೆ ನಡೆಸಿದ ಸಂದರ್ಶನ ಇಲ್ಲಿದೆ. https://go.jc.fm/fRhd/z4rcg0tk ‘’ಎಲ್ಲರಿಗೂ ನಮಸ್ಕಾರ. ನಾನು ನಿಮ್ಮ ಸಂತೋಷ್‌ ಕುಮಾರ್ ಎಚ್.ಜಿ. ಅಲಿಯಾಸ್ ‘ತುಕಾಲಿ ಸಂತೋಷ್ ಅವರೇ’… ನಿಮ್ಮ ಪ್ರೀತಿ ಪಾತ್ರ. ಈ ಸೀಸನ್‌ನಲ್ಲಿ ಟಾಪ್‌ 6 ಫಿನಾಲೆ ಕಂಟೆಸ್ಟೆಟ್ಸ್‌ಗಳಲ್ಲಿ ನಾನೂ ಒಬ್ಬ. ಐದನೇ ರನ್ನರ್ ಅಪ್ ಆಗಿದ್ದೇನೆ. ನಿಮ್ಮೆಲ್ಲರ ಪ್ರೀತಿಯಿಂದ ನಾನು ಈ ಜಾಗದಲ್ಲಿದ್ದೀನಿ. ಸಿಕ್ಕಾಪಟ್ಟೆ ಎಕ್ಸೈಟ್‌ಮೆಂಟ್ ಇದೆ. ನಾನು ಮನೆಗೆ ಹೋಗುವಾಗಲೇ ಅಂದುಕೊಂಡಿದ್ದೆ. ಷೋ ಮುಗಿಯುವ ದಿನವೇ ಮನೆಯಿಂದ ಹೊರಗೆ ಬರಬೇಕು ಅಂತ. ಹಾಗೇ ಆಗಿದೆ. ಗ್ರ್ಯಾಂಡ್ ಫಿನಾಲೆ…

Read More

ತುಮಕೂರು: ಕುಡಿದ ಅಮಲಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಘಟನೆ ತುಮಕೂರು‌ ಜಿಲ್ಲೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 1ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಕುಡಿದ ಅಮಲಿನಲ್ಲಿ  ಯುವಕನೋರ್ವನಿಂದ ದುಷ್ಕೃತ್ಯವೆಸಗಿದ್ದಾನೆ. ಮನೆಯಲ್ಲಿ ಯಾರು‌ ಇಲ್ಲದ ವೇಳೆ ಮಧುಗಿರಿ ಮೂಲದ ಯುವಕನಿಂದ ಅತ್ಯಾಚಾರ ಮಾಡಲಾಗಿದೆ. ಈ ವೇಳೆ  ಬಾಲಕಿ ಕಿರುಚಿದ ಕಾರಣ ಸ್ಥಳಿಯರು ದೌಡಾಯಿಸಿದ್ದು, ಬಾಲಕಿಯ ರಕ್ಷಣೆ ಮಾಡಲಾಗಿದೆ. ಸದ್ಯ ಬಾಲಕಿಯನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ದಾವಣಗೆರೆ: ಮತ್ತೋಮ್ಮೆ ಮೋದಿ ಎಂಬ ಗೋಡೆ ಬರಹ ಬರೆಯುವ‌ ಮೂಲಕ ಅಭಿಯಾನಕ್ಕೆ  ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಮಾಜಿ ಶಾಸಕ, ಮಾಜಿ‌ ಸಚಿವ ರೇಣುಕಾಚಾರ್ಯ ಚಾಲನೆ ನೀಡಿದ್ದಾರೆ. ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಾಧ್ಯಂತ ಪ್ರತಿ ಬೂತ್ ನಲ್ಲಿ ಐದು ಮನೆಗಳ ಮೇಲೆ ಮತ್ತೋಮ್ಮೆ ಮೋದಿ ಗೋಡೆ ಬರಹಕ್ಕೆ‌ ಚಾಲನೆ ನೀಡಿದರು. ಗೋಡೆ ಬರಹದ ಜೊತೆಗೆ ಕೇಂದ್ರ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಜನರಿಗೆ ಮಾಹಿತಿ‌ ನೀಡಿದರು. ರೇಣುಕಾಚಾರ್ಯರಿಗೆ ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ.

Read More

ಯಂಗ್ ಡೈನಾಮಿಕ್ ಪ್ರಣಮ್ ದೇವರಾಜ್ ನಟನೆಯ S/O ಮುತ್ತಣ್ಣ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಪ್ರಣಮ್ ಜನ್ಮದಿನದ ವಿಶೇಷವಾಗಿ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡ ಶುಭ ಕೋರಿದೆ. ಬೆಂಗಳೂರಿನ ಜಿಟಿ ಮಾಲ್ ನಲ್ಲಿರುವ ಎಂಎಂ ಲೆಗಸಿಯಲ್ಲಿ ಯಂಗ್ ಡೈನಾಮಿಕ್ ಪ್ರಣಮ್ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿ, ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಈ ವೇಳೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನಾಯಕ ಪ್ರಣಮ್ ದೇವರಾಜ್ ಮಾತನಾಡಿ, S/o ಮುತ್ತಣ್ಣ ಶ್ರೀಕಾಂತ್ ಸರ್ ಫಸ್ಟ್ ಟೈಮ್ ಮನೆಗೆ ಬಂದಾಗ ಅವರು ಮಾತನಾಡಿದ ರೀತಿ ಕಥೆ ಹೇಳಿದ ರೀತಿಯಲ್ಲಿ ನಂಬಿಕೆ ಬಂತು. ಪ್ರಾಮಿಸ್ ಮಾಡಿದಕ್ಕಿಂತ ಸಖತ್ ಆಗಿ ಸಿನಿಮಾ ತೆಗೆದಿದ್ದಾರೆ. ಶ್ರೀಕಾಂತ್ ಯೋಚನೆಯೇ ಬೇರೆ. ಇಡೀ ಟೀಂ ಅಣ್ಣ ತಮ್ಮಂದಿರ ತರ ಇದ್ದೇವೆ. ನಿರ್ಮಾಪರು ಎಲ್ಲದಕ್ಕೂ ಬೆಂಬಲ ಕೊಟ್ಟಿದ್ದಾರೆ. ಖುಷಿ ರವಿ ಅವರು ಎಂಥ ನಟಿ ಅನ್ನೋದು ದಿಯಾದಿಂದ ಗೊತ್ತಾಗಿದೆ. ಅವರ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ ಎಂದು…

Read More

ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಆರಂಭವಾಗಿ ಹತ್ತು ವರ್ಷ ಆಯ್ತು.ಆದರೆ ಇನ್ನೂ ಚಾಲಕ ರಹಿತ ಟ್ರೈನ್ ಹಳಿಗೆ ಬಂದಿಲ್ಲ..ಬೇರೆ ಬೇರೆ ದೇಶಗಳಲ್ಲಿ ಈಗಾಗಲೇ ಚಾಲಕನಿಲ್ಲದೆ ಸ್ವಯಂಚಾಲಿತ ಟ್ರೈನ್ ಓಡುತ್ತದೆ.ಇದೇ ಮಾದರಿಯಲ್ಲಿ ಬೆಂಗಳೂರು ಮೆಟ್ರೋದಲ್ಲೂ ಚಾಲಕ ರಹಿತ ಮೆಟ್ರೋ ಓಡಿಸಲು ಮೆಟ್ರೋ ನಿಗಮ ಮುಂದಾಗಿದ್ದು,ಇದಕ್ಕೆ ಅಂತ ಎಲ್ಲಾ ರೀತಿಯ ಸಿದ್ದತೆಗಳು ಆರಂಭವಾಗಿವೆ.ಹಾಗಾದರೆ ಯಾವತ್ತಿನಿಂದ ಡ್ರೈವರ್ ಲೆಸ್ ಟ್ರೈನ್ ಓಡುತ್ತೆ ಅನ್ನೋದನ್ನ ಹೇಳ್ತೀವಿ ಈ ಸ್ಟೋರಿಯಲ್ಲಿ. ರಾಜಧಾನಿ ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಆರಂಭವಾಗಿ ಒಂದು ದಶಕ ಕಳೆದಿದೆ.ಈಗಾಗಲೇ ನಗರದ ನಾಲ್ಕು ದಿಕ್ಕಿನಲ್ಲಿ ಮೆಟ್ರೋ ಓಡಾಟ ನಡೆಸುತ್ತಿದ್ದು, ಜನ ಕೂಡ ಸಿಕ್ಕಪಟ್ಟೆ ಪಿಧಾ ಆಗಿದ್ದಾರೆ.ಸದ್ಯ ಹಸಿರು ಹಾಗೂ ನೇರಳೆ ಮಾರ್ಗದಲ್ಲಿ ಚಾಲಕರ ಮೂಲಕ ಮೆಟ್ರೋ ರನ್ ಮಾಡಲಾಗ್ತಿದೆ.ಆದ್ರೆ ಚಾಲಕ ಮೂಲಕ ಓಡುತ್ತಿರೋ ಮೆಟ್ರೋ ಚಾಲಕನ ತಪ್ಪು ಗಳಿಂದ ಆಗಾಗ ಸ್ಥಗಿತವಾಗ್ತಿದೆ‌‌.ಹೀಗಾಗಿ ಇದೀಗ ಚಾಲಕ ರಹಿತ ಮೆಟ್ರೋ ರೈಲು ಓಡಿಸಲು ನಮ್ಮ ಮೆಟ್ರೋ ನಿಗಮ ಮುಂದಾಗಿದೆ. ಟ್ರೈನ್ನ್ನ ಕಾರ್ಯಾಚರಣೆಗೊಳಿಸಲು ಈಗಾಗಲೇ ಸಕಲ ಸಿದ್ದತೆ ನಡೆದಿದೆ.ಬೇರೆ ದೇಶಗಳಲ್ಲಿ ಚಾಲಕನಿಲ್ಲದೆ ಸ್ವಯಂಚಾಲಿತವಾಗಿ…

Read More

ಜನ ಸಾಮನ್ಯರನ್ನು ಆರ್ಥಿಕವಾಗಿ ಸದೃಢಗೊಳಿಸಲು ಪಂಚ ಗ್ಯಾರಂಟಿ ಯೋಜನೆಗಳನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ. ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿಯವರು ತಿಳಿಸಿದರು. ಅವರು ಇಂದು ಮೈಷುಗರ್ ಫ್ಯಾಕ್ಟರಿ ಮೈದಾನದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾರಂಭ ಮತ್ತು ಡಿ. ಸಿ. ಸಿ. ಬ್ಯಾಂಕ್ ನ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯ ವಿತರಣೆ ಹಾಗೂ ಮಾಹಿತಿ ನೀಡುವ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಡಿ. ಸಿ. ಸಿ. ಬ್ಯಾಂಕ್ ವತಿಯಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ 112 ಕೋಟಿ ರೂಗಳನ್ನ 5 ಲಕ್ಷದೊಳಗಿನ ಸಾಲವನ್ನು ಬಡ್ಡಿ ರಹಿತವಾಗಿ ನೀಡಲಾಗುತ್ತಿದೆ. 5 ಲಕ್ಷಕ್ಕಿಂತ ಹೆಚ್ಚಿನ ಸಾಲಕ್ಕೆ ಮಾತ್ರ ಬಡ್ಡಿಯನ್ನು ವಿಧಿಸಲಾಗುತ್ತಿದೆ ಎಂದರು. ರಾಜ್ಯದಲ್ಲಿ ಈ ವರ್ಷ 20 ಲಕ್ಷ ರೈತರಿಗೆ 16,000ಕೋಟಿ ರೂಗಳನ್ನು ಬಡ್ಡಿ ರಹಿತ( ಶೂನ್ಯ ಬಡ್ಡಿ)ಸಾಲ ನೀಡಲಾಗಿದೆ. ಅದರ ಬಡ್ಡಿಯನ್ನು ಸರ್ಕಾರ ಡಿ. ಸಿ. ಸಿ ಬ್ಯಾಂಕಿಗೆ ಪಾವತಿಸುತ್ತದೆ. ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ…

Read More

ಬೆಂಗಳೂರು: ಇಷ್ಟು ದಿನ ನಿಗಮ ಮಂಡಳಿ ಸ್ಥಾನ ಯಾರಿಗೆಲ್ಲಾ ಕೊಡೋದು ಅಂತಾ ಚರ್ಚೆ ಆಗುತ್ತಲೇ ಇತ್ತು. ನಿನ್ನೆ ಅಂದ್ರೆ ಸೋಮವಾರ ಪಟ್ಟಿ ರೆಡಿಮಾಡಿ ಹೆಸರನ್ನು ಘೋಷಿಸಿದ್ದಾರೆ. ಹೌದು ಅದರಲ್ಲಿ ಸಚಿವರ ಆಪ್ತರಿಗೂ ಸೀಟು ದಕ್ಕಿದ್ದು ಹಾಗೆ  ಸಿಎಂ ಕ್ಲೋಸ್ ಫ್ರೆಂಡ್ ಗೂ ನಿಗಮ ಭಾಗ್ಯ ದೊರಕಿದ್ದು  ಸರೋವರ ಶ್ರೀನಿವಾಸ್ ಗೆ ನಿಗಮ ಭಾಗ್ಯ ನೀಡಿರೋ ಸಿಎಂ ಸಿದ್ದರಾಮಯ್ಯ. ಸರೋವರ ಶ್ರೀನಿವಾಸ್ ಜೆಡಿಎಸ್ ಮಾಜಿ ಎಂಎಲ್ಸಿ ಸದ್ಯ ಸಿಎಂ ಪರಮಾಪ್ತ ಆಗಿದ್ದು ಹೀಗಾಗಿ ನಿಗಮ ಮಂಡಳಿಯಲ್ಲಿ ಸ್ಥಾನ ದೊರೆತಿದೆ. ಸಿಎಂ ಸಿದ್ದರಾಮಯ್ಯ  ನಡೆಗೆ ಪಕ್ಷದೊಳಗೆ ಭಾರಿ ಚರ್ಚೆ ನಡೆದಿದ್ದು  ಸರೋವರ ಶ್ರೀನಿವಾಸರಿಂದ ಪಕ್ಷಕ್ಕೆ ಯಾವುದೇ ಕೊಡುಗೆ ಇಲ್ಲ ಪಕ್ಷಕ್ಕಾಗಿ ದುಡಿದಿಲ್ಲ ಸಂಘಟನೆಯನ್ನೂ ಮಾಡಿಲ್ಲ ಆದರೆ ಪರಮಾಪ್ತ ಎಂಬ ಒಂದೆ ಕಾರಣಕ್ಕೆ ನಿಗಮ ಭಾಗ್ಯ ಪಕ್ಷಕ್ಕಾಗಿ ರಾತ್ರಿ ಹಗಲು ದುಡಿದವರು ಲೆಕ್ಕಕ್ಕಿಲ್ಲ ಸಿಎಂ ನಡೆಗೆ ಪಕ್ಷದೊಳಗೆ ಅಸಮಾಧಾನದ ಮಾತು ಕೇಳಿ ಬರುತ್ತಿದೆ. ಇದರ ಬಗ್ಗೆ ಸಿಎಂ ಏನು ಹೇಳ್ತಾರೆ ಕೇಳಬೇಕಿದೆ.

Read More

ಬೆಂಗಳೂರು: “ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಮಂಗಳವಾರ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಕೇಸರಿ ಶಾಲು ಧರಿಸಿ ಬಿಜೆಪಿ ನಾಯಕರ ಜತೆ ಪ್ರತಿಭಟನೆ ಮಾಡಿದ ಬಗ್ಗೆ ಮಾಧ್ಯಮದವರು ಕೇಳಿದಾಗ ಅವರು ಪ್ರತಿಕ್ರಿಯಿಸಿದ್ದು ಹೀಗೆ; “ಇದು ಅವರ ಪಕ್ಷದ ವಿಚಾರ, ಅವರು ಏನಾದರೂ ಮಾಡಿಕೊಳ್ಳಲಿ. ನಮಗೂ ಅದಕ್ಕೂ ಸಂಬಂಧವಿಲ್ಲ. ಅವರು ಯಾವ ಬಣ್ಣದ ಶಾಲನ್ನಾದರೂ ಧರಿಸಲಿ. ಬಿಜೆಪಿಗೆ ಮಂಡ್ಯದಲ್ಲಿ ರಾಜಕೀಯ ನೆಲೆ ಇಲ್ಲ. ಅಲ್ಲಿ ನೆಲೆ ಕಂಡುಕೊಳ್ಳಲು ಇವರಿಬ್ಬರಲ್ಲಿ ಯಾರು ಯಾರನ್ನು ನುಂಗುತ್ತಾರೋ ಗೊತ್ತಿಲ್ಲ.” ಮಂಡ್ಯದಲ್ಲಿ ಕೋಮು ಗಲಭೆ ಪ್ರಯೋಗ: ಮಂಡ್ಯದಲ್ಲಿ ಕೇಸರಿ ಧ್ವಜದ ವಿವಾದದ ಬಗ್ಗೆ ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ಶಾಂತಿ ಕದಡಬೇಕು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಬೇಕು ಎಂದು ಮುಗ್ಧ ಹಳ್ಳಿ ಜನರನ್ನು ಎತ್ತಿಕಟ್ಟುತ್ತಿದ್ದಾರೆ. ನಮ್ಮ ಭಾಗದ ಎಲ್ಲಾ ಜಾತಿ ಹಾಗೂ ಧರ್ಮದ ಜನರು ಬಹಳ…

Read More

ಇಸ್ಲಾಮಾಬಾದ್:‌ ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಮುಖ್ಯಸ್ಥ ಇಮ್ರಾನ್ ಖಾನ್ ಮತ್ತು ಶಾ ಮೊಹಮ್ಮದ್‌ ಖುರೇಷಿಗೆ ಪಾಕಿಸ್ತಾನ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಸೈಫರ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಅಬುವಲ್ ಹಸ್ನಾತ್ ಮುಹಮ್ಮದ್ ಜುಲ್ಕರ್ನೈನ್ ಅವರು  ಈ ಆದೇಶವನ್ನು ನೀಡಿದ್ದಾರೆ ಎಂದು ಇಮ್ರಾನ್ ಖಾನ್ ಅವರ ವಕೀಲ ಶೋಯೆಬ್ ಶಾಹೀನ್ ಅವರು ತಿಳಿಸಿದ್ದಾರೆ. ಇಮ್ರಾನ್‌ ಖಾನ್‌ ಜೊತೆಗೆ ಮಾಜಿ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಕೂಡ ಇದೇ ಪ್ರಕರಣದಲ್ಲಿ 10 ವರ್ಷಗಳ ಶಿಕ್ಷೆ ಅನುಭವಿಸಲಿದ್ದಾರೆ ಎಂದಿದ್ದಾರೆ. ಪಾಕಿಸ್ತಾನದ ವಿಶೇಷ ನ್ಯಾಯಾಲಯವು ಕಳೆದ ತಿಂಗಳು ಅಡಿಯಾಲಾ ಜಿಲ್ಲಾ ಜೈಲಿನಲ್ಲಿ ಸೈಫರ್ ಪ್ರಕರಣದ ಹೊಸ ವಿಚಾರಣೆಯನ್ನು ಪ್ರಾರಂಭಿಸಿತ್ತು. https://ainlivenews.com/if-you-save-%e2%82%b92-per-day-you-will-get-a-pension-of-%e2%82%b936000-every-year-apply-today/  ಡಿಸೆಂಬರ್ 13 ರಂದು ಈ ಪ್ರಕರಣದಲ್ಲಿ ಇಮ್ರಾನ್ ಖಾನ್ ಮತ್ತು ಶಾ ಮೆಹಮೂದ್ ಖುರೇಷಿ ಎರಡನೇ ಬಾರಿಗೆ ಶಿಕ್ಷೆಗೊಳಗಾಗಿದ್ದರು. ಪ್ರಸ್ತುತ ಜೈಲಿನಲ್ಲಿರುವ  ಇಮ್ರಾನ್ ಖಾನ್ ಮತ್ತು  ಮೊಹಮ್ಮದ್ ಖುರೇಷಿ ಅಕ್ಟೋಬರ್‌ನಲ್ಲಿ ಈ ಪ್ರಕರಣದಲ್ಲಿ ಪ್ರಾಥಮಿಕ ಆರೋಪಗಳನ್ನು…

Read More