Author: AIN Author

ಸ್ಯಾಂಡಲ್ವುಡ್ ಭರವಸೆಯ ನಟ ಕಂ ನಿರ್ದೇಶಕ ಅನೀಶ್ ತೇಜೇಶ್ವರ್. ಕಮರ್ಶಿಯಲ್ ಸಿನಿಮಾ ಹೀರೋ ಆಗಿ ಮಿಂಚಿರುವ ಅನೀಶ್ ರೋಮ್ಯಾಂಟಿಕ್ ಹೀರೋ ಆಗಿ ತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಸದ್ಯ ‘ಆರಾಮ್ ಅರವಿಂದ್ ಸ್ವಾಮಿ’ಆಗಿ ತೆರೆ ಮೇಲೆ ನಯಾ ಅವತಾರದಲ್ಲಿ ಬರಲು ರೆಡಿಯಾಗಿರುವ ಅವರು, ಧಿಡೀರನೇ ಟಾಲಿವುಡ್ ಮೆಗಾ ಸ್ಟಾರ್ ಚಿರಜೀವಿ ಜೊತೆ ಪ್ರತ್ಯಕ್ಷರಾಗಿದ್ದಾರೆ. ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ ಪ್ರಶಸ್ತಿಗೆ ಭಜನರಾಗಿರುವ ಮೆಗಾಸ್ಟಾರ್ ಚಿರಂಜೀವಿ ಅವರನ್ನು ನಟ ಅನೀಶ್ ಭೇಟಿಯಾಗಿದ್ದಾರೆ, ಇಂದು ಚಿರು ಹೈದ್ರಾಬಾದ್ ನಿವಾಸದಲ್ಲಿ ಭೇಟಿಯಾಗಿರುವ ಅವರು, ಮೆಗಾಸ್ಟಾರ್ ಗೆ ಶುಭಾಶಯ ತಿಳಿಸಿದ್ದಾರೆ. ಇದೇ ವೇಳೆ ತಮ್ಮ ಬಹುನಿರೀಕ್ಷಿತ ಆರಾಮ್ ಅರವಿಂದ ಸ್ವಾಮಿ ಚಿತ್ರದ ಕಂಟೆಂಟ್ ತೋರಿಸಿದ್ದಾರೆ. ಸಿನಿಮಾದ ಕಂಟೆಂಟ್ ನೋಡಿ ಮೆಚ್ಚಿಕೊಂಡ ಚಿರಂಜೀವಿ ಅನೀಶ್ ಚಿತ್ರಕ್ಕೆ ಬೆಸ್ಟ್ ವಿಷಸ್ ತಿಳಿಸಿದ್ದಾರೆ. ಅನೀಶ್ ಹುಟ್ಟುಹಬ್ಬದ ಅಂಗವಾಗಿ ಬಿಡುಗಡೆಯಾಗಿದ್ದ ಆರಾಮ್ ಅರವಿಂದ ಸ್ವಾಮಿ ಟೈಟಲ್ ಟ್ರ್ಯಾಕ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಅರ್ಜುನ್ ಜನ್ಯ ಮ್ಯೂಸಿಕ್, ನಾಗಾರ್ಜುನ್ ಶರ್ಮಾ…

Read More

ಬೆಂಗಳೂರು: ಕುಮಾರಸ್ವಾಮಿ ತಪ್ಪು ಮಾಡಿದ್ರೆ ನೇಣಿಗೆ ಹಾಕಿ. ನೀವು ತಪ್ಪು ಮಾಡಿದ್ರೆ ಏನು ಮಾಡಬೇಕು ಹೇಳಿ ಎಂದು ಕೆರಗೋಡು ಪ್ರಕರಣದ ತನಿಖೆಗೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸವಾಲು ಹಾಕಿದರು. ಜೆಡಿಎಸ್ ಕಚೇರಿಯಲ್ಲಿ ಸರ್ವೋದಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಹೆಚ್‌ಡಿಕೆ, ಕೆರಗೋಡು ಘಟನೆಯಲ್ಲಿ ಸರಿಯಾಗಿ ಕ್ರಮ ತೆಗೆದುಕೊಂಡಿದ್ರೆ ಒಂದು ತನಿಖೆ ಮಾಡಿಸಿ. ಅದರ ಸರ್ಟಿಫಿಕೇಟ್ ತೆಗೆದುಕೊಳ್ಳಿ. ಕೆರಗೋಡು ಘಟನೆ ತನಿಖೆ ಮಾಡಿ. ಕುಮಾರಸ್ವಾಮಿ ತಪ್ಪು ಮಾಡಿದ್ರೆ ನೇಣಿಗೆ ಹಾಕಿ. ನೀವು ತಪ್ಪು ಮಾಡಿದ್ರೆ ಏನ್ ಮಾಡಬೇಕು ಹೇಳಿ ಎಂದು ಪ್ರಶ್ನಿಸಿದರು ರಾಜ್ಯದಲ್ಲಿ ಹಲವಾರು ದಿನಗಳಿಂದ ಅನೇಕ ವಿಷಯ ನಡೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳ ಮುಂದೆ ಕಡಿಮೆ ಬರ್ತಿದ್ದೇನೆ. ಅನಿವಾರ್ಯವಾಗಿ ಇವತ್ತು ಭಾವನೆ ಹಂಚಿಕೊಳ್ಳೋ ಪರಿಸ್ಥಿತಿ ಈ ಸರ್ಕಾರದ ನಡವಳಿಕೆಯಿಂದ ಬಂದಿದೆ. ಎರಡು ದಿನಗಳಿಂದ ಮಂಡ್ಯದಲ್ಲಿ ಒಂದು ಘಟನೆ ನಡೆಯುತ್ತಿದೆ. ಕೆರಗೋಡಿನಲ್ಲಿ ಧ್ವಜಸ್ತಂಭದ ರಾಜಕೀಯ ನಡೆಯುತ್ತಿದೆ. ದೇವರಾಜ್ ಅರಸ್ ಅವರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಶೋಷಿತ ವರ್ಗದ ಜನರ…

Read More

ತುಮಕೂರು: ಪ್ಲಾಸ್ಟಿಕ್ ಬಾಟಲ್‌ʼಗಳನ್ನು ಉಪಯೋಗಿಸಿ ಗಿನ್ನಿಸ್ ದಾಖಲೆ ಮಾಡುವಲ್ಲಿ ತುಮಕೂರು ಸ್ಮಾರ್ಟ್ ಸಿಟಿ,ಮಹಾನಗರ ಪಾಲಿಕೆ ಯಶಸ್ವಿಯಾಗಿದೆ..ತುಮಕೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಪ್ಲಾಸ್ಟಿಕ್ ಬಾಟಲ್ ಗಳನ್ನು ಬಳಸಿ ತುಮಕೂರು ಎಂಬ ಕನ್ನಡ ಪದದ ಕಲಾಕೃತಿ ನಿರ್ಮಿಸುವ ಮೂಲಕ ತುಮಕೂರು ನಗರವನ್ನು ವಿಶ್ವ ಗಿನ್ನಿಸ್ ದಾಖಲೆಗೆ ಸೇರಿಸುವ ಪ್ರಯತ್ನ ಯಶಸ್ವಿಯಾಗಿದೆ.. ಸಾರ್ವಜನಿಕರಲ್ಲಿ ಪ್ಲಾಸ್ಟಿಕ್ ಬಳಕೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪಾಲಿಕೆ ಆಯುಕ್ತರಾದ ಅಶ್ವಿಜಾ.ಬಿ.ವಿ. ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನೆರವೇರಿದೆ..ಕಳೆದ 20 ದಿನಗಳಿಂದ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳ ಮನೆ, ಹೋಟೆಲ್, ರೆಸ್ಟೋರೆಂಟ್, ಫುಡ್ ಸ್ಟ್ರೀಟ್, ಕನ್ವೆನ್ಷನ್ ಹಾಲ್ ಗಳಿಂದ ಸಂಗ್ರಹಿಸಲಾದ ಏಕಬಳಕೆ ಬಾಟಲಿಗಳನ್ನು ಕಲಾಕೃತಿಗೆ ಬಳಸಲಾಗಿದೆ..ಈ ಹಿಂದೆ 14500 ಪ್ಲಾಸ್ಟಿಕ್ ಬಾಟಲಿ ಬಳಸಿ ಕತಾರ್ ದೇಶದಲ್ಲಿ ಕತಾರ್ ಎಂಬ ಆಂಗ್ಲ ಪದದ ಕಲಾಕೃತಿ ನಿರ್ಮಿಸಿ ಗಿನ್ನಿಸ್ ದಾಖಲೆಯಾಗಿತ್ತು, ಈ ದಾಖಲೆ ಮುರಿದು ಹೊಸ ದಾಖಲೆ ನಿರ್ಮಿಸಲು ಅರ್ಧ ಲೀಟರ್ ಹಾಗೂ 1 ಲೀಟರ್​​ನ 1.5 ಲಕ್ಷ…

Read More

ಬಳ್ಳಾರಿ: ಟ್ರಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುರುಗೋಡು ತಾಲೂಕಿನ ವದ್ದಟ್ಟಿ ರಸ್ತೆಯ ಬಳಿ ನಡೆದಿದೆ. ಕೆ.ಕಲ್ಗುಡೆಪ್ಪ (24) ಮೃತ ದುರ್ಧೈವಿಯಾಗಿದ್ದು, ಟ್ರಾಕ್ಟರ್ ಮತ್ತು ಟ್ರಾಕ್ಟರ್ ಚಾಲಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಘಟನೆ ಸಂಬಂಧ ಕುರುಗೋಡು ಪೋಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು: ನಗರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು  ಮೂರು ಕೋಟಿ ರೂಪಾಯಿ ಮೌಲ್ಯದ ಇ-ಸಿಗರೇಟ್ (E-cigarette) ಅನ್ನು  ವಶಪಡಿಸಿಕೊಂಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಇ-ಸಿಗರೇಟ್​ಗಳನ್ನು ದುಬೈಯಿಂದ ಬೆಂಗಳೂರಿಗೆ ತರಿಸಲಾಗಿತ್ತು ಎಂಬುದು ತಿಳಿದುಬಂದಿದೆ. ಒಂದು ಸಿಗರೇಟ್​​ಗೆ ಐದರಿಂದ ಆರು ಸಾವಿರ ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು. ಇ-ಸಿಗರೇಟ್ ಅನ್ನು ಬ್ಲೂ ಡಾರ್ಟ್ ಕೊರಿಯರ್ ಮೂಲಕ ದುಬೈಯಿಂದ ದೆಹಲಿಗೆ ತೆರಿಸಿ ಅಲ್ಲಿಂದ ಬೆಂಗಳೂರಿಗೆ ತರಿಸಲಾಗಿತ್ತು. ಬೆಂಗಳೂರಿನ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಇರಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಶೋಹೇಬ್ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಹಲವಾರು ಸ್ಮೋಕಿ ಜೋಜ್ ಹಾಗೂ ರೀಟೆಲ್ ಮಾರಾಟ ಮಾಡುವವರಿಗೆ ಇ-ಸಿಗರೇಟ್​​ ಅನ್ನು ನೀಡುತ್ತಿದ್ದ. ಅನ್​ಲೈನ್ ಮೂಲಕ ಆರ್ಡರ್ ಮಾಡಿಸಿಕೊಂಡು ಪೋರ್ಟರ್ ಮತ್ತು ಡ್ನಜೋ ಮೂಲಕ ಪೂರೈಕೆ ಮಾಡುತ್ತಿದ್ದ ಎಂದು ಮಾಹಿತಿ ನೀಡಿದ್ದಾರೆ.

Read More

ಬೆಂಗಳೂರು: ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್​ ಮಂಡನೆಯಾಗಲಿದ್ದು  ಹಾಗೆ ಈ ಬಾರಿ 3.80 ಲಕ್ಷ ಕೋಟಿ ರೂ. ಬಜೆಟ್‌ ಮಂಡಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ 15 ಕೋಟಿ ಹೆಚ್ಚುವರಿ ಅನುದಾನವನ್ನು ನೀಡುವಂತೆ  ವಿಧಾನಪರಿಷತ್‌ ನಾಐಕ ಟಿ.ಎ.ಶರವಣ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ. 2024-25ನೇ ಸಾಲಿನಲ್ಲಿ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ 15 ಕೋಟಿ ಹೆಚ್ಚುವರಿ ಅನುದಾನವನ್ನು ನೀಡುವಂತೆ ಕೋರಿ ಸನ್ಮಾನ್ಯ ಮುಖ್ಯಮಂತ್ರಿಗಳಾದಸಿದ್ದರಾಮಯ್ಯ ಅವರಿಗೆ ಮನವಿ ಮಾಡಿ ಪತ್ರ ಸಲ್ಲಿಸಿದ ಪರಿಷತ್‌ ನಾಯಕ ಟಿ.ಎ. ಶರವಣ.

Read More

ಅತೀ ನಿರೀಕ್ಷಿತ ಅಲ್ಲು ಅರ್ಜುನ್ ನಟನೆಯ ಪುಷ್ಪ-2 ಬಿಡುಗಡೆ ಕುರಿತಂತೆ ಮತ್ತೊಂದು ಸ್ಪಷ್ಟನೆ ಬಂದಿದೆ. ಅಲ್ಲಿಗೆ ನಿಗದಿತ ದಿನಾಂಕದಂದೆ ಸಿನಿಮಾ ರಿಲೀಸ್ (Released) ಆಗುವುದು ಫಿಕ್ಸ್ ಆಗಿದೆ. ನಿನ್ನೆಯಷ್ಟೇ ನಿರ್ಮಾಣ ಸಂಸ್ಥೆಯು ಪೋಸ್ಟರ್ ಹಂಚಿಕೊಂಡಿದ್ದು, ಪುಷ್ಪ 2 ಸಿನಿಮಾ ರಿಲೀಸ್  ಗೆ 200 ದಿನವಷ್ಟೇ ಬಾಕಿ ಎಂದು ಬರೆದಿದೆ. ಅಲ್ಲಿಗೆ ಇಂದಿಗೆ 199 ದಿನ ಬಾಕಿ ಉಳಿದಿದೆ. ಈ ಹಿಂದೆ ಸ್ವಾತಂತ್ರ್ಯ ದಿನದಂದು ಅಂದರೆ ಆಗಸ್ಟ್ 15ರಂದು ವಿಶ್ವಾದ್ಯಂತ ಚಿತ್ರ ತೆರೆಗೆ ಬರಲಿದೆ ಎಂದು ಸ್ಪೆಷಲ್ ಪೋಸ್ಟರ್ ಮೂಲಕ ಚಿತ್ರತಂಡ ರಿಲೀಸ್ ಡೇಟ್ ಘೋಷಿಸಿತ್ತು. ಫ್ಯಾನ್ಸ್ ಪುಷ್ಪ ಸೀಕ್ವೆಲ್ ನೋಡೋದಿಕ್ಕೆ ಎಕ್ಸೈಟ್ ಆಗಿದ್ದರು. ಇದೀಗ ರಿಲೀಸ್ ಡೇಟ್ ಮುಂದೆ ಹೋಗಿದೆ ಎಂದು ಸುದ್ದಿಯನ್ನು ಹರಿಬಿಡಲಾಗಿದೆ. ಅಂದು ಜ್ಯೂನಿಯರ್ ಎನ್.ಟಿ.ಆರ್ ನಟನೆಯ ದೇವರ ಸಿನಿಮಾ ಬರಲಿರುವ ಕಾರಣ ಸಿನಿಮಾ ಬಿಡುಗಡೆ ಮುಂದಕ್ಕೆ ಹೋಗಿದೆ ಅಂತ ಸುದ್ದಿ ಆಗಿತ್ತು. ಇಂಥದ್ದೊಂದು ಸುದ್ದಿ ಆದ ಬೆನ್ನಲ್ಲೇ ಸಿನಿಮಾ ತಂಡದಿಂದ ಸ್ಪಷ್ಟನೆ ಬಂದಿದೆ. ಯಾವುದೇ ಕಾರಣಕ್ಕೂ ರಿಲೀಸ್ ಡೇಟ್…

Read More

ಕಲಬುರಗಿ: ಮದುವೆ ವಿಚಾರಕ್ಕೆ ಕಲಹ ಉಂಟಾದ ಹಿನ್ನಲೆ ಬಾವಿಯಲ್ಲಿ ಬಿದ್ದು ಅಣ್ಣ ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ. ಚಿಂಚೋಳಿ ತಾಲ್ಲೂಕಿನ ಪಟಪಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಅಣ್ಣ ಸಂದೀಪ್ ತಂಗಿ ನಂದಿನಿ‌ ಸಾವಿಗೆ ಶರಣಾದ ದುರ್ದೈವಿಗಳು ಎನ್ನಲಾಗಿದೆ. ಮದುವೆ ವಿಚಾರದಲ್ಲಿ ಮನೆಯಲ್ಲಿ ಗಲಾಟೆ ಮಾಡಿಕೊಂಡಿದ್ದ ನಂದಿನಿ ಬಳಿಕ ಮನೆಯಿಂದ ಹೊರಹೋಗಿ ಬಾವಿಗೆ ಹಾರಿದ್ದಾಳೆ. ಕೂಡಲೇ ನಂದಿನಿಯ ಹಿಂದೇನೆ ತೆರಳಿದ ಅಣ್ಣ ಸಂದೀಪ್ ತಂಗಿ ಬಾವಿಗೆ ಹಾರಿರೋದನ್ನ ಕಂಡು ತಾನೂ ಬಾವಿಗೆ ಹಾರಿದ್ದಾನೆ. ಈಜು ಬಾರದ ಪರಿಣಾಮ ಅಣ್ಣ ತಂಗಿಯಿಬ್ಬರು ಬಾವಿಯಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ  ಮುಂದುವರೆದಿದೆ..

Read More

ಬಳ್ಳಾರಿ: ರಸ್ತೆ ಅಪಘಾತದಲ್ಲಿ ಕಂಪ್ಲಿಯ ದೇವರಮನೆ ಯಲ್ಲಪ್ಪ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ರಸ್ತೆ ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಸಿಂಧನೂರು ಮಾರ್ಗವಾಗಿ ಕಂಪ್ಲಿ ಪಟ್ಟಣದ ಕಡೆ ತೆರಳುತ್ತಿರುವಾಗ ಕಾರು ಹಾಗೂ ಲಾರಿಯ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಕುಳಿತಿದ್ದ ದೇವರ ಮನೆ ಯಲ್ಲಪ್ಪ ಅವರ ತಲೆಗೆ ತೀವ್ರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದ್ದಿದ್ದಾನೆ. ಇನ್ನು ಕಾರಿನಲ್ಲಿ ಕುಳಿತಿದ್ದ ಹೆಂಡತಿ, ಮಗ, ಸೊಸೆ ಹಾಗೂ ಮೊಮ್ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕಂಪ್ಲಿ ಪೊಲೀಸರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Read More

ಮಂಡ್ಯ: ಸ್ವಾಭಿಮಾನ, ಗೌರವದ ವಿಚಾರದಲ್ಲಿ ಮಂಡ್ಯ ಜಿಲ್ಲೆ ರಾಜ್ಯಕ್ಕೆ ಮಾದರಿ. ಜನತಾ ಪಕ್ಷವನ್ನ ನಿನ್ನೆಯೇ ಅಂತಿಮಗೊಳಿಸಿದ್ದೀರಿ ಎಂದು ಹೆಚ್ಡಿಕೆ ವಿರುದ್ಧ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೀವು (ಕುಮಾರಸ್ವಾಮಿ) ಸಿಎಂ ಆಗುವುದಕ್ಕೆ ಮಂಡ್ಯ ಜನರ ಆಶೀರ್ವಾದ ಕಾರಣ ಎಂಬುದನ್ನು ಮರೆಯಬೇಡಿ. ಜಿಲ್ಲೆಯ ಜನರ ಜೀವನ ಹಾಳುಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜವಾಬ್ದಾರಿಯುತ ಪ್ರತಿಪಕ್ಷದ ನಾಯಕರಾಗಿ ನೀವು ನಮ್ಮನ್ನು ಸರಿಯಾದ ದಾರಿಯಲ್ಲಿ ಸಾಗುವಂತೆ ನೋಡಿಕೊಳ್ಳಬೇಕೇ ವಿನಃ ಶಾಂತಿ ಕದಡುವ ಕೆಲಸ ಮಾಡಬಾರದು. ಜಿಲ್ಲೆಯ ಜನರೇ ನಿಮಗೆ ಅಧಿಕಾರ ನೀಡಿದ್ದು. ಕಳೆದ ಬಾರಿಯ ಚುನಾವಣೆಯಲ್ಲಿ ನಮ್ಮನ್ನು ಆಶೀರ್ವದಿಸಿದ್ದಾರೆ. ಮುಂದೆ ನಾವು ಸರಿಯಾದ ದಾರಿಯಲ್ಲಿ ಸಾಗದಿದ್ದರೆ ನಮಗೂ ಜನ ಪಾಠ ಕಲಿಸಬಹುದು. ಇದನ್ನು ನೀವು ನೆನಪಿನಲ್ಲಿಟ್ಟುಕೊಳ್ಳಿ. ಅದು ಬಿಟ್ಟು ಸಂವಿಧಾ, ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಗಳಿಗೆ ಪ್ರಚೋದನೆ ನೀಡಬೇಡಿ ಎಂದು ಕುಮಾರಸ್ವಾಮಿ ಅವರನ್ನುದ್ದೇಶಿಸಿ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.…

Read More