Author: AIN Author

ಅದ್ದೂರಿಯಾಗಿ ಫಿನಾಲೆ ಮುಗಿಸಿರುವ ಬಿಗ್ ಬಾಸ್ ಸೀಸನ್ 10 ರ ಜರ್ನಿ ವಿಟಿಯಲ್ಲಿ ಎಲ್ಲೂ ಕೂಡ ರಕ್ಷಕ್ ಹಾಗೂ ಈಶಾನಿ ಕಾಣಿಸಿಲ್ಲ. ರಕ್ಷಕ್ ಬುಲೆಟ್ ಅವರು ಬಿಗ್ ಬಾಸ್ ಮನೆಯಿಂದ ಕೇವಲ ಒಂದೇ ತಿಂಗಳಿಗೆ ಔಟ್ ಆದರು. ಇದು ಅವರ ಫ್ಯಾನ್ಸ್​ಗೆ ಸಾಕಷ್ಟು ಬೇಸರ ಮೂಡಿಸಿತ್ತು. ಸ್ವತಃ ರಕ್ಷಕ್ ಅವರು ಈ ಬಗ್ಗೆ ಅಸಮಾಧಾನಗೊಂಡಿದ್ದರು. ಈ ಕಾರಣದಿಂದಲೇ ಅವರು ಬಾಯಿಗೆ ಬಂದಂತೆ ಹೇಳಿಕೆ ನೀಡೋಕೆ ಆರಂಭಿಸಿದ್ದರು. ಸಂದರ್ಶನಗಳಲ್ಲಿ ಬಾಯಿಗೆ ಬಂದಂತೆ ಮಾತನಾಡಿದ್ದರು. ಈಶಾನಿ ಅವರು ದೊಡ್ಮನೆ ಒಳಗೆ ಅತಿಥಿಯಾಗಿ ಎಂಟ್ರಿ ಕೊಟ್ಟಾಗ ಪ್ರತಾಪ್ ಬಗ್ಗೆ ಮಾತನಾಡಿದ್ದರು. ಇದನ್ನು ಸುದೀಪ್ ಖಂಡಿಸಿದ್ದರು. ಪರಿಣಾಮ ಯಾವ ವಿಡಿಯೋ ಟೇಪ್​ನಲ್ಲೂ (ವಿಟಿ) ಅವರು ಕಾಣಿಸಿಲ್ಲ. ತಮ್ಮ ಬಗ್ಗೆ ನೆಗೆಟಿವ್ ಟಾಕ್ ಮಾಡಿದವರಿಗೆ ಸುದೀಪ್ ಎಚ್ಚರಿಕೆ ನೀಡದೇ ಬಿಡುವುದಿಲ್ಲ. ರಕ್ಷಕ್ ಹಾಗೂ ಈಶಾನಿ ಇಬ್ಬರಿಗೂ ಎಚ್ಚರಿಕೆ ನೀಡುವ ಕೆಲಸವನ್ನು ಅವರು ಮಾಡಿದ್ದರು. ಇದರ ಜೊತೆ ಯಾವುದೇ ವಿಡಿಯೋ ಟೇಪ್​ನಲ್ಲಿ ಅವರು ಕಾಣಿಸಿಲ್ಲ. ಕಿರಿಕ್ ಮಾಡಿಕೊಂಡಿದ್ದರಿಂದಲೇ ಅವರನ್ನು ಎಲ್ಲಾ…

Read More

ಬೆಂಗಳೂರು:- ರಾಮ ಮಂದಿರದ ವಿಚಾರ ಮುಂದಿಟ್ಟು ರಾಜಕಾರಣ ಮಾಡುವುದು ಸೂಕ್ತವಲ್ಲ ಎಂದು ಸಚಿವ ಕೆ ಹೆಚ್ ಮುನಿಯಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ದೇವರ ಹೆಸರಿನಲ್ಲಿ ರಾಜಕೀಯ ಮಾಡುವುದು ಸೂಕ್ತವಲ್ಲ ಎಂದರು. ಮಂಡ್ಯದಲ್ಲಿ ಹನುಮ ಧ್ವಜ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ತಿರುಗೇಟು ನೀಡಿದ್ದಾರೆ. ಈ ವೇಳೆ, ದೇವರ ಹೆಸರಿನಲ್ಲಿ ರಾಜಕೀಯ ಮಾಡುವುದು ಸೂಕ್ತವಲ್ಲ. ಭಾರತ ದೇಶ ಜಾತ್ಯಾತೀತ ರಾಷ್ಟ್ರವಾಗಿದೆ. ಈ ರಾಷ್ಟ್ರದಲ್ಲಿ ಎಲ್ಲಾ ವರ್ಗದ, ಎಲ್ಲಾ ಧರ್ಮಗಳ ಜನ ಇದ್ದಾರೆ. ವ್ಯವಸ್ಥೆಯಲ್ಲಿ ಸಂವಿಧಾನ ಬದ್ಧವಾಗಿ ನಾವೆಲ್ಲ ಅಣ್ಣ-ತಮ್ಮಂದಿರಂತೆ ಬಾಳಬೇಕು ಎಂದಿದ್ದಾರೆ. ನಾವು ಗ್ಯಾರೆಂಟಿಗಳನ್ನು ಕೊಟ್ಟು ಮತ ಕೇಳುತ್ತಿದ್ದೇವೆ. ಅವರು ನಮಗಿಂತ ಒಳ್ಳೆಯ ಕೆಲಸ ಮಾಡಿ ಮತ ಕೇಳಲಿ. ರಾಜಕೀಯ ಪಕ್ಷಗಳು ಸಿದ್ಧಾಂತದ ಮೇಲೆ ರಾಜಕಾರಣ ಮಾಡಬೇಕು. ಎಲ್ಲಾ ಪಕ್ಷಗಳಲ್ಲೂ ಎಲ್ಲಾ ಧರ್ಮದ ಜನರು ಇರುತ್ತಾರೆ. ಅವರಿಗೆ ಇಷ್ಟ ಬಂದ ದೇವರನ್ನು ಪೂಜೆ ಮಾಡುತ್ತಾರೆ. ರಾಮ ಮಂದಿರದ ವಿಚಾರ ಮುಂದಿಟ್ಟು ರಾಜಕಾರಣ ಮಾಡುವುದು ಸೂಕ್ತವಲ್ಲ ಎಂದಿದ್ದಾರೆ.

Read More

ಬೀದರ್:-ಇಂದು ಪಕ್ಷದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಕಾಲಿಗೆ ಬಿದ್ದ ಪ್ರಭು ಚೌಹಾಣ್, ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದರು. ಆ ಮೂಲಕ ಪರೋಕ್ಷವಾಗಿ ಖೂಬಾಗೆ ಟಿಕೆಟ್ ನೀಡುದಂತೆ ಸಂದೇಶ ರವಾನಿಸಿದರು. ಇಂದು ಬೀದರ್ ಜಿಲ್ಲಾ​ ಬಿಜೆಪಿ ಅಧ್ಯಕ್ಷರ ಪದಗ್ರಹಣ ಸಮಾರಂಭ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಭಾಗಿಯಾಗಿದ್ದರು. ಈ ವೇಳೆ ವಿಜಯೇಂದ್ರರ ಕಾಲಿಗೆ ಬಿದ್ದ ಪ್ರಭು ಚೌಹಾಣ್, ಬೀದರ್ ಲೋಕಸಭಾ ಕ್ಷೇತ್ರದ ಟಿಕೆಟ್ ಸಾಮಾನ್ಯ ಕಾರ್ಯಕರ್ತನಿಗೆ ನೀಡುವಂತೆ ಮನವಿ ಮಾಡಿದ್ದಾರೆ. ಒಳ್ಳೆ ಕಾರ್ಯಕರ್ತನಿಗೆ ಟಿಕೆಟ್ ಕೊಡಿ ನಾವು ಗೆಲ್ಲಿಸುತ್ತೇವೆ. ಇದು ನನ್ನ ಅಭಿಪ್ರಾಯ ಅಲ್ಲ, ಸಮಸ್ತ ಕಾರ್ಯಕರ್ತರ ಅಭಿಪ್ರಾಯ ಎಂದಿದ್ದಾರೆ. ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಬೀದರ್ ಸಂಸದರೂ ಆಗಿರುವ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಮರು ಟಿಕೆಟ್ ನೀಡುವುದನ್ನು ವಿರೋಧಿಸುತ್ತಿರುವ ಪಕ್ಷದ ನಾಯಕರೊಂದಿಗೆ ಮುಂಬರುವ ಲೋಕಸಭೆ ಚುನಾವಣೆ ಕುರಿತು ಚರ್ಚಿಸಲು ಇತ್ತೀಚೆಗೆ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ…

Read More

ಕೋಲಾರ: ರಾಜ್ಯದಲ್ಲಿ ೨೮ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಈ ಸರ್ಕಾರವನ್ನು ಒಂದು ತಿಂಗಳಲ್ಲಿ ಮನೆಗೆ ಕಳುಹಿಸುವ ಗ್ಯಾರೆಂಟಿ ನಾವು ಕೊಡುತ್ತೇವೆ. ಕಾಂಗ್ರೆಸ್‌ನ ಐದು ಗ್ಯಾರೆಂಟಿಗೆ ನಮ್ಮದು ಒಂದೇ ಗ್ಯಾರೆಂಟಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ವತಿಯಿಂದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಸರ್ಕಾರ ಅನ್ನಭಾಗ್ಯದ ಬಗ್ಗೆ ಮಾತನಾಡುತ್ತದೆ. ಆದರೆ, ಅನ್ನ ಕೊಡುವಂತ ರೈತನ ಬಗ್ಗೆ ಯಾವುದೇ ರೀತಿಯ ಕಾಳಜಿ ಇಲ್ಲ. ಗ್ಯಾರೆಂಟಿಗಳ ಬಗ್ಗೆ ಹೇಳಿದ್ದೇ ಹೇಳಿದ್ದು, ಚುನಾವಣೆಗೂ ಮುನ್ನ ೧೦ ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಈಗ ಕೊಡುತ್ತಿರುವ ಐದು ಕೆಜಿ ಕೂಡ ಕೇಂದ್ರದಿAದ ಬರುತ್ತಿದೆ. ಇದು ಜನರಿಗೆ ಮಾಡುತ್ತಿರುವ ಮೋಸ. ಹೊಸ ರೇಷನ್ ಕಾರ್ಡ್ ಕೊಡುತ್ತಿಲ್ಲ. ರೇಷನ್ ಕಾರ್ಡ್ ಇಲ್ಲದಿದ್ದರೆ ಗೃಹ ಲಕ್ಷಿö್ಮ ಇಲ್ಲ ಎಂದು ಹೇಳಿದರು. ೨೦೦ ಯುನಿಟ್ ಫ್ರಿ ವಿದ್ಯುತ್ ಅಂತ ಹೇಳಿದ್ದರು. ಆದರೆ, ರಾಜ್ಯದಲ್ಲಿ ಒಬ್ಬರಿಗೆ ೨೦೦ ಯುನಿಟ್ ವಿದ್ಯುತ್…

Read More

ಮಂಡ್ಯ:- ಹದಿನಾಲ್ಕು ಬಜೆಟ್ ಮಂಡಿಸಿದ್ದಾಗಿ ಕೊಚ್ಚಿಕೊಳ್ಳುವ ಸಿದ್ದರಾಮಯ್ಯಗೆ ಸ್ವಲ್ಪವೂ ಆಡಳಿತ ಜ್ಞಾನ ಇದ್ದಂತಿಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕೆರಗೋಡು ಹನುಮ ಬಾವುಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಡ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕುಮಾರಸ್ವಾಮಿ, ಕೇವಲ ಎರಡು ನಿಮಿಷಗಳಲ್ಲಿ ಬಗೆಹರಿಯಬಹುದಾಗಿದ್ದ ಪ್ರಕರಣವನ್ನು ಕಾಂಗ್ರೆಸ್ ಪಕ್ಷ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಹೇಳಿದರು. ಕೆರಗೋಡುನಲ್ಲಿ ಗಲಾಟೆ ಸೃಷ್ಟಿಯಾಗುವುದಕ್ಕೆ ಪೊಲೀಸ್ ಇಲಾಖೆ ಮತ್ತು ಅಧಿಕಾರಿಗಳೇ ಕಾರಣ. 14 ಬಜೆಟ್ ಗಳನ್ನು ಮಂಡಿಸಿದ್ದೇನೆ ಮತ್ತು ಕುರುಬ ಸಮುದಾಯ ನಾಯಕ, ಮುಖ್ಯಮಂತ್ರಿ ಎಂದು ಕೊಚ್ಚಿಕೊಳ್ಳುವ ಸಿದ್ದರಾಮಯ್ಯನವರಿಗೆ ಅಲ್ಪಸ್ವಲ್ಪವೂ ಆಡಳಿತ ಜ್ಞಾನವಿದ್ದಂತಿಲ್ಲ, ನಿನ್ನೆಯ ದೃಶ್ಯಗಳನ್ನು ಟಿವಿ ಮಾಧ್ಯಮಗಳಲ್ಲಿ ವೀಕ್ಷಿಸಿದ ಬಳಿಕ ತಾನೇ ಜಿಲ್ಲಾಧಿಕಾರಿಗಳಿಗೆ 5 ಸಲ ಫೋನ್ ಮಾಡುರುವುದಾಗಿ ಕುಮರಸ್ವಾಮಿ ಹೇಳಿದರು. ಅಷ್ಟೆಲ್ಲ ಅನಾಹುತ ನಡೆದರೂ ತನ್ನಿಂದಾಗಿರುವ ಪ್ರಮಾದವನ್ನು ಸರಿಪಡಿಸಿಕೊಳ್ಳದ ಸಿದ್ದರಾಮಯ್ಯ ಸರ್ಕಾರ ಉದ್ಧಟತನ ಪ್ರದರ್ಶಿಸುತ್ತಿದೆ ಮತ್ತು ಅಮಾಯಕ ಪ್ರತಿಭಟನಾಕಾರರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದರು.

Read More

ಲಕ್ನೋ:- ಉತ್ತರಪ್ರದೇಶದಲ್ಲಿ ಒಂದು ವಿಲಕ್ಷಣ ಘಟನೆ ಜರುಗಿದ್ದು,ಸೆಕ್ಸ್‌ಗೆ ಸಹಕರಿಸುವಂತೆ ಒತ್ತಾಯಿಸಿದ ಪತಿಯ ಮರ್ಮಾಂಗವನ್ನೇ ಪತ್ನಿ ಕಚ್ಚಿ ಗಾಯಗೊಳಿಸಿದ್ದಾಳೆ. ಹಮೀರ್‌ಪುರ ಜಿಲ್ಲೆಯಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮು ನಿಶಾದ್ (34) ಗಾಯಗೊಂಡ ಪತಿ. ಪತ್ನಿಯ ಕೃತ್ಯದಿಂದ ನಿಶಾದ್‌ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಜನವರಿ 28ರಂದು ಸೆಕ್ಸ್‌ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದಗಳು ನಡೆದಿವೆ. ಮಾತಿಗೆ ಮಾತು ಬೆಳೆಯುತ್ತಿದ್ದಂತೆಯೇ ರೊಚ್ಚಿಗೆದ್ದ ಪತ್ನಿ, ಪತಿಯ ಖಾಸಗಿ ಅಂಗವನ್ನೇ ಕಚ್ಚಿದ್ದಾಳೆ. ಬಳಿಕ ತಪ್ಪಿನ ಅರಿವಾಗಿ ಅಲ್ಲಿಂದ ಕಾಲ್ಕಿತ್ತಿದ್ದಾಳೆ. ಇತ್ತ ಪತ್ನಿಯ ಕೃತ್ಯದಿಂದ ನಿಶಾದ್‌ ಗಂಭೀರ ಗಾಯಗೊಂಡರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಸೆಕ್ಸ್‌ ಮಾಡುವಂತೆ ಒತ್ತಾಯಿಸಿದ್ದರಿಂದ ಬೇಸರಗೊಂಡಿರುವುದಾಗಿ ಪತ್ನಿ ಆರೋಪಿಸಿದ್ದಾರೆ. ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Read More

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ವಿಶಾಖಪಟ್ಟಣದಲ್ಲಿ ನಡೆಯಲಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರನ್ನು ಹೊರಗಿಟ್ಟಿದೆ. ರವೀಂದ್ರ ಜಡೇಜಾ ಹಾಗೂ ಕೆಎಲ್ ರಾಹುಲ್ ಹೊರಬಿದ್ದಿದ್ದರಿಂದ ಟೀಂ ಇಂಡಿಯಾಕ್ಕೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಈ ಹಿಂದೆ ಹೈದರಾಬಾದ್​ನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ 28 ರನ್​ಗಳಿಂದ ಸೋತು ಟೀಂ ಇಂಡಿಯಾ ತೀವ್ರ ಮುಜುಗರಕ್ಕೆ ಒಳಗಾಗಿತ್ತು. ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನ 4 ನೇ ದಿನದ ಆಟದಲ್ಲಿ ಜಡೇಜಾ ಬ್ಯಾಟಿಂಗ್‌ ಮಾಡುವಾಗ ಸ್ನಾಯುಸೆಳೆತಕ್ಕೆ ಒಳಗಾಗಿದ್ದರು. ರಾಹುಲ್‌ ಅವರು ಬಲ ಕ್ವಾಡ್ರಿಸೆಪ್ಸ್‌ ನೋವಿನಿಂದ ಬಳಲುತ್ತಿದ್ದಾರೆ. ಸದ್ಯ ಈ ಇಬ್ಬರು ಹೊರಗುಳಿದ ನಂತರ ಸರ್ಫರಾಜ್‌ ಖಾನ್‌, ಸೌರಭ್‌ ಕುಮಾರ್‌ ಮತ್ತು ವಾಷಿಂಗ್ಟನ್‌ ಸುಂದರ್‌ ಅವರನ್ನು ಆಯ್ಕೆ ಸಮಿತಿಯು ಎರಡನೇ ಟೆಸ್ಟ್‌ ತಂಡಕ್ಕೆ ಸೇರಿಸಿದೆ.

Read More

ವಾಷಿಂಗ್ಟನ್:- ಆಶ್ರಯ ಕೊಟ್ಟ ಭಾರತೀಯ ವಿದ್ಯಾರ್ಥಿಯನ್ನೇ ಹೊಡೆದು ಯುಎಸ್ ನಿರಾಶ್ರಿತ ವ್ಯಕ್ತಿ ಕೊಂದಿದ್ದಾನೆ. ಸೈನಿ (25) ಮೃತ ಭಾರತೀಯ ವಿದ್ಯಾರ್ಥಿ. ತಾನು ಮನೆಗೆ ಹೋಗುವ ಹಿನ್ನೆಲೆ ಬೇರೆ ಕಡೆ ಹೋಗು ಎಂದಿದ್ದಕ್ಕೆ ನಿರಾಶ್ರಿತ ವ್ಯಕ್ತಿ ಅಮೆರಿಕದ ಜಾರ್ಜಿಯಾದಲ್ಲಿನ ಕನ್ವೀನಿಯನ್ಸ್ ಸ್ಟೋರ್‌ನಲ್ಲಿ ಸುತ್ತಿಗೆಯಿಂದ ಹೊಡೆದು ದಾರುಣವಾಗಿ ಕೊಲೆ ಮಾಡಿದ್ದಾನೆ. ವಿವೇಕ್ ಯುಎಸ್‌ನಲ್ಲಿ ವಿದ್ಯಾರ್ಥಿಯಾಗಿದ್ದು, ಜಾರ್ಜಿಯಾದ ಕನ್ವೀನಿಯನ್ಸ್ ಸ್ಟೋರ್‌ನಲ್ಲಿ ಪಾರ್ಟ್ ಟೈಮ್ ಕೆಲಸ ಮಾಡುತ್ತಿದ್ದರು. ಈ ವೇಳೆ ಸೈನಿ ಸೇರಿದಂತೆ ಫುಡ್ ಮಾರ್ಟ್ನಲ್ಲಿನ ಉದ್ಯೋಗಿಗಳು ಜೂಲಿಯನ್ ಫಾಕ್ನರ್ ಎಂಬ ನಿರಾಶ್ರಿತ ವ್ಯಕ್ತಿಗೆ ಆಹಾರ ಮತ್ತು ಅಶ್ರಯ ನೀಡುತ್ತಿದ್ದರು. ಆರೋಪಿ ಮೊದಲು ಚಿಪ್ಸ್ ಮತ್ತು ಕೋಕ್‌ನ್ನು ಕೇಳಿದ್ದು, ಅದನ್ನು ನೀಡಿದ್ದಾರೆ. ನಂತರ ಹೊದಿಕೆ ಕೇಳಿದ್ದಾನೆ. ಅವರ ಬಳಿ ಹೊದಿಕೆ ಇಲ್ಲ ಎಂದು ಹೇಳಿ ಜಾಕೆಟ್ ನೀಡಿದ್ದರು. ಹಾಗೆಯೇ ಸಿಗರೇಟ್, ನೀರು ಮತ್ತು ಎಲ್ಲವನ್ನು ಕೇಳುತ್ತಾ ಒಳಗೆ, ಹೊರಗೆ ನಡೆಯುತ್ತಿದ್ದನು. ನಿತ್ಯವೂ ಅಲ್ಲಿಯೇ ಕುಳಿತಿರುತ್ತಿದ್ದನು. ಚಳಿ ಇದ್ದ ಪರಿಣಾಮ ಆರೋಪಿಯನ್ನು ಹೊರಗೆ ಹೋಗುವಂತೆ ಹೇಳಿರಲಿಲ್ಲ ಎನ್ನಲಾಗಿದೆ ರಾತ್ರಿ…

Read More

ದಾವಣಗೆರೆ:- ಚನ್ನಗಿರಿ ತಾಲೂಕಿನ ಗುಡ್ಡದ ಕೊಮರನಹಳ್ಳಿ ಗ್ರಾಮದಲ್ಲಿ ಮದ್ಯ ಸೇವನೆಗೆ ಪತ್ನಿ ಹಣ ಕೊಡಲು ನಿರಾಕರಿಸಿದ್ದಕ್ಕೆ ಪತಿಯೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಪತ್ನಿಯನ್ನ ಹಲ್ಲೆ ಮಾಡಿರುವ ಘಟನೆ ಜರುಗಿದೆ. ಹಿರಿಯೂರು ತಾಲೂಕು ಇದ್ದಲ ನಾಗೇನಹಳ್ಳಿ ಗ್ರಾಮದ ಕದರಪ್ಪ (60) ಹಲ್ಲೆ ನಡೆಸಿದ ಆರೋಪಿ. ಪತಿ ಮಾಡಿರುವ ಹಲ್ಲೆಯಿಂದ ತೀವ್ರ ಗಾಯಗೊಂಡ ಮಹಿಳೆ ಸಾಕಮ್ಮ (55) ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್‌ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಸ್ತುತ ಅವರು ಕೋಮಾ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ. ದಂಪತಿ ಹಲವು ವರ್ಷಗಳಿಂದ ಬಡಗೊಲ್ಲರಹಟ್ಟಿ, ಸೀಗೆಹಟ್ಟಿ ಗ್ರಾಮದವರ ಜೊತೆಗೂಡಿ ಕುರಿಗಳನ್ನು ಮೇಯಿಸುತ್ತಿದ್ದರು. ಅದರಂತೆಯೇ ಕುರಿಗಳನ್ನು ಮೇಯಿಸಲು ಚನ್ನಗಿರಿ ತಾಲೂಕಿನ ಗುಡ್ಡದ ಕೊಮರನಹಳ್ಳಿ ಗ್ರಾಮ ಸೇರಿ ಸುತ್ತಲ ಗ್ರಾಮಗಳಲ್ಲಿ ವಾರದಿಂದ ತೋಟವೊಂದರಲ್ಲಿ ತಂಗಿದ್ದರು. ಮದ್ಯ ವ್ಯಸನಿಯಾಗಿದ್ದ ಆರೋಪಿ ಕದರಪ್ಪ, ಹಣ ನೀಡುವಂತೆ ಪತ್ನಿ ಸಾಕಮ್ಮನನ್ನು ಪದೆ ಪದೇ ಪೀಡಿಸುತ್ತಿದ್ದನು ಪತ್ನಿ ಹಣ ನೀಡಲು ನಿರಾಕರಿಸಿದ್ದಕ್ಕೆ ಇನ್ನಷ್ಟು ಕೋಪಗೊಂಡ ಕದರಪ್ಪ…

Read More

ಚಿಕ್ಕಮಗಳೂರು:- 30 ಕಾಡಾನೆಗಳಿರುವ ಬೀಟಮ್ಮ ಗ್ಯಾಂಗ್ ನಗರದ ಕೂಗಳತೆ ದೂರದಲ್ಲಿರುವ ಪ್ರತಿಷ್ಠಿತ ಆ್ಯಂಬರ್ ವ್ಯಾಲಿ ಖಾಸಗಿ ವಸತಿ ಶಾಲೆಯಲ್ಲಿ ಬೀಡುಬಿಟ್ಟಿದೆ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ ಸಿಬ್ಬಂದಿಗಳು ಆತಂಕಗೊಂಡಿದ್ದು, ವಸತಿ ಶಾಲೆಯ ಹೊರಗೆ ಪೋಷಕರು ಕಂಗಾಲಾಗಿ ಹೋಗಿದ್ದಾರೆ. ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಬೀಟಮ್ಮ ಗ್ಯಾಂಗ್ ನೋಡಿ ಶಾಕ್ ಆಗಿದ್ದಾರೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಿದ್ದಾರೆ. ಇದೀಗ ಕುಮ್ಕಿ ಆನೆಗಳನ್ನು ಬಳಸಿ ಅರಣ್ಯ ಇಲಾಖೆ ಕಾರ್ಯಚರಣೆ ನಡೆಸಲಿರುವ ಹಿನ್ನಲೆ ನಾಳೆ ವರೆಗೂ ಆ್ಯಂಬರ್ ವ್ಯಾಲಿ ಶಾಲೆ ಸುತ್ತಮುತ್ತಲಿನ ಮೂಗ್ತಿಹಳ್ಳಿ, ಕದ್ರಿಮಿದ್ರಿ, ರಾಂಪುರ, ನಲ್ಲೂರು ಸೇರಿದಂತೆ 9 ಗ್ರಾಮಗಳಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಬೀಟಮ್ಮ ಗ್ಯಾಂಗ್ ಕಾಡಿಗಟ್ಟುವ ಕಾರ್ಯಾಚರಣೆಯನ್ನು ದುಬಾರೆ, ನಾಗರಹೊಳೆಯಿಂದ ಅರಣ್ಯ ಇಲಾಖೆ ಆರಂಭಿಸಲಿದೆ. ಆ್ಯಂಬರ್ ವ್ಯಾಲಿ ವಸತಿ ಶಾಲೆಯ ಸುತ್ತಲೂ ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸರ್ಪಗಾವಲಿದ್ದಾರೆ. 30 ಕಾಡಾನೆಗಳ ತಂಡದಲ್ಲಿ ಐದಾರು ಮರಿಗಳು ಇದ್ದು, ಆನೆ ಓಡಿಸೋದಕ್ಕೆ ಅರಣ್ಯ…

Read More