Author: AIN Author

ಬೆಂಗಳೂರು: ಇನ್ನು ಕೆಲವೇ ದಿನಗಳಲ್ಲಿ ನಡೆಯಲಿರು ವಿಧಾನ ಪರಿಷತ್​ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಅಭ್ಯರ್ಥಿಗಳು ಚುನಾವಣಾ ಪ್ರಚಾರ ಕಾರ್ಯ ನಡೆಯುತ್ತಿದೆ. ವಿಧಾನ ಪರಿಷತ್‌ʼಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಇಂದು ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿಎನ್.ಅಶ್ವತ್ಥನಾರಾಯಣ ಅವರು, ಬಿಜೆಪಿ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡರು ಮಾಜಿ ಮುಖ್ಯಮಂತ್ರಿ ಅವರ ಜತೆಯಲ್ಲಿ ಇದ್ದರು.

Read More

ಬಿಗ್‌ ಬಾಸ್‌ ಸೀಸನ್‌ 10ʼರ ವಿನ್ನರ್‌ ಹಾಗೂ ರನ್ನರ್‌ಅಪ್‌ ಘೋಷಣೆ ಆಗಿದ್ದಾಗಿದೆ. ಇದೀಗ ಮತ್ತೆ ಚರ್ಚೆಯಲ್ಲಿರುವುದು ಸೀಸನ್‌ 10ರ ಸ್ಪರ್ಧಿಗಳಾದ ಇಶಾನಿ ಹಾಗೂ ರಕ್ಷಕ್‌. ಹೌದು, ಪ್ರತಿ ಬಿಗ್‌ ಬಾಸ್‌ ಸೀಸನ್‌ ಫಿನಾಲೆಯಲ್ಲಿ ಕೊನೆಯ ಗಳಿಗೆಯಲ್ಲಿ ಸ್ಪರ್ಧಿಗಳು ಒಟ್ಟೂ ಜರ್ನಿಯನ್ನು ಪ್ಲೇ ಮಾಡಲಾಗುತ್ತದೆ. ಈ ಬಾರಿ ಸ್ಪರ್ಧಿಗಳ ಒಟ್ಟಾರೆ ಜರ್ನಿ ವಿಟಿಯನ್ನು ಹಾಕಲಾಗಿದೆ. ಇದರಲ್ಲಿ ಎಲ್ಲಿಯೂ ರಕ್ಷಕ್ ಹಾಗೂ ಇಶಾನಿಯನ್ನು ತೋರಿಸಿಲ್ಲ. ರಕ್ಷಕ್ ಹಾಗೂ ಈಶಾನಿ ಮಾಡಿಕೊಂಡ ಕಿರಿಕ್​ನಿಂದಲೇ ಈ ರೀತಿ ಆಗಿದೆ. ಇವರಿಬ್ಬರು ಮಾಡಿದ ಕಿರಿಕ್‌ಗೆ ಸರಿಯಾಯ್ತು ಎಂದು ವೀಕ್ಷಕರು ಕೂಡ ಕಮೆಂಟ್‌ ಮಾಡಿದ್ದಾರೆ. ಸಂದರ್ಶನದಲ್ಲಿ ಕಿಚ್ಚ ಸುದೀಪ್‌ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ದರು, ಇದಾದ ಮೇಲೆ ಸುದೀಪ್‌ ಅವರು ಕ್ಲಾಸ್‌ ಕೂಡ ತೆಗೆದುಕೊಂಡಿದ್ದರು. ಇದರ ಪರಿಣಾಮವೋ ಏನೊ ವಿಡಿಯೋ ಟೇಪ್​ನಲ್ಲೂ (ವಿಟಿ) ಎಲ್ಲಿಯೂ ರಕ್ಷಕ್‌ ಕಾಣಿಸಿಲ್ಲ. ಇದೀಗ ಇವರು ಕಿರಿಕ್‌ ಮಾಡಿಕೊಂಡಿದ್ದಕ್ಕಾಗಿ ಬಿಗ್‌ ಬಾಸ್‌ ಕೈ ಬಿಟ್ಟಿದ್ದಾರೆ ಎಂಬ ಮಾತುಗಳು ಚರ್ಚೆಯಾಗುತ್ತಿದೆ. ರಕ್ಷಕ್‌ ಈ ಹಿಂದೆ ಸಂದರ್ಶನವೊಂದರಲ್ಲಿ ಹೇಳಿಕೆ…

Read More

ಬೆಂಗಳೂರು : ಬಿಡಿಎ ನೂತನ ಅಧ್ಯಕ್ಷರಾಗಿ ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್ ಬಿಡಿಎ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಅಧಿಕಾರ ವಹಿಸಿಕೊಂಡರು. ಶಾಸಕ ಜಮೀರ್ ಅಹ್ಮದ್ ಕೂಡ ಕಚೇರಿಗೆ ಆಗಮಿಸಿ ಶುಭ ಕೋರಿದರು. ಈ ವಿಚಾರವನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು ಶುಭ ಕೋರಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿದ ಹ್ಯಾರಿಸ್, ಜವಾಬ್ದಾರಿಯನ್ನ ನನಗೆ ವಹಿಸಿದ್ದಾರೆ. ಬೆಂಗಳೂರು ನಗರದ ಬಗ್ಗೆ ನನಗೆ ಗೊತ್ತಿದೆ. ಈಗಾಗಲೇ ನಾಲ್ಕು ಬಾರಿ ಶಾಸಕನಾಗಿ ಕೆಲಸ ಮಾಡಿದ್ದೇನೆ. ಟ್ರಾನ್ಸ್ಫರೆನ್ಸಿ ತರುವಲ್ಲಿ ಪ್ರಯತ್ನಿಸುತ್ತೇನೆ. ಬಿಡಿಎಯನ್ನ ಜನಸ್ನೇಹಿ ಮಾಡಲು ಯತ್ನಿಸುತ್ತೇನೆ. ಸಿಎಂ, ಡಿಸಿಎಂ, ಬಿಡಿಎ ಜನಸ್ನೇಹಿ ಮಾಡಿ ಎಂದಿದ್ದಾರೆ. ಹೊಸ ಲೇಔಟ್ ಬಗ್ಗೆಯೂ ಯೋಜನೆ ಇದೆ ಎಂದು ತಿಳಿಸಿದರು. ಶಾಂತಿನಗರ ಅಭಿವೃದ್ಧಿಯಾಗಿಲ್ಲ ಈಗ ನಿಮ್ಮನ್ನ ಬಿಡಿಎ ಅಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ವಿರೋಧ ವ್ಯಕ್ತವಾಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಹ್ಯಾರಿಸ್, ರಾಜಕೀಯವಾಗಿ ಮಾತನಾಡಿದರೇ ನಾನು ರಾಜಕೀಯ ಮಾತನಾಡ್ತೇನೆ. ಬೆಂಗಳೂರು‌ ಎಲ್ಲವೂ ಬಿಡಿಎ ನಲ್ಲಿ…

Read More

ಬೆಂಗಳೂರು: ಕರ್ನಾಟಕದ ನಾಲ್ಕು ಪರಿಷತ್ ಸದಸ್ಯರ ಅವಧಿ ಮುಕ್ತಾಯವಾದ ಹಿನ್ನೆಲೆ ಪರಿಷತ್ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ. 15 ರಾಜ್ಯಗಳ ಪೈಕಿ 56 ಪರಿಷತ್ ಸದಸ್ಯರ ಅವಧಿ ಮುಕ್ತಾಯವಾಗಿದ್ದು, ಚುನಾವಣಾ ಆಯೋಗದಿಂದ ಪರಿಷತ್​ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಎಪ್ರಿಲ್ 2ಕ್ಕೆ ಪರಿಷತ್ ಸದಸ್ಯರ ಅವಧಿ ಮುಕ್ತಾಯವಾಗಲಿದೆ. ಈ ಹಿನ್ನೆಲೆ ಫೆಬ್ರವರಿ 15ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ಫೆ. 20ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 27 ಕ್ಕೆ ಪರಿಷತ್ ಚುನಾವಣೆಗೆ ಮತದಾನ ನಡೆಯಲಿದ್ದು, ಫೆಬ್ರವರಿ 27ರ ಸಂಜೆ 5 ಗಂಟೆಯ ಬಳಿಕ ಫಲಿತಾಂಶ ಪ್ರಕಟವಾಗಲಿದೆ.

Read More

ಬೆಂಗಳೂರು: ಚಿನ್ನದ ಮಳಿಗೆ ಮೇಲೆ ನಕಲಿ‌ BIS ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಕೆ.ಆರ್​ ಪುರದ ಮಹಾಲಕ್ಷ್ಮೀ ಜ್ಯುವೆಲ್ಲರಿನಲ್ಲಿ ನಡೆದಿದೆ. ಘಟನೆ ಸಂಬಂಧ ಮೂವರು ನಕಲಿ BIS ಅಧಿಕಾರಿಗಳನ್ನ ಪೋಲಿಸರು ಬಂಧಿಸಿದ್ದಾರೆ. ಇನೋವಾ ಕಾರಿನಲ್ಲಿ ಬಂದಿದ್ದ ನಕಲಿ ಅಧಿಕಾರಿಗಳ ಗ್ಯಾಂಗ್, ದಾಳಿ ಮಾಡಿ 1 ಕೆಜಿಗೂ ಅಧಿಕ ಚಿನ್ನ ತೆಗೆದುಕೊಂಡು ಹೋಗಲು ಯತ್ನಿಸಿದ್ದರು ಎನ್ನಲಾಗಿದೆ. ಇನ್ನು, ದಾಳಿ ಹೆಸರಲ್ಲಿ ಸುಮಾರು 40 ನಿಮಿಷ ಸರ್ಚ್ ಮಾಡಿದ್ರು ಎಂದು ತಿಳಿದುಬಂದಿದೆ. ಪೋಲಿಸರು ಸಂಪತ್ ಕುಮಾರ್, ಜೋಶಿ ಥಾಮಸ್, ಅವಿನಾಶ್, ಸಂದೀಪ್ ಎಂಬಾತರನ್ನ ಬಂಧಿಸಿದ್ದು, ಆರೋಪಿಗಳ ಬಳಿಯಿದ್ದ ಚಿನ್ನವನ್ನ ಜಪ್ತಿ ಮಾಡಿದ್ದಾರೆ, ಈ ಬಗ್ಗೆ ಕೆ ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದಾವಣಗೆರೆ: ಕೆರಗೋಡಿನಲ್ಲಿನ ಘಟನೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ದಾವಣಗೆರೆ ಜಿಲ್ಲಾ ಬಿಜೆಪಿ ಕಚೇರಿಯಿಂದ ಎಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಹಿಂದು ವಿರೋಧಿ ನಡೆ ಅನುಸರಿಸುತ್ತಿದೆ  ಎಂದು ಮಾಜಿ ಸಚಿವರಾದ ಎಸ್ ಎ ರವೀಂದ್ರನಾಥ್, ಎಂ ಪಿ ರೇಣುಕಾಚಾರ್ಯ, ಶಾಸಕ ಬಿ ಪಿ ಹರೀಶ್, ಜಿಲ್ಲಾಧ್ಯಕ್ಷ ರಾಜಶೇಖರ ನೇತೃತ್ವದಲ್ಲಿ ದಾವಣಗೆರೆಯ ಕೆ ಬಿ ಬಡಾವಣೆಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಎದುರು ದಿಕ್ಕಾರ ಕೂಗಿದರು.  

Read More

ದಕ್ಷಿಣದ ಮತ್ತೊಂದು ಸಿನಿಮಾ ಬಾಕ್ಸ್ ಆಫೀಸ್ (Box office) ದೋಚಿದೆ. ಪ್ರಶಾಂತ್ ವರ್ಮಾ (Prashant Verma) ನಿರ್ದೇಶನದಲ್ಲಿ ಮೂಡಿ ಬಂದಿರುವ ಹನುಮಾನ್ (Hanuman) ಚಿತ್ರ ಜಾಗತಿಕ ಮಟ್ಟದಲ್ಲಿ 14 ದಿನಕ್ಕೆ 250 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾ ತನ್ನ ನಾಗಲೋಟವನ್ನು ಮುಂದುವರೆಸಿದೆ ಹನುಮಾನ್ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ಕಂಡಿರೋ ನಿರ್ದೇಶಕರಿಗೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಕೊಟ್ಟಿದ್ದಾರೆ. ಹನುಮಾನ್ ಪಾರ್ಟ್ 2 ಮಾಡಲು ಅವರು ಮುಂದೆ ಬಂದಿದ್ದಾರೆ. ಕೇವಲ ಬಾಯಿ ಮಾತಲ್ಲಿ ಹೇಳದೇ ಪಾರ್ಟ್ 2 ಚಿತ್ರದ ಕೆಲಸಕ್ಕೂ ಅವರು ಮುಂದಾಗಿದ್ದಾರೆ. ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಐತಿಹಾಸಿಕ ಕ್ಷಣದಲ್ಲಿ ಇಡೀ ದೇಶವೇ ಸಾಕ್ಷಿಯಾಗಿತ್ತು. ಈ ಶುಭ ದಿನದಂದು, ಹನುಮಾನ್ ಸಿನಿಮಾ ನಿರ್ದೇಶಕ ಪ್ರಶಾಂತ್ ವರ್ಮಾ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಮುಂಬರುವ ಚಿತ್ರ ‘ಜೈ ಹನುಮಾನ್’ ಸಿನಿಮಾಗಾಗಿ ತಯಾರಿಯನ್ನು ಪ್ರಾರಂಭಿಸಿದ್ದಾರೆ. ಅದರ ಭಾಗವಾಗಿ ಜೈ ಹನುಮಾನ್ ಸಿನಿಮಾದ ಸ್ಟ್ರಿಪ್ಟ್ ಪೂಜೆ ನೆರವೇರಿಸಿದ್ದಾರೆ.…

Read More

ಬಳ್ಳಾರಿ: ಪ್ರೀತಿಸಿ ಮದುವೆಯಾದ ಜೋಡಿ ಹಕ್ಕಿಗೆ ಸ್ವ ಕುಟುಂಬದಿಂದಲೇ ಜೀವ ಬೆದರಿಕೆ ಎಂದು ಪ್ರಾಣ ರಕ್ಷಣೆಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಹೌದು ಈ ಜೋಡಿ ಹೆಸರು ನಾರಾಯಣ (25) ಮತ್ತು ಶಿಲ್ಪಾ (20) ಅಂತಾ ಯುವಕ ನಾರಾಯಣ ಬಳ್ಳಾರಿ ತಾಲೂಕಿನ ಗೋನಾಳ ಗ್ರಾಮದವನಾದ್ರೆ, ಯುವತಿ ಶಿಲ್ಪಾ ಸಿರಗುಪ್ಪ ತಾಲೂಕಿ‌ನ ಊಳೂರು ಗ್ರಾಮದವಳು.. ಶಿಲ್ಪಾ 9 ನೇ ತರಗತಿ ಇರುವಾಗ ಗೋನಾಳ ಗ್ರಾಮದಲ್ಲಿರುವ ಅವಳ ದೊಡ್ಡಮ್ಮನ ಮನೆಗೆ ಬಂದಿದ್ದಳಂತೆ ಆಗ ನಾರಾಯಣನ ಪರಿಚಯವಾಗಿದೆ.. ಪರಿಚಯ ಪ್ರೇಮಕ್ಕೆ ತಿರುಗಿ ಈಗ ಈ ಜೋಡಿ ಮದುವೆ ಆಗಿದ್ದಾರೆ.. ಯುವಕ ಯುವತಿ ಕುರುಬ ಸಮುದಾಯಕ್ಕೆ ಸೇರಿದ್ದಾರೆ ಯಾವುದೇ ಜಾತಿ ಸಮಸ್ಯೆ ಇಲ್ಲ ಆದರೂ ಮನೆಯಲ್ಲಿ ಒಪ್ಪಿಲ್ಲ ಹೀಗಾಗಿ ಶಿಲ್ಪಾ ಮನೆ ಬಿಟ್ಟು ಬಂದು ಈ ಯುವಕನನ್ನ ಮದುವೆ ಆಗಿದ್ದಾಳೆ. ಹುಡುಗನ ಮನೆಯಲ್ಲಿ ಶಿಲ್ಪಾಳನ್ನ ಸೊಸೆ ಅಂತಾ ಒಪ್ಪಿಕೊಳ್ಳಲು ತಯಾರಿದ್ದಾರೆ. ಆದರೆ ಯುವತಿ ಮನೆಯಲ್ಲಿ ನಾರಾಯಣನನ್ನ ಅಳಿಯ ಅಂತಾ ಒಪ್ಪಿಕೊಳ್ಳುತ್ತಿಲ್ಲ.. ಹೀಗಾಗಿ ಹುಡುಗಿ ಪೋಷಕರಿಂದ…

Read More

ಮಂಡ್ಯ ಸಂಸದೆ ಹಾಗೂ ನಟಿ ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗಿದೆ. ಸಮಾಜ ಸೇವೆ ಮತ್ತು ರಾಜಕೀಯ ಮತ್ತು ಚಲನಚಿತ್ರಗಳಲ್ಲಿ ಸೇವೆಗಾಗಿ ಈ ಗೌರವ ಸಂದಿದೆ. USA, ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್, ಹೈದರಾಬಾದ್‌ನಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂಸದೆ ಸುಮಲತಾ ಮಾಹಿತಿ ಹಂಚಿಕೊಂಡಿದ್ದಾರೆ. ಗೌರವ ಡಾಕ್ಟರೇಟ್ ಪಡೆದಿರುವುದಕ್ಕೆ ಅತ್ಯಂತ ವಿನಮ್ರ ಮತ್ತು ಗೌರವ ಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಈ ಗೌರವ ನನ್ನ ಮುಂದಿನ ಹಾದಿಯಲ್ಲಿ ನನ್ನನ್ನು ಪ್ರೇರೇಪಿಸಲು ಇದು ಸ್ಫೂರ್ತಿಯಾಗಲಿದೆ. ನಾನು ಈ ಗೌರವವನ್ನು ನನ್ನ ಪತಿ ಅಂಬರೀಶ್, ನನ್ನ ಹೆತ್ತವರು ಮತ್ತು ನನ್ನ ಹಿತೈಷಿಗಳು ಮತ್ತು ಚಲನಚಿತ್ರ ಮತ್ತು ರಾಜಕೀಯ ಉದ್ಯಮದ ಬೆಂಬಲಿಗರಿಗೆ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ. ಇಂಥದ್ದೊಂದು ಗೌರವ ಸಿಕ್ಕಿರುವುದು ನನ್ನ ಮೇಲಿನ ನಂಬಿಕೆ ಮತ್ತು ನಿಮ್ಮೆಲ್ಲರ ಆಶೀರ್ವಾದ ಕಾರಣ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು…

Read More

ಮಲಯಾಳಂ ಚಿತ್ರರಂಗದಲ್ಲಿ ಹೀರೋಗಿರಿಯ ಸಿನಿಮಾಗಳಿಗೆ ಕಟ್ಟು ಬೀಳದೆ ತಮ್ಮದೇ ಆದ ಮಾದರಿಯಲ್ಲಿ ಸಿನಿಮಾಗಳನ್ನು ಮಾಡುತ್ತಿರುವ ಸ್ಟಾರ್ ನಟ ಟೋವಿನೊ ಥಾಮಸ್. ಒಂದರ ಮೇಲೊಂದು ಹಿಟ್ ಸಿನಿಮಾ ನೀಡುವ ಜೊತೆಗೆ ಅಭಿಮಾನಿಗಳನ್ನೂ ಸಹ ಸಂಪಾದಿಸುತ್ತಾ ಸಾಗುತ್ತಿರುವ ಈ ತಾರೆಗಿಂದು ಜನ್ಮದಿನದ ಸಂಭ್ರಮ. ಟೋವಿನೋ ಥಾಮಸ್ ಹುಟ್ಟಹಬ್ಬಕ್ಕೆ ARM ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಲಾಗಿದೆ. AMR ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಜಿತಿಲ್ ಲಾಲ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮ್ಯಾಜಿಕ್ ಫ್ರೇಮ್ಸ್ ಮತ್ತು ಯುಜಿಎಂ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಲಾಗುತ್ತಿದೆ. ಸಂಪೂರ್ಣ 3ಡಿಯಲ್ಲಿ AMR ಚಿತ್ರ ತಯಾರಾಗಲಿದ್ದು, ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ ಅತಿ ದೊಡ್ಡ ಬಜೆಟ್ ಸಿನಿಮಾ ಇದಾಗಿದೆ. AMR ಸಿನಿಮಾ 3 ಯುಗಗಳ ಕಥೆ ಹೇಳುತ್ತದೆ. ಟೋವಿನೋ ಥಾಮಸ್, ಮಣಿಯನ್, ಅಜಯನ್ ಮತ್ತು ಕುಂಜಿಕೇಲು ಎಂಬ 3 ವಿಭಿನ್ನ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ದೃಶ್ಯ ವೈಭೋಗದಲ್ಲಿ ಮೂಡಿ ಬರಲಿರುವ ಈ ಚಿತ್ರ ಮಲಯಾಳಂ, ಹಿಂದಿ, ಇಂಗ್ಲಿಷ್,…

Read More