Author: AIN Author

ಬೆಂಗಳೂರು :- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದಲೇ ಶೀತಗಾಳಿ ಶುರುವಾಗಿದೆ. ವಿಜಯಪುರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, 29 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ,…

Read More

ಕಲಬುರ್ಗಿ:- ಲೋಕ ಸಮರಕ್ಕೆ ತಾಲೀಮು ಶುರು ಮಾಡಿರುವ ಕೇಸರಿಪಡೆ ಇವತ್ತು ಖರ್ಗೆ ತವರೂರು ಕಲಬುರಗಿಯಲ್ಲಿ ಸೌಂಡ್ ಮಾಡಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಆದ ನಂತ್ರ ಇದೇಮೊದಲ ಬಾರಿಗೆ ಕಲಬುರಗಿಗೆ ಆಗಮಿಸಲಿದ್ದು ಇಡೀ ನಗರ ಸಂಪೂರ್ಣ ಕೇಸರಿಯಾಗಿದೆ. ಸಂಜೆ ಎನ್ ವಿ ಮೈದಾನದಲ್ಲಿ ಬಹಿರಂಗ ಸಭೆ ಏರ್ಪಡಿಸಲಾಗಿದ್ದು ಸಭೆಗೂ ಮುನ್ನ ಬೈಕ್ ರಾಲಿ ಸಹ ನಡೆಯಲಿದೆ.

Read More

ವಿಜಯಪುರ: ಅಪ್ಪನ ಕೊಲೆ ಮಾಡಲು ಮಗನೇ ಮೂರು ಲಕ್ಷ ಸುಪಾರಿ ಕೊಟ್ಟ ಪ್ರಕರಣವೊಂದು ಬಾಗಲಕೋಟೆಯಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಚೆನ್ನಪ್ಪ (66) ಕೊಲೆಯಾದ ತಂದೆ. ವಿಕಲಚೇತನನಾಗಿರುವ ಮಗ ಚೆನ್ನಬಸಪ್ಪ ವಿಜಯಪುರ (Vijayapur) ಜಿಲ್ಲೆ ನಿಡಗುಂದಿ ಮೂಲದ ಮಾಂತೇಶ್‍ಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾನೆ.  ಆಸ್ತಿಗಾಗಿ ಕೊಲೆ: 32 ಎಕರೆ ಆಸ್ತಿ ಅದರಲ್ಲಿ ವಿಭಾಗ ಮಾಡುವ ವಿಚಾರಕ್ಕೆ ಪದೇ ಪದೇ ಕಲಹ ನಡೆಯುತ್ತಿತ್ತು. ಇದೇ ವಿಚಾರಕ್ಕೆ ಅಪ್ಪನನ್ನು ಕೊಲೆ ಮಾಡಲು ಮಗ ಪ್ಲಾನ್ ಮಾಡಿದ್ದಾನೆ. ಅಂತೆಯೇ ಚೆನ್ನಬಸಪ್ಪ, ಸೊಸೆ ಶಿವಬಸವ್ವ ಹಾಗೂ ಮಗನ ಆಪ್ತ ರಮೇಶ್ ಮನಗೂಳಿ ಸೇರಿ ಕೊಲೆಗೆ ಪ್ಲಾನ್ ಮಾಡಿದ್ದಾರೆ. ಬಳಿಕ ಮಾಂತೇಶ್ ಮರಡಿಮಠ ಎಂಬಾತನಿಗೆ 3 ಲಕ್ಷ ಹಣ ನೀಡಿದ್ದಾರೆ. ಅಂತೆಯೇ ಚೆನ್ನಪ್ಪನನ್ನು ರಾಂಪುರ ಗ್ರಾಮದ ಬಳಿ ಮಚ್ಚಿನಿಂದ ಕೊಚ್ಚಿ ಕಲ್ಲಿನಿಂದ ತಲೆ ಜಜ್ಜಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗ ಚನ್ನಬಸಪ್ಪ, ಸೊಸೆ ಶಿವಬಸವ್ವ, ಸುಪಾರಿ ಪಡೆದು ಕೊಲೆ…

Read More

ಮೈಸೂರು:- ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಲಗಾರರ ಕಾಟಕ್ಕೆ ಹೆದರಿ ಕುಟುಂಬ ನಾಪತ್ತೆಯಾಗಿದೆ. ಮೈಸೂರಿನ ಕೆ.ಜಿ.ಕೊಪ್ಪಲು ಬಡಾವಣೆಯ ಮಹೇಶ್(35), ಪತ್ನಿ ಭವಾನಿ(28), ಪುತ್ರಿ ಪ್ರೇಕ್ಷಾ(3), ಮಹೇಶ್​​ ತಂದೆ ಮಹದೇವಪ್ಪ(65), ತಾಯಿ ಸುಮಿತ್ರಾ(55) ನಾಪತ್ತೆಯಾದವರು. ಕಳೆದ 8 ದಿನಗಳಿಂದ ಈ ಕುಟುಂಬ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ವಾಟ್ಸಾಪ್​ಗೆ ಸಂದೇಶ ರವಾನಿಸಿ 8 ದಿನಗಳಿಂದ ನಾಪತ್ತೆಯಾಗಿರುವ ಕುಟುಂಬವನ್ನು ಪತ್ತೆ ಹಚ್ಚುವಂತೆ ಭವಾನಿ ಸಹೋದರ ಜಗದೀಶ್ ಸರಸ್ವತಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಾರ್ಕೆಟಿಂಗ್ ಬಿಸಿನೆಸ್ ನಡೆಸುತ್ತಿದ್ದ ಮಹೇಶ್​ಗೆ, ವೀರೇಶ್ ಎಂಬುವರು ವ್ಯವಹಾರಕ್ಕೆ ಸಾಥ್ ನೀಡಿದ್ದರು. ಮಹೇಶ್ ಪರಿಚಯ ಹೇಳಿಕೊಂಡು ವೀರೇಶ್ 30 ರಿಂದ 35 ಲಕ್ಷ ಸಾಲ ಪಡೆದು ಪರಾರಿಯಾಗಿದ್ದರು. ವೀರೇಶ್ ಗೆ ಸಾಲ ನೀಡಿದವರಿಂದ ಮಹೇಶ್ ಮೇಲೆ ಒತ್ತಡ ಹೆಚ್ಚಾಗಿದೆ. ಸಾಲಗಾರರ ನಿರಂತರ ಒತ್ತಡಕ್ಕೆ ಹೆದರಿದ ಮಹೇಶ್ ಕುಟುಂಬ ಸಮೇತ ನಾಪತ್ತೆಯಾಗಿದ್ದಾರೆ. ಮಧ್ಯಸ್ಥಿಕೆ ವಹಿಸಿ ಸಾಲ ಕೊಡಿಸಿದ್ದೆ. ಸಾಲಗಾರರು ನನಗೆ ತೊಂದರೆ ಕೊಡುತ್ತಿದ್ದಾರೆ. ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ಸಾಲಗಾರರು ರಾಕ್ಷಸರಂತೆ ವರ್ತಿಸುತ್ತಿದ್ದಾರೆ. ನಾವು ಕೆರೆ…

Read More

ಮ್ಮೂಸಿಕ್ ಮಾಂತ್ರಿಕ ಅರ್ಜುನ್ ಜನ್ಯರ ಮ್ಯೂಸಿಕಲ್ ನೈಟ್ ಕಾರ್ಯಕ್ರಮ ಗಡಿ ನಾಡು ಜಿಲ್ಲೆ ಚಾಮರಾಜನಗರದಲ್ಲಿ ಅದ್ದೂರಿಯಾಗಿ ಜರುಗಿದೆ. ಜಿಲ್ಲಾಡಳಿತ ವತಾಯಿಂದ ಕರ್ನಾಟಕ ಸುವರ್ಣ ಸಂಭ್ರಮ ರಸ ಮಂಜರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯರ ತಂಡದಿಂದ ಗಾನ ಬಜಾನ ನಡೆದಿದ್ದು, ಕನ್ನಡ ಸೂಪರ್ ಹಿಟ್ ಚಲನಚಿತ್ರಗಳ ಹಾಡನ್ನ ಹಾಡಿ ಅರ್ಜುನ್ ಜನ್ಯ ರಂಜಿಸಿದ್ದಾರೆ. ಜನ್ಯರ ಕಂಠದಿಂದ ಸುಮದುರ ಗಾಯನ ಮೂಡಿ ಬಂದಿದೆ. ರಾಬರ್ಟ್ ಸಿನಿಮಾದ ಜೈ ಶ್ರೀರಾಮ್ ಹಾಡಿಗೆ ಗಡಿ ನಾಡ ಜನರು ಮಂತ್ರ ಮುಗ್ದರಾಗಿದ್ದಾರೆ. ಅರ್ಜುನ್ ಜನ್ಯರ ಅದ್ಭುತ ಗಾಯನಕ್ಕೆ ಚಾಮರಾಜನಗರ ಜನತೆ ಮನಸೋತಿದ್ದಾರೆ. ಚಾಮರಾಜನಗರದ ಚಾಮರಾಜೇಶ್ವರ ದೇವಾಲಯ ಆವರಣದಲ್ಲಿ ಕಾರ್ಯಕ್ರಮ ನಡೆಯುತ್ತಿದೆ.

Read More

ಮುಂಬೈ:  ಏಕನಾಥ್‌ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಮರಾಠ ಸಮಯದಾಯದ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಬಳಿಕ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ (Manoj Jarange Patil) ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದಾರೆ. ಹಿಂದುಳಿದ ವರ್ಗಗಳ ಅಡಿಯಲ್ಲಿ ಮರಾಠ ಸಮಯದಾಯಕ್ಕೆ (Maratha Community) ಶಿಕ್ಷಣ ಮತ್ತು ಉದ್ಯೋಗಳಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಮುಂಬೈನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.  ಮಹಾರಾಷ್ಟ್ರ ಸರ್ಕಾರವು (Maharashtra Government) ನಮ್ಮ ಮನವಿಯನ್ನು ಸ್ವೀಕರಿಸಿದೆ ಎಂದು ಹೇಳಿ ಪಾಟೀಲ್‌ ಪ್ರತಿಭಟನೆಯನ್ನು ಅಂತ್ಯಗೊಳಿಸಿದರು. ಮುಖ್ಯಮಂತ್ರಿಗಳ ಕೈಯಿಂದ ತಂಪು ಪಾನೀಯ (ಜ್ಯೂಸ್‌) ಕುಡಿಯುವ ಮೂಲಕ ಉಪವಾಸ ಅಂತ್ಯಗೊಳಿಸಿದರು.  ಈ ವೇಳೆ ಮಾತನಾಡಿ, ಸಿಎಂ ಏಕನಾಥ್‌ ಶಿಂಧೆ (Eknath Shinde) ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ನಮ್ಮ ಮನವಿ ಸ್ವೀಕರಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ಇದರಿಂದ ನಮ್ಮ ಪ್ರತಿಭಟನೆ ಮುಗಿದಿದೆ ಎಂದು ತಿಳಿಸಿದ್ದಾರೆ. ಬೇಡಿಕೆಗಳಿಗೆ ಸರ್ಕಾರ ಅಸ್ತು: ಜನವರಿ 20 ರಂದು ಜಾಲ್ನಾದಿಂದ ಆರಂಭವಾದ ಮೀಸಲಾತಿ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆ ಶನಿವಾರ…

Read More

ಮೈಸೂರು: ಮದುವೆಯಾಗಿ 12 ವರ್ಷವಾದರೂ ಹಣಕ್ಕಾಗಿ ಗಂಡ  ಮತ್ತು ಆತನ ಮನೆಯವರು ಕಿರುಕುಳ ನೀಡುತ್ತಿದ್ದ ಪರಿಣಾಮ ಗೃಹಿಣಿ (House wife) ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜಗೂಡು ತಾಲೂಕಿನ ಹೊಸಕೋಟೆಯಲ್ಲಿ ನಡೆದಿದೆ. ವಿಜಯಲಕ್ಷ್ಮಿ  (35) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಈಕೆ ನಂಜನಗೂಡು ತಾಲೂಕಿನ ಹೊಸಕೋಟೆಯ ಹರೀಶ್ ಎಂಬವರನ್ನು ಮದುವೆಯಾಗಿ 12 ವರ್ಷಗಳಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ವರದಕ್ಷಿಣೆ ಹಣಕ್ಕಾಗಿ ಗಂಡ ಹರೀಶ್, ಅತ್ತೆ ಮಲ್ಲಿಗಮ್ಮ, ಮಾವ ಮಹದೇವಮೂರ್ತಿ, ಮೈದುನರಾದ ರಾಘವೇಂದ್ರ ಮತ್ತು ಮಹೇಂದ್ರ ದಿನ ಪಿಡಿಸುತ್ತಿದ್ದರು. ಕಿರುಕುಳ ತಾಳಲಾರದೆ ಮನನೊಂದು ಇಬ್ಬರು ಮಕ್ಕಳನ್ನು ಬಿಟ್ಟು ಗಂಡನ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ತಿಳಿಯುತ್ತಿದ್ದಂತೆ ಗಂಡ, ಅತ್ತೆ, ಮಾವ, ಮೈದುನರು ಪರಾರಿಯಾಗಿದ್ದಾರೆ. ಕಿರುಕುಳ ಇದೇ ಮೊದಲಲ್ಲ: ವಿಜಯಲಕ್ಷ್ಮಿ ಪೋಷಕರು ಚಿನ್ನಾಭರಣ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಆದರೆ ಗಂಡನ ಮನೆಯವರು ಮಾತ್ರ ಹಣಕ್ಕಾಗಿ ಆಕೆಯನ್ನು ದಿನ ಪಿಡಿಸುತ್ತಿದ್ದರು. ವರದಕ್ಷಿಣೆ ವಿಚಾರವಾಗಿ ಆಗಾಗ ಮನೆಯಲ್ಲಿ ಗಲಾಟೆ…

Read More

ಬೆಂಗಳೂರು:- ಲಾಲ್ ಬಾಗ್ ನಲ್ಲಿ ನಡೆದ ಫಲಪುಷ್ಪಪ್ರದರ್ಶನದ ಕೊನೆ ದಿನಕ್ಕೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ವೀಕೆಂಡ್ ಹಿನ್ನೆಲೆ ೭೬,೫೦೦ ಜನರಿಂದ ಲಾಲ್ ಬಾಗ್ ವೀಕ್ಷಣೆ ಮಾಡಲಾಗಿದೆ. ಇಂದು ಒಂದೇ ದಿನಕ್ಕೆ 37.5 ಲಕ್ಷ ಕಲೆಕ್ಷನ್‌ ಮಾಡಲಾಗಿದ್ದು, ವಚನಕಾರರು..ಬಸವಣ್ಣನವರ ದರ್ಶನಕ್ಕೆ ಸಾವಿರಾರು ಜನರು ಬಂದಿದ್ದರು. ಇದೆ ಮೊದಲ ಬಾರಿಗೆ ಗಣರಾಜ್ಯೋತ್ಸವ ಫಲಪುಷ್ಪಪ್ರದರ್ಶನಕ್ಕೆ ಭರ್ಜರಿ ರೆಸ್ಪನ್ಸ್ ಸಿಕ್ಕಿದೆ. ೧೧ ದಿನದ ಫಲಪುಷ್ಪಪ್ರದರ್ಶನ ನೋಡಲು ೫.೬೧ ಲಕ್ಷ ಜನರು ಬಂದಿದ್ದು, ಈ ಪ್ರದರ್ಶನದಿಂದ ೨೫೯ ಲಕ್ಷ ರೂ. ಕಲೆಕ್ಷನ್‌ ಆಗಿದ್ದು,ದಾಖಲೆ ನಿರ್ಮಾಣ ಮಾಡಿದೆ.

Read More

ಬಿಗ್‌ ಬಾಸ್ ಸೀಸನ್‌ನ ‘ಸಿಂಹಿಣಿ’ ಎಂದೇ ಪ್ರಸಿದ್ಧರಾಗಿದ್ದ ಸಂಗೀತಾ, ತಮ್ಮ ನೇರ ಮಾತು, ದಿಟ್ಟ ನಿಲುವಿನಿಂದ ಜನರ ಮೆಚ್ಚುಗೆ ಗಳಿಸಿದ್ದರು. ವರ್ತೂರು ಸಂತೋಷ್ ಮತ್ತು ವಿನಯ್ ಗೌಡ ಅವರು ಕ್ರಮವಾಗಿ ಮನೆಯಿಂದ ಹೊರಹೋಗುತ್ತಿದ್ದಂತೆಯೇ ಮನೆಯಲ್ಲಿ ಉಳಿದಿದ್ದವರು ಕಾರ್ತಿಕ್, ಸಂಗೀತಾ ಮತ್ತು ಪ್ರತಾಪ್. ಸ್ವತಃ ಕಿಚ್ಚ ಸುದೀಪ್ ಮನೆಯೊಳಗೆ ಹೋಗಿ, ಕಾಫಿ ಕುಡಿದು ಹರಟಿ ನಂತರ ಬಿಗ್‌ಬಾಸ್ ಮನೆಯಿಂದ ಬೀಳ್ಕೊಟ್ಟು ಮೂವರೂ ಸ್ಪರ್ಧಿಗಳನ್ನು ಮುಖ್ಯವೇದಿಕೆಗೆ ಕರೆತಂದರು. ಮುಖ್ಯವೇದಿಕೆಯಲ್ಲಿ ನಿಂತಿದ್ದ ಮೂವರು ಸ್ಪರ್ಧಿಗಳ ಮುಖದಲ್ಲಿ ಆತಂಕ ಎದ್ದು ಕಾಣಿಸುತ್ತಿತ್ತು. ಸ್ಪರ್ಧಿಗಳ ಮುಖದಲ್ಲಿಯಷ್ಟೇ ಅಲ್ಲ, ವೇದಿಕೆಯ ಪಕ್ಕ ಕೂತ ಹಿಂದಿನ ಸ್ಪರ್ಧಿಗಳು, ಎದುರಿನಲ್ಲಿನ ಪ್ರೇಕ್ಷರು ಎಲ್ಲರ ಮುಖದಲ್ಲಿಯೂ ಆತಂಕ ಎದ್ದು ಕಾಣಿಸುತ್ತಿತ್ತು. ಎಲ್ಲರ ಊಹೆಯನ್ನು ಬ್ರೇಕ್ ಮಾಡಿ ಹೊರಗೆ ಬಿದ್ದಿದ್ದು ಸಂಗೀತಾ ಶೃಂಗೇರಿ. ಫಿನಾಲೆ ವೀಕ್‌ನಲ್ಲಿ ಇದ್ದ ಒಬ್ಬರೇ ಒಬ್ಬರು ಮಹಿಳಾ ಸ್ಪರ್ಧಿ ಸಂಗೀತಾ ಗಟ್ಟಿ ವ್ಯಕ್ತಿತ್ವದಿಂದಲೇ ತನ್ನ ದಾರಿ ನಿರ್ಮಿನಿಸಿಕೊಂಡವರು. ಬಿಗ್‌ ಬಾಸ್ ಸೀಸನ್ 10 ಪ್ರಾರಂಭವಾಗುವುದಕ್ಕೂ ಹಿಂದೆ ಈ ಹೆಸರು ಕೇಳಿದಾಗ ಮನಸಲ್ಲಿ…

Read More

ಕೆಂಪು ರಕ್ತ ಕಣಗಳನ್ನು ಹೆಚ್ಚಿಸಲು ಸಪ್ಲಿಮೆಂಟ್ ಅಥವಾ ಔಷಧಿಗಳನ್ನು ಸೇವಿಸುವುದಕ್ಕಿಂತಲೂ ಆಹಾರದ ಮೂಲಕವೇ ಅದನ್ನು ಕಂಟ್ರೋಲ್ ಮಾಡಬಹುದು. ರಕ್ತ ಪರಿಚಲನೆಯ ಮೂಲಕ ದೇಹದ ಅಂಗಾಶಗಳಿಗೆ ಆಮ್ಲಜನಕವನ್ನು ತಲುಪಿಸುವ ಪ್ರಮುಖ ಸಾಧನ ಇದಾಗಿದೆ. ಕೆಂಪು ರಕ್ತ ಕಣಗಳನ್ನು ಹೆಚ್ಚಿಸಲು ಈ 10 ಆಹಾರವನ್ನು ಸೇವಿಸಿ. ಹಸಿರು ಸೊಪ್ಪು: ಪಾಲಕ್, ಕೇಲ್, ಸ್ವಿಸ್ ಚಾರ್ಡ್ ಮತ್ತು ಇತರ ಹಸಿರು ಸೊಪ್ಪಿನಲ್ಲಿ ಕಬ್ಬಿಣ ಮತ್ತು ಫೋಲೇಟ್ ಸಮೃದ್ಧವಾಗಿರುತ್ತದೆ. ಇದು ಕೆಂಪು ರಕ್ತ ಕಣಗಳ ಉತ್ಪಾದನೆಗೆ ಅವಶ್ಯಕವಾಗಿದೆ. ಮಾಂಸ: ಆರ್ಗನ್ ಮಾಂಸಗಳು ವಿಶೇಷವಾಗಿ ಯಕೃತ್ತು, ಕಬ್ಬಿಣ, ವಿಟಮಿನ್ ಬಿ 12 ಮತ್ತು ಕೆಂಪು ರಕ್ತ ಕಣಗಳ ರಚನೆಗೆ ಪ್ರಮುಖವಾದ ಇತರ ಪೋಷಕಾಂಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಬೀನ್ಸ್ ಮತ್ತು ಮಸೂರ: ದ್ವಿದಳ ಧಾನ್ಯಗಳು ಮತ್ತು ಬೀನ್ಸ್ (ಉದಾಹರಣೆಗೆ ಕಡಲೆ, ಕಪ್ಪು ಬೀನ್ಸ್) ಕಬ್ಬಿಣ, ಪ್ರೋಟೀನ್ ಮತ್ತು ಫೋಲೇಟ್‌ನ ಉತ್ತಮ ಮೂಲಗಳಾಗಿವೆ. ನಟ್ಸ್ ಮತ್ತು ಸೀಡ್ಸ್: ಬಾದಾಮಿ, ಸೂರ್ಯಕಾಂತಿ ಬೀಜಗಳು ಮತ್ತು ಕುಂಬಳಕಾಯಿ ಬೀಜಗಳು ಕಬ್ಬಿಣ, ವಿಟಮಿನ್ ಇ ಮತ್ತು…

Read More