Author: AIN Author

ರಕ್ಷಿತ್ ಶೆಟ್ಟಿ ನಟಿಸಿರುವ ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ ಒಟಿಟಿಯಲ್ಲಿ (OTT) ಲಭ್ಯವಾಗಿದೆ. ಜನವರಿ 25ರ ಮಧ್ಯರಾತ್ರಿಯಿಂದಲೇ ಅಮೆಜಾನ್ ಪ್ರೈಂ ವಿಡಿಯೋದಲ್ಲಿ ನೋಡಬಹುದು ಎಂದು ನಿರ್ದೇಶಕ ಹೇಮಂತ್ ರಾವ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಎ ಮತ್ತು ಬಿ ಪಾರ್ಟ್ ಎರಡನ್ನೂ ಪ್ರೇಕ್ಷಕರು ಒಪ್ಪಿಕೊಂಡಿದ್ದರು. ಬಾಕ್ಸ್ ಆಫೀಸಿನಲ್ಲೂ ಗೆದ್ದಿದ್ದವು. ಕೇವಲ ಪ್ರೇಕ್ಷಕರು ಮಾತ್ರವಲ್ಲ, ಸೆಲೆಬ್ರಿಟಿಗಳು ಈ ಸಿನಿಮಾವನ್ನು ಒಪ್ಪಿಕೊಂಡಿದ್ದರು. ಹೆಸರಾಂತ ನಟ ಪ್ರಕಾಶ್ ರಾಜ್ (Prakash Raj), ತಾವು ಮೆಚ್ಚಿದ ಸಿನಿಮಾಗಳ ಬಗ್ಗೆ ಆಗಾಗ್ಗೆ ಬರೆಯುತ್ತಲೇ ಇರುತ್ತಾರೆ. ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ಸಂಭ್ರಮಿಸಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸಿನಿಮಾ ಬಗ್ಗೆ, ‘ಸಪ್ತ ಸಾಗರದಾಚೆ ಎಲ್ಲೋ.. ಆಹಾ.. ಒಂದು ಸುಂದರ ದೃಶ್ಯಕಾವ್ಯ ಅನುಭವ. ಡೋಂಟ್ ಮಿಸ್’ ಎಂದು ಬರೆದುಕೊಂಡಿದ್ದರು. ರಕ್ಷಿತ್ ಶೆಟ್ಟಿ, ನಿರ್ದೇಶಕ ಹೇಮಂತ್ ರಾವ್, ಚೈತ್ರಾ ಆಚಾರ್ಯ, ರುಕ್ಮಿಣಿ, ಚರಣ್ ರಾಜ್ ಹೀಗೆ ಸಿನಿಮಾದ ಕಲಾವಿದರು ಮತ್ತು ತಂತ್ರಜ್ಞರಿಗೆ ತಮ್ಮ ಬರಹವನ್ನು ಟ್ಯಾಗ್ ಮಾಡಿದ್ದರು.…

Read More

ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಬರೋಬ್ಬರಿ 30 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ನಗರದ ಬಳೆಪೇಟೆಯ ಪೇಯಿಂಟ್ ಶಾಪ್‌ನಲ್ಲಿ (Paint Shop) ಬೆಂಕಿ ಕಾಣಿಸಿಕೊಂಡಿದ್ದು, ಎರಡು ಅಂತಸ್ಥಿನ ಕಟ್ಟದ ಹೊತ್ತಿ ಉರಿದಿದೆ. ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಅಂಗಡಿ ಕಳೆದುಕೊಂಡ ಕುಟುಂಬ ಕಣ್ಣೀರಿಟ್ಟಿದೆ. ಬಳೆಪೇಟೆಯ ಪೇಯಿಂಟ್ ಶಾಪ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ಕ್ಷಣಗಳಲ್ಲೇ ಎರಡು ಅಂತಸ್ಥಿಗೆ ವ್ಯಾಪಿಸಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಮಾಲೀಕ ಕೃಷ್ಣಮೂರ್ತಿ ಕುಟುಂಬ, ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. 20 ವರ್ಷಗಳಷ್ಟು ಹಳೆಯ ಬಿಲ್ಡಿಂಗ್‌ನಲ್ಲಿ ಇದೇ ಮೊದಲಬಾರಿಗೆ ಅಗ್ನಿ ಅನಾಹುತ ಸಂಭವಿಸಿದೆ ಎಂದು ಸಹ ಕೃಷ್ಣಮೂರ್ತಿ ತಿಳಿಸಿದ್ದಾರೆ.

Read More

ಬೆಂಗಳೂರು: ಬಿಜೆಪಿ ಸೇರ್ಪಡೆಯಾಗಿರಬಹುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್, ಐಟಿ ಬಿಟಿ ಹಾಗೂ ಜಿಲ್ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಂಶಯ ವ್ಯಕ್ತಪಡಿಸಿದರು. https://ainlivenews.com/the-list-of-appointment-of-corporation-boards-has-been-released-by-the-congress-government-of-the-state/ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿರೋಧ ಪಕ್ಷಗಳ ನಾಯಕರನ್ನು ಹಣಿಯಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಐಟಿ, ಇಡಿ, ಸಿಬಿಐಗಳನ್ನು ಅಸ್ತ್ರವಾಗಿ ಬಳಸುತ್ತಿದೆ. ಶೆಟ್ಟರ್ ಅವರನ್ನು ಸೆಳೆಯಲ ಇದೇ ತಂತ್ರ ಅನುಸರಿಸಿರಬಹುದು. ಶೆಟ್ಟರ್ ಅವರನ್ನು ನಮ್ಮ ಪಕ್ಷ ಗೌರವಯುತವಾಗಿಯೇ ನಡೆಸಿಕೊಂಡಿತ್ತು. ಈ ಬಗ್ಗೆ ಅವರೇ ಹೇಳಿಕೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡರೂ ವಿಧಾನಪರಿಷತ್ ಸ್ಥಾನವನ್ನು ನೀಡಲಾಗಿತ್ತು’ ಎಂದರು. “ಬಿಜೆಪಿಗೆ ಇಡಿ, ಐಟಿ, ಸಿಬಿಐಗಳೇ ಸ್ಪಾರ್ ಕ್ಯಾಂಪೇನರ್‌ಗಳಾಗಿದ್ದಾರೆ. ಇವುಗಳನ್ನು ಬಿಟ್ಟರೆ ಬಿಜೆಪಿಯವರಿಗೆ ಗತಿ ಇಲ್ಲ- ತಾಕತ್ತಿದ್ದರೆ ವಿರೋಧ ಪಕ್ಷಗಳ ನಾಯಕರ ಮೇಲೆ ಇಡಿ. ಐಟಿಗಳನ್ನು ಭೂ ಬಿಡದೇ ಚುನಾವಣೆ ಎದುರಿಸಲಿ ನೋಡೋಣ’ ಎಂದು ಸವಾಲು ಹಾಕಿದರು. ‘ಎಂಥ ಭ್ರಷ್ಟ ವ್ಯಕ್ತಿಯೇ ಇರಲಿ. ಆತ ಬಿಜೆಪಿ ವಾಷಿಂಗ್ ಮಷಿನ್‌ನಲ್ಲಿ ಹಾದು ಹೋದರೆ ಶುಭ್ರನಾಗುತ್ತಾನೆ” ಎಂದು ವ್ಯಂಗ್ಯವಾಡಿದರು.

Read More

ಗದಗ: ಭಯಾನಕ ಭವಿಷ್ಯವೊಂದನ್ನು ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಅವರು ನುಡಿದಿದ್ದಾರೆ. ಜಗತ್ತಿಗೆ ಒಳ್ಳೆಯ ದಿನಗಳಿಲ್ಲ ಎಂದು ಹೇಳಿದ್ದಾರೆ. ಬಾಂಬ್ ಸಿಡಿಯುವ ಸಂಭವವಿದ್ದು, ಯುದ್ಧ ಭೀತಿ ಆವರಿಸಲಿದೆ. ಭೂಕಂಪ.. ಜಲ ಕಂಟಕವೂ ಇದೆ. ಜನರು ತಲ್ಲಣವಾಗುತ್ತಾರೆ ಎಂದು ಭವಿಷ್ಯ ತಿಳಿಸಿದ್ದಾರೆ. ಜಗತ್ತಿನ ದೊಡ್ಡ ಸಂತರು ಕೊಲೆಯಾಗುತ್ತಾರೆ, ಜಗತ್ತಿನಲ್ಲಿ ಒಂದೆರಡು ಪ್ರಧಾನಿಗಳಿಗೆ ಸಾವಾಗುವ ಲಕ್ಷಣ.. ಅಸ್ಥಿರತೆ, ಯುದ್ಧ ಭೀತಿ.. ಅಣು ಬಾಂಬ್ ಸ್ಫೋಟವಾಗುವ ಸಾಧ್ಯತೆಗಳಿವೆ. ಜಗತ್ತಿಗೆ ವಿನಾಶ ಕಾದಿದೆ.. ರೋಗ, ಸುನಾಮಿ ಸಂಭವಿಸಲಿದೆ. ಮತೀಯ ಸಮಸ್ಯೆಯಿಂದ ಜನರು ದುಃಖ ಅನುಭವಿಸುತ್ತಾರೆ. ದೈವ ನಂಬುವುದೊಂದೆ ಪರಿಹಾರ.. ದೈವ ಮೊರೆ ಹೋಗ್ಬೇಕು ಎಂದು ಕಳಕಳಿ ವ್ಯಕ್ತಪಡಿಸಿದ್ದಾರೆ.

Read More

ನೂರು ಕಂತುಗಳ ದಿನಗಳನ್ನು ಪೂರೈಸಿ ಕೊನೆಗೂ ಬಿಗ್ ಬಾಸ್ (Bigg Boss Kannada) ಫಿನಾಲೆಗೆ ಬಂದು ತಲುಪಿದೆ. ಇಂದು ಸಂಜೆಯಿಂದ ಫಿನಾಲೆ ಸಂಚಿಕೆಯನ್ನು ಪ್ರಸಾರ ಮಾಡಲು ವಾಹಿನಿಯು ಸಿದ್ಧ ಮಾಡಿಕೊಂಡಿದೆ. ಸಂಜೆ 7.30ರಿಂದ ಫಿನಾಲೆ ಸಂಚಿಕೆಯನ್ನು ವೀಕ್ಷಿಸಬಹುದಾಗಿದೆ. ಫಿನಾಲೆ (Finale) ಕಾರಣದಿಂದಾಗಿ ತಮ್ಮದೇ ಆದ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ ಬಿಗ್ ಬಾಸ್ ಟೀಮ್. ಶೂಟಿಂಗ್ ನಲ್ಲಿ ನಡೆಯುವ ವಿಷಯಗಳು ಬಹಿರಂಗವಾಗ ಬಾರದು ಎನ್ನುವ ಕಾರಣಕ್ಕಾಗಿ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆಯಂತೆ. ಸಾಮಾನ್ಯ ಪ್ರೇಕ್ಷಕರಿಗೆ ಇಂದು ಪ್ರವೇಶವಿಲ್ಲ. ಅವರೇ ಆಯ್ಕೆ ಮಾಡಿರುವ ಕೆಲವೇ ಕೆಲವೇ ಪ್ರೇಕ್ಷಕರು ಇಂದು ಇರಲಿದ್ದಾರೆ. ಈಗಾಗಲೇ ನಾಮಿನೇಟ್ ಆಗಿರುವ ಸ್ಪರ್ಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ನಿನ್ನೆಯಿಂದಲೇ ಒಂದಷ್ಟು ಚಿತ್ರೀಕರಣದ ಕೆಲಸವನ್ನೂ ಮುಗಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ಇವತ್ತು ಮತ್ತು ನಾಳೆ ಎರಡು ದಿನಗಳ ಕಾಲ ಫಿನಾಲೆ ಶೂಟಿಂಗ್ ನಡೆಯಲಿದೆ. ಜೊತೆಗೆ ಇವತ್ತು ಇಬ್ಬರು ಬಿಗ್ ಬಾಸ್ ಮನೆಯಿಂದ ಹೊರ ಬರಲಿದ್ದಾರಂತೆ. ಡ್ರೋನ್ ಪ್ರತಾಪ್, ಸಂಗೀತಾ ಶೃಂಗೇರಿ, ಕಾರ್ತಿಕ್, ತುಕಾಲಿ ಸಂತು,…

Read More

ಗಾಂಧೀನಗರ: ಗುಜರಾತ್‍ನ ಸೂರತ್ ಮೂಲದ  ವಜ್ರ ವ್ಯಾಪಾರಿ 11 ಕೋಟಿ ರೂ. ಮೌಲ್ಯದ ಕಿರೀಟವನ್ನು  ರಾಮಲಲ್ಲಾ ಮೂರ್ತಿಗೆ  ದೇಣಿಗೆ ನೀಡಿದ್ದಾರೆ. ಗ್ರೀನ್ ಲ್ಯಾಬ್ ಡೈಮಂಡ್ ಕಂಪನಿ ಮಾಲೀಕರಾದ ಮುಕೇಶ್ ಪಟೇಲ್ ದೇಣಿಗೆ ನೀಡಿರುವ ವ್ಯಕ್ತಿ. ಸೂರತ್‍ನಲ್ಲಿ ವಜ್ರ ವ್ಯಾಪಾರಿಯಾಗಿರುವ ಮುಕೇಶ್ ಅವರು ಪ್ರಭು ಶ್ರೀರಾಮನಿಗಾಗಿ 6 ಕೆ.ಜಿ ತೂಕದ ಚಿನ್ನ ಮತ್ತು ವಜ್ರಗಳಿಂದ ತಯಾರಿಸಿರುವ ಕಿರೀಟವನ್ನು ಕೊಡುಗೆಯಾಗಿ ನೀಡಿದ್ದಾರೆ. ಅಯೋಧ್ಯೆಯ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ  ಇಡೀ ದೇಶವೇ ಸಾಕ್ಷಿಯಾಗಿತ್ತು. ಪ್ರಭು ಶ್ರೀರಾಮ ಚಿನ್ನದ ಅಭರಣಗಳಿಂದ ಕಂಗೊಳಿಸುತ್ತಿದ್ದನು. ಇದೇ ಹೊತ್ತಲ್ಲಿ ಸೂರತ್‍ನ  ವಜ್ರ ವ್ಯಾಪಾರಿ ನೀಡಿರುವ 11 ಕೋಟಿ ರೂಪಾಯಿ ಮೌಲ್ಯ ಬೆಲೆ ಬಾಳುವ ಚಿನ್ನ ಮತ್ತು ವಜ್ರಗಳಿಂದ ತಯಾರಿಸಿರುವ ಕಿರೀಟ ದಾನ ಮಾಡಿದ್ದಾರೆ . ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಕುಟುಂಬ ಸಮೇತರಾಗಿ ಮುಕೇಶ್ ಪಟೇಲ್ ಅಯೋಧ್ಯೆಗೆ ಆಗಮಿಸಿದ್ದರು. ಬಳಿಕ ಖುದ್ದಾಗಿ ಮಂದಿರದ ಪ್ರಧಾನ ಅರ್ಚಕರು ಮತ್ತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿಗಳಿಗೆ ಸೂಕ್ಷ್ಮವಾಗಿ ರಚಿಸಲಾದ ಕಿರೀಟವನ್ನು ಹಸ್ತಾಂತರ ಮಾಡಿದ್ದಾರೆ. ಹಲವಾರು…

Read More

ಕಲಬುರಗಿ: ಲೋಕ ಚುನಾವಣೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡಿಯಬೇಕೆಂದು ಸಂಕಲ್ಪ ಮಾಡಿರುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇವತ್ತು ಕಲಬುರಗಿಗೆ ಭೇಟಿ ನೀಡಲಿದ್ದು ಕೈ ಕಾರ್ಯಕರ್ತರ ಜೊತೆ ಮೀಟಿಂಗ್ ಮಾಡಲಿದ್ದಾರೆ. ವಿಶೇಷ ವಿಮಾನದಲ್ಲಿ ಕಲಬುರಗಿಗೆ ಆಗಮಿಸಲಿರುವ ಖರ್ಗೆ HKE ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದೇವೇಳೆ ಕೈ ಮುಖಂಡರ ಜೊತೆ ಗೌಪ್ಯ ಮೀಟಿಂಗ್ ಮಾಡಲಿದ್ದಾರೆ ಎನ್ನಲಾಗಿದೆ..ಇಂದು ಕಲಬುರಗಿಯಲ್ಲೇ ವಾಸ್ತವ್ಯ ಹೂಡಲಿದ್ದು ನಾಳೆ ಡೆಹರಡೂನ್ ತೆರಳಲಿದ್ದಾರೆ.

Read More

ದೆಹಲಿ: ಜನವರಿ 22 ಅಯೋಧ್ಯೆಯಲ್ಲಿ ಶ್ರೀರಾಮ ಪ್ರಭುವಿನ ಪ್ರಾಣ ಪ್ರತಿಷ್ಠೆ ನೆರವೇರಿದೆ. ಕೋಟ್ಯಾಂತರ ಹಿಂದೂಗಳ ಕನಸನ್ನು ಪ್ರಧಾನಿ ಮೋದಿಯವರು ನೆರವೇರಿಸಿದ್ದು, ಶ್ರೀರಾಮ ಪ್ರಭು ಅಯೋಧ್ಯಾ ಅಧಿಪತಿಯಾಗಿ ನೆಲೆ ನಿಂತಿದ್ದಾನೆ. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ವೇಳೆ ಗರ್ಭಗುಡಿಯಲ್ಲಿ ಐವರು ನಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​​, ಉತ್ತರ ಪ್ರದೇಶದ ರಾಜ್ಯಪಾಲರು, ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್, ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ರಾಮ ಭೂಮಿ ಟ್ರಸ್ಟ್​ನ ಅಧ್ಯಕ್ಷರು ಪೂಜೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಗೆ ನೈವೇದ್ಯ ಸಮರ್ಪಣೆ ಮಾಡುತ್ತಿದ್ದಾಗ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ತಮ್ಮ ವಸ್ತ್ರದಿಂದ ಮುಖವನ್ನು ಮುಚ್ಚಿಕೊಂಡಿದ್ದರು. ಇದನ್ನು ನೋಡಿದ ಅನೇಕರಿಗೆ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಏಕೆ ಹೀಗೆ ಮುಖವನ್ನು ಮುಚ್ಚಿಕೊಂಡರು ಎಂಬ ಪ್ರಶ್ನೆ ಮೂಡಿತ್ತು. ಈ ಪ್ರಾಣ ಪ್ರತಿಷ್ಠೆ ವೇಳೆ ಗರ್ಭಗುಡಿಯೊಳಗೆ ಉಡುಪಿಯ ಪೇಜಾವರ ಮಠದ ಶ್ರೀ…

Read More

ವಿಜಯಪುರ: ಕಬ್ಬಿನ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆದಿರುವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. https://ainlivenews.com/congress-party-is-like-a-sea-hundreds-of-leaders-come-and-go-there-is-no-loss-dkshi/ 34 ವರ್ಷದ ದೊಂಡಿಬಾ ಜರಕ ಬಂಧಿತ ಆರೋಪಿ. ಇನ್ನೂ ಬಂಧಿತ ಆರೋಪಿಯಿಂದ 4,40,680 ಮೌಲ್ಯದ 76 ಕೆಜಿ 36 ಗ್ರಾಂ ಗಾಂಜಾವನ್ನು ಪೊಲೀಸರು ಜಪ್ತಿಗೈದಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವಿಜಯಪುರದ ಎಸ್ ಪಿ ಋಷಿಕೇಶ ಸೋನಾವಣೆ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ…

Read More

ಶಿವಮೊಗ್ಗ:  ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಘವೇಂದ್ರರನ್ನು ಗೆಲ್ಲಿಸಲು ಶ್ಯಾಮನೂರು ಕರೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಶಾಸಕ ಶ್ಯಾಮನೂರು ಶಿವಶಂಕರಪ್ಪ  ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿ ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ, ಮುಂದೆಯೂ ಇವರನ್ನು ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯ ಎಂದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿರುವ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಹೇಳಿದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿರುವ ಶಾಮನೂರು ಶಿವಶಂಕರಪ್ಪ ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಶ್ಯಾಮನೂರು ಶಿವಮೊಗ್ಗದ ಬೆಕ್ಕಿನಕಲ್ಮಠದಲ್ಲಿ ನಡೆದ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಹೇಳಿಕೆ ನೀಡಿದರು.

Read More