Author: AIN Author

ಚಾಮರಾಜನಗರ: ಸಾಕಾಣಿಕೆ ಮಾಡಿದ್ದ ಮೀನುಗಳಿಗೆ ದುಷ್ಕರ್ಮಿಗಳು ವಿಷ ಹಾಕಿದ ಘಟನೆ ಚಾಮರಾಜನಗರ ಪಟ್ಟಣದ ರಾಮಸಮುದ್ರದಲ್ಲಿ ನಡೆದಿದೆ. ರಾಮಸಮುದ್ರ ಬಡಾವಣೆಯ ರೈತ ಮಹೇಶ್ ಬಾಬು ಎಂಬುವವರ ಜಮೀನಿನಲ್ಲಿ ಸಾಕಾಣಿಕೆ ಮಾಡಿದ್ದ ಸಾವಿರಾರು ಮೀನುಗಳ ಸಾವನ್ನಪ್ಪಿವೆ. ರಾಮಸಮುದ್ರ ಬಸವನಪುರ ರಸ್ತೆಯಲ್ಲಿರುವ ಮಹದೇಶ್ವರ ದೇವಾಲಯದ ಸಮೀಪದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ರೈತ ಮಹೇಶ್ ಬಾಬು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ತಮ್ಮ ಜಮೀನಿನಲ್ಲಿ ಮೀನು ಸಾಕಾಣಿಕೆ ಮಾಡಿದ್ದರು. ಆದರೆ ರಾತ್ರೋರಾತ್ರಿ ಕಿಡಿಗೇಡಿಗಳು ಮೀನಿನ ಹೊಂಡಕ್ಕೆ ವಿಷ ಹಾಕಿದ್ದಾರೆ. ಹಾಗಾಗಿ ಮೀನು ಸಾಕಾಣಿಕೆ ಘಟಕದಲ್ಲಿದ್ದ ಸಾವಿರಾರು ಮೀನುಗಳು ಏಕಕಾಲದಲ್ಲಿ ಸಾವನ್ನಪ್ಪಿವೆ.  

Read More

ಆಗಸ್ಟ್ 15, 1947 ರಲ್ಲಿ ಬ್ರಿಟಿಷರಿಂದ ತಾತ್ವಿಕವಾಗಿ ಸ್ವಾತಂತ್ರ್ಯವನ್ನು ಪಡೆದುಕೊಂಡ ದಿನವಾದರೆ, ಜನವರಿ 26, 1950 ಭಾರತ ತನ್ನ ಸಂವಿಧಾನವನ್ನು ಜಾರಿಗೊಳಿಸಿದ ದಿನವಾಗಿದೆ. ರಾಜ ಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ದಿನವಾಗಿದೆ. ಈ ಕಾರಣಕ್ಕಾಗಿ ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದೆ. ಅತಿ ಶೀಘ್ರದಲ್ಲಿ ಭಾರತ ನಂ ೧ ಮಾದರಿಯಲ್ಲಿ ಅಭಿವೃದ್ಧಿ ದೇಶವಾಗಲಿದೆ ಎಂದು ಶಾಸಕ ಸವದಿ ತಿಳಿಸಿದರು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಾಮಪ್ಪ ಚಿಕ್ಕೋಡಿ ಕ್ರೀಡಾಂಗಣದಲ್ಲಿ ಜರುಗಿದ ೭೫ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 1929ರ ಲಾಹೋರ್ ನಲ್ಲಿ ನಡೆದ ಕಾಂಗ್ರೆಸ್ ಸೆಷನ್ನಲ್ಲಿ ಜವಹಾರ್ ಲಾಲ್ ನೆಹರು ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ, ಜನವರಿ 26, 1930 ರಲ್ಲಿ ದೇಶ ಸಂಪೂರ್ಣ ಸ್ವಾತಂತ್ರ್ಯ ಪಡೆಯಬೇಕೆಂಬ ನಿರ್ಣಯವನ್ನೂ ಕೈಗೊಳ್ಳಲಾಗಿತ್ತು. ಅದನ್ನೇ ಪೂರ್ಣ ಸ್ವರಾಜ್ ದಿವಸ್ ಅಥವಾ ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಘೋಷಣೆ ಮಾಡಲಾಗಿತ್ತು. ಆದರೆ ಇದು 1947ರ ವರೆಗೂ ಈಡೇರಲಿಲ್ಲ. ಆದ್ದರಿಂದ…

Read More

ನವದೆಹಲಿ: ದೇಶಾದ್ಯಂತ ಇಂದು 75ನೇ ಗಣರಾಜ್ಯೋತ್ಸವವನ್ನು  ಆಚರಿಸಲಾಗುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಪ್ರಧಾನಿ ನರೇಂದ್ರ ಮೋದಿಯವರ ಪೇಟ ಗಮನಸೆಳೆದಿದೆ. ವರ್ಣರಂಜಿತ ಪೇಟ ಧರಿಸುವ ತಮ್ಮ ಸಂಪ್ರದಾಯವನ್ನು ಮುಂದುವರಿಸಿದ್ದಾರೆ. ಪ್ರಧಾನಿಯವರು ಈ ಬಾರಿ ಭಾರತದ ವೈವಿಧ್ಯತೆಯನ್ನು ಸಂಕೇತಿಸಲು ಬಹುವರ್ಣದ ಪೇಟವನ್ನು (Modi Turban) ಆಯ್ಕೆ ಮಾಡಿದರು. ಗುಲಾಬಿ ಮತ್ತು ಕಿತ್ತಳೆ ಬಣ್ಣದ ರಾಜಸ್ಥಾನಿ ಬಂಧನಿ ಪೇಟವನ್ನು ಧರಿಸುವ ಮೂಲಕ ಭಗವಾನ್‌ ರಾಮನಿಗೆ ಗೌರವ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವರ್ಷ ಮೋದಿ ಅವರು ಬಿಳಿ ಕುರ್ತಾವನ್ನು ಧರಿಸಿದ್ದಾರೆ. ಜೊತೆಗೆ ಕಪ್ಪು ಕಂದು ಬಣ್ಣದ ಜಾಕೆಟ್ ಮತ್ತು ಕಪ್ಪು ಬೂಟುಗಳನ್ನು ಧರಿಸಿದ್ದಾರೆ. https://ainlivenews.com/rs-3-lakh-loan-for-women-without-interest-how-to-apply-here-is-the-complete-details/ ಒಟ್ಟಿನಲ್ಲಿ ಪ್ರತಿ ಬಾರಿಯೂ ಪ್ರಧಾನಿಯವರ ಪೇಟ ಆಕರ್ಷಕವಾಗಿರುತ್ತದೆ. ಈ ಬಾರಿ ಪ್ರಧಾನಿಯವರು (Narendra Modi) ಯಾವ ಬಣ್ಣದ ಪೇಟ ತೊಡುತ್ತಾರೆ ಎಂಬ ಕುತೂಹಲ ಜನರಲ್ಲಿ ಇತ್ತು. ಅಂತೆಯೇ ಇಂದು ಗಣರಾಜ್ಯೋತ್ಸವ ಪರೇಡ್‌ಗೂ ಮುನ್ನ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸುತ್ತಿದ್ದಂತೆಯೇ ಅವರು ಧರಿಸಿರುವ ಉಡುಪಿನ ಫಸ್ಟ್…

Read More

ಬೆಂಗಳೂರು: ಕಾಂಗ್ರೆಸ್ ಗೆ ಹಾಗೂ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಸೇರಿದ್ದೇನೆ  ಅಮಿತ್ ಶಾ ಅವರನ್ನೂ ಭೇಟಿ ಮಾಡಿದ್ದೇನೆ ಯಡಿಯೂರಪ್ಪ ಸೇರಿದಂತೆ ಎಲ್ಲ ನಾಯಕರು ಉಪಸ್ಥಿತರಿದ್ದರು ಎಂದು ಬಿಜೆಪಿ ಸೇರಿದ ಬಳಿಕ ಶೆಟ್ಟರ್‌ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು , ಎಲ್ಲ ನಾಯಕರು, ನಿಮಗೆ ಸೂಕ್ತ ಸ್ಥಾನಮಾನ, ಗೌರವ ಕೊಡುತ್ತೇವೆ ಎಂದಿದ್ದಾರೆ ಬಿಜೆಪಿಗೆ ವಾಪಸ್ ಬರುವ ಪ್ರಕ್ರಿಯೆ ಕೇವಲ ನಾಲ್ಕು ಗಂಟೆಯಲ್ಲಿ ಆಗಿದ್ದಲ್ಲ ಇದು ನನ್ನ ಮನೆ, ನಾವೆಲ್ಲ ಕಟ್ಟಿ ಬೆಳೆಸಿದ ಮನೆ ನಮ್ಮ ಕುಟುಂಬದವರೆಲ್ಲ ಜನಸಂಘದಿಂದ ಜೊತೆಗೆ ಇದ್ದೇವೆ  ಅಸ್ಸೆಂಬ್ಲಿ ಚುನಾವಣೆ ವೇಳೆ ಕೆಲ ಘಟನೆ ನಡೆಯಿತು ಅದರಿಂದ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದೆ  ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಸೇರಿದ್ದೇನೆ ಮೋದಿ ಅವರ 10 ವರ್ಷಗಳಿಂದ ಉತ್ತಮ ಕೆಲಸ ಮಾಡಿದ್ದಾರೆ ಮತ್ತೊಮ್ಮೆ ಅವರು ಪ್ರಧಾನಿ ಆಗಬೇಕು ಎಂಬ ಆಶಯ ಇದೆ ಅದಕ್ಕಾಗಿ ಬಿಜೆಪಿ ಸೇರಿದ್ದೇನೆ  ಜಗತ್ತಿನಲ್ಲೇ ಭಾರತ ಆರ್ಥಿಕವಾಗಿ ಕೂಡ ಬಲಿಷ್ಟವಾಗಿದೆ ಅವರು ಮತ್ತೊಮ್ಮೆ ಪ್ರಧಾನಿ…

Read More

ಕೆಲವು ದಿನಗಳ ಹಿಂದೆ ಬಿಗ್‌ಬಾಸ್‌, ಮನೆಯಲ್ಲಿರುವ ಆರು ಸ್ಪರ್ಧಿಗಳಿಗೆ ಅವರ ಆಸೆಗಳನ್ನು ಕೇಳಿತ್ತು. ಈಗ ಅವರ ಆಸೆಗಳನ್ನೆಲ್ಲ ಒಂದೊಂದಾಗಿ ಈಡೇರಿಸುತ್ತಿದ್ದಾರೆ ಬಿಗ್‌ಬಾಸ್. ಆ ಸನ್ನಿವೇಶ ಹೇಗಿದೆ ಎಂಬುದು JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಜಾಹೀರಾಗಿದೆ. ‘ತುಕಾಲಿಯವರೆ ಕೆಲಸಮಯಕ್ಕೆ ರಾಜನಂತೆ ಬದುಕಬೇಕು’ ಎಂದು ಬಿಗ್‌ಬಾಸ್‌ ಹೇಳಿದ್ದಾರೆ. ಅದಕ್ಕೆ ಅನುಗುಣವಾಗಿ ಕೆಂಪು ಸೂಟ್ ತೊಟ್ಟುಕೊಂಡ ತುಕಾಲಿ ಮಹಾರಾಜ್‌, ಮರುಕ್ಷಣವೇ ಮನೆಮಂದಿಗೆ ಅಪ್ಪಣೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ. ‘ಪಿಲ್ಲೊವನ್ನು ತೆಗೆದುಕೊಂಡು ನನಗೆ ಬೀಸು’ ಎಂದು ಕಾರ್ತಿಕ್‌ಗೆ ಅಪ್ಪಣೆ ಮಾಡಿದ್ದಾರೆ. ಅಷ್ಟೇ ಅಲ್ಲ, ತುಕಾಲಿ ಮಹಾರಾಜರ ಮನಗೆಲ್ಲಲು ಬಿಗ್‌ಬಾಸ್‌ ಮನೆಯಲ್ಲಿ ಹೊಸ ರಾಜಕುಮಾರಿ ಅವತರಿಸಿದ್ದಾಳೆ. ಅಪ್ಪಣೆ ಮಾಡುವ ಮುನ್ನವೇ ತುಕಾಲಿ ಅವರಿಗೆ ಅವಸರವಸರವಾಗಿ ಮುತ್ತಿಟ್ಟು ತನ್ನ ಪ್ರೇಮವನ್ನೂ ವ್ಯಕ್ತಪಡಿಸಿದ್ದಾಳೆ. ‘ಎಷ್ಟು ಆತುರದಿಂದ ಕಾಯುತ್ತಿದ್ದೀಯಾ ಎಂದು ಈಗ ಗೊತ್ತಾಯ್ತು’ ಎಂದು ಆ ರಾಜಕುಮಾರಿಯ ಪ್ರೇಮಕ್ಕೆ ಮಹಾರಾಜರೇ ತಬ್ಬಿಬ್ಬಾಗಿದ್ದಾರೆ. ಅಷ್ಟೇ ಅಲ್ಲ, ಪ್ರತಾಪ್‌ ಕಂಪನಿಯ ಡ್ರೋಣ್‌ ಬಿಗ್‌ಬಾಸ್‌ ಮನೆಯೊಳಗೆ ಲ್ಯಾಂಡ್ ಆಗಿದೆ. ನೀಲಿ ಬಣ್ಣದ ಈ ಡ್ರೋಣ್ ಚೆಲುವೆಯನ್ನು ನೋಡಿ ಪ್ರತಾಪ್‌,…

Read More

ಬೆಂಗಳೂರು : ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಿ ಎಂದು ಕರೆ ನೀಡಿದರು. ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು ಎಂದರು. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೆಂಪೇಗೌಡ ಪ್ರಾಧಿಕಾರ ಮಾಡಿದ್ದು ನಾವೇ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಗೆ ಶಿಫಾರಸ್ಸು ಮಾಡಿದ್ದು ಕೂಡ ನಾವೆಯೇ.…

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳಿದ್ದಾರೆ. ಕರ್ನಾಟಕದಲ್ಲಿ ಇನ್ಮುಂದೆ ಕಾಂಗ್ರೆಸ್ ಪಕ್ಷದ ಕೈಚಳಕ ನಡೆಯುವುದಿಲ್ಲ ಎಂಬ ಸ್ಪಷ್ಟ ಸಂದೇಶ ಇದರಿಂದ ಕೊಟ್ಟಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದ ವಿಮಾನನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಸ್ಥಾನ ಗೆಲ್ಲುವ ಸ್ಪಷ್ಟ ಸೂಚನೆ ಇದಾಗಿದೆ ಎಂದು ತಿಳಿಸಿದರು. ಮುಂದೆ ಯಾವಾಗ ವಿಧಾನಸಭಾ ಚುನಾವಣೆ ನಡೆದರೂ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಶ್ರಮಿಸುತ್ತೇವೆ ಎಂದು ತಿಳಿಸಿದರು. ಈ ರಾಜಕೀಯ ಬೆಳವಣಿಗೆ ವಿಚಾರದಲ್ಲಿ ನಮ್ಮ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು ಸಂತಸದಿಂದಿದ್ದಾರೆ ಎಂದೂ ಅವರು ತಿಳಿಸಿದರು. ಬಿಜೆಪಿ ಕರ್ನಾಟಕದ ಭದ್ರಕೋಟೆ ಎಂದು ಸಾಬೀತು ಪಡಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

Read More

ದೀಕ್ಷಿತ್ ಶೆಟ್ಟಿ (Dixit Shetty) ಹಾಗೂ ಚೈತ್ರ ಆಚಾರ್‍ (Chaitra Achar) ಮುಖ್ಯಭೂಮಿಯಲ್ಲಿ ನಟಿಸಿರುವ ‘ಬ್ಲಿಂಕ್’ (Blink) ಚಿತ್ರತಂಡ, ಚಿತ್ರೀಕರಣದ ದಿನದಿಂದಲೂ ತಮ್ಮ ವಿನೂತನ ಪ್ರಚಾರ ತಂತ್ರಗಳಿಂದ ಚಂದನವನದಲ್ಲಿ ಗಮನ ಸೆಳೆದಿದೆ. ತಮ್ಮ ಚಿತ್ರವನ್ನು ಜನರಿಗೆ ಮುಟ್ಟಿಸುವಲ್ಲಿ ಗೆಲ್ಲಲೇಬೇಕು ಎಂದು ಶಪಥ ಮಾಡಿರುವ ಈ ತಂಡ ಯಾವುದೇ ಮುಚ್ಚು ಮರೆ ಇಲ್ಲದೆ , ನೂತನ ಚಿತ್ರಗಳನ್ನು ಕಟ್ಟುವಲ್ಲಿ , ಜನರಿಗೆ ತಲುಪಿಸುವಲ್ಲಿ ಇರುವ ಸಮಸ್ಯೆಗಳನ್ನು ತಿಳಿಸಲು ವಿನೂತನ ಪ್ರಯೋಗ ಮಾಡಿದ್ದು ‘ಜನರಿಂದಲೇ ಸಿನಿಮಾ, ಜನರೇ ಸಿನಿಮಾ’ ಎಂಬಾ ವಿಶಿಷ್ಟ ಸಾಲುಗಳು ಜನರ ಮನಸ್ಸನ್ನು ಗೆಲ್ಲುತ್ತಿವೆ. ಚಿತ್ರಮಂದಿರದಿಂದ ದೂರ ಉಳಿದಿರುವ ಜನರಿಗೆ, ಮತ್ತೆ ಚಿತ್ರಮಂದಿರದ ಆ ಮಾಂತ್ರಿಕ ಜಗತ್ತಿನ ವಿಶೇಷತೆಯನ್ನು ಮನಮುಟ್ಟುವಂತೆ ನಿರೂಪಿಸಿದ್ದಾರೆ. ಈಗಾಗಲೇ ತಮ್ಮ ಹೊಸತನದಿಂದ ಜನರ ಗಮನಸೆಳೆದಿರುವ ಬ್ಲಿಂಕ್ ತಂಡವು ಮಾರ್ಚ್ ನಲ್ಲಿ ಚಿತ್ರಮಂದಿರದೊಳಗೆ ಪ್ರವೇಶಿಸಲು ಎಲ್ಲಾ ಸಿದ್ದತೆ ಮಾಡಿಕೊಂಡಿದೆ. ಜನನಿ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಬ್ಲಿಂಕ್ ಚಿತ್ರವು ಸೈಫೈ ಪ್ರಕಾರದ ಚಿತ್ರವಾಗಿದ್ದು ಪ್ರೇಕ್ಷಕರನ್ನು ಸೆಳಿದಿಟ್ಟುಕೊಳ್ಳುವುದು ಖಂಡಿತವೆಂದು ನಿರ್ಮಾಪಕ ರವಿಚಂದ್ರ…

Read More

ಬೆಂಗಳೂರು: ಜನವರಿ 26 ಭಾರತಕ್ಕೆ ತುಂಬಾನೇ ಮಹತ್ವದ ದಿನ.ಈ ದಿನವನ್ನ ದೇಶದೆಲ್ಲಡೆ ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗ್ತದೆ. ಈ ಬಾರಿಯೂ 75 ನೇ ಗಣರಾಜ್ಯೋತ್ಸವನ್ನ ಎಲ್ಲಡೆ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ರಾಜಧಾನಿ ಬೆಂಗಳೂರಿನಲ್ಲೂ ಗಣರಾಜ್ಯೋತ್ಸವ ದೇಶಭಕ್ತಿಯನ್ನ ಮೊಳಗಿಸಿತ್ತು. ಹಾಗಾದ್ರೆ ನಗರದ ಮಾಣಿಷ್ ಷಾ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಹೇಗಿತ್ತು ಬನ್ನಿ ತೋರಿಸ್ತೀವಿ ಮೈದಾನದಲ್ಲಿ ತುಂಬಿದ ತ್ರಿವರ್ಣದ ರಂಗು. ಮನದೊಳಗೆ ರಾಷ್ಟ್ರಭಕ್ತಿಯ ಪುಳಕ.. ಧ್ವಜಾರೋಹಣದ ವೇಳೆ ಸುರಿದ ಹೂಮಳೆ. ಜನಗಣಮನದ ನಾದಕ್ಕೆ ಉದೆಯಉಬ್ಬಿಸಿದ ಜನ.. ಮೈ ಜಮ್ಮೆನಿಸಿದ ಸಾಹನ ಬೈಕ್ ಪ್ರದರ್ಶನ… 75 ನೇ ಗಣರಾಜ್ಯೋತ್ಸವಕ್ಕೆ ನಗರದ ಮಾಣಿಕ್ ಷಾ ಪರೇಟ್ ಮೈದಾನ ಇಂದು ಸಾಕ್ಷಿಯಾಗಿದ್ದು ಹೀಗೆ.. ಸಮಾರಂಭದಲ್ಲಿ ಸೇನೆ ಹಾಗೂ ವಿದ್ಯಾರ್ಥಿ ತಂಡಗಳು ಚಿತ್ತಾಕರ್ಷಕ ಪಥ ಸಂಚಲನ ನಡೆಸಿದ್ರೆ ,ವಿವಿಧ ಶಾಲೆಗಳ ಮಕ್ಕಳು ರಾಷ್ಟ್ರಭಕ್ತಿ ಗೀತೆಗಳಿಗೆ ಹೆಜ್ಜೆಯಾದರು. ಹೌದು.. ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಸಂಭ್ರಮ ಇವತ್ತು ಕಳೆಗಟ್ಟಿತ್ತು. ಮೈದಾನ ಮಧುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ಮಾಣಿಕ್ ಷಾ ಮೈದಾನದಲ್ಲಿ ರಾಜ್ಯಪಾಲ ಥಾವರ್…

Read More

75ನೇ ಗಣರಾಜ್ಯೋತ್ಸವಕ್ಕೆ ವಿಶೇಷ ಡೂಡಲ್ ಮೂಲಕ ಗೂಗಲ್ ಶುಭ ಕೋರಿದೆ. ಹೌದು ಕ್ಷಣ ಕ್ಷಣಕ್ಕೂ ಟೆಕ್ನಾಲಜಿ ಅಭಿವೃದ್ಧಿಯಾಗುತ್ತಲೇ ದೇಶ ಪರಿವರ್ತನೆಯಾಗುತ್ತದೆ. ಇಂತಹ ಕಾಲಘಟ್ಟವನ್ನು ಗೂಗಲ್​ ವಿಶೇಷವಾಗಿ ಹಂಚಿಕೊಂದಿದ. ಗೂಗಲ್​ ಡೂಡಲ್​ನ ಇಂದಿನ ವಿಶೇಷವೇನು..? ಅನಲಾಗ್ ಟಿವಿಗಳ ಯುಗದಿಂದ ಸ್ಮಾರ್ಟ್‌ಫೋನ್‌ಗಳ ಬಳಕೆಯವರೆಗೆ ದೇಶ ಪರಿವರ್ತನೆಯಾದ ಕಾಲಘಟ್ಟದ ಬಗ್ಗೆ ಹಂಚಿಕೊಂಡಿದೆ. ಕಾಲ ಕಳೆದಂತೆ ಕಪ್ಪು-ಬಿಳಿಯ ಟಿವಿ ಪರದೆಗಳು ಬಣ್ಣದ ಟಿವಿಗಳಾಗಿವೆ. ಅದರ ನೋಡುಗರು ಮಾತ್ರ ಅದೇ ಹೆಮ್ಮೆಯಿಂದ ವೀಕ್ಷಿಸುತ್ತಿದ್ದಾರೆ ಎಂದು ಗೂಗಲ್ ಬರೆದುಕೊಂಡಿದೆ. ಈ ಡೂಡಲ್ ಭಾರತದ ಗಣರಾಜ್ಯೋತ್ಸವವನ್ನು ಆಚರಿಸುತ್ತದೆ, ಇದು 1950 ರಲ್ಲಿ ಭಾರತದ ಸಂವಿಧಾನವನ್ನು ಅಂಗೀಕರಿಸಿದ ದಿನವನ್ನು ನೆನಪಿಸುತ್ತದೆ ಮತ್ತು ರಾಷ್ಟ್ರವು ತನ್ನನ್ನು ತಾನು ಸಾರ್ವಭೌಮ, ಪ್ರಜಾಪ್ರಭುತ್ವ ಮತ್ತು ಗಣರಾಜ್ಯವೆಂದು ಘೋಷಿಸಿದ ದಿನ’ ಎನ್ನುವ ಮಾಹಿತಿಯನ್ನು ಡೂಡಲ್‌ನಲ್ಲಿ ವಿವರಿಸಿದೆ.

Read More