Author: AIN Author

ಮೈಸೂರು: ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಅಸ್ಸಾಂ ಮಾರ್ಗವಾಗಿ ಚಲಿಸುತ್ತಿರುವ ಭಾರತ ಐಕ್ಯತಾ ಯಾತ್ರೆಗೆ ಬೆದರಿ ಒಂದಿಲ್ಲೊಂದು ರೀತಿಯಲ್ಲಿ ತೊಂದರೆ ಕೊಡುತ್ತಿರುವ ಬಿಜೆಪಿಗರು, ಕೆಲವೆಡೆ ದೇವಸ್ಥಾನ ಪ್ರವೇಶಕ್ಕೆ ತಡೆ ಒಡ್ಡಿದರೆ ಇನ್ನೊಂದು ಕಡೆ ಸುಖಾ ಸುಮ್ಮನೇ ಎಫ್ಐರ್‌ ದಾಖಲಿಸಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಮೊದಲ ಅವಧಿಯ ಭಾರತ ಐಕ್ಯತಾ ಯಾತ್ರೆಯು ತಾವುದೇ ತೊಂದರೆ ಇಲ್ಲದೇ ಮುಗಿದಿದ್ದಾಗಲೂ ಕೂಡಾ ಯಾತ್ರೆಯಲ್ಲಿ ಹಿಂಸೆಗೆ ಪ್ರಚೋದನೆ ನೀಡಲಾಗಿದೆ ಎನ್ನುವ ಅಸ್ಸಾಂ ಮುಖ್ಯಮಂತ್ರಿಗಳ ಹೇಳಿಕೆಯು ಅತ್ಯಂತ ಬಾಲಿಷತನದಿಂದ ಕೂಡಿದೆ. ಸರ್ಕಾರ ನಮ್ಮದಿರಲಿ, ಯಾರದ್ದೇ ಇರಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ಅಭಿಪ್ರಾಯ ಹೇಳುವುದು, ಸಮಾವೇಶ ನಡೆಸುವುದು ಮತ್ತು ಆರೋಗ್ಯಕರವಾಗಿ ಪ್ರತಿರೋಧ ವ್ಯಕ್ತಪಡಿಸುವುದು ಸಂವಿಧಾನ ನಮಗೆ ನೀಡಿದ ಹಕ್ಕಾಗಿದೆ. https://ainlivenews.com/india-not-having-permanent-seat-in-unsc-ironic-elon-musk/ ಆದರೆ ದೇವರು ಧರ್ಮವನ್ನು ಮುಂದಿಟ್ಟುಕೊಂಡು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಬಿಜೆಪಿಗರ ಈ ನಡೆಯನ್ನು ಒಪ್ಪಲು ಸಾಧ್ಯವಿಲ್ಲ. ಈ ಹಿನ್ನೆಲೆ ಪ್ರಜಾಪ್ರಭುತ್ವ ವ್ಯವಸ್ಥೆಯ ಒಳಗೆ ಆಡಳಿತ ನಡೆಸುತ್ತಿರುವ ಪ್ರಧಾನಿಗಳು ಮತ್ತು ಗೃಹ ಸಚಿವರು ಕೂಡಲೇ ಮಧ್ಯ ಪ್ರವೇಶಿಸಿ ಭಾರತ…

Read More

ದೆಹಲಿ: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ (75th Republic Day) ಸಂಭ್ರಮ ಮನೆ ಮಾಡಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಧ್ವಜಾರೋಹಣ (Flag hoisting) ನೆರವೇರಿದ್ದು, ಪರೇಡ್‌ಗಳಲ್ಲಿ ವಿಶೇಷ ಪ್ರದರ್ಶನಗಳು ಕಂಡುಬಂದಿವೆ. ಹಾಗೆ ಟ್ವೀಟ್ ಮೂಲಕ ಪ್ರಧಾನಿ ಮೋದಿ ಅವರು ದೇಶದ ಜನತೆಗೆ ಗಣರಾಜ್ಯೋತ್ಸವ ಶುಭಕೋರಿದ್ದಾರೆ. ಈ ಸಂದರ್ಭದಲ್ಲಿ 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ (Padma Awards 2024) ಆಯ್ಕೆಯಾಗಿರುವ 132 ಸಾಧಕರಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನೂ ತಿಳಿಸಿದ್ದಾರೆ. ಕರ್ನಾಟಕದ 9 ಮಂದಿ ಸೇರಿ ಒಟ್ಟು 132 ಮಂದಿಗೆ ಪ್ರಶಸ್ತಿ ಲಭಿಸಿದ್ದು, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಭಿನಂದನೆ ಸಲ್ಲಿಸಿದ್ದಾರೆ. ಈ ವ್ಯಕ್ತಿಗಳು ಅದ್ಭುತ ಉದಾಹರಣೆಗಳನ್ನ ಸೃಷ್ಟಿಸಿದ್ದಾರೆ. ಮಾತ್ರವಲ್ಲದೇ ತಮ್ಮ ಸೇವೆಯಿಂದ ರಾಷ್ಟ್ರದ ಘನತೆಯನ್ನ ಹೆಚ್ಚಿದ್ದಾರೆ. ವಿವಿಧ ಕ್ಷೇತ್ರಗಳಿಗೆ ವಿಶಿಷ್ಟ ಕೊಡುಗೆಗಳನ್ನು ನೀಡುವ ಮೂಲಕ ಸಮಾಜದಲ್ಲಿ ಬದಲಾವಣೆ ತರುತ್ತಿರುವ ಸಾಧಕರಿಗೆ ನಾನು ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಮತ್ತು…

Read More

ಬೆಳಗಾವಿ: ದೇಶಾದ್ಯಂತ ಇಂದು 75ನೇ ಗಣರಾಜ್ಯೋತ್ಸವವನ್ನು (75th Republic Day) ಆಚರಿಸಲಾಗುತ್ತಿದೆ. ಅದರಂತೆ ದೆಹಲಿಯಲ್ಲಿ ನಡೆಯಲಿರುವ ಪಥಸಂಚಲನಕ್ಕೆ ಬೆಳಗಾವಿ ಮೂಲದ ಯೋಧರೊಬ್ಬರು ಆಯ್ಕೆಯಾಗಿದ್ದಾರೆ. ಹೌದು. ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಿಕಟ್ಟಿ ಗ್ರಾಮದ ಯೋಧ ಅದೃಶ್ಯ ಮಾವಿನಕಟ್ಟಿ ಆಯ್ಕೆಯಾಗಿದ್ದಾರೆ. ಇವರು ಮದ್ರಾಸ್ ರೆಜಿಮೆಂಟ್ ಕ್ರೊಪ ವೆಲ್ಲಿಂಗ್ಟನ್ ನಲ್ಲಿ ತರಬೇತಿ ಪಡೆದಿದ್ದಾರೆ. ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಎನ್ ಸಿಸಿ (NCC) ತರಬೇತಿ ಕೂಡ ಪಡೆದಿದ್ದಾರೆ. ಇದೀಗ ದೆಹಲಿಯಲ್ಲಿ ನಡೆಯುವ ಪೆರೇಡ್‌ನಲ್ಲಿ ಅದೃಶ್ಯ ಭಾಗಿಯಾಗಿರುವುದು ಕುಟುಂಬಸ್ಥರು ಸೇರಿದಂತೆ ಎಲ್ಲರಿಗೂ ಸಂತಸ ತಂದಿದೆ

Read More

ಕಲಬುರಗಿ : ರಾಜ್ಯದಲ್ಲಿ ಮಳೆ ಅಭಾವ ಕಾರಣ ಬರಗಾಲ ಘೋಷಣೆ ಮಾಡಿದ್ದರಿಂದ ಬರಗಾಲ ಪರಿಹಾರದ ಆರಂಭಿಕ ಕಂತು ತಲಾ 2,000 ರು. ಈಗಾಗಲೆ ಕಲಬುರಗಿ ಜಿಲ್ಲೆಯ 2.25 ಲಕ್ಷ ರೈತರಿಗೆ 44.74 ಕೋಟಿ ರು. ಜಮೆ ಮಾಡಿದ್ದು, ಬಾಕಿ ಉಳಿದ 1.60 ಲಕ್ಷ ರೈತರಿಗೆ 2-3 ದಿನದಲ್ಲಿ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಬರಗಾಲ ಘೋಷಣೆ ಮಾಡಿ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಪರಿಹಾತ ಹಣ ಬಿಡುಗಡೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಇದೂವರೆಗೆ ಯಾವುದೇ ಹಣ ಬಿಡುಗಡೆಯಾಗಿಲ್ಲ. ಸಂಕಷ್ದದಲ್ಲಿದ ರೈತರಿಗೆ ನೆರವಿಗೆ ಧಾವಿಸಲು ಎನ್.ಡಿ.ಅರ್.ಆಫ್ ಅನುದಾನ ನಿರೀಕ್ಷಿಸಿ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ ಎಂದರು. ರಾಜ್ಯದಾದ್ಯಂತ ಒಟ್ಟಾರೆ 35 ಲಕ್ಷ ರೈತರಿಗೆ 650 ಕೋಟಿ ರು. ಹಣ ಬಿಡುಗಡೆ ಮಾಡಿದೆ. ಇದೂವರೆಗೆ 24 ಲಕ್ಷ ಜನರಿಗೆ 519 ಕೋಟಿ ರು. ಪಾವತಿಯಾಗಿದೆ. https://ainlivenews.com/india-not-having-permanent-seat-in-unsc-ironic-elon-musk/ 2-3 ದಿನದಲ್ಲಿ…

Read More

ಸಂಡೂರು: ತಾಲೂಕಿನ ಹೊಸದರೋಜಿ ಗ್ರಾಮದಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಡಿ.ದೇವರಾಜ ಅರಸು ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಆಚರಿಸಲಾಯಿತು. ಎಪ್ಪತ್ತೈದು ನೇ ಗಣರಾಜ್ಯೋತ್ಸವನ್ನು ಈ ಬಾರಿ ಆಚರಣೆಯನ್ನು ಮಾಡುತ್ತೀದ್ದೇವೆ.75ನೇ ಗಣರಾಜ್ಯೋತ್ಸವ ಆಚರಣೆಯ ಮಾಡಲು ಭಾರತ ಸಂವಿಧಾನವು 1949 ರ ನವೆಂಬರ್ 26 ರಂದು ಅಂಗೀಕಾರವಾಗಿ, 1950 ರ ಜನವರಿ 26 ರಂದು ಜಾರಿಗೆ ಬಂತು. ಈ ದಿನದ ಗೌರವಾರ್ಥವಾಗಿ ಪ್ರತಿ ವರ್ಷ ಜನವರಿ 26 ರಂದು ಭಾರತದಲ್ಲಿ ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತದೆ. ದೇಶದ ವಿವಿಧ ಭಾಗಗಳಲ್ಲಿ ರಕ್ಷಣಾ ಪಡೆಗಳು ಪಿರೇಡ್‌ ಮಾಡುವ ಮೂಲಕ, ಶಾಲೆಗಳು, ಕಚೇರಿಗಳಲ್ಲಿ ಹಾಗೂ ಇಂತಹ ವಸತಿ ನಿಲಗಳಲ್ಲಿ ಧ್ವಜಾರೋಹಣ ಮಾಡುವ ಮೂಲಕ ಸಮಾರಂಭಗಳು ನಡೆಯುತ್ತವೆ. ಪ್ರತಿವರ್ಷ ನಮ್ಮ ದೇಶದಲ್ಲಿ ಇದೊಂದು ಮಹತ್ವದ ಸಂದರ್ಭವಾಗಿದೆ. ಇನ್ನು ನವದೆಹಲಿಯ ಕರ್ತವ್ಯ ಪಥದಲ್ಲಿ ರಕ್ಷಣಾ ಪಡೆಗಳು ಅತ್ಯಂತ ಭವ್ಯವಾದ ಪರೇಡ್‌ ಮೆರವಣಿಗೆಯನ್ನು ನಡೆಸುತ್ತವೆ. ಈ ಸುದಿನದಂದು ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗವನ್ನು ಸ್ಮರಿಸಲು ನಾಗರೀಕರೆಲ್ಲರೂ ಒಟ್ಟಾಗಿ ಸೇರುತ್ತಾರೆ ಎಂಬುದು ತಿಳಿಯಬೇಕಾಗಿದೆ ಎಂದು…

Read More

ಬೆಂಗಳೂರು: ಜಗದೀಶ್‌ ಶೆಟ್ಟರ್‌ ಬಿಜೆಪಿ ಸೇರ್ಪಡೆ ಹಿನ್ನೆಲೆಯಲ್ಲಿ  ಡಿಕೆಶಿವಕುಮಾರ್ ಬಹಿರಂಗವಾಗಿ ಎಚ್ಚರಿಕೆ ನೀಡಿದ ಮಲ್ಲಿಕಾರ್ಜುನ ಖರ್ಗೆ ಜಗದೀಶ್ ಶೆಟ್ಟರ್ ಪಕ್ಷ ತೊರೆದ ವಿಚಾರಕ್ಕೆ ಡಿಕೆಗೆ ಕ್ಲಾಸ್‌ ತೆಗೆದುಕೊಂಡ ಖರ್ಗೆ  ಪಕ್ಷಕ್ಕೆ ಯಾರನ್ನು ಸೇರಿಸಿಕೊಳ್ಳಬೇಕಾದಾಗ ಯೋಚನೆ ಮಾಡಬೇಕು ಅವರ ಹಿನ್ನೆಲೆ ಏನು ಸಿದ್ದಾಂತ ಏನು ತತ್ವ ಏನು ಎಂಬುದನ್ನು ಅರಿತುಕೊಳ್ಳಬೇಕು ಎಂದರು https://ainlivenews.com/75th-republic-day-cm-siddaramaiah-gave-a-message-to-the-people-of-the-country/ ಹಾಗೆ ನಮ್ಮ ತತ್ವ ಸಿದ್ದಾಂತಕ್ಕೆ ಸೂಕ್ತ ಆಗುವವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ತತ್ವ ಸಿದ್ದಾಂತ ನೋಡಿ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಯಾಕಂದ್ರೆ ಇವತ್ತು ಬಂದ, ನಾಳೆ ಹೋದ ಎಂಬುದು ಆಗಬಾರದು ಎಂದು ಬುದ್ಧಿಮಾತು ಹೇಳಿದರು.

Read More

ಹುಬ್ಬಳ್ಳಿ : ಭಾರತೀಯ ಜನತಾ ಪಕ್ಷಕ್ಕೆ ಮರಳಿ ಬಂದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಏನೇನು ಬೇಡಿಕೆ ಇಟ್ಟಿದ್ದಾರೋ ಗೊತ್ತಿಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.ನಮ್ಮನ್ನೆಲ್ಲ ವಿಶ್ವಾಸಕ್ಕೆ ತೆಗೆದುಕೊಂಡೇ ಶೆಟ್ಟರ್ ರನ್ನ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಹೈಕಮಾಂಡ್ ಜಗದೀಶ ಶೆಟ್ಟರನ್ನು ಪಕ್ಷಕ್ಕೆ ಬರಮಾಡಿಕೊಂಡಿದೆಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲಾ ಸ್ವಾಗತ ಮಾಡ್ತೇವೆ ಜಗದೀಶ್ಶೆಟ್ಟರ್ ಎಲ್ಲಿಂದ ಸ್ಪರ್ಧೆ ಮಾಡ್ತಾರೆ ಅದನ್ನ ವರಿಷ್ಠರು ತೀರ್ಮಾನ ಮಾಡ್ತಾರೆ ಅದಕ್ಕೆ ನಾವು ಬದ್ದರಿದ್ದೇವೆಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಬರಬೇಕು ಅಂದ್ರೆ ರಾಜೀನಾಮೆ ಕೊಡಲೇ ಬೇಕು ಎಂದರು. ಹೈಕಮಾಂಡ್ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆಸುಕೊಂಡಿಲ್ಲ ಎಂಬ ವಿಚಾರ ಕುರಿತು ಸಹ ಮಾತನಾಡಿದ ಅವರು ನಾಲ್ಕು ಚೌಕಟ್ಟಿನ ನಡೆಯುವ ಸಂಧಾನ ಇದುಮಾತುಕತೆ ನಡೀತಾ ಇರುತ್ತೆ ಅವುಗಳನ್ನು ಬಹಿರಂಗ ಪಡಿಸಲಾಗೋದಿಲ್ಲ ಎಂದರು. ಇನ್ನು ಕೇಂದ್ರ ಸಚಿವ ಪ್ರಲ್ಹಾದ್ಜೋಶಿ ಅವರು ಜಗದೀಶ್ ಶೆಟ್ಟರ್ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುವ ಮುನ್ನ ಭಾಗಿಯಾಗದ ಕುರಿತು ಮಾತನಾಡಿದ…

Read More

ಬೆಂಗಳೂರು: ಭಾರತದಲ್ಲಿ ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯ ಸ್ಥಾಪನೆಗೋಸ್ಕರ ಅವಿರತವಾಗಿ ಶ್ರಮಿಸಬೇಕೆಂದು ಅಂದಿನ ರಾಷ್ಟ್ರೀಯ ಕಾಂಗ್ರೆಸ್ 1929ರ ಜನವರಿ 26ರಂದು ಪ್ರತಿಜ್ಞೆ ಮಾಡಿತ್ತು. 1950ರ ಜನವರಿ 26ರಂದು ಈ ಕನಸು ನನಸಾಯಿತು. ಈ ದಿನ ಭಾರತವು ಗಣರಾಜ್ಯವಾಗಿ ತನ್ನ ಆಡಳಿತಾತ್ಮಕ ವ್ಯವಸ್ಥೆಯನ್ನು ರೂಪಿಸಿಕೊಂಡಿತು. 1. ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನ ತಿಳಿಸಿದ ಸಿಎಂ ಸಿದ್ದರಾಮಯ್ಯ 2. ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2023ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿವೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ,ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ ಎಲ್ಲರ ನಡುವೆ ಭಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ. 3. ವಿಶ್ವಕ್ಕೆ ಮಾದರಿ ಸ್ವರೂಪದ ಇಂತಹದ್ದೊಂದು ಸಂವಿಧಾನವನ್ನು ನಮಗೆ ನೀಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ನೆನಪುಮಾಡಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.…

Read More

ಗುವಾಹಟಿ: ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರನ್ನು ಲೋಕಸಭೆ ಚುನಾವಣೆ ನಂತರ ಬಂಧಿಸಲಾಗುತ್ತದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಭಾರತ್‌ ಜೋಡೋ ನ್ಯಾಯ ಯಾತ್ರೆ ವೇಳೆ ಅಸ್ಸಾಂ ಶಾಂತಿ ಕದಡಲು ರಾಹುಲ್‌ ಯತ್ನಿಸಿದರು ಎಂದು ಆರೋಪಿಸಿ, ಅವರ ವಿರುದ್ಧ ಸಿಎಂ ಸೂಚನೆ ಮೇಲೆ, ಪೊಲೀಸರು ಪ್ರಕರಣ ದಾಖಲಿಸಿದ್ದರು. ಇದಕ್ಕೆ  ಪ್ರತಿಕ್ರಿಯೆ ನೀಡಿದ ಹಿಮಂತ ಬಿಸ್ವಾ ಶರ್ಮಾ, ನಾವು ಎಸ್‌ಐಟಿ ರಚಿಸಿ ತನಿಖೆ ನಡೆಸುತ್ತೇವೆ. ರಾಹುಲ್‌ ಬಂಧನ ಆಗುವಂತೆ ನೋಡಿಕೊಳ್ಳುತ್ತೇವೆ. ಆದರೆ ಈಗಲ್ಲ. ಲೋಕಸಭೆ ಚುನಾವಣೆಯ ನಂತರ. ನಾವು ಈಗ ಕ್ರಮ ಕೈಗೊಂಡರೆ, ಅದು ರಾಜಕೀಯ ಪ್ರೇರಿತ ಎಂಬ ಆರೋಪ ನಮ್ಮ ಮೇಲೆ ಕೇಳಿಬರುತ್ತದೆ. ಹೀಗಾಗಿ ಈಗ ಬಂಧಿಸಲ್ಲ ಎಂದರು. ರಾಹುಲ್‌ ಯಾತ್ರೆಯ ಸಂಪೂರ್ಣ ಉದ್ದೇಶವು ಅಸ್ಸಾಂನ ಶಾಂತಿ ಕದಡುವುದು. ಆದರೆ ಇದಕ್ಕೆ ಅವಕಾಶ ನೀಡಲ್ಲ. ನಮ್ಮ ಬಳಿ ಸಾಕ್ಷ್ಯಗಳಿವೆ ಎಂದರು.

Read More

ಕಲಬುರಗಿ: 75 ನೆಯ ಗಣರಾಜ್ಯೋತ್ಸವ ಅಂಗವಾಗಿ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವರಿದ್ದರು

Read More