Author: AIN Author

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ (Road Accident) ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಸ್ವಿಫ್ಟ್ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಹೊನಗನಳ್ಳಿ ಮೂಲದ ನಾಲ್ವರು ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಹೋಗಿ ಬರುತ್ತಿದ್ದ ವೇಳೆ ಅನಗವಾಡಿ ಗ್ರಾಮದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಘಟನೆ ನಡೆದಿದೆ.

Read More

ಮದ್ದೂರು: ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎನ್ನುವಷ್ಟು ಕಠೋರವಾದ ಜಾತ್ಯತೀತ ಸಿದ್ಧಾಂತವನ್ನು ಪಾಲಿಸಿದ್ದ ದೇವೇಗೌಡರು ಇಂದು ಬಿಜೆಪಿಯನ್ನು ಬೆಂಲಿಸುತ್ತಿದ್ದಾರೆಂದರೆ ನಮಗೆ ನೋವಾಗುತ್ತಿದೆ. ಅವರ ಇಂದಿನ ಸ್ಥಿತಿಗೆ ಮಕ್ಕಳೇ ಕಾರಣ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು. ದೇವೇಗೌಡರ ಇಂದಿನ ನಿಲುವು ಜಾತ್ಯತೀತ ತತ್ವಕ್ಕೆ ವಿರುದ್ಧವಾಗಿದೆ. ದೇವೇಗೌಡರು ನಮ್ಮ ನಾಯಕರು. ದೇಶದ ಪ್ರಧಾನಿಯಾಗಿದ್ದವರು. ಜಾತ್ಯತೀತ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಎಲ್ಲರನ್ನೂ ಅದರೆಡೆಗೆ ಕರೆತಂದಿದ್ದರು. ಜಾತ್ಯತೀತ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಹಲವು ದಶಕಗಳಿಂದ ರಾಜಕಾರಣ ಮಾಡಿದ ಎಚ್.ಡಿ.ದೇವೇಗೌಡರನ್ನು ಆ ಪಕ್ಷದ ನಾಯಕರು, https://ainlivenews.com/india-not-having-permanent-seat-in-unsc-ironic-elon-musk/ ಅವರ ಮಕ್ಕಳು ಈ ಪರಿಸ್ಥಿತಿಗೆ ತಂದು ನಿಲ್ಲಿಸಿದ್ದಾರೆ ಎಂದು ಛೇಡಿಸಿದರು. ನಾವೂ ರಾಮ ಭಕ್ತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಹೇಳಲಿಲ್ಲವೇ, ಬಿಜೆಪಿಯವರು ಚುನಾವಣೆಗಾಗಿ ಶ್ರೀರಾಮನನ್ನು ಬಳಸಿಕೊಳ್ಳುತ್ತಿದ್ದಾರೆ. ನಾವು ಚುನಾವಣೆ ಬಿಟ್ಟು ವೈಯಕ್ತಿಕವಾಗಿ ದೇವರ ಆರಾಧನೆ ಮಾಡುತ್ತೇವೆ. ನಮಗೂ ಭಕ್ತಿ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Read More

ಚೀನಾದ ದಕ್ಷಿಣ ಕ್ಸಿನ್‌ಜಿಯಾಂಗ್‌ನಲ್ಲಿ (Southern part of China’s) ಸೋಮವಾರ ತಡರಾತ್ರಿ 7.2 ತೀವ್ರತೆಯ ಪ್ರಬಲ ಭೂಕಂಪನ (Earthquake) ಸಂಭವಿಸಿದ್ದು, ದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಸದ್ಯ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಆಸ್ತಿಪಾಸ್ತಿ ಹಾನಿಯಾದ ಬಗ್ಗೆಯೂ ವರದಿಯಾಗಿಲ್ಲ. ರಿಕ್ಟರ್‌ ಮಾಪಕದಲ್ಲಿ ಭೂಕಂಪನ ತೀವ್ರತೆ 7.2 ಎಂದು ಗುರುತಿಸಲಾಗಿದ್ದು, ಸುಮಾರು 80 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಇದೇ ಜನವರಿ 11ರಂದು ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆ ಭೂಕಂಪ ಸಂಭವಿಸಿದ ನಂತರ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಲಘು ಭೂಕಂಪ ಸಂಭವಿಸಿದ್ದವು. ಕಾಬೂಲ್‌ನಿಂದ ಈಶಾನ್ಯಕ್ಕೆ 241 ಕಿಮೀ ದೂರದಲ್ಲಿ ಕೇಂದ್ರ ಬಿಂದು ಪತ್ತೆಯಾಗಿತ್ತು. ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿತ್ತು

Read More

ನವದೆಹಲಿ: ಅಪಾರ ಸಂಖ್ಯೆಯಲ್ಲಿ ಭಕ್ತರು ಆಯೋಧ್ಯೆಗೆ ಆಗಮಿಸುತ್ತಿರುವ ಕಾರಣ ಮಾರ್ಚ್ ವರೆಗೆ ಸಚಿವ ಸಂಪುಟದ ಸದಸ್ಯರು ಆಯೋಧ್ಯೆಗೆ ಭೇಟಿ ನೀಡದಂತೆ ಪ್ರಧಾನಿ ಮೋದಿ ಸೂಚಿಸಿದ್ದಾರೆ. ಸಚಿವರ ಭೇಟಿಯಿಂದ ಭಕ್ತರಿಗೆ ಅನಾನುಕೂಲಗಳಾಗಲಿವೆ. ಹೀಗಾಗಿ ಮಾರ್ಚ್ ತಿಂಗಳ ಬಳಿಕ ಭೇಟಿ ನೀಡಿ ದರ್ಶನ ಪಡೆಯಲು ಮೋದಿ ಸೂಚಿಸಿದ್ದಾರೆ. ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ಈ ವೇಳೆ ಪ್ರಧಾನಿ ಮೋದಿ ಸಚಿವ ಸಂಪುಟ ಸದಸ್ಯರಿಗೆ ಈ ಸೂಚನೆ ನೀಡಿದ್ದಾರೆ. ಆಯೋಧ್ಯೆಯಲ್ಲಿ ಸದ್ಯ ವಿಪರೀತ ಜನದಟ್ಟಣೆ ಇದೆ. ಇದೇ ಸಂದರ್ಭದಲ್ಲಿ ಸಚಿವರು ಆಯೋಧ್ಯೆಗೆ ಭೇಟಿ ನೀಡಿದರೆ ಗಣ್ಯರ ಪ್ರೊಟೋಕಾಲ್ ಅಡಿಯಲ್ಲಿ ಭೇಟಿಗೆ ಅವಕಾಶ ನೀಡಲಾಗುತ್ತದೆ. ಇದರಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿರುವ ಭಕ್ತರಿಗೆ ಸಮಸ್ಯೆಯಾಗಲಿದೆ. ಹೀಗಾಗಿ ಮಾರ್ಚ್ ವರೆಗೆ ಸಚಿವರು ಆಯೋಧ್ಯೆ ಭೇಟಿ ಮಾಡದಂತೆ ಮೋದಿ ಸೂಚಿಸಿದ್ದಾರೆ.

Read More

ಹಾಸನ: ಇನ್ನು ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಆಗುತ್ತದೆ ಎಂದು ಮಾಜಿ ಸಚಿವ ಹೆಚ್ʼ​ಡಿ ರೇವಣ್ಣ  ಹೇಳಿದ್ದಾರೆ. ಜಿಲ್ಲೆಯ ಆಲೂರು ಪಟ್ಟಣದಲ್ಲಿ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೆಇಬಿ ಸಾಲದಲ್ಲಿದೆ. ನಮ್ಮ ಕಾಲದಲ್ಲಿ ಎಂದೂ ಕರೆಂಟ್ ಬಿಲ್ ಹೆಚ್ಚಿಸಿರಲಿಲ್ಲ. ಈ ಸರ್ಕಾರ ಬಂದ ಮೇಲೆ ಬಿಲ್ ಹೆಚ್ಚಿಸಿದರು. ಇನ್ನು ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಆಗುತ್ತದೆ. ಆ ಮೂಲಕ ಕೆಇಬಿ ಖಾಸಗಿ ಕರಣ ಆಗುತ್ತೆ. ಈ ಸರ್ಕಾರ ಚುನಾವಣೆ ಪೂರ್ವದಲ್ಲಿ ಆರನೇ ಗ್ಯಾರಂಟಿ ಹೇಳಿದ್ದರು. ಆದರೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ. https://ainlivenews.com/india-not-having-permanent-seat-in-unsc-ironic-elon-musk/ ಕೊಬ್ಬರಿಗೆ ಬೆಂಬಲ ಬೆಲೆ ನೀಡಿಲ್ಲ. ಪ್ರಧಾನಿಯವರು ದೇವೇಗೌಡರನ್ನು ಯಾವ ರೀತಿ ಗೌರವಿಸುತ್ತಾರೆ. ಕಾಂಗ್ರೆಸ್​ನವರು ಬೇಕಾದಾಗ ಉಪಯೋಗಿಸಿ ದೂರ ತಳ್ಳುತ್ತಾರೆ. ಕುಮಾರಸ್ವಾಮಿ ಅವರ ಸರ್ಕಾರ ತೆಗೆದಿದ್ದು ಯಾರು? ಯಾವ ಯಾವ ಲೋಕಸಭಾ ಸದಸ್ಯರು ಏನು ಮಾಡಿದಾರೆ ಹೇಳಲಿ ಎಂದು ಸವಾಲು ಹಾಕಿದ್ದಾರೆ.

Read More

ಮೈಸೂರು: ಬೈಕ್ ಶೋ ರೂಂನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಅಗ್ನಿ ಅವಘಡವಾಗಿರುವ ಘಟನೆ ನಗರದ ಎಚ್.ಡಿ ಕೋಟೆ ಪಟ್ಟಣದಲ್ಲಿ ನಡೆದಿದೆ. ‌ ಜೆಕೆ ಮೋಟಾರು ಬೈಕ್ ಶೋ ರೂಂ ಆಗಿದ್ದು ಅಪಾರ ಪ್ರಮಾಣದಲ್ಲಿ ನಷ್ಟ ಕೂಡ ಆಗಿದೆ ಹಾಗೆ  ಬೆಳಗಿನ ಜಾವ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದ ಅವಘಡ. ಸ್ಥಳಕ್ಕೆ ಅಗ್ನಿ ಶಾಮಕ‌ ದಳ ಆಗಮನವಾಗಿದ್ದು ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಆಗಸದತ್ತ ಚಿಮ್ಮಿದ ಅಪಾರ ಪ್ರಮಾಣದ ಹೊಗೆ ಮಿಶ್ರಿತ ಬೆಂಕಿಯ ಕೆನ್ನಾಲಿಗೆ ಭಯಭೀತರಾದ ಷೋರೂಂ ಆಸುಪಾಸಿನಲ್ಲಿ ವಾಸವಾಗಿರುವ ಜ‌ನ. ಬೆಂಕಿಗಾಹುತಿಯಾದ ಷೋರೂಂನಲ್ಲಿದ್ದ ಹಲವು ಮೋಟಾರ್ ಬೈಕ್ ಗಳು, ವಿದ್ಯುತ್ ಪ್ರವಾಹ ಕಡಿತಗೊಳಿಸಿ‌ ಕಾರ್ಯಾಚರಣೆಗೆ ಮುಂದಾದ ಅಗ್ನಿ ಶಾಮಕ ಸಿಬ್ಬಂದಿಘಟನೆ ಸ್ಥಳದಲ್ಲಿ ಜಮಾಯಿಸಿದ್ದ ಅಪಾರ ಪ್ರಮಾಣದ ಜನ

Read More

ಬೆಂಗಳೂರು: ತಂದೆಯೇ ಮಗನನ್ನು ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ  ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕರೆಕಲ್ ನ ಮನೆಯೊಂದರಲ್ಲಿ ನಡೆದಿದೆ. ನರ್ತನ್ ಬೋಪಣ್ಣ(32) ಕೊಲೆಯಾದ ಯುವಕನಾಗಿದ್ದು ವಿನಾಕಾರಣ ಗುಂಡು ಹಾರಿಸಿ ಮಗನನ್ನು ಹತ್ಯೆಗೈದ ಪಾಪಿ ತಂದೆ ನಿನ್ನೆ ಸಂಜೆ ನರ್ತನ್ ತಂದೆ ಸುರೇಶ್ ಗುಂಡು ಹಾರಿಸಿ ಕೊಲೆಗೈದಿರುವುದಾಗಿ ತಿಳಿದು ಬಂದಿದೆ. ಘಟನೆ ಬಳಿಕ ಸ್ಥಳೀಯರ ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಈ ವೇಳೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ನರ್ತನ್ ನನ್ನ ಆಸ್ಪತ್ರೆಗೆ ಸಾಗಿಸಿದ್ದ ಪೊಲೀಸರು ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಯುವಕ ಸಾವು ಸದ್ಯ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು  ಘಟನೆಯ ಹಿಂದಿನ ಕಾರಣ ತಿಳಿದು ಬಂದಿಲ್ಲ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Read More

ದೆಹಲಿ: ದೆಹಲಿಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆ 10:30ಕ್ಕೆ ದೆಹಲಿಯ ಕರ್ತವ್ಯ ಪಥ್‌ನಲ್ಲಿ ಪರೇಡ್ ಆರಂಭವಾಗಲಿದೆ. ವಿಕ್ಷಿತ್ ಭಾರತ್ ಮತ್ತು ಭಾರತ್ – ಲೋಕತಂತ್ರ ಕೀ ಮಾತೃಕಾ ಎಂಬುದು ಈ ವರ್ಷದ ಈ ಸಲದ ಪರೇಡ್​ ಆಗಿದೆ. ಪರೇಡ್​ನಲ್ಲಿ ಈ ಸಲ 95 ಸದಸ್ಯ ಮೆರವಣಿಗೆಯ ತುಕಡಿ ಮತ್ತು 33 ಸದಸ್ಯ ಬ್ಯಾಂಡ್ ತುಕಡಿಗಳಿವೆ. ಸುಮಾರು 90 ನಿಮಿಷಗಳವರೆಗೆ ಪರೇಡ್​​ ನಡೆಯಲಿದೆ. ಗಣರಾಜ್ಯೋತ್ಸವ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಭದ್ರತೆ ಕೈಗೊಳ್ಳಲಾಗಿದೆ. ದೆಹಲಿಯಲ್ಲಿ ಸೇನೆ, ಖಾಕಿ ಕೋಟೆಯೇ ನಿರ್ಮಾಣವಾಗಿದೆ. ಡ್ರೋನ್‌ಗಳ ಹಾರಾಟವನ್ನು ನಿಷೇಧಿಸಲಾಗಿದೆ. ಕಟ್ಟಡಗಳ ಮೇಲೆ ಶಾರ್ಪ್‌ಶೂಟರ್‌ಗಳನ್ನು ನಿಯೋಜಿಸಲಾಗಿದೆ. ಎಲ್ಲೆಲ್ಲೂ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ. ಕಾರ್ಯಕ್ರಮಕ್ಕೆ ಬರೋರಿಗೆ, ತಿಂಡಿ, ನೀರಿನ ಬಾಟಲ್, ಗನ್, ಚಾಕು, ಚೂಪಾದವಸ್ತುಗಳು, ಕೊಡೆ, ಕಪ್ಪುವಸ್ತ್ರ, ಕ್ಯಾಮರಾ, ರೇಡಿಯೋ, ಸ್ಯೂಟ್‌ಕೇಸ್, ಬ್ಯಾಗ್, ಸಿಗರೇಟ್, ಬೀಡಿ, ಬೆಂಕಿಪೊಟ್ಟಣ, ಅಗ್ನಿಕಾರಕ ವಸ್ತುಗಳನ್ನು ನಿಷೇಧಿಸಲಾಗಿದೆ. ಈಗಾಗಲೇ ಭಾರತಕ್ಕೆ ಬಂದಿಳಿದಿರುವ ಫ್ರೆಂಚ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರಾನ್…

Read More

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ  75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆ9 ಗಂಟೆಗೆ  ಮಾಣಿಕ್ ಷಾ ಮೈದಾನದಲ್ಲಿ 75 ನೇ ಗಣರಾಜ್ಯೋತ್ಸವ ಸಂಭ್ರಮ ಆರಂಭವಾಗಲಿದೆ. ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಧ್ವಜಾರೋಹಣ ಮಾಡಲಿದ್ದು  ಧ್ವಜಾರೋಹಣಕ್ಕೆ ಮಾಣಿಕ್ ಷಾ ಮೈದಾನದಲ್ಲಿ ಸಕಲ ಸಿದ್ದತೆ ಆಗಿದೆ. ಧ್ವಜಾರೋಹಣ ಬಳಿಕ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೆ  ಪಥಸಂಚಲನ ಕಾರ್ಯಕ್ರಮದಲ್ಲಿ ಭಾಗಿಯಾಗಿರೋ ಪೊಲೀಸ್ ಸ್ಕೌಟ್ಸ್, ಗೈಡ್ಸ್ ಎನ್ ಸಿಸಿ ಸೇವಾದಳ ಸೇರಿ ವಿವಿಧ ಶಾಲೆಗಳ ಕವಾಯಿತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1500 ಮಂದಿ ಭಾಗಿಯಾಗಲಿದ್ದು ಕಾರ್ಯಕ್ರಮದಲ್ಲಿ ರಾಜ್ಯಪಾಲರಿಂದ ವಿಜೇತರಿಗೆ ಬಹುಮಾನ ನೀಡಲಾಗುವುದು. ಭದ್ರತೆ, ಸುರಕ್ಷತೆಗಾಗಿ 100 ಸಿಸಿ ಕ್ಯಾಮರಾ ಆಳವಡಿಕೆ 2 ಬ್ಯಾಗೇಜ್ ಸ್ಕಾೃನರ್, ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆ ಆಂಬುಲೆನ್ಸ್, ವೈದ್ಯಕೀಯ, ವೈದ್ಯಕೀಯೇತರ ಸಿಬ್ಬಂದಿ ನಿಯೋಜನೆ ಅತಿಗಣ್ಯ, ಗಣ್ಯ ಸೇರಿ ಇತರೆ ಆಹ್ವಾನಿತರಿಗೆ ಮತ್ತು ಸಾರ್ವಜನಿಕರಿಗಾಗಿ 7 ಸಾವಿರ ಆಸನ ವ್ಯವಸ್ಥೆ ಗಣ್ಯ ವ್ಯಕ್ತಿಗಳಿಗೆ ಜಿ2 ದ್ವಾರದಲ್ಲಿ ಪ್ರವೇಶ ಅತಿ…

Read More

ಧಾರವಾಡ: ಜಗದೀಶ್ ಶೆಟ್ಟರ್ ಅವರು ಬಿಜೆಪಿ ಸೇರಿದ್ದು ವೈಯಕ್ತಿಕವಾಗಿ ಬಹಳ ಖುಷಿಯಾಗಿದೆ.ಎಂದು ಸಚಿವ ಸಂತೋಷ್ ಲಾಡ್​ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಗದೀಶ ಶೆಟ್ಟರ್ ಯಾಕೆ ಕಾಂಗ್ರೆಸ್‌ಗೆ ಬಂದರು, ಬಿಜೆಪಿಗೆ ಯಾಕೆ ವಾಪಸ್ ಹೋದರು ಎಂದು ಅವರನ್ನೇ ಕೇಳಬೇಕು’ ಎಂದರು. ಅವರು ಬಿಜೆಪಿ ತೊರೆದಾಗ ಏನೋ ಹೇಳಿದ್ದರು, ಈಗ ವಾಪಸ್ ಹೋಗುವಾಗ ಏನು ಹೇಳುತ್ತಾರೆ. ರಾಜಕಾರಣದಲಿ ಇದೆಲ್ಲ ಸಾಮಾನ್ಯ.ಕಾಂಗ್ರೆಸ್ ಅವರಿಗೆ ಗೌರವ ನೀಡಿ, ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿತ್ತು. ಪಕ್ಷದ ಎಲ್ಲ ಸಭೆಗಳಲ್ಲಿ ಹಿರಿಯರ ಜೊತೆ ಕುಳಿತುಕೊಳ್ಳುವ ಅವಕಾಶ ನೀಡಲಾಗಿತ್ತು. ಅವರು ಈಗ ದಿಢೀರಾಗಿ ಬಿಜೆಪಿಗೆ ವಾಪಸಾಗಿರುವುದು ನನಗೆ ಬಹಳ ಸಂತೋಷವಾಗಿದೆ ಎಂದು ಹೇಳಿದರು. ‘ಜಗದೀಶ ಶೆಟ್ಟರ ಅವರು ಬಿಜೆಪಿ ಸೇರುತ್ತಾರೆ ಅಂಥಾ ‘ಹೊಗೆ’ ಇತ್ತು. ಅವರು ಪಕ್ಷ ತೊರೆದಿರುವುದರಿಂದ ಕಾಂಗ್ರೆಸ್‌ಗೆ ನಷ್ಟ ಇಲ್ಲ. ಕಾಂಗ್ರೆಸ್ ಬಾಗಿಲು ಇಲ್ಲದ ಪಕ್ಷ, ಸಿಟಿ ಬಸ್ ಇದ್ದಂತೆ ಯಾರು ಬೇಕಾದರೂ ಹತ್ತಬಹುದು, ಎಲ್ಲಿಗೆ ಬೇಕಾದರೂ ಹೋಗಬಹುದು’ ಎಂದು ಉತ್ತರಿಸಿದರು. ‘ಮುಂದಿನ ದಿನಗಳಲ್ಲಿ ಕೆಲವು ಶಾಸಕರು ಕಾಂಗ್ರೆಸ್…

Read More