Author: AIN Author

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banarjee) ಅವರು ಕೋಲ್ಕತ್ತಾಗೆ ತೆರಳುತ್ತಿದ್ದ ವೇಳೆ (Car accident) ಕಾರು ಅಪಘಾತಕ್ಕೀಡಾಗಿದ್ದು, ಅವರ ತಲೆಗೆ ಗಂಭೀರ ಗಾಯವಾಗಿದೆ. ಹೌದು ಬುರ್ದ್ವಾನ್‌ನಿಂದ ಕೋಲ್ಕತ್ತಾಗೆ ರಸ್ತೆ ಮಾರ್ಗವಾಗಿ ಹಿಂತಿರುಗುತ್ತಿದ್ದ ವೇಳೆ ಮುಖ್ಯಮಂತ್ರಿ ಬೆಂಗಾವಲು ಪಡೆಯ ಮುಂದೆ ಮತ್ತೊಂದು ಕಾರು ಬಂದಿದ್ದರಿಂದ ತಕ್ಷಣವೇ ಬ್ರೇಕ್ ಹಾಕಿದ್ದರಿಂದ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.. https://ainlivenews.com/peanut-is-good-for-health-but-if-people-with-this-problem-eat-it-there-is-no-danger/ ಮೂಲಗಳ ಪ್ರಕಾರ ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್‌ʼನಲ್ಲಿ ತೆರಳಲು ಆಗಲಿಲ್ಲ. ಆದ್ದರಿಂದ ಕಾರಿನಲ್ಲಿ ಹಿಂತಿರುಗುತ್ತಿದ್ದರು. ಮಂಜು ಕವಿದ ವಾತಾವರಣದಲ್ಲಿ ಕಡಿಮೆ ಗೋಚರತೆಯಿಂದಾಗಿ ಚಾಲಕನು ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಮಮತಾ ಬ್ಯಾನರ್ಜಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರ ತಲೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಕೋಲ್ಕತ್ತಾಗೆ ಕರೆತರಲಾಗುತ್ತಿದೆ ಎಂದು ಮೂಲಕಗಳು ತಿಳಿಸಿವೆ.

Read More

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಸರಕಾರ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ ಮೂಲಕ ಮನೆಯ ಯಜಮಾನಿ ಪ್ರತೀ ತಿಂಗಳು 2 ಸಾವಿರ ರೂಪಾಯಿ ಸಹಾಯಧನವನ್ನು ಪಡೆಯುತ್ತಿದ್ದಾಳೆ. ಆದರೆ ಬಹುತೇಕರಿಗೆ ಇನ್ನೂ ಗೃಹಲಕ್ಷ್ಮೀ ಯೋಜನೆಯ ಹಣ ಸಿಕ್ಕಿಲ್ಲ. ಆದರೆ ಕೆಲವರು 6ನೇ ಕಂತಿನ ಹಣಕ್ಕಾಗಿ ಕಾದು ಕುಳಿತಿದಿದ್ದಾರೆ. ರಾಜ್ಯ ಸರಕಾರದ ಉನ್ನತ ಮೂಲಗಳ ಮಾಹಿತಿಯ ಪ್ರಕಾರ ಗೃಹಲಕ್ಷ್ಮೀ ಯೋಜನೆಯ 6ನೇ ಕಂತಿನ ಹಣ ಯಾವಾಗ ವರ್ಗಾವಣೆ ಎಂಬ ಪ್ರಶ್ನೆಗೆ ಸದ್ಯ ಉತ್ತರ ದೊರಕಿದೆ. ಫೆಬ್ರವರಿ ಮೊದಲ ವಾರದಲ್ಲೇ ಜಮೆ ಆಗಲಿದೆ ಎನ್ನಲಾಗುತ್ತಿದೆ. ಆದರೆ ಈ ಕುರಿತು ಇಲಾಖೆಯಿಂದ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಈ ನಡುವಲ್ಲೇ ರಾಜ್ಯ ಸರಕಾರ ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಹೊಸ ರೂಲ್ಸ್‌ ಜಾರಿ ಮಾಡಿದೆ. ಇಕೆವೈಸಿ, ಆಧಾರ್‌ ಸೀಡಿಂಗ್‌ ಮಾಡಿದ್ದರೂ ಕೂಡ ಇನ್ಮುಂದೆ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಡೆಯಬೇಕಾದ್ರೆ ಕಡ್ಡಾಯವಾಗಿ ಎನ್‌ಪಿಸಿಐ ಮಾಡಿಸಲೇ ಬೇಕಾಗಿದೆ. ಎನ್‌ಪಿಸಿಐ ಮಾಡಿಸದೇ ಇದ್ದರೆ ನಿಮ್ಮ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ…

Read More

ಬೆಂಗಳೂರು : ಒಂದು ತಿಂಗಳ ಕಾಲ ಜಿಲ್ಲೆಯಾದ್ಯಂತ ಸಂವಿಧಾನ ಕುರಿತು ಸ್ಥಬ್ದಚಿತ್ರದ ಟ್ಯಾಬ್ಲೋ ಸಂಚಾರಕ್ಕೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಹಾಗು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಮುನಿಯಪ್ಪ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, 75ನೇ ಗಣರಾಜ್ಯೋತ್ಸವ ಹಿನ್ನೆಲೆ ಜಿಲ್ಲೆಯಾದ್ಯಂತ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮವನ್ನು ನಡೆಸಲು, ಸಂವಿಧಾನದ ಕುರಿತು ಮಾಹಿತಿಯನ್ನು ಪ್ರತಿಯೊಬ್ಬರಿಗೂ ತಲುಪಿಸಲು ಚಿಂತನೆ ನಡೆಸಿರುವ ಹಿನ್ನಲೆಯಲ್ಲಿ ಜಿಲ್ಲೆಯ 101 ಪಂಚಾಯತಿಗಳಲ್ಲಿ ಸಂವಿಧಾನ ಕುರಿತ ಸಾಕ್ಷ್ಯ ಚಿತ್ರದ ಮೂಲಕ ಸಾರ್ವಜನಿಕರಿಗೆ ತಳಿಸಲು ತಯಾರಿ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಮುಖಂಡರು ಹಾಗೂ ಎಲ್ಲಾ ಸಾರ್ವಜನಿಕರು ಭಾಗವಹಿಸಿ ಆಚರಣೆಮಾಡಲು ತಯಾರಗಬೇಕೆಂದರು. ಈ ಜಾಥ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ 16 ಸದಸ್ಯರ ಸಮಿತಿಯ ರಚನೆಯ ಮೂಲಕ ಇದರ ಉಸ್ತುವಾರಿಯನ್ನು ಜಿಲ್ಲಾಡಳಿತ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ವಹಿಸಿ ಯಶಸ್ವಿಯಾಗಿ ನಡೆಸಲು…

Read More

ಮಂಡ್ಯ: ಮಂಡ್ಯ ಜಿಲ್ಲೆಯ ಮೇಲುಕೋಟೆ ಶಿಕ್ಷಕಿ ದೀಪಿಕಾ ನಾಪತ್ತೆ ಹಾಗೂ ಕೊಲೆ ಪ್ರಕರಣ ಬೆಳಕಿಗೆ ಬಂದ 30 ಗಂಟೆಯಲ್ಲೇ ಪೊಲೀಸರು ಹಂತಕನನ್ನು ಅರೆಸ್ಟ್‌ ಮಾಡಿದ್ದಾರೆ. ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿ ನಿತೀಶ್‌ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೇಲುಕೋಟೆ ಬೆಟ್ಟದ ತಪ್ಪಲಲ್ಲಿ ಮಾಣಿಕ್ಯನಹಳ್ಳಿ ಗ್ರಾಮದ ದೀಪಿಕಾಳನ್ನು (28) ಅದೇ ಗ್ರಾಮದ ನಿತೀಶ್ ಕೊಲೆ ಮಾಡಿ ಹೂತು ಹಾಕಿದ್ದ. ಶನಿವಾರ ಮಧ್ಯಾಹ್ನ ಶಾಲೆಯಿಂದ ತೆರಳಿದ್ದ ದೀಪಿಕಾ ನಿಗೂಢವಾಗಿ ನಾಪತ್ತೆಯಾಗಿದ್ದು, ಅಂದು ಸಂಜೆ ಬೆಟ್ಟದ ಹಿಂಭಾಗದ ರಸ್ತೆ ಸಮೀಪ ದೀಪಿಕಾ ಸ್ಕೂಟರ್ ಪತ್ತೆಯಾಗಿತ್ತು. ಅಲ್ಲದೆ ದೀಪಿಕಾಳನ್ನು ಎಳೆದಾಡುತ್ತಿದ್ದ ದೃಶ್ಯವನ್ನು ಬೆಟ್ಟದ ಮೇಲಿನಿಂದ ಪ್ರವಾಸಿಗರೊಬ್ಬರು ವೀಡಿಯೋ ಮಾಡಿದ್ದರು. ಇದಾದ ನಂತರ ಮೇಲುಕೋಟೆ ಠಾಣೆಗೆ ದೀಪಿಕಾ ಪೋಷಕರು ನಾಪತ್ತೆ ದೂರು ನೀಡಿದ್ದರು. ಸೋಮವಾರ ಸಂಜೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿತ್ತು.  https://ainlivenews.com/peanut-is-good-for-health-but-if-people-with-this-problem-eat-it-there-is-no-danger/ ಈ ವೇಳೆ ಶವ ಪತ್ತೆಯಾಗುತ್ತಿದ್ದಂತೆ ನಿತೀಶ್ ಗ್ರಾಮದಿಂದ ಎಸ್ಕೇಪ್ ಆಗಿದ್ದ. ಅಲ್ಲದೇ ದೀಪಿಕಾಗೆ ಕೊನೆಯದಾಗಿ ಈತನೇ ಫೋನ್ ಕಾಲ್ ಮಾಡಿದ್ದ. ನಿತೀಶ್ ಕೊಲೆಗಾರ ಎಂದು ದೀಪಿಕಾ…

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಏಕೆ ಬರ್ತಾರೆ ಅನ್ನೋದೇ ಅವರ ಪಕ್ಷದ ಅಯೋಗ್ಯರಿಗೆ ಗೊತ್ತಿಲ್ಲ ಎಂದು ರಾಜ್ಯ ಬಿಜೆಪಿ ನಾಯಕರ ಮೇಲೆ ಸಚಿವ ಪ್ರಿಯಾಂಕ್‌ ಖರ್ಗೆ ಹರಿಹಾಯ್ದಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರನ್ನು ಅಯೋಗ್ಯರಿಗೆ ಹೋಲಿಕೆ ಮಾಡಿದ್ದಾರೆ. ರಾಜ್ಯ ಬಿಜೆಪಿಯವರು ಮೊದಲು ನರೇಂದ್ರ ಮೋದಿ ಅವರು ಯಾಕೆ ಬರ್ತಾರೆ ಎಂಬುದನ್ನು ತಿಳಿದುಕೊಳ್ಳಲಿ ಎಂದು ಕುಟುಕಿದ್ದಾರೆ. ಸದ್ಯ ಬಿಜೆಪಿಯವರಿಗೆ ನಾನು‌ ಮನೆ ದೇವರು ಆಗಿಬಿಟ್ಟಿದ್ದೇನೆ. ನನ್ನ ಬಗ್ಗೆ ಮಾತನಾಡುವ ತನಕ ಅವರಿಗೆ ತಿಂದ ಅನ್ನ ಕರಗುವುದಿಲ್ಲ. ನಾನು ಬಿಜೆಪಿ ನಾಯಕರ ಅಯೋಗ್ಯ ಪದದ ಬಳಕೆ ರೆಕಾರ್ಡ್‌ ಆಗಿದೆಯಾ? ಆ ಪದದ ಸಮಾನಾರ್ಥಕ ಪದ ಯಾವುದು ಇದೆಯೋ ಅದೆಲ್ಲವನ್ನೂ ಬಳಸಿ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಯಾತ್ರೆ ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ. ಎಲ್ಲಾ ವಿರೋಧ ಪಕ್ಷಗಳಿಗೆ ಮಾದರಿ. ದೇಶದ ಐಕ್ಯತೆ, ಸಮಗ್ರತೆ ಶಾಂತಿಗೆ ಸಾವಿರಾರು ಕಾಂಗ್ರೆಸ್ ನಾಯಕರು ಪ್ರಾಣತ್ಯಾಗ ಮಾಡಿದ್ದಾರೆ. ತನ್ನ ಅಜ್ಜಿಗೆ ಗುಂಡು ಹಾರಿಸಿ ಕೊಂದಿದ್ದನ್ನು,…

Read More

ಬೆಂಗಳೂರು: ಬಿಜೆಪಿಯವರು (BJP) ಕೈಯಲ್ಲಿ ಮಂತ್ರಾಕ್ಷತೆ ಹಿಡಿದಿದ್ದರೆ, ಬಗಲಲ್ಲಿ ದೊಣ್ಣೆ ಹಿಡಿದಿದ್ದಾರೆ. ಈ ಗೂಂಡಾಗಳ ಗೊಡ್ಡು ಬೆದರಿಕೆಗೆ ಯಾವುದೇ ಕಾಂಗ್ರೆಸಿಗ (Congress) ಹೆದರುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ಅಸ್ಸಾಂನಲ್ಲಿ (Assam) ರಾಹುಲ್ ಗಾಂಧಿ (Rahul Gandhi) ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಸ್ಸಾಂನಲ್ಲಿ ಕಳೆದೆರಡು ದಿನಗಳಿಂದ ಈ ಯಾತ್ರೆಯನ್ನು ತಡೆಯಲಾಗಿದೆ. ಇಂದು ಗುವಾಹಟಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಆ ಮೂಲಕ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬದುಕಿದೆಯೋ ಸತ್ತಿದೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಅಸ್ಸಾಂ ಸರ್ಕಾರದ ಈ ನಡೆಯನ್ನು ನಾವೆಲ್ಲರೂ ಖಂಡಿಸುತ್ತೇವೆ ಎಂದರು. ರಾಹುಲ್ ಗಾಂಧಿ ದೇಶದ ಮನಸ್ಸುಗಳನ್ನು ಒಗ್ಗೂಡಿಸಲು, ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ, ಅವರಿಗೆ ನ್ಯಾಯ ಒದಗಿಸಲು ಮಣಿಪುರದಿಂದ ಮುಂಬೈವರೆಗೂ ಎರಡನೇ ಹಂತದ ಭಾರತ ಜೋಡೋ ನ್ಯಾಯ ಯಾತ್ರೆ ಹಮ್ಮಿಕೊಂಡಿದ್ದಾರೆ.…

Read More

ಪಿರಿಯಾಪಟ್ಟಣ ಜ 24: ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀವಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅದರಲ್ಲಿ ವಿಫಲರಾದರು. ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು‌. ಆಗಲಿಲ್ಲ. ಈ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೇವಡಿ ಮಾಡಿದರು. ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆಗಳಿಗೆ ಮತ್ತು ಕಟ್ಟೆಗಳಿಗೆ ಕಾವೇರಿ ನದಿಯ ನೀರು ತುಂಬಿಸುವ ಯೋಜನೆಯನ್ನು ಮುತ್ತಿನಮುಳುಸೋಗೆಯಲ್ಲಿ ಉದ್ಘಾಟಿಸಿ ಮಾತನಾಡಿದರು. ಮಹಾತ್ಮಗಾಂಧಿ ಹೇಳಿದ ರಘು ಪತಿ ರಾಘವ ರಾಜಾರಾಮನನ್ನು ನಾವು ಪೂಜಿಸುತ್ತೇವೆ, ನಾವೂ ಭಜಿಸುತ್ತೇವೆ‌. ಜನದ್ರೋಹವನ್ನು ಬಚ್ಚಿಟ್ಟುಕೊಳ್ಳಲು ಶ್ರೀರಾಮನನ್ನು ಮುಂದಿಟ್ಟು ರಾಜಕೀಯ ಮಾಡುತ್ತಿರುವ ಬಿಜೆಪಿ ಯನ್ನು ಕ್ಷಮಿಸಬೇಡಿ. ಬೆಂಬಲಿಸಬೇಡಿ ಎಂದು ಕರೆ ನೀಡಿದರು. ಪಿರಿಯಾಪಟ್ಟಣದ ಜನ, ಜಾನವಾರು, ಕೃಷಿಯ ಅನುಕೂಲಕ್ಕಾಗಿ ಮತ್ತು ಇಲ್ಲಿನ ಅಂತರ್ಜಲ ಹೆಚ್ಚಳಕ್ಕೆ ನಾನೇ ಶಂಕುಸ್ಥಾಪನೆ ಮಾಡಿ ನಾನೇ ಈಗ ಉದ್ಘಾಟಿಸಿದ್ದೇನೆ. 79 ಹಳ್ಳಿ 93 ಸಾವಿರ ಜನರಿಗೆ ಇದರಿಂದ ಲಾಭ ಆಗುತ್ತಿದೆ. ಇದು ನಮ್ಮ ಸರ್ಕಾರ ಪಿರಿಯಾಪಟ್ಟಣದಲ್ಲಿ ನಿರ್ವಹಿಸಿದ…

Read More

ಬೆಂಗಳೂರು: ಇಂದು ರಾಜ್ಯಾದ್ಯಂತ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರು ಸುತ್ತಮುತ್ತ ಆಕಾಶ ನಿರ್ಮಲವಾಗಿರಲಿದೆ. ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸಾಧ್ಯತೆ ಇದ್ದರೆ, ನಂತರ ಬಿಸಿಲು ಹೆಚ್ಚಿರಲಿದೆ. ರಾತ್ರಿ ಹೊತ್ತು ಕೊರೆಯುವ ಚಳಿ ಇರಲಿದೆ. ಗರಿಷ್ಠ ಉಷ್ಣಾಂಶವು 29 ಹಾಗೂ ಕನಿಷ್ಠ ಉಷ್ಣಾಂಶವು 17 ಡಿ.ಸೆ ಇರಲಿದೆ. ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದಾಗಿ ಸೆಕೆಯು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More

ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ (PSI) ಹುದ್ದೆ ಆಸೆಯಲ್ಲಿರುವ ಆಕಾಂಕ್ಷಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಶೀಘ್ರವೇ 403+ 660 PSI ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಶುರು ಮಾಡುವುದಾಗಿ ಗೃಹ ಸಚಿವ ಪರಮೇಶ್ವರ್ (G.Parameshwar) ತಿಳಿಸಿದ್ದಾರೆ. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದಿನಗಳಿಂದ ನಿರೀಕ್ಷೆ ಮಾಡಿದ್ದ PSI ಪರೀಕ್ಷೆ ಯಶಸ್ವಿಯಾಗಿ, ಸುಗಮವಾಗಿ ನಡೆದಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ಆಗಿಲ್ಲ. ಅಭ್ಯರ್ಥಿಗಳಿಗೆ ಯಾವುದೇ ಬ್ಲೂಟೂತ್ ಕೂಡಾ ತರಲು ಸಾಧ್ಯವಾಗಿಲ್ಲ. 54 ಸಾವಿರ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಆಗಿದ್ದರು. ಇದರಲ್ಲಿ 65% ರಿಂದ 70% ಹಾಜರಾತಿ ಇತ್ತು. ಆದಷ್ಟು ಮೌಲ್ಯಮಾಪನ ಮಾಡಿ ರಿಸಲ್ಟ್ ಕೊಟ್ಟು ನೇಮಕಾತಿ ಪ್ರಕ್ರಿಯೆ ಶುರು ಮಾಡುತ್ತೇವೆ ಎಂದಿದ್ದಾರೆ. ಮುಂದಿನ ಹಂತದಲ್ಲಿ 403 ಜನ PSI ನೇಮಕಾತಿಗೂ ಪರೀಕ್ಷೆ ಮಾಡುತ್ತೇವೆ. ಅದನ್ನು ಕೂಡಾ KEA ಮೂಲಕವೇ ಪರೀಕ್ಷೆ ನಡೆಸುತ್ತೇವೆ. PSI ಪರೀಕ್ಷೆ ಯಶಸ್ವಿಯಾಗಿ ನಡೆಸಿದ್ದಕ್ಕೆ KEA ಮತ್ತು ಅದರ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬಹಳ ಎಚ್ಚರಿಕೆಯಿಂದ ಪರೀಕ್ಷೆ ಮಾಡಿದ್ದಾರೆ. ಮುಂದೆಯೂ ಕೂಡಾ…

Read More

ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟವ ಯೋಗ್ಯತೆ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ ಎಂದು ಆರ್​.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು’ಎಕ್ಸ್​’ನಲ್ಲಿ ಬರೆದುಕೊಂಡಿರುವ ಅವರು, ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಬಡ್ಡಿಗೆ ಸಾಲ ತಂದು ಕಟ್ಟಡದ ಬಾಡಿಗೆ ಕಟ್ಟುವ ಪರಿಸ್ಥಿತಿ ತಂದಿಟ್ಟಿದೆ. ಇನ್ನೂ ಗ್ರಾಮೀಣ ಭಾಗದ ಬಡ ಕುಟುಂಬದ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಿಗೆ ಅಂಗನವಾಡಿಯಲ್ಲಿ ಸಿಗುವ ಬಿಸಿಯೂಟ, ಪೌಷ್ಠಿಕ ಆಹಾರವೇ ಜೀವನಾಧಾರವಾಗಿದೆ. ಬಡವರ ಪಾಲಿನ ಆಸರೆಯಾದ ಅಂಗನವಾಡಿಗಳಿಗೆ ಬಾಡಿಗೆ ಕಟ್ಟಲೂ ಯೋಗ್ಯತೆ ಇಲ್ಲದ ನಿಮ್ಮ ಸರ್ಕಾರ ಇದ್ದರೆಷ್ಟು ಸತ್ತರೆಷ್ಟು ಸಿಎಂ ಸಿದ್ದರಾಮಯ್ಯನವರೇ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಒಟ್ಟು 66,361 ಅಂಗನವಾಡಿ ಕೇಂದ್ರಗಳಿದ್ದು, 19,802 ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿಲ್ಲ. ಸ್ವಂತ ಕಟ್ಟಡ ಇಲ್ಲದ ಅಂಗನವಾಡಿಗಳಿಗೆ ಗ್ರಾಮ ಪಂಚಾಯಿತಿ ಇಲ್ಲವೆ ಖಾಸಗಿ ಕಟ್ಟಡಗಳನ್ನು ಬಾಡಿಗೆ ಪಡೆದು ಒದಗಿಸಲಾಗಿದೆ ಎಂದರು.

Read More