Author: AIN Author

ಬೆಂಗಳೂರು: ಮಾಜಿ ಸಚಿವ ಡಾ.ಕೆ ಸುಧಾಕರ್ ಬಿಜೆಪಿ ವರಿಷ್ಠರನ್ನ ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ. ನಿನ್ನೆಯೇ ದೆಹಲಿಗೆ ತೆರಳಿರುವ ಸುಧಾಕರ್, ದೆಹಲಿಯ ಬಿಜೆಪಿ ನಾಯಕರನ್ನ ಭೇಟಿ ಮಾಡಿ ಟಿಕೆಟ್ ಪೆಡಯಲು ಯತ್ನಿಸುತ್ತಿದ್ದಾರೆ. ಸದ್ಯ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸುಧಾಕರ್ ಪ್ರಯತ್ನಿಸುತ್ತಿದ್ದಾರೆ. ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ಸುಧಾಕರ್. ಈಗ ಮತ್ತೆ ರಾಜಕೀಯ ಭವಿಷ್ಯ ಮರಳಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಈಗಾಗಲೇ ಬಿ.ಎಲ್.ಸಂತೋಷ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ನಡ್ಡಾ ಅವರು ಸಮಯ ಕೊಟ್ಟರೇ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಫರ್ಧಿಸಲು ಮಾಜಿ ಸಚಿವ ಸುಧಾಕರ್​ ಸೇರಿದಂತೆ ಹಲವು ಮುಖಂಡರು ರೇಸ್​ ನಲ್ಲಿದ್ದಾರೆ ಎನ್ನಲಾಗಿದೆ.

Read More

ಬೆಂಗಳೂರು:  ನಗರದಲ್ಲಿ 29ನೇ ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಗೂರು ಕೊಪ್ಪ ರಸ್ತೆ ಪ್ರೆಸ್ಟೀಜ್ ಸಾಂಗ್ ಆಫ್ ದ ಸೌತ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ ̤ ಅಪಾರ್ಟ್‍ಮೆಂಟ್‍ನಲ್ಲಿ ತಂದೆ – ತಾಯಿ ಜೊತೆ ವಾಸವಾಗಿದ್ದಳು. ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು ಎನ್ನಲಾಗಿದೆ. ಬಾಲಕಿಯ ತಂದೆ ಸಾಫ್ಟ್‌ವೇರ್‌ ಎಂಜಿನಿಯರ್, ತಾಯಿ ಗೃಹಿಣಿಯಾಗಿದ್ದಾರೆ. ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಾಲಕಿ ಮಂಗಳವಾರ ರಾತ್ರಿ ಮಲಗಿದ್ದ ವೇಳೆ, ಇದ್ದಕ್ಕಿದ್ದಂತೆ ಮುಂಜಾನೆ 4:30ಕ್ಕೆ ಎದ್ದು ಹಾಲ್‍ಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನು ಆಕೆಯ ತಾಯಿ ವಿಚಾರಿಸಿದಾಗ, ಸರಿಯಾಗಿ ಉತ್ತರಿಸದೆ ಮತ್ತೆ ಮಲಗುವುದಾಗಿ ರೂಮಿಗೆ ತೆರಳಿದ್ದಳು. ಸುಮಾರು 5 ಗಂಟೆ ವೇಳೆಗೆ ಬಾಲಕಿ ಅಪಾರ್ಟ್‍ಮೆಂಟ್ ಮೇಲಿನಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮುಂಗೋಪಿಯಾಗಿದ್ದ ಮೃತ ಬಾಲಕಿ ಪೋಷಕರ ಬುದ್ದಿಮಾತಿಗೆ ಎದುರು ಉತ್ತರ ನೀಡುತ್ತಿದ್ದ ಬಾಲಕಿ ಆದ್ರೆ ಬಾಲಕಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದ ಪೋಷಕರು ಬಾಲಕಿ ಹಾರಿದ 29ನೇ ಮಹಡಿಯಲ್ಲಿ ತಡೆಗೋಡೆ ಇತ್ತು…

Read More

ಕೊಲ್ಕತ್ತಾ: ಇಂಡಿಯಾ ಹೆಸರಿನ ಮೈತ್ರಿಕೂಟದಲ್ಲಿ ಮತ್ತೆ ಭಿನ್ನಮತ ಭುಗಿಲೆದ್ದಿದೆ. ಮಮತಾ ಬ್ಯಾನರ್ಜಿ ಕಾಂಗ್ರೆಸ್‌ ನಾಯಕರಿಗೆ ಭಾರೀ ಶಾಕ್ ನೀಡಿದ್ದಾರೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮೈತ್ರಿ ಇಲ್ಲ ಎಂದಿದ್ದಾರೆ. ಹೌದು  ಇಂಡಿಯಾ ಮಿತ್ರಕೂಟಕ್ಕೆ ಭಾರೀ ದೊಡ್ದ ಹಿನ್ನಡೆಯಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರ ಹಂಚಿಕೆ ಬಗ್ಗೆ ಗೊಂದಲ ಉಂಟಾಗಿದ್ದು, ಇದೀಗ ಇಂಡಿಯಾ ಮಿತ್ರಕೂಟಕ್ಕೆ ಬೆಂಬಲ ನೀಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಉಲ್ಟಾ ಹೊಡೆದಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮಾತ್ರ ತಮ್ಮ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದಾರೆ. https://ainlivenews.com/peanut-is-good-for-health-but-if-people-with-this-problem-eat-it-there-is-no-danger/ ಕಾಂಗ್ರೆಸ್ ಬೇಕಿದ್ದರೆ 300 ಲೋಕಸಭಾ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿ ನಾವು ಯಾವ ಪಕ್ಷದ ಜೊತೆಗೂ ಕೈಜೋಡಿಸುವುದಿಲ್ಲ. ಯಾವ ಪಕ್ಷದ ಜೊತೆಗೂ TMC ಮೈತ್ರಿ ಇಲ್ಲ ಎಂದು ಮಮತಾ ಬ್ಯಾನರ್ಜಿ ಉಲ್ಟಾ ಹೊಡೆದಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಸೆಡ್ಡು ಹೊಡೆದ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ಸ್ವತಂತ್ರವಾಗಿ ಸ್ಪರ್ಧೆಗೆ ಟಿಎಂಸಿ ನಿರ್ಧಾರ ಮಾಡಲಾಗಿದೆ.  ಎಲ್ಲಾ 42…

Read More

ಬಳ್ಳಾರಿ: ಕುರಗೋಡು ಪುರಸಭೆ ಬಿಲ್​ ಕಲೆಕ್ಟರ್ ಹೊನ್ನೂರ್ ಸಾಬ್ 6 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೇಶನದ ಸ್ಕೆಚ್ ನೀಡಲು ಮಹೇಶ್ ಎಂಬುವರ ಬಳಿ ಲಂಚ ಸ್ವೀಕರಿಸುವಾಗ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕುರುಗೋಡು ನಿವಾಸಿ ಮಹೇಶ್ ಎನ್ನುವರು ನಿವೇಶನದ ಸ್ಕೆಚ್ ನೀಡುವಂತೆ ಮನವಿ ಮಾಡಿದ್ದರು. ಮಹೇಶ್ ಬಳಿ ಬಿಲ್‌ ಕಲೆಕ್ಟರ್‌ ಹೊನ್ನೂರಸಾಬ್ 6 ಸಾವಿರ ಲಂಚ ಕೇಳಿದ್ದರು. ಹಣ ನೀಡಿದ್ದರೇ ಕೆಲಸ ಮಾಡಿಕೊಡುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಲೋಕಾಯುಕ್ತರಿಗೆ ದೂರು ನೀಡಿದ್ದ ಮಹೇಶ್, ನಿನ್ನೆ ರಾತ್ರಿ ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ದಾಳಿ ಮಾಡಿ ಹೊನ್ನೂರಸಾಬ್‌ನನ್ನು ವಶಕ್ಕೆ ಪಡೆದಿದ್ದಾರೆ.  

Read More

ಬೆಂಗಳೂರು : ‘ನನಗೆ ರಾಮನ ಮೇಲೆ ಭಕ್ತಿ ಇಲ್ಲ.. ನಾನು ಏನು ಮಾಡಲಿ? ನಾನು ಸಂವಿಧಾನದ ಭಕ್ತ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಎಷ್ಟು ಜನರಿಗೆ ರಾಮಾಯಣ ಗೊತ್ತು? ಹನುಮಾನ್ ಚಾಲಿಸ್ ಎಷ್ಟು ಬಿಜೆಪಿ ಸಂಸದರು ಹಾಗೂ ಶಾಸಕರಿಗೆ ಬರುತ್ತೆ?’ ಎಂದು ಬಿಜೆಪಿಗರಿಗೆ ಪ್ರಶ್ನೆ ಮಾಡಿದರು. ನಾನು ಎಲ್ಲರ ಜೊತೆಗೆ ಹೋಗ್ತೀನಿ. ಬಸವಣ್ಣ, ಅಂಬೇಡ್ಕರ್, ಸಂವಿಧಾನ ತತ್ವ ಪಾಲಿಸುತ್ತೇನೆ. ಇದರಲ್ಲಿ ಎಲ್ಲರೂ ಇದ್ದಾರೆ. ನಾನು ರಾಮಾಯಣನೂ ಓದಿದ್ದೇನೆ, ಮಹಾಭಾರತನೂ ಓದಿದ್ದೇನೆ’ ಎಂದು ಕುಟುಕಿದರು. ಆಸ್ತಿಕರು ಹೋಗ್ತಾರೆ, ನಾಸ್ತಿಕರು ಹೋಗಲ್ಲ ‘ಪ್ರಧಾನಿ ಮೋದಿ ಸುಪ್ರೀಂಕೋರ್ಟ್ ಆದೇಶದಂತೆ ರಾಮಮಂದಿರ ಮಾಡ್ತಾ ಇದ್ದೇವೆ ಅಂತಾರೆ. ನಾವು ಒಪ್ಪಿದೇವೆ, ಕಾಂಗ್ರೆಸ್ ಅದು ಮಾಡಬೇಕು, ಇದು ಮಾಡಬೇಕು ಅಂತ ಜನ ಹೇಳ್ತಾರೆ. ಎಐಸಿಸಿ ಅಧ್ಯಕ್ಷರು ಹೇಳಿದ್ದಾರೆ, ಅದು ವೈಯಕ್ತಿಕ ವಿಚಾರ ಅಂತ. ಯುಪಿ ಕಾಂಗ್ರೆಸ್ ನವರು ಹೋಗ್ತಾ ಇಲ್ವಾ? ಆಸ್ತಿಕರು ಹೋಗ್ತಾರೆ, ನಾಸ್ತಿಕರು ಹೋಗಲ್ಲ..’ ಎಂದು ಛೇಡಿಸಿದರು.

Read More

ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಷ್ಟ್ರೀಯ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬಿಜೆಪಿ ಮಾಜಿ ಸಚಿವ ಡಾ. ಕೆ.ಸುಧಾಕರ್‌ ದೆಹಲಿಗೆ ತೆರಳಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ. ಸುಧಾಕರ್‌ ಅವರು ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಿ.ಎಲ್‌.ಸಂತೋಷ್‌ ಜೊತೆಗಿರುವ ಫೋಟೋ ವೈರಲ್‌ ಆಗಿದೆ. ಚಿಕ್ಕಬಳ್ಳಾಪುರ ಲೋಕಸಭೆ ಟಿಕೆಟ್‌ಗೆ ಸುಧಾಕರ್‌ ಕಸರತ್ತು ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಸಚಿವರಾಗಿದ್ದ ಡಾ. ಕೆ.ಸುಧಾಕರ್‌ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನು ಭವಿಸಿದ್ದರು. ಇವರ ವಿರುದ್ಧ ಸ್ಪರ್ಧೆಗಿಳಿದಿದ್ದ ಕಾಂಗ್ರೆಸ್‌ನ ಪ್ರದೀಪ್‌ ಈಶ್ವರ್‌ ಗೆಲುವು ಸಾಧಿಸಿದ್ದರು. https://ainlivenews.com/peanut-is-good-for-health-but-if-people-with-this-problem-eat-it-there-is-no-danger/ ಈಗ ಲೋಕಸಭೆ ಚುನಾವಣೆಗೆ ಕಾಲ ಸನ್ನಿಹಿತವಾಗಿದೆ. ಈ ಹೊತ್ತಲ್ಲಿ ರಾಜ್ಯ ನಾಯಕರು ದೆಹಲಿಗೆ ತೆರಳಿ ತಮ್ಮ ಮನದ ಇಂಗಿತವನ್ನು ವ್ಯಕ್ತಪಡಿಸುತ್ತಿದ್ದಾರೆ. ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿ ಚುನಾವಣೆಗೆ ಟಿಕೆಟ್‌ ಗಿಟ್ಟಿಸಲು ಕಸರತ್ತು ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

Read More

ಧಾರವಾಡ: ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ನ್ಯಾಯ ಯಾತ್ರೆ ಅಸ್ಸಾಂ ರಾಜ್ಯದಲ್ಲಿ ಸಾಗುತ್ತಿರುವಾಗ ಆ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಿ ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಧಾರವಾಡದ ಜ್ಯುಬಿಲಿ ವೃತ್ತವನ್ನು ಬಂದ್ ಮಾಡಿದ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಅಲ್ಲದೇ ಕೇಂದ್ರ ಸರ್ಕಾರಕ್ಕೆ ಕಪ್ಪು ಬಾವುಟ ಪ್ರದರ್ಶನ ಮಾಡಿದರು. ಬಿಜೆಪಿ ಸರ್ಕಾರ ಗೂಂಡಾಗಳನ್ನು ಬಿಟ್ಟು ಭಾರತ ಜೋಡೋ ನ್ಯಾಯ ಯಾತ್ರೆ ಮೇಲೆ ಈ ರೀತಿಯ ದಾಳಿ ಮಾಡಿಸುತ್ತಿದೆ. https://ainlivenews.com/have-you-installed-pink-whatsapp-be-careful-its-dangerous/ ಕೇಂದ್ರದಲ್ಲಿ ಬಿಜೆಪಿ ಗೂಂಡಾ ಸಾಮ್ರಾಜ್ಯ ನಡೆಸುತ್ತಿದೆ. ರಾಹುಲ್ ಗಾಂಧಿ ಅವರ ಜನಪ್ರಿಯತೆ ನೋಡಿ ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಕೂಡಲೇ ಕೇಂದ್ರ ಸರ್ಕಾರ ಈ ಬಗ್ಗೆ ನ್ಯಾಯಯುತವಾಗಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಬೇಕು. ಬಿಜೆಪಿ ಗೂಂಡಾಗಳೇ ಈ ರೀತಿ ಯಾತ್ರೆ ಮೇಲೆ ದಾಳಿ ಮಾಡಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.

Read More

ನಾನಾ ಕಾರಣಗಳಿಂದಾಗಿ ಹಿಂದಿ ಬಿಗ್ ಬಾಸ್ (Bigg Boss Hindi) ಸಾಕಷ್ಟು ಕುತೂಹಲ ಮೂಡಿಸಿತ್ತು. ಅಷ್ಟೇ ಅಲ್ಲದೇ ಸಾಕಷ್ಟು ಚರ್ಚೆಗಳನ್ನೂ ಅದು ಹುಟ್ಟು ಹಾಕಿತ್ತು. ಅದರಲ್ಲೂ ನಟ ವಿಕ್ಕಿ ಜೈನ್ (Vicky Jain), ತನ್ನ ಪತ್ನಿ ಹಾಗೂ ನಟಿ ಅಂಕಿತಾ ಲೋಖಂಡೆ ಜೊತೆ ಬಿಗ್ ಬಾಸ್ ಮನೆಗೆ ಕಾಲಿಟ್ಟು ಅಚ್ಚರಿ ಮೂಡಿಸಿದ್ದರು. ಈಗ ಬಿಗ್ ಬಾಸ್ ವಿಕ್ಕಿಗೆ ಬಿಗ್ ಶಾಕ್ ನೀಡಿದ್ದಾರೆ. ಹೌದು, ಹಿಂದಿ ಬಾಲಿವುಡ್ ಕೂಡ ಫಿನಾಲೆ ಹಂತ ತಲುಪಿದೆ. ನೂರು ದಿನಗಳು ಕಳೆದಿವೆ. ಅಂಕಿತಾ ಮತ್ತು ವಿಕ್ಕಿ ಇಬ್ಬರೂ ಫಿನಾಲೆ ವೇದಿಕೆಯ ಮೇಲೆ ಇರಲಿದ್ದಾರೆ ಎನ್ನುವುದು ಅವರ ಅಭಿಮಾನಿಗಳ ಕೋರಿಕೆ ಆಗಿತ್ತು. ಆದರೆ, ಬಿಗ್ ಬಾಸ್ ಆ ಕೋರಿಯನ್ನು ಈಡೇರಿಸಿಲ್ಲ. ಮಿಡ್ ವೀಕ್ ಎಲಿಮಿನೇಷನ್ (Eliminate) ನಡೆಸಿ ವಿಕ್ಕಿಯನ್ನು ಹೊರಗೆ ಕಳುಹಿಸಲಾಗಿದೆ. ಪತಿ ಬಿಗ್ ಬಾಸ್ ಮನೆಯನ್ನು ಬಿಟ್ಟು ಹೋಗುವುದನ್ನು ನೋಡಿ ಅಂಕಿತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅಂಕಿತಾ ಲೋಖಂಡೆ (Ankita Lokhande) ಹಾಗೂ ವಿಕ್ಕಿ ದಂಪತಿ ವಿಚಿತ್ರ…

Read More

ರಾಯಚೂರು: ಜಿಲ್ಲೆಯ ಲಿಂಗಸುಗೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಪಡೆಯುತ್ತಿದ್ದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ. ಕೆಂಚಪ್ಪ ಬಾವಿಮನಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಜೆಸ್ಕಾಂ ಅಧಿಕಾರಿ. ಲಿಂಗಸುಗೂರಿನ ಆಶಿಹಾಳ ತಾಂಡದ ನಿವಾಸಿ ವಿದ್ಯುತ್ ಗುತ್ತಿಗೆದಾರ ಪ್ರೇಮಕುಮಾರ ಎಂಬವರಿಗೆ ಹೊಸ ಮನೆಯ ಆರ್ ಆರ್ ನಂಬರ್ ನೀಡಲು 10 ಸಾವಿರ ಲಂಚ ಕೇಳಿದ್ದ. https://ainlivenews.com/have-you-installed-pink-whatsapp-be-careful-its-dangerous/ ಈಗಾಗಲೇ 5 ಸಾವಿರ ರೂಪಾಯಿ ನೀಡಿದ್ದ ಗುತ್ತಿಗೆದಾರ, ಅಧಿಕಾರಿಯಿಂದ ಬೇಸತ್ತು ಲೋಕಾಯುಕ್ತಕ್ಕೆ ದೂರು ನೀಡಿದ್ದ. ಉಳಿದ 5 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತರ ಬಲೆಗೆ ಬಿದ್ದಬಳಿಕ ಅಧಿಕಾರಿ ಅನಾರೋಗ್ಯದ ಹೈಡ್ರಾಮಾ ಮಾಡಿ ಲಿಂಗಸುಗೂರು ಸರ್ಕಾರಿ ತಾಲೂಕಾಸ್ಪತ್ರೆಗೆ ದಾಖಲಾಗಿದ್ದಾನೆ. ಚಿಕಿತ್ಸೆ ಬಳಿಕ ಲೋಕಾಯುಕ್ತ ಅಧಿಕಾರಿಗಳು ಎಇಇ ಕೆಂಚಪ್ಪ ಬಾವಿಮನಿಯನ್ನ ವಶಕ್ಕೆ ಪಡೆದಿದ್ದಾರೆ.  

Read More

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಬೈಕ್‌ ಕಳ್ಳರ ಕಾಟ ಹೆಚ್ಚಾಗುತ್ತಿದ್ದು ಹೇಗೆಂದರೆ ನಕಲಿ ಕೀ ಮಾಡಿಸಿಕೊಂಡು ತನ್ನದೇ ಬೈಕ್‌ ಎಂದು ಕಳವು ಮಾಡುತ್ತಿರುವ ಕಳ್ಳರ ಗುಂಪು ಹೆಚ್ಚಾಗಿದೆ. ಹೌದು ನಗರದಲ್ಲಿ ಬೆಳ್ಳಂಬೆಳಿಗ್ಗೆ ದುಬಾರಿ ಬೆಲೆಯ ಬೈಕ್ ಕದ್ದು ಎಸ್ಕೇಪ್ ಆದ ಕಳ್ಳ ಈ ಘಟನೆ ನಡೆದಿದ್ದು ಹೆಣ್ಣೂರಿನ ಸಾಯಿ ಗೋವಿಂದ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ದೀಪಕ್ ಎಂಬುವರಿಗೆ ಸೇರಿದ  4 ಲಕ್ಷ ಮೌಲ್ಯದ ಕೆಟಿಎಂ ಬೈಕ್ ಕಳ್ಳತನ ಮಾಡಿದ್ದು  ತನ್ನದೆ ಬೈಕ್ ಎಂಬಂತೆ ಬಂದು ಬೈಕ್ ಕೊಂಡೊಯ್ದ ಕಳ್ಳ ಈ ಮೊದನೆ ಡೂಪ್ಲಿಕೇಟ್ ಕೀ ಮಾಡಿ ತಂದಿದ್ದ ಕಳ್ಳ ಬೆಳಿಗ್ಗೆ 8 ಗಂಟೆಗೆ ಅಪಾರ್ಟ್ಮೆಂಟ್ ಒಳಬಂದು ಕಳ್ಳತನ ಮಾಡಿದ್ದು  ಬೈಕ್‌ ಕಳ್ಳತನದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಅಪಾರ್ಟ್ಮೆಂಟ್ ಆಗಿದ್ದು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಪೊಲೀಸರು ಕಳ್ಳರಿಗಾಗಿ ಬಲೆ ಬೀಸಿದ್ದಾರೆ.

Read More