Author: AIN Author

ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ. ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ದೇಶಾದ್ಯಂತ ಆಚರಣೆ ಮಾಡಲಾಗುತ್ತದೆ.ಈ ದಿನದಂದು ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಲಿಂಗ ಅಸಮಾನತೆಯನ್ನು ಹೋಗಲಾಡಿಸಲು ಹೆಣ್ಣುಗೆ ಸಮಾನ ಅವಕಾಶ ಹಾಗೂ ಪ್ರೋತ್ಸಾಹ ನೀಡಬೇಕು ಎನ್ನುವ ಉದ್ದೇಶದಿಂದ ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಣೆ ಮಾಡಲಾಗುತ್ತದೆ. ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಇತಿಹಾಸ ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ವನ್ನು ಆಚರಣೆ ಮಾಡಲಾಗುತ್ತದೆ. ರಾಷ್ಟ್ರೀಯ ಹೆಣ್ಣುಮಕ್ಕಳ ದಿನವನ್ನು ಮೊದಲ ಬಾರಿಗೆ 2008 ರಲ್ಲಿ ಆಚರಣೆ ಮಾಡಲಾಯಿತು. ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಮತ್ತು ಕೇಂದ್ರ ಸರ್ಕಾರದಿಂದ ಈ ದಿನ ಆಚರಣೆಯನ್ನು ಆರಂಭಿಸಲಾಯಿತು. ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಆಚರಣೆಯ ಉದ್ದೇಶ…

Read More

ಮಂಡ್ಯ: ಆಕೆ ವೃತ್ತಿಯಲ್ಲಿ ಶಿಕ್ಷಕಿ.  ಯಾವ ಹೀರೋಹಿನ್ ಗೂ ಕಡಿಮೆ ಇಲ್ಲದಂತೆ ಇದ್ದಾಕೆಗೆ ರೀಲ್ಸ್ ಗೀಳಿತ್ತು. ಕೆಲಸ ಮುಗಿಸಿ ಶಾಲೆಯಿಂದ ಹೊರಟಿದ್ದಾಕೆ ನಿಗೂಢವಾಗಿ ನಾಪತ್ತೆಯಾಗಿದ್ಲು. ಮೂರು ದಿನದ ಬಳಿಕೆ ಬೆಟ್ಟದ ತಪ್ಪಲಿನಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಮೃತ ದೇಹ ಸಿಕ್ಕದ ಸ್ಥಿತಿ ನೋಡಿ ಆ ಭಾಗದ ಜನರೆಲ್ಲ ಮೆಚ್ಚಿಬಿದ್ದಿದ್ದಾರೆ. ಈ ನಡುವೆ 13 ಸೆಕೆಂಡ್ ವಿಡಿಯೋ ತುಣುಕು ಸಿಕ್ಕಿದ್ದು, ಅಕ್ಕ ಅಕ್ಕ ಅಂತಿದ್ದ ಯುವಕನೇ ಕೊಲೆಗೈದ್ನ ಎಂಬ ಅನುಮಾನವೂ ಮೂಡಿದೆ. ಈ ಕುರಿತ ಒಂದು ರಿಪೋರ್ಟ್ ಇಲ್ಲಿದೆ. ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಐತಿಹಾಸಿಕ ಹಾಗೂ ಪುರಾಣಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮೇಲುಕೋಟೆಯಲ್ಲಿ ಭಯಾನಕ ಕೃತ್ಯ ನಡೆದುಹೋಗಿದೆ. ಖಾಸಗಿ ಶಾಲೆಯ ಶಿಕ್ಷಕಿಯನ್ನ ಕೊಲೆಗೈದು ಬೆಟ್ಟದ ತಪ್ಪಲಿನಲ್ಲಿ ಹಂತಕರು ಹೂತಿಟ್ಟಿದ್ದು, ಆ ಭಾಗದ ಜನರನ್ನ ಬೆಚ್ಚಿಬೀಳಿಸುವಂತೆ ಮಾಡಿದೆ. ಅಂದಹಾಗೆ ಬೆಟ್ಟದ ತಪ್ಪಲಿನಲ್ಲಿ ಕೊಲೆಯಾದಾಕೆ ಹೆಸರು ದೀಪಿಕಾ. 28 ವರ್ಷದ ಈಕೆ ಪಾಂಡವಪುರ ತಾಲ್ಲೂಕಿನ ಮಾಣಿಕ್ಯನಹಳ್ಳಿ ನಿವಾಸಿ. ನೋಡೋದಕ್ಕೆ ಥೇಟ್ ಹೀರೋಹಿನ್ ರೀತಿ ಕಾಣುವ ದೀಪಿಕಾ…

Read More

ಸ್ಯಾಂಡಲ್‌ವುಡ್‌ ನಟ ಅಜಯ್‌ ರಾವ್‌ ಕನ್ನಡ ಚಿತ್ರರಂಗದಲ್ಲಿದ್ದು ದಶಕಗಳ ಮೇಲಾಯಿತು. ಅಂದಿನಿಂದ ಇಲ್ಲಿಯವರೆಗೂ ಸಾಕಷ್ಟು ಸಿನಿಮಾಗಳಲ್ಲಿ ಅಜಯ್‌ ನಟಿಸಿದ್ದಾರೆ. ಹೊಸ ಹೊಸ ಪ್ರಯೋಗಕ್ಕೂ ತಮ್ಮನ್ನು ಒಡ್ಡಿಕೊಂಡಿದ್ದಾರೆ. ನಟನಾಗಿ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಅವರಿಗಿಂದು ಜನ್ಮದಿನದ ಸಂಭ್ರಮ. ಅಜಯ್ ರಾವ್ ಹುಟ್ಟುಹಬ್ಬದ ವಿಶೇಷವಾಗಿ ಯುದ್ಧಕಾಂಡ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿ ಶುಭ ಕೋರಲಾಗಿದೆ. ಕರಿಕೋಟು ತೊಟ್ಟು ಕೈಯಲ್ಲಿ ಪುಸ್ತಕ ಹಿಡಿದು ಲಾಯರ್ ಅವತಾರದಲ್ಲಿ ಕೃಷ್ಣ ಅಜಯ್ ರಾವ್ ಕಾಣಿಸಿಕೊಂಡಿದ್ದಾರೆ.‌ ಯುದ್ಧಕಾಂಡ ಚಿತ್ರವನ್ನು ಅಜಯ್ ರಾವ್ ತಮ್ಮದೇ ನಿರ್ಮಾಣ ಸಂಸ್ಥೆ ‘ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್’ ಮತ್ತು ‘ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಈ ಮೂಲಕ ‘ಕೃಷ್ಣ ಲೀಲಾ’ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ. ಅಂದಹಾಗೇ ಚಿತ್ರಕ್ಕೆ ಪವನ್ ಭಟ್ ಆಕ್ಷನ್‌ ಕಟ್‌ ಹೇಳುತ್ತಿದ್ದು ಕಾರ್ತಿಕ್ ಶರ್ಮಾ ಕ್ಯಾಮೆರಾ ಕೈಚಳಕವಿದೆ. ಬಹುಭಾಷೆಯಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ತಾರಾಬಳಗವಿರಲಿದೆ. ಸದ್ಯ ಯುದ್ಧಕಾಂಡ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ.…

Read More

‘ರಾಧಾ ರಮಣ’ (Radha Ramana) ನಟಿ ಕಾವ್ಯಾ ಗೌಡ (Kavya Gowda) ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮನೆಗೆ ಮಹಾಲಕ್ಷ್ಮಿಯ ಆಗಮನವಾಗಿದೆ. ಹೆಣ್ಣು ಮಗುವಿಗೆ (Baby Girl)  ನಟಿ ಜನ್ಮ ನೀಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅಯೋಧ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಜ.22ರಂದು ಅದ್ಧೂರಿಯಾಗಿ ನೆರವೇರಿದೆ. ಇದೇ ದಿನ ನಟಿ ಕಾವ್ಯಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದು ಕಾವ್ಯಾ ಗೌಡ ಅವರ ಕುಟುಂಬದಲ್ಲಿ ಮತ್ತಷ್ಟು ಸಂತಸ ಹೆಚ್ಚಿಸಿದೆ. ನಮ್ಮ ಮನೆಗೆ ಮುದ್ದಾದ ರಾಜಕುಮಾರಿಯ ಆಗಮನವಾಗಿದೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ನಿಮ್ಮೆಲ್ಲರ ಶುಭಹಾರೈಕೆಗೆ ಧನ್ಯವಾದಗಳು ಎಂದು ಸೋಷಿಯಲ್ ಮೀಡಿಯಾ ಮೂಲಕ ನಟಿ ತಿಳಿಸಿದ್ದಾರೆ.

Read More

ಬೆಂಗಳೂರು: ನಗರದಲ್ಲಿ  ತಡರಾತ್ರಿ ಮನೆಗೆ ನುಗ್ಗಿ ಮಾರಾಕಾಸ್ತ್ರಗಳಿಂದ ರೌಡಿಶೀಟರ್ ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ  ವಿವೇಕ್ ನಗರದ ಮಾಯಾ ಬಜಾರ್ ಸ್ಲಂ ನಲ್ಲಿ ನಡೆದಿದೆ. https://ainlivenews.com/rama-cutout-a-40-foot-cut-out-of-clothed-rama-a-huge-tragedy-missed/ ಸತೀಸ್ ಅಲಿಯಾಸ್ ಮಿಲ್ಟ್ರಿ ಸತೀಶ್ ಕೊಲೆಯಾದ ರೌಡಿಶೀಟರ್ ಆಗಿದ್ದು  ತಡರಾತ್ರಿ ಮನೆಗೆ ನುಗ್ಗಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲಮಾಡಿರೋ ಹಂತಕರು. ಹಳೆ ವೈಷಮ್ಯ ಹಿನ್ನೆಲೆ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಕೊಲೆಯಾದ ಸತೀಶ್ ಮೇಲೆ 307 ಸೇರಿದಂತೆ ಬೇರೆ ಪ್ರಕರಣಗಳು ಮೊದಲೆ ಇದ್ದು  ವಿವೇಕನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು ಕೊಲೆಪಾತಕಿಗಳನ್ನ ಹಿಡಿಯಲು ಪೊಲೀಸರು ಮುಂದಾಗಿದ್ದಾರೆ.

Read More

ಗದಗ: ಎತ್ತಿನ ಬಂಡಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ  ಗದಗ ಜಿಲ್ಲೆ ನರಗುಂದ ಪಟ್ಟಣದ ಹೊರವಲಯದಲ್ಲಿ ನಡೆದಿದ್ದು, ರೋಣ ತಾಲೂಕಿನ ಯಾವಗಲ್ ಗ್ರಾಮದ ರುದ್ರಗೌಡ ಪೊಲೀಸ್ ಪಾಟೀಲ್ (28) ಮೃತಪಟ್ಟವರು. ಕೆಲವು ಮಂದಿ ಎತ್ತಿನ ಗಾಡಿ ಮೂಲಕ ಸವದತ್ತಿ ಯಲ್ಲಮ್ಮ ದೇವರ ದರ್ಶನಕ್ಕೆ ಹೋಗುತ್ತಿದ್ದರು. https://ainlivenews.com/have-you-installed-pink-whatsapp-be-careful-its-dangerous/ ಆಗ ನರಗುಂದ ಪಟ್ಟಣದಿಂದ ಯಾವಗಲ್ ಗ್ರಾಮಕ್ಕೆ ಯುವಕನೊಬ್ಬ ಬೈಕ್‌ನಲ್ಲಿ ಹೋಗುತ್ತಿದ್ದ. ಈ ವೇಳೆ, ಬೈಕ್‌ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು: ಜಯದೇವ ಆಸ್ಪತ್ರೆ ನಿರ್ದೇಶಕರನ್ನಾಗಿ ಡಾ. ಮಂಜುನಾಥ್‍ರನ್ನು ಮುಂದುವರಿಸುವ ನಿರ್ಧಾರವನ್ನು ಸರ್ಕಾರ ಕೈ ಬಿಟ್ಟಿದೆ. ಜನವರಿ 31ಕ್ಕೆ ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಮಂಜುನಾಥ್ ಅವಧಿ ಮುಕ್ತಾಯವಾಗಲಿದೆ. ಕಳೆದ ಬಾರಿ ಅವಧಿ ಮುಕ್ತಾಯ ಬಳಿಕ ಜನರ ಒತ್ತಾಯ ಕೇಳಿ ಬಂದ ಹಿನ್ನೆಲೆ 6 ತಿಂಗಳ ಕಾಲ ಹುದ್ದೆಯಲ್ಲಿ ಸರ್ಕಾರ ಮುಂದುವರಿಸಿತ್ತು. ಎನ್‍ಎಂಸಿ ಆಕ್ಟ್ ಪ್ರಕಾರ 70 ವರ್ಷದವರೆಗೂ ಸೇವೆ ಸಲ್ಲಿಸಬಹುದಾಗಿದೆ. ಡಾ. ಮಂಜುನಾಥ್ ಅವರಿಗೆ 67 ವರ್ಷವಾಗಿದ್ದು, ಇನ್ನು 3 ವರ್ಷಗಳ ಕಾಲ ಸೇವೆ ಸಲ್ಲಿಸಬಹುದಾಗಿದೆ. ಆದರೆ ಸರ್ಕಾರ ಮುಂದುವರಿಸುವ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಜನವರಿ 31ಕ್ಕೆ ಡಾ. ಮಂಜುನಾಥ್ ನಿವೃತ್ತಿ ಘೋಷಣೆ ಮಾಡಲಿದ್ದಾರೆ. ಜಯದೇವ ಆಸ್ಪತ್ರೆ ನಿರ್ದೇಶಕರ ಹುದ್ದೆಗೆ ಪೈಪೆÇೀಟಿ ಆರಂಭವಾಗಿದ್ದು, 15ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಈ ನಡುವೆ ಮೈಸೂರು ಮೂಲದ ಸಿಎಂ ಆಪ್ತರಿಗೆ ನಿರ್ದೇಶಕರ ಹುದ್ದೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಅನ್ನೋ ಚರ್ಚೆ ಜೋರಾಗಿದೆ. ಚುನಾವಣೆಗೆ ಸ್ಪರ್ಧಿಸ್ತಾರೆ ಎಂಬ ಚರ್ಚೆ ಜೋರಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಾ.ಮಂಜುನಾಥ್…

Read More

ನಟಿ ಮೇಘಾ ಶೆಟ್ಟಿ (Megha Shetty) ಮತ್ತೆ ಗ್ಲ್ಯಾಮರಸ್ ಆಗಿ ಫೋಟೋಶೂಟ್‌ನಲ್ಲಿ ಮಿಂಚಿದ್ದಾರೆ. ನೀಲಿ ಬಣ್ಣದ ಉಡುಗೆಯಲ್ಲಿ ನಟಿ ಕಂಗೊಳಿಸಿದ್ದಾರೆ. ನಟಿಯ ಬೋಲ್ಡ್ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಕೈವಾ’ ನಟಿ ಮೇಘಾ, ನೀಲಿ ಬಣ್ಣದ ಡ್ರೆಸ್‌ನಲ್ಲಿ ಮುದ್ದಾಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ.  ಮೇಘಾ ಸೌಂದರ್ಯವನ್ನು ಹಾಲಿವುಡ್ ನಟಿಯರಿಗೆ ಹೋಲಿಸಿ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.  ಕಿರುತೆರೆಯ ಜನಪ್ರಿಯ ‘ಜೊತೆ ಜೊತೆಯಲಿ’ ಸೀರಿಯಲ್‌ನಲ್ಲಿ ನಾಯಕಿಯಾಗಿ ಅನು ಸಿರಿಮನೆ ಪಾತ್ರದ ಮೂಲಕ ಕನ್ನಡಿಗರಿಗೆ ಪರಿಚಿತರಾದರು.  ಅನಿರುದ್ಧಗೆ ಹೀರೋಯಿನ್‌ ಆಗಿ ಮೇಘಾ ಶೆಟ್ಟಿ ಮಿಂಚಿದ್ದರು. ಈ ಸೀರಿಯಲ್ ಪ್ರಸಾರವಾದ ಕೆಲವೇ ದಿನಗಳಲ್ಲಿ ಅನು ಪಾತ್ರಧಾರಿ ಮೇಘಾ ಕೂಡ ಹಿಟ್ ಆದರು.

Read More

ಚಿತ್ರದುರ್ಗ: ಕೆಪಿಸಿಸಿ ಕಾರ್ಯಧ್ಯಕ್ಷ ಬಿ.ಎನ್ ಚಂದ್ರಪ್ಪರನ್ನು ರೈತರು ತರಾಟಗೆ ತೆಗೆದುಕೊಂಡಿದ್ದಾರೆ. ಚಿತ್ರದುರ್ಗದಲ್ಲಿಂದು ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಕಾರ್ಯಾನುಷ್ಟಾನಕ್ಕೆ ಆಗ್ರಹಿಸಿ ಬಂದ್ ಗೆ ಕರೆ ನೀಡಿದ್ದು ರೈತರು ಹಾಗೂ ವಿವಿಧ ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸುತ್ತಿದರು ಪ್ರತಿಭಟನ ಸ್ಥಳಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಚಿತ್ರದುರ್ಗ ಮಾಜಿ ಸಂಸದ ಬಿ.ಎನ್ ಚಂದ್ರಪ್ಪ ಅವರು ಆಗಮಿಸಿ ಬಾಷಣ ಮಾಡಿತ್ತಿದ್ದು ಈ ವೇಳೆ ರೈತರು ಬಿ.ಎನ್ ಚಂದ್ರಪ್ಪ ಅವರನ್ನ ತರಾಟೆಗೆ ತೆಗೆದುಕೊಂಡ ಘಟನೆ ನಡಿದ್ದಾರೆ. ನೀವು ಸಂಸದರಾಗಿದ್ದಾಗ ಯಾಕೆ? ಭದ್ರಾ ಮೇಲ್ದಂಡೆ ಯೋಜನೆಗೆ ಕಾಮಗಾರಿ ವೇಗ ಮಾಡಿಲ್ಲ. ಹಾಗೂ ಯೋಜನೆ ಬಗ್ಗೆ ಗಮನ ಹರಿಸದ ನೀವು ಈಗ ಚುನಾವಣೆ ಹತ್ತಿರ ಬಂದಿದ್ದರಿಂದ ಗಿಮಿಕ್ ಗಾಗಿ ಇಲ್ಲಿ ಬಂದಿದ್ದೀರಿ ಎಂದು ರೈತರು ಬಿ.ಎನ್ ಚಂದ್ರಪ್ಪ ಅವರಿಗೆ ಕೇಳಿದರು. ನಿಮ್ಮ ರಾಜಕೀಯವನ್ನು ವಿಧಾನ ಸೌಧ, ಪಾರ್ಲಿಮೆಂಟ್ ನಲ್ಲಿ ಮಾತನಾಡಿ, ಇಲ್ಲಿ ಯಾಕೆ? ಬಂದಿದ್ದೀರಿ, https://ainlivenews.com/suffering-from-hair-loss-problem/ ಹಿಂದೆ ಸಂಸದರಾಗಿದ್ದಾಗಲೂ ಇದೇ ರೀತಿ ಹೇಳಿ ರೈತರನ್ನು ಗಡೆಗಣಿಸಿದ್ದು, ರೈತರ ಪೈಪುಗಳನ್ನು ಹಗರಣ…

Read More

ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಕ್ರಿಕೆಟ್‌ ಸರಣಿಯ ಮೊದಲ ಎರಡೂ ಪಂದ್ಯಗಳಿಂದ ವಿರಾಟ್‌ ಕೊಹ್ಲಿ ಹಿಂದೆ ಸರಿದಿದ್ದಾರೆ. ಸರಣಿಯಲ್ಲಿ 5-0 ಅಂತರದ ವೈಟ್‌ವಾಶ್‌ ಗೆಲುವನ್ನು ಎದುರು ನೋಡುತ್ತಿರುವ ಭಾರತ ತಂಡಕ್ಕೆ ಇದು ಬಹುದೊಡ್ಡ ಹಿನ್ನಡೆಯಾಗಿದೆ ಕೊಹ್ಲಿ ಅನುಪಸ್ಥಿತಿ ಉಳಿದ ಆಟಗಾರರಿಗೆ ಮಿಂಚಲು ಸಿಕ್ಕಿರುವ ದೊಡ್ಡ ಅವಕಾಶ ಎಂದು ಧನಾತ್ಮಕ ಮಾತುಗಳನ್ನು ಆಡಿದ್ದಾರೆ. ವೈಯಕ್ತಿಕ ಕಾರಣ ಕೊಟ್ಟು ಸರಣಿ ಆರಂಭಕ್ಕೆ ಕೆಲವೇ ದಿನಗಳಿರುವಾಗ ಮೊದಲ ಎರಡು ಪಂದ್ಯಗಳಿಂದ ವಿರಾಟ್‌ ಕೊಹ್ಲಿ ಹಿಂದೆ ಸರಿದಿದ್ದಾರೆ. ಅವರ ಈ ಕಾರಣಕ್ಕೆ ನೈಜ ಕಾರಣ ಏನೆಂಬುದು ಇನ್ನು ತಿಳಿದು ಬಂದಿಲ್ಲ. ಆದರೆ, ಕೊಹ್ಲಿ ತೆಗೆದುಕೊಂಡಿರುವ ಈ ನಿರ್ಧಾರವನ್ನು ಗೌರವಿಸಿ ಎಂದು ಅಭಿಮಾನಿಗಳಲ್ಲಿ ಮನತ್ತು ಮಾಧ್ಯಮದವರಲ್ಲಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಮನವಿ ಮಾಡಿದೆ. “ವಿರಾಟ್‌ ಕೊಹ್ಲಿ ಅವರಂತಹ ಗುಣಮಟ್ಟದ ಆಟಗಾರನ ಸೇವೆ ಇಲ್ಲದೇ ಹೋದಾಗ ಅದು ಯಾವುದೇ ತಂಡಕ್ಕೆ ದೊಡ್ಡ ಹಿನ್ನಡೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಆತ ಅದ್ಭುತ ಆಟಗಾರ. ಅವರ ಅಮೋಘ ದಾಖಲೆಗಳು ಎಲ್ಲವನ್ನೂ…

Read More