Author: AIN Author

ಅಯೋಧ್ಯೆ : ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮನ‌ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳ ನೇತೃತ್ವದಲ್ಲಿ ಇಂದಿನಿಂದ 48 ದಿನಗಳ ಮಂಡಲೋತ್ಸವ ಆರಂಭಗೊಂಡಿದೆ. ಪೇಜಾವರ ಶ್ರೀಗಳು ಮಂಗಳವಾರವೂ ವಿವಿಧ ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ, ಚಾಮರಸೇವೆ, ಮಹಾಮಂಗಳಾರತಿಗಳನ್ನು ನೆರವೇರಿಸಿ ಪೂಜೆ ಸಲ್ಲಿಸಿದರು. ಇದಕ್ಕೂ ಮೊದಲು ಪಿಲೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣಾಚಾರ್ಯ, ವಿಷ್ಣುಮೂರ್ತಿ ಆಚಾರ್ಯ , ಶಶಾಂಖ ಭಟ್ ಲಕ್ಷ್ಮೀನಾರಾಯಣ ಭಟ್ ಮೊದಲಸದವರ ನೇತೃತ್ವದಲ್ಲಿ ವಿವಿಧ ಹೋಮಹವನಾದಿಗಳು ಕಲಶಾರಾಧನೆ ಇತ್ಯಾದಿಗಳು ನೆರವೇರಿದವು. ಬಾಲರಾಮನಿಗೆ 16 ನಮೂನೆಗಳ ಪೂಜೆ ಬಾಲರಾಮನಿಗೆ ಒಟ್ಟು 16 ನಮೂನೆಗಳ ಪೂಜೆ ನಡೆಯಬೇಕು. ಇದರಲ್ಲಿ ಗೌರವಾರ್ಥವಾಗಿ ಪೇಜಾವರ ಮಠದ ಶ್ರೀಗಳು, ಅಯೋಧ್ಯೆಯ ಬಾಲರಾಮನಿಗೆ ಚಾಮರಸೇವೆ ಸಲ್ಲಿಸಿದರು. 48 ದಿನಗಳ ಕಾಲ ಪೇಜಾವರ ಶ್ರೀಗಳೇ ಅಯೋಧ್ಯೆಯ ಬಾಲರಾಮನಿಗೆ ಪ್ರತಿನಿತ್ಯ ಪೂಜೆ ಸಲ್ಲಿಸಲಿದ್ದಾರೆ. 2ನೇ ದಿನ ಪೇಜಾವರ ಶ್ರೀಗಳು ಬಾಲ ರಾಮನಿಗೆ ಪೂಜೆ ಸಲ್ಲಿಸಿದ ವಿಡಿಯೋ ಲಭ್ಯವಾಗಿವೆ.

Read More

ಕಾಬೂಲ್: ರಷ್ಯಾದ ಮಾಸ್ಕೋಗೆ ತೆರಳುತ್ತಿದ್ದ ಭಾರತೀಯ ಪ್ರಯಾಣಿಕ ವಿಮಾನವೊಂದು ಅಫ್ಘಾನಿಸ್ತಾನದ ಉತ್ತರ ಭಾಗದ ಬಡಾಖ್ಷಾನ್ ಪ್ರದೇಶದಲ್ಲಿ ಅಪಘಾತಕ್ಕೆ ಒಳಗಾಗಿದೆ ಎಂದು ಆಫ್ಘನ್ ಮಾಧ್ಯಮಗಳು ವರದಿ ಮಾಡಿವೆ. ಆದರೆ ಕೂಡಲೇ ಹೇಳಿಕೆ ಬಿಡುಗಡೆ ಮಾಡಿರುವ ನಾಗರಿಕ ವಿಮಾನಯಾನ ಸಚಿವಾಲಯ, ಇದು ಭಾರತಕ್ಕೆ ಸೇರಿದ ವಿಮಾನ ಅಲ್ಲ ಎಂದು ಸ್ಪಷ್ಟೀಕರಣ ನೀಡಿದೆ. “ಅಫ್ಘಾನಿಸ್ತಾನದಲ್ಲಿ ಈಗಷ್ಟೇ ಸಂಭವಿಸಿದ ದುರದೃಷ್ಟಕರ ವಿಮಾನ ಅಪಘಾತವು, ಭಾರತದ ಪ್ರಯಾಣಿಕ ವಿಮಾನವಲ್ಲ, ಹಾಗೆಯೇ ನಿಗದಿತವಲ್ಲದ (ಎನ್‌ಎಸ್‌ಒಪಿ)/ ಚಾರ್ಟರ್ಡ್ ವಿಮಾನ ಕೂಡ ಅಲ್ಲ. ಅದು ಮೊರೊಕ್ಕಾ ನೋಂದಾಯಿತ ಸಣ್ಣ ವಿಮಾನ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ” ಎಂದು ನಾಗರಿಕ ವಿಮಾನಯಾನ ಸಚಿವಾಲಯ ವಿವರಣೆ ಕೊಟ್ಟಿದೆ. ಬಡಾಖ್ಷಾನ್‌ನ ಕುರನ್- ಮುಂಜಾನ್ ಮತ್ತು ಜಿಬಾಕ್ ಜಿಲ್ಲೆಗಳ ನಡುವಿನ ತೋಪ್‌ಖಾನಾ ಎಂಬ ಪ್ರದೇಶದಲ್ಲಿನ ಪರ್ವತ ಭಾಗದಲ್ಲಿ ವಿಮಾನ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಇದು ಭಾರತದ ಪ್ರಯಾಣಿಕ ವಿಮಾನ ಎಂದು ಬಡಾಖ್ಷಾನ್‌ನ ಮಾಹಿತಿ ಹಾಗೂ ಸಂಸ್ಕೃತಿ ಇಲಾಖೆಯ ಮುಖ್ಯಸ್ಥ ಜಬೀಯುಲ್ಲಾ ಅಮಿರಿ ಹೇಳಿದ್ದಾಗಿ ಅಫ್ಘಾನಿಸ್ತಾನದ ಟೋಲೋ ನ್ಯೂಸ್ ವರದಿ…

Read More

ಬೆಂಗಳೂರು: 40 ಅಡಿಯ ರಾಮನ ಕಟೌಟ್ (Rama Cutout) ಧರೆಗುರುಳಿದ ಘಟನೆ ಬೆಂಗಳೂರಿನ ನಂದಿನಿ ಲೇ ಔಟ್ (Nandini Lay Out) ಕೃಷ್ಣಾನಂದ ನಗರ ಸರ್ಕಲ್ ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆ (Ayodhya Pran Prathistha ceremony) ಹಿನ್ನೆಲೆಯಲ್ಲಿ ರಾಮನ ಈ ಬೃಹತ್ ಕಟೌಟ್ ನಿಲ್ಲಿಸಲಾಗಿತ್ತು. ಆ ಬಳಿಕ ಬಿಬಿಎಂಪಿ ತೆರವು ಮಾಡಿರಲಿಲ್ಲ. ಅದೃಷ್ಟವಶಾತ್ ಕಟೌಟ್ ಬೀಳೋ ವೇಳೆ ಯಾವುದೇ ವಾಹನಗಳು ಸಂಚರಿಸಿಲ್ಲ. ಹೀಗಾಗಿ ಭಾರೀ ದುರಂತವೊಂದು ತಪ್ಪಿದೆ. ಮಾಹಿತಿ ಪಡೆದ ತಕ್ಷಣವೇ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಗಾಳಿಗೆ ಬಿದ್ದಿರೋ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ ಮೂರು ದಿನದಿಂದ ನಿಲ್ಲಿಸಿದ್ದ ಕಟೌಟ್ ಏಕಾಏಕಿ ಗಾಳಿಗೆ ಬಿದ್ದಿರುವುದರಿಂದ ಸ್ಥಳೀಯರಲ್ಲಿ ಅನುಮಾನ ಉಂಟಾಗಿದೆ. ಬೇಕುಂತಲೇ ಕಟೌಟ್ ಕಡೆವಿದ್ದಾರಾ ಅನ್ನೋ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳದಲ್ಲಿದ್ದ ಸಿಸಿ ಕ್ಯಾಮರಾಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಜೊತೆಗೆ ಕಟೌಟ್ ಹಾಕಿದ್ದವರು ಯಾರು?, ಕಟೌಟ್ ಹಾಕಲು ಅನುಮತಿ ಪಡೆದಿದ್ದರಾ…

Read More

ಬೆಂಗಳೂರು:- ಅಪಾರ್ಟ್‍ಮೆಂಟ್‍ನ 29ನೇ ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬೇಗೂರು ಬಳಿಯ ಅಪಾರ್ಟ್‍ಮೆಂಟ್ ಒಂದರಲ್ಲಿ ಜರುಗಿದೆ. ಅಪಾರ್ಟ್‍ಮೆಂಟ್‍ನಲ್ಲಿ ತಂದೆ – ತಾಯಿ ಜೊತೆ ವಾಸವಾಗಿದ್ದಳು. ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು ಎನ್ನಲಾಗಿದೆ. ಬಾಲಕಿಯ ತಂದೆ ಸಾಫ್ಟ್‌ವೇರ್‌ ಎಂಜಿನಿಯರ್, ತಾಯಿ ಗೃಹಿಣಿಯಾಗಿದ್ದಾರೆ. ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಾಲಕಿ ಮಂಗಳವಾರ ರಾತ್ರಿ ಮಲಗಿದ್ದ ವೇಳೆ, ಇದ್ದಕ್ಕಿದ್ದಂತೆ ಮುಂಜಾನೆ 4:30ಕ್ಕೆ ಎದ್ದು ಹಾಲ್‍ಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನು ಆಕೆಯ ತಾಯಿ ವಿಚಾರಿಸಿದಾಗ, ಸರಿಯಾಗಿ ಉತ್ತರಿಸದೆ ಮತ್ತೆ ಮಲಗುವುದಾಗಿ ರೂಮಿಗೆ ತೆರಳಿದ್ದಳು. ಸುಮಾರು 5 ಗಂಟೆ ವೇಳೆಗೆ ಬಾಲಕಿ ಅಪಾರ್ಟ್‍ಮೆಂಟ್ ಮೇಲಿನಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

Read More

ಬೆಳಗಾವಿ: ನನಗೆ ಸ್ಪರ್ಧೆ ಮಾಡುವಂತೆ ಹೈಕಮಾಂಡ್‌ನ ಯಾವ ನಾಯಕರೂ ಸೂಚಿಸಿಲ್ಲ. ಲೋಕಸಭಾ ಚುನಾವಣೆಗೆ ಸಚಿವರು ಸ್ಪರ್ಧಿಸುವುದು ಕಡ್ಡಾಯವಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತಮ್ಮ ಸ್ಪರ್ಧೆಗೆ ಹೈಕಮಾಂಡ್‌ನಿಂದ ಒತ್ತಡ ಬರುತ್ತಿರುವ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆಯಲ್ಲ ಎಂಬ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು. ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್‌ ಹೈಕಮಾಂಡ್‌ ನನಗೇನೂ ಸೂಚನೆ ನೀಡಿಲ್ಲ ಎಂದು ಹೇಳಿದರು. https://ainlivenews.com/do-you-sleep-less-than-6-hours-beware-of-this-deadly-disease/ ರಾಜ್ಯದಲ್ಲಿ 18 ಕ್ಷೇತ್ರಗಳ ಪೈಕಿ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧ್ಯವಿಲ್ಲ. ಕೆಲ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ವೀಕ್‌ ಇದೆ. 28ರ ಪೈಕಿ 20 ಕ್ಷೇತ್ರಗಳಲ್ಲಿ ನಾವು ಪ್ರಬಲರಾಗಿದ್ದೇವೆ. 8 ಕ್ಷೇತ್ರಗಳಲ್ಲಿ ವೀಕ್‌ ಇದ್ದೇವೆ. ತಮ್ಮ ಅಭ್ಯರ್ಥಿ ಗೆಲುವಿಗೆ ಎಲ್ಲ ಸಚಿವರೂ ಪ್ರಯತ್ನ ಮಾಡುತ್ತಾರೆ. ನಮ್ಮ ಸಚಿವರ ಪ್ರಯತ್ನದ ನಂತರವೂ ಕೆಲವೊಮ್ಮೆ ಫಲ ಸಿಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಸಚಿವರ ತಲೆದಂಡವಾಗುತ್ತದೆ ಎಂಬುದು ಶುದ್ಧ ಸುಳ್ಳು. ಈ ರೀತಿ ಹೈಕಮಾಂಡ್‌…

Read More

ಬೆಂಗಳೂರು:- ಅಮಾಯಕ ವ್ಯಕ್ತಿಯನ್ನು ಕಾಟನ್‍ಪೇಟೆ ಪೊಲೀಸರು ಠಾಣೆಗೆ ಕರೆದೊಯ್ಯದೇ ಲಾಡ್ಜ್ ಗೆ ಕರೆದೊಯ್ದು 3 ದಿನಗಳ ಕಾಲ ಅಕ್ರಮ ಬಂಧನದಲ್ಲಿಟ್ಟು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಸಬ್‍ಇನ್ಸ್ ಪೆಕ್ಟರ್ ಸಂತೋಷ್ ಗೌಡ, ಸಿಬ್ಬಂದಿ ಧ್ಯಾನ್ ಪ್ರಕಾಶ್ ಹಾಗೂ ಸಚಿನ್ ವಿರುದ್ಧ ವೆಂಕಟ್ ಎಂಬವರು ದೂರು ನೀಡಿದ್ದಾರೆ. ಜೊತೆಗೆ ಪೊಲೀಸ್ ಕಮಿಷನರ್ ಹಾಗೂ ಮಾನವಹಕ್ಕುಗಳ ಆಯೋಗಕ್ಕೂ ಕೋಣನಕುಂಟೆ ನಿವಾಸಿ ವೆಂಕಟ್ ದೂರು ನೀಡಿದ್ದಾರೆ. ಜನವರಿ 12 ರಂದು ಬೆಂಗಳೂರಿನಿಂದ ಮುಳಬಾಗಿಲಿಗೆ ವೆಂಕಟೇಶ್ ತೆರಳಿದ್ದರು. ಮುಳಬಾಗಿಲಿನ ಪಕ್ಕದ ತನ್ನ ಹುಟ್ಟೂರಾದ ಬೇವಳ್ಳಿಗೆ ತೆರಳಲು ಮಣಿ ಎಂಬಾತನಿಂದ ಡ್ರಾಪ್ ಪಡೆಯುತ್ತಿದ್ದರು. ಈ ಮಣಿ ಎಂಬಾತನ ವಿರುದ್ಧ ಕಾಟನ್ ಪೇಟೆ ಠಾಣೆಯಲ್ಲಿ 420 ಅಡಿ ಕೇಸ್ ದಾಖಲಾಗಿತ್ತು. ಮಣಿಯನ್ನ ಹುಡುಕಾಡ್ತಿದ್ದ ಕಾಟನ್ ಪೇಟೆ ಪೊಲೀಸರಿಗೆ ಮಣಿ ಲೊಕೇಷನ್ ಮುಳಬಾಗಿಲು ತೋರಿಸಿತ್ತು. ಪೊಲೀಸರು ಮುಳಬಾಗಿಲಿನ ಕೂತಂಡಹಳ್ಳಿ ಕೆರೆ ಬಳಿ ದಾಳಿ ಮಾಡಿ ಮಣಿ ಜೊತೆ ವೆಂಕಟ್ ರನ್ನು ಕರೆದೊಯ್ದಿದ್ರು. ಆದರೆ ಮಣಿ ಮೇಲಿದ್ದ ಕೇಸ್ ಗೂ…

Read More

ಮೈಸೂರು: ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಮುನ್ನ ಅರಣ್ಯ ಭೂಮಿಯಲ್ಲಿ ಮೂರು ಎಕರಿಗಿಂತ ಕಡಿಮೆ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಭರವಸೆ ನೀಡಿದ್ದರು. ಮೈಸೂರಿನ ಜಲ ದರ್ಶಿನಿ ಅತಿಥಿಗೃಹದಲ್ಲಿ ತಮ್ಮನ್ನು ಭೇಟಿ ಮಾಡಿದ್ದ ಅಖಂಡ ಕರ್ನಾಟಕ ರೈತ ಒಕ್ಕೂಟದ ಸದಸ್ಯರಿಂದ ಮನವಿ ಸ್ವೀಕರಿಸಿ ಮಾತಾಡಿದ ಅವರು, ಕೆಲವರು ಸ್ವಾರ್ಥಕ್ಕಾಗಿ ಹತ್ತಾರು ಎಕರೆ ಅರಣ್ಯ ಒತ್ತುವರಿ ಮಾಡಿದ್ದು ಅಂತಹವರ ವಿರುದ್ಧ ಕ್ರಮ ವಹಿಸಲಾಗುವುದು ಎಂದರು. https://ainlivenews.com/do-you-sleep-less-than-6-hours-beware-of-this-deadly-disease/ ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ.ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆ ಸರ್ಕಾರದ ಹೊಣೆಯಾಗಿದೆ‌. ಅರಣ್ಯ ಭೂಮಿ ಕ್ಷೀಣಿಸಿದರೆ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತದೆ ಹೀಗಾಗಿ ಅರಣ್ಯ ಸಂರಕ್ಷಣೆ ನಿಮ್ಮ ಕರ್ತವ್ಯವೂ ಆಗಿದೆ ಎಂದರು. ಶಾಸಕರಾದ ದರ್ಶನ್ ಧ್ರುವನಾರಾಯಣ್ ಉಪಸ್ಥಿತರಿದ್ದರು.

Read More

ಕಲಬುರ್ಗಿ:- ಕಲಬುರಗಿ ಹೊರವಲಯದ ಕೋಟನೂರ ಗ್ರಾಮದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಲಾಗಿತ್ತು. ಕಿಡಿಗೇಡಿಗಳು ಪುತ್ಥಳಿಗೆ ಚಪ್ಪಲಿ ಹಾರ ಹಾಕಿ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿದ್ದರು. ಇದೀಗ ಈ ಸ್ಥಳದಲ್ಲಿ ಸ್ಥಳಿಯರಿಗೆ ಚೀಟಿಯೊಂದು ಸಿಕ್ಕಿದೆ. ಚೀಟಿಯಲ್ಲಿ ಸ್ಥಳಿಯ 10 ಜನರ ಹೆಸರು ಬರೆಯಲಾಗಿದ್ದು, “ಇವರು ನನಗೆ ಹಣ ​ಕೊಡುವುದಾಗಿ ಹೇಳಿದ್ದರು. ಹಣದ ಆಸೆಗಾಗಿ ಈ ಕೃತ್ಯ ಎಸಗಿದ್ದೇವೆ” ಅಂತ ಬರೆಯಲಾಗಿದೆ. ಆದರೆ ಚೀಟಿ ಬರೆದಾತ ತನ್ನ ಹೆಸರನ್ನು ಗುಟ್ಟು ಬಿಟ್ಟುಕೊಟ್ಟಿಲ್ಲ. ಈ ಮೂಲಕ ತಮ್ಮ ಹಗೆತನಕ್ಕಾಗಿ ಅಂಬೇಡ್ಕರ ಅವರಿಗೆ ಅಪಮಾನ ಮಾಡುವಂತಹ ನೀಚ ಕೃತ್ಯಕ್ಕೆ ಕಿಡಿಗೇಡಿಗಳು ಇಳಿದರಾ? ಎಂಬ ಪ್ರಶ್ನೆ ಉದ್ಭವವಾಗಿದೆ. ಪ್ರಕರಣ ದಾಖಲಿಸಿಕೊಂಡ ಗುಲ್ಬರ್ಗಾ ವಿವಿ ಪೊಲೀಸರು ಚೀಟಿ ರಹಸ್ಯ ಬೆನ್ನು ಹತ್ತಿದ್ದಾರೆ. ಪೊಲೀಸರು‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ

Read More

ಬೆಂಗಳೂರು:- ನಗರದ ಕಾಟನ್ ಪೇಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಹೆಚ್ಚಿನ ಲಾಭ ಕೊಡುತ್ತೇವೆ ಎಂದು ಜನರಿಂದ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಿದ ಗ್ಯಾಂಗ್​ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಪ್ರತಾಪ್ ರೆಡ್ಡಿ, ಒಬಳೇಶ್, ಮಣಿ ಮತ್ತು ಗೋಪಿ ಬಂಧಿತ ಅರೋಪಿಗಳು ಎಂದು ಗುರುತಿಸಲಾಗಿದೆ. ಕೆ.ಆರ್.ಪುರದಲ್ಲಿ ಎಸ್​ಫೈಎಸ್ ಎಂಬ ಕಂಪನಿಯನ್ನು ಶುರುಮಾಡಿದ್ದರು. ನಮ್ಮ ಕಂಪನಿಯಲ್ಲಿ ಹೂಡಿಕೆ ಮಾಡಿದರೇ ಹೆಚ್ಚಿನ ಲಾಭ ದೊರೆಯುತ್ತದೆ ಎಂದು ನಂಬಿಸಿ ಆಂಧ್ರ ಪ್ರದೇಶ ಮತ್ತು ಕರ್ನಾಟಕದ ಜನರಿಂದ ಹಣ ಪೀಕಿದ್ದರು. ಒಂದು ಲಕ್ಷ ಹೂಡಿಕೆ ಮಾಡಿದರೇ ತಿಂಗಳಿಗೆ 19 ಪರ್ಸೆಂಟ್ ಲಾಭ ಕೊಡುವುದಾಗಿ ನಂಬಿಸಿದ್ದರು. ಅದರಂತೆ ಪ್ರಾರಂಭದಲ್ಲಿ ಹಣ ವಾಪಸ್ಸು ಕೊಟ್ಟಿದ್ದಾರೆ. ನಂತರ ಹಣವನ್ನು ಕೊಡದೆ, ನಿಮ್ಮ ಹಣವನ್ನು ಹರಿಯಾಣದಲ್ಲಿ ಹೂಡಿಕೆ ಮಾಡಿದ್ದೇವೆ, ಅಲ್ಲಿ ಲಾಭ ಬಂದಮೇಲೆ ಕೊಡುವುದಾಗಿ ಹೂಡಿಕೆದಾರರಿಗೆ ಹೇಳಿದ್ದರು. ಆದರೆ ಸುಮಾರು ದಿನಗಳು ಕಾಯ್ದರು ಹಣ ನೀಡಲಿಲ್ಲ. ಇದರಿಂದ ರೋಸಿಹೋದ ಆಂಧ್ರ ಪ್ರದೇಶ ಮೂಲದ ಹೂಡಿಕೆದಾರ ಸಂದಡಿ ನರಸಿಮ್ಮ ರೆಡ್ಡಿ ಎಂಬುವವರು ಕಾಟನ್ ಪೇಟೆಗೆ ಪೊಲೀಸ್ ಠಾಣೆಗೆ…

Read More

ಧಾರವಾಡ: ಕಾರ್ಮಿಕ ಇಲಾಖೆಯಲ್ಲಿ ಸುಮಾರು ಎರಡೂವರೆ ಲಕ್ಷ ಬೋಗಸ್ ಕಾರ್ಡ್‌ಗಳನ್ನು ಕೂಡಲೇ ರದ್ದು ಪಡಿಸುವಂತೆ ಅಧಿಕಾರಿಗಳಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚನೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಕಾರ್ಮಿಕರಿಗೆ 46 ಲಕ್ಷ ಕಾರ್ಡ್‌ ನೀಡಲಾಗಿದೆ.  ಅದರಲ್ಲಿ 2.5 ಲಕ್ಷ ಬೋಗಸ್‌ ಎಂದು ತಿಳಿದುಬಂದಿದೆ. ಹಾಗಾಗಿ ಬೋಗಸ್‌ ಕಾರ್ಡ್‌ಗಳನ್ನು ರದ್ದು ಮಾಡಿ ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು. ರಾಜ್ಯದ ಎಲ್ಲಾ ತಾಲೂಕುಗಳಿಂದ 2 ರಿಂದ 3 ಲಕ್ಷ ಸದಸ್ಯರು ನೋಂದಣಿ ಆಗಿದ್ದಾರೆ. ಆದರೆ ಅಷ್ಟು ಜನರಲ್ಲಿ ಕೇವಲ 30 ಸಾವಿರ ಸದಸ್ಯರಿಗೆ ಮಾತ್ರ ಗ್ರಾಚ್ಯುಟಿ ಬಗ್ಗೆ ತಿಳುವಳಿಕೆ ಇದೆ. ಉಳಿದವರಿಗೆ ಯಾಕೆ ಮಾಹಿತಿ ಇಲ್ಲ ಎಂದು ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರಲ್ಲದೇ, 46 ಲಕ್ಷ ಕಾರ್ಮಿಕರ ಬಗ್ಗೆ ಯಾರು ಹೊಣೆಗಾರರಾಗುತ್ತೀರಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. https://ainlivenews.com/do-you-sleep-less-than-6-hours-beware-of-this-deadly-disease/ ಇಡೀ ದೇಶದ ಸಾಲದ ಬಗ್ಗೆ ಕೇಂದ್ರ ಸರ್ಕಾರ ಮೊದಲು ಶ್ವೇತಪತ್ರ ಹೊರಡಿಸಲಿ. 2014ರ ವರೆಗೆ ಎಷ್ಟು ಸಾಲವಿತ್ತು. ಇವರು ಅಧಿಕಾರಕ್ಕೆ ಬಂದ ಮೇಲಿಂದ ಎಷ್ಟು…

Read More