Author: AIN Author

ಬೆಂಗಳೂರು: ರಾಮಜನ್ಮ ಭೂಮಿ ಹೋರಾಟದಲ್ಲಿ ರಾಜ್ಯದ ಪಾತ್ರ ದೊಡ್ಡದಿದ್ದು, ಆಂಜನೇಯನ ಜನ್ಮಭೂಮಿ ಅಭಿವೃದ್ಧಿಪಡಿಸುವುದು ನಮ್ಮ ಮುಂದಿನ ಗುರಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಬೆಂಗಳೂರಿನ ಬಾಲಬ್ರೂಹಿ ಅತಿಥಿ ಗೃಹದ ಬಳಿ ಇರುವ ಮಾರುತಿ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಸುದ್ದಿಗಾರರ ಜತೆ ಮಾತನಾಡಿದರು. https://ainlivenews.com/siddaramaiah-himself-lord-rama-can-forgive-you-not-rama-devotees-bjp-spark/ ಭಾರತದ ಇತಿಹಾಸದಲ್ಲಿ ಮಹತ್ವದ ಭಕ್ತಿ ಭಾವದ ದಿನ, ಐತಿಹಾಸಿಕ ದಿನ. ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ದಿನ ಎಂದರು. ರಾಮನಿಗೂ ರಾಜ್ಯಕ್ಕೂ ದೊಡ್ಡ ನಂಟಿದೆ. ಆಂಜನೇಯ ಜನ್ಮಸ್ಥಳ ಅಂಜನಾದ್ರಿ ಕರ್ನಾಟಕದಲ್ಲೇ ಇದೆ. ಆಂಜನೇಯ ಇದ್ದರೆ ರಾಮ ಪರಿಪೂರ್ಣ. ಮುಂದಿನ ನಮ್ಮ ಗುರಿ ಆಂಜನೇಯ ಜನ್ಮ ಭೂಮಿ ಅಭಿವೃದ್ಧಿ ಮಾಡುವುದಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಆಂಜನೇಯ ಕ್ಷೇತ್ರ ಅಭಿವೃದ್ಧಿ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನೆನಪಿಡಿ.. ಪ್ರಭು ಶ್ರೀರಾಮ ನಿಮ್ಮನ್ನು ಕ್ಷಮಿಸಬಹುದು. ಆದರೆ, ರಾಮಭಕ್ತರಲ್ಲ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಕಾಂಗ್ರೆಸ್‌ನವರಿಗೆ ಪ್ರಭು ಶ್ರೀರಾಮನನ್ನು ನೆನದರೆ ಯಾಕಿಷ್ಟು ದ್ವೇಷ ಎನ್ನುವುದು ಯಕ್ಷಪ್ರಶ್ನೆ ಎಂದು ಕುಟುಕಿದೆ. ಇಡೀ ವಿಶ್ವವೇ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ಧನ್ಯವಾಗಿದೆ, ಸಂಭ್ರಮಿಸಿದೆ, ದೇವಲೋಕವನ್ನೇ ಧರೆಗಿಳಿಸಿದೆ. ಆದರೆ, ತುಘಲಕ್‌ ಸರ್ಕಾರ ಸಿಎಂ ತವರೂರಲ್ಲಿ ಮಾತ್ರ ಶ್ರೀರಾಮನ ಸಂಭ್ರಮಾಚರಣೆಗೆ ನಿರ್ಬಂಧ ಹೇರಿ ಆಷಾಢಭೂತಿತನವನ್ನು ತೋರಿಸಿದೆ ಎಂದು ಛೇಡಿಸಿದೆ. 24 ದಿನ ಉರಿಯಬೇಕಿದ್ದ ಅಗರಬತ್ತಿಯನ್ನು ಕೇವಲ ಎರಡು ತಾಸಿಗೆ ನಂದಿಸಲಾಗಿದೆ. ಈ ಮೂಲಕ ಶ್ರೀರಾಮನಿಗೆ, ರಾಮಭಕ್ತರಿಗೆ ಅಪಮಾನ ಮಾಡಿ ತನ್ನ ಘನತೆಯನ್ನು ಕಾಂಗ್ರೆಸ್ ಸರ್ಕಾರ ಕಳೆದುಕೊಂಡಿದೆ ಎಂದು ಬಿಜೆಪಿ ಚಾಟಿ ಬೀಸಿದೆ.

Read More

ಬೆಂಗಳೂರು: ಹಿರೇಮಗಳೂರಿನ ಅರ್ಚಕರಿಗೆ ವೇತನ ತಡೆ ಹಿಡಿದು ನೋಟಿಸ್ ಕೊಟ್ಟ ವಿಚಾರಕ್ಕೆ  ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಬಳ ವಾಪಸ್ ಕೇಳಿ ನೋಟಿಸ್ ನೀಡಿರುವ ವಿಚಾರದಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಹಿರೇಮಗಳೂರು ಕಣ್ಣನ್ (Hiremagaluru Kannan) ತಪ್ಪಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಸ್ಪಷ್ಟನೆ ನೀಡಿದ್ದಾರೆ. ಹಾಗೆ ಪ್ರತಿವರ್ಷ ದೇವಸ್ಥಾನಕ್ಕೆ ತಸ್ತಿಕ್ ಹಣ ಅಂತ ಕೊಡ್ತಾರೆ. ಮುಜರಾಯಿ ದೇವಸ್ಥಾನಗಳಿಗೆ ಈ ಹಣ ಕೊಡ್ತಾರೆ. 2013 ರಲ್ಲಿ 24 ಸಾವಿರ ತಸ್ತಿಕ್ ಹಣ ಇತ್ತು, ತಹಶೀಲ್ದಾರ್ 24 ಸಾವಿರ ಕೊಡುವ ಬದಲು 90 ಸಾವಿರ ಹಣ ನೀಡಿದ್ದಾರೆ. ತಹಶೀಲ್ದಾರ್ ತಪ್ಪು ಇದು.. ಕಣ್ಣನ್ ಅವ್ರ ತಪ್ಪಲ್ಲ ಎಂದು ಹೇಳಿದರು. ತಹಶೀಲ್ದಾರ್ ಬಳಿಯೇ ಹಣ ಪಡೆಯುತ್ತೇವೆ. ಕಣ್ಣನ್ ಅವರ ಬಳಿ ಹಣ ಕೇಳಲ್ಲ. ನಾನು ಆಯುಕ್ತರ ಜೊತೆ ಈ ಬಗ್ಗೆ ಮಾತನಾಡ್ತೇನೆ. ತಲೆ ಸರಿಯಿಲ್ಲದವರು ಈ ಬಗ್ಗೆ ಇಲ್ಲಸಲ್ಲದ ವಿಚಾರಗಳನ್ನ ಹೇಳ್ತಿದ್ದಾರೆ. 10 ವರ್ಷದ ಹಣವನ್ನ…

Read More

ಬೆಂಗಳೂರು:  ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಹೈಕಮಾಂಡ್‌ ನಮ್ಮ ನಿರ್ಧಾರಗಳನ್ನ ತೆಗೆದುಕೊಂಡಿಲ್ಲ ಹಾಗೆ   ನಮ್ಮ ಅಭಿಪ್ರಾಯ ತೆಗೆದುಕೊಂಡು ಮಾಡದಿರುವುದಕ್ಕೆ ನಿಗಮ ಮಂಡಳಿ (Corporation Board) ನೇಮಕ ಇಷ್ಟು ಗೊಂದಲ ಆಗ್ತಿದೆ ಅಂತ ಗೃಹ ಸಚಿವ ಪರಮೇಶ್ವರ್ (G Parameshwara), ಹೈಕಮಾಂಡ್ ವಿರುದ್ಧವೇ ಅಸಮಾಧಾನ ಹೊರ ಹಾಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಿಗಮ ಮಂಡಳಿ ನೇಮಕಾತಿಗೆ ನಮ್ಮ ಅಭಿಪ್ರಾಯವನ್ನೂ ಪಡೆಯಬೇಕು. ಆದ್ರೆ ನಮ್ಮನ್ನ ಯಾರೂ ಕೇಳಿಲ್ಲ. ಒಂದೆರಡು ಹೆಸರು ಕೊಡಿ ಅಂದಾಗ ಕೊಟ್ಟಿರಬಹುದು. ಆದರೆ ನಮ್ಮ ಜತೆ ಮಾತನಾಡಿ ಪಟ್ಟಿ ಮಾಡಿಲ್ಲ ಅಂತ ಬೇಸರ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರು ಯಾರ‍್ಯಾರು ಕೆಲಸ ಮಾಡಿದ್ದಾರೆ ಅಂತ ನನಗೆ ಗೊತ್ತಿದೆ. ಹತ್ತಾರು ವರ್ಷಗಳ ಕಾಲ ಪಕ್ಷಕ್ಕೆ ದುಡಿದಿದ್ದಾರೆ. ಅವರಿಗೆ ಅಧಿಕಾರ ಕೊಡಬೇಕು. ನಮ್ಮ ಅಭಿಪ್ರಾಯ ಪಡೆಯದೇ ಇರೋದಕ್ಕೆ ಹೀಗೆ ಆಗಿದೆ. ಕೆಲಸ ಮಾಡೋರಿಗೆ ಕೊಡದೇ ಹೋದ್ರೆ, ಕೆಲಸ ಮಾಡಿರೋರಿಗೆ ನೋವಾಗುತ್ತದೆ. ಅಸಮಾಧಾನ ಆಗುತ್ತದೆ, ಹೀಗಾಗಿ ಮುಖಂಡರು, ಜಿಲ್ಲಾ ಅಧ್ಯಕ್ಷರನ್ನ ಕೇಳಬೇಕಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

Read More

ಬೆಂಗಳೂರು: ಬೆಂಗಳೂರಲ್ಲಿ ವರದಕ್ಷಿಣೆ ಕಾಟಕ್ಕೆ ಗೃಹಿಣಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ರಂಜಿತಾ (29) ಮೃತ ದುರ್ದೈವಿ. ದೊಡ್ಡ ಬಸ್ತಿ ರಸ್ತೆ ಬಳಿಯ ಬಸವೇಶ್ವರನಗರದ ಮನೆಯಲ್ಲಿ ಘಟನೆ ನಡೆದಿದೆ. ರಂಜಿತಾ ಮಧು ಎಂಬುವವರ ಜತೆ ವಿವಾಹವಾಗಿದ್ದರು. ಮೊದಮೊದಲು ಇವರಿಬ್ಬರು ಅನ್ಯೋನ್ಯವಾಗಿದ್ದರು. ಆದರೆ ದಿನ ಕಳೆದಂತೆ ಪತಿ ಮಧು ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ. ವರದಕ್ಷಿಣೆ ಜತೆಗೆ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದ ಬಗ್ಗೆ ಪೋಷಕರೊಟ್ಟಿಗೆ ಆಗಾಗ ರಂಜಿತಾ ಹೇಳಿಕೊಳ್ಳುತ್ತಿದ್ದಳು. ಪತಿ ಮಧು ಮನೆಯಲ್ಲಿ ಇರುವಾಗಲೇ ಈ ಘಟನೆ ನಡೆದಿದೆ. ಆತನೇ ಹತ್ಯೆ ಮಾಡಿ ನಂತರ ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದಾನೆ ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ. ರಂಜಿತಾ ಇಎಸ್‌ಎಸ್ ಶಾಲೆಯಲ್ಲಿ ಟೀಚರ್ ಆಗಿ ಕೆಲಸ ಮಾಡುತ್ತಿದ್ದಳು.ಸದ್ಯ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ದೂರು ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ವಿಜಯೇಂದ್ರ‌ ವಾಗ್ದಾಳಿ ನಡೆಸಿದ್ದಾರೆ. ಹಿರೆಮಗಳೂರು ಕಣ್ಣನ್ ಗೆ ನೋಟೀಸ್ ನೀಡಿದ್ದಕ್ಕೆ ವಿಜಯೇಂದ್ರ‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತ ತುಘಲಕ್ ಹಾದಿಯಲ್ಲಿ ನಡೆದಿದೆ, ಹಿಂದೂ ಧರ್ಮಿಯರ ಧಾರ್ಮಿಕ ಕ್ಷೇತ್ರದಲ್ಲಿಯೂ ಆದಾಯ ಗಳಿಕೆಯನ್ನು ಮಾನದಂಡವನ್ನಾಗಿಸಿಕೊಂಡು ಹಿರೇಮಗಳೂರು ಕಣ್ಣನ್ ಅವರಂತಹ ನಾಡಿನ ಶ್ರೇಷ್ಠ ಕನ್ನಡ ವಿದ್ವಾಂಸ ಹಾಗೂ ಆಧ್ಯಾತ್ಮಿಕ ಮಾರ್ಗದರ್ಶಕರಿಗೆ ನೋಟಿಸ್ ನೀಡಿರುವ ಕ್ರಮ ಅತ್ಯಂತ ಹಾಸ್ಯಾಸ್ಪದ ಹಾಗೂ ಖಂಡನೀಯ ಎಂದಿದ್ದಾರೆ. https://x.com/BYVijayendra/status/1749706120757973228?t=yU6_emQXHokafBGTOWRPfw&s=08 ಹಿಂದೂ ಆಚಾರ-ವಿಚಾರ ಹಾಗೂ ಧಾರ್ಮಿಕ ಕೇಂದ್ರಗಳನ್ನೇ ಗುರಿಯನ್ನಾಗಿಸಿಕೊಂಡು ಕಾಂಗ್ರೆಸ್ ಸರ್ಕಾರ ಆಗಾಗ ಸರಣೀ ರೂಪದಲ್ಲಿ ಜನರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಧರ್ಮನಿಷ್ಠರ ಸಹನೆಯನ್ನು ಕೆಣಕುವಂತಿದೆ. ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿರುವ ನೋಟಿಸ್ ಅನ್ನು ಈ ಕೂಡಲೇ ಬೇಷರತ್ ಕ್ಷಮೆ ಯಾಚಿಸಿ ಸರ್ಕಾರ ವಾಪಸ್ ಪಡೆಯಬೇಕು, ಇಂಥಾ ಅಸಂಬದ್ಧ ನೋಟಿಸ್ ನೀಡಿದ ಅವಿವೇಕಿ ಅಧಿಕಾರಿಯನ್ನು ಕೂಡಲೇ ಅಮಾನತ್ತಿನಲ್ಲಿಡಲಿ ಎಂದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ…

Read More

ಅಯೋಧ್ಯೆ: ಇಲ್ಲಿನ ಬೀದಿಗಳಲ್ಲಿ ಇನ್ಮುಂದೆ ಬಂದೂಕು ಸದ್ದು ಮಾಡುವುದಿಲ್ಲ, ಕರ್ಫ್ಯೂ ಇರುವುದಿಲ್ಲ. ಇಲ್ಲಿ ಯಾವಾಗಲೂ ದೀಪೋತ್ಸವ ಮತ್ತು ರಾಮೋತ್ಸವ ನಡೆಯುತ್ತದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಮಾತಾಡಿದ ಅವರು, ಎಲ್ಲಿ ನಾವು ಮಂದಿರ ನಿರ್ಮಿಸಲು ಪಣ ತೊಟ್ಟಿದ್ದೆವೋ, ಅಲ್ಲಿಯೇ ಅದನ್ನು ನಿರ್ಮಿಸಲಾಗಿದೆ. ಇಲ್ಲಿ ಬಾಲರಾಮ ಪ್ರತಿಷ್ಠಾಪನೆಯು ರಾಮ ರಾಜ್ಯದ ಗುರುತಾಗಿದ್ದು, ಶ್ರೀರಾಮನ ನಾಮಸ್ಮರಣೆಯೇ ಸದಾ ಇಲ್ಲಿ ಮೊಳಗಲಿದೆ ಎಂದು ಅವರು ಹೇಳಿದ್ದಾರೆ. 500 ವರ್ಷಗಳ ಸುದೀರ್ಘವಾಗಿ ಕಾದು ಇಂದು ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಯಾಗಿದೆ. ಇದೊಂದು ದೇಶದ ಭಾವನಾತ್ಮಕ ಘಳಿಗೆಯಾಗಿದೆ. ಈ ಬಗ್ಗೆ ನನಗೆ ಮಾತಾಡಲು ಪದಗಳೇ ಸಿಗುತ್ತಿಲ್ಲ. ಪ್ರತಿಯೊಬ್ಬರೂ ಭಾವುಕರಾಗಿದ್ದು, https://ainlivenews.com/do-you-know-how-much-ambani-family-donated-to-ayodhya-ram-mandir/ ಎಲ್ಲರೂ ಸಂತುಷ್ಟರಾಗಿದ್ದಾರೆ. ಈ ದಿನ ದೇಶದ ಪ್ರತಿ ನಗರ ಮತ್ತು ಹಳ್ಳಿಯೂ ಅಯೋಧ್ಯೆಯಾಗಿ ಬದಲಾಗಿದೆ ಎಂದಿದ್ದಾರೆ. ಇದೇ ವೇಳೆ ಅವರು ಬಾಬ್ರಿ ಮಸೀದಿ ಇದ್ದ ವಿವಾದಿತ ಸ್ಥಳದಲ್ಲಿ ದೇವಸ್ಥಾನ ನಿರ್ಮಿಸಲು ಈ ಹಿಂದೆ ನಡೆದ ಹೋರಾಟಗಳಲ್ಲಿ ಬಳಕೆಯಾದ ಮಂದಿರ್ ವಹಿ…

Read More

ಬೆಂಗಳೂರು : ಜನವರಿ 29 ರಿಂದ 31 ರವರೆಗೆ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ನಡೆಯಲಿರುವ ಅನಿಮೇಷನ್‌, ವಿಷುವಲ್‌ ಎಫೆಕ್ಟ್ಸ್‌ ಮತ್ತು ಗೇಮಿಂಗ್‌ ಸಮ್ಮೇಳನ-GAFXದ ಕುರಿತು ಐಟಿ-ಬಿಟಿ ಸಚಿವ ಪ್ರಿಯಾಂಕ ಖರ್ಗೆ ಹಾಗೂ ಐಟಿ-ಬಿಟಿ ಇಲಾಖೆ ಕಾರ್ಯದರ್ಶಿ ಏಕ್‌ರೂಪ್‌ ಕೌರ್‌ ಅವರು ಘೊಷಣೆ ಮಾಡಿದರು. ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ (ಎವಿಜಿಸಿ) ಉದ್ಯಮದಲ್ಲಿ ಜಾಗತಿಕವಾಗಿ ಪ್ರಸಿದ್ಧವಾದ ಸಮ್ಮೇಳನಗಳಲ್ಲಿ GAFX ಕೂಡ ಒಂದಾಗಿದ್ದು, ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಮತ್ತು ಶ್ರೀ ಪ್ರಿಯಾಂಕ್ ಎಂ ಖರ್ಗೆ ಅವರ ನೇತೃತ್ವದಲ್ಲಿ 2016 ರಿಂದ ಈ ಸಮ್ಮೇಳನವನ್ನು ಪ್ರಾರಂಭಿಸಲಾಯಿತು. . 2012 ರಲ್ಲಿ AVGC ನೀತಿಯನ್ನು ಪ್ರಾರಂಭಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ. ನಂತದಲ್ಲಿ ಈ ವಲಯವನ್ನು ಇನ್ನಷ್ಟು ಉತ್ತೇಜನ ನೀಡಲು ಸಾಕಷ್ಟು ನೀತಿಗಳನ್ನು ಸಹ ಜಾರಿಗೆ ತರಲಾಯಿತು. AVGC ಯಲ್ಲಿನ ದೇಶೀಯ ಮತ್ತು ಜಾಗತಿಕ ಅಗತ್ಯವನ್ನು ಪರಿಹರಿಸುತ್ತದೆ. ಇಂದು ಕರ್ನಾಟಕವು ಭಾರತೀಯ ಮಾಧ್ಯಮ ಮತ್ತು ಮನರಂಜನಾ ಉದ್ಯಮದಲ್ಲಿ ಪ್ರಬಲವಾದ ಶೇ. 20ರಷ್ಟು ಪಾಲನ್ನು…

Read More

ಸೋಮವಾರ ಅಯೋಧ್ಯಯಲ್ಲಿ ನಡೆದ ರಾಮನ ಪ್ರಾಣ ಪತ್ರಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ದೇಶದ ನಾನಾ ಭಾಗಗಳಲ್ಲಿ ಕಲಾವಿದರು, ಗಣ್ಯರು ಆಗಮಿಸಿದ್ದರು. ನಾನಾ ಸಿನಿಮಾ ರಂಗದ ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಿದ್ದರು. ಇವರೆಲ್ಲರ ಪೈಕಿ ಬಾಲಿವುಡ್ ನಟಿ ಆಲಿಯಾ ಭಟ್ (Alia Bhatt) ಸಖತ್ ವೈರಲ್ ಆಗಿದ್ದಾರೆ. ಅವರ ಧರಿಸಿದ್ದ ಸೀರೆ ಈಗ ರಾಮನ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಲು ಅಯೋಧ್ಯಗೆ ಬಂದಿದ್ದ ಆಲಿಯಾ ಭಟ್, ಹನುಮಾನ್, ಭಗವಾನ್ ರಾಮ ಹಾಗೂ ರಾಮಸೇತು ಚಿತ್ರಗಳನ್ನು ಇರುವಂತಹ ಸೀರೆಯನ್ನು ಅವರು ಧರಿಸಿದ್ದರು. ಈ ಸೀರೆ ಈಗ ರಾಮನ ಅಭಿಮಾನಿಗಳನ್ನು ಸೆಳೆದಿದೆ. ಆಲಿಯಾ ಭಟ್ ಅವರ ರಾಮನ ಬಗೆಗಿನ ಭಕ್ತಿಯನ್ನು ಎಲ್ಲರೂ ಕೊಂಡಾಡಿದ್ದಾರೆ. ಒಂದು ಕಡೆ ಆಲಿಯಾ ವೈರಲ್ ಆಗುತ್ತಿದ್ದರೆ, ಮತ್ತೊಂದು ಕಡೆ ಕನ್ನಡದಿಂದ ಹೋಗಿದ್ದ ರಿಷಬ್ ಶೆಟ್ಟಿ ಮತ್ತು ಪತ್ನಿ ಫೋಟೋಗಳನ್ನು ಅವರ ಅಭಿಮಾನಿಗಳು ಹಂಚಿಕೊಂಡಿದ್ದಾರೆ. ರಿಷಬ್ ಶೆಟ್ಟಿ (Rishab Shetty) ಅವರು ನಿನ್ನೆ ನಡೆದ (ಜ.22) ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪತ್ನಿ…

Read More

ಸ್ಯಾಂಡಲ್‌ವುಡ್ ಸ್ಟಾರ್ ನಟಿ ಆಶಿಕಾ ರಂಗನಾಥ್ (Ashika Ranganath) ಸಹೋದರಿ ಅನುಷಾ (Anusha) ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶ್ರವಣ್ (Shravan) ಜೊತೆ ಅನುಷಾ ರಂಗನಾಥ್ ಇಂದು ಮದುವೆಯಾಗಿದ್ದಾರೆ. ‘ಗೋಕುಲದಲ್ಲಿ ಸೀತೆ’ ಸೀರಿಯಲ್ ಖ್ಯಾತಿಯ ಅನುಷಾ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಖಾಸಗಿ ರೆಸಾರ್ಟ್‌ವೊಂದರಲ್ಲಿ ಇಂದು (ಜ.22) ಅನುಷಾ- ಶ್ರವಣ್ ಮದುವೆ ಅದ್ಧೂರಿಯಾಗಿ ನಡೆದಿದೆ. ವರ ಶ್ರವಣ್ ಹಿನ್ನೆಲೆ ಬಗ್ಗೆ ಮಾಹಿತಿ ರಿವೀಲ್ ಆಗಿಲ್ಲ ಆಶಿಕಾ ಸಹೋದರಿ ಅನುಷಾ ಮದುವೆಯಲ್ಲಿ ‘ದಿಯಾ’ ಖ್ಯಾತಿಯ ಖುಷಿ ರವಿ (Kushee Ravi), ಸಿರಿ, ತಪಸ್ವಿನಿ ಪೂಣಚ್ಚ,’ಲವ್‌ ಮಾಕ್ಟೈಲ್‌ 2′ ನಟಿ ಸುಶ್ಮಿತಾ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಕಳೆದ ವಾರ ಅನುಷಾ ಅವರ ಬ್ರೈಡಲ್ ಪಾರ್ಟಿ ಗ್ರ್ಯಾಂಡ್ ಆಗಿ ನೆರವೇರಿತ್ತು. ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ’, ’10’, ‘ಕೌರವ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅನುಷಾ ನಟಿಸಿದ್ದಾರೆ. ಆದರೆ ಚುಟು ಚುಟು ಬೆಡಗಿ ಆಶಿಕಾರಂತೆ ಅನುಷಾಗೆ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಅವಕಾಶ ಸಿಗಲಿಲ್ಲ. ಸದ್ಯ ದಾಂಪತ್ಯ…

Read More