Author: AIN Author

‘ಕಾಂತಾರ’ (Kantara) ಸಿನಿಮಾ ಮೂಲಕ ಕರ್ನಾಟಕದ ತುಳುನಾಡ ದೈವದ ಕಥೆಯನ್ನು ಇಡೀ ದೇಶಕ್ಕೆ ತಲುಪಿಸಿದ ರಿಷಬ್ ಶೆಟ್ಟಿ (Rishab Shetty) ಅವರು  (ಜ.22) ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪತ್ನಿ ಪ್ರಗತಿ ಜೊತೆ ಭಾಗಿಯಾಗಿದ್ದಾರೆ. ಈ ಕುರಿತ ಸುಂದರ ಫೋಟೋವನ್ನು ರಿಷಬ್ ಹಂಚಿಕೊಂಡಿದ್ದಾರೆ.‌ 500 ವರ್ಷಗಳ ನಂತರ ಎಲ್ಲರ ಕನಸು ನನಸಾಗಿದೆ. ಇಂದು ಅಯೋಧ್ಯೆಯ (Ayodhya) ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ. ಈ ಸಂಭ್ರಮದಲ್ಲಿ ಭಾಗಿಯಾಗಿರೋದಕ್ಕೆ ರಿಷಬ್ ಫೋಟೋ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಶ್ರೀರಾಮಚಂದ್ರನ ಜನ್ಮಸ್ಥಳದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಂಭ್ರಮದಲ್ಲಿ ಎಂದು ಶೀರ್ಷಿಕೆ ಕೊಟ್ಟು ರಾಮಮಂದಿರದ ಮುಂದೆ ನಿಂತು ಪತ್ನಿ ಪ್ರಗತಿ ಜೊತೆ ರಿಷಬ್ ಶೆಟ್ಟಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ವೇಳೆ, ರಿಷಬ್ ದಂಪತಿ ಬಾಲಿವುಡ್ ನಟ ಅನುಪಮ್ ಖೇರ್ ಅವರನ್ನು ಕೂಡ ಭೇಟಿಯಾಗಿದ್ದಾರೆ. ಅಯೋಧ್ಯೆಯ ಇಂದಿನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಬಾಲಿವುಡ್ ನಟಿ ಕಂಗನಾ, ಆಲಿಯಾ- ರಣ್‌ಬೀರ್ ದಂಪತಿ, ರಜನಿಕಾಂತ್, ಮೆಗಾಸ್ಟಾರ್ ಚಿರಂಜೀವಿ, ಅಮಿತಾಭ್‌ ಬಚ್ಚನ್‌,…

Read More

ಮಂಡ್ಯ: ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಶಿಕ್ಷಕಿ ಅನುಮಾನಾಸ್ಪದ ಸಾವಿಗೀಡಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ  ನಡೆದಿದೆ. ನಾಪತ್ತೆಯಾದ ಮಹಿಳೆಯ  ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ. ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. ಅದೇ ದಿನ ಮಧ್ಯಾಹ್ನದ ವೇಳೆಗೆ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಅಂದು ಸಂಜೆ ಕುಟುಂಬಸ್ಥರು ಮೇಲುಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಸೋಮವಾರ ಸಂಜೆ ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಶವ ಪತ್ತೆಹಚ್ಚಿದ್ದಾರೆ. ಸ್ಥಳಕ್ಕೆ ಮಂಡ್ಯ ಎಸ್‌ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಕ್ಷಕಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಕ್ರಿಯಾಶೀಲರಾಗಿದ್ದರು ಎಂಬುದು ತಿಳಿದುಬಂದಿದೆ.

Read More

ನವದೆಹಲಿ: 15 ವರ್ಷದ ಬಾಲಕನೊಬ್ಬ ಹಣಕ್ಕಾಗಿ ಸ್ನೇಹಿತನೊಂದಿಗೆ ಸೇರಿ ತನ್ನ 77 ವರ್ಷದ ಅಜ್ಜಿಯನ್ನು ಕೊಲೆಗೈದ ಘಟನೆ ದೆಹಲಿಯಲ್ಲಿ (Delhi) ನಡೆದಿದೆ. ಬಾಲಕ ತನ್ನ ಅಜ್ಜಿ ಒಬ್ಬಳೇ ಮನೆಯಲ್ಲಿದ್ದಾಗ ಆಕೆಯ ಮನೆಗೆ ಸ್ನೇಹಿತನೊಂದಿಗೆ ಬಂದಿದ್ದ. ಬಳಿಕ ಮಲಗಿದ್ದ ವೃದ್ಧೆಯ ಮುಖಕ್ಕೆ ತಲೆದಿಂಬಿನಿಂದ ಒತ್ತಿ ಉಸಿರು ಕಟ್ಟಿಸಿ ಬಳಿಕ ತಲೆಯ ಮೇಲೆ ಇಬ್ಬರೂ ಸೇರಿ ಹಲ್ಲೆ ನಡೆಸಿದ್ದರು ಎಂದು ತಿಳಿದು ಬಂದಿದೆ. ಬಳಿಕ ಲಾಕರ್ ಒಪನ್ ಮಾಡಿ ಅದರಲ್ಲಿದ್ದ ಹಣ ಕದ್ದು ಅಲ್ಲಿಂದ ಪರಾರಿಯಾಗಿದ್ದರು. ಇತ್ತ ಮನೆಗೆ ಬಂದಿದ್ದ ಬಾಲಕನ ಅಜ್ಜ, ವೃದ್ಧೆಯ ಸಾವು ಸಹಜ ಎಂದು ಭಾವಿಸಿದ್ದರು. ಅಂತ್ಯಸಂಸ್ಕಾರಕ್ಕೆ ಸಿದ್ಧತೆ ವೇಳೆ ಸಂಬಂಧಿಕರು ಹಣೆಯ ಬಳಿ ಗಾಯವಾಗಿರುವುದನ್ನು ಗಮನಿಸಿದ್ದರು. ಇದನ್ನು ತೋರಿಸಿದ ಬಳಿಕ ವೃದ್ಧ ಲಾಕರ್ ಪರಿಶೀಲಿಸಿದ್ದು, ಅದರಲ್ಲಿದ್ದ ಹಣ ಕಳವಾಗಿರುವುದು ಬೇಳಕಿಗೆ ಬಂದಿದೆ. ಬಳಿಕ ಪೊಲೀಸರಿಗೆ ದೂರು ನೀಡಲಾಗಿತ್ತು. https://ainlivenews.com/good-news-for-those-going-to-ayodhya/ ತನಿಖೆ ವೇಳೆ ವೃದ್ಧ ದಂಪತಿಯ 15 ವರ್ಷದ ಮೊಮ್ಮಗ ಬಂದಿರುವುದು ತಿಳಿದು ಬಂದಿದೆ. ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಅಜ್ಜಿಯನ್ನು ಕೊಲೆಗೈದು…

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ PSI ಮರು ಪರೀಕ್ಷೆ ನಡೆಯುತ್ತಿದ್ದು ಮತ್ತೊಂದೆಡೆ ಫುಲ್ ಶರ್ಟ್ ಧರಿಸಿದ ಅಭ್ಯರ್ಥಿಯಿಂದ ಪರೀಕ್ಷೆ ಬರೆಯಲು ಹಿಂದೇಟು ಹಾಕಿದ್ದಾರೆ. ಫುಲ್ ಶರ್ಟ್ ನ ಕಟ್ ಮಾಡೋದಾದ್ರೆ ಪರೀಕ್ಷೆನೇ ಬರೆಯಲ್ಲವೆಂದು ಹಠ ಹಿಡಿದ ಅಭ್ಯರ್ಥಿ ಆದರೆ ಕಡೆಗೂ ಶರ್ಟ್ ನ ಕೈ ಕಟ್ ಮಾಡಲು ಕ್ಯಾಂಡಿಡೇಟ್ ಹಿಂದೇಟು ಹಾಕಿ ಪರೀಕ್ಷೆ ಬರೆಯದೆ ವಾಪಸ್ ನಡೆದಿದ್ದಾರೆ. ಈ ಬಾರಿ ಗುಲ್ಬರ್ಗ, ರಾಯಚೂರು ಭಾಗದ ಶಿಕ್ಷಕರನ್ನ ಪರೀಕ್ಷೆಗೆ ಬಳಕೆ ಮಾಡಿಲ್ಲ ಆ ಭಾಗದಲ್ಲಿ ಪರೀಕ್ಷಾ ಅಕ್ರಮ ನಡೆದ ಕಾರಣ ಶಿಕ್ಷಕರ ಬಳಕೆಯೂ ನಿಷೇಧ ಮಾಡಲಾಗಿದೆ. ಕೇವಲ ಮಂಡ್ಯ, ಮೈಸೂರು, ತುಮಕೂರು, ದಾವಣಗೆರೆ ಭಾಗದ ಶಿಕ್ಷಕರು ಮಾತ್ರ ಪರೀಕ್ಷೆಗೆ ಬಳಕೆ ಮಾಡಲಾಗಿದೆ. ಪೂರ್ಣ ತೋಳಿನ ಬಟ್ಟೆ ಧರಿಸಿದ ಅಭ್ಯರ್ಥಿಗೆ ಶಾಕ್ ಪೂರ್ಣ ತೋಳಿನ ಬಟ್ಟೆಯನ್ನ ಧರಿಸಿದ್ದ ಅಭ್ಯರ್ಥಿಯ ಬಟ್ಟೆಯನ್ನ ಬಿಚ್ಚಿಸಿದ ಸಿಬ್ಬಂದಿ ಬಟ್ಟೆ ಬಿಚ್ಚಿಸಿ ಶರ್ಟ್ ನ ಅರ್ಧ ತೋಳು ಕಟ್ ಮಾಡಿದ ಸಿಬ್ಬಂದಿ

Read More

ನವದೆಹಲಿ: ಅಯೋಧ್ಯೆಯಿಂದ (Ayodhya) ಹಿಂದಿರುಗಿದ ನಂತರ ನನ್ನ ಮೊದಲ ನಿರ್ಧಾರ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ಪ್ರಧಾನಿ ಮೋದಿ (Narendra Modi) ಅಯೋಧ್ಯೆಯಿಂದ ಹಿಂದಿರುಗಿದ ನಂತರ, ಜನರು ತಮ್ಮ ಮನೆಗಳಲ್ಲಿ ಸೋಲಾರ್‌ ಪ್ಯಾನೆಲ್ (ಸೌರ ಫಲಕ) ಅಳವಡಿಸಿಕೊಳ್ಳಲು ಸಹಾಯ ಮಾಡುವ ಹೊಸ ಯೋಜನೆಯನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ನಿರ್ಧಾರವು ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಶಕ್ತಿಯನ್ನು ಪಡೆಯುತ್ತಾರೆ ಎಂಬ ಅರಿವಿನಿಂದ ಪ್ರೇರಿತವಾಗಿದೆ ಎಂದು ಮೋದಿ ಹೇಳಿದ್ದಾರೆ. https://ainlivenews.com/good-news-for-those-going-to-ayodhya/ ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ, ನಮ್ಮ ಸರ್ಕಾರವು ‘ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ’ಯನ್ನು (Pradhanmantri Suryodaya Yojana) 1 ಕೋಟಿ ಮನೆಗಳಿಗೆ ಮೇಲ್ಛಾವಣಿ ಸೌರ ಅಳವಡಿಸುವ ಗುರಿಯೊಂದಿಗೆ ಪ್ರಾರಂಭಿಸಲಿದೆ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ…

Read More

ಸ್ಯಾಂಡಲ್‌ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಅವರು ರಾಮನಾಮ ಪಠಿಸಿದ್ದಾರೆ. ಈ ಮೂಲಕ ಇನ್ನೂ ಇಬ್ಬರು ಸೆಲೆಬ್ರಿಟಿಗಳಿಗೂ ರಾಮನಾಮ (Ram Naam) ಪಠಿಸಲು ಆಹ್ವಾನ ನೀಡಿದ್ದಾರೆ. ಭಗವಾನ್ ಶ್ರೀರಾಮನ ನಾಮ ಪಠಿಸಿದ ವಿಡಿಯೋವೊಂದನ್ನು ಗಣೇಶ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಕನ್ನಡದ ಸಿನಿತಾರೆಯರು ಮತ್ತು ಬಾಲಿವುಡ್ ಕಲಾವಿದರು ಸೇರಿದಂತೆ ಅನೇಕರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ. ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಅಭಿಯಾನವೊಂದು ಶುರುವಾಗಿದೆ. ಬಿ.ವೈ ವಿಜಯೇಂದ್ರ ಅವರ ಆಹ್ವಾನ ಮೇರೆಗೆ ಗಣೇಶ್ ರಾಮನಾಮ ಪಠಿಸಿದ್ದಾರೆ. ಈ ಶ್ರೀರಾಮನ ನಾಮ ಜಪಿಸಲು ಇನ್ನೂ ಇಬ್ಬರು ಸ್ಟಾರ್‌ಗಳಿಗೆ ಆಹ್ವಾನ ನೀಡಿದ್ದಾರೆ ಶ್ರೀರಾಮನ ನಾಮ ಪಠಿಸಿ ರಿಯಲ್ ಸ್ಟಾರ್ ಉಪೇಂದ್ರ (Upendra) ಮತ್ತು ಅನಿಲ್ ಕುಂಬ್ಳೆ (Anil Kumble) ಅವರಿಗೆ ಗಣೇಶ್ ಆಹ್ವಾನ ನೀಡಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ನಟ ಗಣೇಶ್ ತಿಳಿಸಿದ್ದಾರೆ. ಈ ವಿಡಿಯೋ ನೋಡ್ತಿದ್ದಂತೆ ಅಭಿಮಾನಿಗಳು ಜೈ ಶ್ರೀರಾಮ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Read More

ಲಿಖಿತ್ ಶೆಟ್ಟಿ (Likhit Shetty) ನಾಯನಾಗಿ ನಟಿಸಿರುವ ‘ಫುಲ್ ಮೀಲ್ಸ್’ (Full Meals) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.  ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ಚಿತ್ರೀಕರಣ (Shooting) ಆರಂಭಿಸಿದ್ದ ಚಿತ್ರತಂಡ, ಕನಕಪುರ ರಸ್ತೆಯ ರೆಸಾರ್ಟ್ ಒಂದರ, ರಮಣೀಯ ಸ್ಥಳದಲ್ಲಿ ಕುಂಬಳಕಾಯಿ ಒಡೆದು ಚಿತ್ರೀಕರಣ ಮುಗಿಸಿದೆ.  ಚಿತ್ರದ ಉಳಿದ ಪೋಸ್ಟ್ ಪ್ರೊಡಕ್ಷನ್ ಕೆಲಸವನ್ನು ಆದಷ್ಟು ಬೇಗ ಮುಗಿಸಿ, ಶೀಘ್ರದಲ್ಲೇ ತೆರೆಗೆ ತರುವ ಉತ್ಸಾಹದಲ್ಲಿ ಚಿತ್ರತಂಡವಿದೆ. ಈ ಹಿಂದೆ ‘ಸಂಕಷ್ಟ ಕರ ಗಣಪತಿ’ ‘ಫ್ಯಾಮಿಲಿ ಪ್ಯಾಕ್’ ಸಿನಿಮಾಗಳ ಮೂಲಕ ಕನ್ನಡ ಪ್ರೇಕ್ಷಕರಿಗೆ ಹತ್ತಿರವಾಗಿದ್ದ ನಾಯಕ ಲಿಖಿತ್ ಶೆಟ್ಟಿ, ಫುಲ್ ಮೀಲ್ಸ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಹಂತ ಮೇಲೇರುವ ವಿಶ್ವಾಸವನ್ನು ಹೊಂದಿದ್ದಾರೆ. ಆಲ್ಬಮ್ ಸಾಂಗ್ಸ್  ಮತ್ತು ಕಿರುಚಿತ್ರದ ಮೂಲಕ ಗುರುತಿಸಿಕೊಂಡಿದ್ದ ಎನ್ ವಿನಾಯಕ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ್ದು, ಅಂದುಕೊಂಡ ರೀತಿಯಲ್ಲೇ ಚಿತ್ರೀಕರಣ ಮುಗಿದಿದ್ದು ಸಿನಿಮಾ ಜನರಿಗೆ ಇಷ್ಟವಾಗುವ ಭರವರಸೆಯನ್ನು ಹೊಂದಿದ್ದಾರೆ. ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ಲಿಖಿತ್ ಶೆಟ್ಟಿಗೆ…

Read More

ದೆಹಲಿ: ಆಸ್ಟ್ರೇಲಿಯನ್ ಕ್ರಿಕೆಟ್ ತಂಡದ ಬ್ಯಾಟರ್ ಡೇವಿಡ್ ವಾರ್ನರ್‌ಗೆ (David Warner) ಭಾರತ, ಇಲ್ಲಿನ ಜನ, ಸಂಸ್ಕೃತಿ ಎಂದರೆ ಅಚ್ಚುಮೆಚ್ಚು. ಆದ್ದರಿಂದ ಭಾರತಕ್ಕೆ ಸಂಬಂಧಿಸಿದ ಯಾವುದೇ ವಿಚಾರವನ್ನು ವಾರ್ನರ್‌ ಕೂಡ ಸಂಭ್ರಮಿಸುತ್ತಾರೆ. ತೆಲುಗಿನ ಹಿಟ್‌ ಸಿನಿಮಾ ‘ಪುಷ್ಪ’ದ ಹೀರೋ ಸ್ಟೈಲ್‌ನ್ನು ಅನುಕರಿಸಿ ಭಾರತೀಯರ ಗಮನ ಸೆಳೆದಿದ್ದರು. ಅಂತೆಯೇ ಈಗ ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಹಿನ್ನೆಲೆಯಲ್ಲಿ ವಿಶೇಷ ಪೋಸ್ಟ್‌ ಹಾಕುವ ಮೂಲಕ ಭಾರತೀಯರಿಗೆ ವಿಶ್‌ ಮಾಡಿದ್ದಾರೆ. ವಾರ್ನರ್ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಭಾರತದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಇದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಜೈ ಶ್ರೀ ರಾಮ್ ಇಂಡಿಯಾ’ ಎಂದು ವಾರ್ನರ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದು ಭಗವಾನ್ ರಾಮನ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಇದಕ್ಕೂ ಮೊದಲು, ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಕೇಶವ್ ಮಹಾರಾಜ್, ಪ್ರಾಣ ಪ್ರತಿಷ್ಠಾಪನೆ (Ram Mandir Pran Pratishtha Ceremony) ಆಚರಿಸಲು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಗೆ ಮಹೇಶ್…

Read More

ನಿದ್ರೆ ಅಂದ್ರೆ ಎಲ್ಲರಿಗೂ ಇಷ್ಟ. ಆದರೆ ಬದಲಾದ ಜೀವನಶೈಲಿ, ಒತ್ತಡದ ಬದುಕಿನಿಂದಾಗಿ ಬಹುಪಾಲು ಮಂದಿ ನಿದ್ರೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಎಷ್ಟೋ ಮಂದಿ ನಿದ್ರೆಗಿಂತ ತಮ್ಮ ಕೆಲಸಗಳಿಗೇ ಹೆಚ್ಚು ಆದ್ಯತೆ ನೀಡುತ್ತಾರೆ. ಇನ್ನೂ ಕೆಲವರಿಗೆ ಮೊಬೈಲ್‌, ಲ್ಯಾಪ್‌ಟಾಪ್‌ ಕೈಯಲಿದ್ರೆ ಸಾಕು, ನಿದ್ರೆಯನ್ನೇ ಮರೆತುಬಿಡ್ತಾರೆ. ಇಂಥವರಿಗೆ ಅಧ್ಯಯನವೊಂದು ಶಾಕಿಂಗ್‌ ನ್ಯೂಸ್‌ ಕೊಟ್ಟಿದೆ. ಅದರಲ್ಲೂ ಮುಖ್ಯವಾಗಿ 50 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ನಿದ್ರೆಗೂ ಹೆಚ್ಚಿನ ಒತ್ತು ನೀಡಬೇಕು. 50 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನರು ದಿನಕ್ಕೆ  6  ಗಂಟೆ ಅಥವಾ ಅದಕ್ಕಿಂತ ಕಡಿಮೆ ಸಮಯ ನಿದ್ರೆ ಮಾಡಿದರೆ ಹೃದ್ರೋಗ (Heart Disease), ಮಧುಮೇಹ (Diabetes) ಮತ್ತು ಕ್ಯಾನ್ಸರ್‌ನಂತಹ (Cancer) ಬಹು ದೀರ್ಘಕಾಲದ ಕಾಯಿಲೆಗಳು ಎದುರಾಗುವ ಸಮಸ್ಯೆ ಇರುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ. ಕಡಿಮೆ ನಿದ್ದೆ ಮಾಡುವವರು ಆಗಾಗ್ಗೆ ಆರೋಗ್ಯ ಸಮಸ್ಯೆಗಳಿಗೆ ಒಳಗಾಗಬಹುದು. ಶೀತ, ಜ್ವರ, ಸುಸ್ತು, ಆಯಾಸ, ಮುಂತಾದ ದೈಹಿಕ ಸಮಸ್ಯೆಗಳನ್ನು ಎದುರಿಸಬೇಕಾಗಿಬರಬಹುದು. ಕಡಿಮೆ ನಿದ್ರೆಯ ಪರಿಣಾಮ ದೇಹದ ಮೇಲೆ ದುಷ್ಪರಿಣಾಮ ಬೀರಲು…

Read More

ಹೈದರಾಬಾದ್: ಇಂಗ್ಲೆಂಡ್ (England) ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಎರಡು ಪಂದ್ಯಗಳಿಂದ ಟೀಮ್ ಇಂಡಿಯಾ (Team India) ಆಟಗಾರ ವಿರಾಟ್ ಕೊಹ್ಲಿ (Virat Kohli) ಹೊರಗುಳಿದಿದ್ದಾರೆ. ಐದು ಟೆಸ್ಟ್‌ಗಳ ಸರಣಿಯ ಮೊದಲ ಪಂದ್ಯ ಜ.25 ರಂದು ಹೈದರಾಬಾದ್‍ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ವೈಯಕ್ತಿಕ ಕಾರಣದಿಂದ ಕೊಹ್ಲಿ ಈ ಸರಣಿಯ ಮೊದಲ ಎರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ತಂಡದಿಂದ ಬಿಡುಗಡೆ ಮಾಡುವಂತೆ ಕೊಹ್ಲಿ ಬಿಸಿಸಿಐಗೆ ಮನವಿ ಮಾಡಿದ್ದರು. ಈ ಮನವಿಗೆ ಬಿಸಿಸಿಐ ಒಪ್ಪಿಗೆ ಸೂಚಿಸಿದೆ ಎಂದು ತಿಳಿದು ಬಂದಿದೆ. ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಕೊಹ್ಲಿ ಅಲಭ್ಯರಾದರೂ, ಟೆಸ್ಟ್ ತಂಡದಲ್ಲಿ ಅವರನ್ನು ಉಳಿಸಿಕೊಳ್ಳಲು ನಿರ್ಧಾರ ಮಾಡಿದೆ. ಸರಣಿಯ ಎರಡನೇ ಪಂದ್ಯವು ಫೆ.2 ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ. ವಿರಾಟ್ ಕೊಹ್ಲಿ ಸರಣಿಯ ಉಳಿದ ಮೂರು ಪಂದ್ಯಗಳಿಗೆ ಮರಳುವ ನಿರೀಕ್ಷೆಯಿದೆ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್‌ಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್,…

Read More