Author: AIN Author

ಸಿಹಿ ಅಡುಗೆಯನ್ನು ಮಾಡಬೇಕು ಎಂದು ನೀವೆನಾದ್ರೂ ಪ್ಲ್ಯಾನ್‌ ಮಾಡಿದ್ದರೆ, ಗಸಗಸೆ ಪಾಯಸವನ್ನು ಮಾಡಿ ಸವಿಯಿರಿ. ಬೆಲ್ಲವನ್ನು ಬಳಸಿಕೊಂಡು ಅತ್ಯಂತ ಸರಳವಾಗಿ ಈ ಪಾಯಸವನ್ನು  ಮಾಡುವ ವಿಧಾನ ಈ ಕೆಳಗಿನಂತಿದೆ. ಬೇಕಾಗುವ ಸಾಮಗ್ರಿಗಳು: * ಗೋಡಂಬಿ-ಸ್ವಲ್ಪ * ಬಾದಾಮಿ-ಸ್ವಲ್ಪ * ಕಪ್ ತೆಂಗಿನಕಾಯಿ- 1ಕಪ್‌ * ಕಪ್ ಬೆಲ್ಲ-   1ಕಪ್‌ * ಏಲಕ್ಕಿ ಪುಡಿ- ಸ್ವಲ್ಪ * ಗಸಗಸೆ- 2ಕಪ್‌ * ತುಪ್ಪ- ಅರ್ಧ ಕಪ್‌ * ಒಣದ್ರಾಕ್ಷಿ- ಸ್ವಲ್ಪ ಮಾಡುವ ವಿಧಾನ: * ಬಾಣಲೆಯಲ್ಲಿ ಗಸಗಸೆ, ಗೋಡಂಬಿ, ಬಾದಾಮಿ, ಗಸಗಸೆ ತುಪ್ಪವನ್ನು ಹಾಕಿ ಚೆನ್ನಾಗಿ ಹುರಿದುಕೊಳ್ಳಬೇಕು. * ಹುರಿದ ಪದಾರ್ಥಗಳು, ತೆಂಗಿನಕಾಯಿ ತುರಿ ಸ್ವಲ್ಪ ನೀರನ್ನು ಮಿಕ್ಸಿ ಜಾರಿಗೆ ಹಾಕಿ ರುಬ್ಬಿಕೊಳ್ಳಬೇಕು. * ಒಂದು ಪಾತ್ರೆಯಲ್ಲಿ ಸ್ವಲ್ಪ ತುಪ್ಪ, ಬೆಲ್ಲವನ್ನು ಕರಗಿಸಿಕೊಳ್ಳಬೇಕು.  * ನಂತರ ಈ ಪಾತ್ರೆಗೆ ತಯಾರಾದ ಪೇಸ್ಟ್ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಬೇಕಾದಲ್ಲಿ ಸ್ವಲ್ಪ ನೀರನ್ನು ಸೇರಿಸಿಕೊಳ್ಳಿ * ನಂತರ ಇನ್ನೊಂದು ಬಾಣಲೆಗೆ ತುಪ್ಪ, ಗೋಡಂಬಿ, ಒಣದ್ರಾಕ್ಷಿಯನ್ನು…

Read More

ಚಿಕ್ಕೋಡಿ: ನನ್ನನ್ನು ಹಿಮ್ಮೆಟ್ಟಿಸಲು ಡಿಕೆಶಿ ಅಪ್ಪ ಬಂದ್ರೂ ನಾನು ಬಿಡುವುದಿಲ್ಲ. ಸಿಡಿ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ನನಗೆ ಶಿಕ್ಷೆ ವಿಧಿಸಲು ಪ್ಲ್ಯಾನ್ ಮಾಡಿದ್ದ. ಆದರೆ ಅದು ಸಾಧ್ಯವಾಗಲಿಲ್ಲ. ಈಗ ಬ್ಯಾಂಕ್‍ಗೆ ವಂಚನೆ ಹೆಸರಿನಲ್ಲಿ 420 ಕೇಸ್ ದಾಖಲಿಸಿದ್ದಾನೆ. ನನ್ನ ಹೆಸರು ಟಿವಿಯಲ್ಲಿ ಬರೋದನ್ನು ನೋಡಿ ಸಮಾಧಾನ ಮಾಡಿಕೊಳ್ಳುತ್ತಿದ್ದಾನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಏಕವಚನದಲ್ಲೇ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://ainlivenews.com/pm-modi-pays-homage-to-balaram-in-ayodhya-hindu-dream-come-true/ ಕಾಗವಾಡ ಶಾಸಕ ರಾಜು ಕಾಗೆ ವಿರುದ್ಧ ಮಾಜಿ ಶಾಸಕ ಶ್ರೀಮಂತ ಪಾಟೀಲ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಈ ವೇಳೆ, ಕೇಸ್ ದಾಖಲಿಸಿ ಟಿವಿಯಲ್ಲಿ ನನ್ನ ಹೆಸರು ನೋಡಿ ಸಮಾಧಾನ ಮಾಡಿಕೊಳ್ಳುತ್ತಿದ್ದಾನೆ. ನಾನು ಗಟ್ಟಿಯಾಗೇ ಇದ್ದೇನೆ. ನನ್ನ ಹಿಮ್ಮೆಟ್ಟಿಸಲು ಡಿ.ಕೆ ಶಿವಕುಮಾರ್ ಅಪ್ಪ ಬಂದರೂ ನಾನು ಬಿಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕೇಂದ್ರ, ಉತ್ತರ, ದಕ್ಷಿಣ ಮತ್ತು ಬೆಂಗಳೂರು ನಗರ ಸೇರಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 98,43,577 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ  ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024 ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಇಂದು ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ. ಅದರಂತೆ ಅಂತಿಮ ಮತದಾರರ ಪಟ್ಟಿಯಲ್ಲಿ 50,78,525 ಪುರುಷ ಮತದಾರರರು, 47,63,268 ಮಹಿಳಾ ಮತದಾರರು ಹಾಗೂ 1,784 ಇತರೆ ಮತದಾರರು ಸೇರಿ ಒಟ್ಟು 98,43,577 ಮತದಾರರಿದ್ದಾರೆ ಎಂದು ತಿಳಿಸಿದರು. ನಗರದಲ್ಲಿ ಬರುವ ಕೇಂದ್ರ, ಉತ್ತರ, ದಕ್ಷಿಣ ಮತ್ತು ಬೆಂಗಳೂರು ನಗರದ ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ಎಲ್ಲಾ ಮತದಾರರ ನೊಂದಣಾಧಿಕಾರಿಗಳ ಕಛೇರಿ, ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಛೇರಿ ಹಾಗೂ ವಾರ್ಡ್ ಕಛೇರಿಗಳಲ್ಲಿ ಪ್ರಕಟಿಸಲಾಗಿರುತ್ತದೆ. ಮತದಾರರು ತಮ್ಮ…

Read More

ಬೆಂಗಳೂರು: ಅಯೋಧ್ಯಾ ನಗರದ ರಾಮಮಂದಿರದಲ್ಲಿ ಇಂದು ರಾಮನ ಪ್ರಾಣಪ್ರತಿಷ್ಟಾ ಕಾರ್ಯವು ವಿಜೃಂಭಣೆಯಿಂದ ನೆರವೇರಿತು. ಪ್ರಧಾನಿ ಮೋದಿ ಈ ಕಾರ್ಯವನ್ನು ನಿಗದಿತ ಸಮಯಕ್ಕೆ ಸರಿಯಾಗಿ ನೆರವೇರಿಸಿದ್ದಾರೆ. ಸುಮಾರು 500 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಲಾಗಿದೆ. ಇದರೊಂದಿಗೆ ರಾಮಮಂದಿರವು ಉದ್ಘಾಟನೆಯಾದಂತಾಗಿದ್ದು, ದೇಶಾದ್ಯಂತ ಸಂತಸ ಮನೆ ಮಾಡಿದೆ. ಹಾಗೆ ಸಿಲಿಕಾನ್ ಸಿಟಿಯಲ್ಲಿಇಂದೇ ತಮ್ಮ  ಡೆಲಿವರಿ ಆಗಬೇಕೆಂದು ತುಂಬಾ ಜನ ಕಾಯುತ್ತಿದ್ದರು. ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾನೆ ದಿನ ಕಂದಮ್ಮಗಳನ್ನು ಪಡೆಯಲು ಕೆಲ ಪೋಷಕರು ಆಸಕ್ತಿ ವಹಿಸಿದ್ದರು ಹಾಗಾಗಿ ಇಂದು ಮಕ್ಕಳಿಗೆ ಜನ್ಮ ಕೊಡಲು ಪೋಷಕರು ಆಸಕ್ತಿ ವಹಿಸಿದ್ದಾರೆ. ಹಾಗಾದ್ರೆ ಇಲ್ಲಿವರೆಗೆ ಎಷ್ಟು ಜನ ಮಕ್ಕಳನ್ನು ಪಡೆದರು ಗೊತ್ತಾ ಇಲ್ಲಿದೆ ನೋಡಿ! ವಾಣಿವಿಲಾಸ್ ಆಸ್ಪತ್ರೆಯಲ್ಲಿ 28 ಕಂದಮ್ಮಗಳು ಜನಿಸಿದ್ದು, ಈ ಪೈಕಿ 10 ನಾರ್ಮಲ್, 1 ಸಿಸೇರಿಯನ್ ಮಾಡಲಾಗಿದೆ. ಗಂಡು 16, ಹೆಣ್ಣು 12 ​ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಈ…

Read More

ಬೆಂಗಳೂರು: ನನಗೆ ತಿಳಿದಿರುವ ರಾಮ, ನಾನು ಪೂಜಿಸುವ ರಾಮ ವಚನ ಪರಿಪಾಲನೆಯನ್ನೇ ತನ್ನ ಉಸಿರಾಗಿಸಿಕೊಂಡವನು ಎಂದು ನಗರದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಮ ಫೆಸ್‌ ಬುಕ್‌ ಪೇಜ್‌ʼನಲ್ಲಿ ಬರೆದುಕೊಂಡಿರುವ ಅವರು,  ನನಗೆ ತಿಳಿದಿರುವ ಹನುಮ, ನಾನು ಪೂಜಿಸುವ ಹನುಮ ರಾಮನಾಮಕ್ಕಿಂತ ಮಿಗಿಲಿಲ್ಲ, ರಾಮನೇ ಜಗವೆಲ್ಲಾ ಎಂದು ತಿಳಿದು ರಾಮಭಕ್ತಿಯನ್ನೇ ಎದೆಯೊಳಗೆ ಇಳಿಸಿಕೊಂಡವನು. ಹನುಮನ ನಾಡಿನವರಾದ ನಮಗೆ ರಾಮನ ಬಗ್ಗೆ, ರಾಮಭಕ್ತಿಯ ಬಗ್ಗೆ ಹೇಳಿಕೊಡುವ ಅಗತ್ಯವಿಲ್ಲ. ಅದೊಂದು ತೋರ್ಪಡಿಕೆಯ ವಿದ್ಯಮಾನವೂ ಅಲ್ಲ. ರಾಮಭಕ್ತಿ ನಿರಂತರ. ವೈಯಕ್ತಿಕವಾಗಿ ನಾನು, ರಾಮನಿಂದ ವಚನ ಪರಿಪಾಲನೆಯನ್ನು, ಭೀಮನಿಂದ (ಡಾ. ಅಂಬೇಡ್ಕರ್‌) ಸಮತೆ ಅನುಷ್ಠಾನವನ್ನು, ಬಸವನಿಂದ ನುಡಿ, ನಡೆಯ ನಡುವೆ ಅಂತರವಿಲ್ಲದೆ ಬದುಕುವುದನ್ನು ನನ್ನಲ್ಲಿ ಅಳವಡಿಸಿಕೊಳ್ಳುತ್ತಲೇ ಮುಂದುವರಿದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ https://m.facebook.com/story.phpstory_fbid=pfbid0QFGpZTbTP59vDeSLgxqbeK8JA8HwEejWikeTuU8dwnLGKCkGpVLUhZPmQCLCtkcil&id=100044576433033&mibextid=Nif5oz  ಹನುಮನ ನಾಡಿನವರಾದ ನಾವು ಹನುಮನ ಎದೆಗಿಂತ ಮಿಗಿಲಾದ ಗುಡಿ ರಾಮನಿಗೆ ಬೇರಾವುದೂ ಇಲ್ಲ ಎಂದು ತಿಳಿದೇ ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಲಿಲ್ಲ. ಬದಲಿಗೆ ಊರೂರಿನಲ್ಲಿಯೂ ಹನುಮನಿಗೆ ಗುಡಿ ಕಟ್ಟಿದೆವು. ರಾಮನಿಗೆ ಹನುಮನ ಎದೆಗಿಂತ…

Read More

ಶಿವಮೊಗ್ಗ: ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಅದೇ ದಾರಿಯಲ್ಲಿ ಬಂದ ಮುಸ್ಲಿಂ ಮಹಿಳೆಯೊಬ್ಬರು ಅಲ್ಲಾಹು ಅಕ್ಬರ್ (Allahu Akbar) ಎಂದು ಘೋಷಣೆ ಕೂಗಿದ ಘಟನೆ ನಡೆಯಿತು. ಶಿವಮೊಗ್ಗದ (Shivamogga) ಶಿವಪ್ಪನಾಯಕ ವೃತ್ತದಲ್ಲಿ, ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಸಿಹಿ ವಿತರಿಸಿದರು. ಈ ವೇಳೆ ಹಿಂದೂ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದರು. ಅದೇ ದಾರಿಯಲ್ಲಿ ಬಂದ ಮುಸ್ಲಿಂ ಮಹಿಳೆಯಿಂದ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದಾರೆ. ನೀವು ಮೋದಿ ಪರ ಕೆಲಸ ಮಾಡ್ತಿದ್ದೀರಾ ಎಂದು ಈ ವೇಳೆ ಪೊಲೀಸರಿಗೆ ಮುಸ್ಲಿಂ ಮಹಿಳೆಯರು ಅವಾಜ್ ಹಾಕಿದ್ದಾರೆ. ಸ್ಥಳದಲ್ಲಿದ್ದ ಹಿಂದೂ ಕಾರ್ಯಕರ್ತರು ಮುಸ್ಲಿಂ ಮಹಿಳೆಯರ ಹೇಳಿಕೆಗೆ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. https://ainlivenews.com/pm-modi-pays-homage-to-balaram-in-ayodhya-hindu-dream-come-true/ ಪ್ರತಿಯೊಬ್ಬರಿಂದಲೂ ಜೈ ಶ್ರೀರಾಮ್ ಘೋಷಣೆ ಮೊಳಗಿಬಂತು. ಮುಸ್ಲಿಂ ಮಹಿಳೆ ಬಂಧಿಸುವಂತೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್ ಅವರು ಪೊಲೀಸರನ್ನು ಒತ್ತಾಯಿಸಿದರು. ಮುಸ್ಲಿಂ ಮಹಿಳೆ ನ್ಯೂಸೆನ್ಸ್ ಮಾಡ್ತಿದ್ದರೂ ಸುಮ್ಮನಿದ್ದೀರಾ…

Read More

ಬೆಂಗಳೂರು : ರಾಜ್ಯಮಟ್ಟದ ಖ್ಯಾತ ಫುಟ್‌ಬಾಲ್‌ ಆಟಗಾರ ಕೆ. ಮೊನೀಶ್‌ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದ ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು ಎಂದು ಬರೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ. ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ ಪ್ರತಿಭೆಯೊಂದು ಹೀಗೆ ಆರಂಭದಲ್ಲೇ ಅಂತ್ಯ ಕಂಡಿದ್ದು ಅತ್ಯಂತ ದುಃಖದ ವಿಚಾರ. ಮೃತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ. ಲಾರಿ ಡಿಕ್ಕಿಯಾಗಿ ಗಂಭೀರವಾಗಿ ಗಾಯ ಮೊನೀಶ್ ಅವರು ಬೈಕ್​ನಲ್ಲಿ ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಕೆ.ಆರ್. ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರು ಈಗಲ್ಸ್ ಪರ ಮೊನೀಶ್ ಕಣಕ್ಕೆ ಬಾಬುಸಾಪಾಳ್ಯ ನಿವಾಸಿಯಾಗಿದ್ದ ಮೊನೀಶ್…

Read More

ಬೆಂಗಳೂರು: ಹಳೆಯ ಕಾಲದ ಗತವೈಭವವನ್ನ ಸಾರುವ ಡಬಲ್ ಡೆಕ್ಕರ್ ಬಸ್ ಗಳನ್ನ ಮತ್ತೆ ರಸ್ತೆಮೇಲೆ ನೋಡುವ ದಿನಗಳು ಸನ್ನಿಹದಲ್ಲಿವೆ. ಬಿಎಂಟಿಸಿ ಬೆಂಗಳೂರಲ್ಲಿ ಡಬಲ್ ಡೆಕ್ಕರ್ ಬಸ್ ಗಳನ್ನ ರಸ್ತೆಗಿಳಿಸಲು ಗಂಭೀರ ಚಿಂತನೆ‌‌ ನಡೆಸುತ್ತಿದ್ದು,.‌ ಒಂದ್ ಕಾಲದಲ್ಲಿ ಮಿಂಚಿ ಮರೆಯಾದ ಬಸ್ ಗಳಿಗೆ ಟೆಂಡರ್ ಕರೆಯಲು ಮುಂದಾಗಿದೆ. ಹಾಗಾದ್ರೆ ಮತ್ತೆ ಯಾವಾಗ ಬರುತ್ವೆ ಡಬಲ್ ಡೆಕ್ಕರ್ ಬಸ್ ಗಳು ಅನ್ನೊ ಡೀಟೆಲ್ಸ್ ಇಲ್ಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲೆ ಮೂಲೆಗೆ ಬಸ್ ಸಂಚಾರ ಒದಗಿಸುತ್ತಿರುವ ಬಿಎಂಟಿಸಿ ಈಗ ಒಂದೆಜ್ಜೆ ಮುಂದೆ ಹೋಗಿದೆ. ನಗರದಲ್ಲಿ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಬಸ್ ಗಳನ್ನ ರಸ್ತೆಗಿಳಿಸಲು ಪ್ಲಾನ್ ಮಾಡ್ತಾಯಿದೆ.‌ ಡಬಲ್ ಡೆಕ್ಕರ್ ಬಸ್ ಗಳ ಖರೀದಿಗೆ ಟೆಂಡರ್ ಬಿಎಂಟಿಸಿ ಟೆಂಡರ್ ಕರೆಯಲು ಮುಂದಾಗಿದ್ದು, ಅಂದುಕೊಂಡಂತೆ ಆದ್ರೆ ಕೆಲ ತಿಂಗಳಲ್ಲೇ 10 ಬಸ್ ಗಳು ನಗರದ ರಸ್ತೆಗಿಳಿಯಲಿವೆ ಕೆಲ ದಿನಗಳಲ್ಲೇ ಟೆಂಡರ್ ಕರೆಯಲಿದ್ದು , ಟೆಂಡರ್ ರಿಪೋರ್ಟ್ ರೆಡಿ ಮಾಡ್ತಾಯಿದೆ.‌ ಮೊದಲ ಹಂತದಲ್ಲಿ 10 ಡಬಲ್ ಡೆಕ್ಕರ್ ಬಸ್…

Read More

ಅಯೋಧ್ಯೆ: ಪ್ರಭು ಶ್ರೀರಾಮನ ಅಸ್ತಿತ್ವಕ್ಕಾಗಿ ನಮ್ಮ ದೇಶದಲ್ಲಿ ಕಾನೂನು ಸಂಘರ್ಷ ಕೂಡ ನಡೆದಿದೆ. ಭಾರತದ ನ್ಯಾಯದೇವತೆ ಆದೇಶದಂತೆ ನ್ಯಾಯಬದ್ಧವಾಗಿ ಮಂದಿರ ನಿರ್ಮಾಣವಾಗಿದೆ. ಇಂದು ಇಡೀ ದೇಶ ಇಂದು ರಾಮ ದೀಪಾವಳಿ ಆಚರಿಸುತ್ತಿದೆ. ದೇಶದ ಪ್ರತಿ ಮನೆಯಲ್ಲೂ ಇಂದು ಸಂಜೆ ಶ್ರೀರಾಮನ ಜ್ಯೋತಿ ಬೆಳಗಲಿದೆ. ಕಾಲಚಕ್ರ ಮತ್ತೆ ಬದಲಾವಣೆಯಾಗಿದೆ. https://ainlivenews.com/pm-modi-pays-homage-to-balaram-in-ayodhya-hindu-dream-come-true/ ನನ್ನ 11 ದಿನಗಳ ಉಪವಾಸ ವ್ರತ ಶ್ರೀರಾಮನ ಮಂದಿರದಲ್ಲಿ ಅಂತ್ಯಗೊಳಿಸಿದ್ದೇನೆ. ಸಮುದ್ರದಿಂದ ಸರಯೂವರೆಗೆ ಯಾತ್ರೆಯ ಅವಕಾಶ ಸಿಕ್ಕಿದೆ. ಭಾರತದ ಆತ್ಮದ ಪ್ರತಿ ಕಣ ಕಣದಲ್ಲೂ ಶ್ರೀರಾಮ ಇದ್ದಾನೆ. ಪ್ರತಿ ಯುಗದ ಜನರು ರಾಮನನ್ನು ಗೆಲ್ಲಿಸಿದ್ದಾರೆ. ರಾಮರಸ ನಮ್ಮ ಜೀವನದ ರೀತಿ, ಅದು ನಿರಂತರವಾದದ್ದು. ರಾಮಮಂದಿರ ನಿರ್ಮಾಣ ಕೇವಲ ವಿಜಯ ಅಲ್ಲ, ವಿನಯದಿಂದ ಕೂಡಿದೆ ಎಂದು ಮೋದಿ ಹೇಳಿದರು.

Read More

ಬೆಂಗಳೂರು: ಸಚಿವ ಆರ್ ಬಿ ತಿಮ್ಮಾಪುರ ವಿರುದ್ಧ ಇಡಿಗೆ ದೂರು. ಅಬಕಾರಿ ಇಲಾಖೆಯಲ್ಲಿ ಅಕ್ರಮ ದಂಧೆ ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಯಿಂದ ಇ.ಡಿ ಗೆ ದೂರು ನೀಡಲಾಗಿದೆ. ಲೋಕಸಭಾ ಚುನಾವಣೆಗೆ ಹಣ ಹೊಂದಿಸಲು ಅಕ್ರಮವಾಗಿ ವರ್ಗಾವಣೆ ಮಾಡುತ್ತಿರುವ ಆರೋಪ ಆರ್ಥಿಕ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವುದಾಗಿ ಆರೋಪಿಸಿದ ದಿನೇಶ್ ಕಲ್ಲಹಳ್ಳಿ ಸರ್ಕಾರ ಫಂಡ್ ವಸೂಲಿ ಮಾಡಲು ಕುಮ್ಮಕ್ಕು ನೀಡುತ್ತಿದೆ ತಕ್ಷಣ ತಿಮ್ಮಾಪುರ ರಾಜೀನಾಮೆ ಪಡೆಯಬೇಕೆಂದು ಕಲ್ಲಹಳ್ಲಿ ಒತ್ತಾಯ  ಮಾಡಿದ್ದಲ್ಲದೆ  ಇ.ಡಿ ಅಧಿಕಾರಿಗಳು ತನಿಖೆ ನಡೆಸಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಲ್ಲಹಳ್ಳಿ ಆಗ್ರಹಿಸಿದ್ದಾರೆ.

Read More