Author: AIN Author

ತುಮಕೂರು: ಬಸವಣ್ಣನವರ (Basavanna) ತತ್ವಗಳು ಜಾರಿ ಆಗಿದ್ದರೆ ಧರ್ಮಗಳ ನಡುವೆ ಈ ದ್ವೇಷ ಇರುತ್ತಿರಲಿಲ್ಲ ಎಂದು ಸಚಿವ ಕೆ.ಎನ್ ರಾಜಣ್ಣ (K.N Rajanna), ಬಿಜೆಪಿ (BJP)  ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಸ್ವಾಮೀಜಿಗಳ ನಿರ್ದೇಶನದ ಮೇರೆಗೆ ನಾನು ಮಾತನಾಡುತ್ತಿದ್ದೇನೆ. 12 ನೇ ಶತಮಾನದಲ್ಲಿ ಬಸವಣ್ಣ ಅವರು ಮಾಡಿದ ಕೆಲಸವನ್ನು ಈಗ ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. https://ainlivenews.com/pm-modi-pays-homage-to-balaram-in-ayodhya-hindu-dream-come-true/ ಹಾಗಂತ ಹಿಂದೆ ಯಡಿಯೂರಪ್ಪನವರು ಏನೂ ಮಾಡಿಲ್ಲ ಅಂತ ಅರ್ಥವಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ. ಸರ್ಕಾರಿ ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಇಟ್ಟು, ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ಸಿದ್ದರಾಮಯ್ಯನವರು. ಕಟ್ಟಕಡೆಯ ಜನರಿಗೂ ತಲುಪುವಂತೆ ಮಾಡಿದ್ದು ಅವರೇ ಎಂದು ತಿಳಿಸಿದ್ದಾರೆ. ಇವತ್ತು ಸಮಾಜದಲ್ಲಿ ಇರುವ ಪರಸ್ಪರ ಧರ್ಮಗಳ ನಡುವೆ ದ್ವೇಷದ ವಾತಾವರಣ ಮುಂದುವರೆದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಅದರಂತೆ ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 3336 ಜನರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ. ಈ ಪೈಕಿ 89 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಬ್ಬ ಸೋಂಕಿತ ಮೃತಪಟ್ಟಿದ್ದು, 74 ಸೋಂಕಿತರು ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ 16 ಮಂದಿಗೆ ಕೋವಿಡ್ ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಬ್ಬ ಸೋಂಕಿತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 2.66 ರಷ್ಟಿದೆ. ಒಟ್ಟು 497 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Read More

ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಅವರು ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಚೆನೈನಲ್ಲಿ (Chennai) ಭೇಟಿ ಮಾಡಿದ್ದಾರೆ. ಈ ಸಮಯದಲ್ಲಿ ಅರ್ಜುನ್ ಸರ್ಜಾ  (Arjun Sarja) ಪುತ್ರಿ ಐಶ್ವರ್ಯ ಅರ್ಜುನ್ ಸಹ ಜೊತೆಗಿದ್ದರು. ಮೋದಿ ಅವರನ್ನು ಭೇಟಿ ಮಾಡಿದ ನಂತರ ಅರ್ಜುನ್ ಸರ್ಜಾ ಅವರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಇತ್ತೀಚಿಗೆ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಚೆನ್ನೈಗೆ ಆಗಮಿಸಿದ್ದರು. ಈ ಸಮಯದಲ್ಲಿ ನಾನು ಅವರನ್ನು ಭೇಟಿ ಮಾಡಿದೆ. ನನ್ನನ್ನು ನೋಡಿದ ತಕ್ಷಣ ಮಂದಸ್ಮಿತರಾಗಿ ಮಾತನಾಡಿದ ಪ್ರಧಾನಿಗಳು, ನಮ್ಮ ಕುಟುಂಬದವರ ಹೆಸರೆಲ್ಲಾ ನೆನಪಿನಲ್ಲಿಟ್ಟುಕೊಂಡು ವಿಚಾರಿಸಿದ್ದು ನನಗೆ ಆಶ್ಚರ್ಯವಾಯಿತು. ಈ ಭೇಟಿ ಸಮಯದಲ್ಲಿ ನಾನು ಚೆನೈನಲ್ಲಿರುವ ನಮ್ಮ ಅಂಜನಾಸುತ ಶ್ರೀ ಯೋಗಾಂಜನೇಯ ಮಂದಿರಂ ದೇವಸ್ಥಾನದ ಭಾವಚಿತ್ರವನ್ನು ನೀಡಿ, ನಮ್ಮ ದೇವಸ್ಥಾನಕ್ಕೆ ಬರಬೇಕೆಂದು ಆಹ್ವಾನಿಸಿದೆ. ಮುಂದಿನ ಸಲ ಚೆನ್ನೈಗೆ ಬಂದಾಗ ಖಂಡಿತವಾಗಿಯೂ ಬರುವದಾಗಿ ಹೇಳಿದರು. ಇದೇ ಸಮಯದಲ್ಲಿ ನನ್ನ ಮಗಳ ವಿವಾಹದ ವಿಷಯಯನ್ನು…

Read More

ಮಾಸ್ಕೋಗೆ ತೆರಳುತ್ತಿದ್ದ ವಿಮಾನವೊಂದು ಅಫ್ಘಾನಿಸ್ತಾನದ ಬಡಾಖಾನ್‌ನ ವಖಾನ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಅಫ್ಘಾನಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಬಡಾಖಾನ್‌ನಲ್ಲಿನ ತಾಲಿಬಾನ್‌ನ ಮಾಹಿತಿ ಮತ್ತು ಸಂಸ್ಕೃತಿಯ ಮುಖ್ಯಸ್ಥರು ಘಟನೆಯನ್ನು ದೃಢಪಡಿಸಿದ್ದಾರೆ, ಪ್ರಯಾಣಿಕ ವಿಮಾನವು ಪ್ರಾಂತ್ಯದ ಕರನ್, ಮಂಜನ್ ಮತ್ತು ಜಿಬಾಕ್ ಜಿಲ್ಲೆಗಳನ್ನು ವ್ಯಾಪಿಸಿರುವ ಟೋಪ್‌ಖಾನೆ ಪರ್ವತದಲ್ಲಿ ಪತನಗೊಂಡಿದೆ ಎಂದು ಹೇಳಿದ್ದಾರೆ. https://ainlivenews.com/pm-modi-pays-homage-to-balaram-in-ayodhya-hindu-dream-come-true/ ಅಧಿಕೃತ ಮೂಲಗಳು ಸಾವುನೋವುಗಳು ಅಥವಾ ಅಪಘಾತದ ಕಾರಣದ ಬಗ್ಗೆ ಮಾಹಿತಿಯನ್ನು ಒದಗಿಸಿಲ್ಲ. ಶನಿವಾರ ರಾತ್ರಿ ರಾಡಾರ್‌ನಿಂದ ಕಣ್ಮರೆಯಾದ ವಿಮಾನವು ಟೋಪ್‌ಖಾನಾ ಪ್ರದೇಶದ ಎತ್ತರದ ಪರ್ವತ ಗಳಲ್ಲಿ ಪತನಗೊಂಡಿದೆ ಎಂದು ಬಡಾಕ್ಷಣ್‌ನಲ್ಲಿರುವ ತಾಲಿಬಾನ್‌ನ ಪೊಲೀಸ್ ಕಮಾಂಡ್ ಹೇಳಿದೆ. ಭಾರತ ಸರ್ಕಾರವು ವಿವರಗಳನ್ನು ಪರಿಶೀಲಿಸಲು ತಂಡವನ್ನು ಕಳುಹಿಸಿದೆ ಮತ್ತು ಸಾವುನೋವುಗಳು ಸಂಭವಿಸಬಹುದು ಎಂದು ವರದಿಗಳು ಸೂಚಿಸುತ್ತಿವೆ.  

Read More

ಕನ್ನಡದ ಹೆಸರಾಂತ ನಟ ಧ್ರುವ ಸರ್ಜಾ (Dhruva Sarja) ಇಂದು ತಮ್ಮ ಇಬ್ಬರು ಮಕ್ಕಳ ನಾಮಕರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಮಕ್ಕಳ ನಾಮಕರಣ ಸಮಾರಂಭಕ್ಕೆ ಸಾಕ್ಷಿಯಾಗಲು ಬಾಲಿವುಡ್ ನಿಂದ ಸಂಜಯ್ ದತ್ (Sanjay Dutt) ಆಗಮಿಸಿದ್ದರು. ಸಂಜಯ್ ಮತ್ತು ಧ್ರುವ ಕೆಡಿ ಸಿನಿಮಾದಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ. ಅಯೋಧ್ಯೆಯಲ್ಲಿ ಬಾಲರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿರುವ ಈ ಹೊತ್ತಿನಲ್ಲಿ ನಟ ಧ್ರುವ ಸರ್ಜಾ ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ. ಮಗಳಿಗೆ ರುದ್ರಾಕ್ಷಿ ಮತ್ತು ಮಗನಿಗೆ ಹಯಗ್ರೀವ ಎಂದು ನಾಮಕರಣ ಮಾಡಿದ್ದಾರೆ. ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ನಾಮಕರಣ ಶಾಸ್ತ್ರ ನಡೆದಿದೆ.‌ ಅಯೋಧ್ಯೆ ಬಾ;ಲರಾಮ ಪ್ರಾಣ ಪ್ರತಿಷ್ಠಾಪನೆ ವೇಳೆಯೇ ನಾಮಕರಣ ಶಾಸ್ತ್ರ ನಡೆದಿದ್ದು, ಮಕ್ಕಳಿಗೆ ವಿಶೇಷ ಮತ್ತು ಅರ್ಥಪೂರ್ಣವಾದ ಹೆಸರನ್ನೇ  ಇಟ್ಟಿದ್ದಾರೆ ಧ್ರುವ ಸರ್ಜಾ. ಧ್ರುವ ಸರ್ಜಾ ಅಂಡ್ ಫ್ಯಾಮಿಲಿ ಆಂಜನೇಯನ ಭಕ್ತರು. ಆಂಜನೇಯ ಗುಡಿಯನ್ನೇ ಈ ಕುಟುಂಬ ನಿರ್ಮಾಣ ಮಾಡಿದೆ. ಧ್ರುವ ಸಿನಿಮಾದಲ್ಲಿ ಹನುಮನ ಕುರಿತಾಗಿ ಸನ್ನಿವೇಶವೋ, ಹಾಡೋ ಇದ್ದೇ ಇರುತ್ತದೆ. ಹನುಮನ…

Read More

ಪುಟ್ಟಗೌರಿ ಮದುವೆ’ ಧಾರಾವಾಹಿಯ ಮೂಲಕ ನಟನೆಗೆ ಕಾಲಿಟ್ಟ ನಮ್ರತಾ ಗೌಡ (Namrata), ಬಿಗ್‌ ಬಾಸ್‌ (Bigg Boss Kannada) ವೇದಿಕೆಗೆ ಕಾಲಿಟ್ಟಿದ್ದು ‘ಡೊಂಟ್ ಯು ನೋ… ಐ ಆಮ್ ವೆರಿ ಸೆಕ್ಸಿ’ ಎಂದು ಹಾಡುತ್ತ… ಸೌಂದರ್ಯ, ಆತ್ಮವಿಶ್ವಾಸ ಮತ್ತು ಸ್ಪಷ್ಟತೆಯ ಹದವಾದ ಮಿಶ್ರಣದಂತೆ ಕಾಣಿಸಿದ್ದ ನಮ್ರತಾ ಅವರಿಗೆ ಪ್ರೀಮಿಯರ್ ವೇದಿಕೆಯಲ್ಲಿ ಶೇಕಡಾ ಮತಗಳು ಬಂದಿದ್ದವು. ಈ ಸೀಸನ್‌ನ ಮೊದಲ ಸ್ಪರ್ಧಿಯಾಗಿ ಅವರು ಬಿಗ್‌ಬಾಸ್‌ ಮನೆಯೊಳಗೆ ಕಾಲಿಟ್ಟಿದ್ದರು. ‘ಹ್ಯಾಪಿ ಬಿಗ್‌ಬಾಸ್‌’ ಎಂಬ ಟ್ಯಾಗ್‌ಲೈನ್‌ ಅನ್ನು ತಮ್ಮ ವ್ಯಕ್ತಿತ್ವಕ್ಕೂ ನೇತುಹಾಕಿಕೊಂಡಂತಿದ್ದ ನಮ್ರತಾ ಅವರು ಸದಾ ನಗುನಗುತ್ತಲೇ ಎಲ್ಲರ ಗಮನ ಸೆಳೆದಿದ್ದರು. ಬಿಗ್‌ಬಾಸ್ ಮನೆಯೊಳಗೆ ದಿನಗಳನ್ನು ಕಳೆಯಲಾರಂಭಿಸಿದಂತೆ, ವಿನಯ್, ತುಕಾಲಿ ಸಂತೋಷ್, ಇಶಾನಿ, ಮೈಕಲ್, ಸ್ನೇಹಿತ್‌, ಗೌರಿಶ್ ಮತ್ತು ಸಿರಿ ಅವರ ಜೊತೆಗೆ ಆಪ್ತರಾಗಿದ್ದರು. ‘ಶಾಡೋ’, ‘ಚಮಚ’ ‘ಇನ್‌ಪ್ಲ್ಯೂಯೆನ್ಸ್‌ ಆಗುವವರು’ ಪದೇ ಪದೇ ಇಂಥ ಮಾತುಗಳನ್ನು ಕೇಳುತ್ತಲೇ ಬಂದ ನಮ್ರತಾ, ಬಿಗ್‌ಬಾಸ್‌ ಮನೆಯಲ್ಲಿ ಹದಿನೈದು ವಾರಗಳನ್ನು ಉಳಿದುಕೊಂಡಿರುವುದೇ ಈ ಎಲ್ಲವಕ್ಕೂ ಉತ್ತರದಂತಿತ್ತು. ಈ ಸೀಸನ್‌ನಲ್ಲಿ ಹಲವು…

Read More

ಇಂದು ಕೋಟ್ಯಾಂತರ ಭಾರತೀಯರ ಕನಸು ನನಸಾಗಿದ ದಿನ.  ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಪ್ರತಿಷ್ಠಾಪನೆ ಆಗಿದೆ. ಈ ಸುಸಂದರ್ಭದಲ್ಲಿ ಸಿರಿ ಮ್ಯೂಸಿಕ್ ಅರ್ಪಿಸುವ ಹಾಗೂ ನಟಿ ರೂಪಿಕಾ (Roopika) ಅವರ ಗೆಜ್ಜೆ ಡ್ಯಾನ್ಸ್ ಸ್ಟುಡಿಯೋ ಸಾರಥ್ಯದಲ್ಲಿ ಮೂಡಿಬಂದಿರುವ ಜಾನಕಿ ರಾಮ (Janaki Rama) ಆಲ್ಬಂ ಸಾಂಗ್ ಇತ್ತೀಚೆಗೆ ಬಿಡುಗಡೆಯಾಯಿತು. ಸುರಪುರದ ಶಾಸಕರಾದ ರಾಜುಗೌಡ, ಡಿ ಎಸ್ ಮ್ಯಾಕ್ಸ್ ನ ಎಂ ಡಿ ದಯಾನಂದ್,  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ನಟಿ ಪ್ರಿಯಾಂಕ ಉಪೇಂದ್ರ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಪೊಲೀಸ್ ಅಧಿಕಾರಿ ಶಂಕರ್ ಸೇರಿದಂತೆ ಅನೇಕ ಗಣ್ಯರು ಸೇರಿ ಅದ್ದೂರಿಯಾಗಿ ಮೂಡಿಬಂದಿರುವ “ಜಾನಕಿ ರಾಮ”  ಆಲ್ಭಂ ಸಾಂಗ್ ಬಿಡುಗಡೆ ಮಾಡಿದರು. ಹಾಡನ್ನು ವೀಕ್ಷಿಸಿದ ಎಲ್ಲಾ ಗಣ್ಯರು ಮಾತನಾಡಿ, “ಈ ಹಾಡನ್ನು ನೋಡಿದಾಗ ಮೈ ರೋಮಾಂಚನವಾಯಿತು. ಇಂದು ಇಲ್ಲೇ ರಾಮನ ಪ್ರತಿಷ್ಠಾ ವೈಭವ ನೋಡಿದ…

Read More

ಬಿಗ್‌ಬಾಸ್ Bigg Boss Kannada) ಮನೆಯಲ್ಲಿ ‘ಬೆಂಕಿ’ ಎಂದೇ ಎಲ್ಲರಿಂದಲೂ ಹೇಳಿಸಿಕೊಳ್ಳುತ್ತಿದ್ದವರು ತನಿಷಾ ಕುಪ್ಪಂಡ. ಸ್ನೇಹಿತರಿಗೆ ಬೆಚ್ಚನೆಯ ಭಾವ ನೀಡುತ್ತ, ಎದುರಾಳಿಯಾಗಿ ನಿಂತರೆ ಸುಡುವ ಕೋಪವನ್ನೂ ತೋರುತ್ತಿದ್ದ ಅವರಿಗೆ ಈ ಬಿರುದು ಒಪ್ಪುವಂಥದ್ದೇ ಆಗಿದೆ. ನಡುವಲ್ಲಿ ಕಾಲುನೋವಾಗಿ ವಾಪಸ್ ಬರುತ್ತಾರೋ ಇಲ್ಲವೋ ಎಂಬ ಹಂತ ತಲುಪಿದರೂ, ಬಿಡದೇ ವಾಪಸ್ ಬಂದು ಸಾಕಷ್ಟು ಆಟವಾಡಿ ನೂರಕ್ಕೂ ಅಧಿಕ ದಿನ ಉಳಿದಿಕೊಂಡಿದ್ದ ತನಿಷಾ ಕುಪ್ಪಂಡ ಕಳೆದ ವಾರ ಮಿಡ್‌ವೀಕ್ ಎಲಿಮಿನೇಷನ್‌ನಲ್ಲಿ ಮನೆಯಿಂದ ಹೊರಗೆ ಬಂದಿದ್ದರು. ‘ಇನ್ನಷ್ಟು ದಿನ ಉಳಿದುಕೊಳ್ಳುತ್ತೇನೆ’ ಎಂಬ ವಿಶ್ವಾಸದಲ್ಲಿಯೇ ಇದ್ದ ಅವರಿಗೆ ಎಲಿಮಿನೇಷನ್ ಶಾಕ್ ಕೊಟ್ಟಿತ್ತು. ಅದಕ್ಕಾಗಿ ಹೋಗುವಾಗ ಕಣ್ಣೀರು ಹಾಕುತ್ತ ಮನೆಯ ಸದಸ್ಯರಿಗೂ ಜರಿದು, ‘ಬಿಗ್‌ಬಾಸ್ ಯಾಕಿಷ್ಟುಕೆಟ್ಟದಾಗಿ ಕಳಿಸಿಕೊಡ್ತೀರಾ?’ ಎಂದು ಕೇಳುತ್ತಲೇ ಹೊರಗೆ ಹೋದರು. ಆದರೆ ಈ ವಾರದ ವೀಕೆಂಡ್ ಎಪಿಸೋಡ್‌ನಲ್ಲಿ ಮತ್ತೆ ವೇದಿಕೆಗೆ ಬಂದು ಕಿಚ್ಚನ ಜೊತೆಗೆ ಬಿಚ್ಚುಮಾತುಗಳನ್ನಾಡಿದ ತನಿಷಾ ಕುಪ್ಪಂಡ ಮನೆಯಿಂದ ಹೊರಗೆ ಬಂದಕೂಡಲೇ ಜಿಯೊಸಿನಿಮಾಗೆ ಎಕ್ಸ್‌ಕ್ಲ್ಯೂಸಿವ್ ಸಂದರ್ಶನ ನೀಡಿದ್ದಾರೆ. ಅದರ ಅಕ್ಷರರೂಪ ಇಲ್ಲಿದೆ. ಆ ಸಂದರ್ಭದಲ್ಲಿ…

Read More

ಬೆಂಗಳೂರು : ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಶ್ರೀರಾಮ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡು ಮಾತನಾಡಿದರು. ನಾನು ನಾಸ್ತಿಕನಲ್ಲ-ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾತ್ತೇವೆ, ಗುಡಿ ಕಟ್ಟುತ್ತೇವೆ, ಪೂಜಿಸುತ್ತೇವೆ ಎಂದರು. ಯಾವುದೇ ಧರ್ಮ ಜಾತಿ-ಧರ್ಮ ಆಧಾರದ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಶ್ರೀರಾಮ ಸಮಾಜಮುಖಿ ಆಗಿದ್ದರು. ಒಬ್ಬ ಮಡಿವಾಳನ ಮಾತಿಗೂ ಬೆಲೆ ಕೊಟ್ಟರು. ಪಿತೃವಾಕ್ಯ ಪರಿಪಾಲನೆಗೆ ವನವಾಸಕ್ಕೆ ಹೋದರು. ಶ್ರೀರಾಮ, ಲಕ್ಷ್ಮಣ, ಸೀತೆ, ಆಂಜನೇಯರನ್ನು…

Read More

ಧಾರವಾಡ: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಪ್ರಾಣ ಪ್ರತಿಷ್ಠಾನ ಇಂದು ನೇರವೇರಿದ ಹಿನ್ನೆಲೆಯಲ್ಲಿ, ಧಾರವಾಡದಲ್ಲಿ ಕ್ಷೌರಕರೊಬ್ಬರು ಗ್ರಾಹಕರಿಗೆ ಉಚಿತ ಕಟ್ಟಿಂಗ್ ಮಾಡುವ ಮೂಲಕ ಶ್ರೀರಾಮನ ಮೇಲೆನ ಭಕ್ತಿ ಸಮರ್ಪಿಸಿದ್ದಾರೆ.‌ ಧಾರವಾಡದ ನಿವಾಸಿಯಾದ ಶಿವಾನಂದ ಹಡಪದ ಎಂಬಾತರೇ ಉಚಿತವಾಗಿ ತಮ್ಮ ಕ್ಷೌರಿಕ್ ಶಾಪನಲ್ಲಿ ಉಚಿತವಾಗಿ ಇಂದು ಒಂದು ದಿನ ಕಟ್ಟಿಂಗ್ ಮಾಡುವ ಸಂಕಲ್ಪ‌ ಮಾಡಿದ್ದಾರೆ. ಅಪ್ಪ ರಾಮ ಹಾಗೂ ಹನುಮಂತ ಭಕ್ತರಾಗಿರೋ ಶಿವಾನಂದವರು ಈ ಹಿಂದಿನಿಂದಲೂ ಜಯಂತಿಗಳಂದು ವಿಶೇಷ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದಾರೆ. ಅಯೋಧ್ಯಯಲ್ಲಿ ಐತಿಹಾಸಿಕ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಉಚಿತ ಕಟ್ಟಿಂಗ ಮಾಡಿ ತಮ್ಮ ಭಕ್ತಿ ತೋರಿದ್ದಾರೆ. ಜೊತೆಗೆ ಸಾರ್ವಜನಿಕರಿಗೆ ಇಂದು ಸಂಜೆಯವರೆಗೆ ಪಲಾವ್ ನೀಡಿ ದೇವರ ಕೃಪೆಗೆ ಪಾತ್ರರಾಗಿದ್ದಾರೆ.

Read More