Author: AIN Author

ಪಲ್ಲಕ್ಕಿ, ಗಣಪ, ಪಾರಿಜಾತದಂಥ ಅದ್ಭುತ  ಚಿತ್ರಗಳನ್ನು ನೀಡಿದ  ಪರಮೇಶ್ ಅವರೀಗ ಮತ್ತೊಂದು ಇನ್ ಟೆನ್ಸ್ ಲವ್ ಸ್ಟೋರಿಯನ್ನು ಪ್ರಣಯಂ ಚಿತ್ರದ ಮೂಲಕ ಪ್ರೇಕ್ಷಕರಿಗೆ ನೀಡಲಿದ್ದಾರೆ.  ಮನಸ್ವಿ ವೆಂಚರ್ಸ್ ಹಾಗೂ ಪಿಟು ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಪರಮೇಶ್ ಅವರೇ ಕಥೆ ಬರೆದು ನಿರ್ಮಿಸಿರುವ  ಈ ಚಿತ್ರಕ್ಕೆ ಎಸ್. ದತ್ತಾತ್ರೇಯ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಬಿಚ್ಚುಗತ್ತಿ ಖ್ಯಾತಿಯ  ನಟ ರಾಜವರ್ಧನ್, ನೈನಾ ಗಂಗೂಲಿ ಚಿತ್ರದ  ನಾಯಕ, ನಾಯಕಿಯಾಗಿ ಅಭಿನಯಿಸಿದ್ದಾರೆ.  ಈ ಚಿತ್ರದ ಟ್ರೈಲರ್  ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮಾಜಿ ಉಪ ಮೇಯರ್ ಮೋಹನ್ ರಾಜು ಟ್ರೈಲರ್ ರಿಲೀಸ್ ಮಾಡಿ  ಈ ಟೈಟಲ್  ಕನ್ನಡದ ಜೊತೆ ತೆಲುಗು ಭಾಷೆಗೂ ಹತ್ತಿರವಾಗುವಂತಿದೆ. ಹಾಡು, ಕಾನ್ಸೆಪ್ಟ್ ಎರಡೂ ಚೆನ್ನಾಗಿದೆ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು.  ಈ ಚಿತ್ರದಲ್ಲಿ  ಜಯಂತ್ ಕಾಯ್ಕಿಣಿ ಅವರು 3 ಹಾಡುಗಳನ್ನು ಬರೆದಿದ್ದು, ಮನೋಮೂರ್ತಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ವಿ.ನಾಗೇಶ್ ಆಚಾರ್ಯ ಅವರ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ ಕಾರ್ಯಕ್ರಮದಲ್ಲಿ ಮಾತನಾಡಿದ…

Read More

ಕರ್ನಾಟಕ ಸರ್ಕಾರದ ಹೆಮ್ಮೆಯ ಉತ್ಸವವಾದ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (Bangalore Chirotsava) ಬೆಂಗಳೂರಿನಲ್ಲಿ ನಡೆಯಲಿದೆ. ಈ ಚಿತ್ರೋತ್ಸವದ ಲೋಗೋವನ್ನು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ಅನಾವರಣ ಮಾಡಿದರು. ಉತ್ಸವದ ಉದ್ಘಾಟನಾ ಸಮಾರಂಭ 2024ರ ಫೆಬ್ರವರಿ 29 ರಂದು ವಿಧಾನಸೌಧದ ಮುಂಭಾಗ ನಡೆಯಲಿದ್ದು, ಮಾರ್ಚ್ 7ರಂದು ಸಮಾರೋಪ ಸಮಾರಂಭ  ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ. 15 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಈ ಬಾರಿ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಚಲನಚಿತ್ರ ಸಂಘಟನೆಗಳ ಅಂತಾರಾಷ್ಟ್ರೀಯ ಮಹಾ ಒಕ್ಕೂಟ (FIAPF) ಮಾನ್ಯತೆ ಪಡೆದ ಈ  ಚಲನಚಿತ್ರೋತ್ಸವ, ರಾಷ್ಟ್ರೀಯ ಚಲನಚಿತ್ರ ಪ್ರತಿನಿಧಿಗಳು, ಚಲನಚಿತ್ರ ನಿರ್ಮಾಪಕರು, ಕಲಾವಿದರು, ನಿರ್ದೇಶಕರು, ತಂತ್ರಜ್ಞರು ಮತ್ತಿತರ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸಮಾರೋಪ ಸಮಾರಂಭ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದ್ದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಏಷಿಯನ್, ಭಾರತೀಯ ಹಾಗೂ ಕನ್ನಡ ಚಲನಚಿತ್ರ…

Read More

ಬೆಂಗಳೂರು: ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ಡಿಸೇಲ್ ರೇಟ್ ನಲ್ಲಿ, ಬಸ್ ನಿರ್ವಹಣೆ ಮಾಡುವುದೇ ಬಿಎಂಟಿಸಿಗೆ ಕಷ್ಟವಾಗಿದೆ. ಇದರ ಜೊತೆ ಬಿಎಂಟಿಸಿ ಪಾಲಿಗೆ ಬೀಳಿಯಾನೆಯಾದ ವೋಲ್ವೊ ಬಸ್ಗಳಿಂದ ಸಂಭವಿಸುತ್ತಿರುವ ನಷ್ಟದ ತಗ್ಗಿಸಲು ನಾನಾ ಸರ್ಕಸ್ ಮಾಡ್ತಿದೆ. ಈಗಾಗಲೇ ಬಿಎಂಟಿಸಿ ವೋಲ್ವೊ ಬಸ್ಗಳ ಸಂಖ್ಯೆಯನ್ನೇ ಕಡಿತಗೊಳಿಸಲಾರಂಭಿಸಿದೆ. ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಏರ್ಪೋರ್ಟ್ ಗೆ ಹೋಗ್ತಿರುವ ವೋಲ್ವೋ ಬಸ್ ಗಳಿಗೂ ಗುಡ್ ಬಾಯ್ ಹೇಳಲು ಸಿದ್ಧತೆ ನಡೆಯುತ್ತಿದೆ. ಈ ಮೂಲಕ ವೋಲ್ವೋ ಬದಲು ಎಲೆಕ್ಟಿಕ್ ಎಸಿ ಬಸ್ ರಸ್ತೆಗಿಳಸಲು ತಯಾರಿ ನಡೆಯುತ್ತಿದೆ. ಬೆಂಗಳೂರು ಜನರಿಗೆ ಹೈಪೈ ಪ್ರಮಾಣ ನೀಡುತ್ತಿದ್ದ ಬಸ್ ಗಳು ಅಂದರೆ ಅದು ವೋಲ್ವೋ ಬಸ್ ಗಳು. ಬಸ್ ಗಳು ರಸ್ತೆಗಿಳಿದ ಆರಂಭದಲ್ಲಿ ಓಡಾಟ ನಡೆಸೋದು ಅಂದರೆ ಬೆನ್ಹ್ ಕಾರ್ ನಲ್ಲಿ ಓಡಾಡಿದಷ್ಟು ಪ್ರಸ್ಟೀಜ್ ವಿಷ್ಯವಾಗಿತ್ತು. ಆದ್ರೆ ಈ ಬಸ್ ಗಳು ಇನ್ಮೇಲೆ ಓಡಾಟ ನಡೆಸೋದೇ ಅನುಮಾನವಾಗಿದೆ. ಹೌದು ನಗರದಲ್ಲಿ ಬಿಎಂಟಿಸಿಗೆ ಹೊರೆ ಯಾಗಿರೋ ಈ ಬಸ್ ಗಳೀಗೆ ಮುಕ್ತಿ ನಡಲು…

Read More

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಇದೇ 22ರಂದು ನಡೆಯಲಿದೆ. ಆ ದಿನ ಅಶಾಂತಿ, ಅಡ್ಡಿ ಆತಂಕ, ಅಹಿತಕರ ಘಟನೆ ಉಂಟಾಗದಂತೆ ರಾಜ್ಯ ಸರಕಾರ ಮುನ್ನೆಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 22ರಂದು ಸರಕಾರಿ ರಜೆ ಘೋಷಿಸಲು ಮನವಿ ಮಾಡಿದರು. ಪಿವಿಆರ್ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ ಇರಲಿದೆ. ಜನರು ಉತ್ತರಾಭಿಮುಖವಾಗಿ 5 ದೀಪ ಬೆಳಗಿಸಲು ವಿನಂತಿಸಿದರು. ಜನವರಿ 22ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯ ಐತಿಹಾಸಿಕ ಘಳಿಗೆಗೆ ರಾಮಭಕ್ತರಷ್ಟೇ ಅಲ್ಲ; ಇಡೀ ಜಗತ್ತಿನ ಅನೇಕ ದೇಶಗಳಲ್ಲಿ ಕೂಡ ಉತ್ಸಾಹ ಕಾಣುತ್ತಿದೆ. ಪ್ರಭು ಶ್ರೀರಾಮಚಂದ್ರ ಮತ್ತು ಕರ್ನಾಟಕದ ಸಂಬಂಧ ನಿನ್ನೆ ಮೊನ್ನೆಯದಲ್ಲ. ರಾಮಾಯಣ ಯುಗದಿಂದ ಈ ಸಂಬಂಧ ಇದೆ. ಸೀತಾಮಾತೆಯ ಅಪಹರಣದ ನಂತರ ಶ್ರೀರಾಮನು ಲಕ್ಷ್ಮಣನ ಜೊತೆ ಕಿಷ್ಕಿಂಧೆಗೆ (ಇಂದಿನ ಹಂಪಿ) ಪ್ರಯಾಣ ಬೆಳೆಸಿದ ಕುರುಹುಗಳಿವೆ. ಕೊಪ್ಪಳದ…

Read More

ಬೆಂಗಳೂರು: ಅಯೋಧ್ಯೆಯಲ್ಲಿ ರಾಮನದ್ದೇ ಜಪ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾನಕ್ಕೆ ಕ್ಷಣಗಣನೆ ಶುರುವಾಗಿದೆ. ಸೋಮವಾರ ಅಪರೂಪದ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿ ಆಗ್ತಿದೆ. ಹೀಗಾಗಿ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಸಂಭ್ರಮ ಸಡಗರ ಮನೆ ಮಾಡಿದ್ದು, ಹಬ್ಬದ ವಾತಾವರಣವೇ ಸೃಷ್ಟಿ ಆಗಿದೆ. ಅದ್ಭುತ ತೇಜಸ್ವಿ ಮುಖ ಹೊಂದಿರುವ ಬಾಲ ರಾಮನನ್ನು ನೋಡುವ ಮೂಲಕ,  ಅರುಣ್ ಯೋಗಿರಾಜ್ ಕೈಚಳಕವನ್ನು ಎಲ್ಲರೂ ಕಣ್ತುಂಬಿಕೊಂಡಿದ್ದಾರೆ  ಇಕ್ಷ್ವಾಕು ವಂಶದ ಪ್ರಭು ರಾಮ, ಅಯೋಧ್ಯೆಯಲ್ಲಿ ಭಕ್ತರ ದರ್ಶನ ತೋರಲಿದ್ದಾನೆ. ಇಡೀ ನಗರವೇ ವಿದ್ಯುತ್​ ದೀಪಗಳಿಂದ ಕಂಗೊಳಿಸ್ತಿದೆ. ಸೋಮವಾರ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಇಡೀ ಭರತ ಭೂಮಿ ಕಾತರದಿಂದ ಕಾಯ್ದಿದೆ. ಗುರುವಾರ ಗರ್ಭಗುಡಿಯಲ್ಲಿ ರಾಮಲಲ್ಲಾ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿತ್ತು. ಈ ಬೆನ್ನಲ್ಲೇ ಶುಕ್ರವಾರ ಪೂರ್ಣರೂಪದ ಬಾಲರಾಮನದ ದರ್ಶನವಾಗಿದೆ. ಬಾಲರಾಮನ ಸಂಪೂರ್ಣ ವಿಗ್ರಹವನ್ನು ತೋರಿಸಲಾಗಿದೆ.  ಇದೀಗ ಎಲ್ಲೆಡೆ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ವಿಗ್ರಹವನ್ನು ತಯಾರಿಸಿದ್ದು ಪ್ರಾಣ ಪ್ರತಿಷ್ಠಾಪನೆಯ ಮುಹೂರ್ತ ಜನವರಿ 22 ರಂದು ಮಧ್ಯಾಹ್ನ 12.30 ಕ್ಕೆ.…

Read More

ಬೆಂಗಳೂರು:- ಪ್ರಧಾನಿ ಮೋದಿಯನ್ನು ಚರ್ಚೆಗೆ ಕರೆದು ಸಿದ್ದು ಉದ್ಧಟತನ ತೋರಿದ್ದಾರೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ವಿಶ್ವಾಸದ ಕೊರತೆ ಎದ್ದು ಕಾಣುತ್ತಿದೆ. ರಾಜ್ಯ ಸರ್ಕಾರ ಪ್ರತಿಯೊಂದಕ್ಕೂ ಕೇಂದ್ರ ಮತ್ತು ಪ್ರಧಾನಿಗಳನ್ನು ದೂರುವ ಪರಿಪಾಠ ಬೆಳೆಸಿಕೊಂಡಿದೆ. ಇದು ಸರಿಯಾದ ಕ್ರಮವಲ್ಲ. ತನ್ನ ಆಡಳಿತ ವೈಫಲ್ಯ, ಗ್ಯಾರಂಟಿಗಳ ವಿಫಲತೆ, ಬರಗಾಲ, ರೈತರ ಸಂಕಷ್ಟದ ಬಗ್ಗೆ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ನಿರಂತರವಾಗಿ ಮೋದಿ ಮೇಲೆ ವಾಗ್ದಾಳಿ ನಡೆಸಲಾಗುತ್ತಿದೆ ಎಂದು ಕಿಡಿಕಾರಿದರು. ಲೋಪವಾಗಿರುವ ಕಡೆ ಗಮನ ಹರಿಸಿ ಸರಿ ಮಾಡಿಕೊಳ್ಳಬೇಕು ಮತ್ತು ದೆಹಲಿಗೆ ಹೋಗಿ ಚರ್ಚೆ ಮಾಡಬೇಕು. ಆದರೆ ಮುಖ್ಯಮಂತ್ರಿಗಳು ಪ್ರಧಾನಿಯನ್ನು ಬಹಿರಂಗ ಚರ್ಚೆಗೆ ಕರೆಯುವುದು ಉದ್ಧಟತನದ ಪರಮಾವಧಿ. ಇದು ಸರಿಯಾದ ನಡವಳಿಕೆಯಲ್ಲ. ಪ್ರಧಾನಿಗಳನ್ನು ಚರ್ಚೆಗೆ ಕರೆಯುವ ಮುನ್ನ ತಮ್ಮಿಂದ ಆಗಿರುವ ಲೋಪಗಳನ್ನು ಸರಿಪಡಿಸಿಕೊಳ್ಳಬೇಕಿದೆ ಎಂದರು. ಪದೇ ಪದೇ ಕೇಂದ್ರದ ಜತೆ ಸಂಘರ್ಷ ಸರಿಯಲ್ಲ. ಇಂತಹ ಸಂಘರ್ಷದಿಂದ…

Read More

ಕಪ್ಪು ಒಣದ್ರಾಕ್ಷಿ ಕಪ್ಪು ದ್ರಾಕ್ಷಿಯ ಒಣಗಿದ ರೂಪವಾಗಿದೆ. ಅದರಲ್ಲಿಯೂ ಬೇರೆಲ್ಲಾ ದ್ರಾಕ್ಷಿಯ ವಿಧಗಳಿಗಿಂತಲೂ ಇದು ಅತೀ ಹೆಚ್ಚು ಆರೋಗ್ಯಕರ ಅಂಶಗಳನ್ನು ಒಳಗೊಂಡಿದೆ. ಕಪ್ಪು ಒಣದ್ರಾಕ್ಷಿಗಳನ್ನು ತಿನ್ನುವುದರಿಂದ ಹಲವು ಪ್ರಯೋಜನಗಳನ್ನು ಹೊಂದಿದೆ. ಆದರೆ ಈ ಕಪ್ಪು ದ್ರಾಕ್ಷಿಯನ್ನು ಹಾಗೆಯೇ ತಿನ್ನುವ ಬದಲು ರಾತ್ರಿ ಮಲಗುವ ಮುನ್ನ ನೀರಿನಲ್ಲಿ ನೆನೆಸಿಟ್ಟು ಮರುದಿನ ಬೆಳಗ್ಗೆ ತಿಂದರೆ ದುಪ್ಪಟ್ಟು ಲಾಭವನ್ನು ಪಡೆಯಬಹುದು. ಇದು ದೇಹವನ್ನು ಮಾತ್ರವಲ್ಲದೆ ಚರ್ಮ ಮತ್ತು ಕೂದಲಿನ ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಮತ್ತು ನೀರಿನಲ್ಲಿ ನೆನೆಸಿದ 10 ಕಪ್ಪು ಒಣ ದ್ರಾಕ್ಷಿಯನ್ನು ನೀವು ಪ್ರತಿದಿನ ಸೇವಿಸಿದರೆ, ಆರೋಗ್ಯದಲ್ಲಿ ಬದಲಾವಣೆಯನ್ನು ಕಾಣಬಹುದು. 1. ರಕ್ತವನ್ನು ಶುದ್ಧೀಕರಿಸುತ್ತದೆ ಕಪ್ಪು ಒಣದ್ರಾಕ್ಷಿ ಶುದ್ಧೀಕರಣ ಗುಣಗಳನ್ನು ಹೊಂದಿದೆ. ಇದು ರಕ್ತನಾಳಗಳಿಂದ ಹಾನಿಕಾರಕ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಮತ್ತು ಒಣ ದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿ ಸೇವಿಸಿದಾಗ ಅವುಗಳಲ್ಲಿರುವ ಅಗತ್ಯ ಉತ್ಕರ್ಷಣ ನಿರೋಧಕಗಳು ದೇಹವು ಸುಲಭವಾಗಿ ಹೀರಲ್ಪಡುತ್ತದೆ. ಪರಿಣಾಮವಾಗಿ ರಕ್ತ ಪರಿಚಲನೆ ಸುಧಾರಿಸುತ್ತದೆ, ಯಕೃತ್ತು ಶುದ್ಧವಾಗಿರುತ್ತದೆ ಮತ್ತು ಚರ್ಮವು…

Read More

ರಾಜಧಾನಿ ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕನ್ಸಲ್ಟೆಂಟ್​- COO​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಜನವರಿ 20, 2024 ಅಂದರೆ ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಬ್ಲಿಕ್ ಪಾಲಿಸಿ & ಮ್ಯಾನೇಜ್​ಮೆಂಟ್​/ ಎಕನಾಮಿಕ್ಸ್​/ ಅಡ್ಮಿನಿಸ್ಟ್ರೇಶನ್​​ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು. ವೇತನ: ವಾರ್ಷಿಕ ಪ್ಯಾಕೇಜ್ 25 ಲಕ್ಷ ಉದ್ಯೋಗದ ಸ್ಥಳ: ಬೆಂಗಳೂರು ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಆಯ್ಕೆ ಪ್ರಕ್ರಿಯೆ:…

Read More

ಗದಗ: ಪ್ರದೇಶದ ಪರಿಚಿತತೆಗಾಗಿ ಭದ್ರಾವತಿಯ 97 RAF ಬಟಾಲಿಯನ್ ಗದಗ ಜಿಲ್ಲೆಗೆ ಆಗಮಿಸಿದೆ. ಒಟ್ಟು 80 ಜನ RAF ಯೋಧರನ್ನ ಒಳಗೊಂಡ ತಂಡವು ಜನೆವರಿ 19 ರಿಂದ 25 ರ ವರೆಗೆ ಗದಗ ನಗರ ಸೇರಿದಂತೆ ಗದಗ ಜಿಲ್ಲೆಯ ವಿವಿಧ ತಾಲೂಕಾ ಕೇಂದ್ರ ಹಾಗೂ ಕೆಲವು ಪಟ್ಟಣಗಳಲ್ಲಿ ಏರಿಯಾ ಫ್ಯಾಮಿಲಿಯರೈಜೇಶನ್ ನಡೆಸಲಿದೆ. ಜಿಲ್ಲೆಯ ಮಾಹಿತಿ ಪಡೆಯುವಿಕೆ, ಪ್ರದೇಶದ ಪರಿಚಿತತೆಗಾಗಿ, ಸ್ಥಳ ಹಾಗೂ ಇಲ್ಲಿನ ವಾತಾವರಣ, ಸಂಸ್ಕೃತಿಯ ಬಗ್ಗೆ ಮಾಹಿತಿ ಪಡೆಯಲು ಈ ತಂಡವು ಆಗಮಿಸಿದೆ. ಜಿಲ್ಲೆಯ ಪ್ರಮುಖ ನಗರ ಹಾಗೂ ಶಹರ ವ್ಯಾಪ್ತಿಯಲ್ಲಿ ಪಥ ಸಂಚಲನ ಜರುಗಿಸಲಾಗುತ್ತಿದೆ. ಆರ್.ಎ.ಎಫ್ ತಂಡಕ್ಕೆ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ತಾವು ನಿರ್ವಹಿಸುವ ಸ್ಥಳ ಅಪರಿಚಿತ ಆಗಬಾರದು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಎರ್ಪಡಿಸಲಾಗಿದೆ ಎಂದು ಗದಗ ಎಸ್ಪಿ ಬಿ ಎಸ್ ನೇಮಗೌಡ ಸುದ್ದಿಗೋಷ್ಠಿ ನಡೆಸಿ ಮಾಹಿತಿಯನ್ನ ನೀಡಿದ್ರು. ಅದೇ ನಿಮಿತ್ಯವಾಗಿ ಗದಗ ನಗರದ ಪ್ರಮುಖ ರಸ್ತೆಗಳಲ್ಲಿ RAF ತಂಡದಿಂದ ರೂಟ್ ಮಾರ್ಚ ಮಾಡಲಾಯಿತು. ಈ ಸಂದರ್ಭದಲ್ಲಿ…

Read More

ಮಧುಮೇಹವನ್ನು ನಿಯಂತ್ರಣದಲ್ಲಿಡುವ ಅನೇಕ ಆಹಾರ ಪದಾರ್ಥಗಳಿವೆ. ಟೈಪ್-2 ಡಯಾಬಿಟಿಸ್ ರೋಗಿಗಳಿಗೆ ಪ್ರಯೋಜನಕಾರಿಯಾದ ನಿರ್ದಿಷ್ಟ ರೀತಿಯ ಆಹಾರವನ್ನು ಹೊಸ ಅಧ್ಯಯನ ಬಹಿರಂಗಪಡಿಸಿದೆ. ‘ಫ್ರಾಂಟಿಯರ್ಸ್ ಇನ್ ನ್ಯೂಟ್ರಿಷನ್’ ನಡೆಸಿದ ಅಧ್ಯಯನದ ಪ್ರಕಾರ, ಪ್ರತಿದಿನ ಆಹಾರದಲ್ಲಿ ರಾಗಿಯನ್ನು ಸೇರಿಸುವ ಜನರ ರಕ್ತದಲ್ಲಿನ ಗ್ಲೂಕೋಸ್‌ ಮಟ್ಟ 12 ರಿಂದ 15 ಪ್ರತಿಶತದಷ್ಟು ಕಡಿಮೆಯಾಗುತ್ತದೆ ಎನ್ನಲಾಗುತ್ತದೆ. ಇದು ಮಧುಮೇಹ ಮತ್ತು ಮಧುಮೇಹ ಪೂರ್ವ ಎರಡರಲ್ಲೂ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ. ಅಧ್ಯಯನಗಳ ಪ್ರಕಾರ, ಮಧುಮೇಹ ಮತ್ತು ಮಧುಮೇಹ ಪೂರ್ವದಲ್ಲಿ ರಾಗಿ ಸೇವನೆಯು ತುಂಬಾ ಉಪಯುಕ್ತವಾಗಿದೆ ಎಂದು ಸಾಬೀತಾಗಿದೆ. ರಾಗಿ ಗ್ಲೈಸೆಮಿಕ್ ಇಂಡೆಕ್ಸ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ದೇಹದಲ್ಲಿನ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಪೌಷ್ಟಿಕತಜ್ಞರ ಪ್ರಕಾರ, ಮಧುಮೇಹ ರೋಗಿಗಳು ಪ್ರತಿನಿತ್ಯ ತಮ್ಮ ಆಹಾರದಲ್ಲಿ ರಾಗಿಯನ್ನು ಸಾಧ್ಯವಾದಷ್ಟು ಸೇರಿಸಿಕೊಳ್ಳಬೇಕು. ಗ್ಲೈಸೆಮಿಕ್ ಸೂಚ್ಯಂಕದ ಪ್ರಕಾರ, ಇತರ ಕೆಲವು ಆಹಾರಗಳು ರಕ್ತದಲ್ಲಿನ ಸಕ್ಕರೆಯನ್ನು ತ್ವರಿತವಾಗಿ ಅಥವಾ ನಿಧಾನವಾಗಿ ಹೆಚ್ಚಿಸುತ್ತವೆ. ಆದರೆ ರಾಗಿ ಕೊಲೆಸ್ಟ್ರಾಲ್ ಕಡಿಮೆ ಮಾಡುವ ಜೊತೆ ಸಕ್ಕರೆ ಮಟ್ಟವನ್ನು…

Read More