Author: AIN Author

ಬೆಳಗಾವಿ : ಭೀಕರ ಬರಕ್ಕೆ ಅನ್ನದಾತರು ತತ್ತರಿಸಿ ಹೋಗಿದ್ದಾರೆ. ಅದ್ರಲ್ಲೂ ದ್ರಾಕ್ಷಿ ಬೆಳೆಗಾರರ ಗೊಳಂತೂ ಹೇಳತೀರದು. ಸಾಲ-ಸೂಲ ಮಾಡಿ ಲಕ್ಷ  ಗಟ್ಟಲೆ ಭೂಮಿಯಲ್ಲಿ ಹಣ ಖರ್ಚು ಮಾಡಿದ ರೈತರು ಇಂದು ಕಂಗಾಲಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲವು ಗ್ರಾಮಗಳಲ್ಲಿ ದ್ರಾಕ್ಷಿ ಬೆಳೆಗಾರರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಕಾಗವಾಡ ವ್ಯಾಪ್ತಿಯ ಸಂಬರಗಿ ಗ್ರಾಮದ ವಿಠ್ಠಲ್ ಭಾವು ಶಿಂಧೆ ಎಂಬ ರೈತ ಕಳೆದ ಎಂಟು ವರ್ಷಗಳಿಂದ ಲಕ್ಷಗಟ್ಟಲೆ ಖರ್ಚು ಮಾಡಿ ದ್ರಾಕ್ಷಿ ಬೆಳೆದರೂ ಎರಡು ಬಾರಿ ಮಾತ್ರ ಫಸಲು ಕೈಗೆಟಕಿದೆ. ಅದ್ರಲ್ಲೂ ಈ ಬಾರಿ ಬರಗಾಲದ ಛಾಯೆ ಆವರಿಸಿ ನೀರು ಇಲ್ಲದೆ ರೈತರು ಕಂಗಾಲಾಗಿದ್ದು, ದ್ರಾಕ್ಷಿ ಬೆಳೆದ ರೈತರು ಬೆಳೆ ನಾಷವಾದ ಪರಿಣಾಮ ನಷ್ಟದ ಕೊಂಡಿಗೆ ಸಿಲುಕಿ ಮತ್ತೆ ಬರ ಸಿಡಿಲು ಅಪ್ಪಳಂಸಿದಂತಾಗಿದೆ. ವಿಜಯಪುರ ಬಿಟ್ಟರೆ ರಾಜ್ಯದಲ್ಲಿ ಅತೀ ಹೆಚ್ಚು ದ್ರಾಕ್ಷಿ ಬೆಳೆಯುವ ನಾಡು ಎಂದರೆ ಅದು ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರ. ಆದರೆ. ಪ್ರಕೃತಿ ವಿಮೋಪದಿಂದ ರೋಗಭಾದೆಗೆ ತುತ್ತಾಗಿ ನೂರಾರು ಎಕರೆ…

Read More

ದರ್ಶನ್ ನಟನೆ ಕಾಟೇರ ಸಿನಿಮಾ ಮತ್ತೊಂದು ದಾಖಲೆ ಬರೆದಿದೆ. ಒಂದು ಕೋಟಿಗೂ ಅಧಿಕ ಟಿಕೆಟ್ ಮಾರಾಟವಾಗುವ ಮೂಲಕ 206 ಕೋಟಿ ರೂಪಾಯಿಯನ್ನು ಬಾಕ್ಸ್ ಆಫೀಸಿನಿಂದ (Box Office) ಕೊಳ್ಳೆ ಹೊಡೆದಿದೆ. 200 ಕೋಟಿ ರೂಪಾಯಿ ಕ್ಲಬ್ ಸೇರಿದ ಪೋಸ್ಟರ್ ಅನ್ನು ದರ್ಶನ್ ಅಭಿಮಾನಿಗಳು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಈ ನಡುವೆ ಸುದೀಪ್ ಮತ್ತೊಂದು ಸಂಭ್ರಮದ ಸುದ್ದಿ ಕೊಟ್ಟಿದ್ದಾರೆ. ಕೆಲವು ದಿನಗಳಿಂದ ಕಾಟೇರ (Katera) ಸಿನಿಮಾವನ್ನು ಕಿಚ್ಚ ಸುದೀಪ್ (Sudeep) ನೋಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಜೊತೆ ಸುದೀಪ್ ಮಾತನಾಡಿ, ಅತೀ ಶೀಘ್ರದಲ್ಲೇ ಸಿನಿಮಾ ನೋಡುತ್ತೇನೆ ಎಂದು ಹೇಳಿದ್ದಾಗಿ ವರದಿ ಆಗಿತ್ತು. ಅದೀಗ ನಿಜವಾಗಿದೆ. ಸುದೀಪ್ ಕಾಟೇರ ಸಿನಿಮಾವನ್ನು ವೀಕ್ಷಿಸಿದ್ದಾರೆ. ಈ ಮಾಹಿತಿಯನ್ನು ಸ್ವತಃ ಸುದೀಪ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ಈ ಹಿಂದೆ ನಡೆದ ಸೆಲೆಬ್ರಿಟಿ ಶೋಗೆ ಬರುವಂತೆ ಸುದೀಪ್ ಅವರಿಗೆ ಕಾಟೇರ ತಂಡದಿಂದ ಕರೆ ಹೋಗಿತ್ತು. ಕಿಚ್ಚ ಶೂಟಿಂಗ್ ನಲ್ಲಿ ಇರುವ ಕಾರಣದಿಂದಾಗಿ…

Read More

ಬೆಂಗಳೂರು:  ಪ್ರವಾಸಿ ವೆಸ್ಟ್ ಇಂಡೀಸ್ ಎದುರು ಟೆಸ್ಟ್‌ ಕ್ರಿಕೆಟ್‌ ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಅಂತರದ ಮುನ್ನಡೆ ಗಳಿಸಿದೆ. ಇಲ್ಲಿನ ಅಡಿಲೇಡ್‌ ಓವಲ್‌ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಅಧಿಕಾರಯುತ ಪ್ರದರ್ಶನ ನೀಡಿದ ಆಸ್ಟ್ರೇಲಿಯಾ ತಂಡ ಮೂರನೇ ದಿನ 10 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು. ಇನ್ನು 25 ರನ್‌ಗಳ ಹಿನ್ನಡೆಯಲ್ಲಿತ್ತು. ಮೂರನೇ ದಿನ ತಂಡ 9 ವಿಕೆಟ್‌ ನಷ್ಟದಲ್ಲಿ 94 ರನ್‌ ಗಳಿಸಿದ್ದಾಗಲೂ ಇನಿಂಗ್ಸ್‌ ಸೋಲಿನ ಸಂಕಷ್ಟದಲ್ಲೇ ಉಳಿದಿತ್ತು. ಆದರೆ, ಕೆಮಾರ್‌ ರೋಚ್ ಮತ್ತು ಶಾಮ್ರ ಜೋಸೆಫ್‌ ಕೊನೇ ವಿಕೆಟ್‌ಗೆ 26 ರನ್‌ ಜೋಡಿಸಿ ವಿಂಡೀಸ್‌ಗೆ ಅಲ್ಪ ಮುನ್ನಡೆ ತಂದುಕೊಟ್ಟರು. ಬಳಿಕ ಗೆಲುವಿಗೆ 26 ರನ್‌ ಗುರಿ ಪಡೆದ ಆಸ್ಟ್ರೇಲಿಯಾ 10 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು. ಆದರೆ, ಶಾಮ್ರ ಜೋಸೆಫ್‌ ಎಸೆದ ಬೌನ್ಸರ್‌ನಲ್ಲಿ ಆಸೀಸ್‌ ಓಪನರ್‌ ಉಸ್ಮಾನ್‌ ಖವಾಜ ತಲೆಗೆ ಪೆಟ್ಟುತಿಂದು ರಿಟೈರ್‌ ಹರ್ಟ್‌ ಆದರು. ಆಸ್ಟ್ರೇಲಿಯಾ ಪರ ಎರಡನೇ ಇನಿಂಗ್ಸ್‌ನಲ್ಲಿ ವೇಗದ ಬೌಲರ್‌ ಜಾಶ್‌ ಹೇಝಲ್‌ವುಡ್‌…

Read More

ಚುಮುಚುಮು ಚಳಿಗೆ ಚಹಾದೊಂದಿಗೆ ಬಿಸಿಬಿಸಿಯಾಗಿ ತಿನ್ನಲು ಏನಾದರೂ ಸಿಕ್ಕರೆ ಅದರಲ್ಲಿ ಸಿಗುವ ಆನಂದವೇ ಬೇರೆ.ಕೇವಲ 10 ನಿಮಿಷದಲ್ಲಿ ತಯಾರಿಸಬಹುದಾದ ಪನೀರ್ ಪಕೋಡ ರೆಸಿಪಿ ಹೇಗೆ ಮಾಡುವುದು ಎಂಬುದನ್ನು ತಿಳಿಸುತ್ತಿದ್ದೇವೆ. ಹಾಗಿದ್ರೆ ಇದನ್ನು ಯಾವರೀತಿ ಮಾಡುವುದು ಎಂಬುದನ್ನು ತಿಳಿದುಕೊಳ್ಳಿ ಬೇಕಾಗುವ ಸಾಮಗ್ರಿಗಳು: ಪನೀರ್ ಕ್ಯೂಬ್ಸ್ – 500 ಗ್ರಾಂ ಕಡ್ಲೆ ಹಿಟ್ಟು – 1 ಕಪ್ ಅಚ್ಚಖಾರದ ಪುಡಿ – 1 ಚಮಚ ಅರಶಿಣ – 1 ಚಮಚ ಉಪ್ಪು – ರುಚಿಗೆ ತಕ್ಕಷ್ಟು ಜೀರಿಗೆ ಪುಡಿ – ಅರ್ಧ ಚಮಚ ಅಡುಗೆ ಸೋಡಾ – 1 ಚಮಚ ಎಣ್ಣೆ – ಅಗತ್ಯಕ್ಕೆ ತಕ್ಕಷ್ಟು ಚಾಟ್ ಮಸಾಲ – ಸ್ವಲ್ಪ ಮಾಡುವ ವಿಧಾನ: * ಮೊದಲಿಗೆ ಒಂದು ಪಾತ್ರೆಯಲ್ಲಿ ಕಡ್ಲೆಹಿಟ್ಟನ್ನು ಹಾಕಿಕೊಂಡು ಅದಕ್ಕೆ ನೀರು, ಅಚ್ಚಖಾರದ ಪುಡಿ, ಜೀರಿಗೆ ಪುಡಿ, ಉಪ್ಪು, ಅರಶಿಣ ಮತ್ತು ಸೋಡಾ ಹಾಕಿಕೊಂಡು ಚನ್ನಾಗಿ ಮಿಕ್ಸ್ ಮಾಡಿಕೊಂಡು ದಪ್ಪ ಮಿಶ್ರಣವನ್ನು ಮಾಡಿಕೊಳ್ಳಿ. * ಈಗ ಪನೀರ್ ಕ್ಯೂಬ್ಸ್ ಅನ್ನು…

Read More

ಬೆಂಗಳೂರು:- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕನ್ನಡ ಬೋರ್ಡ್ ಅಳವಡಿಕೆಗೆ ಫೆ.28 ಡೆಡ್ ಲೈನ್ ನಿಯಮ ಹಿನ್ನೆಲೆ, ಅಂಗಡಿಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಫೆಬ್ರವರಿ 28ಕ್ಕೆ ಕನ್ನಡ ಬೋರ್ಡ್ ಅಳವಡಿಕೆಗೆ ಡೆಡ್ ಲೈನ್ ಹಿನ್ನಲೆ ಎಚ್ಚೆತ್ತುಕೊಂಡ ಪಾಲಿಕೆಯಿಂದ 28 ರೊಳಗಾಗಿ ಕನ್ನಡ ಬೋರ್ಡ್ ಅಳವಡಿಕೆಗೆ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಅಂಗಡಿಗಳು, ವ್ಯಾಪಾರಸ್ಥರಿಗೆ ನೋಟಿಸ್ ನೀಡುತ್ತಿದೆ. ಈ ವರೆಗೆ ಒಟ್ಟು 34262 ಸಾವಿರಕ್ಕೂ ಅಧಿಕ ನೋಟಿಸ್ ನೀಡಲಾಗಿದೆ. ಬೊಮ್ಮನಹಳ್ಳಿ – 6762 ಯಲಹಂಕ – 4518, ಬೆಂಗಳೂರು ದಕ್ಷಿಣ – 3747, ಮಹದೇವಪುರ – 4838, ದಾಸರಹಳ್ಳಿ – 1458, ಬೆಂಗಳೂರು ಪಶ್ಚಿಮ – 5650, ಪೂರ್ವ ವಲಯ – 5579 ರಾಜ ರಾಜೇಶ್ವರಿ ವಲಯದಲ್ಲಿ 2010 ನೋಟಿಸ್ ನೀಡಲಾಗಿದೆ. ಇನ್ನೂ ಈ ಹಿಂದೆ ನಾಮಫಲಕದಲ್ಲಿ ಮೇಲೆ ಕನ್ನಡ ಕೆಳಗಡೆ ಯಾವುದೇ ಭಾಷೆ ಬೇಕಾದರು ಇರಬೇಕು ಎಂದು ಹೇಳಿದ್ದರೂ ಈಗ ಬೋರ್ಡ್ ನಲ್ಲಿ ಕನ್ನಡ 60% ಇರಬೇಕು ಅಂತ ಹೇಳುತ್ತಿದ್ದಾರೆ.…

Read More

ಕನ್ನಡದ ಹೆಸರಾಂತ ನಟ ದುನಿಯಾ ವಿಜಯ್ ಜನವರಿ 20ರಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳ ಜೊತೆ ಇರುವುದಕ್ಕಾಗಿಯೇ ಅವರು ವಿಶೇಷ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಜೊತೆಗೆ ವಿಜಯ್ ಅವರೇ ನಿರ್ದೇಶಿಸಿ, ನಟಿಸುತ್ತಿರುವ ಭೀಮ ಚಿತ್ರದ ಟೀಸರ್ ಕೂಡ ಅಂದು ಬಿಡುಗಡೆ ಆಗಲಿದೆ. ಈ ಹುಟ್ಟು ಹಬ್ಬದ ಸಂದರ್ಭದಲ್ಲಿ ದುನಿಯಾ ವಿಜಯ್ (Duniya Vijay) ಅವರು ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಯಶ್ (Yash) ಫ್ಯಾನ್ಸ್ ದುರಂತ ಸಾವಿನ ಬಳಿಕ ವಿಜಯ್ ಅಭಿಮಾನಿಗಳಿಗೆ ಕೈ ಮುಗಿದು ಮನವಿ ಮಾಡಿಕೊಂಡಿದ್ದಾರೆ. ತಮ್ಮ ಹುಟ್ಟುಹಬ್ಬದ (Birthday) ಅಪ್‌ಡೇಟ್ ಹಂಚಿಕೊಂಡಿದ್ದಾರೆ.‌ ಇದೇ ಜನವರಿ 20ರಂದು ದುನಿಯಾ ವಿಜಯ್ (Duniya Vijay) ಹುಟ್ಟುಹಬ್ಬವಿದೆ. ಹೀಗಾಗಿ ಪ್ರತಿ ಬಾರಿಯಂತೆ ಈ ಬಾರಿಯೂ ವಿಜಯ್ ತಮ್ಮ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತನ್ನ ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

Read More

ಪೇರಳೆ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ.ಹೆಚ್ಚಿನ ಜನರಿಗೆ ತಿಳಿದಿಲ್ಲದ ವಿಷಯವೆಂದರೆ ಪೇರಳೆಯಲ್ಲಿ ನಿಂಬೆಗಿಂತ ವಿಟಮಿನ್ ಸಿ ಸಮೃದ್ಧವಾಗಿದೆ. ಹೆಚ್ಚಿನ ಮಟ್ಟದ ವಿಟಮಿನ್ ಸಿ ಇರುವುದರಿಂದ, ಪೇರಳೆ ತಿನ್ನುವುದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ಯಾವುದೇ ಸೋಂಕುಗಳನ್ನು ತಡೆಯುತ್ತದೆ ಮತ್ತು ಶೀತ ಮತ್ತು ಗಂಟಲು ನೋವಿಗೆ ಕಾರಣವಾಗುವುದಿಲ್ಲ. ಆದರೆ ಗಂಡಸರು ಹೆಚ್ಚಾಗಿ ಪೇರಳೆ ಹಣ್ಣನ್ನು ತಿನ್ನಬಾರದು  ಯಾಕಂದರೆ ಅವರ ಯಕೃತ್‌ ಸಮಸ್ಯೆಗೆ ಪೆಟ್ಟಾದರೆ ಮಕ್ಕಳಾಗದ ಪರಿಸ್ಥಿತಿ ಉಂಟಾಗುತ್ತದೆ ಈ ಹಣ್ಣಿನಲ್ಲಿ ಕಡಿಮೆ ಪ್ರಮಾಣದ ಗ್ಲೈಸೆಮಿಕ್ ಸೂಚ್ಯಂಕವನ್ನು ಪಡೆದುಕೊಂಡಿದೆ. ಇದನ್ನು ಮಧುಮೇಹ ಇರುವವರು ಸೇವಿಸಬಹುದು. 100 ಗ್ರಾಂ ಹಣ್ಣಿನಲ್ಲಿ 9 ಗ್ರಾಂ ನಷ್ಟು ಸಕ್ಕರೆ ಅಂಶ ಇರುತ್ತದೆ. ಆದ್ದರಿಂದ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚುವ ಸಾಧ್ಯತೆಗಳು ಇರುತ್ತವೆ. ಮಧು ಮೇಹದವರು ಈ ಹಣ್ಣನ್ನು ತಿನ್ನಬಹುದು ಆದರೆ ಅತಿಯಾದ ಸೇವನೆಯೊಂದಿಗೆ ಅಲ್ಲ ಎನ್ನುವುದನ್ನು ನೆನಪಿನಲ್ಲಿ ಇಡಬೇಕು. ಮಿತವಾಗಿ ತಿಂದರೆ ಯಾವುದೇ ತೊಂದರೆ ಉಂಟಾಗದು. ಪೇರಳೆ ಹಣ್ಣಿನಲ್ಲಿ ನಾರಿನಂಶ ಸಮೃದ್ಧವಾಗಿದೆ. ಇದು ಮಲಬದ್ಧತೆಯನ್ನು ತಡೆಯುವುದು. ಜೊತೆಗೆ…

Read More

ದಕ್ಷಿಣ ಆಫ್ರಿಕಾ ಸರಣಿಯಿಂದ ಹಿಂದೆ ಸರಿದಿದ್ದ ಕಿಶನ್​ರನ್ನು ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಿಂದಲೂ ಹೊರಗಿಡಲಾಗಿತ್ತು. ಆದರೆ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಿಶನ್​ಗೆ ಅವಕಾಶ ನೀಡಬಹುದು ಎಂದು ಎಲ್ಲರು ನಿರೀಕ್ಷಿಸಿದ್ದರು. ಆದರೆ ಆಯ್ಕೆ ಮಂಡಳಿ ಕಿಶನ್​ರನ್ನು ಹೊರತುಪಡಿಸಿ ವಿಕೆಟ್‌ಕೀಪರ್ ವಿಭಾಗದಲ್ಲಿ ಮೂವರು ಆಟಗಾರರಿಗೆ ಅವಕಾಶ ನೀಡಿದೆ. ಹಾಗಾಗಿ ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಆಡುವಂತೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್​, ಇಶಾನ್ ಕಿಶನ್​ಗೆ ಸಲಹೆ ನೀಡಿದ್ದರು. ಅದರಂತೆ ಇಶಾನ್ ಕಿಶನ್ ರಣಜಿ ಟ್ರೋಫಿಯಲ್ಲಿ ಜಾರ್ಖಂಡ್ ಪರ ಆಡಬೇಕಿತ್ತು. ಆದರೆ ಇಲ್ಲಿಯವರೆಗೆ ಇಶಾನ್ ಕಿಶನ್ ಜಾರ್ಖಂಡ್ ತಂಡವನ್ನು ಸೇರಿಕೊಂಡಿಲ್ಲ. ಮೇಲೆ ಹೇಳಿದಂತೆ ರಾಹುಲ್ ದ್ರಾವಿಡ್ ಅವರು ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಲು ದೇಶೀಯ ಕ್ರಿಕೆಟ್ನಲ್ಲಿ ಆಡುವಂತೆ ಇಶಾನ್​ಗೆ ಸೂಚನೆ ನೀಡಿದ್ದರು. ಆದರೆ ಇಶಾನ್ ಕಿಶನ್ ತಮ್ಮ ಮೊದಲ ರಣಜಿ ಪಂದ್ಯಕ್ಕೆ ಗೈರುಹಾಜರಾಗಿದ್ದಾರೆ. ಕೆಲ ದಿನಗಳ ಹಿಂದೆ ಬಿಸಿಸಿಐ, ಅನುಚಿತ ವರ್ತನೆಗಾಗಿ ಇಶಾನ್ ಕಿಶನ್ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂಬ…

Read More

ಕಲಬುರ್ಗಿ:- ಗಂಡು ಮಗುವಿಗೆ 10 ನೇ ತರಗತಿ ವಿದ್ಯಾರ್ಥಿನಿ ಜನ್ಮ ನೀಡಿರುವ ಘಟನೆ ಕಲಬುರ್ಗಿಯಲ್ಲಿ ಜರುಗಿದೆ. ಜಿಲ್ಲೆಯ ಆಳಂದ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯ ದೊಡ್ಡಪ್ಪನ ಮಗನೇ ಕೃತ್ಯ ಎಸಗಿರುವುದಾಗಿ ಬಯಲಾಗಿದೆ. ಅಲ್ಲದೇ ಪ್ರಕರಣ ಸಂಬಂಧ ಆರೋಪಿ ಅಣ್ಣನನ್ನು ಕೂಡ ಆಳಂದ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿ ಕಲಬುರಗಿ ಜಿಲ್ಲೆಯಲ್ಲಿರುವ ವಸತಿ ಶಾಲೆಯೊಂದರಲ್ಲಿ ಓದುತ್ತಿದ್ದಳು. ಶಾಲೆಗೆ ರಜೆ ಇದ್ದಾಗೆಲ್ಲ ಆಕೆ ಮನೆಗೆ ಬರುತ್ತಿದ್ದಳು. ಹೀಗೆ ಬಂದಾಗ ಸಹೋದರ ಆಕೆಯನ್ನು ಬಳಸಿಕೊಳ್ಳುತ್ತಿದ್ದನು. ರಾತ್ರಿ ಹೊತ್ತು ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಆತ ತಂಗಿ ಎನ್ನುವುದನ್ನೂ ನೋಡದೇ ರೇಪ್‌ ಮಾಡುತ್ತಿದ್ದ. ಹೀಗೆ ಕಳೆದ ಮಾರ್ಚ್ ನಿಂದ ವಿದ್ಯಾರ್ಥಿನಿ ಹಲವು ಬಾರಿ ತನ್ನ ಅಣ್ಣನಿಂದ ಅತ್ಯಾಚಾರಕ್ಕೆ ಒಳಗಾಗಿದ್ದಳು. ಅಲ್ಲದೇ ಈ ವಿಚಾರವನ್ನು ಬಾಯಿಬಿಟ್ಟರೆ ಕೊಲೆ ಮಾಡುವ ಬೆದರಿಕೆಯನ್ನು ಕೂಡ ಹಾಕಿದ್ದನು. ಹೀಗಾಗಿ ಆಕೆ ಅತ್ಯಾಚಾರ ವಿಚಾರವನ್ನು ಮುಚ್ಚಿಟ್ಟಿದ್ದಳು. ಇತ್ತ ವಿದ್ಯಾರ್ಥಿನಿ ದಪ್ಪ ಇರೋದ್ರಿಂದ ಕುಟುಂಬಸ್ಥರು ಕೂಡ ಆಕೆಯ ದೇಹದಲ್ಲಿ ಆಗುತ್ತಿರುವ ಬದಲಾವಣೆ ಕಂಡು ಹಿಡಿಯುವ ಪ್ರಯತ್ನ ಮಾಡಿಲ್ಲ.…

Read More

ಬೆಂಗಳೂರು:- ಪಿಎಸ್​ಐ ಮರುಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಬ್​ಇನ್ಸ್​ಪೆಕ್ಟರ್ ಓರ್ವರನ್ನು ಸಿಸಿಬಿ​ ವಶಕ್ಕೆ ಪಡೆದಿದೆ. ಇಂಟೆಲಿಜೆನ್ಸ್ ವಿಭಾಗದ ಸಬ್​ ಇನ್ಸ್​ಪೆಕ್ಟರ್​ ಆಗಿರುವ ಲಿಂಗಯ್ಯ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ಸಂಬಂಧ ಅಭ್ಯರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಸಿಬಿ ಪೊಲೀಸರು, ಇನ್ಸ್​ಪೆಕ್ಟರ್​ ಲಿಂಗಯ್ಯನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಾಂತಕುಮಾರ್ ಪ್ರತಿಕ್ರಿಯಿಸಿದ್ದು, 1 ಲಕ್ಷ 60 ಸಾವಿರ ಅಭ್ಯರ್ಥಿಗಳು ಸಿಟಿಐ ಪರೀಕ್ಷೆ ಬರೆಯಲಿದ್ದಾರೆ. ಲಿಂಗಯ್ಯ ಎಂಬ ಪಿಎಸ್ಐ ಮಾತನಾಡಿದ ಆಡಿಯೋ ಲಭ್ಯವಾಗಿದೆ. ಪ್ರಶ್ನೆ ಪತ್ರಿಕೆ ನಾವೇ ಕೊಡುತ್ತೇವೆ, ಪೋಸ್ಟಿಂಗ್ ಕೊಡಿಸುತ್ತೇವೆ ಎಂದಿದ್ದಾರೆ. ಪಿಎಸ್​​ಐ ಪರೀಕ್ಷೆ ಕೂಡ ಬರೆಸುತ್ತೇವೆ ಅಂತಾ ಮಾತನಾಡಿದ್ದಾರೆ. ಕೆಪಿಎಸ್​​ಸಿ ಬೋರ್ಡ್​ ಮುಂದೆ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ. ಆದರೆ ಪೋಷಕರನ್ನು ಭೇಟಿಮಾಡಲು ಒಳಗಡೆ ಕರೆಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಜ.21ರಂದು ಕಮರ್ಷಿಯಲ್ ಟ್ಯಾಕ್ಸ್ ಇನ್ಸ್​ಪೆಕ್ಟರ್ ಪರೀಕ್ಷೆ ಇದೆ. ಜ.23ರಂದು ನಡೆಯುವ ಪಿಎಸ್​ಐ ಪರೀಕ್ಷೆಗೆ ಸಂಚು ನಡೆಸಿದ್ದಾರೆ. ಎರಡೂ ಪರೀಕ್ಷೆಗಳ ಅಕ್ರಮಕ್ಕೆ…

Read More