Author: AIN Author

ಪ್ರಭಾಸ್ ನಟನೆಯ ಸಲಾರ್ ಸಿನಿಮಾ ಥಿಯೇಟರ್ ನಲ್ಲಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಬಂದಿದೆ. ನೆಟ್ ಫ್ಲಿಕ್ಸ್ (OTT) ಸಲಾರ್ ಸಿನಿಮಾವನ್ನು ಖರೀದಿಸಿದ್ದು,ಇಂದಿನಿಂದಲೇ ಒಟಿಟಿಯಲ್ಲಿ ಸಲಾರ್ ನೋಡಬಹುದಾಗಿದೆ. ಈ ಕುರಿತಂತೆ ಸಂಸ್ಥೆಯೇ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದೆ. ಈ ಸಿಹಿ ಸುದ್ದಿಯ ಜೊತೆ ಜೊತೆಗೆ ಸಲಾರ್ ಸಿನಿಮಾ ಸ್ಪ್ಯಾನಿಷ್ (Spanish) ಭಾಷೆಯಲ್ಲಿ ರಿಲೀಸ್ ಆಗಲಿದೆ. ಈಗಾಗಲೇ ಸ್ಪ್ಯಾನಿಷ್ ಭಾಷೆಗೆ ಚಿತ್ರವನ್ನು ಡಬ್ ಮಾಡಲಾಗುತ್ತಿದ್ದು, ಮಾರ್ಚ್ 7 ರಂದು ಈ ಚಿತ್ರವನ್ನು ರಿಲೀಸ್ ಮಾಡುವುದಾಗಿ ಹೊಂಬಾಳೆ ಸಂಸ್ಥೆ ತಿಳಿಸಿದೆ. ಸಲಾರ್ ಸಿನಿಮಾ ಬಾಕ್ಸಾಫೀಸಿನಲ್ಲಿ ಈವರೆಗೂ 627 ಕೋಟಿ ರೂಪಾಯಿಗೂ ಅಧಿಕ ಗಳಿಸಿ, ಇನ್ನೂ ಮುನ್ನುಗ್ಗುತ್ತಿದೆ. ಈ ನಡುವೆ ಸಲಾರ್ 2 ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿಗಳು ಹೊರ ಬಿದ್ದಿವೆ. ಆಂಗ್ಲ ವೆಬ್ ಸೈಟ್ ಜೊತೆ ನಿರ್ಮಾಪಕ ವಿಜಯ ಕಿರಗಂದೂರು (Vijaya Kirgandur) ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದು, ಅದರ ಪ್ರಕಾರ ಸಲಾರ್ 2 ಸಿನಿಮಾ 2025ರಲ್ಲಿ ಬಿಡುಗಡೆ ಆಗಿದೆ. ಇನ್ನೂ…

Read More

ಬೆಂಗಳೂರು:- ರಾಜ್ಯ ಸರ್ಕಾರದಿಂದ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್‌ಗೆ ಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. ಸದ್ಯ ವಾರ್ತಾ ಇಲಾಖೆ ಆಯುಕ್ತರಾಗಿರುವ ಹೇಮಂತ್ ನಿಂಬಾಳ್ಕರ್ ಅವರಿಗೆ ಬಡ್ತಿ ನೀಡಿ ಆಯುಕ್ತರ ಹುದ್ದೆಯಲ್ಲಿ ಮುಂದುವರಿಸಿ ಸರ್ಕಾರ ಆದೇಶಿಸಿದೆ. ಕಳೆದ 2022ರಲ್ಲಿ ಉನ್ನತ ಶಿಕ್ಷಣದ ಸಲುವಾಗಿ ಎರಡು ವರ್ಷಗಳ ಸುದೀರ್ಘ ರಜೆ ಪಡೆದು ತೆರಳಿದ್ದರು. ಬಳಿಕ 2023ರ ಜೂನ್​ನಲ್ಲಿ ನಿಂಬಾಳ್ಕರ್‌ ಅವರ ರಜೆಯನ್ನು ರದ್ದುಪಡಿಸಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹುದ್ದೆ ಹೊಣೆಗಾರಿಕೆ ನೀಡಲಾಗಿತ್ತು. 1998ನೇ ಬ್ಯಾಚಿನ ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿಯಾದ ಹೇಮಂತ್‌ ನಿಂಬಾಳ್ಕರ್‌ ಅವರು ಅವರು 2023ರ ಜೂನ್‌ನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ನೇಮಕಗೊಂಡಿದ್ದರು. ಈ ಹಿಂದೆ ಬೆಳಗಾವಿ ಎಸ್‌ಪಿ, ಬೆಂಗಳೂರಿನ ಜಂಟಿ ಆಯುಕ್ತ (ಸಿಸಿಬಿ), ಹೆಚ್ಚುವರಿ ಆಯುಕ್ತ (ಪೂರ್ವ), ಹೆಚ್ಚುವರಿ ಆಯುಕ್ತ (ಆಡಳಿತ) ಹಾಗೂ ಸಿಐಡಿ ಐಜಿಪಿ ಸೇರಿದಂತೆ ವಿವಿಧ ಹುದ್ದೆಗಳನ್ನು ಹೇಮಂತ್‌ ನಿಂಬಾಳ್ಕರ್‌ ಅವರು ನಿರ್ವಹಿಸಿದ್ದರು.

Read More

ಸೂರ್ಯೋದಯ: 06:53, ಸೂರ್ಯಾಸ್ತ : 06:00 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪುಷ್ಯ ಮಾಸ , ಶುಕ್ಲ ಪಕ್ಷ, ಉತ್ತರಾಯಣಂ, ಹೇಮಂತ ಋತು, ರಾಹು ಕಾಲ: 09:00 ನಿಂದ 10:30 ತನಕ ಯಮಗಂಡ: 01:30 ನಿಂದ 03:00 ತನಕ ಗುಳಿಕ ಕಾಲ: 06:00 ನಿಂದ 07:30 ತನಕ ಜಾತಕ ಬರೆದು ತಿಳಿಸಲಾಗುವುದು, ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ: ಶಿಕ್ಷಕರಿಗೆ ಖಾಯಂ ಭಾಗ್ಯ ಲಭಿಸಲಿದೆ, ಕೆಲವರಿಗೆ ಅತಿಥಿ ಶಿಕ್ಷಕರಾಗಿ ಬೋಧಿಸಲು ಅವಕಾಶ ಭಾಗ್ಯ, ಸಂಗಾತಿಯಿಂದ ಹಣಕಾಸಿನ ಸರಕಾರ, ಉದ್ಯೋಗದ ಸಂಪನ್ಮೂಲಗಳಿಗಾಗಿ ಸಾಕಷ್ಟು ಹುಡುಕಾಟ,ಮದ್ಯಪಾನ ಮಾಡುವವರಿಗೆ ತೊಂದರೆ ಕಾಡಲಿದೆ, ಉದರದ ದೋಷದಿಂದ ತೊಂದರೆ,ಮೀನುಗಾರ ಉದ್ಯಮದಾರರರಿಗೆ ಆರ್ಥಿಕ ಚೇತರಿಕೆ ಹಾಗೂ ಧನಲಾಭವಿದೆ, ಭೂ ವ್ಯವಹಾರಕ್ಕೆ ಸಂಬಂಧಿಸಿದ ಆರ್ಥಿಕ ಪ್ರಗತಿಯಾಗಲಿದೆ. ಕುಟುಂಬದಲ್ಲಿ ಶುಭ ಮಂಗಳ ಕಾರ್ಯ…

Read More

ಬೆಂಗಳೂರು: ಶ್ರೀರಾಮನ ಕುರಿತು ತಪ್ಪಾಗಿ ಮಾತನಾಡಿದ ಸಚಿವ ರಾಜಣ್ಣನ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷಮೆ ಕೇಳಬೇಕು, ಅಥವಾ ರಾಜಣ್ಣನ ಮೂಲಕ ಕ್ಷಮೆ ಕೇಳಿಸಬೇಕು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ.ಸದಾನಂದಗೌಡ (DV Sadananda Gowda) ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲಾರದ ಮುಳಬಾಗಿಲಿನ ಬ್ಯಾನರ್ ಹರಿದರಲ್ಲವೇ? ಎಷ್ಟು ಜನರನ್ನು ಬಂಧಿಸಿದ್ದೀರಿ ಎಂದು ಪ್ರಶ್ನಿಸಿದರು. ಮುಂದೆ ಸಿದ್ದರಾಮಯ್ಯನವರ ಫೋಟೊ ಇರುವ ಬ್ಯಾನರ್‌ಗಳು ಹರಿದುಹೋಗುವ ದಿನ ಬರಲಿದೆ ಎಂದು ಎಚ್ಚರಿಸಿದರು. https://ainlivenews.com/ginger-peel-can-be-easily-peeled-by-simple-tricks/ ರಾಜಣ್ಣ ಅವರಿಗೆ ಕಾಲ ಮಿಂಚಿಲ್ಲ. ಆ ಗೊಂಬೆ ಮುಂದಿನ ದಿನಗಳಲ್ಲಿ ಉರುಳಾಗಿ ಕಾಡಲಿದೆ. ರಾಜಣ್ಣನಿಗೆ ಬೊಂಬೆ ಕಂಡಿತೇ? ಅರಶಿನ ಕಾಮಾಲೆ ರೋಗದವರಿಗೆ ಅರಶಿನವಾಗಿಯೇ ಕಾಣುತ್ತದೆ. ಸಹಕಾರ ಸಚಿವನಾಗಿ ಮಾಡಿದ್ದಾರೆ. ಛೇ, ಸಿದ್ದರಾಮಯ್ಯರಿಂದ ಕೆಟ್ಟ ಕೆಲಸವಿದು. ಸಿದ್ದರಾಮಯ್ಯರ ಓಲೈಕೆ ಮುಂದುವರಿದಿದೆ. ಈ ವ್ಯವಸ್ಥೆಯಿಂದ ಕಾಂಗ್ರೆಸ್ (Congress) 3 ಹೋಳಾಗಲಿದೆ. ಬಹಳ ದಿನ ಕಾಂಗ್ರೆಸ್ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂದು…

Read More

ಬೆಂಗಳೂರು: 1300 ಕೋಟಿ ಸ್ಕ್ಯಾಮ್ ನಲ್ಲಿ ಬಿಜೆಪಿ ಸಚಿವ ಭಾಗಿಯಾಗಿದ್ದಾರೆ ಎಂದು ರಣದೀಪ್ ಸುರ್ಜೇವಾಲಾ ಹೊಸ ಬಾಂಬ್ ಸಿಡಿಸಿದ್ದಾರೆ. ಹೌದು 1300 ಕೋಟಿ ಸ್ಕ್ಯಾಮ್ ನಲ್ಲಿ ಬಿಜೆಪಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದಾರೆ ಅಂತಾ ಸುರ್ಜೇವಾಲಾ ಹೊಸ ಬಾಂಬ್ ಸಿಡಿಸಿದ್ದಾರೆ. ಹುಬ್ಬಳ್ಳಿ ಹೃದಯ ಭಾಗದಲ್ಲಿರೊ ಜನರಿಗೆ ಸೇರಿದ 12ಎಕರೆ ರೈಲ್ವೇ ಜಮೀನನ್ನು ಜೋಶಿ ಲೂಟಿ ಮಾಡಿದ್ದಾರೆ. https://ainlivenews.com/ginger-peel-can-be-easily-peeled-by-simple-tricks/ ಇದರಲ್ಲಿ ಪ್ರಹ್ಲಾದ್ ಜೋಷಿ ಹಾಗೂ ಅನಂತ್ ಕುಮಾರ್ ಕುಟುಂಬ ಭಾಗಿಯಾಗಿದೆ. ಆದ್ರೆ 1300ಕೋಟಿ ರೂ. ಸ್ಕ್ಯಾಮ್ ವಿಷಯ ಗೊತ್ತಿದ್ದರೂ ಪ್ರಧಾನಿಗಳು ಮೌನವಾಗಿರೋದ್ಯಾಕೆ..? ಪ್ರಧಾನಿಗಳು, ರೈಲ್ವೆ ಮಂತ್ರಿಗಳು ಉತ್ತರ ಕೊಡಬೇಕು..? ಅಂತಾ ಪ್ರಹ್ಲಾದ್ ಜೋಷಿ ವಿರುದ್ದ ಸುರ್ಜೇವಾಲ ಗಂಭೀರ ಆರೋಪ ಮಾಡಿದ್ದಾರೆ.

Read More

ಶಿವಮೊಗ್ಗ: ಮುಂದಿನ ಚುನಾವಣೆಯಲ್ಲಿ ಸೋಲು ಅಥವಾ ಗೆಲುವು ಎಂದು ನಾನು ಕೆಲಸ ಮಾಡ್ತಿಲ್ಲ. ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಪಕ್ಷ ಕಸ ಹೊಡಿ ಎಂದರೆ ಕಸ ಹೊಡೆಯುತ್ತೇನೆ. ರಾಜೀನಾಮೆ ಕೊಡು ಎಂದರೂ ಕೊಡ್ತೇನೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಲೋಕಸಭೆಗೆ ಸುಧಾಕರ್ ಅವರು ಸ್ಪರ್ಧಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ದೈವಬಲ ಹಾಗೂ ಜನಬಲ ನನ್ನ ಕಡೆ ಇದೆ. ಲೋಕಸಭೆಯಲ್ಲಿ ನಾವು ಹೆಚ್ಚು ಸ್ಥಾನ ಪಡೆಯುತ್ತೇವೆ. ಮುಂದಿನ ಚುನಾವಣೆಯಲ್ಲಿ ಸೋಲು ಅಥವಾ ಗೆಲುವು ಎಂದು ನಾನು ಕೆಲಸ ಮಾಡ್ತಿಲ್ಲ. ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಪಕ್ಷ ಕಸ ಹೊಡಿ ಎಂದರೆ ಕಸ ಹೊಡೆಯುತ್ತೇನೆ. ರಾಜೀನಾಮೆ ಕೊಡು ಎಂದರೂ ಕೊಡ್ತೇನೆ. ನಾನು ಯಾವುದೇ ನಿಗಮ ಮಂಡಳಿಯ ಆಕಾಂಕ್ಷಿಯಲ್ಲ. ಪಕ್ಷ ಲೋಕಸಭೆಗೆ ನಿಲ್ಲು ಎಂದರೆ ನಾಳೆಯೇ ನಿಲ್ಲುತ್ತೇನೆ ಎಂದಿದ್ದಾರೆ.ಇನ್ನೂ ರಾಮ ಮಂದಿರ ವಿಷಯದಲ್ಲಿ ನಮಗೆ ಗೊಂದಲ ಇಲ್ಲ, https://ainlivenews.com/ginger-peel-can-be-easily-peeled-by-simple-tricks/ ನಾವು ಹಿಂದೂಗಳೇ, ನಾವು ಶ್ರೀರಾಮನ ಆರಾಧಕರು.…

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿ. ಕೆ ಹರಿಪ್ರಸಾದ್ ನಡುವಿ‌ನ ಕೋಲ್ಡ್ ವಾರ್ ಬೀದಿಗೆ ಬಂದಂತೆ ಕಾಣ್ತಿದೆ. ಗೋಧ್ರಾ ರೀತಿಯ ಘಟನೆ ಸಂಭವಿಸುವ ಸಾಧ್ಯತೆ ಇದೆ ಎಂದಿದ್ದ ಹರಿಪ್ರಸಾದ್ ವಿರುದ್ಧ, ತಮ್ಮದೇ ಸರ್ಕಾರ ಸಿಸಿಬಿ ಅಸ್ತ್ರ ಬಿಟ್ಟಿದೆ.ಇದು ಆರ್ ಎಸ್ ಎಸ್ ಸರ್ಕಾರ ಎಂದು ಬಿ.ಕೆ ಹರಿಪ್ರಸಾದ್, ತಮ್ಮ ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದಾರೆ.ಯೆಸ್.. ಶೋ ಮ್ಯಾನ್ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದ ಬಿ.ಕೆ ಹರಿಪ್ರಸಾದ್ ಗೆ ಸಿಸಿಬಿ ಕಂಟಕ ಎದುರಾಗಿದೆ..  ರಾಮಮಂದಿರ ವಿಚಾರವಾಗಿ ಮಾತನಾಡೋ ಸಂದರ್ಭದಲ್ಲಿ, ಕರ್ನಾಟಕದಲ್ಲೂ ಗೋಧ್ರಾ ಮಾದರಿಯ ಘಟನೆ ನಡೆಯಬಹುದು. ಕೆಲವರು ಸಂಚು ರೂಪಿಸುತ್ತಿದ್ದಾರೆ ಎಂದು ಇತ್ತೀಚೆಗೆ ಹೇಳಿಕೆ ಕೊಟ್ಟಿದ್ರು. ಹರಿಪ್ರಸಾದ್ ಹೇಳಿಕೆ ಬಗ್ಗೆ ಎನ್ಕೈರಿ ಮಾಡಲು, ಸಿಸಿಬಿ ಎಂಟ್ರಿ ಕೊಟ್ಟಿದೆ.. https://ainlivenews.com/ginger-peel-can-be-easily-peeled-by-simple-tricks/ ಕೆಕೆ ಗೆಸ್ಟ್ ಹೌಸ್ ನಲ್ಲಿದ್ದ ಬಿ.ಕೆ ಹರಿಪ್ರಸಾದ್ ಅವ್ರನ್ನ ಇಂದು ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿ, ನೋಟೀಸ್ ಕೂಡ ನೀಡಿದ್ದಾರೆ.. ಇದ್ರಿಂದ ಕೆಂಡಾಮಂಡಲ ಆಗಿರೋ ಬಿ.ಕೆ ಹರಿಪ್ರಸಾದ್ ಇದು…

Read More

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ನಟನೆಯ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾರೆ. ಜೊತೆಗೆ ಸದ್ದಿಲ್ಲದೇ, ಕಷ್ಟ ಎಂದುಕೊಂಡು ಬಂದವರಿಗೆ ಸಹಾಯಹಸ್ತ ಚಾಚಿದ್ದಾರೆ. ಈಗಾಗಲೇ ತಮ್ಮ ಹೆಸರಿನಲ್ಲಿರುವ ಚಾರಿಟೇಬಲ್ ಟ್ರಸ್ಟ್ ಮೂಲಕ ಅವರು ಮಾಡಿರುವ ಸಹಾಯಗಳು ಎಲ್ಲರ ಕಣ್ಣಮುಂದಿವೆ. ಗ್ರಾಮ, ಶಾಲೆಗಳನ್ನು ದತ್ತು ತೆಗೆದುಕೊಳ್ಳುವುದರ ಜೊತೆಗೆ ಕಷ್ಟದಲ್ಲಿರುವವರಿಗೆ ಸಹಾಯದ ನೆರವು ನೀಡಿದ್ದಾರೆ. ಕಿಚ್ಚನ ಹೆಸರಿನ ಟ್ರಸ್ಟ್ ಹೊರತಾಗಿ ಅವರ ಅಭಿಮಾನಿಗಳೇ ಸಂಸ್ಥಾಪಿಸಿರುವ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸಾವಿರಾರು ಜೀವಗಳ ಉಳಿವಿಗೆ ನೆರವಾಗಿದೆ. ಬಹಳ ವರ್ಷಗಳಿಂದ ಕಿಚ್ಚ ಸುದೀಪ್ ಫ್ಯಾನ್ಸ್ ಪ್ರಾರಂಭಿಸಿರುವ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸಮಾಜ ಸೇವೆಗೆ ಟೊಂಕ ಕಟ್ಟಿ ನಿಂತಿದೆ. ಅದರಂತೆ ಈ ಟ್ರಸ್ಟ್ ಈಗ ಮ್ಯಾಕ್ಸ್ ಹೆಸರಿನ ಆಂಬುಲೆನ್ಸ್ ಸೇವೆ ಪ್ರಾರಂಭಿಸಿದೆ. ಇಂದು ಮಾಕ್ಸ್ ಹೆಸರಿನ ಆಂಬುಲೆನ್ಸ್ ನ್ನು ಸುದೀಪ್ ಸಾವರ್ಜನಿಕ ಸೇವೆಗೆ ಲೋಕಾರ್ಪಣೆಗೊಳಿಸಿದ್ದಾರೆ. ಅಂದಹಾಗೇ ಮ್ಯಾಕ್ಸ್ ಕಿಚ್ಚ ನಟನೆಯ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು. ಈ ಚಿತ್ರದ ಮೊದಲ ಗ್ಲಿಂಪ್ಸ್ ಫ್ಯಾನ್ಸ್ಗೆ ಇಷ್ಟ ಆಗಿದೆ. ಈ ಚಿತ್ರದಲ್ಲಿ…

Read More

ಬೆಂಗಳೂರು: ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ದಿನ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ಇರುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು‌. https://ainlivenews.com/ginger-peel-can-be-easily-peeled-by-simple-tricks/ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ. ಪೂಜೆ ಪುರಸ್ಕಾರಗಳು ನಡೆಯಲಿವೆ ಅಂದು, ಪೂಜೆಗೆ ಭಂಗ ಮಾಡಲ್ಲ. ಆದರೆ ಕಾನೂನು ವಿರೋಧಿ ಚಟುವಟಿಕೆ ನಡೆಯದಂತೆ ನೋಡಿಕೊಳ್ಳಲು ಹೇಳಿದ್ದೇವೆ ಎಂದರು‌. ಇನ್ನು ಇದೇ ಸಂದರ್ಭದಲ್ಲಿ ಒಳಮೀಸಲಾತಿ ವಿಚಾರವಾಗಿ ಮಾತನಾಡಿ, ‌ಈ ಹಿಂದೆ ಚಿತ್ರದುರ್ಗದಲ್ಲಿ ಒಳಮೀಸಲಾತಿಯನ್ನು ನೀಡುವ ನಿರ್ಣಯ ಮಾಡಿದ್ದೆವು. ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲಿ ಮಂಡನೆ ಮಾಡುವ ಭರವಸೆ ಕೊಟ್ಟಿದ್ದೆವು ಎಂದು ವಿವರಿಸಿದರು.

Read More

ಬಿಗ್ ಬಾಸ್ ಮನೆಯಲ್ಲಿ ನಮ್ರತಾ ಗೌಡ ಆಟಕ್ಕೆ ಕೂಡ ಬ್ರೇಕ್ ಬಿದ್ದಿದೆ ಎನ್ನಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ನಮ್ರತಾ ಆಟ ಪ್ರೇಕ್ಷಕರಿಗೆ ಹಿಡಿಸಿತ್ತು. ಕಿಚ್ಚನ ಚಪ್ಪಾಳೆ, ಉತ್ತಮ ಗಿಟ್ಟಿಸಿಕೊಳ್ಳುವ ಮೂಲಕ ನಮ್ರತಾ ಮೋಡಿ ಮಾಡಿದ್ದರು. ಹಂತ ಹಂತವಾಗಿ ಗೆಲುವಿನ ಮೆಟ್ಟಿಲಿಗೆ ಹತ್ತಿರವಾಗುತ್ತಿದ್ದ ನಮ್ರತಾ ಈಗ ಬಿಗ್ ಬಾಸ್ ಮನೆಯಿಂದ ಹೊರಬಿದ್ದಿದ್ದಾರೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸ್ನೇಹಿತ್ ಜೊತೆಗಿನ ಲವ್ವಿ-ಡವ್ವಿ ನಂತರ ಕಾರ್ತಿಕ್ ಒಡನಾಟ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್ ಆಗಿತ್ತು. ಬಿಗ್ ಬಾಸ್ ಮಾಜಿ ಸ್ಪರ್ಧಿಗಳು ಮನೆಯೊಳಗೆ ಕಾಲಿಟ್ಟ ಬಳಿಕ ಟ್ರೋಲ್ ವಿಷ್ಯ ನಮ್ರತಾ ತಿಳಿದು ಕಣ್ಣೀರಿಟ್ಟಿದ್ದರು. ಇದೀಗ ತನಿಷಾರ ಮಿಡ್ ವೀಕ್ ಎಲಿಮಿನೇಷನ್ ನಂತರ ಈ ವಾರ ಇನ್ನಿಬ್ಬರು ಸ್ಪರ್ಧಿಗಳು ಔಟ್ ಆಗಲಿದ್ದಾರೆ. https://ainlivenews.com/ginger-peel-can-be-easily-peeled-by-simple-tricks/  ಅದರಲ್ಲಿ ನಮ್ರತಾ, ಬಿಗ್‌ ಬಾಸ್ ಆಟಕ್ಕೆ ಬ್ರೇಕ್ ಬಿದ್ದಿದೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.‌ ಬಾಲಿನಟಿಯಾಗಿ ನಮ್ರತಾ ಬಣ್ಣ ಹಚ್ಚಿದ್ದರು. ಕಳೆದ 20 ವರ್ಷಗಳಿಂದ ಚಿತ್ರರಂಗದಲ್ಲಿ ನಮ್ರತಾ ಸಕ್ರಿಯರಾಗಿದ್ದಾರೆ. ಆಕಾಶದೀಪ, ಪುಟ್ಟಗೌರಿ ಮದುವೆ ಸೀರಿಯಲ್‌ನಲ್ಲಿ…

Read More