Author: AIN Author

ಹುಬ್ಬಳ್ಳಿ: ಭಾರತೀಯ ರೈಲ್ವೆ ಭೂ ಅಭಿವೃದ್ಧಿ ಪ್ರಾಧಿಕಾರವು ನಗರದ ಎಂಟಿಎಸ್‌ ಕಾಲೊನಿಯ 13 ಎಕರೆ ಪ್ರದೇಶದ ಲೀಸ್‌ನ ಇ–ಬಿಡ್‌ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.1ಕ್ಕೆ ಮುಂದೂಡಿದೆ. ಈ ಹಿಂದೆ ಇ–ಬಿಡ್‌ನ ಬಹಿರಂಗ ಹರಾಜುಗೆ ಅರ್ಜಿ ಸಲ್ಲಿಸಲು ಜ.18 ಕೊನೆಯ ದಿನ ನಿಗದಿ ಪಡಿಸಲಾಗಿತ್ತು. ಲೀಸ್‌ಗೆ ಸಂಬಂಧಿಸಿದ ಎಂಟಿಎಸ್‌ ಕಾಲೊನಿಯ ಪ್ರದೇಶವನ್ನು ಪರಿಶೀಲಿಸಬೇಕು. ಹೀಗಾಗಿ ಇನ್ನೂ ಕೆಲ ದಿನ ಸಮಯ ಬೇಕು ಎಂದು ರಿಯಲ್‌ ಎಸ್ಟೆಟ್‌ ಉದ್ದಿಮೆದಾರರು ಮನವಿ ಮಾಡಿದ ಕಾರಣ, ಪ್ರದೇಶದ ಲೀಸ್‌ನ ಇ–ಬಿಡ್‌ ಅವಧಿಯನ್ನು ಫೆ.1ಕ್ಕೆ ಮುಂದೂಡಲಾಗಿದೆ‘ ಎಂದು ಭಾರತೀಯ ರೈಲ್ವೆ ಭೂ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ’ ಎಂಟಿಎಸ್‌ ಪ್ರದೇಶದ ಲೀಸ್‌ಗೆ ಸಂಬಂಧಿಸಿದಂತೆ ಕಳೆದ ನ.21ರಂದು ಪ್ರಾಧಿಕಾರವು ಸೂಚಿಸಿದಂತೆ ₹83 ಕೋಟಿಗೆ 99 ವರ್ಷ ಲೀಸ್‌ ಅವಧಿ. ಈ ಅವಧಿ ಮುಗಿದ ನಂತರ ನಿಯಮಗಳ ಅನ್ವಯ ಮತ್ತೆ ರೈಲ್ವೆ ಭೂ ಅಭಿವೃದ್ಧಿ ಪ್ರಾಧಿಕಾರಕ್ಕೆ ಆ ಪ್ರದೇಶವನ್ನು ಎಂದಿನಂತೆ ಬಿಟ್ಟುಕೊಡಬೇಕು. ಈ ಎಲ್ಲಾ ನಿಯಮಗಳು ಫೆ.1ರಂದು ನಡೆಯುವ…

Read More

ಬೆಂಗಳೂರು: ನೂತನ ಬೋಯಿಂಗ್ ವಿಮಾನ ತಯಾರಿಕಾ ಸಂಸ್ಥೆಯ ಕ್ಯಾಂಪಸ್ ಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಶುಕ್ರವಾರ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ದೇವನಹಳ್ಳಿಯಲ್ಲಿ ಬೋಯಿಂಗ್‌ನ ಅತ್ಯಾಧುನಿಕ ಜಾಗತಿಕ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಆವಿಷ್ಕಾರ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ವೇಳೆ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್​ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ ಆರ್​.ಅಶೋಕ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಹುಬ್ಬಳ್ಳಿ:- ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರರ ಕಾರ್ಯಾಲಯದಲ್ಲಿ ತಾಲೂಕು ಆಡಳಿತದಿಂದ ಮಹಾಯೋಗಿ ಶ್ರೀ ವೇಮನ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ, ಪೂಜೆ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಪ್ರಕಾಶ ನಾಶಿ, ಹುಬ್ಬಳ್ಳಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರ ಹೊಸಮನಿ, ಸಮಾಜದ ಮುಖಂಡರಾದ ಆರ್.ಕೆ.ಪಾಟೀಲ್, ಉಮೇಶ ಪಾಟೀಲ್, ವೈ.ಕೆ. ಪಾಟೀಲ್, ಮಂಜುನಾಥರೆಡ್ಡಿ ಕಿರೆಸೂರ, ಸತೀಶ್ ಮಾಡಳ್ಳಿ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

Read More

ಹುಬ್ಬಳ್ಳಿ: ವಾಣಿಜ್ಯ ಚಟುವಟಿಕೆಗಳಿಂದ ವಾಣಿಜ್ಯನಗರಿ ಎಂದು ಖ್ಯಾತಿ ಪಡೆದಿರುವ ಹುಬ್ಬಳ್ಳಿ ಈಗ ಅಯೋಧ್ಯೆಯಂತೆ ಕಂಗೊಳಿಸುತ್ತಿದೆ. ಎಲ್ಲೆಡೆಯೂ ಕೇಸರಿ ತೋರಣ ಹಾಗೂ ರಾಮನ ಮೆರವಣಿಗೆ ಹೀಗೆ ಒಂದಿಲ್ಲೊಂದು ರೀತಿಯಲ್ಲಿ ಆಚರಣೆ ನಡೆಸಲಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬುವಂತೇ ಹುಬ್ಬಳ್ಳಿಯ ಗೋಪನಕೊಪ್ಪದ ಮೆರವಣಿಗೆಯಲ್ಲಿ ವಿಶೇಷ ಆಚರಣೆ ನಡೆಸಲಾಗುತ್ತಿದೆ. ಹೌದು..ಜನವರಿ 22ರಂದು ನಡೆಯಲಿರುವ ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಗೋಪನಕೊಪ್ಪದ ರಾಮಭಕ್ತರಿಂದ ರಾಮನ ಹಾಗೂ ಹನುಮಾನ್ ಮೂರ್ತಿಯ ಭವ್ಯ ಮೆರವಣಿಗೆ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಟ್ರ್ಯಾಕ್ಟರ್ ನಲ್ಲಿ ಶ್ರೀರಾಮನ ಹಾಗೂ ಹನುಮಾನ್ ಮೂರ್ತಿಗಳನ್ನಿಟ್ಟು ವಿನೂತನ ರೀತಿಯಲ್ಲಿ ಊರಿನ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿ ಗೌರವ ಸಮರ್ಪಣೆ ಮಾಡಲಾಗಿದೆ.

Read More

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿಜವಾದ ಜಾತ್ಯಾತೀತರಾದರೆ ಜನವರಿ 22ರಂದು ರಜೆ ಘೋಷಿಸಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಜ.22ರಂದು ರಜೆ ಘೋಷಿಸದ ರಾಜ್ಯ ಕಾಂಗ್ರೆಸ್​ ಸರ್ಕಾರ ನಡೆಯ ಬಗ್ಗೆ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಜೆ ಕೊಡುವ ಸದ್ಬುದ್ದಿಯನ್ನು ಪ್ರಭು ಶ್ರೀರಾಮ ಚಂದ್ರ ನೀಡಲಿ ಎಂದು ಕುಟುಕಿದ್ದಾರೆ. ಹಿಂದೂಗಳ ಭಾವನೆಗೆ ಅಪಮಾನ‌ ಮಾಡುವ ಸರ್ಕಾರ ರಾಜ್ಯದಲ್ಲಿದೆ. ಹಿಂದೂಗಳನ್ನು ಅಪಮಾನ ಮಾಡಿ‌ ಮುಸ್ಲಿಂ ಮತ ಗಳಿಸುವ ಸರ್ಕಾರ ಇದು. ದೇಶದ ಪ್ರತಿಯೊಬ್ಬನ ಮನಸಲ್ಲಿ ರಾಮಮಂದಿರ ಉದ್ಘಾಟನೆಯ ಸಂಭ್ರಮ ಇದೆ. ನಂಬಿಕೆಗೆ ಅಪಮಾನ ಮಾಡುವುದು ಒಂದು ಸಂಘಟನೆಯ ನಾಶ ಸಂಕೇತ. ಒಂದೇ ಕೋಮಿನ ವ್ಯವಸ್ಥೆಯಿಂದ ಹೊರಗೆ ಬರಲು‌ ಅವಕಾಶ ಇದೆ. ರಾಮ ಹಲವರಿಗೆ ಒಳ್ಳೆಯ ಬುದ್ದಿ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

Read More

ಬೆಂಗಳೂರು: ರಾಮನ ಕುರಿತ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಸಹಕಾರಿ ಸಚಿವ ​ಕೆ ಎನ್​ ರಾಜಣ್ಣ  ಸ್ಪಷ್ಟಣೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಾಬ್ರಿ ಮಸೀದಿ ದ್ವಂಸ ಮಾಡಿದಾಗ, ನಾನು ಭೇಟಿ ಕೊಟ್ಟಾಗ ನಾನು ಕಂಡ ಚಿತ್ರಣವನ್ನೂ ಅವತ್ತು ಹೇಳಿಕೊಂಡಿದ್ದೇನೆ ಅಷ್ಟೇ. ಬೊಂಬೆಯನ್ನ ದೇವರು ಅಂತಾ ಹೇಳಿದ್ರೆ ಏನೂ ತಪ್ಪು. ಬೊಂಬೆಯಲ್ಲಿ ದೈವತ್ವ ಇರೋದಿಲ್ವಾ ಎಂದಿದ್ದಾರೆ. ಬೊಂಬೆ ಅನ್ನೋ ಕಾರಣಕ್ಕೆ ತಿರಸ್ಕಾರ ಮನೋಭಾವದಿಂದ ಇವರು ಮಾತನಾಡತಾರಲ್ಲ ಅದು ಸರಿನಾ. ಟೂರಿಂಗ್ ಟಾಕೀಸ್ ರೀತಿಯೇ ಇತ್ತು ಅವತ್ತು ಅಲ್ಲಿ. ಅದಕ್ಕೆ ಹೇಳಿದ್ದೇನೆ ನಾನು. ಅದನ್ನ ಬಿಟ್ಟು ದೇವರನ್ನೇ ಟೂರಿಂಗ್ ಟಾಕೀಸ್ ಅಂದಿಲ್ಲ ಎಂದು ಹೇಳಿದ್ದಾರೆ. ನನಗೆ ರಾವಣ ಎಂದಿದ್ದಾರೆ ನನಗೆ ಬೇಜಾರಿಲ್ಲ, ರಾವಣ ಎಂದು ಅನಿಸಿಕೊಳ್ಳಲು ನಾನು ಸಿದ್ಧನಿದ್ದೇನೆ. ಅವನಂತ ಧೈವ ಭಕ್ತ ಯಾರೂ ಇರಲಿಲ್ಲ. ಇವರೆಲ್ಲ ಡೋಂಗಿ ದೈವ ಭಕ್ತರು. ಹಿಂದೆ ಅಣ್ಣಾದೋರೈ ರಾಮಾಯಣಕ್ಕೆ ಬದಲಾಗಿ ರಾವರಣಾವಣ ನಾಟಕ ಆಡಿದ್ರು. ಈ ನಾಟಕದಲ್ಲಿ ರಾವಣ ಸೀತೆ ಮೇಲೆ ಬಲಾತ್ಕಾರ ಮಾಡೋದಿಲ್ಲ. ಇದು ರಾವಣನ…

Read More

ಬೆಂಗಳೂರು : ಬಸವಣ್ಣನವರ ಹೆಸರು ಚಿರಸ್ಥಾಯಿಯಾಗಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಲಾಲ್ ಬಾಗ್​ನ ಗಾಜಿನ ಮನೆಯಲ್ಲಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ-2024 ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಗೌರವಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು. ಶಿವಮೊಗ್ಗದಲ್ಲಿರುವ ಜೈಲಿನ 46 ಎಕರೆ ಪ್ರದೇಶದಲ್ಲಿ ಉದ್ಯಾನವನಕ್ಕೆ ಅಲ್ಲಮಪ್ರಭು ಉದ್ಯಾನವನ ಎಂದು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ಅಲ್ಲಮಪ್ರಭು ಹಾಗೂ ಅಕ್ಕಮಹಾದೇವಿ ಶಿಕಾರಿಪುರದವರಾದ್ದರಿಂದ ಅವರ ಹೆಸರನ್ನೂ ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಈ ತೀರ್ಮಾನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ತೋಟಗಾರಿಕೆ ಇಲಾಖೆಯವರು ಬೆಳೆಯುವ ಹೂ, ಹಣ್ಣುಗಳು, ಇಲಾಖೆಯಲ್ಲಿ ಆಗಿರುವ ಬೆಳವಣಿಗೆಗಳನ್ನು ಜನರಿಗೆ ಪರಿಚಯಿಸುವ ಕಾರ್ಯಕ್ರಮ ಇದಾಗಿದ್ದು, ಕಾರ್ಯಕ್ರಮ ಆಯೋಜಿಸಿರುವ ತೋಟಗಾರಿಕೆ ಇಲಾಖೆಗೆ ಧನ್ಯವಾದಗಳು ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 28ನೇ ಜನವರಿ ವರೆಗೆ ಪ್ರದರ್ಶನ ನಡೆಯಲಿದ್ದು, ತೋಟಗಾರಿಕೆ ಇಲಾಖೆ ಮಾಡಿಕೊಟ್ಟಿರುವ ಈ ಅವಕಾಶವನ್ನು ಬೆಂಗಳೂರಿನ ನಾಗರಿಕರು ಸದುಪಯೋಗ ಪಡಿಸಿಕೊಳ್ಳಬೇಕು. ತೋಟಗಾರಿಕಾ ಇಲಾಖೆಯವರಿಂದ ವಿವಿಧ ಫಲ…

Read More

ಹುಬ್ಬಳ್ಳಿ: ಬಸವೇಶ್ವರನ್ನ ಚುನಾವಣಾ ವಿಚಾರಕ್ಕೆ ಬಳಕೆ ವಿಷಯ ಮುನ್ನಲೆಗೆ ತರುವವರೇ ಕ್ಷುಲಕ್ಕರು ಎಂದು ಹುಬ್ಬಳ್ಳಿಯಲ್ಲಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಸಾಂಸ್ಕೃತಿಕ ನಾಯಕರನ್ನಾಗಿ ಶ್ರೀ ಬಸವಣ್ಣನ ಘೋಷಣೆಗೆ ರಾಜಕಾರಣ ಬೆರೆಸುವ ಕುರಿತು ವಿಚಾರವಾಗಿ ಮಾತನಾಡಿದ ಅವರು ಅವರ ತಲೆಯಲ್ಲಿ ಕೇವಲ ರಾಜಕಾರಣ ಇದೆ ನಾವು ನಮ್ಮ ದೃಡ ಹೆಜ್ಜೆ ಇಡತಾ ಹೋಗತಾ ಇದ್ದೇವೆ. ಈ ಹಿಂದೆನಾವು ಐದು ಗ್ಯಾರಂಟಿಗಳನ್ನ ತಂದಿವೆ ಚುನಾವಣೆಗೆ ತರತಾ ಇದ್ದಾರೆ ಎಂದರು ಈಗ ಬಸವಣ್ಣನವರ ಈಗ ಸಾಂಸ್ಕೃತಿಕ ನಾಯಕರನ್ನಾಗಿ ಮಾಡಿದವು ಅದಕ್ಕೊ ಚುನಾವಣಾ ಅಂತಾರೆ.ಅಲ್ಲಮ್ಮ ಪ್ರಭು ಅವರ ಉದ್ಯಾನವನ ಮಾಡಿದವು ಇದಕ್ಕೂ ಚುನಾವಣೆ ಅಂತಿರಿ ಚೆನ್ನಮ್ಮನ ಕಿತ್ತೂರು ಮಾಡಿದವು ಅದಕ್ಕೋ ರಾಜಕಾರಣ ಅಂತಿರಿಈಗ ಅವರ ತಲೆಯಲ್ಲಿ ಬರತಾ ಇದೆನಾವು ಏನು ಮಾಡಲಿಲ್ಲ ಅದಕ್ಕೆ ಇಲ್ಲ ಸಲದ ಆರೋಪ ಮಾಡತಾ ಇದ್ದಾರೆ. ಸಾಂಸ್ಕೃತಿಕ ಹಾಗೂ ಸಾಮಾಜಿಕವಾಗಿ ಒಳ್ಳೆಯದು ಅವರಲ್ಲಿ ಇಲ್ಲ ಮನುಕುಲ ಕಂಡ ಶ್ರೇಷ್ಠ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ…

Read More

ಬೆಂಗಳೂರು: ಪೊಲೀಸರು ನನ್ನ ವಿಚಾರಣೆ ಮಾಡಲು ಬಂದಿದ್ದರು. ನಾನು ಕೊಟ್ಟ ಹೇಳಿಕೆ ಅಪರಾಧ ಅನ್ನೋದಾದ್ರೆ ಪೊಲೀಸ್ ಸ್ಟೇಶನ್‍ಗೆ ಕರೆದು ಅರೆಸ್ಟ್ ಮಾಡಿ ವಿಚಾರಣೆ ಮಾಡಿ ಎಂದಿದ್ದೇನೆ. ವಿವಿಐಪಿ ಟ್ರೀಟ್ಮೆಂಟ್ ನನಗೆ ಬೇಕಾಗಿಲ್ಲ, ರತ್ನಗಂಬಳಿ ಬೇಕಾಗಿಲ್ಲ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ಗೋಧ್ರಾ ಮಾದರಿ ಹತ್ಯಾಕಾಂಡ ನಡೆಯಬಾರದು ಎಂಬ ಹೇಳಿಕೆ ಸಂಬಂಧ ಇಂದು ಪೊಲೀಸರು ಹೇಳಿಕೆ ಪಡೆಯಲು ಬಿ.ಕೆ ಹರಿಪ್ರಸಾದ್ (B.K Hariprasad) ಇರುವ ಕುಮಾರಕೃಪಾ ಗೆಸ್ಟ್ ಹೌಸ್‍ಗೆ ತೆರಳಿದ್ದರು. ಪೊಲೀಸರು ಬಂದು ಹೋದ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಬಿ.ಕೆ ಹರಿಪ್ರಸಾದ್, ಅನಂತ್ ಕುಮಾರ್ ಹೆಗಡೆ, ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ರತ್ನಗಂಬಳಿ ಹಾಕಿದ್ದಾರೆ. ಠಾಣೆಗೆ ಬರಲು ವಾರೆಂಟ್ ತಗೊಂಡು ಬನ್ನಿ ಎಂದಿದ್ದೇನೆ. ಈಗ ಯಾವ ಹೇಳಿಕೆಯನ್ನೂ ಕೊಟ್ಟಿಲ್ಲ. ನಾನು ಅಪರಾಧಿ ಅಲ್ಲ. ಪೊಲೀಸರು ಟಾರ್ಗೆಟ್ ಮಾಡಿದ್ರೆ ನಾನು ಬಗ್ಗುವವನಲ್ಲ. ನಾನು ದೇಶದಲ್ಲಿ ಓಡಾಡಿದ್ದೇನೆ. ನಾನು ಕಾಂಗ್ರೆಸ್ ನಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಸರ್ಕಾರದಲ್ಲಿ ನನ್ನ ಪರಿಸ್ಥಿತಿಯೇ ಈ…

Read More

ಬೆಂಗಳೂರು: ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್‍ ನ ಉದ್ಘಾಟನೆ ಹಾಗೂ ಬೋಯಿಂಗ್ ಸುಕನ್ಯಾ ಲೋಕಪರ್ಣೆ ಮಾಡಿ ಸಾರ್ವಜನಿಕ ‌ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಇಂದು‌ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಗೌರವಾನ್ವಿತ ಪ್ರಧಾನ ಮಂತ್ರಿಯವರನ್ನು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು‌ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಮಯದಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ರಜನೀಶ್ ಗೋಯಲ್, ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ. ದಯಾನಂದ ಸೇರಿದಂತೆ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ, ಲೋಕಸಭಾ‌ ಸದಸ್ಯರಾದ ಪಿ.ಸಿ. ಮೋಹನ್, ಭಾರತೀಯ ಜನತಾ ಪಾರ್ಟಿ ರಾಜ್ಯಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಹಾಗೂ ಶಾಸಕರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More