Author: AIN Author

ದೇವನಹಳ್ಳಿ- ಒಂದೆಡೆ ಆಯೋದ್ಯೆಯಲ್ಲಿ ಪ್ರಭು ಶ್ರೀ ರಾಮನ ದಿವ್ಯ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ಮತ್ತೊಂದೆಡೆ ಸೀತಾ ರಾಮನ ಮೂರ್ತಿಗಳಿಗೆ ಬೇಡಿಕೆ ಹೆಚ್ಚಾಗಿದೆ. ಇದರ ಒಂದು ಝಲಕ್ ಇಲ್ಲಿದೆ ನೋಡಿ. ಹೌದು, ಬೆಂಗಳೂರು ಕೆಂಪೇಗೌಡ ಏರ್ಪೋಟ್ ನಲ್ಲೂ ರಾಮನ ಮೂರ್ತಿಗಳ ಮಾರಾಟ ಬಲು ಜೋರಾಗಿಯೇ ನಡೆಯುತ್ತಿದೆ. ಏರ್ಪೋರ್ಟ್ ನ ಟರ್ಮಿನಲ್ ಒಳಭಾಗದ ಅಂಗಡಿಗಳಲ್ಲಿ ರಾಮನ ಮೂರ್ತಿಗಳಿಗೆ ಭಾರಿ ಬೇಡಿಕೆ ಇದ್ದು, ಪ್ರಯಾಣ ಮಾಡುವ ವೇಳೆ ಸೀತಾ ರಾಮ ಹಾಗೂ ಹನುಮನ ಮೂರ್ತಿಗಳನ್ನು ಪ್ರಯಾಣಿಕರು ಖರೀದಿ ಮಾಡ್ತಿದ್ದಾರೆ. ವಿವಿಧ ಬಗೆಯ ಮೂರ್ತಿಗಳು ಪ್ರಯಾಣಿಕರ ಕಣ್ಮನ ಸೆಳೆಯುತ್ತಿವೆ. ಟರ್ಮಿನಲ್ ಒಳ ಭಾಗದ ಅಂಗಡಿಗಳಲ್ಲಿ ಮೂರ್ತಿಗಳ ಮಾರಾಟ ಮಾಡಲಾಗುತ್ತಿದ್ದು, ಎಲ್ಲರ ಗಮನ ಶ್ರೀ ರಾಮನ ಮೇಲೆ ನೆಟ್ಟಿದೆ.

Read More

ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಯನತಾರಾ (Nayanatara) ನಟನೆಯ ‘ಅನ್ನಪೂರ್ಣಿ’ (Annapoorni Film) ಇತ್ತೀಚೆಗೆ ಒಟಿಟಿಯಲ್ಲಿ ತೆರೆಕಂಡಿತ್ತು. ಬಳಿಕ ಸಾಕಷ್ಟು ವಿವಾದಗಳನ್ನು ಹುಟ್ಟುಹಾಕಿತ್ತು. ಚಿತ್ರದಲ್ಲಿನ ರಾಮನೂ ಮಾಂಸಾಹಾರ ಸೇವನೆ ಮಾಡಿದ್ದ ಎಂಬ ಡೈಲಾಗ್ ಸೇರಿದಂತೆ ಹಲವು ದೃಶ್ಯಗಳು ವಿವಾದ ಸೃಷ್ಟಿ ಮಾಡಿತ್ತು. ಇದೀಗ ಈ ಕಾಂಟ್ರವರ್ಸಿ ಬಗ್ಗೆ ನಯನತಾರಾ ಮೌನ ಮುರಿದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನಟಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಭಾರವಾದ ಹೃದಯದಿಂದ ಮತ್ತು ಸತ್ಯದ ಆಧಾರದ ಮೇಲೆ ಈ ಬರಹ ಬರೆಯುತ್ತಿದ್ದೇನೆ. ಇತ್ತೀಚಿನ ದಿನಗಳಲ್ಲಿ ನಮ್ಮ ‘ಅನ್ನಪೂರ್ಣಿ’ ಚಿತ್ರ ಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ನನ್ನ ಅಭಿಪ್ರಾಯ ಹಂಚಿಕೊಳ್ಳಲು ಬಯಸುತ್ತೇನೆ ಎಂದು ನಟಿ ರಿಯಾಕ್ಟ್ ಮಾಡಿದ್ದಾರೆ. ಜೈ ಶ್ರೀರಾಮ್ (Jai Shreeram) ಎಂದು ಮೊದಲು ಬರೆದುಕೊಂಡಿದ್ದಾರೆ. ಸಿನಿಮಾ ಮಾಡುವುದು ಎಂದರೆ ಕೇವಲ ಆರ್ಥಿಕ ಲಾಭಕ್ಕೆ ಮಾತ್ರವಲ್ಲ ಸಮಾಜಕ್ಕೆ ಒಂದು ಸಂದೇಶ ತಿಳಿಸುವ ಉದ್ದೇಶವೂ ಇರುತ್ತದೆ. ‘ಅನ್ನಪೂರ್ಣಿ’ ಚಿತ್ರವನ್ನು ನಿಷ್ಕಲ್ಮಶ ಮನಸ್ಸಿನಿಂದ ಮಾಡಲಾಗಿದೆ. ನಮ್ಮ ನಿಜ ಜೀವನದಲ್ಲಿ ಏನು ನಡೆಯುತ್ತಿದೆಯೋ ಅದನ್ನೇ ತೋರಿಸುವುದೇ…

Read More

ಮಂಡ್ಯ:- ವೈದ್ಯರ ಮನೆಯಲ್ಲಿ ಕಳ್ಳತನ ನಡೆದಿದ್ದು, ಅಪಾರ ಪ್ರಮಾಣದ ನಗದು-ಚಿನ್ನಾಭರಣ ಕಳವು ಆಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಕೆ.ಹೆಚ್.ನಗರದಲ್ಲಿ ಜರುಗಿದೆ. ಇನ್ನೂ ಕಳ್ಳತನ ಮಾಡಿದ ಪುಂಡರು ಬಳಿಕ ಸಿಸಿಟಿವಿ ಕ್ಯಾಮರಾದ ಪೋಟೋಜ್ ಜೊತೆ ಪರಾರಿಯಾಗಿದ್ದಾರೆ. ತೈಲೂರು ಗ್ರಾಮದ ಡಾ.ಟಿ.ಚಂದ್ರ ಅವರ ಮನೆಯಲ್ಲಿ ರಾತ್ರೋರಾತ್ರಿ ಕಳ್ಳರು ಕೈ ಚಳಕ ತೋರಿದ್ದು, ಅಲ್ಲದೇ ಚಿನ್ನಾಭರಣದ ಜೊತೆಗೆ ಎಂಟು ಲಕ್ಷ ನಗದು ದೋಚಿ ಪರಾರಿ ಆಗಿದ್ದಾರೆ. ಕದ್ದ ಮಾಲುಗಳ ಮೌಲ್ಯ ಸುಮಾರು 45 ಲಕ್ಷ ಇದ್ದು, ಮನೆಯಲ್ಲಿ ಯಾರು ಇಲ್ಲದಿದ್ದಾಗ ಹೊಂಚು ಹಾಕಿ ಕಳವು ಮಾಡಲಾಗಿದೆ. ಕಳ್ಳತನ ಮಾಡಿ ಜೊತೆಗೆ ಸಿಸಿಟಿವಿ ಕ್ಯಾಮರಾದ ಪೋಟೋಜ್ ಜೊತೆ ಖತರ್ನಾಕ್ ಗಳು ಎಸ್ಕೇಪ್ ಆಗಿದ್ದಾರೆ. ಮನೆಯಲ್ಲಿದ್ದ14 ಚಿನ್ನದ ಬಳೆ, 4 ಜೊತೆ ಡೈಮಂಡ್ ಓಲೆ, 02 ಕರಿಮಣಿ ಸರ , ಒಂದು ಚಿನ್ನದ ತುಳಸಿ ಹಾರ, 5 ಚಿನ್ನದ ಸರ ಮತ್ತು 3 ವೈಟ್ ಪೆಡೆಂಟ್ ,3 ಚಿನ್ನದ ಪೆಡೆಂಟ್, ಎರಡು ಎಳೆ ಚಿನ್ನದ ಸರ…

Read More

ಬೆಂಗಳೂರು:  ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ 6 ಜನ ಗಂಭೀರ ಗಾಯಗೊಂಡವರನ್ನ ಆಸ್ಪತ್ರೆಗೆ  ಶಿಫ್ಟ್‌ ಮಾಡಲಾಗಿದೆ. ಕುಸಿದ ಸ್ಥಳದಲ್ಲಿ ಇದ್ದ 16ಕ್ಕೂ ಹೆಚ್ಚು ಕಾರ್ಮಿಕರು ಇದ್ದು ಅದರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ಇದೆ. ಎರಡನೇ ಅಂತಸ್ತಿನ ನಿರ್ಮಾಣದ ವೇಳೆ ಕಟ್ಟಡ ಕುಸಿದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ ಎಂದು ತಿಳಿದು ಬಂದಿದೆ.

Read More

ಧಾರವಾಡ- ಇದೇ ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರಭ ಶ್ರೀ ಬಾಲರಾಮ ಪ್ರಾಣ ಪ್ರತಿಷ್ಠಾನ‌ ನಡೆಯಲಿದ್ದು, ಅನೇಕ‌ ಭಕ್ತರು ತಮ್ಮದೆಯಾದ ಕಲೆ, ಸಂಗೀತ ಸೇರಿ ವಿವಿಧ ರೀತಿಯಲ್ಲಿ ತಮ್ಮ ಭಕ್ತಿಯನ್ನು ವ್ಯಕ್ತಪಡಿಸುತ್ತಿದ್ದಾರೆ. ಅದೇ ರೀತಿ ಪೇಡಾ ನಗರಿಯ ಇಬ್ಬರು ವಿದ್ಯಾರ್ಥಿನಿಯರು ಶ್ರೀರಾಮ ಹಾಡು ಹಾಡುವ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ಹೌದು ಪೇಡಾ ನಗರಿ ಧಾರವಾಡದ ಮುಸ್ಲಿಂ ವಿದ್ಯಾರ್ಥಿನಿ ಜೋಯಾ ಹಾಗೂ ಹಿಂದೂ ವಿದ್ಯಾರ್ಥಿನಿ ಸೃಜನಾ ಶ್ರೀರಾಮನ ಹಾಡುಗಳನ್ನು ಸುಮಧುರವಾಗಿ ಹಾಡಿ ಗಮನ ಸೆಳೆದಿದ್ದಾರೆ. ಹಿಂದೂ ಮುಸ್ಲಿಂ ಎಂದು ಭೇದ ಹುಟ್ಟಿಸುವ ಕಾಲದಲ್ಲಿ ಇಬ್ಬರು ವಿದ್ಯಾರ್ಥಿನಿಯರು, ಪ್ರಭ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾನೆಗೆ ತಮ್ಮ ಶ್ರೀರಾಮ ಹಾಡು ಹಾಡುವ ಮೂಲಕ ರಾಮನ ಕೃಪೆಗೆ ಪಾತ್ರರಾಗುವುದರ ಜೊತೆಗೆ, ನಾವೆಲ್ಲರು ಭಾರತೀಯರು ಒಂದೆ ಎಂಬ ಸಂದೇಶ ಸಾರಿ ಮಾದರಿಯಾಗಿದ್ದಾರೆ. ಶ್ರೀರಾಮ ಎಲ್ಲರಿಗೂ ಆದರ್ಶ ಎಂಬುದನ್ನು ಧಾರವಾಡ ವಿದ್ಯಾರ್ಥಿಗಳು ಸಾರಿದ್ದು ಸೌಹಾರ್ದತೆ ಹಿಡಿದ ಕೈಗನ್ನಡಿಯಾಗಿದೆ.

Read More

ಮುಂಬೈ: ಇತ್ತೀಚೆಗೆ ವೈರಲ್ ಆಗಿದ್ದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಡೀಪ್‍ಫೇಕ್ (Deepfake) ವೀಡಿಯೋ ಸಂಬಂಧ ಮುಂಬೈ (Mumbai) ಪೊಲೀಸರು (Police) ಗೇಮಿಂಗ್ ಅಪ್ಲಿಕೇಶನ್ ಹಾಗೂ ಫೇಸ್‍ಬುಕ್ ಪುಟವೊಂದರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಮತ್ತು ಅವರ ಮಗಳು ಸಾರಾ ಆನ್‍ಲೈನ್ ಗೇಮ್‍ವೊಂದರ ಮೂಲಕ ದೊಡ್ಡ ಮೊತ್ತದ ಹಣವನ್ನು ಗೆದ್ದಿದ್ದಾರೆ ಎಂದು ವೀಡಿಯೋದಲ್ಲಿ ಹೇಳಲಾಗಿತ್ತು. ಅಲ್ಲದೇ ಸಚಿನ್ ಗೇಮಿಂಗ್ ಅಪ್ಲಿಕೇಷನ್‍ನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಅವರ ಧ್ವನಿ ಹಾಗೂ ಅವರ ವೀಡಿಯೋ ಬಳಸಿ ಹಂಚಿಕೊಳ್ಳಲಾಗಿತ್ತು. ಇದನ್ನು ಸಚಿನ್ ಅವರ ಟ್ವಿಟ್ಟರ್ ಮೂಲಕವೂ ಫ್ಲಾಗ್ ಮಾಡಲಾಗಿತ್ತು ಈ ಬಗ್ಗೆ ಸಚಿನ್ ಆಪ್ತ ಸಹಾಯಕರೊಬ್ಬರು ನೀಡಿದ ದೂರಿನ ಅಡಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 500ರ ಅಡಿ (ಮಾನನಷ್ಟ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 66ರ (ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸುವುದು) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಗೇಮಿಂಗ್ ಸೈಟ್ ಮತ್ತು ಫೇಸ್‍ಬುಕ್ ಪುಟದ ಮಾಲೀಕರ ಬಗ್ಗೆ ಪೊಲೀಸರು ವಿವರಗಳನ್ನು ಹಂಚಿಕೊಂಡಿಲ್ಲ.

Read More

ಚಿಕ್ಕಬಳ್ಳಾಪುರ: ʻಒಂದು ಜಗತ್ತು-ಒಂದು ಕುಟುಂಬʼ (One World- One Family) ಘೋಷ ವಾಕ್ಯದಡಿ ಶ್ರೀ ಸದ್ಗುರು ಮಧುಸೂದನಸಾಯಿ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಬಳಿ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಕ್ರಿಕೆಟ್ ದಿಗ್ಗಜರ ಕಾಳಗ ನಡೆಯುತ್ತಿದೆ. ಸತ್ಯಸಾಯಿ ಗ್ರಾಮದಲ್ಲಿ ನೂತನ ಸಾಯಿಕೃಷ್ಣನ್ ಸ್ಟೇಡಿಯಂ (Sai Krishnan Cricket Stadium) ಲೋಕಾರ್ಪಣೆ ಅಂಗವಾಗಿ ಒಂದು ಜಗತ್ತು ಹಾಗೂ ಒಂದು ಕುಟುಂಬ ಎಂಬ (ಒನ್ ವರ್ಲ್ಡ್-ಒನ್ ಫ್ಯಾಮಿಲಿ ಕಪ್) ಟಿ20 ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ. ಸಾಯಿಕೃಷ್ಣನ್ ಕ್ರೀಡಾಂಗಣವನ್ನು ಸದ್ಗುರು ಮಧುಸೂದನಸಾಯಿ ಜೊತೆ ಸಚಿನ್ ತೆಂಡೂಲ್ಕರ್ (Sachin Tendulkar) ಹಾಗೂ ಯುವರಾಜ್ ಸಿಂಗ್ (Yuvraj Singh) ಲೋಕಾರ್ಪಣೆ ಮಾಡಿದ್ದಾರೆ. ಈ ಟೂರ್ನಿಯಲ್ಲಿ ಕ್ರಿಕೆಟ್‌ ದೇವರು ಖ್ಯಾತಿಯ ಸಚಿನ್ ತೆಂಡೂಲ್ಕರ್ ಹಾಗೂ ಯುವರಾಜ್ ಸಿಂಗ್ ನಾಯಕತ್ವದಡಿ 8 ದೇಶಗಳ 24 ಮಂದಿ ಆಟಗಾರರು ಟೂರ್ನಿಯಲ್ಲಿ ಭಾಗವಹಿಸಿದ್ದಾರೆ. ಟಾಸ್ ಗೆದ್ದ ಒನ್ ವರ್ಲ್ಡ್ ತಂಡದ ನಾಯಕ ಸಚಿನ್ ತೆಂಡೂಲ್ಕರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಯುವರಾಜ್ ಸಿಂಗ್ ನಾಯಕತ್ವದ ಒನ್‌…

Read More

ವಿವಿಧ ದೇಶಗಳ ಕರೆನ್ಸಿ ಮೌಲ್ಯ ದಿನದಿನಕ್ಕೂ ನೆಲ ಕಚ್ಚುತ್ತಿದೆ. ವಿದೇಶೀ ವಿನಿಮಯ ಮೀಸಲು ಪಾತಾಳಕ್ಕೆ ಇಳಿದಿವೆ. ಅವೆಷ್ಟು ರಾಷ್ಟ್ರಗಳು ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿವೆಯೋ! ಶ್ರೀಲಂಕಾ, ಲೆಬನಾನ್, ರಷ್ಯಾ, ಸುರಿನಾಮ್ ಮತ್ತು ಜಾಂಬಿಯಾ ಈಗಾಗಲೇ ಸಾಲ ಹಿಂತಿರುಗಿಸಲು ವಿಫಲವಾಗಿವೆ. ಮಧ್ಯ ಪ್ರಾಚ್ಯದ ಲೆಬನಾನ್ ದೇಶದ​ ಜನರು ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದಾರೆ. ಬೆಲೆ ಏರಿಕೆ ನಡುವೆ ಜೀವನ ನಡೆಸುವುದೇ ದುಸ್ತರವಾಗಿರುವ ಹಿನ್ನೆಲೆ ದೇಶದ ಶೇ 26ರಷ್ಟು ಮಕ್ಕಳನ್ನು ಶಾಲೆಯಿಂದ ಬಿಡಿಸಲಾಗಿದೆ ಎಂಬ ಮಾಹಿತಿಯನ್ನು ಯುನಿಸೆಫ್​ ವರದಿ ತಿಳಿಸಿದೆ. ಯುನಿಸೆಫ್​ ಬಿಡುಗಡೆ ಮಾಡಿದ ವರದಿಯಲ್ಲಿ ಏಪ್ರಿಲ್​ನಲ್ಲಿ ಶೇ 18ರಷ್ಟು ಮಕ್ಕಳು ಶಾಲೆ ತೊರೆದಿದ್ದರೆ, ಇದೀಗ ಕಳೆದ ತ್ರೈಮಾಸಿಕದಲ್ಲಿ ಈ ಸಂಖ್ಯೆ ಶೇ 26ರಷ್ಟಾಗಿದೆ ಎಂದು ತಿಳಿಸಿದೆ. ದಕ್ಷಿಣ ಲೆಬನಾನ್​ನಲ್ಲಿ ಹಗೆತನದ ತೀವ್ರತೆ ಕಾರಣದಿಂದ 2023ರ ಅಕ್ಟೋಬರ್​ನಿಂದ ಹಲವು ಶಾಲೆಗಳನ್ನು ಮುಚ್ಚಲಾಗಿದೆ. ಇದು 6 ಸಾವಿರ ಮಕ್ಕಳ ಮೇಲೆ ಪರಿಣಾಮ ಬೀರಿದೆ ಎಂದು ಮಾಹಿತಿ ನೀಡಿದೆ. ವರದಿಯಲ್ಲಿ ದೇಶದಲ್ಲಿ ಗಗನಕ್ಕೇರುತ್ತಿರುವ ಬೆಲೆಯುಂದಾಗಿ ಕುಟುಂಬಗಳು ಒಂದು ಹೊತ್ತಿನ ಊಟ ಮತ್ತು…

Read More

ಬೆಂಗಳೂರು :- ಕಾರ್ಖಾನೆ ಕಾರ್ಮಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕೆಲಸದ ಅವಧಿ 12 ರಿಂದ 8 ಗಂಟೆಗೆ ಇಳಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ನೀರಾವರಿ ಹೋರಾಟಗಾರರು, ಭೂ ಹೀನರ ಹೋರಾಟ ಸಮಿತಿ, ಕಟ್ಟಡ ಕಾರ್ಮಿಕರ ಹೋರಾಟ ಸಮಿತಿ ಹಾಗೂ ಮಹಿಳಾ ಸಂಘಟನೆಗಳು ಹಾಗೂ ಟ್ರೇಡ್ ಯೂನಿಯನ್ ಸಂಘಟನೆಗಳ ಸಮನ್ವಯ ಸಮಿತಿಯ ನಾಯಕರುಗಳು, ಪದಾಧಿಕಾರಿಗಳ ಜೊತೆ ಇಂದು ಸಿಎಂ ಸಭೆ ನಡೆಸಿದರು. ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ಕಾರ್ಮಿಕ ಮುಖಂಡರಿಗೆ ಭರವಸೆ ನೀಡಿದರು. ರೈತರ, ಕಾರ್ಮಿಕರ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ, ಬಿಜೆಪಿ ಅವಧಿಯಲ್ಲಿ 8 ಗಂಟೆ ಅವಧಿಯನ್ನ 12 ಗಂಟೆಗೆ ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ 12 ಗಂಟೆಯಿಂದ 8 ಗಂಟೆಗೆ ಕೆಲಸದ ಅವಧಿ ಇಳಿಕೆಗೆ ಸರ್ಕಾರ ನಿರ್ಧಾರ ಮಾಡಿದ್ದು, ಈ ಬಗ್ಗೆ ಶೀಘ್ರವೇ ನಿರ್ಧಾರ ಪ್ರಕಟಿಸುವುದಾಗಿ ಸಿಎಂ ಭರವಸೆ ನೀಡಿದರು.

Read More

ಬೆಂಗಳೂರು:- ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಲೋನ್ ಪಡೆದಿದ್ದ ಐವರನ್ನು ಅರೆಸ್ಟ್ ಮಾಡಿದ್ದಾರೆ. ವೃದ್ಧೆಯೊಬ್ಬರ ಮನೆಯ ಮೇಲೆ ಲೋನ್ ಪಡೆದು ಈ ಗ್ಯಾಂಗ್​​ನವರು ವಂಚನೆ ಎಸಗಿದ್ದರು. ವೃದ್ಧೆ ಮನೆ ಮಾರಾಟ ಮಾಡಿ‌ ವಿದೇಶಕ್ಕೆ‌ ತೆರಳಲು ತೀರ್ಮಾನಿದ್ದರು. ಈ ವಿಚಾರವನ್ನು ಪಕ್ಕದ ಮನೆಯ ನಿವಾಸಿ ಮಂಜುನಾಥ್ ಬಳಿ ಹೇಳಿಕೊಂಡಿದ್ದರು. ಈ ಮಾಹಿತಿಯನ್ನು ದುರುಪಯೋಗಪಡಿಸಿಕೊಂಡ ಮಂಜುನಾಥ, ತನ್ನ ಸ್ನೇಹಿತರ ಜೊತೆಗೆ ಸೇರಿ ಲೋನ್ ಪಡೆದು ವಂಚನೆ ಎಸಗಿದ್ದಾನೆ. ಪ್ರಕರಣದ ತನಿಖೆ ನಡೆಸಿದಾಗ ಬ್ಯಾಂಕ್ ಮ್ಯಾನೇಜರ್ ಗಳ ಯಡವಟ್ಟು ಬಯಲಿಗೆ ಬಂದಿದೆ.

Read More