Author: AIN Author

ನೆಲಮಂಗಲ:- ತಾಲೂಕು ಸೋಂಪುರ ಹೋಬಳಿಯ ಪೆಮ್ಮನಹಳ್ಳಿ ಗ್ರಾಮದಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ಪಕೋರಿಯಸ್ ಬಯೋ ಫರ್ಟಿಲೈಸರ್ ಕಂಪನಿ ಮಾಲೀಕನಿಂದ ಗ್ರಾಮದ ಮುಖಂಡ ದಾಸೇಗೌಡ ಎಂಬುವರ ಮೇಲೆ ಹಲ್ಲೆ ಮಾಡಿದ್ದು ಕಂಪನಿ ಸ್ಥಗಿತಗೊಳಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಬಹಳ ವರ್ಷಗಳಿಂದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪರವಾನಗಿ ಪಡೆಯದೆ ಅನಧಿಕೃತವಾಗಿ ಕಂಪನಿಯಲ್ಲಿ ಕೋಳಿ ತ್ಯಾಜ್ಯ. ಪ್ರಾಣಿಗಳ ತ್ಯಾಜ್ಯ. ಹಾಗೂ ಮಾಂಸದ ತುಂಡುಗಳು ಇತರೆ ತ್ಯಾಜ್ಯದ ವಸ್ತುಗಳ ಶೇಖರಣೆ ಮಾಡಿ, ಅನಧಿಕೃತವಾಗಿ ಪ್ರಾಣಿಗಳ ಆಹಾರ ಪದಾರ್ಥಗಳನ್ನು ತಯಾರಿಸುತ್ತಿದ್ದು, ಈ ಕಂಪನಿಯಲ್ಲಿ ಶೇಖರಣೆ ಮಾಡಿದ ತ್ಯಾಜ್ಯ ವಸ್ತುಗಳಿಂದ ಪೆಮ್ಮನಹಳ್ಳಿ ಹಾಗೂ ಅಕ್ಕಪಕ್ಕದ ಗ್ರಾಮಗಳಲ್ಲಿ ರಾತ್ರಿಯ ವೇಳೆ ಕೆಟ್ಟ ದುರ್ವಾಸನೆ ಬರುತ್ತಿದ್ದು. ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಿಂದ ಗ್ರಾಮಸ್ಥರು, ಪಂಚಾಯಿತಿ ಅಧಿಕಾರಿಗಳಿಗೆ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರನ್ನು ದಾಖಲಿಸಿದ್ದರು. ದೂರು ಆಧಾರದ ಮೇಲೆ ಸ್ಥಳಕ್ಕೆ ಭೇಟಿ ಕೊಟ್ಟ ಅಧಿಕಾರಿಗಳು, ಕಂಪನಿ ಸ್ಥಗಿತಗೊಳಿಸಲು ಮುಂದಾದಾಗ , ಇದರಿಂದ ಆಕ್ರೋಶಗೊಂಡ ಕಂಪನಿಯ ಮಾಲೀಕ ಗ್ರಾಮಸ್ಥರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದನೆ…

Read More

ಬೆಂಗಳೂರು:- ನಗರದ ಹೈಕೋರ್ಟ್ ಪೀಠವು ಮಹತ್ವದ ಆದೇಶ ಹೊರಡಿಸಿದ್ದು, ಶಿವರಾಮ ಕಾರಂತ ಬಡಾವಣೆಯಲ್ಲಿ ಸದ್ಯಕ್ಕೆ ನಿವೇಶನ ಹಂಚಿಕೆ ಇಲ್ಲ. ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚನೆ ನೀಡಿದೆ. ನ್ಯಾ. ಕೃಷ್ಣ ಎಸ್.ದೀಕ್ಷಿತ್ ಮತ್ತು ‌ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ ಆದೇಶಿಸಲಾಗಿದೆ. ಶಿವರಾಮ ಕಾರಂತ ಬಡಾವಣೆ ಅಭಿವೃದ್ಧಿ ಕಾಮಗಾರಿ ಮುಂದುವರಿಸಲು ಅಸ್ತು ಎನ್ನಲಾಗಿದೆ. ಸಮಸ್ಯೆಗಳನ್ನು ಪರಿಹರಿಸದೆ ಬಿಡಿಎಯಿಂದ‌‌ ನಿವೇಶನ ಹಂಚಿಕೆ ಆರೋಪ‌ ಮಾಡಿದ್ದು, ಹಲವರು ಸುಪ್ರೀಂಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಅರ್ಜಿಗಳನ್ನು ಹೈಕೋರ್ಟ್​ಗೆ ವರ್ಗಾಯಿಸಿತ್ತು. ಶಿವರಾಮ ಕಾರಂತ ಬಡಾವಣೆಯ ದಾಖಲೆ ಸಮಿತಿ ಬಳಿ ಇರುವ ಹಿನ್ನೆಲೆ ಸಮಿತಿ ದಾಖಲೆಗಳನ್ನು ಬಿಡಿಎಗೆ ಹಸ್ತಾಂತರಿಸದೇ ಇಟ್ಟುಕೊಂಡಿದೆ. ದಾಖಲೆಯಿರುವ ಕೊಠಡಿ ಬೀಗದ‌ ಕೀ ಸಮಿತಿಯ ಬಳಿ ಇದೆ ಎಂದು ಬಿಡಿಎ ವಾದ ಮಂಡಿಸಿದೆ. ದಾಖಲೆಯಿರುವ ಕೊಠಡಿಗೆ ಮತ್ತೊಂದು ಬೀಗ ಹಾಕಿ ಕೀ ನೀಡುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್​ಗೆ ಪೀಠ ಸೂಚನೆ ನೀಡಿದೆ ಎಂದು ಹೇಳಲಾಗಿದೆ.

Read More

ಬೆಂಗಳೂರು:-ಬಿಎಂಟಿಸಿ ಬಸ್‌ನಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ವ್ಯಕ್ತಿ ಯನ್ನು ಬಂಧಿಸಲಾಗಿದೆ. ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಮೂರ್ತಿನಗರದ ಬಿಎಂಟಿಸಿ ಬಸ್‌ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗುವ ಸಮಯದಲ್ಲಿ ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿ/ಸಿಬ್ಬಂದಿಗಳು ಅವನನ್ನು ಬೆನ್ನಟ್ಟಿ ಹಿಡಿದು ವಶಕ್ಕೆ ಪಡೆದಿದ್ದಾರೆ. ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಾದ ಎ.ಎಸ್.ಐ ಲಕ್ಷ್ಮಣ್ ರೆಡ್ಡಿ, ಹೆಚ್.ಸಿ ರವೀಂದ್ರ, ಹೆಚ್.ಸಿ. ಬಸವರಾಜ ಮತ್ತು ಪಿ.ಸಿ ನವೀನ್ ಅವರು ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಇವರ ಪ್ರಶಂಸನೀಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Read More

ಕಲಬುರ್ಗಿ:- ಕಲಬುರಗಿಯಲ್ಲಿ ಮತ್ತೊಂದು ಪರೀಕ್ಷೆ ಅಕ್ರಮ ಕೇಳಿ ಬಂದಿದ್ದು, ಅವಧಿ ಮುಗಿದ ನಂತರವೂ ಖಾಸಗಿ ಕಾಲೇಜು ಪರೀಕ್ಷೆ ಬರೆಸಿದೆ. ಎಂ.ಜಿ.ರಸ್ತೆಯ ಯುನೈಟೆಡ್‌ ಡಿಗ್ರಿ ಖಾಸಗಿ ಕಾಲೇಜಿನಲ್ಲಿ ಬಿಸಿಎ ಫಸ್ಟ್ ಸೆಮಿಸ್ಟರ್ ಗಣಿತ ಪರೀಕ್ಷೆ (exam) ಯಲ್ಲಿ ಅವಧಿ ಮುಗಿದ 15 ನಿಮಿಷ ನಂತರವೂ ಪರೀಕ್ಷೆ ಬರೆಸಲಾಗಿದೆ ಅಕ್ರಮ ಹಿನ್ನೆಲೆ ಪರೀಕ್ಷಾ ಕೊಠಡಿಗೆ ಎಬಿವಿಪಿ ಕಾರ್ಯಕರ್ತರಿಂದ ಲಗ್ಗೆ ಇಡಲಾಗಿದ್ದು, ಪರೀಕ್ಷಾ ಅಕ್ರಮದ ಬಗ್ಗೆ ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆದರೆ ಯುನೈಟೆಡ್‌ ಡಿಗ್ರಿ ಕಾಲೇಜು ಸಿಬ್ಬಂದಿ ಆರೋಪ ನಿರಾಕರಿಸಿದ್ದಾರೆ. 80 ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳು ಕಡಿಮೆ ಬಂದಿದ್ದವು. ಜೆರಾಕ್ಸ್‌ ಮಾಡಿಸಿ ಹಂಚಿಕೆ ಮಾಡಲು 15 ನಿಮಿಷ ವಿಳಂಬವಾಗಿದೆ. ಹೀಗಾಗಿ 80 ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿಯಾಗಿ ಕೊಟ್ಟಿದ್ದೇವೆ. ಯಾವುದೇ ಅಕ್ರಮ ನಡೆಸಿಲ್ಲವೆಂದು ಖಾಸಗಿ ಕಾಲೇಜಿನ ಆಡಳಿತ ಮಂಡಳಿ ಹೇಳಿದೆ.

Read More

ಬೆಂಗಳೂರು:- ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. 215ನೇ ಫ್ಲವರ್ ಶೋ ವನ್ನು ಬಸವಣ್ಣನವರ ಪ್ರತಿಮೆಗೆ ಹೂ ಅರ್ಪಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಈ ವೇಳೆ ಸಿಎಂ‌ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ವೀಕ್ಷಣೆ ಮಾಡಿದ್ದು, ಸಚಿವ ರಾಮಲಿಂಗರೆಡ್ಡಿ ಕೂಡ ಸಾಥ್​ ನೀಡಿದರು. ಈ ಬಾರಿ ಫ್ಲವರ್​ ಶೋನಲ್ಲಿ 68 ಬಗೆಯ 32 ಲಕ್ಷ ಹೂವುಗಳ ಬಳಕೆ ಮಾಡಲಾಗಿದೆ. ಇಂದಿನಿಂದ ಜನವರಿ 28ರವರೆಗೆ ಫಲಪುಷ್ಪ ಪ್ರದರ್ಶನಕ್ಕೆ ಅವಕಾಶವಿದ್ದು, ಬೆಳಗ್ಗೆ 6.30ರಿಂದ ಸಂಜೆ 7.30ರವರೆಗೆ ವೀಕ್ಷಿಸಬಹುದಾಗಿದೆ. ಫ್ಲವರ್ ಶೋ ಉದ್ಘಾಟನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಸಾಕಷ್ಟು ಜನ ಸ್ವಾಮೀಜಿಯವರು ನನ್ನ ಭೇಟಿ‌ಮಾಡಿದರು. ಸಾಂಸ್ಕೃತಿಕ ನಾಯಕ ಅಂತ ಬಸವಣ್ಣನವರನ್ನ ಕರೆಯಬೇಕು ಅಂತ ಒತ್ತಾಯ ಮಾಡಿದರು. ಹೀಗಾಗಿ ಕ್ಯಾಬಿನೆಟ್ ಮಿಟಿಂಗ್​ನಲ್ಲಿ ತೀರ್ಮಾನ ಮಾಡಿದ್ದೇವೆ. ಇನ್ಮುಂದೆ ಬಸವಣ್ಣನವರನ್ನ ಸಾಂಸ್ಕೃತಿಕ ನಾಯಕ ಎಂದು ಕರೆಯಲಾಗುತ್ತೆ. ಶಿಕರಿಪುರದ 46 ಎಕರೆ ಜೈಲಿನ ಜಾಗಕ್ಕೆ ಅಲ್ಲಮ ಪ್ರಭುಜಾಗಕ್ಕೆ ನಾಮಕರಣ…

Read More

ಗಾಂಧಿನಗರ:- ದೋಣಿ ಮುಳುಗಿ 9 ಮಕ್ಕಳು ಮತ್ತು 3 ಮಂದಿ ಸಾವನ್ನಪ್ಪಿದ ಘಟನೆ ಗುಜರಾತ್‌ನ ವಡೋದರದ ಹರಾನಿ ಸರೋವರದಲ್ಲಿ ಜರುಗಿದೆ. ವಿಹಾರಕ್ಕೆಂದು ತೆರಳಿದ್ದ ದೋಣಿಯಲ್ಲಿ 23 ಮಕ್ಕಳು ಮತ್ತು ನಾಲ್ವರು ಶಿಕ್ಷಕರು ಇದ್ದರು. ಘಟನೆ ನಡೆದ ಕೂಡಲೇ ಸ್ಥಳಕ್ಕೆ ರಕ್ಷಣಾ ತಂಡ ದೌಡಾಯಿಸಿ ಕೆರೆಯಿಂದ ಐವರು ಮಕ್ಕಳನ್ನು ರಕ್ಷಣೆ ಮಾಡಿದೆ. ಉಳಿದ ವಿದ್ಯಾರ್ಥಿಗಳ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ವಡೋದರಾದ ಮುಖ್ಯ ಅಗ್ನಿಶಾಮಕ ಅಧಿಕಾರಿ ಪಾರ್ಥ್ ಬ್ರಹ್ಮಭಟ್ ಅವರು, ವಿಹಾರಕ್ಕೆಂದು ಬಂದಿದ್ದ ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಹರಾನಿ ಸರೋವರದಲ್ಲಿ ಮಗುಚಿ ಬಿದ್ದಿದೆ. ಅಗ್ನಿಶಾಮಕ ದಳವು ಇದುವರೆಗೆ 7 ವಿದ್ಯಾರ್ಥಿಗಳನ್ನು ರಕ್ಷಿಸಿದೆ, ನಾಪತ್ತೆಯಾದವರಿಗಾಗಿ ಶೋಧ ನಡೆಯುತ್ತಿದೆ. ಅಲ್ಲದೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪುವ ಮೊದಲೇ ಸ್ಥಳೀಯರು ಕೆಲವು ಮಕ್ಕಳನ್ನು ರಕ್ಷಿಸಿದ್ದಾರೆ ಎಂದು ಹೇಳಿದರು. ವಡೋದರದ ಹರಾನಿ ಸರೋವರದಲ್ಲಿ ದೋಣಿ ಮುಳುಗಿ ಆಗಿರುವ ಜೀವಹಾನಿಯಿಂದ ನೊಂದಿದ್ದೇನೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು…

Read More

ಹಾಸನ:- ನಾವು ರೈತರ ಮಕ್ಕಳು, ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹೇಳಿದ್ದಾರೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿಂದ ಜೆಡಿಎಸ್​ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ದೇವೇಗೌಡ, ಈ ರಾಷ್ಟದ ಚುನಾವಣೆ ತುಂಬಾ ವಿಭಿನ್ನವಾಗಿದೆ. ನಿಮ್ಮ ಇಷ್ಡು ವರ್ಷ ದ ರಾಜಕೀಯ ಜೀವನದಲ್ಲಿ ಜಾತ್ಯಾತೀತ ತತ್ವದಡಿ ಕೆಲಸ ಮಾಡಿದ್ರಿ. ಆದರೆ ಕೊನೆಯ ಘಟ್ಟದಲ್ಲಿ ಯಾಕೆ ಮಾರ್ಪಾಡು ಅಂತಾ ಕೇಳ್ತಾರೆ. ಹೌದು ಮಾರ್ಪಾಡು ಮಾಡಿದ್ದೇನೆ. ನಾನು ಮೊಮ್ಮಗನ ಗೆಲ್ಲಿಸಿ ಅಂತಾ ಬಂದಿಲ್ಲ. ಈ ಜಿಲ್ಲೆಯ ಅಭಿವೃದ್ಧಿಗಾಗಿ ಬಂದಿದ್ದೇನೆ. ದೇವೇಗೌಡರು ದೇವೇಗೌಡರ ಮಕ್ಕಳು ಯಾರಿಗೆ ಅನ್ಯಾಯ ಮಾಡಿದ್ದೇವೆ ಹೇಳಿ ಎಂದು ತಮ್ಮ ಕುಟುಂಬದ ವಿರುದ್ಧದ ಟೀಕೆಗೆ ತಿರುಗೇಟು ನೀಡಿದರು. ನಾವು ರೈತರ ಮಕ್ಕಳು. ನಿಮ್ಮನ್ನ ಬಿಟ್ಟು ನಾವು ಎಲ್ಲಿಗೆ ಹೋಗೋಣ. ಇದೇ ಕೊನೆ‌ ಅಲ್ಲ, ಮತ್ತೆ ಬರುತ್ತೇನೆ. ಈ ದೇಶದಲ್ಲಿ ಕಾಂಗ್ರೆಸ್ ಗಾಗಿ ನನ್ನ ಪ್ರಾಣವನ್ನೇ ತೆತ್ತಿದ್ದೇನೆ. ನಾವು ಯಾರಿಗೆ ಅನ್ಯಾಯ ಮಾಡಿದ್ದೇವೆ ಸತ್ಯ ಹೇಳಿ. ನಾವು ಯಾರನ್ನು ಬಿಟ್ಟುಕೊಡುವುದಿಲ್ಲ. ನನ್ನ…

Read More

6 ಜನರು ಖೈದಿಗಳನ್ನು ಬಿಡುಗಡೆ ಮಾಡಲು ಸ್ಯಾಂಡಲ್​ವುಡ್ ನಟ ದುನಿಯಾ ವಿಜಯ್ ಅವರು ನೆರವಾಗಿದ್ದಾರೆ. ಮೊನ್ನೆಯಷ್ಟೇ ಹುಟ್ಟೂರಲ್ಲಿ ಜೈಲು ಪಾಲಾಗಿರೋ ಅಮಾಯಕ ಜೀವಿಗಳ ಬಿಡುಗಡೆಗೆ ಪ್ರಯತ್ನ ಮಾಡುತ್ತೇನೆ ಎಂದು ನಟ ವಿಜಯ್ ಅವರು ಹೇಳಿದ್ದರು. ಈಗ ಅವರು ಹೇಳಿದಂತೆಯೇ ಮಾಡಿದ್ದಾರೆ. ಜನವರಿ 18ರಂದು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ 6 ಜನ ಖೈದಿಗಳನ್ನು ಬಿಡುಗಡೆ ಮಾಡಿಸಿದ್ದಾರೆ. ಇಂತಹ ನೋವು ಯಾರಿಗೂ ಬಾರದಿರಲಿ ಎಂದು ವಿಜಯ್ ಖೈದಿಗಳಿಗೆ ಹಾರೈಸಿದ್ದಾರೆ.

Read More

ಬೆಂಗಳೂರು:- ಬೇತಮಂಗಲ ಗ್ರಾಮದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದ ಇಬ್ಬರು ಯುವಕರನ್ನು ಅರೆಸ್ಟ್ ಮಾಡಲಾಗಿದೆ ಶ್ರೀರಾಮನ ಮತ್ತು ಗುಂಬಜ್ ಫೋಟೋ ಹಾಕಿ ಅಶ್ಲೀಲವಾಗಿ ಕಮೆಂಟ್​ ಮಾಡಿ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳನ್ನು ಪೊಲೀಸರಿಗೆ ಹಿಂದೂ ಸಂಘಟನೆ ಮುಖಂಡರು ಒಪ್ಪಿಸಿದ್ದಾರೆ. ಹಿಂದೂ ಪರ ಸಂಘಟನೆ ಕಾರ್ಯಕರ್ತರ ದೂರಿನ ಮೇರೆಗೆ ಇಬ್ಬರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದೆ. ಮುಳಬಾಗಿಲಿನಲ್ಲಿ ಕೆಲ ಕಿಡಿಗೇಡಿಗಳು ಮರ್ಯಾದಾ ಪುರುಷೋತ್ತಮನ ಕಟೌಟ್‌ ಮತ್ತು ಫ್ಲೆಕ್ಸ್‌ಗಳನ್ನ ಹರಿದು ಹಾಕಿದ್ದರು. ಜನವರಿ 21ರಂದು ನಗರದಲ್ಲಿ ಶೋಭಾಯಾತ್ರೆ ಆಯೋಜಿಸಲಾಗಿತ್ತು. ಅದಕ್ಕಾಗಿ ನಗರದ ಹಲವೆಡೆ ಶ್ರೀರಾಮನ ಫ್ಲೆಕ್ಸ್ ಹಾಕಲಾಗಿತ್ತು

Read More

ಬೆಂಗಳೂರು:- ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಕೆಲವು ಸಮಾಜಘಾತುಕ ಶಕ್ತಿಗಳು. ಸಂಚು ರೂಪಿಸಿ ರಾಮಭಕ್ತರಿಗೆ ಮತ್ತು ಹಿಂದೂಗಳಿಗೆ ಘಾಸಿ ಮಾಡುವ ಷಡ್ಯಂತ್ರ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ಮಾಡಿದ್ದರು. ಶ್ರೀರಾಮನ ಫ್ಲೆಕ್ಸ್ ಹರಿದ ಘಟನೆ ಹಿಂದುಗಳಿಗೆ ಘಾಸಿ ಮಾಡುವ ಷಡ್ಯಂತ್ರಗಳನ್ನು ರೂಪಿಸಿದಂತೆ ತೋರುತ್ತಿದೆ. ಪೊಲೀಸ್ ಇಲಾಖೆ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಿ. ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದರು

Read More