Author: AIN Author

ಕಲಬುರಗಿ: ನನ್ನ ಹೆಸರಲ್ಲೇ ಲಕ್ಷ್ಮಣ ಇದೆ ನಾನು ರಾಮ ಮಂದಿರಕ್ಕೆ ಹೋಗ್ತೀನಿ ಅಂತ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.. ಕಲಬುರಗಿಯಲ್ಲಿಂದು ಮಾತನಾಡಿದ ಸವದಿ, ನಾನು ಅಯೋಧ್ಯೆಗೆ ಹೋಗ್ತೀನಿ ಆದ್ರೆ ರಾಮ ಮಂದಿರ ಉದ್ಘಾಟನೆ ದಿನ ಹೋಗಲ್ಲ ಬದಲಾಗಿ 22 ರ ನಂತ್ರ ಒಮ್ಮೆ ಹೋಗಿ ಬರ್ತೀನಿ..ಹೀಗಾಗಿ ಹೋಗಬಾರದು ಅಂತೇನಿಲ್ಲ ಅಂದ್ರು.ನನ್ನ ಹೆಸರಲ್ಲೇ ಲಕ್ಷ್ಮಣ ಇದೆ ರಾಮನ ಹತ್ರ ಹೋಗ್ತೀನಿ ಅಂತ ಮುಗುಳ್ನಕ್ಕರು.

Read More

ಟೆಲ್‌ ಅವೀವ್:‌ ದಕ್ಷಿಣ ಲೆಬನಾನ್‌ನಲ್ಲಿ (South Lebanon) ಇಸ್ರೇಲ್‌ (Isreal) ಸೈನಿಕರು ನಡೆಸಿದ ದಾಳಿಯಲ್ಲಿ ಹಿಜ್ಬುಲ್ಲಾದ ಗಣ್ಯ ರಾದ್ವಾನ್ ಪಡೆಯ ಹಿರಿಯ ಕಮಾಂಡರ್‌ ಒಬ್ಬ ಸಾವನ್ನಪ್ಪಿರುವುದಾಗಿ ಭದ್ರತಾ ಮೂಲಗಳು ಮಾಧ್ಯಮಕ್ಕೆ ತಿಳಿಸಿವೆ. ಮೃತನನ್ನು ವಿಸ್ಸಾಮ್ ಅಲ್-ತವಿಲ್ (Wissam al-Tawil) ಎಂದು ಗುರುತಿಸಲಾಗಿದೆ. ಈತ ರಾದ್ವಾನ್ ಪಡೆಯೊಳಗಿನ ಘಟಕದ ಉಪ ಮುಖ್ಯಸ್ಥ ಎನ್ನಲಾಗಿದೆ. ಲೆಬನಾನಿನ ಮಜ್ದಾಲ್ ಸೆಲ್ಮ್ ಗ್ರಾಮದ ಮೇಲಿನ ದಾಳಿಯಲ್ಲಿ ವಿಸ್ಸಾಮ್ ಕಾರಿಗೆ ಡಿಕ್ಕಿ ಹೊಡೆದಾಗ‌ ವಿಸ್ಸಾಮ್‌ ಮತ್ತು ಇನ್ನೊಬ್ಬ ಹೆಜ್ಬೊಲ್ಲಾ ಹೋರಾಟಗಾರ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಈ ಮೂಲಕ ಸದ್ಯದ ಪರಿಸ್ಥಿತಿ ಇನ್ನಷ್ಟು ಉಲ್ಬಣಗೊಳ್ಳುವ ಸಾಧ್ಯಗಳು ಹೆಚ್ಚಿದೆ ಎಂದು ಭದ್ರತಾ ಮೂಲವೊಂದು ಆತಂಕ ವ್ಯಕ್ತಪಡಿಸಿದೆ. ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ದಾಳಿಯ ನಂತರ ‌ ದಕ್ಷಿಣ ಲೆಬನಾನ್‌ನಲ್ಲಿ 130 ಕ್ಕೂ ಹೆಚ್ಚು ಹೆಜ್ಬೊಲ್ಲಾ ಹೋರಾಟಗಾರರನ್ನು ಹತ್ಯೆ ಮಾಡಲಾಗಿದೆ. ಇತ್ತ ಸಿರಿಯಾದಲ್ಲಿ 19 ಮಂದಿ ಮೃತಪಟ್ಟಿದ್ದಾರೆ.  ಲೆಬನಾನ್‌ನ ಮೇಲೆ ಪೂರ್ಣ ಪ್ರಮಾಣದ ಯುದ್ಧವನ್ನು ಪ್ರಾರಂಭಿಸದಂತೆ ಕಳೆದ ವಾರ ಹೆಜ್ಬೊಲ್ಲಾಹ್‌ನ ಪ್ರಧಾನ…

Read More

ಬೆಂಗಳೂರು: ಬಡವರು ತಮ್ಮ ಕನಸಿನ ಮನೆ ನಿರ್ಮಿಸಿಕೊಂಡು ಬದುಕಿಗೊಂದು ಶಾಶ್ವತ ಸೂರು ಸಿಗಲಿ ಎಂಬ ಸರ್ಕಾರದ ಆಶಯದಂತೆ  ರಾಜ್ಯ ಸರ್ಕಾರ ಹಲವು ರೀತಿಯಲ್ಲಿ ಪ್ರಯತ್ನ ಮಾಡುತ್ತಿದೆ. ಅದೇ ರೀತಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಜನರಿಗೆ ಅನುಕೂಲವಾಗಿವಂತೆ ಸಹ ಮಾಡಿ ಕೊಟ್ಟಿದೆ. ಅದರಂತೆಯೇ ಈಗ ಸರಿಯಾದ ಮನೆ ಇಲ್ಲದೆಯೇ ಚಿಕ್ಕ ಪುಟ್ಟ ಗುಡಿಸಲು ಕಟ್ಟಿಕೊಂಡು ಜೀವನ ನಡೆಸುತ್ತಿರುವವರಿಗೆ ಮೂಲಭೂತ ಸೌಕರ್ಯ ಸಿಗಬೇಕು ಎಂಬ ಉದ್ದೇಶದಿಂದ ಆಶ್ರಯ ಯೋಜನೆಯಲ್ಲಿ ನಿವೇಶನಗಳನ್ನು ನೀಡಲು ಸರಕಾರ ಒಂದು ಯೋಜನೆಯನ್ನು ಸಹ ರೂಪಿಸಿಕೊಂಡಿದೆ. ಹೌದು ಅದೇನೆಂದರೆ ಬೆಂಗಳೂರಿನ ಗ್ರಾಮಾಂತರ ಪ್ರದೇಶದಲ್ಲಿ 527 ಎಕರೆ ಪ್ರದೇಶವನ್ನು ಈಗಾಗಲೇ ಸರಕಾರವು ಮನೆ ಕಟ್ಟಲು ಯೋಗ್ಯವಾದ ಜಾಗವನ್ನು ನಿಗದಿ ಮಾಡಿ ಬಡವರಿಗೆ ಹಂಚಲು ನಿರ್ಧರಿಸಿದೆ. ರಾಜೀವ್‌ಗಾಂಧಿ ವಸತಿ ನಿಗಮ ಮಂಡಳಿ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಆಹ್ವಾನ ಮಾಡಿದ್ದಾರೆ. ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರ ಅಥವಾ ಬೆಂಗಳೂರು ಒನ್ ಕೇಂದ್ರಕ್ಕೆ ತೆರಳಿ ನೀವು ಅರ್ಜಿ ಆಹ್ವಾನ ಮಾಡಬಹುದು. ಅರ್ಜಿಯನ್ನು…

Read More

ನವದೆಹಲಿ: ಬಜೆಟ್‌ನಲ್ಲಿ 7 ಲಕ್ಷ ರೂ. ವೈಯಕ್ತಿಕ ಆದಾಯಕ್ಕೆ (Personal Income) ತೆರಿಗೆ ವಿನಾಯಿತಿಯನ್ನು ಘೋಷಿಸಿದ್ದ ಸರ್ಕಾರ ಈಗ ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ಮಾಡಿ ಈ ಪ್ರಸ್ತಾಪವನ್ನು ಅಧಿಕೃತವಾಗಿ ಜಾರಿ ಮಾಡಿದೆ. ಈ ಸಂಬಂಧ ಹಣಕಾಸು ಸಚಿವಾಲಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದೆ. ಆದಾಯ ತೆರಿಗೆ ಕಾಯ್ದೆ (Income Tax Act) 2023 ಸೆಕ್ಷನ್‌ 87ಕ್ಕೆ ತಿದ್ದುಪಡಿ ಮಾಡಿ ವಾರ್ಷಿಕ ಬಜೆಟ್​ನಲ್ಲಿ ಪ್ರಕಟಿಸಿದ ಘೋಷಣೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿಸಿದೆ.  https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಆದಾಯ 7 ಲಕ್ಷ ರೂಪಾಯಿಯ ತನಕ ಇದ್ದಲ್ಲಿ ಇನ್ನು ಮುಂದೆ ಆದಾಯ ತೆರಿಗೆ ಸಲ್ಲಿಸುವಾಗ ಕಟ್ಟಿರುವ ತೆರಿಗೆಯನ್ನು ರಿಬೇಟ್​ ಅಥವಾ ವಾಪಸ್​ ಪಡೆದುಕೊಳ್ಳುವ ಅವಕಾಶ ಲಭ್ಯವಿರುತ್ತದೆ. ಈ ಹಿಂದೆ 5 ಲಕ್ಷ ರೂ. ತನಕ ಆದಾಯ ಇದ್ದವರಿಗೆ ಈ ವಿನಾಯಿತಿ ನೀಡಲಾಗುತ್ತಿತ್ತು. 2023ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಈ ಅವಕಾಶವನ್ನು 7 ಲಕ್ಷ ರೂ. ಆದಾಯ ಇರುವವರಿಗೂ ವಿಸ್ತರಿಸಿದ್ದರು.

Read More

 ಕಿರುತೆರೆಯಲ್ಲಿ ಮೋಡಿ ಮಾಡಿದ್ದ ನಟಿ ಕಾವ್ಯಾ ಗೌಡ (Kavya Gowda) ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಸೀಮಂತ ಶಾಸ್ತ್ರದ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿದೆ. ಕಾವ್ಯಾ ಗೌಡ ಸೀಮಂತ ಕಾರ್ಯಕ್ರಮ ಬೆಂಗಳೂರಿನಲ್ಲಿ ಗ್ರ್ಯಾಂಡ್ ಆಗಿ ನಡೆದಿದೆ. ಕಾರ್ಯಕ್ರಮದಲ್ಲಿ ಲೈಟ್ ಬಣ್ಣದ ಸೀರೆಯಲ್ಲಿ ನಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಆಪ್ತರು, ಕುಟುಂಬಸ್ಥರ ಸಮ್ಮುಖದಲ್ಲಿ‌ ಸೀಮಂತ ಕಾರ್ಯಕ್ರಮ ನಡೆದಿದೆ. 2021ರಲ್ಲಿ ಉದ್ಯಮಿ ಸೋಮಶೇಖರ್ ಜೊತೆ ಕಾವ್ಯಾ ಮದುವೆಯಾಗಿದ್ದಾರೆ.  ಗುರುಹಿರಿಯರು ಸಮ್ಮತಿಸಿದ ಮದುವೆಗೆ ಕಾವ್ಯಾ ಗ್ರೀನ್ ಸಿಗ್ನಲ್ ನೀಡಿದ್ದರು. ಕಳೆದ ವರ್ಷ ಹೊಸ ಮನೆ ಕಟ್ಟಿ ಗೃಹಪ್ರವೇಶ ಕೂಡ ಅದ್ದೂರಿಯಾಗಿ ಮಾಡಿದ್ದರು. ಹೊಸ ಮನೆಗೆ ಕಾಲಿಟ್ಟ ಸಂಭ್ರಮದ ಬೆನ್ನಲ್ಲೇ ಈಗ ಹೊಸ ಅತಿಥಿ ಆಗಮನವಾಗುತ್ತಿರೋ ಖುಷಿಯಲ್ಲಿದ್ದಾರೆ.

Read More

ತುಮಕೂರು: ಅಯೋಧ್ಯೆಯ ರಾಮಲಲ್ಲಾನ ಬಗ್ಗೆ ನನಗೆ ಏನೂ ಅನಿಸಲೇ ಇಲ್ಲ ಎಂದು ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಸಚಿವ ಕೆಎನ್ ರಾಜಣ್ಣ ಅಯೋಧ್ಯೆ  ರಾಮಲಲ್ಲಾ ಬಗ್ಗೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಹೌದು ತುಮಕೂರಿನಲ್ಲಿ ನಡೆದ ಹಿಂದುಳಿದ ವರ್ಗಗಳ ಒಕ್ಕೂಟದ ಸಮಾರಂಭದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಕೆಡವಿದ್ದ ನಂತರ ಅಲ್ಲಿಗೆ ಹೋಗಿದ್ದೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಗುಡಿಯೊಂದರಲ್ಲಿ ಎರಡು ಗೊಂಬೆಗಳನ್ನಿಟ್ಟು ರಾಮ ರಾಮ ಎನ್ನುತ್ತಿದ್ದರು. ನಮ್ಮೂರಿನ ದೇವಸ್ಥಾನಗಳಿಗೆ ಹೋದಾಗ ಸಿಗುವ ಭಕ್ತಿಯ ಮತ್ತು ಧನಾತ್ಮಕ ಅನುಭೂತಿ ಅಲ್ಲಿರಲಿಲ್ಲ. ಅಯೋಧ್ಯೆಯ ರಾಮಲಲ್ಲಾನ ಬಗ್ಗೆ ನನಗೆ ಏನೂ ಅನಿಸಲೇ ಇಲ್ಲ ಎಂದು ಹೇಳಿದ್ದಾರೆ. ನಮ್ಮಲ್ಲಿ ಸಾವಿರಾರು ವರ್ಷಗಳ ಇತಿಹಾಸವಿರುವ ಅನೇಕ ರಾಮ ದೇಗುಲಗಳಿವೆ. ಆದರೆ, ಬಿಜೆಪಿ ಚುನಾವಣೆಗಾಗಿ ದೇಗುಲ ಕಟ್ಟುತ್ತಿದೆ. ಬಿಜೆಪಿ ಜನರನ್ನು ಮೋಸ ಮಾಡುತ್ತಿದೆ ಎಂದು ರಾಜಣ್ಣ ಟೀಕಿಸಿದ್ದಾರೆ. ರಾಜಣ್ಣ ಹೇಳಿಕೆಗೆ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ.

Read More

ಬೆಂಗಳೂರು: ನಗರದಲ್ಲಿ  ಪುಂಡರ ಹಾವಳಿ ಮುಂದುವರೆದಿದ್ದು KSRTC ಬಸ್ ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದಾರೆ. ಎರಡು KSRTC ಬಸ್ ಗಳ ಗ್ಲಾಸ್ ಗಳು ಪೀಸ್ ಪೀಸ್ ಮಾಡಿರುವ ಘಟನೆ  ನಗರದ ಮೆಜೆಸ್ಟಿಕ್ ನಲ್ಲಿ ಮಧ್ಯರಾತ್ರಿ ನಡೆದಿದೆ. ಬೆಂಗಳೂರು – ಮೈಸೂರು ಮಾರ್ಗದ ಬಸ್ ಗಳಿಗೆ ದೊಣ್ಣೆಯಿಂದ ಗ್ಲಾಸ್ ಹೊಡೆದ ಆರೋಪವಾಗಿದ್ದು ಆಟೋದಲ್ಲಿ ಬಂದು ಬಸ್ ಅಡ್ಡಗಟ್ಟಿ ಧಾಂಧಲೆ ನಡೆಸಿದ ಕಿಡಿಗೇಡಿಗಳು ಹಾಗೆ ಬಸ್ ಅಡ್ಡಗಟ್ಟಿ ಬಸ್ ನ ಗ್ಲಾಸ್ ಗಳನ್ನ ದೊಣ್ಣೆಗಳಿಂದ ಹೊಡೆದ ಪುಂಡರನ್ನು ಕಾಟನ್‌ ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಸ್ ಗಳಿಗೆ ಮಾತ್ರ ಕಲ್ಲು ಹೊಡೆದಿಲ್ಲ ಎರಡು ಕಾರು, ಆಟೋಗಳ ಗ್ಲಾಸ್ ಗಳನ್ನು ಹೊಡೆದಿದ್ದು ಹಾಗೆ  ಕುಡಿದ ನಶೆಯಲ್ಲಿ ಕಂಡ ಕಂಡ ವಾಹನಗಳ‌ ಗ್ಲಾಸ್ ಗಳನ್ನ ಹೊಡೆದು ಅಟ್ಟಹಾಸ ಮೆರೆದಿದ್ದಾರೆ ಆಟೋದಲ್ಲಿದ್ದ ಐವರು ಗ್ಯಾಂಗ್, ರಾಡ್ ಗಳನ್ನ ಇಟ್ಕೊಂಡಿದ್ರು ಅಂತ ಬಸ್ ಚಾಲಕರ ಆರೋಪ ಮಾಡಿದ್ದು  ವಿಜಯನಗರ, ಮೈಸೂರು ಡಿಪೋ ಹುಣಸೂರು ಮೈಸೂರು ಡಿಪೋ ಗೆ ಸೇರಿದ ಬಸ್…

Read More

ಹಾಸನ: ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಹೇಳಿದ್ದಾರೆ. ಚುನಾವಣೆಗೂ ಮೊದಲು 5 ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಅವುಗಳನ್ನು ಜಾರಿಗೊಳಿಸಲಾಗಿದೆ. ಬಡವರು, ಶೋಷತರಿಗಾಗಿ ಕೆಲಸ ಮಾಡುವ ಹಂಬಲ ಕಾಂಗ್ರೆಸ್​ಗೆ ಇದೆ. ಹಾಗಾಗಿ ನೀವೆಲ್ಲರೂ ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಬೇಕು ಎಂದು ಯತೀಂದ್ರ ಕರೆ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ನೈತಿಕವಾಗಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಬೆಂಬಲ ಸಿಗಲಿದೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿ ಖರ್ಚು ಆಗುತ್ತದೆ. ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣವನ್ನು ಖರ್ಚು ಮಾಡಿಲ್ಲ. ಇಷ್ಟೊಂದು ಹಣ…

Read More

ಕಾಟೇರ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. 18 ದಿನಗಳಲ್ಲಿ 190 ಕೋಟಿಗೂ ಹೆಚ್ಚು ಕಲೆಕ್ಷನ್ ಗಳಿಸಿ (Gross collection) 200 ಕೋಟಿ ಕಲೆಕ್ಷನ್ ನತ್ತ ಯಶಸ್ವಿಯಾಗಿ ಸಾಗುತ್ತಿದೆ ಎಂದು ದರ್ಶನ್ ಅವರ ಫ್ಯಾನ್ಸ್ ಪೋಸ್ಟರ್ ಹಂಚಿಕೊಂಡಿದ್ದಾರೆ. ಈ ವಾರದಲ್ಲೇ 200 ಕೋಟಿ ರೂಪಾ ಕ್ಲಬ್ ಸೇರೋದು ಗ್ಯಾರಂಟಿ ಎನ್ನುವ ಲೆಕ್ಕಾಚಾರ ಶುರುವಾಗಿದೆ. ಈ ನಡುವೆ ಸುದೀಪ್ ಮತ್ತೊಂದು ಸಂಭ್ರಮದ ಸುದ್ದಿ ಕೊಟ್ಟಿದ್ದಾರೆ. ಕೆಲವು ದಿನಗಳಿಂದ ಕಾಟೇರ (Katera) ಸಿನಿಮಾವನ್ನು ಕಿಚ್ಚ ಸುದೀಪ್ (Sudeep) ನೋಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಜೊತೆ ಸುದೀಪ್ ಮಾತನಾಡಿ, ಅತೀ ಶೀಘ್ರದಲ್ಲೇ ಸಿನಿಮಾ ನೋಡುತ್ತೇನೆ ಎಂದು ಹೇಳಿದ್ದಾಗಿ ವರದಿ ಆಗಿತ್ತು. ಅದೀಗ ನಿಜವಾಗಿದೆ. ಸುದೀಪ್ ಕಾಟೇರ ಸಿನಿಮಾವನ್ನು ವೀಕ್ಷಿಸಿದ್ದಾರೆ. ಈ ಮಾಹಿತಿಯನ್ನು ಸ್ವತಃ ಸುದೀಪ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ಒಂದು ಕಡೆ ಸೆಲೆಬ್ರಿಟಗಳು ಸಿನಿಮಾವನ್ನು ಮೆಚ್ಚಿಕೊಳ್ಳುತ್ತಿದ್ದರೆ, ಮತ್ತೊಂದು ಕಡೆ ಕಾಟೇರ ಸಿನಿಮಾ ರಿಲೀಸ್ ಗಳಿಕೆಯೂ…

Read More

ಬೆಂಗಳೂರು: ರಾಮ ಮಂದಿರ ಉದ್ಘಾಟನೆಗೂ ಮುನ್ನವೇ ಪ್ರಧಾನಿ ಮೋದಿ ಕರ್ನಾಟಕಕ್ಕೆ ಬರ್ತಿದ್ದಾರೆ, BIETCಗೆ ಬರ್ತಿರೋ ನಮೋ ಚಾಮರಾಜನಗರಕ್ಕೂ ಭೇಟಿ ನೀಡುವ ಸಾಧ್ಯತೆ ಇದೆ. ರಾಜ್ಯ ಬಿಜೆಪಿ ನಾಯಕರಲ್ಲಿ ಲೋಕಸಭಾ ರಣೋತ್ಸಾಹ ಬಂದಿದ್ದು ಹೊಸ ಹುರುಪಿನಲ್ಲಿದ್ದಾರೆ, ಬೆಂಗಳೂರಿನಲ್ಲಿ ನಮೋ ಬೃಹತ್ ರೋಡ್ ಶೋಗೆ ಕೇಸರಿ ನಾಯಕರು ಪ್ಲಾನ್ ಮಾಡ್ತಿದ್ದು ಲೋಕಸಮರಕ್ಕೆ ರಣಕಹಳೆ ಮೊಳಗಿಸಲು ಸಜ್ಜಾಗ್ತಿದ್ದಾರೆ ಕಮಲನಾಯಕರು. ಜನವರಿ 19 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಇಲ್ಲಿದೆ ಅವರ ವೇಳಾಪಟ್ಟಿ ವಿವರ! ಬೆಳಗ್ಗೆ 9.35ಕ್ಕೆ ದೆಹಲಿಯಿಂದ ಕಲ್ಬುರ್ಗಿ ಏರ್ ಪೋರ್ಟ್ ಗೆ ಆಗಮನ 9.40 ಕ್ಕೆ ಕಲ್ಬುರ್ಗಿಯಿಂದ ಹೆಲಿಕಾಫ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಪ್ರಯಾಣ ಮಧ್ಯಾಹ್ನ 12.10ಕ್ಕೆ ಹೆಲಿಕಾಫ್ಟರ್ ಮೂಲಕ ಸೊಲ್ಲಾಪುರದಿಂದ ನಿರ್ಗಮನ ಮಧ್ಯಾಹ್ನ 1 ಗಂಟೆಗೆ ಕಲ್ಬುರ್ಗಿ ಏರ್ ಪೋರ್ಟ್ ಗೆ ಆಗಮನ 1.05 ಕ್ಕೆ ವಿಶೇಷ ವಿಮಾನದ ಮೂಲಕ ಕಲ್ಬುರ್ಗಿಯಿಂದ ಬೆಂಗಳೂರಿಗೆ ಪ್ರಯಾಣ ಮಧ್ಯಾಹ್ನ 2.10 ಕ್ಕೆ ಬೆಂಗಳೂರು ಕೆಂಪೇಗೌಡ ಏರ್ ಪೋರ್ಟ್ ಗೆ ಆಗಮನ 2.15 ಕ್ಕೆ…

Read More