Author: AIN Author

ಇಲಿಗಳಿಂದ ಹರಡುವ ರೋಗಗಳು ಮನುಷ್ಯರಿಗೂ ಹರಡುತ್ತವೆ. ಇವು ಕೆಲವೊಮ್ಮೆ ಮಾರಕವಾಗಬಹುದು. ಇಲಿಗಳಿಂದ ಹರಡುವ ಕೆಲವು ರೋಗಗಳು ಶೀತ, ಕೆಮ್ಮು ಮತ್ತು ಕಾಮಾಲೆಯಂತಹ ಆರಂಭಿಕ ಲಕ್ಷಣಗಳನ್ನು ತೋರಿಸುತ್ತವೆ. ಆದ್ದರಿಂದ, ಈ ಕಾಯಿಲೆಗಳನ್ನು ಸಾಮಾನ್ಯವಾಗಿ ಶೀತ ಅಥವಾ ಜ್ವರ ಎಂದು ತಪ್ಪಾಗಿ ಗ್ರಹಿಸಲಾಗುತ್ತದೆ. ಆದಾಗ್ಯೂ, ಈ ರೋಗಗಳನ್ನು ನಿರ್ಲಕ್ಷಿಸುವುದು ಮಾರಕವಾಗಬಹುದು. ಕೆಲವು ಸಂದರ್ಭಗಳಲ್ಲಿ ಇದು ಸಾವಿಗೆ ಕಾರಣವಾಗಬಹುದು. ಇಲಿಗಳಿಂದ ಲೆಪ್ಟೊಸ್ಪಿರೋಸಿಸ್: ಲೆಪ್ಟೊಸ್ಪಿರೋಸಿಸ್ ಬ್ಯಾಕ್ಟೀರಿಯಾದ ಸೋಂಕು. ಇದು ಇಲಿ ಮೂತ್ರದ ಸಂಪರ್ಕದ ಮೂಲಕ ಹರಡುತ್ತದೆ. ಈ ಸೋಂಕು ಜ್ವರ, ತಲೆನೋವು, ಸ್ನಾಯು ನೋವು, ಆಯಾಸ, ವಾಂತಿ ಮುಂತಾದ ಲಕ್ಷಣಗಳನ್ನು ಉಂಟುಮಾಡುತ್ತದೆ. ತೀವ್ರತರವಾದ ಪ್ರಕರಣಗಳಲ್ಲಿ ಇದು ಮೂತ್ರಪಿಂಡ ವೈಫಲ್ಯ ಅಥವಾ ಸಾವಿಗೆ ಕಾರಣವಾಗಬಹುದು. ಇಲಿಗಳಿಂದ ಪ್ಲೇಗ್: ಪ್ಲೇಗ್ ಎಂಬುದು ಇಲಿ ಕಡಿತದಿಂದ ಹರಡುವ ಬ್ಯಾಕ್ಟೀರಿಯಾದ ಸೋಂಕು. ಈ ಸೋಂಕು ಜ್ವರ, ಆಯಾಸ, ದದ್ದುಗಳಂತಹ ಲಕ್ಷಣಗಳನ್ನು ಉಂಟುಮಾಡುತ್ತದೆ. ತೀವ್ರತರವಾದ ಪ್ರಕರಣಗಳಲ್ಲಿ ಇದು ಸಾವಿಗೆ ಸಹ ಕಾರಣವಾಗಬಹುದು. ಇಲಿಗಳಿಂದ ಕ್ಷಯರೋಗ: ಕ್ಷಯವು ಶ್ವಾಸಕೋಶದ ಮೇಲೆ ಪರಿಣಾಮ ಬೀರುವ ಸಾಂಕ್ರಾಮಿಕ ರೋಗವಾಗಿದೆ.…

Read More

ರಾಯಚೂರು:- ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ ಪಾವತಿಯಾಗುತ್ತದೆ. ಈ ಹಿಂದೆ ಬರ ಪರಿಹಾರ, ಅತೀವೃಷ್ಟಿ ಪರಿಹಾರ ನೀಡುವಲ್ಲಿ ಸಾಕಷ್ಟು ನ್ಯೂನ್ಯತೆಗಳಿದ್ದವು. ಎಷ್ಟೋ ಜನ ಬೆಳೆಯನ್ನೇ ಇಡದಿದ್ದರೂ ಅವರಿಗೂ ಪರಿಹಾರ ಸಿಗುತ್ತಿತ್ತು. ಬೆಳೆ ಹಾನಿಯಾದವರಿಗೆ ಪರಿಹಾರ ಸಿಗುತ್ತಿರಲಿಲ್ಲ ಎಂದರು. ಹಿಂದಿನ ಸರ್ಕಾರ ಇದ್ದಾಗ, ನಾನು ಕೃಷಿ ಸಚಿವನಿದ್ದಾಗಲೂ ನೋಡಿದ್ದೇನೆ. ಯಾರದ್ದೋ ಜಮೀನು ಮತ್ತೊಬ್ಬರಿಗೆ ಹಣ ಪಾವತಿಯಾಗಿತ್ತಿತ್ತು. ರೈತರ ಬೆಳೆಯೇ ಬೇರೆ ಪರಿಹಾರ ಬರುವುದೇ ಬೇರೆ ಬೆಳೆಗೆ. ಅಧಿಕಾರಿಗಳು ಮಾಹಿತಿ ಸೇರಿಸುವಾಗ ತಪ್ಪುಗಳಾಗುತ್ತಿದ್ದವು. ಇದೆಲ್ಲಾ ಸರಿಮಾಡಿ ಬೆಳೆಸಮೀಕ್ಷೆ ಆಧಾರದಲ್ಲಿ ಹಣ ಪಾವತಿಯಾಗುತ್ತದೆ ಎಂದರು. ವ್ಯವಸ್ಥೆ ಸರಿಪಡಿಸಲು ಎರಡು ತಿಂಗಳು ತಡವಾಗಿದೆ. ಒಂದು ವಾರದಲ್ಲಿ ಮೊದಲ ಕಂತಿನ ಹಣ ಬರುತ್ತದೆ. 12 ಲಕ್ಷ ಜನರಿಗೆ ಆರ್‌ಬಿಐಗೆ ಪೇಮೆಂಟ್ ಆರ್ಡರ್ ಕಳುಹಿಸಿದ್ದೇವೆ. ಇನ್ನೂ 20…

Read More

ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯುವ ರಾಮಲಲ್ಲಾನ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗೆ ಆಹ್ವಾನಿಸಲಾಗಿದೆ. ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಅವರನ್ನು ಆಹ್ವಾನಿಸಿರುವ ಫೋಟೋಗಳನ್ನು ಕೊಹ್ಲಿ ಅವರ ಅಭಿಮಾನಿಗಳು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಇದೇ ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ (ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭ) ವಿಶ್ವದಾದ್ಯಂತ ಗಣ್ಯರು ಭಾಗವಹಿಸಲಿದ್ದಾರೆ. ದಕ್ಷಿಣ ಭಾರತದ ಕೆಲವು ಕ್ರೀಡಾಪಟುಗಳಿಗೆ ಮಾತ್ರ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ. ಕ್ರಿಕೆಟ್ ದಿಗ್ಗಜರ ಸಮಾಗಮ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್, ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೂ ಈಗಾಗಲೇ ಐತಿಹಾಸಿಕ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಕಿಂಗ್ ಕೊಹ್ಲಿ ಸಹ ರಾಮಮಂದಿರದ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದು, ಈ ಸಮಾರಂಭ ಕ್ರಿಕೆಟ್ ದಿಗ್ಗಜರು ಸಮಾಗಮಕ್ಕೆ ಸಾಕ್ಷಿಯಾಗಲಿದೆ.

Read More

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವ್ಯವಸ್ಥಿತವಾಗಿ ಜಾರಿಗೆ ತಂದು ಕಠಿಣಗೊಳಿಸಬೇಕಂತ ರಾಜ್ಯ ಸರ್ಕಾರ ಮುಂದಾಗಿದೆ.. ಸರ್ಕಾರ ಬಂದು 8 ತಿಂಗಳ ಬಳಿಕ ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ವಾರ್ಷಿಕ ಸಮಾವೇಶ ಸಭೆ ನಡೆಸಿದ್ರು.. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಠಿಣ ಕ್ರಮ ಜಾರಿಗೊಳಿಸೋದರ ಜೊತೆಗೆ ಪೊಲೀಸರಿಗೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಿ ಖಡಕ್ ಸೂಚನೆಯನ್ನ ರವಾನಿಸಿದ್ರು ಸಿಎಂ.. ಹಾಗಾದ್ರೆ ಇವತ್ತಿನ ಪೊಲಿಸ್ ಹಿರಿಯ ಅಧಿಕಾರಿಗಳೊಂದಿಗೆ ಯಾವೆಲ್ಲಾ ವಿಚಾರಗಳನ್ನ ಚರ್ಚೆ ಮಾಡಲಾಯ್ತು .. ಅಧಿಕಾರಿಗಳಿಗೆ ಕೊಟ್ಟ ಖಡಕ್ ಸೂಚನೆ ಏನು ಅಂತೀರಾ ಈ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್ ಎಸ್… ರಾಜ್ಯದಲ್ಲಿ ಇತ್ತೀಚಿಗೆ ನಡೆದ ಘಟನೆಗಳು ಸೇರಿದಂತೆ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಸ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿಚ ಪರಮೇಶ್ವರ್ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಯ್ತು..ನೃಪತುಂಗ ರಸ್ತೆ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಡಿಜಿಪಿ, ಎಡಿಜಿಪಿಗಳು, ಐಜಿಗಳು, ಡಿಐಜಿಗಳು,…

Read More

ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಮುಂಡೂರು ಎಂಬಲ್ಲಿ ರಾಮಮಂದಿರ ಮಂತ್ರಾಕ್ಷತೆ ವಿತರಣಾ ಸಂಚಾಲಕನ ಮೇಲೆ ಹಲ್ಲೆ ನಡೆದಿದೆ ಸಂತೋಷ್ ಮೇಲೆ ಸ್ಥಳೀಯ ನಿವಾಸಿ ಧನಂಜಯ್ ಮತ್ತು ಆತನ ಸಹಚರರು ಹಲ್ಲೆ ಮಾಡಿದ್ದಾರೆ ಆರೋಪಿಸಲಾಗಿದೆ. ಗಲಾಟೆ ತಡೆಯಲು ಬಂದ ಸಂತೋಷ್ ತಾಯಿ ಮೇಲೂ ಸಹ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಸಂತೋಷ್ ಅವರು ಮನೆ ಮನೆಗೆ ಅಕ್ಷತೆ ಹಂಚುವುದಕ್ಕೆ ಒಂದು ಗುಂಪು ವಿರೋಧವ್ಯಕ್ತಪಡಿಸಿತ್ತು. ಇದೇ ದ್ವೇಷದಿಂದ ಸಂತೋಷ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಧಾರವಾಡ- ಅಯೋಧ್ಯ ಪ್ರಭ ಶ್ರೀರಾಮನ ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾನಕ್ಕೆ ದಿನಗಳು ಸಮೀಪಿಸುತ್ತಿದ್ದು, ರಾಮ ಭಕ್ತರು ವಿವಿಧ ಕಡೆಗಳಿಂದ ತೆರಳುತ್ತಿದ್ದು, ಅದೇ ರೀತಿ ಧಾರವಾಡ ಹುಬ್ಬಳ್ಳಿಯ ಯುವಕರು ಈಗ ಬೈಕ್ ಮೂಲಕ‌ ಅಯೋಧ್ಯಗೆ ಇಂದು ತೆರಳಿದರು. ಇದೇ ಜನವರಿ 22 ರಂದು ನಡೆಯಲಿರೋ ಅಯೋಧ್ಯ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾನ ಕಾರ್ಯಕ್ರಮಕ್ಕೆ ಪಾಲ್ಗೊಳ್ಳುವ ಉದ್ದೇಶದಿಂದ ಧಾರವಾಡ ಹುಬ್ಬಳ್ಳಿಯ ನಾಲ್ವರು ಯುವಕರು ಬೈಕ ಮೂಲಕ‌ ಪ್ರಾಯಣ ಬೆಳಿಸಿದರು.‌ ಒಂದು ರಾಯಲ್ಡ ಎನಿಪೀಲ್ಡ್, ಮತ್ತೊಂದು ಬೆನಾಲಿ ಬೈಕ್ ಮೂಲಕ‌ ದರ್ಶನ್ ಪವಾರ, ದರ್ಶನ್ ಭಾವೆ, ಬಾಲರಾಜ ದೊಡಮನಿ, ಲಕ್ಷ್ಮಣ ಹಂಚಿನಮನಿ ಯುವಕರು ತೆರಳುತ್ತಿದ್ದು, 2000 ಸಾವಿರ ಕಿಲೋಮೀಟರ್ ಬೈಕ್ ಪ್ರಯಾಣಕ್ಕೆ ಸಾರ್ವಜನಿಕರು ಜೈ ಶ್ರೀರಾಮ‌ಘೋಷಣೆ ಕೂಗುವ ಮೂಲಕ‌ ಬೀಳ್ಕೊಟ್ಟರು.‌ ಇನ್ನೂ ನಾಲ್ವರು ಯುವಕರು ನಾಲ್ಕು ದಿನದಲ್ಲಿ ಅಯೋಧ್ಯ ತಲುಪುವ ಯೋಜನೆ ಹೊಂದಿದ್ದು, ಇಂದು ಧಾರವಾಡದಿಂದ ತಮ್ಮ ಪ್ರಯಾಣ ಆರಂಭಿಸಿದರು‌.‌ ಈ ಸಂದರ್ಭದಲ್ಲಿ ಸಾರ್ವಜನಿಕರು ಸೇರಿದಂತೆ ಸ್ನೇಹಿತರು ಯುವಕರಿಗೆ ಆಲ್ದ ಬೇಸ್ಟ್ ಹೇಳಿ ಶುಭ ಹಾರೈಸಿದರು.‌

Read More

ಗದಗ: ಲೋಕಸಭಾ ಚುನಾವಣೆ ಹತ್ತಿರವಾಗ್ತಿದ್ದಂತೆ ಟಿಕೇಟ್ ಆಕಾಂಕ್ಷಿಗಳು ಸಹ ಇದೀಗ ಫುಲ್ ಆ್ಯಕ್ಟಿವ್ ಆಗಿದ್ದು ತಮಗೇ ಟಿಕೆಟ್ ನೀಡುವಂತೆ ವರಿಷ್ಠರ ಗಮನ ಸೆಳೀತಿದ್ದಾರೆ. ಗದಗ ನಗರದ ಪತ್ರಿಕಾ ಭವನದಲ್ಲಿ ಹಾವೇರಿ-ಗದಗ ಲೋಕಸಭಾ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಆರ್ ಎಂ ಕುಬೇರಪ್ಪ ಸುದ್ದಿಗೋಷ್ಠಿ ನಡೆಸಿ ನಾನು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಭಲ ಆಕಾಂಕ್ಷಿಯಾಗಿದ್ದೇನೆ. ಎರಡು ತಿಂಗಳಿನಿಂದ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನಾಯಕರಿಗೆ ಭೇಟಿ ಮಾಡಿ ನನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದ್ದೇನೆ. 8ತಾಲೂಕಿನ ಶಾಸಕರಿಗೆ ವಯಕ್ತಿಕವಾಗಿ ಭೇಟಿ ಮಾಡಿ ಬೆಂಬಲಿಸುವಂತೆ ಮನವಿ ಮಾಡಿದ್ದೇನೆ. ಜಿ. ಪಂ, ತಾ. ಪಂ, ಗ್ರಾಂ. ಪಂ, ಬ್ಲಾಕ್ ಕಾಂಗ್ರೆಸ್ ಸದಸ್ಯರಿಗೆ ಸುಮಾರು 10ಸಾವಿರ ಪತ್ರಗಳನ್ನು ಬರೆದಿದ್ದೇನೆ. ಜೊತೆಗೆ ಎಐಸಿಸಿ ಮುಖಂಡರಿಗೂ ಟಿಕೆಟ್ ನೀಡುವಂತೆ ಮನವಿ ಸಲ್ಲಿಸಿದ್ದೇನೆ ಅಂದ್ರು.

Read More

ಬೆಂಗಳೂರು: ಬಿಎಂಟಿಸಿ, ಕಿಲ್ಲರ್‌ ಬಿಎಂಟಿಸಿ ಎಂಬೆಲ್ಲಾ ಹಣೆಪಟ್ಟಿ ಕಟ್ಟಿಕೊಳ್ಳುತ್ತಿದೆ. ಆದರೆ ಬಿಎಂಟಿಸಿ ಪ್ರಕಾರ ಸಂಸ್ಥೆಯ ಚಾಲಕರ ನಿರ್ಲಕ್ಷ್ಯ ಮಾತ್ರವೇ ಇದಕ್ಕೆಲ್ಲ ಕಾರಣ ಅಲ್ಲವಂತೆ. ಹಾಗಾದ್ರೆ ಆಗ್ತಿರೋ ಅಪಘಾತ ಪ್ರಕರಣಗಳಲ್ಲಿ ಬಿಎಂಟಿಸಿ ಪಾತ್ರ ಏನು..? ಬೈಕ್ ಸವಾರರು ಯಾಕೆ ಕಾರಣ? ಅವರ ಸಬೂಬು ಏನು ಅಂತೀರಾ..? ಈ ಸ್ಟೋರಿ ನೋಡಿ.. ಇತ್ತೀಚೆಗೆ ಮೇಲಿಂದ ಮೇಲೆ ವರದಿಯಾಗುತ್ತಿರುವ ಬಿಎಂಟಿಸಿ ಬಸ್‌ಗಳ ಅಪಘಾತಗಳು ಸಂಸ್ಥೆಯನ್ನ ಮುಜುಗರಕ್ಕೀಡು ಮಾಡಿದೆ. ಬಿಎಂಟಿಸಿ ಬಸ್‌‌ ಅಪಘಾತಗಳಲ್ಲಿ ಪ್ರಯಾಣಿಕರು ಸಾವನ್ನಪ್ಪುತ್ತಿದ್ದು, ಇದಕ್ಕೆ ಚಾಲಕರ ನಿರ್ಲಕ್ಷ್ಯದ ಚಾಲನೆಯೇ ಕಾರಣ, ಕಿಲ್ಲರ್‌‌‌ ಬಿಎಂಟಿಸಿ ಅಂತಾ ಆಕ್ರೋಶವೂ ವ್ಯಕ್ತವಾಗಿದೆ.‌ಆದರೆ ಬಿಎಂಟಿಸಿ ಇದು ನಮ್ಮ‌ ತಪ್ಪಲ್ಲ ಬೈಕ್ ಸವಾರರ ರ್ಯಾಷ್‌ ಡ್ರೈವಿಂಗ್‌ ಕಾರಣ ಅಂತ ಸಿಸಿಟಿವಿ ರಿಲೀಸ್ ಮಾಡಿ ಸಾಕ್ಷಿ ಸಮೇತ ವಾದ‌ ಮಾಡ್ತಿದೆ..ಅವುಗಳನ್ನ ಒಂದೊಂದಾಗಿ ತೊರಿಸ್ತಿವಿ ನೋಡಿ.. https://ainlivenews.com/we-have-no-objection-if-priyanka-gandhi-contests-from-koppal-raghavendra-hitnal/ ಸಾಕ್ಷಿ 1 ದಿನಾಂಕ: 5 ಜನವರಿ 2024 ಸ್ಥಳ: ಮರತ್ತಹಳ್ಳಿ ಬ್ರಿಡ್ಜ್ ಏಕಾಏಕಿ ಬಿದ್ದ ಬೈಕ್ ಸವಾರ..ಚಾಲಕನ ಮೇಲೆ‌ ಹರಿದ ಬಿಎಂಟಿಸಿ ಬಸ್ —– GFX…

Read More

ಬೆಂಗಳೂರು: ಕೊಪ್ಪಳ  ಲೋಕಸಭಾ ಕ್ಷೇತ್ರದಿಂದ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿಯವರು  ಸ್ಪರ್ಧೆ ಮಾಡಿದರೆ ನಮ್ಮದೇನು ಅಭ್ಯಂತರವಿಲ್ಲ, ನಾವು ಸ್ವಾಗತಿಸುತ್ತೇವೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್  ಹೇಳಿದ್ದಾರೆ. ಪ್ರಿಯಾಂಕಾ ಗಾಂಧಿಯವರು ಕೊಪ್ಪಳದಿಂದ ಸ್ಪರ್ಧೆ ಮಾಡುವ ಸುದ್ದಿ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕಾ ಗಾಂಧಿಯವರು ಕೊಪ್ಪಳಕ್ಕೆ ಬರುವುದಾದರೆ ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸುತ್ತೇವೆ. ಇಲ್ಲಿಂದ ಅವರು ಸ್ಪರ್ಧಿಸಿದರೆ ಹೆಚ್ಚು ಅಂತರದಿಂದ ಗೆಲ್ಲಿಸುತ್ತೇವೆ ಎಂದಿದ್ದಾರೆ. ಸಹೋದರ ಹಾಗೂ ಕಳೆದ ಬಾರಿ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದ ರಾಜಶೇಖರ್ ಹಿಟ್ನಾಳ್ ಜೊತೆ ಬಂದು ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ಬಾರಿಯೂ ಸಹೋದರ ರಾಜಶೇಖರ್ ಹಿಟ್ನಾಳ್‍ಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ನನ್ನ ಸಹೋದರನಿಗೂ ಟಿಕೆಟ್ ಕೇಳಿದ್ದೇನೆ. ಈ ಬಗ್ಗೆ ಹೈಕಮಾಂಡ್ ತೀರ್ಮಾನದಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ.

Read More

ಬೆಂಗಳೂರು : ದೇಶದಲ್ಲಿ 25 ಕೋಟಿ ಜನರು ಬಡತನಮುಕ್ತರಾಗಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಅವರು, ಗರೀಬಿ ಹಠಾವೋ‌ ಎಂದಿದ್ದು ಕಾಂಗ್ರೆಸ್. ಆದರೆ, ಅದನ್ನು ಸಾಧಿಸಿ, ಬಡತನ ನಿರ್ಮೂಲನೆ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ. ಇದಲ್ಲವೇ ಅಚ್ಛೆದಿನ್? ಎಂದು ಕಾಂಗ್ರೆಸ್ಸಿಗರಿಗೆ ಟಾಂಗ್ ಕೊಟ್ಟಿದ್ದಾರೆ. ಕಳೆದ 9 ವರ್ಷದಲ್ಲಿ ಭಾರತದ ಬಡತನ ಸಂಖ್ಯೆ ಕುಸಿತ, ಇದು ನೀತಿ ಆಯೋಗದ ವರದಿ. 2013-14ರ ವೇಳೆಗೆ ಭಾರತದಲ್ಲಿ ಶೇ.29.17 ರಷ್ಟಿದ್ದ ಬಡನತ ಸಂಖ್ಯೆ ಅನುಪಾತ 2022-23ರ ವೇಳೆ ಶೇಕಡಾ 11.28ಕ್ಕೆ ಕುಸಿತ ಕಂಡಿದೆ. 9 ವರ್ಷದಲ್ಲಿ 24.82 ಕೋಟಿ ಮಂದಿ ಬಡತನದಿಂದ ಹೊರ ಬಂದಿದ್ದಾರೆ ಎಂದು ಹೇಳಿದ್ದಾರೆ. 2013 ರಿಂದ 2023ರ ಅವಧಿಯಲ್ಲಿ ಒಟ್ಟು 24.8 ಕೋಟಿ ಭಾರತೀಯರು ಬಡತನ ರೇಖೆಯಿಂದ ಹೊರ ಬಂದಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ನೀತಿ ಆಯೋಗ ಸಿದ್ಧಪಡಿಸಿದ ಬಹು ಆಯಾಮ ಅಳತೆ ಆಧಾರದಲ್ಲಿ ನಡೆದ ಅಧ್ಯಯನದಲ್ಲಿ ಈ…

Read More