Author: AIN Author

ಬೆಂಗಳೂರು: ರಾಜ್ಯದ ಜಲಾಶಯಗಳ (Karnataka Dam) ನೀರಿನ ಮಟ್ಟ ಭಾರೀ ಕುಸಿತಗೊಂಡಿದ್ದು, ಮಳೆ (Rain) ಬಾರದೇ ಇದ್ದರೆ ಈ ಬಾರಿ ಬೇಸಿಗೆಯಲ್ಲಿ ನೀರಿಗೆ ಸಮಸ್ಯೆಯಾಗುವುದು (Water Scarcity) ಖಚಿತ. ಹೌದು ಕಳೆದ ಬಾರಿ ಹೋಲಿಕೆ ಮಾಡಿದರೆ ಜಲಾಶಯಗಳ ನೀರಿನ ಮಟ್ಟ 42% ಕುಸಿತಗೊಂಡಿದೆ. ಕಳೆದ ವರ್ಷದ ಜ.11 ರಂದು ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹಾಗೂ ಈ ವರ್ಷದ ನೀರಿನ ಮಟ್ಟದ ಹೋಲಿಕೆ ಮಾಡಿ ಕರ್ನಾಟಕ ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರದಿಂದ (KSNDMC) ದಾಖಲೆ ಬಿಡುಗಡೆ ಮಾಡಿದೆ. ಒಟ್ಟು 895 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ರಾಜ್ಯದ ಜಲಾಶಯಗಳಿಗಿದೆ. ಸದ್ಯ ಈಗ 378 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಈ ಅವಧಿಯಲ್ಲಿ ಬರೋಬ್ಬರಿ 619 ಟಿಎಂಸಿ ನೀರಿನ ಸಂಗ್ರಹವಿತ್ತು. ಕೆಲವೊಂದು ಜಲಾಶಯಗಳು 69% ರಷ್ಟು ನೀರಿನ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಿದೆ. ಕಳೆದ ವರ್ಷ ಲಿಂಗನಮಕ್ಕಿ ಜಲಾಶಯದಲ್ಲಿ 95.19 ಟಿಎಂಸಿ ನೀರಿದ್ದರೆ ಈ ಬಾರಿ 52.98 ಟಿಎಂಸಿ ನೀರು ಸಂಗ್ರಹವಾಗಿದೆ. ಕೆಎಆರ್‌ಎಸ್‌ನಲ್ಲಿ…

Read More

ಬೆಂಗಳೂರು: ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ   ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,  ಆಗಬಹುದು,ಯಾವ ಗಳಿಗೆಯಲ್ಲಿ ಆಗಬಹುದು ಇನ್ನ ಮುಂದಕ್ಕೆ ಹೋಗುವ ಸಾಧ್ಯತೆಯಿಲ್ಲ ಆಗಬಹುದು,ಆಗುತ್ತದೆ ಇಲ್ಲವಾದರೆ ಸಂಜೆ ನಿಮ್ಮ ಜೊತೆ ಮಾತನಾಡ್ತೇನೆ ಎಂದರು. ಹಾಗೆ ಇದೇ ತಿಂಗಳ 21 ರಂದು ಕಾರ್ಯಕರ್ತರ ಸಮಾವೇಶ ನಡೆಯಲಿದೆ  ಮಂಗಳೂರಿನಲ್ಲಿ ಕಾರ್ಯಕರ್ತರ ಸಮಾವೇಶ ನಡೆಯಲಿದೆ ಲೋಕಸಭೆ ಚುನಾವಣೆ ಸಂಬಂದಿಸಿದಂತೆ ಸಭೆ ಜನವರಿ 19 ರಂದು ಎಲೆಕ್ಷನ್ ಕಮಿಟಿ ಮೀಟಿಂಗ್ ಇದೆ ಅಂದು ಸಂಜೆ ಸಭೆ ನಡೆಯಲಿದೆ ಻ಲ್ಲಿ ಅಭ್ಯರ್ಥಿಗಳ ಆಯ್ಕೆ ಫೈನಲ್ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿಸಿದರು. ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿಚಾರ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಅವರ ಮುಖಂಡರೇ ಹೆಲ್ತ್ ಬಗ್ಗೆ ಅಂತ ಹೇಳ್ತಿದ್ದಾರೆ ಅವರ ಹೆಲ್ತ್ ಬಗ್ಗೆ ಅವರು ಗಮನ ಕೊಡಲಿ ಅವರ ಮುಖಂಡರೇ ಹೇಳ್ತಿರೋದು ಸಂತೋಷ ಎಂದು ಹೇಳಿದರು.

Read More

ಕಲಬುರಗಿ: ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮಕ್ಕೆ ಡಿಸಿ ಗೈರಾದ ಹಿನ್ನಲೆ ಭೋವಿ ಸಮಾಜ ತೀವ್ರ ಆಕ್ರೋಶ ಹೊರಹಾಕಿ ಕಾರ್ಯಕ್ರಮ ಬಹಿಷ್ಕರಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ನಗರದ ಪಂಡಿತ್ ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ DC ಫೌಜಿಯಾ ತರನ್ನುಮ್, ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಅನೇಕರು ಗೈರಾಗಿದ್ರು. ಮಧ್ಯಾನ 12 ಗಂಟೆಗೆ ಜಯಂತ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು ಆದರೆ 1 ಗಂಟೆಯಾದರೂ ಸಮಾರಂಭಕ್ಕೆ ಅಧಿಕಾರಿಗಳು ಬಂದಿರಲಿಲ್ಲ ಹೀಗಾಗಿ ಮಠಾಧೀಶರು ಸಮಾಜದ ಬಾಂಧವರು ಕಾರ್ಯಕ್ರಮ ಬಹಿಷ್ಕಿರಿಸಿ ದಿಡೀರ್ ಪ್ರತಿಭಟನೆ ಮಾಡಿದ್ರು.ಮಾತ್ರವಲ್ಲ ರಸ್ತೆತಡೆ ನಡೆಸಿದ್ರು. ಕೊನೆಗೆ ಶಾಸಕ ಅಲ್ಲಮ ಪ್ರಭು ಪಾಟೀಲ್ ಎಲ್ಲರ ಮನವೊಲಿಸಿ ಪ್ರತಿಭಟನೆ ಕೈ ಬಿಡುವಂತೆ ಮಾಡಿದ್ರು..

Read More

ಶಿವಮೊಗ್ಗ: ಸಿದ್ದರಾಮಯ್ಯನವರು ನಿಮಿಷಕ್ಕೊಂದು ಮಾತನಾಡ್ತಾರೆ. ನಿಮ್ಮ ಹೆಸರಿನಲ್ಲಿ ಸಿದ್ದ, ರಾಮ ಎರಡೂ ಇದೆ. ನೀವೇಕೆ ಬಿಜೆಪಿ ರಾಮಮಂದಿರ ಅಂತ ಅಂದುಕೊಳ್ತೀರಾ? ರಾಮಮಂದಿರಕ್ಕೆ ಹೋಗಿ ನಿಮ್ಮ ಪಾಪ ತೊಳೆದುಕೊಂಡು ಬನ್ನಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa), ಸಿಎಂ ವಿರುದ್ಧ ವ್ಯಂಗ್ಯವಾಡಿದ್ದಾರೆ. ಶಿವಮೊಗ್ಗದಲ್ಲಿ (Shivamogga) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನಂತಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಅನಂತಕುಮಾರ್ ಹೇಳಿರೋದ್ರಲ್ಲಿ ತಪ್ಪಿಲ್ಲ. ಏಕೆಂದರೆ ಮಂಡ್ಯದ ಶ್ರೀರಂಗಪಟ್ಟಣ, ಕಾರವಾರ ಜಿಲ್ಲೆಯಲ್ಲಿ ದೇವಸ್ಥಾನ ಒಡೆದು ಮಸೀದಿ (Mosque) ಕಟ್ಟಿದ್ದಾರೆ. ಇದನ್ನು ಎಲ್ಲಾ ಭಾರತೀಯರು ಸ್ವಾಗತ ಮಾಡಬೇಕಾ? ಎಂದು ಪ್ರಶ್ನಿಸಿದ್ದಾರೆ.  https://ainlivenews.com/rowdysheeter-arrested-by-kylie-machi-and-shouting-at-a-woman/ ಸಿದ್ದರಾಮಯ್ಯ ಅವರು ಮೋದಿ (Modi) ಬಗ್ಗೆ ಏಕವಚನದಲ್ಲಿ ಮಾತನಾಡ್ತಾರೆ. ಒಮ್ಮೆ ಅಯೋಧ್ಯೆಗೆ ಹೋಗಲ್ಲ ಅಂದಿದ್ದರು. ಈಗ ಜ.22ರ ನಂತರ ಹೋಗ್ತೀನಿ ಅಂತಾರೆ. ನಿಮಿಷಕ್ಕೊಂದು ಮಾತನಾಡ್ತಾರೆ. ನಿಮ್ಮ ಹೆಸರಿನಲ್ಲಿ ಸಿದ್ದ ರಾಮ ಎರಡೂ ಇದೆ, ರಾಮ ಮಂದಿರಕ್ಕೆ ಹೋಗಿ ನಿಮ್ಮ ಪಾಪ ಕಳೆದುಕೊಂಡು ಬನ್ನಿ ಎಂದು ಟಾಂಗ್ ಕೊಟ್ಟಿದ್ದಾರೆ.

Read More

ಬೆಂಗಳೂರು:  ನಗರದ ಮನೆಯೊಂದರಲ್ಲಿ‌ ಅಗ್ನಿ ಅವಘಡ ಕಾಣಿಸಿಕೊಂಡಿರುವ ಘಟನೆ ಆರ್.ಟಿ.ನಗರದಲ್ಲಿ ನಡೆದಿದೆ.  ಎರಡನೇ ಮಹಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡ ಆಗಿದ್ದು ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಇಲ್ಲ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮನವಾಗಿದ್ದು  ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ  ತೌಸಿಫ್ ಎಂಬುವವರಿಗೆ ಸೇರಿದ ಮನೆಯಾಗಿದ್ದು ವಾಷಿಂಗ್ ಮಷಿನ್,ಟಿವಿ,ಫ್ರಿಡ್ಜ್ ಸೇರಿ ಎಲ್ಲಾ ವಸ್ತು ಸುಟ್ಟು ಕರಕಲುವಾಗಿದೆ ಹಾಗೆ  ಮನೆಯಲ್ಲಿದ್ದ ವಸ್ತು ಸಂಪೂರ್ಣ ಸುಟ್ಟು ಕರಕಲು  ಈ ವೇಳೆ ಮನೆಯಲ್ಲಿ ಸಿಲುಕಿದ್ದ ಇಬ್ನರು ಮಕ್ಕಳ ರಕ್ಷಣೆ ಮಾಡಿದ ಸಿಬ್ಬಂದಿ!

Read More

ಬೆಂಗಳೂರು : ಸಂಸದ ಅನಂತ್ ಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ಕುರಿತ ವಿವಾದಾತ್ಮಕ ಹೇಳಿಕೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೌನ ಮುರಿದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅನಂತ್ ಕುಮಾರ್ ಹೆಗಡೆ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ಮೊದಲೇ ರಾಜಕಾರಣಿಗಳು ಅಂದ್ರೆ ಜನ‌ ನಂಬಲ್ಲ, ಅಂಥ‌ ಪರಿಸ್ಥಿತಿ‌ ಇದೆ. ಯಾರೇ ಇದ್ದರೂ ನಮ್ಮ ಹೇಳಿಕೆ ಗಂಭೀರವಾಗಿರಬೇಕು. ಸಮಾಜ ಒಪ್ಪುವಂತೆ ಮಾತು ಇರಬೇಕು. ಅನಂತ್ ಕುಮಾರ್ ಹೆಗಡೆ ಹೇಳಿಕೆಗಳನ್ನು ನಾನೂ ಗಮನಿಸಿದ್ದೇನೆ. ನಾನು ಅವರ ಜತೆಗೂ ಇದರ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ. ಅನಂತ್ ಕುಮಾರ್ ಅವರು ಹೇಳಿರೋದೆಲ್ಲ ಅವರ ವೈಯಕ್ತಿಕ ಅಭಿಪ್ರಾಯಗಳು. ಇದಕ್ಕೂ ಪಕ್ಷಕ್ಕೂ ಸಂಬಂಧ ಕಲ್ಪಿಸುವುದು ಬೇಡ. ಇದರ ಬಗ್ಗೆ ಅವರ ಜತೆ ವೈಯಕ್ತಿಕವಾಗಿ ಮಾತನಾಡುತ್ತೇನೆ. ರಾಜಕಾರಣಿಗಳು ಅಂದ್ರೆ ನೋಡುವ ದೃಷ್ಟಿ ಬದಲಾಗಿದೆ. ಯಾರೇ ಆದರೂ ಕೊಡುವ ಹೇಳಿಕೆ ಎಲ್ಲರೂ ಒಪ್ಪುವಂತಿರಬೇಕು ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

Read More

ಹಾವೇರಿ: ಹಾನಗಲ್ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಹಾವೇರಿ ಜಿಲ್ಲೆಯಲ್ಲಿಂದು ಆಯೋಜನೆಗೊಂಡಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ಹಾನಗಲ್ ಗ್ಯಾಂಗರೇಪ್ ಪ್ರಕರಣದ ಸಂತ್ರಸ್ತೆಯನ್ನೂ ಭೇಟಿ ಮಾಡಿ ಸಮಸ್ಯೆಗಳನ್ನ ಆಲಿಸಿದರು. ಪೊಲೀಸರಿಂದ ತನಿಖೆ ಬೆಳವಣಿಗೆ ಮಾಹಿತಿ ಪಡೆದರು. ಇದೇ ವೇಳೆ ಸಂತ್ರಸ್ತೆಯ ಸಂಬಂಧಿಕರನ್ನು ಭೇಟಿಯಾಗಿ ಮನವಿ ಸ್ವೀಕರಿಸಿದರು.  ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲ ಆರೋಪಿಗ ಳನ್ನೂ ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ, ಯಾರನ್ನೂ ಕಾನೂನು ಕೈಗೆ ತೆಗೆದುಕೊಳ್ಳೋದಕ್ಕೆ ಬಿಡೋದಿಲ್ಲ. ಯಾವುದೇ ಧರ್ಮಕ್ಕೆ ಸೇರಿದವರಾಗಲಿ ಜಾತಿಗೆ ಸೇರಿದವರಾಗಿದ್ದರೂ ಕ್ರಮ ಗ್ಯಾರಂಟಿ. ಈ ಕೇಸ್‌ನಲ್ಲಿ ಯಾರೇ ಕಾನೂನು ಕೈಗೆ ತೆಗೆದುಕೊಂಡಿದ್ದರೂ ಶಿಕ್ಷೆ ಕೊಡಿಸ್ತೇವೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. 

Read More

ದಾವಣಗೆರೆ: ಬೊಲೆರೋ ವಾಹನ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಸಮೀಪದ ಚಿನ್ನಿಕಟ್ಟಿ ಎಂಬಲ್ಲಿ ನಡೆದಿದೆ. ಭದ್ರಾವತಿಯ ಚಂದನಕೆರೆ ಗ್ರಾಮದ ನಾಗರಾಜ್(38), ಮಂಜುನಾಥ್(45), ಗೌತಮ್(17) ಮೃತ ದುರ್ದೈವಿಗಳು. ಅಡಿಕೆ ಕೊಯ್ಲು ಮುಗಿಸಿ ವಾಪಾಸ್ ಬರುವಾಗ ರಸ್ತೆಗೆ ಹಸು ಅಡ್ಡ ಬಂದಿದೆ.  ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ಪಲ್ಟಿಯಾಗಿದೆ. ಬೊಲೆರೋ ವಾಹನದಡಿ ಸಿಲುಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಆರು ಮಂದಿ ಗಾಯಗೊಂಡಿದ್ದಾರೆ. ನ್ಯಾಮತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.  

Read More

ನಟ ದರ್ಶನ್ ಅಭಿನಯದ ‘ಕಾಟೇರ’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಪದಾರ್ಪಣೆ ಮಾಡಿರುವ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ ಅವರು ಮಕರ ಸಂಕ್ರಾಂತಿ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಅವರು, ‘ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ. ಮಕರ ಸಂಕ್ರಾಂತಿಯ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.

Read More

ಕೋಲಾರ: ಜಿಲ್ಲೆಯ ಅಬಕಾರಿ ಪೊಲೀಸರ ಮಹತ್ ಕಾರ್ಯಚರಣೆ ನಡೆಸಿದ್ದು ನಗರದ ಎರಡು ಕಡೆ  1,300 ಗ್ರಾಂ ಗಾಂಜಾ ವನ್ನು ಜಪ್ತಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಬೆಂಗಳೂರು ದಕ್ಷಿಣ ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ರಮೇಶ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯನ್ನು ನಡೆಸಿದ್ದು ಅಪಾರ ಪ್ರಮಾಣದ ಗಾಂಜಾ ಪುಡಿಯನ್ನು ವಶಪಡಿಸಿಕೊಳ್ಳಲಾಗಿದೆ. ಕೋಲಾರ ತಾಲ್ಲೂಕಿನ  ಶ್ರೀನಿವಾಸಪುರ ಕೋಲಾರ ರಸ್ತೆಯ ಮಹರ್ಷಿ  ಸ್ಕೂಲ್  ಬಳಿ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ 800 ಗ್ರಾಂ  ಹೂ ಮತ್ತು ಬೀಜಗಳಿಂದ ಕೂಡಿದ ಒಣ ಗಾಂಜಾ  ಸೊಪ್ಪನ್ನು  ಹೊಂದಿ ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದಿದ್ದು ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಹಿಡಿದಿದ್ದಾರೆ . ಹಾಗೆ ಕೋಲಾರದ ಮೂರಂಡಹಳ್ಳಿ ಕ್ರಾಸ್ ಬಳಿ ಕೂಡ ಪೊಲೀಸರು ದಾಳಿ ನಡೆಸಿದ್ದು  ಸುಮಾರು 400 ಗ್ರಾಂ ಹೂ ಮತ್ತು ಬೀಜದಿಂದ ಕೂಡಿರುವ ಒಣ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಹೊಂದಿರುವುದನ್ನು ಪತ್ತೆ ಹಚ್ಚಿ ಆರೋಪಿಗಳನ್ನ ಬಂಧಿಸಲಾಗಿದೆ. ಬಂಧಿತರಿಂದ ಕೃತ್ತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳು, ಜಪ್ಪಿ…

Read More