Author: AIN Author

ಚಿಕ್ಕೋಡಿ: ಎಸ್‍ಎಸ್‍ಎಲ್‍ಸಿ ಪರೀಕ್ಷಾ ವೇಳಾಪಟ್ಟಿ ನಿಗದಿಯಲ್ಲೂ ಮುಸ್ಲಿಂ ತುಷ್ಟೀಕರಣಕ್ಕೆ ಸರ್ಕಾರ ಮುಂದಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್  ಆರೋಪಿಸಿದ್ದಾರೆ. ಮುಸ್ಲಿಮರ ನಮಾಜಿನ ಸಮಯಕ್ಕಾಗಿ ಮಧ್ಯಾಹ್ನ ಪರೀಕ್ಷೆ ಅನುಗುಣವಾಗಿ ಪರೀಕ್ಷೆಯನ್ನು ನಿಗದಿ ಮಾಡಿದೆ. ಸರ್ಕಾರ ಮುಸ್ಲಿಮರ ಓಲೈಕೆ ಮುಂದುವರೆಸಿದೆ.  ಶಿಕ್ಷಣ ಕ್ಷೇತ್ರದಲ್ಲೂ ತುಷ್ಟೀಕರಣ ಮಾಡುತ್ತಿದೆ. ಫೆ.26ರಿಂದ ಮಾ.2ರ ವರೆಗೆ ವೇಳಾಪಟ್ಟಿ ನಿಗದಿ ಮಾಡಲಾಗಿದೆ. ಪ್ರತಿನಿತ್ಯ ಬೆಳಿಗ್ಗೆ 10:30 ರಿಂದ 1:30 ಸಮಯ ನಿಗದಿ ಮಾಡಲಾಗಿದೆ. ಶುಕ್ರವಾರ ಮಾತ್ರ ಮಧ್ಯಾಹ್ನ 2 ಗಂಟೆಗೆ ಪರೀಕ್ಷೆ ಪ್ರಾರಂಭವಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.  https://ainlivenews.com/do-you-know-the-benefits-of-eating-white-onion/ ಶುಕ್ರವಾರ ದಿನವೇ ಮಧ್ಯಾಹ್ನ 2 ಗಂಟೆಗೆ ಸಮಯ ನಿಗದಿ ಮಾಡಿದ್ದು ನಮಾಜಿಗೋಸ್ಕರ. ಇದು ಮುಸ್ಲಿಮರ ಒಲೈಕೆಗಾಗಿ, ಕೆಲವೇ ಕೆಲವು ಜನರಿಗಾಗಿ ಲಕ್ಷಾಂತರ ಹಿಂದೂಗಳ ಮೇಲೆ ಸಮಯದ ಹೇರಿಕೆ ತುಷ್ಟೀಕರಣ ನೀತಿ ಸ್ಪಷ್ಟವಾಗಿದೆ. ಸರ್ಕಾರದ ನೀತಿಯನ್ನು ಶ್ರೀರಾಮ ಸೇನೆ ಖಂಡಿಸುತ್ತದೆ ಎಂದಿದ್ದಾರೆ.

Read More

ಟಾಕ್ಸಿಕ್’ (Toxic) ಸಿನಿಮಾ ಬೆನ್ನಲ್ಲೇ ಯಶ್ (Yash) ಮತ್ತೊಂದು ಬಾಲಿವುಡ್ (Bollywood) ಸಿನಿಮಾದಲ್ಲಿ ನಟಿಸಲು ಒಪ್ಪಿದ್ದಾರಾ? ಹೀಗೊಂದು ಸುದ್ದಿ ಬಾಲಿವುಡ್ ಅಂಗಳದಿಂದ ಬಂದಿದೆ. ಈಗಾಗಲೇ ರಾಮಾಯಣ ಸಿನಿಮಾದಲ್ಲಿ ರಾವಣನ ಪಾತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅದರ ಬೆನ್ನಲ್ಲೇ ಇದೊಂದು ಸುದ್ದಿ ಹಬ್ಬಿದೆ. ಯಾವುದು ಸಿನಿಮಾ? ನಿರ್ಮಾಪಕರು ಯಾರು? ನಿಜಕ್ಕೂ ಇನ್ನೊಂದು ಬಾಲಿವುಡ್ ಸಿನಿಮಾ ಯಶ್ ಮಾಡುತ್ತಾರಾ? ಇಲ್ಲಿದೆ ಮಾಹಿತಿ. ಯಶ್ ಈಗ ಎಲ್ಲಾ ಭಾಷೆಗಳಲ್ಲೂ ಸಲ್ಲುತ್ತಿದ್ದಾರೆ. ಅದಕ್ಕೆ ಕಾರಣ ಕೆಜಿಎಫ್. ಈಗಾಗಲೇ ‘ಟಾಕ್ಸಿಕ್’ ಸಿನಿಮಾಗೆ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಗೀತು ಮೋಹನ್‌ದಾಸ್ ನಿರ್ದೇಶನದ ಸಿನಿಮಾ ಶೂಟಿಂಗ್ ಆರಂಭ ಇನ್ನೇನು ಹತ್ತಿರದಲ್ಲಿದೆ. ಅದಕ್ಕೆ ಏನೇನು ಬೇಕು ಎಲ್ಲವನ್ನು ಸಜ್ಜು ಮಾಡಿಕೊಂಡಿದ್ದಾರೆ ಯಶ್ & ಟೀಮ್. ಈ ಹೊತ್ತಲ್ಲೇ ಇಲ್ಲೊಂದು ಸುದ್ದಿ ಹರಿದಾಡುತ್ತಿದೆ. ಬಾಲಿವುಡ್‌ನ ಮತ್ತೊಂದು ಸಿನಿಮಾದಲ್ಲಿ ಯಶ್ ನಟಿಸಲು ಒಪ್ಪಿದ್ದಾರೆ. ಅದಕ್ಕಾಗಿ ಮಾತು ಕತೆ ಕೂಡ ನಡೆದಿದೆ ಎನ್ನಲಾಗಿದೆ. ಆ ನಿರ್ಮಾಣ ಸಂಸ್ತೆಯೇ ಶಾರುಖ್ ಖಾನ್ (Sharukh Khan) ಒಡೆತನದ ರೆಡ್ ಚಿಲ್ಲೀಸ್…

Read More

ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ವಿನೋದ್(24) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ನಗರದ ಹೊರವಲಯದ ತೇಗೂರು ಗ್ರಾಮದ ಮನೆಯಲ್ಲಿ ನೇಣು (Hangging) ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೇಗೂರು ಗ್ರಾಮದ ತನುಜ ಎಂಬ ಯುವತಿ ಹಾಗೂ ವಿನೋದ್ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಯುವತಿ ಮನೆಯವರ ಸಮ್ಮತಿ ಇರಲಿಲ್ಲ. ಹೀಗಾಗಿ ಯುವತಿ ಮನೆಯವರ ವಿರೋಧದ ನಡುವೆಯೇ ಇಬ್ಬರೂ ಓಡಿ ಹೋಗಿ ಮದುವೆಯಾಗಿದ್ದರು. ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ ಠಾಣೆಯಲ್ಲಿ ಪಂಚಾಯಿತಿ ನಡೆದಿದ್ದು ಯುವತಿ ತನ್ನ ತಾಯಿ ಮನೆಗೆ ಹೋಗುವುದಾಗಿ ಹೇಳಿಕೆ ನೀಡಿದ್ದಾಳೆ. ಮದುವೆಯಾದ ಮೂರೇ ದಿನಕ್ಕೆ ಗಂಡನನ್ನು ಬಿಟ್ಟು ತಾಯಿ ಜೊತೆ ಹೋಗುವುದಾಗಿ ಯುವತಿ ಉಲ್ಟಾ ಹೊಡೆದಿದ್ದಾಳೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

Read More

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಯ ವೇಳೆ ವೈಯಕ್ತಿಕ ಕಾರಣಗಳನ್ನು ನೀಡಿ ತವರಿಗೆ ಮರಳಿದ್ದ ಇಶಾನ್‌ ಕಿಶನ್‌ ಅವರ ಬಗ್ಗೆ ಟೀಮ್ ಇಂಡಿಯಾ ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದ ಇಶಾನ್‌ ಕಿಶನ್‌, ಸೀಮಿತ ಓವರ್‌ಗಳ ಸ್ವರೂಪದಲ್ಲಿ ಆಡಲು ಅವಕಾಶ ಸಿಕ್ಕಿರಲಿಲ್ಲ. ನಂತರ ಎರಡು ಪಂದ್ಯಗಳ ಟೆಸ್ಟ್‌ ಸರಣಿ ಆರಂಭಕ್ಕೂ ಮುನ್ನ ಅವರು ತವರಿಗೆ ಮರಳಿದ್ದರು. ಇದಾದ ಬಳಿಕ ಇಂಗ್ಲೆಂಡ್‌ ವಿರುದ್ಧ ಆರಂಭಿಕ ಎರಡು ಟೆಸ್ಟ್‌ ಪಂದ್ಯಗಳ ಭಾರತ ತಂಡದಲ್ಲಿ ಅವರಿಗೆ ಅವಕಾಶ ನೀಡಲಾಗಿರಲಿಲ್ಲ. ಇಂಗ್ಲೆಂಡ್‌ ವಿರುದ್ದ ಟೆಸ್ಟ್‌ ಸರಣಿಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ರಾಹುಲ್ ದ್ರಾವಿಡ್‌, ದೇಶಿ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಇಶಾನ್‌ ಕಿಶನ್ ಅವರು ಭಾರತ ಟೆಸ್ಟ್‌ ತಂಡದಲ್ಲಿ ಅವಕಾಶ ಪಡೆಯಬೇಕು ಎಂದು ಹೇಳಿದ್ದರು. ವೈಝಾಗ್‌ ಟೆಸ್ಟ್‌ ಗೆಲುವಿನ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಹುಲ್‌ ದ್ರಾವಿಡ್‌ಗೆ ಪತ್ರಕರ್ತರು ಇಶಾನ್‌ ಕಿಶನ್‌ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಕೇಳಿದರು.…

Read More

ದೊಡ್ಡಬಳ್ಳಾಪುರ : ಕರ್ನಾಟಕದ ಅತಿ ಹೆಚ್ಚು ಆದಾಯವಿರುವ ಮೊದಲ 10 ಮುಜರಾಯಿ ದೇವಸ್ಥಾನಗಳ ಪಟ್ಟಿಯಲ್ಲಿ  ದೊಡ್ಡಬಳ್ಳಾಪುರದ ಘಾಟಿ ಕ್ಷೇತ್ರಕ್ಕೂ ಸ್ಥಾನವಿದೆ, ಪ್ರತಿ ತಿಂಗಳಿಗೊಮ್ಮೆ ಕ್ಷೇತ್ರದಲ್ಲಿ ಭಕ್ತರ ಹುಂಡಿ ಹಣ ಎಣಿಕೆ ಕಾರ್ಯವನ್ನ ಮಾಡಲಾಗಿತ್ತು. ಒಟ್ಟು 55,24,663 ರೂಪಾಯಿ ಸಂಗ್ರಹವಾಗಿದೆ.  ಕಳೆದ ಜನವರಿ 16 ರಂದ್ದು ಘಾಟಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ ಕಾರ್ಯಕ್ರಮ ನೆರೆವೆರಿದ್ದು, ಜಾತ್ರೆ ಅಂಗವಾಗಿ ಸಾವಿರಾರು ಭಕ್ತರು ಕ್ಷೇತ್ರದ ಬಂದ ಹಿನ್ನಲೆ ಭಕ್ತರ ಹುಂಡಿ ಹಣದಲ್ಲಿ ಏರಿಕೆಯಾಗಿದೆ. ಇಂದು ದೇವಸ್ಥಾನದ ಅವರಣದಲ್ಲಿ ಹುಂಡಿ ಹಣ ಎಣಿಕೆ ಕಾರ್ಯವನ್ನ ಮಾಡಲಾಗಿದ್ದು. ಈ ವೇಳೆ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗರಾಜು, ಮುಜರಾಯಿ ಇಲಾಖೆ ತಹಶೀಲ್ದಾರ್ ಜೆ.ಜೆ.ಹೇಮಾವತಿ, ಪ್ರಧಾನ ಆರ್ಚಕರಾದ ನಾಗೇಂದ್ರಶರ್ಮಾ, ಕೆನರಾ ಬ್ಯಾಂಕ್ ಸಿಬ್ಬಂದಿ, ದೇವಸ್ಥಾನದ ಸಿಬ್ಬಂದಿ, ಪೊಲೀಸ್ ಇಲಾಖೆ ಮತ್ತು ಭಕ್ತರ ಸಮ್ಮುಖದಲ್ಲಿ ಎಣಿಕೆ ಕಾರ್ಯ ಮಾಡಲಾಗಿತು. ಒಟ್ಟು ಸಂಗ್ರಹವಾದ 55,24,663 ರೂಪಾಯಿಯಲ್ಲಿ ಅತಿ ಹೆಚ್ಚಿನ ಹಣ ನೂರು ರೂಪಾಯಿ ನೋಟ್ ಗಳ ಮೂಲಕ 21,57,600 ರೂಪಾಯಿ ಸಂಗ್ರಹವಾಗಿದೆ, ನ್ಯಾಣಗಳಿಂದ 106566…

Read More

ಇಂಗ್ಲೆಂಡ್ ವಿರುದ್ಧ ವೈಝಾಗ್ ಟೆಸ್ಟ್ ನ ಮೊದಲ ಇನಿಂಗ್ಸ್ ನಲ್ಲಿ ದ್ವಿಶತಕ (209 ರನ್) ಸಿಡಿಸಿದ ನಂತರ  ಮಾಸ್ಟರ್‌ ಬ್ಲಾಸ್ತರ್‌ ಸಚಿನ್‌ ತೆಂಡೂಲ್ಕರ್‌ ಗೆ ಅರ್ಪಿಸಿದ್ದಾರೆ ಯಶಸ್ವಿ ಜೈಸ್ವಾಲ್! ವಿಶಾಖಪಟ್ಟದ ನ ಎಸಿಎ-ವಿಡಿಸಿಎ ಮೈದಾನದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ‌ ಐಪಿಎಲ್ ತಾರೆ ಯಶಸ್ವಿ ಜೈಸ್ವಾಲ್ ದ್ವಿಶತಕ (209 ರನ್), ದ್ವಿತೀಯ ಇನಿಂಗ್ಸ್ ನಲ್ಲಿ ಶುಭಮನ್ ಗಿಲ್ ಶತಕ (104 ರನ್) ಮತ್ತು ಅನುಭವಿ ವೇಗಿ ಜಸ್‌ಪ್ರೀತ್‌ ಬುಮ್ರಾ (9 ವಿಕೆಟ್) ಅವರ ಪ್ರದರ್ಶನದಿಂದಾಗಿ ರೋಹಿತ್ ಶರ್ಮಾ ಪಡೆ ಇಂಗ್ಲೆಂಡ್ ವಿರುದ್ಧ 106 ರನ್ ಗೆಲುವು ಸಾಧಿಸಿ 5 ಪಂದ್ಯಗಳ ಟೆಸ್ಟ್ ಸರಣಿಯನ್ನು 1-1 ರಿಂದ ಸಮಬಲಗೊಳಿಸಿತು. ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯ ಗೆದ್ದ ನಂತರ ಜಿಯೋ ಸಿನಿಮಾದೊಂದಿಗೆ ಸಂವಾದ ನಡೆಸಿದ ಯಂಗ್ ಎಡಗೈ ಪ್ಲೇಯರ್ ಯಶಸ್ವಿ ಜೈಸ್ವಾಲ್, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ನೀಡಿದ ಸಲಹೆಯನ್ನು ಬಹಿರಂಗಪಡಿಸಿದ್ದಾರೆ. “ನಾನು ಸಚಿನ್ ತೆಂಡೂಲ್ಕರ್ ಅವರೊಂದಿಗೆ ಆಪ್ತವಾಗಿ…

Read More

ಬೆಂಗಳೂರು: ಗೃಹಿಣಿ ನೇಣು ಬಿಗಿದುಕೊಂಡು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಹಾಲಕ್ಷ್ಮಿ ಲೇಔಟ್‌ನ  (Mahalakshmi Layout) ಶ್ರೀ ಕಂಠೇಶ್ವರ ನಗರದಲ್ಲಿ ನಡೆದಿದೆ. ಪ್ರೇಮಲತಾ (35) ಸಾವನ್ನಪ್ಪಿದ ಮಹಿಳೆ. ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಪತಿ ಶಿವಶಂಕರ್ ಕೊಲೆ ಮಾಡಿರಬಹುದು ಎಂಬ ಆನುಮಾನವಿದೆ. ಮಹಿಳೆಯನ್ನು ಕೊಲೆ ಮಾಡಿದ ಬಳಿಕ ನೇಣು ಬಿಗಿಯಲಾಗಿದೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಆಕೆಯ ಗಂಡನೇ ಕೊಲೆ ಮಾಡಿ ನೇಣು ಬಿಗಿದಿರಬಹುದು ಎಂಬ ಶಂಕೆಯನ್ನು ಪ್ರೇಮಲತಾ ಸಂಬಂಧಿಕರು ವ್ಯಕ್ತಪಡಿಸಿದ್ದಾರೆ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ಮಹಾಲಕ್ಷ್ಮಿ ಲೇಔಟ್‌ನ ಪೊಲೀಸರು ಶಿವಶಂಕರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಅವರನ್ನು ಜೆಡಿಎಸ್ ನೂತನ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಹ ಉಸ್ತುವಾರಿಯನ್ನಾಗಿ ಟಿ.ಎ. ಶರವಣ ಅವರನ್ನು ನೇಮಿಸಲಾಗಿದೆ ತಮಗೆ ಈ ಜವಾಬ್ದಾರಿಯುತ ಹುದ್ದೆಗಳನ್ನು ನೀಡಿರುವುದಕ್ಕೆ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹಾಗೂ ಪಕ್ಷದ ರಾಜ್ಯಾಧ್ಯಕ್ಷ  ಎಚ್. ಡಿ .ಕುಮಾರಸ್ವಾಮಿ ಅವರಿಗೆ ಕೃತಜ್ಞತೆ  ಸಲ್ಲಿಸಿರುತ್ತೇನೆ. ಹಾಗೆ  ಪಕ್ಷದ ಸಂಘಟನೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಾನೆ ಎಂದು ಟಿ.ಎ. ಶರವಣ ಅವರು  ಹೇಳಿದ್ದಾರೆ

Read More

ಇಸ್ಲಾಮಾಬಾದ್‌: ಪಾಕಿಸ್ತಾನದ ದೇರಾ ಇಸ್ಮಾಯಿಲ್ ಖಾನ್‌ನಗರದಲ್ಲಿರುವ ಚೋಡ್ವಾನ್ ಪೊಲೀಸ್ ಠಾಣೆಯಲ್ಲಿ ಉಗ್ರರಿಂದ ಭೀಕರ ಗುಂಡಿನ ದಾಳಿ (Terror Attack) ನಡೆದಿದ್ದು, 10 ಮಂದಿ ಪೊಲೀಸ್‌ ಅಧಿಕಾರಿಗಳು (Pakistan Cops) ಸಾವನ್ನಪ್ಪಿದ್ದಾರೆ. 6 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸೋಮವಾರ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಉಗ್ರರು ಪೊಲೀಸ್‌ ಠಾಣೆ ಮೇಲೆ ಸ್ನೈಪರ್‌ಗಳಿಂದ ಗುಂಡಿನ ದಾಳಿ ನಡೆಸಿ ಠಾಣೆಯೊಳಗೆ ನುಗ್ಗಿದ್ದಾರೆ. ಪೊಲೀಸ್‌ ಠಾಣೆ ನುಗ್ಗಿದ ಬಳಿಕ ಹ್ಯಾಂಡ್ ಗ್ರೆನೇಡ್‌ಗಳನ್ನು (Hand Grenades) ಬಳಸಿ ದಾಳಿ ನಡೆಸಿದ್ದಾರೆ ಇದರಿಂದ 10 ಮಂದಿ ಪೊಲೀಸ್‌ ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಪೊಲೀಸ್‌ ಠಾಣೆಯಲ್ಲಿ ನಡೆದ ಉಗ್ರರ ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬುದು ಸ್ಪಷ್ಟವಾಗಿಲ್ಲ. ಇದೇ ಫೆಬ್ರವರಿ 8 ರಂದು ಸಾರ್ವತ್ರಿಕ ಚುನಾವಣೆ (National Elections) ನಡೆಯಲಿದ್ದು, ಅದಕ್ಕೂ ಮುನ್ನವೇ ಉಗ್ರರ ದಾಳಿ ನಡೆದಿರುವುದು ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಇತ್ತೀಚೆಗೆ ಖೈಬರ್ ಪಖ್ತುಂಖ್ವಾ…

Read More

ದೆಹಲಿ: “ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರದ ಗಮನ ಸೆಳೆಯಲು, ನಮ್ಮ ಪಾಲಿನ ಅನುದಾನದ ಬಗ್ಗೆ ಜನರಿಗೆ ಮನದಟ್ಟು ಮಾಡಲು ರಾಜ್ಯ ಸರ್ಕಾರ ದೆಹಲಿಯಲ್ಲಿ ಹೋರಾಟ ನಡೆಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಫೆ.7ರಂದು ರಾಜ್ಯ ಸರ್ಕಾರದ ವತಿಯಿಂದ ನಡೆಯಲಿರುವ ಪ್ರತಿಭಟನೆಯ ಸ್ಥಳ ಜಂತರ್ ಮಂತರ್ ನಲ್ಲಿ ಪರಿಶೀಲನೆ ನಡೆಸಿ, ಸೋಮವಾರ ರಾತ್ರಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. “ಇಂದು ರಾಜ್ಯ ಸರ್ಕಾರ ನಡೆಸಲಿರುವ ಪ್ರತಿಭಟನಾ ಸ್ಥಳ ಪರಿಶೀಲಿಸಿದ್ದೇನೆ. ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ರಾಜ್ಯ ಸರ್ಕಾರ ನಡೆಸುತ್ತಿರುವ ಹೋರಾಟ ಇದಾಗಿದ್ದು ಇದು ಪಕ್ಷದ ಹೋರಾಟವಲ್ಲ. ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ಅನುದಾನ ನಮ್ಮ ಹಕ್ಕು, ನಮ್ಮ ಅಭಿವೃದ್ಧಿ ನಮ್ಮ ಜವಾಬ್ದಾರಿ. ಈ ವಿಚಾರವಾಗಿ ಜನರಿಗೆ ಮನದಟ್ಟು ಮಾಡಬೇಕು. ನಮಗೆ ಪಾಲಿನ ಅನುದಾನ ಕೊಡಿಸುವುದು ನಮ್ಮ ಜವಾಬ್ದಾರಿ. ಜನ ನಮಗೆ ಮತ ಹಾಕಿ ಅಧಿಕಾರಕ್ಕೆ…

Read More