Author: AIN Author

ಬೆಂಗಳೂರು:- ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿ ಮತ್ತು ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಹಿನ್ನೆಲೆ ಕಿಡಿಗೇಡಿಗಳ ವಿರುದ್ಧ FIR ದಾಖಲಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದೆ. ಫೇಸ್​ಬುಕ್, ಇನ್ಸ್​ಟಾಗ್ರಾಂನಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ್ದು, ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಕಾರ್ಯದರ್ಶಿ, ಕಾಂಗ್ರೆಸ್​ ಮುಖಂಡ ಸಂಜಯ್ ಯಾದವ್ ದೂರು ಆಧರಿಸಿ ಪೊಲೀಸರು ಎಫ್​ಐಆರ್​​ ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ‘ಕೃತಿಕಾ ಕೃತಿ’ ಎಂಬ ಹೆಸರಿನ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ವಿರುದ್ಧ ಅಶ್ಲೀಲವಾಗಿ ನಿಂದಿಸಿ ಅವಹೇಳನ ಮಾಡಿದ್ದು, ಜೊತೆಗೆ ಗೌರವಕ್ಕೆ ಧಕ್ಕೆ ತರಲಾಗಿದೆ. ಹಾಗಾಗಿ ಈ ಪೋಸ್ಟ್‌ಗಳನ್ನು ಹಾಕಿದವರನ್ನು ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹೈಗ್ರೌಂಡ್ಸ್‌ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Read More

ಬೆಂಗಳೂರು:- ಬ್ರ್ಯಾಂಡ್ ಬೆಂಗಳೂರು ನನ್ನ ಐಡಿಯ ಅಲ್ಲ ಎಂದು ಇನ್ಪೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಯುವ ನಾಯಕತ್ವ ಸಮ್ಮೇಳನದಲ್ಲಿ ಬ್ರ್ಯಾಂಡ್ ಬೆಂಗಳೂರು ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಇದು ನನ್ನ ಐಡಿಯ ಅಂತಾ ಅಲ್ಲ. ಇಲ್ಲಿ ಮಕ್ಕಳ ಐಡಿಯಾ ಮುಖ್ಯವಾಗಿದೆ. ಊರಿಗೆ ಒಂದು ಹೆಸರು ಬರಬೇಕು. ಹೀಗಾಗಿ ಬೇರೆ ಬೇರೆ ಆಯಾಮಗಳಲ್ಲಿ ಹೆಸರು ಬರಬೇಕು ಎಂದರು. ಬ್ರ್ಯಾಂಡ್ ಬೆಂಗಳೂರು ಯೋಜನೆ ಕುರಿತ ಐಡಿಯಾಥಾನ್ ಕಾರ್ಯಕ್ರಮ ವಿಚಾರವಾಗಿ ಮಾತನಾಡಿದ ಅವರು, ಹೊಸದೇನಾದರೂ ಅಪೇಕ್ಷೆ ಮಾಡಬೇಕು. ಸ್ಪಷ್ವವಾದ ವಿಚಾರ ಬೇಕು. ನನಗೆ ಬಹಳ ಸಂತೋಷ ಆಗುತ್ತದೆ. ಈ ಕಾರ್ಯಕ್ರಮದಲ್ಲಿ ಹಲವು ಶಾಲೆಗಳ ಮಕ್ಕಳು ಭಾಗವಹಿಸಿದ್ದಾರೆ. ಈ ಕಾರ್ಯಕ್ರಮವನ್ನು ಮಾಡಲು ಎಲ್ಲಾ ಮಕ್ಕಳು ಕಷ್ಟಪಟ್ಟಿದ್ದಾರೆ. ಒಂದು ದಿನದಲ್ಲಿ ಮಾಡಲು ಸಾಧ್ಯವಿಲ್ಲ. ಬಹಳ ಸಂತೋಷ ಆಗಿದೆ. ಇಂತಹ ಕಾರ್ಯಕ್ರಮಗಳು ಬೇರೆಬೇರೆ ಊರುಗಳಲ್ಲೂ ಆಗಬೇಕು ಎಂದರು. ಕಾರ್ಯಕ್ರಮಕ್ಕೂ ಮುನ್ನ ಮಾತನಾಡಿದ್ದ ಸುಧಾಮೂರ್ತಿ, ಬ್ರ್ಯಾಂಡ್ ಬೆಂಗಳೂರು ಅಂದರೆ ಕನ್ನಡ. ಇಂಗ್ಲೀಷ್ ಮಾತನಾಡಲು ಕನ್ನಡ ಬಿಡಬೇಡಿ. ಮಕ್ಕಳ ಮನಸ್ಸು…

Read More

ರಾಜಧಾನಿ ಬೆಂಗಳೂರಿನಲ್ಲಿ ಖಾಲಿ ಇರುವ ಹಲವು ಉದ್ಯೋಗಗಳ ಭರ್ತಿಗೆ ನಿಮ್ಹಾನ್ಸ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್​ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 13, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಇವತ್ತೇ ರೆಸ್ಯೂಮ್​ ಕಳುಹಿಸಿ. ಶೈಕ್ಷಣಿಕ ಅರ್ಹತೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ಪೀಚ್-ಲ್ಯಾಂಗ್ವೇಜ್ ಪ್ಯಾಥೋಲಜಿ ಮತ್ತು ಆಡಿಯಾಲಜಿಯಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ವೇತನ: ಮಾಸಿಕ ₹ 31,000 ಉದ್ಯೋಗದ ಸ್ಥಳ: ಬೆಂಗಳೂರು ಆಯ್ಕೆ…

Read More

ಬೆಂಗಳೂರು:- ಯುವನಿಧಿ ನೋಂದಣಿ ಮತ್ತು ಭತ್ಯೆ ಪಡೆಯಲು ನೀವು ಫಲಾನುಭವಿಗಳಾಗಿದ್ದರೆ ಹೀಗೆ ಮಾಡಿ.. ನಿರುದ್ಯೋಗಿ ಪದವೀಧರರಿಗೆ ಮಾಸಿಕ ₹ 3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ ₹1,500 ಭತ್ಯೆ ನೀಡುವ ‘ಯುವನಿಧಿ’ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿ ಮಾಡಿದೆ. * ಅಭ್ಯರ್ಥಿಗಳು https://sevasindhugs.karnataka.gov.in ಪೋರ್ಟಲ್‌ ಮೂಲಕ ನೋಂದಣಿ ಮಾಡಿಕೊಳ್ಳಬಹುದು. * ಇದಲ್ಲದೇ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲೂ ನೋಂದಣಿ ಮಾಡಬಹುದು. * ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಡಿಪ್ಲೊಮಾ ಪ್ರಮಾಣ ಪತ್ರ. ಆಧಾರ್ ಕಾರ್ಡ್, ಪಡಿತರ ಚೀಟಿ, ಅಭ್ಯರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ದಾಖಲೆಗಳು ಅಗತ್ಯ. * ಬ್ಯಾಂಕ್‌ ಖಾತೆ ಸಕ್ರಿಯವಾಗಿರಬೇಕು. * ಆಧಾರ್‌ ಸಂಖ್ಯೆ ಜೋಡಣೆ ಮೊಬೈಲ್‌ ಸಂಖ್ಯೆ ಜೋಡಣೆ ಎನ್‌ಸಿಪಿಐ ಮ್ಯಾಪಿಂಗ್‌ ಆಗಬೇಕು. ಇಲ್ಲದಿದ್ದರೆ ತಾಂತ್ರಿಕ ತೊಂದರೆಯಿಂದ ಭತ್ಯೆ ಜಮೆಯಾಗದು ಎಂದು ಅಧಿಕಾರಿಗಳು ಹೇಳಿದ್ದಾರೆ.

Read More

ಹಠಾತ್ ಸಂಭವಿಸುವ ಹೃದಯಾಘಾತವನ್ನು ತಪ್ಪಿಸಲು ಮತ್ತು ತಡೆಯಲು ಸಹಾಯ ಮಾಡುವ ಕೆಲವು ಆಹಾರಗಳ ಬಗ್ಗೆ ನಾವು ನಿಮಗೆ ಹೇಳಲಿದ್ದೇವೆ. ಅವುಗಳೆಂದರೆ, * ಮೀನು ಆರೋಗ್ಯಕರ ಕೊಬ್ಬಿನಾಮ್ಲಗಳು ಹೃದಯದ ಆರೋಗ್ಯಕ್ಕೆ ಅತ್ಯಗತ್ಯ. ನಮ್ಮ ದೈನಂದಿನ ಆಹಾರದಲ್ಲಿ ಒಮೆಗಾ 3 ಕೊಬ್ಬಿನಾಮ್ಲಗಳು ಸಮೃದ್ಧವಾಗಿರುವ ಆಹಾರವನ್ನು ಸೇರಿಸುವುದು ಮುಖ್ಯವಾಗಿದೆ. ಈ ರೀತಿಯ ಆಹಾರಗಳಲ್ಲಿ ಮೀನುಗಳು ಕೂಡಾ ಒಂದಾಗಿವೆ. ಮೀನುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವ ಮೂಲಕ ನಿಮ್ಮ ಹೃದಯವನ್ನ ಕಾಪಾಡಿಕೊಳ್ಳಬಹುದು. * ಸಿಟ್ರಸ್ ಹಣ್ಣುಗಳು ಸಿಟ್ರಸ್ ಹಣ್ಣುಗಳಲ್ಲಿರುವ ವಿಟಮಿನ್ ಸಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಇದರಲ್ಲಿರುವ ಆಯಂಟಿಆಕ್ಸಿಡೆಂಟ್‌ಗಳು ಮತ್ತು ಫ್ಲೇವನಾಯ್ಡ್‌ಗಳು ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಹೃದಯದ ಆರೋಗ್ಯವನ್ನು ಸುಧಾರಿಸುವಲ್ಲಿ ಸಹಾಯ ಮಾಡುತ್ತದೆ. * ಮಸಾಲೆಗಳು ನಮ್ಮ ಅಡುಗೆಮನೆಯಲ್ಲಿನ ಮಸಾಲೆಗಳು ಅಡುಗೆ ರುಚಿಯನ್ನಷ್ಟೆ ಅಲ್ಲ ಹೃದಯದ ಆರೋಗ್ಯವನ್ನು ಕೂಡ ಹೆಚ್ಚಿಸುತ್ತದೆ. ಶುಂಠಿ, ಮೆಣಸು, ದಾಲ್ಚಿನ್ನಿ ಮತ್ತು ಲವಂಗದಂತಹ ಮಸಾಲೆಗಳಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಹೃದಯಾಘಾತವನ್ನು ತಡೆಯಲು ಸಹಾಯ ಮಾಡುವ ಮೂಲಕ ಹೃದಯದ…

Read More

ಮನುಷ್ಯ ದಿನಕ್ಕೆ 7 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡಿದರೆ, ಅನೇಕ ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ನೆನಪಿನ ಶಕ್ತಿ ಕಡಿಮೆಯಾಗುತ್ತದೆ ದೇಹಕ್ಕೆ ಸಾಕಷ್ಟು ನಿದ್ರೆ ಇಲ್ಲದಿದ್ದರೆ ಮೆದುಳು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಕೆಲವೊಮ್ಮೆ ನೀವು ಏನು ಮಾಡುತ್ತಿದ್ದೀರಿ ಎಂದು ನಿಮಗೆ ಅರ್ಥವಾಗುವುದಿಲ್ಲ. ನೆನಪಿನ ಶಕ್ತಿ ಕಡಿಮೆಯಾಗುತ್ತದೆ ಎನ್ನುತ್ತಾರೆ ತಜ್ಞರು. ಅದಲ್ಲದೆ ಕೆಲಸದ ಕಡೆ ಗಮನ, ಏಕಾಗ್ರತೆಯ ಕೊರತೆ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವೂ ಕಡಿಮೆಯಾಗುತ್ತದೆ. ಹಾಗಾಗಿ ಕನಿಷ್ಠ 7 ಗಂಟೆ ನಿದ್ದೆ ಮಾಡಬೇಕು ಎನ್ನುತ್ತಾರೆ ತಜ್ಞರು. ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ ರಾತ್ರಿ ಸರಿಯಾಗಿ ನಿದ್ದೆ ಮಾಡದೇ ಇದ್ದರೆ ರೋಗನಿರೋಧಕ ಶಕ್ತಿಗೂ ತೊಂದರೆಯಾಗುತ್ತದೆ. ಕಡಿಮೆ ಗಂಟೆಗಳ ನಿದ್ರೆ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುತ್ತದೆ. ಪರಿಣಾಮವಾಗಿ ರೋಗಗಳು ಮತ್ತು ಸಾಂಕ್ರಾಮಿಕ ರೋಗಗಳ ಅಪಾಯವನ್ನು ಎದುರಿಸಬೇಕಾಗುತ್ತದೆ. ಈ ಕಾರಣದಿಂದಾಗಿ ಆಗಾಗ್ಗೆ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮಾನಸಿಕ ಸಮಸ್ಯೆಗಳು ಸರಿಯಾಗಿ ನಿದ್ದೆ ಮಾಡದಿದ್ದರೆ ತಲೆನೋವು ಬರುತ್ತದೆ. ಇದು ಕಿರಿಕಿರಿಯನ್ನು ಸಹ ಉಂಟುಮಾಡುತ್ತದೆ. ಜೊತೆಗೆ ಒತ್ತಡವೂ ಹೆಚ್ಚುತ್ತದೆ. ಈ ಕಾರಣದಿಂದಾಗಿ, ಆತಂಕ ಮತ್ತು…

Read More

ಹಾಸ್ಯನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಿಚ್ಚುಗತ್ತಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿರುವ ಮ್ಯಾಸೀವ್ ಸ್ಟಾರ್ ಈಗ ಗಜರಾಮ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ನಿನ್ನೆ ಬೆಂಗಳೂರಿನ ಮಲ್ಲೇಶ್ವರನಲ್ಲಿರುವ ಎಸ್ ಆರ್ ವಿ ಥಿಯೇಟರ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಟೀಸರ್ ಬಿಡುಗಡೆ ಬಳಿಕ ಚಿತ್ರತಂಡ ಮಾಧ್ಯಮದವರೊಟ್ಟಿಗೆ ಮಾಹಿತಿ ಹಂಚಿಕೊಂಡಿದೆ. ನಾಯಕ ರಾಜವರ್ಧನ್ ಮಾತನಾಡಿ, ತುಂಬಾ ಎಮೋಷನಲ್ ಜರ್ನಿ. ತುಂಬಾ ಕಂಟೆಂಟ್ ಇದೆ ಮಾತನಾಡುವುದು. ಅದನ್ನು ಟ್ರೇಲರ್ ಲಾಂಚ್ ನಲ್ಲಿ ಮಾತನಾಡುತ್ತೇನೆ. ಗಜರಾಮ ಸಬ್ಜೆಕ್ಟ್. ಈ ರೀತಿ ಕಮರ್ಷಿಯಲ್ ಇರುವ ಎಲಿಮೆಂಟ್ ನ್ನು ನಾನು ಸಣ್ಣ ವಯಸ್ಸಿನಲ್ಲಿ ಬೇರೆ ಹೀರೋ ನೋಡಿ ಸಿಳ್ಳೆ ಚಪ್ಪಾಳೆ ಹೊಡೆದು ಎಂಜಾಯ್ ಮಾಡುತ್ತಿದ್ದೆ. ಇವತ್ತು ನನ್ನನ್ನು ನಾನು ಸ್ಕ್ರೀನ್ ಮೇಲೆ ನೋಡಿಕೊಂಡಿದ್ದು ಖುಷಿಯಾಗಿದೆ. ನಮ್ಮ ತಂದೆ ಟೀಸರ್ ನೋಡಿ ಖುಷಿಪಡುತ್ತಾರೆ. ಇಡೀ ತಂಡದ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ ಎಂದು…

Read More

ಬೆಂಗಳೂರು: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಬೆಂಗಳೂರು ಸಂಚಾರ ಪೊಲೀಸರು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2024 ಉದ್ಘಾಟನಾ ಸಮಾರಂಭ ನಡೆಯಿತು. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವಾಗಿದ್ದು ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2024 ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ ಅವರು ಭಾಗಿಯಾಗಿದ್ದರು. ಹಾಗೆ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಶ್ರೀ.ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿಗಳಾದ ಶ್ರೀ.ಡಿ.ಕೆ.ಶಿವ ಕುಮಾರ್, ಗೃಹ ಸಚಿವರಾದ ಜಿ.ಪರಮೇಶ್ವರ ಉಪಸ್ಥಿತರಿದ್ದರು. ಈ ವೇಳೆ  ರಸ್ತೆ ಸುರಕ್ಷತೆ ಮಾಸ ಜಾಗೃತಿ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ವಾಹನ ಸವಾರರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಭಾಗವಾಗಿ ಈ ಜಾಗೃತಿ ಸಪ್ತಾಹ ಹಮ್ಮಿಕೊಳ್ಳಲಾಗುತ್ತಿದೆ. ಈ ವೇಳೆ ಟಿ.ಎ.ಶರವಣ ಅವರು  ಮಾತನಾಡಿ, ಜೀವ ಅಮೂಲ್ಯವಾದುದು. ಸಂಚಾರ ನಿಯಮಗಳನ್ನು ಎಲ್ಲರೂ ಕಡ್ಡಾಯ ಪಾಲನೆ ಮಾಡುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕು. ಪ್ರತಿ ಜೀವವೂ ಅಮೂಲ್ಯವೇ. ಅಫಘಾತಗಳು ಕಡಿಮೆಯಾಗಬೇಕು. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು…

Read More

ಬೆಂಗಳೂರು: ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ. ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ (X) ಪೋಸ್ಟ್ ಹಾಕಿರುವ ಅವರು, ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ (Manifesto) ನೀಡಿರುವ ಭರವಸೆಯಂತೆ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು (Guarantee Scheme) ಜಾರಿಗೆ ತಂದಿದ್ದೇವೆ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ಜನರಿಂದ ಆಯ್ಕೆಯಾದ ಒಂದು ಸರ್ಕಾರದ ಕರ್ತವ್ಯ. ಈ ಯೋಜನೆಗಳು ದುರುಪಯೋಗ ಆಗದಂತೆ ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕಿರುವುದು ನಿಮ್ಮೆಲ್ಲರ ಕರ್ತವ್ಯ ಎಂದಿದ್ದಾರೆ. ನಿಮ್ಮದೇ ತೆರಿಗೆ ಹಣ, ನಿಮ್ಮದೇ ಕಲ್ಯಾಣ ಕಾರ್ಯಕ್ರಮಗಳು. ಇವು ಉಚಿತ ಯೋಜನೆಗಳು ಎಂಬ ತಪ್ಪು ಕಲ್ಪನೆ ಬೇಡ. ಗ್ಯಾರಂಟಿಗಳ ಪ್ರತಿ ಪೈಸೆಯೂ ನಿಮ್ಮ ಬದುಕಿಗೆ ಸದುಪಯೋಗವಾಗಬೇಕು. ಚುನಾವಣಾ ಪ್ರಣಾಳಿಕೆಯನ್ನು ಚುನಾವಣಾ ಪ್ರಚಾರಕ್ಕೆ ಸೀಮಿತಗೊಳಿಸದೆ ಅದನ್ನು ಕಾರ್ಯರೂಪಕ್ಕೆ ತಂದು ಜನರ ಬದುಕಲ್ಲಿ ಅವುಗಳ ಪ್ರತಿಫಲ ಕಾಣಬೇಕು ಎಂಬ ಆಶಯ ನಮ್ಮದು. ನಮ್ಮ ಸರ್ಕಾರದ ಸದಾಶಯಕ್ಕೆ ತಮ್ಮೆಲ್ಲರ ಬೆಂಬಲವಿರಲಿ.…

Read More

ಬೆಂಗಳೂರು: ಕರ್ನಾಟಕ ಎದುರಿಸುತ್ತಿರುವ ಕಾವೇರಿ ಜಲ ಸಂಕಷ್ಟವನ್ನು ಪರಿಹಾರ ಮಾಡುವ ಶಕ್ತಿ ಇರುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತ್ರ. ಈ ಚುನಾವಣೆ ಮುಗಿದ ನಂತರ ಮತ್ತೆ ಪ್ರಧಾನಿ ಆಗಲಿರುವ ಅವರು, ಈ ಜಲ ಸಂಕಷ್ಟಕ್ಕೆ ಪರಿಹಾರ ನೀಡಲಿದ್ದಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತಿ ವರ್ಷ ತಮಿಳುನಾಡು ರಾಜ್ಯದವರು ಕಾವೇರಿ ಜಲ ನಿರ್ವಹಣಾ ಸಮಿತಿ ಹಾಗೂ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಮುಂದೆ ಕರ್ನಾಟಕದಿಂದ ನೀರು ಕೊಡಿಸಿ ಎಂದು ಅರ್ಜಿ ಹಾಕುತ್ತಾರೆ. ನಮ್ಮ ಬಳಿ ನೀರು ಇಲ್ಲದೆ ಇದ್ದರೂ ನೀರು ಬಿಡಿ ಅಂತಾರೆ. ನಮ್ಮ ಅಧಿಕಾರಿಗಳು ಏನೇ ವಾದ ಮಾಡಿದರೂ ಪ್ರಯೋಜನ ಆಗಿಲ್ಲ. ಕಾವೇರಿ ಪ್ರಾಧಿಕಾರದವರು ಯಾವತ್ತು ಕೂಡ ನಮ್ಮ ರಾಜ್ಯಕ್ಕೆ ಬಂದು ನೀರು ಎಷ್ಟು ಇದೆ ಅಂತ ನೋಡಿಲ್ಲ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.…

Read More