Author: AIN Author

ಆಲೂಗಡ್ಡೆಯಲ್ಲಿ ಅನೇಕ ಪೋಷಕಾಂಶಗಳು ಸಮೃದ್ಧವಾಗಿದೆ. ಆದರೆ ಆಲೂಗಡ್ಡೆಯನ್ನು ಸರಿಯಾದ ರೀತಿಯಲ್ಲಿ ಸೇವಿಸಿದರೆ ಒಳ್ಳೆಯದಂತೆ. ಆಲೂಗಡ್ಡೆ 2 ಪ್ರತಿಶತದಷ್ಟು ಸಕ್ಕರೆಯಂಶವನ್ನು ಹೊಂದಿರುತ್ತದೆ. ಅಲ್ಲದೇ ಆಲೂಗಡ್ಡೆಯನ್ನು ಹೆಚ್ಚಾಗಿ ಬೇಯಿಸಿ ತಿನ್ನುತ್ತಾರೆ. ಆದರೆ ಆಲೂಗಡ್ಡೆಯನ್ನು ಬೇಯಿಸಿದಾಗ ಅದರ ಸಿಪ್ಪೆ ಕರಗುತ್ತದೆ. ಆದರೆ ಅದರಲ್ಲಿರುವ ಸಕ್ಕರೆಯ ಪ್ರಮಾಣ ಹಾಗೇ ಇರುತ್ತದೆ. ಇದನ್ನು ತಿಂದರೆ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ. ಹಾಗಾಗಿ ಮಧುಮೇಹಿಗಳು ಆಲೂಗಡ್ಡೆಯನ್ನು ಬೇಯಿಸಿ ತಿನ್ನಬೇಡಿ. ಹಾಗೇ ಕೆಲವರು ಆಲೂಗಡ್ಡೆಯನ್ನು ಹುರಿದು ತಿನ್ನುತ್ತಾರೆ. ಆದರೆ ಇದನ್ನು ಹುರಿಯುವುದರಿಂದ ಇದರಲ್ಲಿರುವ ಸಕ್ಕರೆಯಂಶ ಕರಗಿ ಹೋಗುತ್ತದೆ. ಇದನ್ನು ಮಧುಮೇಹಿಗಳು ಸೇವಿಸಬಹುದು. ಆದರೆ ಎಣ್ಣೆ ಮತ್ತು ಉಪ್ಪು ಅತಿಯಾಗಿ ಸೇರಿಸಿದ ಆಲೂಗಡ್ಡೆಯನ್ನು ಸೇವಿಸಿದರೆ ಕೊಲೆಸ್ಟ್ರಾಲ್, ಬಿಪಿಯಂತಹ ಸಮಸ್ಯೆಗಳು ಕಾಡುತ್ತದೆಯಂತೆ

Read More

ಪೇರಳೆ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಹೆಚ್ಚಿನ ಜನರಿಗೆ ತಿಳಿದಿಲ್ಲದ ವಿಷಯವೆಂದರೆ ಪೇರಳೆಯಲ್ಲಿ ನಿಂಬೆಗಿಂತ ವಿಟಮಿನ್ ಸಿ ಸಮೃದ್ಧವಾಗಿದೆ. ಹೆಚ್ಚಿನ ಮಟ್ಟದ ವಿಟಮಿನ್ ಸಿ ಇರುವುದರಿಂದ, ಪೇರಳೆ ತಿನ್ನುವುದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ಯಾವುದೇ ಸೋಂಕುಗಳನ್ನು ತಡೆಯುತ್ತದೆ ಮತ್ತು ಶೀತ ಮತ್ತು ಗಂಟಲು ನೋವಿಗೆ ಕಾರಣವಾಗುವುದಿಲ್ಲ. ಪೇರಳೆಯಲ್ಲಿರುವ ಫೈಬರ್ ಮಧುಮೇಹದಿಂದ ಬಳಲುತ್ತಿರುವವರಿಗೆ ಸಹಾಯ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಪೇರಳೆಯಲ್ಲಿರುವ ತಾಮ್ರವು ಥೈರಾಯ್ಡ್ ಸಮಸ್ಯೆಗಳನ್ನು ದೂರವಿಡುತ್ತದೆ. ಆದ್ದರಿಂದ ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿರುವವರು ದಿನಕ್ಕೆ ಒಂದು ಪೇರಳೆ ತಿನ್ನುವುದು ತುಂಬಾ ಒಳ್ಳೆಯದು. ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಉತ್ತಮ ಆಹಾರ ಆಯ್ಕೆಯಾಗಿದೆ.

Read More

ವೃದ್ಧಾಪ್ಯದಲ್ಲಿ ಕ್ಯಾನ್ಸರ್ ಗೆ ಬಲಿಯಾಗುವುದನ್ನು ತಪ್ಪಿಸಲು ಈ ಸಲಹೆ ಪಾಲಿಸಿ. ನೀವು ಆರೋಗ್ಯಕರ ಆಹಾರವನ್ನು ಸೇವಿಸಿ. ಇದು ಕ್ಯಾನ್ಸರ್ ನ ಅಪಾಯವನ್ನು ಕಡಿಮೆ ಮಾಡುತ್ತದೆ. ಅದಕ್ಕಾಗಿ ಹಣ್ಣುಗಳು, ತರಕಾರಿಗಳು, ವಾಲ್ ನಟ್ಸ್, ಪ್ರೋಟೀನ್ ಯುಕ್ತ ಆಹಾರವನ್ನು ಸೇವಿಸಿ. ಪ್ರತಿದಿನ ವ್ಯಾಯಾಮ ಮಾಡುವುದರಿಂದ ನೀವು ಜೀವಮಾನವಿಡೀ ಆರೋಗ್ಯವಾಗಿರಬಹುದು. ನೀವು ಪ್ರತಿದಿನ ಬೆಳಿಗ್ಗೆ ಸಾಧ್ಯವಾಗದಿದ್ದರೂ ಸಮಯ ಸಿಕ್ಕಾಗ ವ್ಯಾಯಾಮ ಮಾಡಿ. ಇದು ಕ್ಯಾನ್ಸರ್ ನ ಅಪಾಯವನ್ನು ಕಡಿಮೆ ಮಾಡುತ್ತದೆ. ನೀವು ಯಾವುದೇ ಕಾರಣಕ್ಕೂ ತಂಬಾಕನ್ನು ಬಳಸಬೇಡಿ. ಇದು ಕ್ಯಾನ್ಸರ್ ಮೂಲ ಕಾರಣವಾಗಿದೆ. ಇದರಿಂದ ಸಾವನಪ್ಪುವುದು ಖಚಿತ. ನೀವು ಆಲ್ಕೋಹಾಲ್ ಸೇವನೆಯನ್ನು ಕಡಿಮೆ ಮಾಡಿ. ಇದನ್ನು ಅತಿಯಾಗಿ ಸೇವಿಸಿದರೆ ಕ್ಯಾನ್ಸರ್ ನ ಅಪಾಯ ಹೆಚ್ಚಾಗುತ್ತದೆ. ಇದು ಲಿವರ್ ಹಾನಿಗೆ ಕಾರಣವಾಗುತ್ತದೆ. ಸೂರ್ಯನ ಹಾನಿಕಾರಕ ಕಿರಣಗಳಿಗೆ ನಿಮ್ಮ ದೇಹವನ್ನು ಒಡ್ಡಿಕೊಳ್ಳಬೇಡಿ. ಅದಕ್ಕಾಗಿ ಸನ್ ಸ್ಕ್ರೀನ್ ಗಳನ್ನು ಹಚ್ಚಿಕೊಳ್ಳಿ. ವಯಸ್ಸಾದಂತೆ ನಿಯಮಿತವಾಗಿ ವೈದ್ಯರ ಬಳಿ ತಪಾಸಣೆ ಮಾಡಿಸಿಕೊಳ್ಳಿ.

Read More

ಲೈಮಾ: ವಯಸ್ಕರ ಚಲನಚಿತ್ರ ಉದ್ಯಮದಲ್ಲಿ ತಾನು ಎದುರಿಸಿದ ಲೈಂಗಿಕ ಕಿರುಕುಳದ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದ ಪೆರುವಿನ ನೀಲಿ ಚಿತ್ರತಾರೆ ಥೈನಾ ಫೀಲ್ಡ್ಸ್‌(24) (Thaina Fields) ಅದಾದ ಒಂದೇ ತಿಂಗಳಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಆಕೆಯ ಆಪ್ತ ಸ್ನೇಹಿತ ಅಲೆಜಾಂಡ್ರಾ ಸ್ವೀಟ್ (Alejandra Sweet) ಅವರು ಸಂದರ್ಶನವೊಂದರಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ನನ್ನ ಸ್ನೇಹಿತೆಯ ಸಾವಿನಿಂದ ದುಃಖಿತನಾಗಿದ್ದೇನೆ, ಸದ್ಯಕ್ಕೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ಆಕೆಯನ್ನು ಪ್ರೀತಿಸುವವರೆಲ್ಲರೂ ಅವಳ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿ ಎಂದು ಹೇಳಿದ್ದಾರೆ. ಫೀಲ್ಡ್ ನೊಂದಿಗೆ ಕೆಲಸ ಮಾಡಿದ ಉತ್ಪಾದನಾ ಕಂಪನಿಗಳಲ್ಲಿ ಒಂದಾದ ಮಿಲ್ಕಿ ಪೆರು, ಥೈನಾ ಫೀಲ್ಡ್ಸ್‌ಗೆ ಸಂತಾಪ ಸೂಚಿಸಿದೆ. ವಯಸ್ಕ ಉದ್ಯಮದಲ್ಲಿ (Film Industry) ತಾನು ಎದುರಿಸಿದ ಲೈಂಗಿಕ ಕಿರುಕುಳದ ಬಗ್ಗೆ ಥೈನಾ ಫೀಲ್ಡ್ಸ್‌ ಇತ್ತೀಚೆಗೆ ಹೇಳಿಕೊಂಡಿದ್ದಳು. ಅಡಲ್ಟ್ಸ್‌ ಕಂಟೆಂಟ್‌ನಲ್ಲಿ ನಟಿಸಲು ಪ್ರಾರಂಭಿಸಿದ ನಂತರ ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದೆ. ತನ್ನನ್ನು ನೇಮಿಸಿಕೊಂಡವರು ತಮಗೆ ಬೇಕಾದುದ್ದನ್ನು ಮಾಡಬೇಕು ಎಂದು ಬಯಸುತ್ತಾರೆ. ಮಹಿಳೆಯರು ವಯಸ್ಕರ ಚಿತ್ರಗಳಲ್ಲಿ ನಟಿಸುವುದು…

Read More

ಸೂರ್ಯೋದಯ: 06:53, ಸೂರ್ಯಾಸ್ತ : 05:56 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪುಷ್ಯ ಮಾಸ , ಶುಕ್ಲ ಪಕ್ಷ, ದಕ್ಷಿಣಾಯನಮ, ಹೇಮಂತ ಋತು, ರಾಹು ಕಾಲ: 09:00 ನಿಂದ 10:30 ತನಕ ಯಮಗಂಡ: 01:30 ನಿಂದ 03:00 ತನಕ ಗುಳಿಕ ಕಾಲ: 06:00 ನಿಂದ 07:30 ತನಕ ಅಮೃತಕಾಲ: 1:02 ನಿಂದ 2:28 ತನಕ ಅಭಿಜಿತ್ ಮುಹುರ್ತ: ಮ.12:02 ನಿಂದ ಮ.12:46 ತನಕ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ: ಮಕ್ಕಳು ಮದುವೆಗೆ ಋಣಾತ್ಮಕ ಸಂದೇಶ, ತಡೆಹಿಡಿದ ಕಾಮಗಾರಿ ಸರಾಗ, ಹಾರ್ಡ್ವೇರ್ ಉದ್ಯಮದಾರರಿಗೆ ಧನ ಲಾಭ, ಗುತ್ತಿಗೆದಾರರಿಗೆ ನಿಂತಿರುವ ಕಾಮಗಾರಿ ಪುನರಾರಂಭ, ಹಳೆಯ ಬಿಲ್ ಮರುಪಾವತಿ, ಆರ್ಥಿಕ ಚೇತರಿಕೆ, ಭೂ ವ್ಯವಹಾರಗಳಲ್ಲಿ ಲಾಭ, ಶತ್ರುಗಳ ಕಿರಿಕಿರಿ ಎದುರಿಸುವಿರಿ, ಪತ್ನಿಯ ಆರೋಗ್ಯದಲ್ಲಿ ಚೇತರಿಕೆ,ಮದುವೆ ವಿಷಯಕ್ಕಾಗಿ…

Read More

ಬೆಂಗಳೂರು: ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸದಿರುವ ಕಾಂಗ್ರೆಸ್ ಪಕ್ಷದ ನಿಲುವನ್ನು ಟೀಕಿಸಿರುವ ಪ್ರತಿಪಕ್ಷದ ನಾಯಕ ಆರ್ ಅಶೋಕ, ಹಿಂದೂ ದ್ವೇಷ ಕಾಂಗ್ರೆಸ್ ನ ಕಣಕಣದಲ್ಲೂ ಇದೆ ಎಂದು ಆರೋಪಿಸಿದ್ದಾರೆ. ಈ ವಿಚಾರವಾಗಿ ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಸೋಮನಾಥ ದೇವಾಲಯದ ಉದ್ಘಾಟನೆಯಲ್ಲಿ ಭಾಗವಹಿಸದಿರುವ ವಿಚಾರವನ್ನು ಪ್ರಸ್ತಾಪಿಸಿರುವ ಅವರು, https://ainlivenews.com/if-you-have-a-gmail-account-and-are-not-using-it-you-must-read-this-story/ ಕಾಂಗ್ರೆಸ್ ಹಿಂದಿನಿಂದಲೂ ಹಿಂದೂದ್ವೇಷವನ್ನು ಮಾಡುತ್ತಾ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ತಾಲತಾಣ ಎಕ್ಸ್ ನಲ್ಲಿ ಬರೆದಿರುವ ಅವರು, ಅಯೋಧ್ಯೆ ರಾಮಮಂದಿರ ಬಿಜೆಪಿ ಆರೆಸ್ಸೆಸ್ ಕಾರ್ಯಕ್ರಮ ಎಂದು ಹೇಳುತ್ತಿರುವ ಕಾಂಗ್ರೆಸ್ ಬಿಜೆಪಿ ಇನ್ನೂ ಸ್ಥಾಪನೆಯೇ ಆಗಿರದ ಕಾಲದಲ್ಲಿ ಸೋಮನಾಥ ದೇವಾಲಯಕ್ಕೆ ಹೋಗದಿರಲು ಕಾರಣವೇನು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

Read More

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕ ಶಿಕ್ಷಕ ಹಣಮೇಗೌಡನ ವಿರುದ್ಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿ ಕೇಸ್ ದಾಖಲಾಗಿದೆ. ಕಾಮುಕ ಶಿಕ್ಷಕ ಹಣಮೇಗೌಡ ಎರಡ್ಮೂರು ವರ್ಷಗಳಿಂದ ವಿದ್ಯಾರ್ಥಿಯರಿಗೆ ಲೈಂಗಿಕ ಕಿರುಕುಳ (Sexual Harassment) ನೀಡ್ತಿದ್ದ. ಈಗಾಗಲೇ ಅನುಚಿತ ವರ್ತನೆ ಆರೋಪದಡಿ ಶಿಕ್ಷಕ ಹಣಮೇಗೌಡನನ್ನು ಜಿಲ್ಲಾ ಪಂಚಾಯತಿ ಸಿಇಓ ಗರೀಮಾ ಪನ್ವಾರ್ ಅಮಾನತು ಮಾಡಿ ಆದೇಶಿಸಿದ್ರು. ಅಲ್ಲದೇ ಇದೇ ಘಟನೆಗೆ ಸಂಬಂಧಿಸಿದಂತೆ ನಾಲ್ಕು ಜನ ಶಿಕ್ಷಕ ಇಲಾಖೆ ಅಧಿಕಾರಿಗಳ ತಂಡದಿಂದ ಶಾಲೆಗೆ ಭೇಟಿ ವಿದ್ಯಾರ್ಥಿನಿಯರಿಂದ ಮಾಹಿತಿ ಸಂಗ್ರಹಿಸಲಾಗಿತ್ತು. https://ainlivenews.com/if-you-have-a-gmail-account-and-are-not-using-it-you-must-read-this-story/ ಅಧಿಕಾರಿಗಳ ತಂಡದ ಭೇಟಿ ವೇಳೆ ಶಾಲೆಯ ವಿದ್ಯಾರ್ಥಿನಿಯರು (Students) ಶಿಕ್ಷಕನ ಕರಾಳ ಮುಖ ಅನಾವರಣ ಮಾಡಿದ್ರು. ಲೈಂಗಿಕ ಕಿರುಕುಳ ನೀಡಿದ್ದರ ಬಗ್ಗೆ ಕಣ್ಣೀರಾಕುತ್ತಲೇ ಅಧಿಕಾರಿಗಳ ಮುಂದೆ ಎಲ್ಲಾ ವಿಚಾರವನ್ನ ವಿದ್ಯಾರ್ಥಿನಿಯರು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ರು. ಪರಿಶೀಲನೆ ವರದಿಯ ಆಧಾರದ ಮೇಲೆ ಯಾದಗಿರಿ ಡಿಡಿಪಿಐ ಮಂಜುನಾಥ ಎಚ್.ಟಿ ಅವರಿಂದ ಶಿಕ್ಷಕನ ವಿರುದ್ಧ…

Read More

ಬೆಂಗಳೂರು: ಹಾವೇರಿಯಲ್ಲಿ (Haveri) ನಡೆದ ನೈತಿಕ ಪೊಲೀಸ್‍ಗಿರಿ (Moral Policing) ಪ್ರಕರಣದಲ್ಲಿ ಕೆಲವರ ಬಂಧನವಾಗಿದೆ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ (G.Parameshwar) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾವೇರಿ ನೈತಿಕ ಪೊಲೀಸ್‍ಗಿರಿ ವಿಚಾರವಾಗಿ ಸಂತ್ರಸ್ತೆಯಿಂದ ಗ್ಯಾಂಗ್ ರೇಪ್ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಅವರು ಹಾವೇರಿ ಕೇಸ್ ತನಿಖೆ ನಡೆಯುತ್ತಿದೆ. ಮೊದಲು ಆಕೆ ಗ್ಯಾಂಗ್ ರೇಪ್ ಎಂದು ದೂರು ಕೊಟ್ಟಿರಲಿಲ್ಲ. ನಂತರ ಆಕೆ ರೇಪ್ ಎಂದು ದೂರು ಕೊಟ್ಟಿದ್ದಾರೆ. ಈಗಾಗಲೇ ಪ್ರಕರಣದಲ್ಲಿ ಹಲವರ ಬಂಧನ ಅಗಿದೆ. ಈ ಬಗ್ಗೆ ತನಿಖೆ ನಡೆಯಲಿದೆ. ತನಿಖೆ ಬಳಿಕ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ. https://ainlivenews.com/if-you-have-a-gmail-account-and-are-not-using-it-you-must-read-this-story/ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡೋ ಕೆಲಸ ಮಾಡುವುದಿಲ್ಲ. ಈ ಪ್ರಕರಣವನ್ನು ಲೈಟ್ ಆಗಿ ತೆಗೆದುಕೊಂಡು ಬಿ ರಿಪೋರ್ಟ್ ಹಾಕೋಕು ಬಿಡುವುದಿಲ್ಲ. ರೇಪ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಯಲಿದೆ. ಅಲ್ಲದೇ ಟೆಸ್ಟ್ ಮಾಡುವುದು ಸೇರಿದಂತೆ…

Read More

ಶಿವಮೊಗ್ಗ: ಎರಡು ವರ್ಷದವರೆಗೆ ಭತ್ಯ ಕೊಡುತ್ತೇವೆ. ಸ್ಕಿಲ್ ಟ್ರೈನಿಂಗ್ ಸಹ ಕೊಡುತ್ತೇವೆ. ನಿರುದ್ಯೋಗ ಸಮಸ್ಯೆ ಬಗೆಹರಿಸಬೇಕು. ಯುವಕ-ಯುವತಿಯರಿಗೆ ಆತ್ಮಸ್ಥೈರ್ಯ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಯುವನಿಧಿಗೆ (Yuvanidhi) ಚಾಲನೆ ಕೊಟ್ಟ ಬಳಿಕ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಇಂದು ಐತಿಹಾಸಿಕ ದಿನವಾಗಿದೆ. ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಇಲ್ಲಿ ಸೇರಿದ್ದಾರೆ. ನಿಮ್ಮೆಲ್ಲರ ಎದುರಿನಲ್ಲಿ ಯುವನಿಧಿಗೆ ಚಾಲನೆ ಕೊಡ್ತಿದ್ದೇವೆ. ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿದ್ದೆವು. ಶಕ್ತಿ ಯೋಜನೆ, ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಅನ್ಮಭಾಗ್ಯ, ಯುವನಿಧಿ ಎಲ್ಲಾ ಭರವಸೆ ನೀಡಿದ್ದೆವು ಎಂದು ಹೇಳಿದರು. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಆಹಾರ ಪದಾರ್ಥ ಬೆಲೆ ಗಗನಕ್ಕೇರಿದೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತ ವರ್ಗಕ್ಕೆ ಆರ್ಥಿಕ ಶಕ್ತಿ ತುಂಬಬೇಕು. ಬೆಲೆ ಏರಿಕೆ ಸಂದರ್ಭದಲ್ಲಿ ಜೀವನ ಸಾಗಿಸೋದು ಕಷ್ಟವಾಗುತ್ತದೆ. ಅನೇಕ ಭರವಸೆ ಕೊಟ್ಟಿದ್ದೆವು. ಐದು ಗ್ಯಾರಂಟಿ ಜಾರಿಗೆ ತಂದೇ ತರುತ್ತೇವೆ ಎಂದಿದ್ದೆವು. ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದು ಹೇಳಿದರು. ಬಹಳ ಜನ ಯುವನಿಧಿ ಏಕೆ ಜಾರಿಗೆ ತಂದಿಲ್ಲ ಅಂತಿದ್ದರು.…

Read More

ಬೆಂಗಳೂರು: ಹಾವೇರಿಯ ನಡೆದ ನೈತಿಕ ಪೊಲೀಸ್‌ಗಿರಿ ಬಗ್ಗೆ ರಾಜ್ಯ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್‌ಗಿರಿ ನಡೆದಾಗ ಜೋರಾಗಿ ಮಾತನಾಡುತ್ತಿದ್ದರು. ಈಗ ಹಾವೇರಿ ಪ್ರಕರಣದ ಕುರಿತು ಸಿಎಂ ಮಾತನಾಡುತ್ತಿಲ್ಲ. ಲೈಂಗಿಕ ದೌರ್ಜನ್ಯಕ್ಕೆ (Sexual Assault) ಒಳಗಾದವಳು ಅಲ್ಪಸಂಖ್ಯಾತ ಮಹಿಳೆ ಅವಳಿಗೂ ರಕ್ಷಣೆ ನೀಡದೇ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ. https://ainlivenews.com/if-you-have-a-gmail-account-and-are-not-using-it-you-must-read-this-story/ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವತಿ ಮೇಲೆ ಗ್ಯಾಂಗ್ ರೇಪ್ ಆಗಿದೆ. ಆರಂಭದಲ್ಲಿ ಪೊಲೀಸರು ಅದನ್ನು ತಳ್ಳಿ ಹಾಕುವ ಪ್ರಯತ್ನ ‌ನಡೆಸಿದರು. ಆರೋಪಿಗಳಿಗೆ ಜಾಮೀನು ಸಿಗುವಂತಹ ಪ್ರಕರಣ ದಾಖಲಿಸಿದರು. ಯುವತಿ ಧೈರ್ಯವಾಗಿ ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿದ್ದಾಳೆ, ಇದರಿಂದ ಪ್ರಕರಣ ಗಂಭೀರವಾಗಿದೆ. ಮತ್ತೊಂದು ಬಾರಿ ಯುವತಿಯ ಮೆಡಿಕೆಲ್ ಟೆಸ್ಟ್ ಆಗಬೇಕು. ಸಿಎಂ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಚಾಂಪಿಯನ್. ಇಲ್ಲಿ ಅಲ್ಪಸಂಖ್ಯಾತ ಯುವತಿಯ ಮೇಲೆ ಅತ್ಯಾಚಾರವಾಗಿದೆ. ಆ ಯುವತಿಯ ರಕ್ಷಣೆಗೂ ಮುಂದಾಗುತ್ತಿಲ್ಲ ಎಂದು ದೂರಿದ್ದಾರೆ.

Read More