Author: AIN Author

ಧಾರವಾಡ: ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ರಾಜನಗರದಲ್ಲಿ ನಡೆದಿದೆ. ಸುಂದರವ್ವ ಗಂಬೇರ ಎಂಬ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡವಳು. ತಾನು ಮಾಡಿದ ಸಾಲ ತೀರಿಸಲಾಗದೇ ಸುಂದರವ್ವ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ವ ಸಹಾಯ ಸಂಘದಲ್ಲಿ ಈಕೆ ಸಾಲ ಮಾಡಿದ್ದು, ಅದಕ್ಕೆ ಸಂಘದ ಕೆಲವರು ಕಿರುಕುಳ ನೀಡುತ್ತಿದ್ದಾರೆ. ಜೊತೆಗೆ ತನ್ನಿಂದ ಸಾಲ ಪಡೆದವರು ಹಣ ವಾಪಸ್ ಕೊಡದೇ ಸತಾಯಿಸುತ್ತಿದ್ದಾರೆ. https://ainlivenews.com/nayantaras-annapoorni-movie-removed-from-netfix/ ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿರುವ ತನಗೆ ಅನೇಕರು ನಿಂದನೆ ಮಾಡುತ್ತಿದ್ದಾರೆ. ನಾನು ಆತ್ಮಹತ್ಯೆ ಮಾಡಿಕೊಂಡ ನಂತರ ನನ್ನ ಶವವನ್ನು ಯಾವುದಾದರೂ ಆಸ್ಪತ್ರೆಗೆ ಕೊಡಿ. ಅಂತ್ಯ ಸಂಸ್ಕಾರಕ್ಕೂ ನನ್ನ ಬಳಿ ಹಣವಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಹೊಸಪೇಟೆ: ಲಾಡ್ಜ್​ ಒಂದರ ನೆಲಮಹಡಿಯಲ್ಲಿ ಅಡಗಿದ್ದ ಸತ್ಯವನ್ನ ಕಂಡು ಜನರು ಶಾಕ್ ಆಗಿದ್ದಾರೆ. ಹೌದು,ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ರಾಣಿಪೇಟ್‌ನ ಲಾಡ್ಜ್​ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರೋ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಹೊಸಪೇಟೆ ಪೊಲೀಸರು ಜಂಟಿಯಾಗಿ ಲಾಡ್ಜ್ ಮೇಲೆ ದಾಳಿ ನಡೆಸಿದ್ದರು. ವೇಳೆ ಲಾಡ್ಜ್​ನ ನೆಲಮಹಡಿಯಲ್ಲಿ ಅಡಗಿದ್ದ ಅಸಲಿ ಸತ್ಯ ಪೊಲೀಸರನ್ನೇ ಬೆಪ್ಪಾಗಿಸಿತ್ತು. 6 ಜನರನ್ನ ವಶಕ್ಕೆ ಪಡೆದುಕೊಂಡ ಪೊಲೀಸರು ನೆಲಮಹಡಿಯಲ್ಲಿದ್ದ ಕಿಂಡಿಯೊಂದನ್ನು ಓಪನ್​ ಮಾಡಿದ್ದ ಪೊಲೀಸರಿಗೆ ವೇಶ್ಯಾವಾಟಿಕೆ ದಂಧೆಯ ಸತ್ಯದ ಅನಾವರಣವಾಗಿತ್ತು. ಕಿಂಡಿಯೊಳಗಿದ್ದ ನಾಲ್ಕು ಮಹಿಳೆಯರು ಪೊಲೀಸರನ್ನು ನೋಡ್ತಿದ್ದಂತೆ ಕಕ್ಕಾಬಿಕ್ಕಿಯಾಗಿದ್ರು. ನಾಲ್ವರು ಸಂತ್ರಸ್ತ ಮಹಿಳೆಯರನ್ನ ರಕ್ಷಣೆ ಮಾಡಿದ ಪೊಲೀಸರು, ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ 6 ಜನರನ್ನ ವಶಕ್ಕೆ ಪಡೆದರು. ಅಂದಾಗೆ ಹೊರರಾಜ್ಯಗಳಿಂದ ಹೊಸಪೇಟೆಗೆ ಮಹಿಳೆಯರನ್ನು ಕರೆತಂದು ಖದೀಮರು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಅಲ್ಲದೇ ಲಾಡ್ಜ್​ನಲ್ಲಿ ಯಾರಿಗೂ ಅನುಮಾನ ಬಾರದಂತೆ ನೆಲಮಹಡಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಇನ್ನೂ ದಂಧೆಯಲ್ಲಿ ತೊಡಗುತ್ತಿದ್ದ ಮಹಿಳೆಯರಿಗಾಗೇ ನೆಲಮಹಡಿಯಲ್ಲಿ ಕಿಂಡಿಯೊಂದನ್ನ ನಿರ್ಮಿಸಿ ಅದರಲ್ಲಿ ಅವರನ್ನ…

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಸ್ಪತ್ರೆ ವೈದ್ಯರ ಎಡವಟ್ಟಿನಿಂದ ಬಾಲಕನೊಬ್ಬ ನರಳಿ ನರಳಿ ಪ್ರಾಣಬಿಟ್ಟ ವಿಚಾರ ಬೆಳಕಿಗೆ ಬಂದಿದೆ. ನಿರಂತರ 6 ವರ್ಷ ಕೋಮಾದಲ್ಲಿದ್ದು ನರಕ ಯಾತನೆ ಅನುಭವಿಸಿ ಪ್ರಾನ ಬಿಟ್ಟಿದ್ದಾನೆ. ಏಪ್ರಿಲ್ 4 ,2017 ರಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ವಿಘ್ನೇಶ್ (20), 2024ರ ಜನವರಿ 3 ರಂದು ಮೃತಪಟ್ಟಿದ್ದಾನೆ. ವೈದ್ಯರ ವಿರುದ್ಧ ಮೃತ ಯುವಕನ ಪೋಷಕರು ಬೆಂಗಳೂರು ನಗರದ ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹರ್ನಿಯಾ ಚಿಕಿತ್ಸೆಗೆಂದು 2017ರ ಏಪ್ರಿಲ್ 4 ರಂದು ವಿಘ್ನೇಶ್​ನನ್ನು ಪೋಷಕರು ಸುಬ್ರಹ್ಮಣ್ಯನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಶಸ್ತ್ರ ಚಿಕಿತ್ಸೆ ಸಮಯದಲ್ಲಿ ವೈದ್ಯರು ಮೂರು ಬಾರಿ ಅನಸ್ತೇಷಿಯ ನೀಡಿದ್ದರು. ಇದರಿಂದಾಗಿ ಪ್ರಜ್ಞೆ ಕಳೆದುಕೊಂಡಿದ್ದ ವಿಘ್ನೇಶ್ ಕೋಮಾಕ್ಕೆ ಜಾರಿದ್ದನು. ಘಟನೆ ಸಂಬಂಧ ಬನಶಂಕರಿ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ನೀಡಿದ್ದರು. https://ainlivenews.com/nayantaras-annapoorni-movie-removed-from-netfix/ ಯುವಕನ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆ ಎಚ್ಚೆತ್ತ ವೈದ್ಯರು ಚಿಕಿತ್ಸೆ ವೆಚ್ಚ ಭರಿಸೋದಾಗಿ ಹೇಳಿದ್ದರು. ಚಿಕಿತ್ಸೆಗೆಂದು‌ 19 ಲಕ್ಷ ಖರ್ಚು ಮಾಡಲಾಗಿದೆ.…

Read More

ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ “ಕಾಂಗರೂ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಮಾತಿನ ಜೋಡಣೆ(ಡಬ್ಬಿಂಗ್) ಸಹ ಪೂರ್ಣವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. “ಕಾಂಗರೂ” ಚಿತ್ರ ಕನ್ನಡ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಮೋಷನ್ ಪೋಸ್ಟರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಒಬ್ಬರು ನಮ್ಮ ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಲಿದ್ದಾರೆ. “ಕಾಂಗರೂ” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಿರುವ ಸೂಪರ್ ಸ್ಟಾರ್ ಯಾರು ಎಂಬುದನ್ನು ಸದ್ಯದಲ್ಲೇ ತಿಳಿಸುವುದಾಗಿ ನಿರ್ದೇಶಕ ಕಿಶೋರ್ ಮೇಗಳಮನೆ ಹೇಳಿದ್ದಾರೆ.ಆದಿತ್ಯ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದು, ಸೈಕಿಯಾಟ್ರಿಸ್ಟ್ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ…

Read More

ಬೆಂಗಳೂರು: ಅತಿ ಶೀಘ್ರದಲ್ಲೇ ಲೋಕಸಭಾ ಅಭ್ಯರ್ಥಿಗಳ ಆಯ್ಕೆ ಆಗಬೇಕು ಎಂಬ ಆಶಯ ನಮ್ಮದು. ಆಗ ಕಾರ್ಯಕರ್ತರಿಗೂ ಗೊಂದಲ ಇರುವುದಿಲ್ಲ. ಇದೇ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಕೇಂದ್ರದ ವರಿಷ್ಠರ ಜೊತೆ ಇದರ ಕುರಿತು ಚರ್ಚಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಅತಿ ಶೀಘ್ರವೇ ದೆಹಲಿಗೆ ತೆರಳುತ್ತೇನೆ. ವರಿಷ್ಠರನ್ನು ಭೇಟಿ ಮಾಡುತ್ತೇನೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. https://ainlivenews.com/nayantaras-annapoorni-movie-removed-from-netfix/ ಭ್ರಷ್ಟ, ದುಷ್ಟ, ರೈತವಿರೋಧಿ, ಬಡವರ ವಿರೋಧಿ ಸರಕಾರವನ್ನು ಲೋಕಸಭಾ ಚುನಾವಣೆಯಲ್ಲಿ ಮಣಿಸಬೇಕಿದೆ. ಆದ್ದರಿಂದ ವರಿಷ್ಠರನ್ನು ಭೇಟಿ ಮಾಡಿ ಅತಿ ಶೀಘ್ರವೇ ಅಭ್ಯರ್ಥಿಗಳ ಕುರಿತು ಸ್ಪಷ್ಟತೆ ಕೊಡಲು ಮನವಿ ಮಾಡಲಿದ್ದೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ತನ್ನ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡತಕ್ಕ ಫಲಿತಾಂಶವನ್ನು ಪಡೆಯಲಿದೆ ಎಂದು ವಿಶ್ವಾಸದಿಂದ ನುಡಿದರು. ಕರ್ನಾಟಕದ ಎಲ್ಲ 28 ಸ್ಥಾನಗಳನ್ನು ಬಿಜೆಪಿ ಗೆಲ್ಲುವಂತೆ ಮಾಡಿ ಮೋದಿಜೀ ಅವರಿಗೆ ಬೆಂಬಲ ನೀಡುವ ವಿಶ್ವಾಸ ಇದೆ ಎಂದು ತಿಳಿಸಿದರು.

Read More

ಈ ಹಿಂದೆ “ಶಂಭೋ ಶಿವ ಶಂಕರ” ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದ, ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ನಾಯಕ – ನಾಯಕಿಯಾಗಿ ನಟಿಸಿರುವ “ಬಿಂಗೊ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಆರ್ ಕೆ ಚಂದನ್ , ರಾಗಿಣಿ ದ್ವಿವೇದಿ, ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಸುಮಧುರವಾಗಿ ಮೂಡಿಬಂದಿದೆ. ಸದ್ಯದಲ್ಲೇ ಅದ್ದೂರಿ ಸಮಾರಂಭ ಆಯೋಜಿಸಿ ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ. ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ.…

Read More

ಹಾಸನ : ನಾನು ಈ ಜಿಲ್ಲೆಯಲ್ಲಿ ಬೇನಾಮಿ ಆಸ್ತಿಮಾಡಿದ್ದರೆ ಸರ್ಕಾರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಿ. ಯಾವುದೇ ರೀತಿಯ ತನಿಖೆಗೂ ನಾನು ಸಿದ್ದ ಎಂದು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಆರೋಪಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಗುಡುಗಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಸಾರ್ವಜನಿಕ ಜೀವನದಲ್ಲಿ ಇರೋ ವ್ಯಕ್ತಿಯಿಂದ ದಾಖಲೆ ಇಲ್ಲದೆ ಇಲ್ಲದೆ, ಪೂರ್ವಾಗ್ರಹ ಪೀಡಿತರಾಗಿ ಹೋರಾಟ ಮಾಡಿದ್ದಾರೆ ಎಂದು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ವಿರುದ್ದ ಕಿಡಿಕಾರಿದರು. https://ainlivenews.com/nayantaras-annapoorni-movie-removed-from-netfix/ ಸತ್ಯವಿಲ್ಲದ ವಿಚಾರವನ್ನು ರಾಜಕೀಯಗೊಳಿಸುತ್ತಿರುವುದು ದುರದೃಷ್ಟಕರ. ಅನ್ಯಾಯಕ್ಕೆ ಒಳಗಾದ ಮಹಿಳೆ ಹೆಸರಿನಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೇಟ್ ಪಡೆಯೋ ಯತ್ನ ಮಾಡುತ್ತಿದ್ದಾರೆ. ಒಂದು ವರ್ಷದ ಹಿಂದಿನ ವಿಚಾರ ಇಟ್ಟು ಕೊಂಡು ಆರೋಪ ಮಾಡುವುದು ಸರಿಯಲ್ಲ. ಅಂತಹ ಆರೋಪ ಏನಾದ್ರು ಇದ್ದರೆ ಯಾವುದೇ ತನಿಖೆ ಬೇಕಿದ್ದರೆ ಮಾಡಲಿ ಎಂದು ಸವಾಲು ಹಾಕಿದರು.

Read More

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಯಲ್ಲಿ ಒಂಟಿ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ಆಸೆಗೆ ಒಂಟಿ ಮಹಿಳೆಯನ್ನ ಕೊಲೆ ಮಾಡಿದ ಆರೋಪಿಯನ್ನೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ರಜಿನ್ನೇಶ್ ಬಂಧಿತ ಆರೋಪಿಯಾಗಿದ್ದು, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಬೆಟ್ಟದಾಸನಪುರ ಸಾಯಿ ಶಕ್ತಿ ಬಡಾವಣೆಯಲ್ಲಿ ಕೊಲೆಯಾಗಿತ್ತು. ಮಹಿಳೆ ಪತಿ ಹಾರ್ಡ್ವೇರ್ ಶಾಪ್ ಜತೆ ಕಾಂಟ್ರಾಕ್ಟ್ ಕೆಲಸ ಮಾಡುತ್ತಿದ್ದರು. ಮಕ್ಕಳು ಶಾಲೆಗೆ ಹೋಗಿದ್ದರು. ಈ ವೇಳೆ ಮನೆಗೆ ನುಂಗಿ ಒಬ್ಬಂಟಿಯಾಗಿದ್ದ ಮಹಿಳೆಯ ಕತ್ತು ಹಿಸುಕಿ ಕೊಲೆ ಮಾಡಿದ್ದರು. ಮಧ್ಯಾಹ್ನ ಮಕ್ಕಳು ಶಾಲೆ ಮುಗಿಸಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಜನೀಶ್ ಕುಮಾರ್ ಎಂಬಾತ ಮಹಿಳೆಯನ್ನೂ ಕೊಂದು ಪರಾರಿ ಆಗಿದ್ದ. ಅಂದಹಾಗೇ ಮಹಿಳೆಯ ಪತಿ ಪೇಂಟ್ ಡಿಲರ್‌ಶಿಪ್‌ ಹೊಂದಿದ್ದರೆ, ಮಹಿಳೆಯ ಸಹೋದರ ಏರಿಯಾದಲ್ಲಿ ಪೇಂಟ್ ಅಂಗಡಿ ನಡೆಸುತ್ತಿದ್ದ. ಹೀಗಿದ್ದಾಗ ರಜನೀಶ್‌ ಕಳೆದ ಒಂದೂವರೆ ವರ್ಷಗಳ ಹಿಂದೆ ಈ ಕುಟುಂಬಕ್ಕೆ ಪರಿಚಿತನಾಗಿದ್ದ.…

Read More

ಬೆಂಗಳೂರು: ಲೋಕಸಭೆಗೆ ಸ್ಪರ್ಧೆ ಮಾಡುವ ಬಗ್ಗೆ ಕಾರ್ಯಕರ್ತರು, ನಾಯಕರ ಬಳಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ರಾಜ್ಯಮಟ್ಟದ ನಾಯಕರು. ಕುಮಾರಸ್ವಾಮಿ ಅವರನ್ನು ಜನ ಪ್ರೀತಿ ಕೊಟ್ಟು ಬೆಳೆಸಿದ್ದಾರೆ. ಹಲವಾರು ಕ್ಷೇತ್ರಗಳಲ್ಲಿ ಕುಮಾರಸ್ವಾಮಿ ನಿಲ್ಲಬೇಕು ಎಂಬ ಬೇಡಿಕೆ ಇದೆ.ಅದರಲ್ಲಿ ಮಂಡ್ಯ ಜಿಲ್ಲೆ ಕೂಡಾ ಒಂದು. ಸ್ಪರ್ಧೆ ಮಾಡುವ ವಿಚಾರವಾಗಿ ಪಕ್ಷದ ಕಾರ್ಯಕರ್ತರು, ನಾಯಕರು ಚರ್ಚೆ ಮಾಡುತ್ತೇವೆ. ಸೂಕ್ತ ಸಮಯದಲ್ಲಿ ಸೂಕ್ತವಾದ ನಿರ್ಧಾರ ತಿಳಿಸುತ್ತೇವೆ ಎಂದರು. ಇನ್ನೂ ಮಂಡ್ಯದಲ್ಲಿ ಸುಮಲತಾ ಅವರೇ ಸ್ಪರ್ಧೆ ಮಾಡುತ್ತಾರೆ ಎಂಬ ಆಪ್ತರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆಪ್ತರ ಹೇಳಿಕೆ ಬಗ್ಗೆ ನನಗೇನು ಗೊತ್ತಿಲ್ಲ. ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬೆಂಬಲ ಕೊಟ್ಟಿರುವ ಬಗ್ಗೆ ಹಲವಾರು ಕಡೆ ಮಾತನಾಡಿದ್ದಾರೆ. ಲೋಕಸಭೆ ಚುನಾವಣೆ ವಿಚಾರ‌ವಾಗಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡುವ ಹೋಗುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Read More

ಬೆಂಗಳೂರು: ಬಿಜೆಪಿಗರು ಅಯೋಧ್ಯೆಗೆ ಇವಾಗ ಏಕೆ ಹೊಗ್ತಿದ್ದಾರೆ? ಶ್ರೀರಾಮಚಂದ್ರ ಇಲ್ಲಿ ಇಲ್ವಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ‌ಗೈರು ನಿರ್ಧಾರ ವಿವಾದದ ಕುರಿತಾಗಿ ಪ್ರತಿಕ್ರಿಯೆ ನೀಡಿ, ರಾಮಮಂದಿರಕ್ಕೆ ನಮ್ಮ ವಿರೋಧ ಇಲ್ಲ, ಬದಲಾಗಿ ಬಿಜೆಪಿ ರಾಜಕೀಯಕ್ಕೆ ನಮ್ಮ ವಿರೋಧ ಎಂದು ಹೇಳಿದರು. ನಾವು ಶ್ರೀರಾಮ ಚಂದ್ರನ ವಿರುದ್ಧವಾಗಿಲ್ಲ. ಆದರೆ, ಬಿಜೆಪಿಯವರು ರಾಜಕೀಯ ಮಾಡೋಕೆ ಹೊರಟಿದ್ದಾರೆ‌. ಅದನ್ನ ಒಂದು ದೊಡ್ಡ ರಾಜಕೀಯ ವಿಷಯವನ್ನಾಗಿ ಮಾಡಿಕೊಂಡಿದ್ದಾರೆ ಎಂದರು.  ಶ್ರೀರಾಮಚಂದ್ರನನ್ನು ಬಿಜೆಪಿಯವರು ರಾಜಕೀಯ ವಿಷಯವಾನ್ನಾಗಿ ಮಾಡಿಕೊಂಡಿದ್ದಾರೆ. ಅದನ್ನು ನಾವು ವಿರೋಧ ಮಾಡ್ತಿದ್ದೇವೆ ಅಷ್ಟೇ. ನಾವೆಲ್ಲ ಶ್ರೀರಾಮಚಂದ್ರನ ಭಕ್ತರೇ. ಕೇಂದ್ರ ಸಚಿವರುಗಳು ರಾಜಕೀಯ ಮಾತನಾಡ್ತಿದ್ದಾರೆ ಅಷ್ಟೇ. https://ainlivenews.com/nayantaras-annapoorni-movie-removed-from-netfix/ ರಾಜಕೀಯ ಮಾತನಾಡೋರಿಗೆ ಔಷಧವಿಲ್ಲ ಎಂದರು. ನಾವು ಶ್ರೀರಾಮಚಂದ್ರನ ವಿರುದ್ಧ ವಿಲ್ಲ. ಶ್ರೀರಾಮಚಂದ್ರನನ್ನ ನಾವು ಗೌರವಿಸುತ್ತೇವೆ, ಪೂಜೆ ಮಾಡ್ತೀವಿ, ಭಜನೆ ಮಾಡ್ತೀವಿ. ಅಷ್ಟೇ ಅಲ್ಲ, ರಾಮಮಂದಿರ ಕಟ್ಟಿದ್ದೇವೆ ನಾವು ಎಂದು ಪಕ್ಷದ ನಡೆಯನ್ನು ಸಮರ್ಥಿಸಿಕೊಂಡರು

Read More