Author: AIN Author

ದೆಹಲಿ: ಟೀಂ ಇಂಡಿಯಾದ ವೇಗಿ ಮೊಹಮ್ಮದ್‌ ಶಮಿ (Mohammed Shami) ದೇಶದ 2ನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ (Arjuna Award) ಸ್ವೀಕರಿಸಿದ್ದಾರೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಂದ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದರು. ಇದರೊಂದಿಗೆ ಅನೇಕ ಕ್ರೀಡಾತಾರೆಗಳು ಅರ್ಜುನ ಪ್ರಶಸ್ತಿ ಪಡೆದು ಸಂತಸಪಟ್ಟರು. ಶಮಿ ಸೇರಿದಂತೆ ಇತರ ಕ್ರೀಡಾಪಟುಗಳು ತೋರಿದ್ದ ಅದ್ಭುತ ಪ್ರದರ್ಶನಕ್ಕಾಗಿ 2023ರಲ್ಲಿ ಕೇಂದ್ರ ಸರ್ಕಾರ ಪ್ರಶಸ್ತಿ ಘೋಷಣೆ ಮಾಡಿತ್ತು. ಹಿಂದಿನ 4 ವರ್ಷಗಳ ಅವಧಿಯಲ್ಲಿ ತೋರಿದ ಪ್ರದರ್ಶನ, ನಾಯಕತ್ವದ ಬೆಳವಣಿಗೆ, ಕ್ರೀಡಾ ಮನೋಭಾವ, ಶಿಸ್ತಿನ ಪ್ರಜ್ಞೆ ಈ ಮಾನದಂಡಗಳ ಆಧಾರದದಲ್ಲಿ ಪ್ರಶಸ್ತಿಗೆ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿತ್ತು. ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ (World Cup 2023) ಟೂರ್ನಿಯಲ್ಲಿ ಶಮಿ ಅದ್ಭುತ ಸಾಧನೆ ಮಾಡಿದ್ದರು. 7 ಪಂದ್ಯಗಳನ್ನಾಡಿದರೂ 24 ವಿಕೆಟ್‌ಗಳನ್ನು ಪಡೆಯುವ ಮೂಲಕ 2023ರ ಆವೃತ್ತಿಯಲ್ಲಿ ಅತಿಹೆಚ್ಚು ವಿಕೆಟ್‌ ಪಡೆದ ಸಾಧನೆ…

Read More

ಬಿಗ್‌ಬಾಸ್ (Bigg Boss Kannada) ಕನ್ನಡ ಹತ್ತನೇ ಸೀಸನ್‌ ಫೈನಲ್‌ ಹಂತಕ್ಕೆ ಇನ್ನು ಎರಡೇ ಹೆಜ್ಜೆ ಬಾಕಿ ಇದೆ. ಈ ಹಂತದಲ್ಲಿ ಮನೆಯೊಳಗೆ ಪೈಪೋಟಿ ಜೋರಾಗಿಯೇ ನಡೆಯುತ್ತಿದೆ. ಅದರ ಒಂದು ಭಾಗವಾಗಿ ನಾಮಿನೇಷನ್‌ ಚಟುವಟಿಕೆ ನಡೆದಿದೆ. ಅದರ ಝಲಕ್ ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಕಾಣಿಸಿಕೊಂಡಿದೆ. ಎಲ್ಲ ಸ್ಪರ್ಧಿಗಳ ಎದೆಯ ಮೇಲೆ ಹೃದಯಾಕಾರದ ಬೋರ್ಡ್‌ ಅನ್ನು ನೇತುಹಾಕಲಾಗಿದೆ. ಸಂಗೀತಾ ಹೊರತುಪಡಿಸಿ ಎಲ್ಲ ಸ್ಪರ್ಧಿಗಳೂ ತಾವು ನಾಮಿನೇಷನ್ ಮಾಡಲು ಇಚ್ಛಿಸುವ ಇಬ್ಬರು ಸ್ಪರ್ಧಿಗಳ ಹೆಸರು ಹೇಳಿ ಅವರ ಕತ್ತಿನಲ್ಲಿ ತೂಗು ಹಾಕಿದ್ದ ಬೋರ್ಡ್‌ಗೆ ಚೂರಿ ಹಾಕಬೇಕು. ಈ ಚಟುವಟಿಕೆಯಲ್ಲಿ ಕಾರ್ತಿಕ್‌ ಅವರು ವರ್ತೂರು ಸಂತೋಷ್ ಮತ್ತು ತನಿಷಾ ಅವರ  ಹೆಸರನ್ನು ಸೂಚಿಸಿ ಚೂರಿ ಹಾಕಿದ್ದಾರೆ. ಪ್ರೇಕ್ಷಕರಲ್ಲಿ ನಿಜಕ್ಕೂ ಇದು ಸಖತ್ ಬೇಸರ ತರಿಸಿದೆ. ವರ್ತೂರು (Varthur) ಮತ್ತು ತನಿಷಾ (Tanisha) ಅವರನ್ನು ಲವ್ ಬರ್ಡ್ಸ್ ಎಂದು ಕರೆಯಲಾಗಿತ್ತು. ಅದೆಷ್ಟೋ ಬಾರಿ ತಮ್ಮ ತೊಡೆಯ ಮೇಲೆ ತನಿಷಾರನ್ನು ಮಲಗಿಸಿಕೊಂಡು ಪ್ರೀತಿ ತೋರಿದ್ದಾರೆ ವರ್ತೂರು. ತನಿಷಾ ಕೂಡ…

Read More

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ರ ಮನೆಯಲ್ಲಿ ಕಳ್ಳತನವಾಗಿದ್ದು, ಈ ಬಗ್ಗೆ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ದೂರು ನೀಡಿದ್ದು, ಎಫ್ ಐ ಆರ್ ದಾಖಲಾಗಿದೆ. 31 -12-2023 ರ ಮದ್ಯಾಹ್ನ ನ ಬೀರುವಿನಲ್ಲಿ ಕಸ್ತೂರಿ ಶೆಟ್ಟಿ 2.05 ಲಕ್ಷ ಹಣ ಇಟ್ಟಿದ್ರಂತೆ. ಜನವರಿ 5ರಂದು ಬೀರು ಚೆಕ್ ಮಾಡಿದಾಗ ಹಣ ಇರಲಿಲ್ಲ. ಎರಡು ದಿನಗಳ ಕಾಲ ಮನೆಯಲ್ಲೆಲ್ಲಾ ಹುಡುಕಾಡಿದ್ರು ಹಣ ಸಿಕ್ಕಿಲ್ಲ. ಕಳೆದ ಡಿಸೆಂಬರ್ 31ರಂದು ಮಧ್ಯಾಹ್ನ ತಮ್ಮ ರೂಂನ ಬೀರುವಿನಲ್ಲಿಟ್ಟಿದ್ದ 2.50 ಲಕ್ಷ ರೂ.ಗಳನ್ನು ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ಇಟ್ಟಿದ್ದರು. ಆದ್ರೆ ಜನವರಿ 5ರಂದು ಹಣ ಕಳ್ಳತನವಾಗಿದೆ. ಎರಡು ದಿನಗಳ ಕಾಲ ಕುಟುಂಬಸ್ಥರು ಮನೆಯೆಲ್ಲ ಹುಡುಕಾಡಿದ್ದಾರೆ. ಹೀಗಾಗಿಜನವರಿ 7ರಂದು ಚಂದ್ರಲೇಔಟ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀದ್ದಾರೆ. ಕಳೆದ ಆರು ತಿಂಗಳಿಂದ ರತ್ನಮ್ಮ ಎಂಬುವರು ಮನೆ ಕೆಲಸಕ್ಕೆ ಬರ್ತಿದ್ದಾರೆ. ರೂಂಗೆ ರತ್ನಮ್ಮ ಬಿಟ್ಟು ಬೇರೆ ಯಾರೂ ಕೂಡ ಬಂದಿಲ್ಲ…

Read More

ಗಾಂಧಿನಗರ: ದೇಶದ ಪ್ರಮುಖ ಜವಳಿ ಕೇಂದ್ರವಾಗಿರುವ ಗುಜರಾತ್‌ನ (Gujarat) ಸೂರತ್ (Surat) ನಗರದಲ್ಲಿ ಅಯೋಧ್ಯೆಯಲ್ಲಿ (Ayodhya) ನೆಲೆಸಿರುವ ಸೀತಾಮಾತೆಗೆ (Sita Mata) ಅರ್ಪಿಸಲು ವಿಶೇಷ ಸೀರೆಯೊಂದು (Saree) ಸಿದ್ಧವಾಗಿದೆ. ಈ ಸೀರೆಯನ್ನು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ (Ram Mandir) ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ ಕಳುಹಿಸಲಾಗುವುದು ಎಂದು ಜವಳಿ ಉದ್ಯಮಿ ಲಲಿತ್ ಶರ್ಮಾ (Lalith Sharma)ತಿಳಿಸಿದ್ದಾರೆ. ಸೀರೆಯ ವಿಶೇಷತೆಯೇನು? ಸೀತಾಮಾತೆಗೆಂದು ತಯಾರಿಸಿರುವ ಈ ಸೀರೆಯಲ್ಲಿ ಭಗವಾನ್ ರಾಮನ ಚಿತ್ರಗಳು ಮತ್ತು ಅಯೋಧ್ಯೆಯ ದೇವಾಲಯದ ಮುದ್ರಣವಿದೆ. ಸೀರೆ ತಯಾರಿಯ ಮೊದಲ ಕಚ್ಚಾ ವಸ್ತುವಿನ ತುಣುಕನ್ನು ಸೂರತ್‌ನ ಸೀತಾ ದೇವಿಯ ದೇವಾಲಯಕ್ಕೆ ಅರ್ಪಿಸಲಾಗಿದೆ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಭೌತಿಕವಾಗಿ ಇರಲು ಸಾಧ್ಯವಾಗದ ಭಕ್ತರು ತಮ್ಮದೇ ಆದ ರೀತಿಯಲ್ಲಿ ಧಾರ್ಮಿಕ ಕಾರ್ಯಕ್ರಮದೊಂದಿಗೆ ಸಂಪರ್ಕ ಸಾಧಿಸಲು ಬಯಸಿದ ಕಾರಣ ಈ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಲಲಿತ್ ಶರ್ಮ ಹೇಳಿದ್ದಾರೆ ನಾವು ಭಗವಾನ್ ರಾಮನ ಚಿತ್ರಗಳು ಮತ್ತು ಅಯೋಧ್ಯೆ ದೇವಸ್ಥಾನವನ್ನು ಮುದ್ರಿಸಿದ ವಿಶೇಷ ಸೀರೆಯನ್ನು…

Read More

ಪಣಜಿ: 4 ವರ್ಷದ ಪುತ್ರನನ್ನು ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿ ಬೆಂಗಳೂರಿಗೆ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರ ಕೈಗೆ ಬಿದ್ದ ಸಿಇಓ ಸುಚನಾ ಸೇಠ್‌ (Suchana Seth) ಇದೀಗ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಳೆ. ಗೋವಾ ಪೊಲೀಸರ ವಿಚಾರಣೆಯ ವೇಳೆ ಮಗುವನ್ನು (4 Year Son Murder Case) ತಾನೇ ಕೊಂದಿರುವುದಾಗಿ ಆಕೆ ಹೇಳಿದ್ದಾಳೆ. ಅಲ್ಲದೆ ಕಾರಣವನ್ನು ಕೂಡ ಸುಚನಾ ವಿವರಿಸಿದ್ದಾಳೆ. ಸೇಠ್‌ ಹೇಳಿದ್ದೇನು..?: ವಿಚ್ಛೇದನ (Divorce) ಕೋರ್ಟ್ ನಲ್ಲಿತ್ತು. ವಾರಕ್ಕೊಮ್ಮೆ ಪತಿ ವೆಂಕಟರಮಣನಿಗೆ ಮಗುವನ್ನ ವಿಡೀಯೋ ಕಾಲ್ ಮೂಲಕ ತೋರಿಸಬೇಕಿತ್ತು. ಆದರೆ ಗಂಡನಿಗೆ ಮಗುವನ್ನು ತೋರಿಸುವುದಕ್ಕೆ ಇಷ್ಟ ಇರಲಿಲ್ಲ. ನನ್ನ ಮಗು ಕಂಡರೆ ನನಗೂ ಕೂಡ ಬಹಳ ಪ್ರೀತಿ. ಹೀಗಾಗಿ ನಾನು ಮಗುವಿನ ಪ್ರಜ್ಞೆ ತಪ್ಪಿಸಲು ದಿಂಬಿನಿಂದ ಒತ್ತಿ ಹಿಡಿದೆ. ಮಗು ಪ್ರಜ್ಞೆ ತಪ್ಪಿದೆ ಎಂದುಕೊಂಡಿದ್ದೆ. ಆದರೆ ಮಗು ಸಾವನ್ನಪ್ಪಿತ್ತು ಎಂದಿದ್ದಾಳೆ. ಇದೇ ನೋವಿನಲ್ಲಿ ಕೈ ಕುಯ್ದ ಆತ್ಮಹತ್ಯೆಗೆ ಯತ್ನಿಸಿದೆ, ಆದರೆ ಅದು ಸಾಧ್ಯವಾಗಿಲ್ಲ. ಗಾಬರಿಯಲ್ಲಿ ಏನು ಮಾಡಬೇಕೆಂದು ತೋಚದೆ ಸೂಟ್ ಕೇಸ್ ನಲ್ಲಿ ಮಗುವಿನ…

Read More

ಲಕ್ನೋ: ರಾಮಮಂದಿರ (Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಪ್ರಾಣಪ್ರತಿಷ್ಠೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಹೊತ್ತಲ್ಲೇ ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ರಾಮಮಂದಿರ ಉದ್ಘಾಟನೆ ಹಿನ್ನೆಲೆ ಜನವರಿ 22ರಂದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ (Educational Institution) ರಜೆ (Holiday) ಘೋಷಿಸಿದ್ದಾರೆ. ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವುದರ ಜೊತೆಗೆ, ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ದಿನದಂದು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜನವರಿ 22ರಂದು ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಲು ಮತ್ತು ಪಟಾಕಿಗಳ ವ್ಯವಸ್ಥೆಯನ್ನು ಮಾಡಲು ಆದಿತ್ಯನಾಥ್ ಕರೆ ನೀಡಿದ್ದಾರೆ ಮಾತ್ರವಲ್ಲದೇ ಯೋಗಿ ಅಯೋಧ್ಯೆಯಲ್ಲಿ ಸ್ವಚ್ಛತೆಯ ‘ಕುಂಭ ಮಾದರಿ’ ಅನುಷ್ಠಾನಕ್ಕೆ ನಿರ್ದೇಶನ ನೀಡಿದ್ದಾರೆ. ಜನವರಿ 14ರಂದು ಅಯೋಧ್ಯೆಯಲ್ಲಿ ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. ಪೂರ್ಣಕುಂಬಾಭಿಷೇಕದ ಸಮಯದಲ್ಲಿ ಸ್ವಚ್ಛ ಮತ್ತು ನೈರ್ಮಲ್ಯ ನಗರವನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಎಲ್ಲರಿಗೂ ಒತ್ತಿ ಹೇಳಿದರು..

Read More

ಮೊಟ್ಟೆಗಳು ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಇವುಗಳಲ್ಲಿ ಅಮೈನೋ ಆಮ್ಲಗಳು ಮತ್ತು ಪ್ರೋಟೀನ್ಗಳು ಸೇರಿವೆ. ಪ್ರತಿನಿತ್ಯ ಒಂದು ಮೊಟ್ಟೆ ತಿಂದರೆ ದೇಹಕ್ಕೆ ಅಗತ್ಯವಿರುವ ಶೇ.25ರಷ್ಟು ಪ್ರೊಟೀನ್ ಸಿಗುತ್ತದೆ. ಅಂಗಾಂಶ ದುರಸ್ತಿ, ಕೋಶ, ಕಣಗಳ ಉತ್ಪತ್ತಿ ಮತ್ತು ಆರೋಗ್ಯಕರ ದೇಹಕ್ಕೆ ಪ್ರೋಟೀನ್ಗಳು ಅವಶ್ಯಕ. ಜೀವಸತ್ವಗಳು ಮತ್ತು ಖನಿಜಗಳು ಚರ್ಮದ ಆರೋಗ್ಯಕ್ಕೆ ವಿಟಮಿನ್ ಎ ಮುಖ್ಯವಾಗಿದೆ. ವಿಟಮಿನ್ ಬಿ 12 ನರಗಳ ಕಾರ್ಯನಿರ್ವಹಣೆಗೆ ನಿರ್ಣಾಯಕವಾಗಿದೆ. ವಿಟಮಿನ್ ಡಿ ಮೂಳೆಯ ಆರೋಗ್ಯವನ್ನು ಬೆಂಬಲಿಸುತ್ತದೆ. ಆಮ್ಲಜನಕದ ಸಾಗಣೆಗೆ ಕಬ್ಬಿಣದ ಅಂಶವು ಅತ್ಯಗತ್ಯ. ಸೆಲೆನಿಯಮ್ ಉತ್ತಮ ಉತ್ಕರ್ಷಣ ನಿರೋಧಕವಾಗಿದೆ. ಇವೆಲ್ಲವೂ ಮೊಟ್ಟೆಗಳಲ್ಲಿ ಸಿಗುತ್ತವೆ. ಒಟ್ಟಾರೆ ದೇಹದ ಆರೋಗ್ಯಕ್ಕೆ ಇದು ಸಹಕಾರಿ. ಮೊಟ್ಟೆಯಲ್ಲಿ ಹೇರಳವಾಗಿರುವ ಕೋಲೀನ್ ಮೆದುಳಿನ ಆರೋಗ್ಯಕ್ಕೆ ಅತ್ಯಗತ್ಯ ಪೋಷಕಾಂಶವಾಗಿದೆ. ಇದು ಅಸೆಟೈಲ್ಕೋಲಿನ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ಇದು ಅರಿವಿನ ಕಾರ್ಯಗಳಲ್ಲಿ ಒಳಗೊಂಡಿರುವ ನ್ಯೂರೊಟ್ರಾನ್ಸ್ಮಿಟರ್. ಗರ್ಭಾವಸ್ಥೆಯಲ್ಲಿ ಇದು ಬಹಳ ಮುಖ್ಯ. ಕೋಲೀನ್ ಭ್ರೂಣದ ಮೆದುಳಿನ ಬೆಳವಣಿಗೆಗೆ ಸಹಕಾರಿ. ಅದಕ್ಕಾಗಿಯೇ ಗರ್ಭಿಣಿಯರಿಗೆ ಪ್ರತಿದಿನ ಒಂದು ಮೊಟ್ಟೆಯನ್ನು ತಿನ್ನಲು ಹೇಳಲಾಗುತ್ತದೆ. ಮೊಟ್ಟೆಗಳು ಶಕ್ತಿಯುತವಾದ ಉತ್ಕರ್ಷಣ…

Read More

ಮಾಲೆ/ನವದೆಹಲಿ: ನರೇಂದ್ರ ಮೋದಿಯನ್ನು (Narendra Modi) ಟೀಕಿಸಿ ಪೇಚೆಗೆ ಸಿಲುಕಿದ ಮಾಲ್ಡೀವ್ಸ್‌ (Maldives) ಸರ್ಕಾರ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿದ್ದು, ಅಧ್ಯಕ್ಷ ಮೊಹಮ್ಮದ್ ಮಿಜು (Mohamed Muizzu) ಭಾರತಕ್ಕೆ ಬರಲು ಮುಂದಾಗಿದ್ದಾರೆ. ಸ್ವತ: ಮಾಲ್ಡೀವ್ಸ್‌ ಜನರೇ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಅಧ್ಯಕ್ಷ ಮೊಹಮ್ಮದ್ ಮಿಜು ನೇತೃತ್ವದ ಸರ್ಕಾರ ಮೂವರು ಸಚಿವರನ್ನು ಅಮಾನತು ಮಾಡುವ ಮೂಲಕ ಶಿಸ್ತು ಕ್ರಮ ಜರುಗಿಸಿತ್ತು. ಈಗ ಮೊಹಮ್ಮದ್ ಮಿಜು ವಿರುದ್ಧ ಈಗ ವಿಪಕ್ಷ ಅವಿಶ್ವಾಸ ನಿರ್ಣಯವನ್ನು ಮಂಡಿಸಲು ಮುಂದಾಗಿವೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ಮೊಹಮ್ಮದ್ ಮಿಜು ಭಾರತ (India) ಪ್ರವಾಸ ಕೈಗೊಳ್ಳಲು ಮುಂದಾಗಿದ್ದಾರೆ. ಮಾಲ್ಡೀವ್ಸ್‌ ಸರ್ಕಾರ ಈ ಪ್ರಸ್ತಾಪವನ್ನು ಭಾರತದ ಮುಂದಿಟ್ಟರೂ ಮೋದಿ ಸರ್ಕಾರ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ. ಮೊದಲು ಮಾಲ್ಡೀವ್ಸ್‌ನಲ್ಲಿದ್ದ ಸರ್ಕಾರ ಭಾರತದ ಪರವಾಗಿತ್ತು. ಕೋವಿಡ್‌ ಸಮಯಲ್ಲಿ ಭಾರತ ಲಸಿಕೆಯನ್ನು ರಫ್ತು ಮಾಡಿತ್ತು. ಹೀಗಿದ್ದರೂ ಭಾರತದ ವಿರುದ್ಧವೇ ಹೇಳಿಕೆ ನೀಡಿಯೇ ಮೊಹಮ್ಮದ್ ಮಿಜು ಅಧ್ಯಕ್ಷ ಚುನಾವಣೆಯಲ್ಲಿ ಜಯಗಳಿಸಿದ್ದರು. ಸದ್ಯ ಮೊಹಮ್ಮದ್ ಮಿಜು ಚೀನಾ…

Read More

ಸಿಯೋಲ್: ನಾಯಿ ಮಾಂಸ (Dog Meat) ಸೇವನೆ ತೆಗೆದುಹಾಕುವ ಮಸೂದೆಯನ್ನು ದಕ್ಷಿಣ ಕೊರಿಯಾ (South Korea) ಸಂಸತ್ತಿನಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ದಕ್ಷಿಣ ಕೊರಿಯಾದ ಸಂಸತ್ತು ಅಧ್ಯಕ್ಷ ಯೂನ್ ಸುಕ್ ಯೆಲ್ ಅವರು ಈ ಮಸೂದೆಯನ್ನು ಕಾನೂನಾಗಿ ಜಾರಿಗೆ ತರಲು ಪ್ರತಿಜ್ಞೆ ಮಾಡಿದ್ದರು. ಸರ್ವಾನುಮತದ ಮತದ ಮೂಲಕ ನಾಯಿ ಮಾಂಸ ನಿಷೇಧಿಸುವ ಮಸೂದೆ ಅಂಗೀಕಾರಗೊಂಡಿದೆ. ಆಹಾರದ ಉದ್ದೇಶಕ್ಕಾಗಿ ನಾಯಿಯನ್ನು ಕಡಿಯುವುದು ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 19.12 ಲಕ್ಷ ರೂ. (30 ಮಿಲಿಯನ್ ವಾನ್) ವರೆಗೆ ದಂಡ ವಿಧಿಸುತ್ತದೆ. ನಾಯಿ ಸಂತಾನಾಭಿವೃದ್ಧಿ ಮಾಡುವುದು ಅಥವಾ ಆಹಾರಕ್ಕಾಗಿ ವಿತರಿಸುವುದು ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ವಿಧಿಸಲಾಗುತ್ತದೆ. ಮೂರು ವರ್ಷಗಳ ಗ್ರೇಸ್ ಅವಧಿಯ ನಂತರ 2027 ರಲ್ಲಿ ಕಾನೂನು ಜಾರಿಯಾಗಲಿದೆ. ನಾಯಿ ಮಾಂಸ ಉದ್ಯಮದಲ್ಲಿರುವವರಿಗೆ ವ್ಯಾಪಾರ ಬದಲಾಯಿಸಲು ಸಹಾಯ ಮಾಡಲು ಸಬ್ಸಿಡಿ ನೀಡಲಾಗುವುದು ಎಂದು ಮಸೂದೆಯಲ್ಲಿ ತಿಳಿಸಲಾಗಿದೆ. ಯೂನ್ ತನ್ನ ಅಧ್ಯಕ್ಷೀಯ ಪ್ರಚಾರದಲ್ಲಿ ನಾಯಿ ಮಾಂಸದ ಸೇವನೆಯನ್ನು ಕೊನೆಗೊಳಿಸಲು ವಾಗ್ದಾನ ಮಾಡಿದ್ದರು.…

Read More

ಮಾಲೆ: #BoycottMaldives ಅಭಿಯಾನ ಯಶಸ್ವಿಯಾಗಿದ್ದು EaseMyTrip ಮಾಲ್ಡೀವ್ಸ್‌ ಫ್ಲೈಟ್‌ ಬುಕ್ಕಿಂಗ್‌ ರದ್ದು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಟೀಕಿಸಿದ್ದಕ್ಕೆ ಭಾರತೀಯ ನೆಟ್ಟಿಗರು ಮಾಲ್ಡೀವ್ಸ್‌ ಪ್ರವಾಸವನ್ನು ರದ್ದು ಮಾಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್‌ ಸೃಷ್ಟಿಸಿದ್ದರು. ಇದಕ್ಕೆ ಬೆಂಬಲ ವ್ಯಕ್ತಪಡಿಸಿದ EaseMyTrip ಫ್ಲೈಟ್‌ ಬುಕ್ಕಿಂಗ್‌ ರದ್ದು ಮಾಡಿದೆ. ಭಾರತದ ಆನ್‌ಲೈನ್‌ ಟ್ರಾವೆಲ್‌ ಕಂಪನಿ EaseMyTrip ಸಿಇಒ ನಿಶಾಂತ್‌ ಪಿಟ್ಟಿ ಸಾಮಾಜಿಕ ಜಾಲತಾಣದಲ್ಲಿ ಭಾರತೀಯರಿಗೆ ಬೆಂಬಲ ವ್ಯಕ್ತಪಡಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಭಾರತೀಯ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದ ಮೂವರು ಸಚಿವರನ್ನು ಮಾಲ್ಡೀವ್ಸ್‌ ಸರ್ಕಾರ (Maldives govt) ಅಮಾನುತು ಮಾಡಿದೆ.  ಮೋದಿ ವಿರುದ್ಧ ಕೀಳು ಅಭಿರುಚಿಯುಳ್ಳ ಹೇಳಿಕೆ ನೀಡಿದ್ದ ಮಾರಿಯಂ ಶಿಯುನಾ, ಮಲ್ಲಾ ಷರೀಫ್‌ ಹಾಗೂ ಮಝೂಂ ಮಜೀದ್ ಅವರನ್ನು ಅಮಾನತು ಮಾಡಲಾಗಿದೆ. ಪ್ರಧಾನಿ ಮೋದಿ ಕುರಿತಾಗಿ ಎರಡು ದೇಶಗಳ ಮಧ್ಯೆ ಬಿಕಟ್ಟು ಸೃಷ್ಟಿಯಾಗಿತ್ತು. ಸ್ವತ: ಮಾಲ್ಡೀವ್ಸ್‌ ಜನರೇ ಸಚಿವರ ವಿರುದ್ಧ…

Read More