Author: AIN Author

ಬೆಂಗಳೂರು:- ಅನ್ನಭಾಗ್ಯದ ಅಕ್ಕಿಯಲ್ಲಿ ರಾಜ್ಯ ಸರಕಾರದ ಕೊಡುಗೆ ಶೂನ್ಯ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಅನ್ನಭಾಗ್ಯ ಅಕ್ಕಿಯಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ತಯಾರಿಸಿದ್ದಾರೆಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ್‌ ತಿರುಗೇಟು ನೀಡಿದ್ದು, ಅನ್ನಭಾಗ್ಯದ ಅಕ್ಕಿಯಲ್ಲಿ ರಾಜ್ಯ ಸರಕಾರದ ಕೊಡುಗೆ ಶೂನ್ಯ ಎಂದು ತಿರುಗೇಟು ನೀಡಿದ್ದಾರೆ. ಈ ಸಂಬಂಧ ಪಡಿತರ ರಶೀದಿಯನ್ನು ಸಾಮಾಜಿಕ ಜಾಲತಾಣ “ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಅನ್ನಭಾಗ್ಯದ ಅಕ್ಕಿಯಲ್ಲಿ ಶ್ರೀರಾಮನ ಮಂತ್ರಾಕ್ಷತೆ ನೀಡಲಾಗುತ್ತಿದೆ ಎಂದು ಸುಳ್ಳು ಹೇಳುತ್ತೀರಲ್ಲ, ನಿಮ್ಮನ್ನು ಆ ಶ್ರೀರಾಮ ಮೆಚ್ಚುವನೇ? ತಮ್ಮ ಗ್ಯಾರಂಟಿಗಳ ಬಂಡವಾಳ ಬಯಲಾಗಿದೆ ಎಂದು ಹೇಳಿದ್ದಾರೆ.

Read More

ಬಾಗಲಕೋಟೆ :- ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಹಳಿಂಗಳಿಯಲ್ಲಿ ಶ್ರೀ ದೇವಲ ದೇಸಾಯಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ ಹಳಿಂಗಳಿ ಕಮರಿಮಠದ ಪ. ಪೂ ಶ್ರೀ ಶಿವಾನಂದ ಮಹಾಸ್ವಾಮಿಗಳವರಿಂದ ಉದ್ಘಾಟನಾ ಸಮಾರಂಭ ನಡೆಯಿತು. ಬಳಿಕ ಮಾತನಾಡಿದ ಅವರು, ಸಾರ್ವಜನಿಕ ಮಧ್ಯದಲ್ಲಿ ಶ್ರೀ ದೇವಲ ದೇಸಾಯಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತವು ಕಾರ್ಯನಿರ್ವಾಹನೆ ಮಾಡಲಿ. ಜನಸಾಮಾನ್ಯರ ಸಂಕಷ್ಟಕ್ಕೆ ಆಶಾಕಿರಣವಾಗಿ ಬಡತನ ನಿರ್ಮೂಲನೆಗೆ ಸಹಕಾರಿ ಕ್ಷೇತ್ರ ಪ್ರಾಮುಖ್ಯತೆ ಪಡೆದುಕೊಳ್ಳಬೇಕು. ಇದರ ಅಡಿಯಲ್ಲಿ ರೈತರ ಸಂಕಷ್ಟಕ್ಕೆ ಸಹಕಾರಿಯಾಗಿ ಕಾರ್ಯನಿರ್ವಹಿಸಲ್ಲಿ, ಸಾರ್ವಜನಿಕ ಸೇವಾ ಕೇಂದ್ರವಾಗಿ ಜನರೊಂದಿಗೆ ಬೆರೆತು ಅಭಿವೃದ್ಧಿ ಹೊಂದಲ್ಲಿ, ಶ್ರೀಮಂತಿಕೆ-ಬಡತನದ ಅಂತರ ನೀಗಿಸಲು ಸಹಕಾರಿ ಕ್ಷೇತ್ರ ಪ್ರಾಮುಖ್ಯತೆ ಪಡೆದಿದೆ. ಬಡತನ, ಅನಕ್ಷರತೆ, ದಾರಿದ್ರ್ಯ ನಿರ್ಮೂಲನೆಯೊಂದಿಗೆ ನಿಜವಾದ ಜನಸೇವೆಗೆ ಸಹಕಾರಿ ವಿಭಾಗ ಮಹತ್ವದ್ದಾಗಿದೆ. ಸಹಕಾರಿ ಕ್ಷೇತ್ರವು ಎಲ್ಲರನ್ನೂ ಒಗ್ಗೂಡಿಸಿ, ಸಮಾನತೆಯೊಂದಿಗೆ ಆರ್ಥಿಕ ಬೆಳವಣಿಗೆಗೆ ಕಾರಣವಾಗಿದೆ ಎಂದರು. ಇದೇ ಸಂದರ್ಭದಲ್ಲಿ ಅಧ್ಯಕ್ಷತೆ ದೇವಲ ಸರಕಾರ ದೇಸಾಯಿ. ಜಮಖಂಡಿ ಶಾಸಕ ನಾಡೋಜ ಜಗದೀಶ ಗುಡಗುಂಟಿ, ತೇರದಾಳ ಶಾಸಕ…

Read More

ಹಲವಾರು ಬಾರಿ ಮರು ಚಿತ್ರೀಕರಣ, ಮತ್ತೆ ಮತ್ತೆ ತಿದ್ದುಪಡಿಗಳು, ಹಲವಾರು ಬದಲಾವಣೆಗಳೊಂದಿಗೆ ಕ್ರೇಜ್ ಹುಟ್ಟುಹಾಕುತ್ತಿರುವ ಸುಧೀರ್ ಅತ್ತಾವರ (Sudhir Attavar) ನಿರ್ದೇಶನದ ಕೊರಗಜ್ಜ (Koragajja) ಸಿನಿಮಾದ ಸಂಗೀತವನ್ನೇ ಸಂಪೂರ್ಣವಾಗಿ ಬದಲಾಯಿಸಿ, ದಕ್ಷಿಣ ಭಾರತದ ಪ್ರಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ (Gopi Sundar) ಈಗ ಸಿನಿಮಾಗೆ ಬ್ಯಾಗ್ರೌಂಡ್ ಸ್ಕೋರ್ ಜೊತೆ ಎಲ್ಲಾ ಹಾಡುಗಳನ್ನು ಮತ್ತೆ ಹೊಸದಾಗಿ ಕಂಪೋಜ್ ಮಾಡುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ತ್ರಿವಿಕ್ರಮ ಸಪಲ್ಯ ರವರು ತ್ರಿವಿಕ್ರಮ ಸಿನೆಮಾಸ್  ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ನ ಅಡಿ ನಿರ್ಮಿಸುತ್ತಿರುವ ಪ್ಯಾನ್ ಇಂಡಿಯಾ ಚಿತ್ರ ಕೊರಗಜ್ಜ ಚಿತ್ರಕ್ಕೆ  RRR, ಪುಷ್ಪ ಮೊದಲಾದ ಹಿಟ್ ಸಿನಿಮಾಗಳ ತಂತ್ರಜ್ಞರ ದಂಡು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿದೆ. ಸುಮಾರು ಎಂಟು ನೂರು ವರ್ಷಗಳ ಹಿಂದಿನ ಕಥೆಯುಳ್ಳ ಈ ಸಿನಿಮಾದಲ್ಲಿ ಹಾಲಿವುಡ್- ಬಾಲಿವುಡ್ ಕಲಾವಿದರಾದ ಕಬೀರ್ ಬೇಡಿ, ಸಂದೀಪ್ ಸೋಪರ್ಕರ್, ಗಣೇಶ್ ಆಚಾರ್ಯ ಜೊತೆ ಶ್ರುತಿ, ಭವ್ಯ ಮೊದಲಾದವರು ಅಭಿನಯಿಸುತ್ತಿದ್ದಾರೆ. ಋತಿಕ ಎನ್ನುವ ಹೊಸ ಮುಖ ಕೊರಗಜ್ಜನ ತಾಯಿ…

Read More

ಹಾಲು, ಸಾಮಾನ್ಯವಾಗಿ ಪೌಷ್ಟಿಕ ಪಾನೀಯವೆಂದು ಹೇಳಲಾಗುತ್ತದೆ, ಪ್ರಪಂಚದಾದ್ಯಂತದ ಜನರಿಗೆ ಆಹಾರದ ಪ್ರಧಾನವಾಗಿದೆ. ಶತಮಾನಗಳಿಂದಲೂ ಇದನ್ನು ಆರೋಗ್ಯಕರ ಆಹಾರವೆಂದು ಪರಿಗಣಿಸಲಾಗಿದೆ ಅಡುಗೆ ಮನೆಯಲ್ಲಿರುವ ಅರಿಶಿನ ಮತ್ತು ಹಾಲು ಸೂಕ್ಷ್ಮ ಜೀವ ನಿರೋಧಕ ಶಕ್ತಿಯನ್ನು ಹೊಂದಿರುತ್ತವೆ. ನಿಮ್ಮ ನಿತ್ಯದ ಇತರ ಆಹಾರಗಳೊಂದಿಗೆ ಈ ಎರಡು ವಸ್ತುಗಳನ್ನು ಬಳಸುವುದರಿಂದ ನೀವು ಸಾಮಾನ್ಯವಾಗಿ ಕಂಡುಬರುವ ಹಲವು ಅನಾರೋಗ್ಯ ತೊಂದರೆಗಳಿಂದ ದೂರವಿರಬಹುದು. ಅರಿಶಿನಕ್ಕೆ ಹಾಲನ್ನು ಸೇರಿಸಿ ಬಳಸುವುದರಿಂದ ಹಲವಾರು ಆರೋಗ್ಯ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕುತ್ತದೆ. ಬಾದಾಮಿಯಿಂದ ತಯಾರಿಸಿದ ಹಾಲನ್ನು ಅತ್ಯಂತ ಆರೋಗ್ಯಕರ ಎಂದು ಪರಿಗಣಿಸಲಾಗುತ್ತದೆ ಮತ್ತು ಬಾದಾಮಿಯನ್ನು ನಿಜವಾದ ಪೌಷ್ಟಿಕ ಶಕ್ತಿ ಎಂದು ಪರಿಗಣಿಸಲಾಗುತ್ತದೆ. ವಾಸ್ತವವಾಗಿ ಬಾದಾಮಿ ಹಾಲು ಅತ್ಯಂತ ಜನಪ್ರಿಯ ಹಾಲು. ಏಕೆಂದರೆ ಉತ್ತಮ ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದು ರುಚಿಕರವಾಗಿರುತ್ತದೆ. ಇದು ವಿಶೇಷವಾಗಿ ಕಡಿಮೆ ಕ್ಯಾಲೋರಿಗಳು, ಕಾರ್ಬೋಹೈಡ್ರೇಟ್ಗಳು ಮತ್ತು ಕೊಬ್ಬನ್ನು ಹೊಂದಿರುತ್ತದೆ ಪೌಷ್ಟಿಕ ಶಕ್ತಿ ಹೊಟ್ಟೆಯ ತೊಂದರೆಗಳು ಅಲರ್ಜಿಗಳು ​ಅಧಿಕ ಸಕ್ಕರೆ ಮಟ್ಟ ​ಥೈರಾಯಿಡ್ ಮೇಲೆ ಪರಿಣಾಮ ಬೀರುತ್ತದೆ ಶಿಶುಗಳಿಗೆ ಸಮಸ್ಯೆಯನ್ನು ಉಂಟು ಮಾಡುತ್ತದೆ

Read More

ಬೆಂಗಳೂರು:- ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾದರೆ, ಬೆಂಗಳೂರು, ಬೆಂ,ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬೆಳಗಾವಿ, ಕಲಬುರಗಿ ಮತ್ತು ವಿಜಯಪುರದಲ್ಲಿ ತುಂತುರು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಜ.10ರವರೆಗೆ ರಾಜ್ಯಾದ್ಯಂತ ಮೋಡ ಕವಿದ ವಾತಾವರಣ ಇರಲಿದೆ. ನಂತರ, ಒಣಹವೆ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

Read More

ಮುಂಬಯಿ: ತನ್ನ ಉತ್ಪನ್ನಗಳು ಮತ್ತು ಸೇವೆಯನ್ನು ಉನ್ನತ ಮಟ್ಟದಲ್ಲಿ ಡಿಜಿಟಲೀಕರಿಸಲು ವಿಶೇಷ ‘ಡೈವ್’ ಯೋಜನೆಯನ್ನು(DIVE: Digital Innovation And Value Enhancement) ಸರಕಾರಿ ಸ್ವಾಮ್ಯದ ವಿಮಾ ಕಂಪನಿಯಾದ ಎಲ್ಐಸಿ ಜಾರಿಗೊಳಿಸಿದೆ. ಕಂಪನಿಯಲ್ಲಿ ಡಿಜಿಟಲ್ ರೂಪಾಂತರವನ್ನು ತರುವುದು ಈ ‘ಡೈವ್’ನ ಉದ್ದೇಶ. ಮುಂಬರುವ ದಿನಗಳಲ್ಲಿ ಹೊಸ ಪ್ರೀಮಿಯಂಗಳ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ನಿಟ್ಟಿನಲ್ಲಿ ಕಂಪನಿಯು ಮುಂಬರುವ ತಿಂಗಳುಗಳಲ್ಲಿ 3 ರಿಂದ 4 ಹೊಸ ಪ್ರಾಡಕ್ಟ್ಗಳನ್ನು ಪ್ರಾರಂಭಿಸಲಿದೆ. ಅಲ್ಲದೇ, ಮುಂದಿನ ದಿನಗಳಲ್ಲಿ ತನ್ನದೇ ಆದ ಫಿನ್ಟೆಕ್ ಕಂಪನಿ ಪ್ರಾರಂಭಿಸುವ ಯೋಜನೆಯೂ ಇದೆ ಎಂದು ಭಾರತೀಯ ಜೀವ ವಿಮಾ ನಿಗಮದ (ಎಲ್ಐಸಿ) ಅಧ್ಯಕ್ಷ ಸಿದ್ಧಾರ್ಥ ಮೊಹಂತಿ ಹೇಳಿದ್ದಾರೆ. ‘ ಇತ್ತೀಚೆಗೆ ಕೆಲವು ಫಿನ್ಟೆಕ್ ಕಂಪನಿಗಳೊಂದಿಗೆ ಭಾರತೀಯ ಜೀವ ವಿಮಾ ನಿಗಮ ಕೈಜೋಡಿಸಿದೆ. ನಮ್ಮ ಉತ್ಪನ್ನ ವಿತರಣೆಗಾಗಿ ಫಿನ್ಟೆಕ್ ಕಂಪನಿಗಳನ್ನು ಕಾರ್ಪೊರೇಟ್ ಏಜೆಂಟ್ಗಳನ್ನಾಗಿ ಮಾಡಲಾಗಿದೆ. ಈಗ ಎಲ್ಐಸಿ ತನ್ನದೇ ಆದ ಫಿನ್ಟೆಕ್ ಕಂಪನಿಯನ್ನು ಪ್ರಾರಂಭಿಸಲು ಯೋಜಿಸುತ್ತಿದೆ,” ಎಂದು ಸಿದ್ಧಾರ್ಥ ಮೊಹಂತಿ ತಿಳಿಸಿದ್ದಾರೆ. ಭಾರತೀಯ ಜೀವ…

Read More

ಇಂದು ಮಹಿಳೆಯರು ಮತ್ತು ಪುರುಷರು ಪ್ರತಿಯೊಂದು ಕ್ಷೇತ್ರದಲ್ಲೂ ಪರಸ್ಪರ ಕೈಜೋಡಿಸುತ್ತಿದ್ದಾರೆ. ಆಧುನಿಕ ತಂತ್ರಜ್ಞಾನದ ಆಗಮನವು ಸರಿಯಾದ ಶಿಕ್ಷಣ ಮತ್ತು ಸಂವಹನದೊಂದಿಗೆ ಪ್ರತಿ ಮಹಿಳೆಗೆ ತನ್ನ ಆಕಾಂಕ್ಷೆ ಮತ್ತು ಕನಸುಗಳನ್ನು ಈಡೇರಿಸಿಕೊಳ್ಳಲು ಹಿಂದೆಂದಿಗಿಂತಲೂ ಈಗ ಸಾಕಷ್ಟು ಅವಕಾಶಗಳನ್ನು ನೀಡಿದೆ ಮಹಿಳೆಯರು ಕೆಲವು ರೀತಿಯ ವೃತ್ತಿಯನ್ನು ಹೊಂದಿರುವ ಹಳೆಯ-ಹಳೆಯ ಸ್ಟೀರಿಯೊಟೈಪ್‌ಗಳನ್ನು ಮುರಿದು ತಮ್ಮನ್ನು ತಾವು ಪ್ರಕಾಶಮಾನವಾದ ವೃತ್ತಿಜೀವನವನ್ನು ಸ್ಥಾಪಿಸಲು ಕಳೆದ ನೂರು ವರ್ಷಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸುತ್ತಿದ್ದಾರೆ. ಒಬ್ಬ ವ್ಯಕ್ತಿಯು ಕೆಲಸ ಮತ್ತು ವೈಯಕ್ತಿಕ ಜೀವನದ ನಡುವೆ ಎಷ್ಟು ಸೂಕ್ಷ್ಮವಾಗಿ ಸುಂದರವಾಗಿ ಸಮತೋಲನಗೊಳಿಸಬಹುದು ಎಂಬುದಕ್ಕೆ ಅವು ಅತ್ಯುತ್ತಮ ಉದಾಹರಣೆಗಳಾಗಿವೆ. ಆದರೆ, ಕೆಲವೊಮ್ಮೆ, ಇದು ಸಂಭವಿಸುತ್ತದೆ ಆದ್ದರಿಂದ ಅವರು ತಮ್ಮ ನಿರಾಸಕ್ತಿಯ ವಲಯವನ್ನು ಆರಿಸಬೇಕಾಗುತ್ತದೆ. ಅವರು ತಮ್ಮ ವೃತ್ತಿಯನ್ನು ಆಯ್ಕೆಮಾಡಲು ಸರಿಯಾಗಿ ಮಾರ್ಗದರ್ಶನ ನೀಡದಿದ್ದಾಗ ಅಥವಾ ಮಾಹಿತಿಯ ಕೊರತೆಯಿರುವಾಗ ಇದು ಹೆಚ್ಚಾಗಿ ಸಂಭವಿಸುತ್ತದೆ ಭಾರತದಲ್ಲಿ ಮಹಿಳೆಯರು ಮತ್ತು ಹುಡುಗಿಯರಿಗಾಗಿ ಟಾಪ್ 10 ಉದ್ಯೋಗಗಳು ಮಾನವ ಸಂಪನ್ಮೂಲಗಳು ಪ್ರಸ್ತುತ ಜಗತ್ತಿನಲ್ಲಿ ಹೆಚ್ಚು ಬೇಡಿಕೆಯಿರುವ ಕಾರ್ಪೊರೇಟ್ ಉದ್ಯೋಗವೆಂದರೆ ಮಾನವ…

Read More

ಪಾಟ್ನಾ:-ಬಿಹಾರದ ಬೇಗುಸರಾಯ್‌ನಲ್ಲಿ ರೀಲ್ಸ್ ಮಾಡುವುದನ್ನು ವಿರೋಧಿಸಿದ್ದಕ್ಕೆ ಪತ್ನಿಯೊಬ್ಬಳು ಗಂಡನನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಹೇಶ್ವರ್ ಕುಮಾರ್ ಮೃತ ವ್ಯಕ್ತಿ. ಪತ್ನಿ ರಾಣಿಕುಮಾರಿಗೆ ರೀಲ್ಸ್ ಮಾಡುವ ಹುಚ್ಚಿತ್ತು. ಆದರೆ, ಪತಿ ಅದನ್ನು ವಿರೋಧಿಸಿದ್ದರು. ಹೀಗಾಗಿ ಕೋಪಗೊಂಡ ಪತ್ನಿಯು ತನ್ನ ತಂದೆ-ತಾಯಿಯೊಂದಿಗೆ ಸೇರಿಕೊಂಡು ಹತ್ಯೆ ಮಾಡಿದ್ದಾಳೆ ಎನ್ನಲಾಗಿದೆ. ಫಫೌತ್ ಗ್ರಾಮದ ರಾಣಿ ಕುಮಾರಿ ಸುಮಾರು 7 ವರ್ಷಗಳ ಹಿಂದೆ ಮಹೇಶ್ವರ್ ನನ್ನ ಮದುವೆಯಾಗಿದ್ದರು. ಮಹೇಶ್ವರ್ ಕೆಲಸಕ್ಕೆ ಹೋಗುವ ವೇಳೆ ಫಫೌತ್ ಗ್ರಾಮದಲ್ಲಿನ ತನ್ನ ಅತ್ತೆಯ ಮನೆಗೆ ಹೋಗಿದ್ದರು ಎನ್ನಲಾಗಿದೆ. ಇನ್ಸ್ಟಾಗ್ರಾಂ ರೀಲ್ಸ್ ವಿಚಾರವಾಗಿ ಮಹೇಶ್ವರ್ ಮತ್ತು ರಾಣಿ ಕುಮಾರಿ ನಡುವೆ ವಾಗ್ವಾದ ನಡೆದಿತ್ತು. ಆಗ ಜಗಳ ವಿಕೋಪಕ್ಕೆ ಹೋಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ.

Read More

ಜೂನ್ 1 ರಿಂದ ಚುಟುಕು ವಿಶ್ವಕಪ್ ಟೂರ್ನಿಗೆ ಅದ್ಧೂರಿ ಚಾಲನೆ ಸಿಗಲಿದೆ. ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಆಡಬೇಕೆಂದು ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ. ಚುಟುಕು ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಅವರೇ ತಂಡವನ್ನು ಮುನ್ನಡೆಸಬೇಕು ಮತ್ತು ವಿರಾಟ್ ಕೊಹ್ಲಿ ಆಡಬೇಕು ಎಂದಿದ್ದಾರೆ. ವಿರಾಟ್ ಕೊಹ್ಲಿ ಅವರು ಇತ್ತೀಚೆಗೆ ಉತ್ತಮ ಫಾರ್ಮ್ ನಲ್ಲಿದ್ದು, 14 ತಿಂಗಳು ಚುಟುಕು ಸ್ವರೂಪದಿಂದ ದೂರ ಉಳಿದಿದ್ದರು ಯಾವುದೇ ಪರಿಣಾಮ ಬೀರುವುದಿಲ್ಲ. 2022ರ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 10 ವಿಕೆಟ್ ಗಳ ಸೋಲು ಕಂಡ ನಂತರ ಈ ಮಾದರಿ ಕ್ರಿಕೆಟ್ ನಿಂದ ದೂರ ಉಳಿದಿದ್ದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅಫಘಾನಿಸ್ತಾನ ವಿರುದ್ಧದ ಚುಟುಕು ಸರಣಿಯಿಂದ ಕಮ್ ಬ್ಯಾಕ್…

Read More

ನವದೆಹಲಿ: ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ಯುವಕನ ಮರ್ಮಾಂಗವನ್ನು ಕತ್ತರಿಸಿ ಪರಾರಿಯಾಗಿರುವ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ದೆಹಲಿಯ ಹೊರವಲಯದ ಮಂಗಳಪುರಿಯಲ್ಲಿ 22 ವರ್ಷದ ಯುವತಿ ಈ ಕೃತ್ಯವನ್ನು ಎಸಗಿದ್ದಾಳೆ. ಕೃತ್ಯ ಎಸಗಿದ ಬಳಿಕ ಯುವತಿ ತನ್ನ ಕುಟುಂಬದ ಸದಸ್ಯರ ಜೊತೆ ಪರಾರಿಯಾಗಿದ್ದಾಳೆ. 35 ವರ್ಷದ ಸಂತ್ರಸ್ತ ಯುವಕನನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಸ್ತ್ರಚಿಕಿತ್ಸೆಯ ಬಳಿಕ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಆದರೆ ಮರ್ಮಾಂಗವನ್ನು ಜೋಡಿಸುವ ಪ್ರಯತ್ನ ಯಶಸ್ವಿಯಾಗಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಏನಿದು ಪ್ರಕರಣ? ಬೀದಿ ವ್ಯಾಪಾರಿಯಾಗಿರುವ ಯುವಕನನ್ನು ಯುವತಿ ತನ್ನ ಮನೆಗೆ ಕರೆದಿದ್ದಾಳೆ. ಮನೆಗೆ ಬಂದ ಯುವಕನ ಜೊತೆ ಮದುವೆಯಾಗುವಂತೆ ಒತ್ತಡ ಹೇರಿದ್ದಾಳೆ. ಮದುವೆಯನ್ನು ನಿರಾಕರಿಸಿದ್ದಕ್ಕೆ ಯುವತಿ ಯುವಕನ್ನು ಬಾತ್ ರೂಮ್‍ನಲ್ಲಿ ಕೂಡಿ ಹಾಕಿ ವಿವಸ್ತ್ರಗೊಳಿಸಿ ಬಲವಂತವಾಗಿ ಸೆಕ್ಸ್ ಮಾಡುವಂತೆ ಒತ್ತಡ ಹಾಕಿದ್ದಾಳೆ. ತನ್ನ ಬೇಡಿಕೆಯನ್ನು ಯುವಕ ತಿರಸ್ಕರಿಸಿದ್ದಕ್ಕೆ ಆಡುಗೆ ಕೋಣೆಗೆ ಹೋಗಿ ಯುವತಿ ಹರಿತವಾದ ಚೂರಿಯನ್ನು ತಂದು, ನನ್ನ ಜೊತೆ ಸೆಕ್ಸ್ ಮಾಡದೇ ಇದ್ದರೆ ನಿನ್ನನ್ನು…

Read More