Author: AIN Author

ಚಿತ್ರ ನಟ ಯಶ್​ ಜನ್ಮದಿನದ ಹಿನ್ನಲೆ ಅವರ ಬ್ಯಾನರ್​ ಕಟ್ಟುವಾಗ ಮೂವರು ಅಭಿಮಾನಿಗಳು ದಾರುಣ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೊರಣಗಿ ಗ್ರಾಮದಲ್ಲಿ ನಡೆದಿದೆ. ಹನಮಂತ ಹರಿಜನ, ಮುರಳಿ ನಡವಿನಮನಿ, ನವೀನ್ ಗಾಜಿ ಮೃತ ಯುವಕರು. ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಎಲ್ಲರೂ ಸೂರಣಗಿ ಗ್ರಾಮದವರು. https://ainlivenews.com/death-of-yash-fan-due-to-electrocution-cm-has-suggested-compensation-to-the-family-of-the-deceased/ ಯಶ್‌ ಅವರ ಜನ್ಮದಿನಕ್ಕೆ ಶುಭಾಶಯ ಕೋರುವ ಬ್ಯಾನರ್‌ ಅನ್ನು ಹಸಿ ನೀಲಗಿರಿ ಕಟ್ಟಿಗೆಗೆ ಕಟ್ಟಿ ಮೇಲೆತ್ತುವಾಗ ವಿದ್ಯುತ್ ತಂತಿ ತಗುಲಿ ಕರೆಂಟ್‌ ಶಾಕ್‌ ಹೊಡೆದು ಅವಘಡ ಸಂಭವಿಸಿದೆ. ಈ ಅವಘಡ ಯುವಕರ ಸಾವಿಗೆ ಕಾರಣವಾಗಿದೆ. ಘಟನೆ ಸಂಬಂಧ ಲಕ್ಷ್ಮೇಶ್ವರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಟ ಯಶ್ ಜನ್ಮದಿನದಂದು ಈ ಹಿಂದೆಯೂ ಅವಘಡಗಳು ಸಂಭವಿಸಿದ್ದವು, 2018ರಲ್ಲಿ ಫೆಬ್ರವರಿ ಮೊದಲ ವಾರದಲ್ಲಿ ಹಾವೇರಿಯಲ್ಲಿ ನಡೆದ ಊರಹಬ್ಬಕ್ಕೆ ಯಶ್ ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶಿಸಿ ಹಾವೇರಿಯ ಅಗಡಿ ಮೂಲದ ಹರೀಶ್ ಎರಡೂ ಕೈ ಕಳೆದುಕೊಂಡಿದ್ದರು. ಹರೀಶ್​…

Read More

ನವದೆಹಲಿ: ರಾಷ್ಟ್ರಧಾನಿ ದೆಹಲಿಯಲ್ಲಿ ಅತಿಯಾದ ಚಳಿ ಹಿನ್ನೆಲೆಯಲ್ಲಿ 5 ದಿನಗಳ ಕಾಲ ನರ್ಸರಿಯಿಂದ 5 ತರಗತಿವರೆಗಿನ ಮಕ್ಕಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚುತ್ತಿದ್ದು, ಕೆಲವು ರಾಜ್ಯಗಳಲ್ಲಿ ಜನರು ಮನೆಯಿಂದ ಹೊರಗೆ ಬರೋಕೂ ಕೂಡ ಯೋಚನೆ ಮಾಡುವಂತಾಗಿದೆ. ಉತ್ತರ ಭಾರತದಲ್ಲಿ ಚಳಿಯ ತೀವ್ರತೆ ಪ್ರತಿದಿನ ಹೆಚ್ಚುತ್ತಿದ್ದು, ಈ ಹಿನ್ನೆಲೆ ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ಹಲವು ರಾಜ್ಯ ಸರ್ಕಾರಗಳು ಖಾಸಗಿ ಮತ್ತು ಸರ್ಕಾರಿ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದೆ. ಇದಕ್ಕಾಗಿ ಸ್ಥಳೀಯ ಸರ್ಕಾರ ಆದೇಶವನ್ನೂ ಹೊರಡಿಸಿದೆ. ಇನ್ನು ಹಲವು ಕಡೆಗಳ ಶಾಲೆಗಳಲ್ಲಿ ತರಗತಿಗಳ ಸಮಯವನ್ನು ಬದಲಾಯಿಸಲಾಗಿದೆ. https://ainlivenews.com/there-is-no-better-savings-than-this-save-50-rupees-a-day-and-make-30-lakhs-yours/ ತೀವ್ರವಾದ ಚಳಿಯ ವಾತಾವರಣ ಕಳೆದ ಕೆಲವು ದಿನಗಳಿಂದ ಮುಂದುವರಿಯುತ್ತಿದ್ದರಿಂದ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದಲ್ಲಿ 8 ನೇ ತರಗತಿ ತನಕದ ಶಾಲೆಗಳನ್ನು ಜನವರಿ 14, 2024 ರವರೆಗೆ ಮುಚ್ಚಲು ಆದೇಶಿಸಲಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ಶಾಲೆಗಳನ್ನು ಮುಚ್ಚುವ ನಿರ್ಧಾರವು ರಾಜ್ಯದಲ್ಲಿನ ಖಾಸಗಿ ಮತ್ತು ಸರ್ಕಾರಿ ಶಾಲೆಗಳಿಗೆ ಮಾತ್ರ ಅನ್ವಯಿಸಲಿದೆ.

Read More

ಬೆಂಗಳೂರು:  ಬಿಎಂಟಿಸಿ ಎಂಡಿ ಸತ್ಯವತಿ ಮೇಲೆ ಸಾಲು ಸಾಲು ದೂರು ದಾಖಲಾಗಿದ್ದು  ನೌಕರರ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರ ಈ ಹಿನ್ನೆಲೆಯಲ್ಲಿ  ಬಿಎಂಟಿಸಿ ಎಂ.ಡಿ ಸತ್ಯವತಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಬಿಎಂಟಿಸಿ ಎಂಡಿ ಸತ್ಯವತಿಯನ್ನ ವರ್ಗಾವಣೆ ಮಾಡಿ  ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ https://ainlivenews.com/flood-threat-for-bangalore-for-the-next-six-months/ ಕೆಎಸ್‌ಆರ್‌ಟಿಸಿ ಸ್ಟಾಪ್ ಆ್ಯಂಡ್ ವರ್ಕರ್ಸ್ ಫೆಡರೇಶನ್, ಸತ್ಯವತಿ ವರ್ಗಾವಣೆ ಮಾಡುವಂತೆ ಸಚಿವರಿಗೆ ಮನವಿ ಮಾಡಿತ್ತು ಯಾವುದೇ ಹುದ್ದೆ ನೀಡದೇ ಸತ್ಯವತಿಯನ್ನ ವರ್ಗಾವಣೆ ಮಾಡಿದ ಸರ್ಕಾರ ಬಿಎಂಟಿಸಿ ನೂತನ ಎಂಡಿಯಾಗಿ ರಾಮಚಂದ್ರನ್ ಆರ್ ನೇಮಕ ಮಾಡಿ ಸರ್ಕಾರ ಆದೇಶ ನೀಡಿದ್ದು ಬಿಬಿಎಂಪಿ ಸ್ಪೆಷಲ್ ಕಮೀಷನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಚಂದ್ರನ್ ಆರ್

Read More

ಬೆಂಗಳೂರು: ಇನ್ನೇನು ಕೆಲ ದಿನಗಳಲ್ಲಿ ಬೇಸಿಗೆ ಶುರುವಾಗ್ತಿದೆ..ಬೇಸಿಗೆಯಲ್ಲಿ ನೀರಿನ ಬವಣೆ ಹಿಂದಿನ ವರ್ಷಗಳಿಗಿಂತ ಹೆಚ್ಚಾಗಿ ಕಾಡುವ ಭೀತಿ ಇದೆ‌.ಹೀಗಾಗಿ ಬೇಸಿಗೆ ಎದುರಿಸಲು ಜಲಮಂಡಳಿ ಮುಂದಾಗಿದ್ದು,ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಳ್ಳುವುದಕ್ಕೆ ಸಿದ್ದತೆ ನಡೆಸಿದೆ.ಹಾಗಾದರೆ ಬೇಸಿಗೆ ಎದುರಿಸಲು ಜಲಮಂಡಳಿ ಏನೆಲ್ಲಾ ಸಿದ್ದತೆ ಮಾಡಿಕೊಳ್ಳುತ್ತಿದೆ ಬನ್ನಿ ನೋಡೋಣ ಬೆಂಗಳೂರಿನ ನೀರಿನ ಸಮಸ್ಯೆಗೆ ಸರ್ಕಾರವಂತೂ ಶಾಶ್ವತ ಪರಿಹಾರ ಕೊಡಲಿಲ್ಲ.ಹೀಗಾಗಿ ಕಾವೇರಿ ಮೂಲದಿಂದ ಬರುತ್ತಿರುವ ನೀರನ್ನು ಅವಲಂಬಿಸಬೇಕಿದೆ.ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಗೊಂಡಿರುವ 110 ಹಳ್ಳಿಗಳಿಗಂತೂ ಮಳೆಗಾಲ,ಚಳಿಗಾಲ, ಬೇಸಿಗೆ ಎನ್ನದೆ ತೀವ್ರ ನೀರಿನ ಅಭಾವ ಇದೆ.ಇನ್ನೇನು ಕೆಲ ದಿನಗಳಲ್ಲಿ ಬೇಸಿಗೆ ಆರಂಭವಾಗ್ತಿರೋ ಕಾರಣ ಬೇಸಿಗೆಯಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಜಲಮಂಡಳಿ ತಯಾರಿಗಳನ್ನ ಮಾಡಿಕೊಳ್ಳುತ್ತಿದೆ. https://ainlivenews.com/international-film-festival-from-february-29-to-march-7/ ಹೌದು.ಈ ಬಾರಿ ನಗರದಲ್ಲಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗದು ಎಂದು ಹೇಳುತ್ತಿದ್ದಾರಾದರೂ ವಾಸ್ತವ ಇದಕ್ಕೆ ತದ್ವಿರುದ್ಧ. ಇದೆಲ್ಲದರ ಪರಿಣಾಮ ಬೇಸಿಗೆಯಲ್ಲಿ ನಗರದ ನಾಗರಿಕರಿಗೆ ನೀರಿನ ಬಿಸಿಯೂ ತಟ್ಟಲಿದೆ.ಹೀಗಾಗಿ ಕಾವೇರಿ ಕಣಿವೆಯಲ್ಲಿ ನೀರಿನ ಪ್ರಮಾಣ ಕುಸಿಯುತ್ತಿರುವ ಕಾರಣ ನಗರಕ್ಕೆ ಜೂನ್ ವರಿಗೆ ನೀರಿನ ಸಮಸ್ಯೆ ಆಗದಂತೆ…

Read More

ದೊಡ್ಡಬಳ್ಳಾಪುರ: ಮಕ್ಕಳು ಮಾನಸಿಕ ಹಾಗೂ ದೈಹಿಕವಾಗಿ ಪರಿಪಕ್ವವಾಗಲು ಪಠ್ಯದ ಜೊತೆಗೆ ಮಾನವೀಯ ಮೌಲ್ಯಗಳು, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ವಿವಿಧ ರೀತಿಯ ಪಠ್ಯೇತರ ಚಟುವಟಿಕೆ ಏರ್ಪಡಿಸಿ ಸರ್ವತೋಮುಖ ಬೆಳವಣಿಗೆಗೆ ಶಾಲೆಗಳು ಶ್ರಮಿಸಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು. ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಶ್ರೀ ಗುಬ್ಬಿ ಚೆನ್ನಬಸವೇಶ್ವರ ಎಜುಕೇಷನ್ ಟ್ರಸ್ಟ್ ನ ನ್ಯಾಷನಲ್ ಪ್ರೈಡ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರು ಹಾಗೂ ಪಾಲಕರ ಪಾತ್ರ ಬಹಳ ನಿರ್ಣಯಕವಾಗಿದೆ. ಈ ನಿಟ್ಟಿನಲ್ಲಿ‌ ನ್ಯಾಷನಲ್ ಪ್ರೈಡ್ ಶಾಲೆಯು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಆಡಳಿತ ಮಂಡಳಿ ಸಹ ಶಿಕ್ಷಣ ಸೇವೆ ಮುಂದುವರೆಸಿಕೊಂಡು ಶಾಲೆಯ ಜೊತೆಗೆ ಕಾಲೇಜು ಕೂಡ ಪ್ರಾರಂಭಿಸುವಂತಾಗಲಿ ಎಂದು ಆಶಿಸಿದರು. ಶಾಲೆಯ ಕಾರ್ಯದರ್ಶಿ ಸಿ.ಎನ್. ಸತೀಶ್ ಮಾತನಾಡಿ, ನಮ್ಮ ಶಾಲೆಯಲ್ಲಿ ಸಮಯ ಪಾಲನೆಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅದೇರೀತಿ ಸರ್ವ ಧರ್ಮ ಸಮನ್ವಯತೆ ಶಾಲೆ ಇದಾಗಿದೆ. ಎಲ್ಲ ಧರ್ಮಿಯ ಮಕ್ಕಳಿಗೆ ಅವರವರ ಧರ್ಮದ ಪ್ರಾರ್ಥನೆ…

Read More

ಬೆಂಗಳೂರು: ಹುಟ್ಟು ಹಬ್ಬದ ಸಲುವಾಗಿ ಕಟೌಟ್ ನಿಲ್ಲಿಸುವುದಕ್ಕೆ ಹೋಗಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯಶ್ ಅಭಿಮಾನಿಗಳ (Yash Fans) ಕುಟುಂಬಕ್ಕೆ ರಾಜ್ಯ ಸರ್ಕಾರ (Government Of Karnataka) ಪರಿಹಾರ ಘೋಷಣೆ ಮಾಡಿದೆ. ಈ ಸಂಬಂಧ ಮಾತನಾಡಿರುವ ಸಚಿವ ಹೆಚ್.ಕೆ ಪಾಟೀಲ್ (HK Patil), ವಿದ್ಯುತ್ ಸ್ಪರ್ಶದಿಂದ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದೇವೆ. ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. https://ainlivenews.com/hdk-vs-hebbalker-let-the-cm-stop-the-grip-on-minister-hebbalker-hdk-gudugu/ ಮುಂದುವರಿದು, ಯಶ್ ಅಭಿಮಾನಿಗಳು ಮೃತಪಟ್ಟಿರುವ ಘಟನೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ನಟ ಯಶ್ ಸಹ ನನ್ನ ಜೊತೆ ಮಾತನಾಡಿದ್ದಾರೆ. ಅಭಿಮಾನಿಗಳ ಮನೆಗೆ ಅವರಿಂದು ಭೇಟಿ ನೀಡಲಿದ್ದಾರೆ. ಎತ್ತರದಲ್ಲಿ ಫ್ಲೆಕ್ಸ್ ಹಾಕುವಾಗ ಭದ್ರತಾ ವೈಫಲ್ಯವಾಗುತ್ತಿದೆ. ಈ ರೀತಿ ಘಟನೆಗಳು ನಡೆಯದಂತೆ ಏನೆಲ್ಲಾ ಎಚ್ಚರಿಕೆ ವಹಿಸಬಹುದು ಎಂದು ಸಿಎಂ ಜೊತೆಗೆ ಚರ್ಚೆ ಮಾಡ್ತೀವಿ. ನಂತರ ಕ್ರಮವನ್ನು ಅನುಷ್ಠಾನಗೊಳಿಸುತ್ತೇವೆ ಎಂದು ವಿವರಿಸಿದ್ದಾರೆ.

Read More

ಬೆಂಗಳೂರು: ಸ್ವಾತಂತ್ರ್ಯಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತೆಂಬ ಹೇಳಿಕೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಹೇಳಿಕೆಗೆ ಮಾಜಿ ಸಿಎಂ H.D.ಕುಮಾರಸ್ವಾಮಿ ಕಿಡಿಕಾರಿದ್ದಾರೆ ನಗರದಲ್ಲಿ ಮಾತನಾಡಿದ ಅವರು,  ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದಿದ್ದಾರೆ ಮಂತ್ರಿಯಾಗಿ ಈ ರೀತಿ ಮಾತಾಡೋದು ಅದಕ್ಕಾಗಿ ನೀರೆರದ ಹಾಗೆ ಸಿಎಂಗೆ ಸಚಿವರ ಮೇಲೆ ಹಿಡಿತವಿದ್ರೆ ಅಂತಹ ಹೇಳಿಕೆಗೆ ಕಡಿವಾಣ ಹಾಕಲಿ ಎಂದು ವಾಗ್ದಾಳಿ ನಡೆಸಿದರು. https://ainlivenews.com/ban-on-mining-around-krs-high-court-notice/ ಗ್ಯಾರಂಟಿ ಹೆಸರಲ್ಲಿ ಸರ್ಕಾರ ಮಾಡಿ ಅಭಿವೃದ್ಧಿ ಮಾಡಲು ಆಗುತ್ತಿಲ್ಲ ಈ ಬಗ್ಗೆ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿಯನ್ನೇ ಹೇಳಿದ್ದಾರೆ. ಬರ ಪರಿಹಾರದಲ್ಲಿ ಹೇಗೆ ನಡೆದುಕೊಂಡಿದ್ದಾರೆ ಎಂಬುದೂ ಗೊತ್ತಿದೆ ಬೆಂಗಳೂರು ನಗರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಕಿಡಿ ಕಾರಿದ್ದಾರೆ.

Read More

ಬೆಂಗಳೂರು:   ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. https://twitter.com/CMofKarnataka/status/1744295378697252982?t=2I2WfgfwH9Ftz599XVk5Zw&s=19 ಹುಟ್ಟು ಹಬ್ಬದ ಸಲುವಾಗಿ ಕಟೌಟ್ ನಿಲ್ಲಿಸುವುದಕ್ಕೆ ಹೋಗಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯಶ್ ಅಭಿಮಾನಿಗಳ (Yash Fans) ಕುಟುಂಬಕ್ಕೆ ರಾಜ್ಯ ಸರ್ಕಾರ (Government Of Karnataka) ಪರಿಹಾರ ಘೋಷಣೆ ಮಾಡಿದೆ. ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ, ಅವರನ್ನು ನಂಬಿದ್ದ ಕುಟುಂಬವೀಗ ಸಂಕಷ್ಟಕ್ಕೆ ಸಿಲುಕಿದ್ದು ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ಮೃತ ದುರ್ದೈವಿಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿದ್ದೇನೆ.

Read More

ಕೋಲಾರ: ಮಾಲೂರಿನ ಕಾಂಗ್ರೆಸ್​ ಶಾಸಕ ಕೆವೈ ನಂಜೇಗೌಡರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ನಂಜೇಗೌಡರು ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರಾಗಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊಮ್ಮನಹಳ್ಳಿ ಯಲ್ಲಿರುವ ಮನೆಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಕೋಲಾರ ತಾಲೂಕಿನ ಹುತ್ತೂರು ಹೋಬಳಿಯಲ್ಲಿರುವ ಕೋಚಿಮುಲ್, ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್​ ಕಚೇರಿ ಮೇಲೆಯೂ ದಾಳಿ ನಡೆದಿದ್ದು, https://ainlivenews.com/there-is-no-better-savings-than-this-save-50-rupees-a-day-and-make-30-lakhs-yours/ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ. ಕೋಚಿಮುಲ್ ಹಾಲು ಒಕ್ಕೂಟದ ಎಂ.ಡಿ ಗೋಪಾಲಮೂರ್ತಿ, ಆಡಳಿತ ವಿಭಾಗದ ವ್ಯವಸ್ತಾಪಕ ನಾಗೇಶ್ ಸೇರಿ ವಿವಿಧ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ. ಶಾಸಕ ನಂಜೇಗೌಡ ಆಪ್ತ ಸಹಾಯಕ ಹರೀಶ್ ಅವರ ದೊಡ್ಡಮಲ್ಲೆ ಗ್ರಾಮದಲ್ಲಿರುವ ನಿವಾಸದ ಮನೆ ಮೇಲೂ ಇಡಿ ದಾಳಿ ನಡೆದಿದೆ. ಒಟ್ಟು 15ಕ್ಕೂ ಅಧಿಕ ಕಡೆ ಜಾರಿ ನಿರ್ದೇಶಾನಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಕೋಚಿಮುಲ್ ನೇಮಕಾತಿ ವಿಚಾರದಲ್ಲಿ ಸಾಕಷ್ಟು ಅವ್ಯವಹಾರದ ಸದ್ದು ಮಾಡಿತ್ತು. ನೇಮಕಾತಿ ವೇಳೆ ಲಕ್ಷಾಂತರ ರೂಪಾಯಿ…

Read More

ಗರ್ಭಾವಸ್ಥೆಯಲ್ಲಿ ಎದೆಯುರಿ ಒಂದು ಸಾಮಾನ್ಯ ಸಮಸ್ಯೆ. ಹೆಚ್ಚಾಗಿ ನೀರು ಕುಡಿದ ನಂತರ ಇದು ಸಂಭವಿಸುತ್ತೆ. ಇದಲ್ಲದೆ, ಹಾರ್ಮೋನುಗಳ ಬದಲಾವಣೆಗಳಿಂದಾಗಿ, ಎದೆಯಲ್ಲಿ ಉರಿ ಸಮಸ್ಯೆ ಕಂಡು ಬರಬಹುದು. ತಜ್ಞರ ಪ್ರಕಾರ, ಒಂದು ವೇಳೆ ನೀವು ಗರ್ಭವತಿಯಾಗಿದ್ದು ಧೂಮಪಾನಿಯೂ ಆಗಿದ್ದರೆ ಕೆಲವು ಸುರಕ್ಷತಾ ವಿಧಾನಗಳನ್ನು ನೀವು ಅನಿವಾರ್ಯವಾಗಿ ಅನುಸರಿಸಲೇಬೇಕಾಗುತ್ತದೆ. ಏಕೆಂದರೆ ಈ ಸಮಯದಲ್ಲಿ ನಿಮ್ಮ ಧೂಮಪಾನ ನಿಮ್ಮ ಗರ್ಭದಲ್ಲಿರುವ ಕಂದನ ಆರೋಗ್ಯಕ್ಕೆ ಅತಿ ಹೆಚ್ಚು ಹಾನಿಯುಂಟುಮಾಡಬಹುದು. ಗರ್ಭವತಿ ಸೇವಿಸುವ ಅಹಾರ, ಪಾನೀಯಗಳು, ಔಷಧಿಗಳು ಮೊದಲಾದವು ಗರ್ಭದಲ್ಲಿರುವ ಕಂದನ ಆರೋಗ್ಯದ ಮೇಲೆ ಧನಾತ್ಮಕ ಅಥವಾ ಋಣಾತ್ಮಕ ಪರಿಣಾಮಗಳನ್ನುಂಟು ಮಾಡಬಹುದು. ಉದಾಹರಣೆಗೆ ಒಂದು ವೇಳೆ ಗರ್ಭವತಿ ವೈದ್ಯರು ಸೂಚಿಸಿದ ಆಹಾರವನ್ನು ಸಂತುಲಿತ ಪ್ರಮಾಣದಲ್ಲಿ ಸೇವಿಸಿದಾಗ ಮತ್ತು ವೈದ್ಯರು ಬೇಡವೆಂದ ಯಾವುದೇ ಆಹಾರ, ಔಷಧ ಅಥವಾ ವ್ಯಸನಗಳನ್ನು ಸ್ವೀಕರಿಸದೇ ಇದ್ದಾಗ ಕಂದನ ಆರೋಗ್ಯವೂ ಉತ್ತಮವಾಗಿರುತ್ತದೆ. https://ainlivenews.com/there-is-no-better-savings-than-this-save-50-rupees-a-day-and-make-30-lakhs-yours/ ಆದರೆ ಗರ್ಭವತಿ ತನ್ನ ಆಲಸಿ ಮತ್ತು ಅನಾರೋಗ್ಯಕರ ಜೀವನಕ್ರಮವನ್ನು ಗರ್ಭವತಿಯಾದ ಬಳಿಕವೂ ಬದಲಿಸಿಕೊಳ್ಳದೇ ಧೂಮಪಾನದಂತಹ ಕೆಟ್ಟ ಚಟಗಳನ್ನು ಮುಂದುವರೆಸಿದರೆ ಮಾತ್ರ ಮಗುವಿನ ಆರೋಗ್ಯ…

Read More