Author: AIN Author

ಬೆಂಗಳೂರು: ಕೃಷ್ಣರಾಜ ಸಾಗರ (KRS) ಸುತ್ತಮುತ್ತ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಹೈಕೋರ್ಟ್‌ (High Court) ಮಹತ್ವದ ಆದೇಶ ಪ್ರಕಟಿಸಿದೆ. ಭೂಪರಿವರ್ತನೆಗೂ ಮುನ್ನ ಪರೀಕ್ಷಾರ್ಥ ಸ್ಫೋಟ ನಡೆಸಿ ಹಾನಿ ಸಾಧ್ಯತೆ ಪರಿಗಣಿಸಿ ಅನುಮತಿಯ ಷರತ್ತು ಹಾಕಿದ್ದ ಜಿಲ್ಲಾಧಿಕಾರಿ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಈ ಆದೇಶ ಪ್ರಕಟಿಸಿದೆ. https://ainlivenews.com/is-there-a-man-who-stands-for-strength-and-truth-to-whom-did-hdk-say-this/ ಕೆಆರ್‌ಎಸ್ ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ (Mining) ನಡೆಸಬಾರದು. ಕೆಆರ್‌ಎಸ್ ಜಲಾಶಯಕ್ಕೆ ಹಾನಿ ಮಾಡುವುದನ್ನು ತಡೆಗಟ್ಟಬೇಕಿದೆ. ಕೆಆರ್‌ಎಸ್ ಸುರಕ್ಷತೆ ನಮಗೆ ಮುಖ್ಯ ಎಂದು ಹೈಕೋರ್ಟ್‌ ಮುಖ್ಯ ನಾಯಮೂರ್ತಿ ಪಿ ಬಿ ವರಾಳೆ ಮತ್ತು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗಿಯ ಪೀಠ ಹೇಳಿದೆ. ಕೆಆರ್‌ಎಸ್ ಸುರಕ್ಷತೆಯೇ ನಮಗೆ ಮುಖ್ಯವಾಗಿದೆ. ಈ ಕಾರಣಕ್ಕೆ ಕೆಆರ್‌ಎಸ್ ಸುತ್ತಮುತ್ತಲಿನ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸಬಾರದು ಎಂದು ವಿಭಾಗೀಯ ಪೀಠ  ಆದೇಶ ಪ್ರಕಟಿಸಿದೆ.

Read More

ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರ ಪ್ರಕರಣಕ್ಕೆ ಸಂಬಂಧಿಸಿ ತಾವು ನೀಡಿದ್ದ ಹೇಳಿಕೆಯ ಬಗ್ಗೆ, ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದ ಸಚಿವರಿಬ್ಬರಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಪ್ರತ್ಯುತ್ತರ ನೀಡಿರುವ ಅವರು; ಸಿಎಂ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ‘ನೀರೋ’ ಎಂದು ಜರೆದಿದ್ದಾರೆ. https://ainlivenews.com/ex-minister-ramesh-jarakiholi-accused-of-fraud/ ಅಲ್ಲದೆ, ದಾಖಲೆ ಇಟ್ಟುಕೊಂಡೇ ವಿಕ್ರಮ ಸಿಂಹ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಬೇಕಿದ್ದರೆ ದಾಖಲೆಗಳನ್ನು ನಾನೇ ತಂದುಕೊಡುತ್ತೇನೆ. ಆಮೇಲೆ ಕ್ರಮ ಜರುಗಿಸುವ ದಮ್ಮು, ತಾಕತ್ತು ಹಾಗೂ ಸತ್ಯದ ಪರ ನಿಲ್ಲುವ ಗಂಡಸ್ತನ ಇದೆಯಾ? ಎಂದು ಅವರು ಪ್ರಶ್ನಿಸಿದ್ದಾರೆ. ಕರ್ನಾಟಕದ ‘ನೀರೋ’ಗೆ ರಾಜಕೀಯ ಊಳಿಗ ಮಾಡುತ್ತಿರುವ ಗೃಹಮಂತ್ರಿ ಪರಮೇಶ್ವರ್ ಮತ್ತು ಸಿದ್ದಹಸ್ತರು ಹೇಳಿದ್ದಕ್ಕೆಲ್ಲ ‘ಪರಿಪೂರ್ಣ ಸಹಕಾರ’ ಕೊಡುವ ಹಾಸನ ಜಿಲ್ಲಾ ಉಸ್ತುವಾರಿ ಕೆ ಎನ್ ರಾಜಣ್ಣ ಅವರು ಸಂಸದ ಪ್ರತಾಪ್ ಸಿಂಹ ಅವರ ಸಹೋದರನ…

Read More

ಹುಬ್ಬಳ್ಳಿ: ಯಶ್ ಬರ್ತ್ ಡೇ ಹಿನ್ನೆಲೆಯಲ್ಲಿ ಬ್ಯಾನರ್ ಕಟ್ಟಲು ಹೋಗಿ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದ ಮೂವರು ಸಾವನ್ನಪ್ಪಿದ್ದು, ಅಂತಿಮ ಸಂಸ್ಕಾರಕ್ಕೆ ಹಾಗೂ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ರಾಕಿಂಗ್ ಸ್ಟಾರ್ ಯಶ್ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ.ಹೌದು.. ಅಭಿಮಾನಿಗಳ ಹಾಗೂ ವಾಹನ ಈಗಾಗಲೇ ಯಶ್ ಬರುವಿಕೆಗಾಗಿ ಕಾಯುತ್ತಿದ್ದು, ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿ ಲಕ್ಷ್ಮೇಶ್ವರ ಮಾರ್ಗವಾಗಿ ಸೂರಣಗಿ ಗ್ರಾಮಕ್ಕೆ ತೆರಳಲಿದ್ದಾರೆ.

Read More

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಬ್ಯಾಂಕ್‍ಗಳಿಂದ ಸಾಲ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ನಗರದ ವಿವಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಚಾಮರಾಜಪೇಟೆಯ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‍ನಿಂದ ಬೆಳಗಾವಿಯ ಗೋಕಾಕ್‍ನ ಸೌಭಾಗ್ಯಲಕ್ಷ್ಮಿ ಶುಗರ್ ಲಿಮಿಟೆಡ್ ಕಂಪನಿ ಹೆಸರಲ್ಲಿ ಸಾಲ ಪಡೆಯಲಾಗಿದೆ. 2013 ರಿಂದ 2017 ರವರೆಗೆ 232 ಕೋಟಿ 88 ಲಕ್ಷ ರೂ. ಸಾಲ ಪಡೆದಿದ್ದಾರೆ. ಅಲ್ಲದೇ ಬೇರೆ ಬೇರೆ ಜಿಲ್ಲೆಗಳ ಅಪೆಕ್ಸ್ ಬ್ಯಾಂಕ್‍ನ ಸಮೂಹ ಬ್ಯಾಂಕ್‍ಗಳಲ್ಲೂ ಸಾಲ ಪಡೆದು, 439 ಕೋಟಿ 7 ಲಕ್ಷ ರೂ. ಸಾಲ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. https://ainlivenews.com/sexual-harassment-of-a-young-woman-in-our-metro/ ಸೌಭಾಗ್ಯಲಕ್ಷ್ಮಿ ಶುಗರ್ ಲಿಮಿಟೆಡ್ ಕಂಪನಿ ಅಧ್ಯಕ್ಷರು ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ರಮೇಶ್ ಜಾರಕಿಹೊಳಿಯವರು ಕಂಪನಿ ಸ್ಥಾಪನೆ, ವಿಸ್ತರಣೆ ಹಾಗೂ ನಿರ್ವಹಣೆಗಾಗಿ ಸಾಲ ಪಡೆದಿದ್ದರು. ಇದೀಗ ಬ್ಯಾಂಕ್‍ಗೆ ಯಾವುದೇ ಮಾಹಿತಿ ನೀಡದೆ ಆಡಳಿತ ಮಂಡಳಿ ಹುದ್ದೆಗಳಿಂದ ಹೊರಬಂದಿದ್ದಾರೆ. ಈ ಮೂಲಕ ಬ್ಯಾಂಕ್‍ಗೆ ನಂಬಿಕೆ ದ್ರೋಹ…

Read More

ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ಯುವತಿಗೆ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರು (Bengaluru) ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಜನವರಿ 1 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯುವಕನೋರ್ವ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ. ಮೆಟ್ರೋದಿಂದ ಇಳಿಯುತ್ತಿದ್ದಂತೆ ಯುವತಿ (Bengaluru Woman), ಯುವಕನಿಗೆ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾಳೆ. https://ainlivenews.com/tragedy-while-making-the-birthday-cutout-actor-yash-is-going-to-visit-the-deceaseds-house/ ಯುವಕನನ್ನು ಮೆಟ್ರೋ ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದಾಳೆ. ಬಳಿಕ ನೀನು ಇಲ್ಲಿಂದ ಹೋಗೋಹಾಗಿಲ್ಲ, ನಿನಗೆ ಶಿಕ್ಷೆ ಆಗಲೇಬೇಕು, ಮಾತನಾಡದಿದ್ರೆ ನಮಗೆ ನ್ಯಾಯ ಸಿಗಲ್ಲ ಎಂದು ಪಟ್ಟು ಹಿಡಿದು ಕ್ರಮಕ್ಕೆ ಒತ್ತಾಯಿಸಿದ್ದಾಳೆ. ಬಳಿಕ ವಿಚಾರಣೆ ನಡೆಸಿ ಮೆಟ್ರೊ ಅಧಿಕಾರಿಗಳು ಯುವಕನನ್ನ ಉಪ್ಪಾರ ಪೇಟೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಯುವಕ ತಪ್ಪೊಪ್ಪಿಕೊಂಡ ಬಳಿಕ ಇನ್ನೊಮ್ಮೆ ಹೀಗೆ ಮಾಡದಂತೆ ಕ್ಷಮೆ ಕೇಳಿಸಿ ಕಳುಹಿಸಿದ್ದಾರೆ. ಘಟನೆ ನಡೆದ ಒಂದು ವಾರದ ಬಳಿಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೃತ್ಯ ಎಸಗಿದ್ದ ಯುವಕ…

Read More

ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ತೆಲುಗು ಇಂಡಸ್ಟ್ರೀಗೆ ಕಾಲಿಟ್ಟಿರುವ ಪ್ರಣಂ, ಈಗ ‘S/O ಮುತ್ತಣ್ಣ’ನಾಗಲು ಸಜ್ಜಾಗಿದ್ದಾರೆ. ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಹೊಸ ಸಿನಿಮಾ ಸೆಟ್ಟೇರಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ S/O ಮುತ್ತಣ್ಣ ಸಿನಿಮಾದ ಮುಹೂರ್ತ ನೆರವೇರಿದೆ. ದೇವರಾಜ್ ದಂಪತಿ ಆಗಮಿಸಿ ಮಗನ ಚಿತ್ರಕ್ಕೆ ಶುಭಾಶಯ ತಿಳಿಸಿದ್ದಾರೆ. ಅಂದಹಾಗೇ S/O ಮುತ್ತಣ್ಣನಿಗೆ ಶ್ರೀಕಾಂತ್ ಹುಣ್ಸೂರ್ ಸಾರಥಿ. ಆರ್.ಚಂದ್ರು ಹಾಗೂ ಪ್ರೇಮ್ಸ್ ಗರಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಶ್ರೀಕಾಂತ್, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಪ್ರಣಂ ದೇವರಾಜ್ ನಾಯಕನಾಗಿ ನಟಿಸುತ್ತಿರುವ S/O ಮುತ್ತಣ್ಣ ಸಿನಿಮಾದಲ್ಲಿ ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ತಾರಾಬಳಗದಲ್ಲಿದ್ದಾರೆ. ಟೈಟಲ್ ಹೇಳುವಂತೆ ಇದೊಂದು ಅಪ್ಪ-ಮಗನ ಬಾಂಧವ್ಯದ ಕಥೆಯಾಗಿದ್ದು, ಪುರಾತನ ಫಿಲ್ಮಂಸ್ ಬ್ಯಾನರ್ ನಡಿ ದಿವ್ಯಾ ನಿರ್ಮಾಣ ಮಾಡುತ್ತಿದ್ದಾರೆ. S/O…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಇಂದು ಶಿರಡಿಯ ಶ್ರೀ ಸಾಯಿಬಾಬಾ ಮಂದಿರಕ್ಕೆ (Shri Sai Baba Mandir) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. https://ainlivenews.com/expired-party-in-jet-log-notice-issued-to-8-people-including-actor-darshan/ ಮಹಾರಾಷ್ಟ್ರ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಸಚಿವರಾದ ಎಚ್.ಕೆ ಪಾಟೀಲ್, ಮಹಾರಾಷ್ಟ್ರ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ್ ಚನ್ನಿತಾಲ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರೊಂದಿಗೆ ತೆರಳಿದ್ದ ಸಿಎಂ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಭಾವದಿಂದ ಪ್ರಾರ್ಥಿಸಿದ್ದಾರೆ. ನಂತರ ಮಹಾರಾಷ್ಟ್ರದ ಸಹಕಾರಿ ಮಹರ್ಷಿ ಭಾವುಸಾಹೇಬ್ ಥಾರೋಟ್ ಹಾಗೂ ಸ್ವಾತಂತ್ರ‍್ಯ ಹೋರಾಟಗಾರ ಡಾ.ಅಣ್ಣಾಸಾಹೇಬ್ ಶಿಂಧೆ ಅವರ ಜನ್ಮ ಶತಮಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Read More

ಧಾರವಾಡ: ಧಾರವಾಡದ ಸಿಬಿಟಿ ನವೀಕರಣ ಕಾರ್ಯಕ್ರಮಕ್ಕೆಂದು ಬಂದಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಿಬಿಟಿ ನವೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅಲ್ಲಿಂದ ಬಿಆರ್‌ಟಿಎಸ್ ಬಸ್‌ನಲ್ಲಿ ಹುಬ್ಬಳ್ಳಿಯತ್ತ ತೆರಳಿದರು. ಕಾರ್ಯಕ್ರಮ ಮುಗಿಸಿಕೊಂಡು ತಮ್ಮ ವಾಹನದಲ್ಲಿ ಅವರು ಹುಬ್ಬಳ್ಳಿಗೆ ಹೋಗಬೇಕಿತ್ತು. ಆದರೆ, ಸಚಿವ ರಾಮಲಿಂಗಾರೆಡ್ಡಿ ಅವರು ಬಿಆರ್‌ಟಿಎಸ್ ಬಸ್ ಹತ್ತಿ ಅದರ ಮೂಲಕ ಹುಬ್ಬಳ್ಳಿಯತ್ತ ತೆರಳಿದರು. ರಾಮಲಿಂಗಾರೆಡ್ಡಿ ಅವರ ಜೊತೆ ಸಚಿವ ಸಂತೋಷ ಲಾಡ್, ಶಾಸಕ ಎನ್.ಎಚ್.ಕೋನರಡ್ಡಿ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಕೂಡ ಅದೇ ಬಸ್‌ನಲ್ಲಿ ತೆರಳಿದರು.

Read More

ಬೆಂಗಳೂರು: ಜೆಟ್ ಲಾಗ್ ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣ ಸಂಬಂಧ ಒಟ್ಟು 8 ಮಂದಿಗೆ ನೋಟೀಸ್ ಕೊಟ್ಟ ಸುಬ್ರಮಣ್ಯನಗರ ಪೊಲೀಸರು https://ainlivenews.com/another-trouble-for-actor-darshan-who-was-in-katera-success-notice-from-police/ ನಟ ದರ್ಶನ್ , ನಿರ್ಮಾಪಕ ರಾಕ್ ಲೈನ್ ವೆಂಕಟೇ ಶ್ , ನಿರ್ದೇಶಕ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ, ನಟ ನೀನಾಸಂ ಸತೀಶ್, ಡಾಲಿ ಧನಂಜಯ್, ಅಭಿಶೇಕ್ ಅಂಬರೀಷ್ ಹಾಗೂ ಚಿಕ್ಕಣ್ಣ ಗೆ ನೋಟೀಸ್ ಈ ನೋಟೀಸ್ ತಲುಪಿದ ಕೂಡಲೇ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದು  ಸುಬ್ರಮಣ್ಯಪುರ ಠಾಣೆಗೆ ಹಾಜರಾಗುವಂತೆ ನೋಟೀಸ್ ಕಳುಹಿಸಲಾಗಿದೆ. ಸದ್ಯ ನೋಟೀಸ್ ಗೆ ಇದುವರೆಗೂ ಯಾವುದೇ ಉತ್ತರ ಬಂದಿಲ್ಲಆದರೆ ನೋಟೀಸ್ ಕೊಟ್ಟಿರುವ ಬಹುತೇಕರು ದುಬೈನಲ್ಲಿರುವ ಕುರಿತು ಮಾಹಿತಿ ಒದಗಿ ಬಂದಿದೆ.

Read More

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಕಿಲ್ಲರ್ ಬಿ ಎಂ ಟಿ ಸಿ ಗೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ  ಉತ್ತರಹಳ್ಳಿ ರಸ್ತೆಯ ಮಂತ್ರಿ ಆಲ್ಫೈನ್ ಅಪಾರ್ಟ್ಮೆಂಟ್ ಎಂಟ್ರಿ ಗೇಟ್ ಮುಂದೆ ನಡೆದಿದೆ. ಮೈಸೂರು ರಸ್ತೆ ಕಡೆಯಿಂದ ಉತ್ತರಹಳ್ಳಿ ಕಡೆಗೆ ಬರುತ್ತಿದ್ದ ಬಿಎಂಟಿಸಿ ಬಸ್  ಚಾಲಕನ ಅಜಾಗರೂಕತೆಯಿಂದ ಪಲ್ಸರ್ ಬೈಕ್ ಗೆ ಡಿಕ್ಕಿ  ಹೊಡೆದಿದೆ. https://ainlivenews.com/tragedy-while-making-the-birthday-cutout-actor-yash-is-going-to-visit-the-deceaseds-house/ ಕೆಳಗೆ ಬಿದ್ದ ಬೈಕ್ ಸವಾರನ ಮೇಲೆ ಹರಿದ ಬಿಎಂಟಿಸಿ ಬಸ್  22 ವರ್ಷದ ತೇಜಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬಸ್‌ ಚಾಲಕನ್ನು ವಶಕ್ಕೆ ಪಡೆಯಲಾಗಿದೆ.

Read More