Author: AIN Author

ಬೆಂಗಳೂರು: ಚಿತ್ರಕಲಾ ಪರಿಷತ್ (Chitrakala Parishatha) ನಗರದ ಕುಮಾರಕೃಪಾ ರಸ್ತೆಯಲ್ಲಿ ಇಂದು 21ನೇ ಚಿತ್ರಸಂತೆ (Chitra Santhe 2024) ಆಯೋಜಿಸಿದೆ. ಈ ಚಿತ್ರಸಂತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಉದ್ಘಾಟಿಸಿದರು. ಇನ್ನು ಕಾರ್ಯಕ್ರಮದಲ್ಲಿ ಸಚಿವರಾದ ಹೆಚ್​.ಕೆ.ಪಾಟೀಲ್, ಎಂ.ಸಿ.ಸುಧಾಕರ್, ಶಾಸಕರಾದ ಅಜಯ್ ಸಿಂಗ್​, ರಿಜ್ವಾನ್ ಅರ್ಷದ್​ ಸೇರಿ ಹಲವರು ಭಾಗಿಯಾಗಿದ್ದರು.

Read More

ಬೆಂಗಳೂರು: 110 ದಿನಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೋ ಆದಿತ್ಯ ಎಲ್1 (Aditya-L1) ನೌಕೆಯು ‌15 ಲಕ್ಷ ಕಿಮೀ ಕ್ರಮಿಸಿ ಅಂತಿಮ ಕಕ್ಷೆ ತಲುಪಿದೆ. ಈ ಮೂಲಕ ಸೂರ್ಯನ ಅಧ್ಯಯನಕ್ಕೆ ಇಸ್ರೋ ಸಜ್ಜಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರಸಂಶೆ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 2 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (SDSC-SHAR) ಆದಿತ್ಯ-L1 ಏಳು ಪೇಲೋಡ್‌ಗಳೊಂದಿಗೆ ಉಡಾವಣೆಗೊಂಡಿತ್ತು. ಭೂಮಿಯಿಂದ ಸುಮಾರು 15 ಲಕ್ಷ ಕಿಮೀ ದೂರದಲ್ಲಿರುವ L1 ಪಾಯಿಂಟ್‌ ಕಡೆಗೆ ಭೂ ಕಕ್ಷೆಯಿಂದ ಬಾಹ್ಯಾಕಾಶ (Space) ನೌಕೆಯನ್ನು ಕಳುಹಿಸಿತ್ತು. https://ainlivenews.com/elon-musk-offered-1-billion-dollars-to-change-the-name-on-wikipedia/ ಬೆಳಗ್ಗಿನಿಂದಲೇ ಹಾಲೋ ಆರ್ಬಿಟ್ ಅಳವಡಿಕೆಯ ಕಾರ್ಯವನ್ನು ಮುಂದುವರಿಸಿ ಲಗ್ರೇಂಜ್‌ ಪಾಯಿಂಟ್-1 ರಲ್ಲಿ ಇರಿಸಲು ಪ್ರಾರಂಭಿಸಿತ್ತು. ಅಂದುಕೊಂಡಂತೆ ಆದಿತ್ಯ ಎಲ್‌-1 ನೌಕೆಯು ನಿಗದಿತ ಕಕ್ಷೆ ತಲುಪಿದ್ದು, ದೊಡ್ಡ ಯಶಸ್ಸು ತಂದುಕೊಟ್ಟಿದೆ. 2023ರ ಚಂದ್ರಯಾನ-3 ಯಶಸ್ವಿ ಬಳಿಕ ಇಸ್ರೋ (ISRO) ಸ್ಥಾಪಿಸಿದ ಮಹತ್ವದ ಮೈಲುಗಲ್ಲು ಇದಾಗಿದೆ. ಇನ್ಮುಂದೆ ಆದಿತ್ಯ L1 ನೌಕೆಯು ನಿಗದಿತ ಕಕ್ಷೆಯಲ್ಲಿ ನಿಂತು ಹಗಲು,…

Read More

ಬೆಂಗಳೂರು: ಆಸ್ತಿ ತೆರಿಗೆಗೆ ಹೆಚ್ಚಿನ ಕಾಲಾವಕಾಶ ಹಾಗೂ ಅದರಲ್ಲಿರುವ ತೊಡಕುಗಳನ್ನು ನಿವಾರಣೆ ಮಾಡಲು ಅನೇಕ ಅರ್ಜಿಗಳು ಬಂದಿವೆ. ಹೀಗಾಗಿ ತೆರಿಗೆ ಪಾವತಿಗೆ ಕಾಲಾವಕಾಶ ಕಲ್ಪಿಸಿ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳ ಜತೆ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ ಅಹವಾಲು ತಂದಿರುವವರ ಪೈಕಿ ಅನೇಕರು ವಸತಿ ನಿವೇಶನಗಳಲ್ಲಿ ಮಾಣಿಜ್ಯ ಕಟ್ಟಡಗಳನ್ನು ಕಟ್ಟಿದ್ದಾರೆ. ಇದಕ್ಕೆ ತೆರಿಗೆ ಹಾಗೂ ದಂಡ ಹೆಚ್ಚಾಗಿದೆ ನಮಗೆ ಸಮಯಾವಕಾಶ ಬೇಕು ಎಂಬ ಮನವಿ ಸಲ್ಲಿಸುತ್ತಿದ್ದಾರೆ. ನಾಗರೀಕರಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಅವರಿಗೆ ಮತ್ತಷ್ಟು ಸಮಯಾವಕಾಶ ನೀಡುತ್ತೇವೆ. https://ainlivenews.com/elon-musk-offered-1-billion-dollars-to-change-the-name-on-wikipedia/ ಇನ್ನು ಸರಳ ವ್ಯವಸ್ಥೆ ಜಾರಿಗೆ ತರಲು ಅಗತ್ಯ ಕಾನೂನು ತಿದ್ದುಪಡಿ ಮಾಡುತ್ತೇವೆ. ನಾಗರೀಕರು ಕೂಡ ನಮಗೆ ಸಹಾಯ ಮಾಡಬೇಕು. ವಸತಿ ನಿವೇಶನಗಳಲ್ಲಿ ವಾಣಿಜ್ಯ ಉದ್ದೇಶಕ್ಕೆ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಜನರು ಕೂಡ ತಮ್ಮ ಆಸ್ತಿಗೆ ತಕ್ಕಂತೆ ತೆರಿಗೆ ಪಾವತಿ ಮಾಡಿ ಸಹಕಾರ ನೀಡಬೇಕು. ಆಗ ನಾವು ಕೂಡ ಜನರಿಗೆ ಸಹಾಯ…

Read More

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಬ್ಯಾಂಕ್‍ಗಳಿಂದ ಸಾಲ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಅವರ ವಿರುದ್ಧ ನಗರದ ವಿವಿಪುರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಚಾಮರಾಜಪೇಟೆಯ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‍ ನಿಂದ ಬೆಳಗಾವಿಯ (Belagavi) ಗೋಕಾಕ್‍ನ ಸೌಭಾಗ್ಯಲಕ್ಷ್ಮಿ ಶುಗರ್ ಲಿಮಿಟೆಡ್ ಕಂಪನಿ ಹೆಸರಲ್ಲಿ ಅವರು ಸಾಲ ಪಡೆದಿದ್ದಾರೆ. 2013 ರಿಂದ 2017 ರವರೆಗೆ 232 ಕೋಟಿ 88 ಲಕ್ಷ ರೂ. ಸಾಲ ಪಡೆದಿದ್ದಾರೆ. ಅಲ್ಲದೇ ಬೇರೆ ಬೇರೆ ಜಿಲ್ಲೆಗಳ ಅಪೆಕ್ಸ್ ಬ್ಯಾಂಕ್‍ನ ಸಮೂಹ ಬ್ಯಾಂಕ್‍ಗಳಲ್ಲೂ ಸಾಲ ಪಡೆದಿರುವ ಅವರು, 439 ಕೋಟಿ 7 ಲಕ್ಷ ರೂ. ಸಾಲ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಸೌಭಾಗ್ಯಲಕ್ಷ್ಮಿ ಶುಗರ್ ಲಿಮಿಟೆಡ್ ಕಂಪನಿ ಅಧ್ಯಕ್ಷರು ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ರಮೇಶ್ ಜಾರಕಿಹೊಳಿಯವರು ಕಂಪನಿ ಸ್ಥಾಪನೆ, ವಿಸ್ತರಣೆ ಹಾಗೂ ನಿರ್ವಹಣೆಗಾಗಿ ಸಾಲ ಪಡೆದಿದ್ದರು. https://ainlivenews.com/elon-musk-offered-1-billion-dollars-to-change-the-name-on-wikipedia/ ಇದೀಗ ಬ್ಯಾಂಕ್‍ಗೆ ಯಾವುದೇ ಮಾಹಿತಿ ನೀಡದೆ ಆಡಳಿತ ಮಂಡಳಿ…

Read More

ಪ್ರಶಾಂತ್ ವರ್ಮಾ ಆಕ್ಷನ್ ಕಟ್ ಹೇಳಿರುವ ತೇಜ ಸಜ್ಜ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಹನು-ಮಾನ್’ ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆಯಾಗುತ್ತಿದೆ. ಈಗಾಗಲೇ ಟ್ರೇಲರ್ ಬಹಳ ಸದ್ದು ಮಾಡಿದೆ. ಚಿತ್ರತಂಡ ಕೂಡ ಭರದಿಂದ ಪ್ರಚಾರ ನಡೆಸುತ್ತಿದೆ. ಹನುಮಾನ್ ಪ್ರಚಾರದ ಅಂಗವಾಗಿ ಬೆಂಗಳೂರಿಗೆ ಬಂದಿದ್ದ ಚಿತ್ರತಂಡ ಮಾಧ್ಯಮದವರ ಮುಂದೆ ಸಾಕಷ್ಟು ವಿಷಯ ಹಂಚಿಕೊಂಡಿದೆ. ನಾಯಕ ತೇಜ್ ಸಜ್ಜಾ ಮಾತನಾಡಿ, ಇದು ಹನುಮಾನ್ ದೇವರ ಬಗ್ಗೆ ಇರುವ ಸಿನಿಮಾವಲ್ಲ. ಇದು ಒಬ್ಬ ವ್ಯಕ್ತಿಗೆ ಪವರ್ ಬಂದ್ರೆ ಆತ ಸೂಪರ್ ಹೀರೋ ಆಗುತ್ತಾನೆ. ಅವರ ಬಗ್ಗೆ ಇರುವ ಚಿತ್ರ. ಕಾಮಿಡಿ , ಆಕ್ಷನ್ , ಪ್ರೀತಿ ಎಲ್ಲವೂ ಇದೆ. ಮೊದಲ ಶಾಟ್ ನಲ್ಲಿ ನಿಮಗೆ ಗೂಸ್ ಬಂಪ್ಸ್ ಮೂಮೆಂಟ್ ಬರುತ್ತದೆ ಎಂದರು. ನಾಯಕಿ ಅಮೃತಾ ಅಯ್ಯರ್ ಮಾತನಾಡಿ, ಹನುಮಾನ್ ನಮ್ಮ ದೇವರು. ಇದೊಂದು ಫ್ಯಾಂಟಸಿ ಮೂವೀ. ಇದು ಹನುಮಾನ್ ಬಗ್ಗೆ ಅಲ್ಲ‌. ಒಂದು ಹುಡುಗನಿಗೆ ಹನುಮಾನ್ ಪವರ್ ಬಂದಾಗ ಏನಾಗುತ್ತದೆ ಅನ್ನೋದು ಸಿನಿಮಾ. ಚಿತ್ರದ ಕಂಟೆಂಟ್ ತುಂಬಾ…

Read More

2007ರ ಟಿ20 ವಿಶ್ವಕಪ್‌ನ ಈ ಸ್ಟಾರ್ ಆಟಗಾರ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಸ್ತುತ ಜೋಗಿಂದರ್ ಶರ್ಮಾ ಹರಿಯಾಣ ಪೊಲೀಸ್‌ನಲ್ಲಿ ಡಿಎಸ್‌ಪಿಯಾಗಿದ್ದಾರೆ. ಇದೀಗ ಹಿಸಾರ್ ಆತ್ಮಹತ್ಯೆ ಪ್ರಕರಣದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇವರೊಂದಿಗೆ ಇತರ 6 ಜನರ ಹೆಸರುಗಳೂ ಈ ಪ್ರಕರಣದಲ್ಲಿ ಕೇಳಿಬಂದಿವೆ. ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಪ್ರಸ್ತುತ ಹರಿಯಾಣ ಪೊಲೀಸ್‌ನಲ್ಲಿ ಡಿಎಸ್‌ಪಿಯಾಗಿರುವ ಜೋಂಗಿದರ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಜೋಗಿಂದರ್ ವಿರುದ್ಧ ಹಿಸ್ಸಾರ್ ಜಿಲ್ಲೆಯ ದಬ್ಡಾ ಗ್ರಾಮದ ನಿವಾಸಿಯೊಬ್ಬರ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪ ಕೇಳಿಬಂದಿದೆ. ಮಾಹಿತಿ ಪ್ರಕಾರ, ಜನವರಿ 1 ರಂದು, ಹಿಸ್ಸಾರ್ ಜಿಲ್ಲೆಯ ದಬ್ಡಾ ಗ್ರಾಮದ ನಿವಾಸಿಯೊಬ್ಬ ಆಸ್ತಿ ವಿವಾದದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಾದ ಬಳಿಕ ಮೃತರ ಕುಟುಂಬಸ್ಥರು 7 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಅದರಲ್ಲಿ ಜೋಗಿಂದರ್ ಶರ್ಮಾ ಅವರ ಹೆಸರೂ ಸಹ ಸೇರಿದೆ. https://ainlivenews.com/elon-musk-offered-1-billion-dollars-to-change-the-name-on-wikipedia/ ಹರಿಯಾಣ ಪೊಲೀಸರು ಜೋಗಿಂದರ್ ಶರ್ಮಾ ಮತ್ತು ಇತರ 6 ಜನರ ವಿರುದ್ಧ ಹಿಸಾರ್‌ನ ಆಜಾದ್…

Read More

ಬೆಂಗಳೂರು: ಅಯೋಧ್ಯೆಗೆ ಹೋಗೋರಿಗೆ ರಕ್ಷಣೆ ಕೊಡ್ಬೇಕು, ಇಲ್ಲದಿದ್ದರೆ ಗೋಧ್ರಾ ಮಾದರಿ ಘಟನೆ ಆಗಬಹುದು ಎಂದಿದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (BK Hariprasad), ಮತ್ತೆ ಬಿಜೆಪಿ ವಿರುದ್ಧ ಮುಗಿಬಿದ್ದಿದ್ದಾರೆ. ರಾಷ್ಟ್ರ ರಕ್ಷಣಾ ಪಡೆ ಎಂಬ ವಾಟ್ಸಪ್ ಗ್ರೂಪ್‌ನಲ್ಲಿ ಪುನಿತ್ ಕೆರೆಹಳ್ಳಿ ಹಾಕಿದ್ದಾರೆ ಎನ್ನಲಾದ ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಲ್ಲಿ, ಕರ್ನಾಟಕದಲ್ಲಿ ಕೋಮು ಗಲಭೆ ಎಬ್ಬಿಸೋಕೆ ಬಿಜೆಪಿ (BJP) ನಮಗೆ ಬೆಂಬಲ ಕೊಟ್ಟಿದೆ. ಆದ್ದರಿಂದ ಎಲ್ಲಾ ಕಾರ್ಯಕರ್ತರು ರೆಡಿ ಆಗಿ ಇರಿ. ಎಲ್ಲಿ ಏನು ಮಾಡ್ಬೇಕು ಅನ್ನೋದನ್ನು ನಾವು ಈ ಗ್ರೂಪ್ ಮೂಲಕ ಮಾಹಿತಿ ಕೊಡ್ತೀವಿ. 2024ಕ್ಕೆ ಮತ್ತೊಮ್ಮೆ ಮೋದಿ ಎಂಬ ಬರಹವಿದೆ. ಇದನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ಬಿ.ಕೆ ಹರಿಪ್ರಸಾದ್ ಹರಿಹಾಯ್ದಿದ್ದಾರೆ. ಕೋಮುಗಲಭೆಗೆ (Communal Riots) ಬಿಜೆಪಿ ತನ್ನ ಸಹೋದರ ಸಂಘಟನೆಗಳನ್ನು ರೆಡಿ ಮಾಡ್ತಿರೋದು ಇದರಿಂದ ಗೊತ್ತಾಗುತ್ತೆ. https://ainlivenews.com/elon-musk-offered-1-billion-dollars-to-change-the-name-on-wikipedia/ ರೌಡಿಶೀಟರ್ ಪುನಿತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿ ಕೋಮುಗಲಭೆ ನಡೆಸುವ ಫತ್ವಾ ನೀಡಿದೆ. ವಿಶ್ವಗುರುವನ್ನು ಮತ್ತೆ ಪ್ರಧಾನಿ ಮಾಡಲು ಈ ಭಯೋತ್ಪಾದಕರ ತಂಡ ಕೆಲಸ…

Read More

ಹೈದರಾಬಾದ್‌: 10 ದಿನದ ಹಿಂದೆ ವೈಎಸ್‌ಆರ್‌ ಕಾಂಗ್ರೆಸ್‌ (YSRC) ಸೇರಿದ್ದ ಅಂಬಟಿ ರಾಯಡು ದಿಢೀರ್‌ (Ambati Rayudu) ಆಗಿ ಪಕ್ಷದಿಂದ ಹೊರ ಬಂದಿದ್ದಾರೆ. ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದಿಂದ (ವೈಎಸ್‌ಆರ್‌ಸಿಪಿ) ನಿರ್ಗಮಿಸುವುದಾಗಿ ಅಂಬಟಿ ರಾಯಡು ಎಕ್ಸ್‌ನಲ್ಲಿ ಘೋಷಣೆ ಮಾಡಿದ್ದಾರೆ. ಸ್ವಲ್ಪ ಸಮಯದವರೆಗೆ ರಾಜಕೀಯದಿಂದ ವಿರಾಮ ತೆಗೆದುಕೊಳ್ಳುತ್ತೇನೆ. ಮುಂದಿನ ಕ್ರಮವನ್ನು ಸೂಕ್ತ ಸಮಯದಲ್ಲಿ ತಿಳಿಸಲಾಗುವುದು ಎಂದು ಅವರು ಬರೆದಿದ್ದಾರೆ. https://ainlivenews.com/elon-musk-offered-1-billion-dollars-to-change-the-name-on-wikipedia/ ಡಿಸೆಂಬರ್‌ 28 ರಂದು ವಿಜಯವಾಡದಲ್ಲಿರುವ ಸಿಎಂ ಕಚೇರಿಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಮ್ಮುಖದಲ್ಲಿ ರಾಯುಡು ಅವರು ವೈಎಸ್‌ಆರ್‌ಪಿಸಿ ಸೇರಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಋತುವಿನ ನಂತರ ರಾಯುಡು ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಅಲ್ಲದೇ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ದೇಶಕ್ಕಾಗಿ 55 ಏಕದಿನ ಪಂದ್ಯ ಆಡಿರುವ ಅವರು ಅವರು 47.05 ಸರಾಸರಿಯೊಂದಿಗೆ ಒಟ್ಟು 1694 ರನ್ ಹೊಡೆದಿದ್ದಾರೆ. 

Read More

ಕಲಬುರಗಿ: ಅತ್ತ ಅಯ್ಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ರೆ ಇತ್ತ ಕಲಬುರಗಿಯಲ್ಲಿ ರಾಮ ಭಕ್ತರಿಂದ ಮಂತ್ರಾಕ್ಷತೆ ವಿತರಣೆ ಕಾರ್ಯ ಜೋರಾಗಿ ನಡೆದಿದೆ.. ಹೌದು. ಜನೆವರಿ 22 ರಂದು ರಾಮ ಮಂದಿರ ಉದ್ಘಾಟನೆಯಾಗಲಿದೆ ಆ ದಿನದಂದು ಸಂಭ್ರಮ ಆಚರಿಸಲು ಸಕಲ ತಯಾರಿ ನಡೆದಿದೆ.ಅದಕ್ಕಾಗಿ ಜಗತ್ ಬಡಾವಣೆ ಸೇರಿದಂತೆ ನಗರದ ಎಲ್ಲೆಡೆ ರಾಮ ಭಕ್ತರು ರಾಮ ಮಂದಿರದ ಫೋಟೋ ಸಹಿತ ಮಂತ್ರಾಕ್ಷತೆ ನೀಡಿ 22 ರಂದು ನಿಮ್ಮ ಮನೆಗಳಲ್ಲಿ ದೀಪ ಬೆಳಗಿಸುವಂತೆ ಎಲ್ಲರಲ್ಲೂ ಮನವಿ ಮಾಡಿದ್ದಾರೆ..

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ಭರ್ಜರಿ ಬೇಟೆಯಾಡಿದೆ. ಸ್ಪಾ (Spa) ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ (Prostitue) ದಂಧೆ ನಡೆಸುತ್ತಿದ್ದ ಮಸಾಜ್ ಪಾರ್ಲರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸುಮಾರು 10 ಜನ ಸಿಸಿಬಿ ಅಧಿಕಾರಿಗಳ (CCB Officers) ತಂಡ ಟಿನ್ ಫ್ಯಾಕ್ಟರಿ ಬಳಿ ಇರುವ ನಿರ್ವಾನ್ ಇಂಟರ್ ನ್ಯಾಷನಲ್ ಸ್ಪಾನ ಫಸ್ಟ್ ಫ್ಲೋರ್ ಹಾಗೂ 6ನೇ ಫ್ಲೋರ್ ನಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಹೊರ ರಾಜ್ಯದಿಂದ ಬಂದು ಅನಿಲ್ ಎಂಬಾತ ಸ್ಪಾ ನಡೆಸುತ್ತಿದ್ದ. https://ainlivenews.com/are-you-using-phone-pay-if-you-missed-this-story-then-go/ ಒಟ್ಟು 34 ರೂಂಗಳನ್ನು ಒಳಗೊಂಡ ಬಹುಮಹಡಿ ಕಟ್ಟಡದಲ್ಲಿ ಹೊರ ರಾಜ್ಯ, ಹೊರ ದೇಶದಿಂದ ಯುವತಿಯರು, ಮಹಿಳೆಯರನ್ನು ಕರೆಸಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ. ಸದ್ಯ ಮಾಲೀಕ ಅನಿಲ್ ಸೇರಿ ಒಟ್ಟು 44 ಮಹಿಳೆಯರು, 34 ಗಿರಾಕಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಾಲೀಕ ಅನಿಲ್‍ಗೆ ಸೇರಿದ ಮೂರುವರೆ ಕೋಟಿ ಮೌಲ್ಯದ ಬೆನ್ಜ್ ಕಾರನ್ನು ಸಿಸಿಬಿ ಸೀಜ್ ಮಾಡಿದೆ. ಮಹದೇವಪುರ ಪೊಲೀಸ್ ಠಾಣೆಯಲ್ಲಿ…

Read More